1. ಬಹಳ ಸಮಯ ದಾಟಿಹೋದರೂ ಮೋಶೆ ಬೆಟ್ಟದಿಂದ ಕೆಳಗಿಳಿಯಲಿಲ್ಲವಾದ್ದರಿಂದ ಇಸ್ರೇಲರು ಆರೋನನ ಬಳಿಗೆ ಒಟ್ಟಾಗಿ ಬಂದು, “ನೋಡು, ಮೋಶೆಯು ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದನು. ಆದರೆ ಅವನಿಗೇನಾಯಿತೊ ನಮಗೆ ತಿಳಿಯದು. ಆದ್ದರಿಂದ ನಮ್ಮನ್ನು ಮುನ್ನಡೆಸಲು ಕೆಲವು ದೇವರುಗಳನ್ನು ಮಾಡಿಕೊಡು” ಎಂದು ಹೇಳಿದರು.
|
2. ಆರೋನನು ಅವರಿಗೆ, “ನಿಮ್ಮ ಹೆಂಡತಿಯ ಮತ್ತು ಗಂಡು ಹೆಣ್ಣುಮಕ್ಕಳಲ್ಲಿರುವ ಚಿನ್ನದ ಓಲೆಗಳನ್ನು ತಂದು ನನಗೆ ಕೊಡಿರಿ” ಎಂದು ಹೇಳಿದನು.
|
4. ಆರೋನನು ಬಸವನ ಮೂರ್ತಿಯನ್ನು ಚಿನ್ನದಿಂದ ಎರಕಹೊಯ್ಯಿಸಿದನು. ಬಳಿಕ ಅವರು, “ಇಸ್ರೇಲರೇ, ನಿಮ್ಮ ದೇವರುಗಳು ಇಲ್ಲಿವೆ! ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳೇ” ಎಂದು ಹೇಳಿದರು.
|
5. ಆರೋನನು ಇವೆಲ್ಲವನ್ನು ನೋಡಿ, ಬಸವನ ಮುಂದೆ ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು. ಬಳಿಕ, “ನಾಳೆ ಯೆಹೋವನನ್ನು ಸನ್ಮಾನಿಸಲು ಒಂದು ವಿಶೇಷ ಹಬ್ಬವಿರುವುದು” ಎಂದು ಪ್ರಕಟಿಸಿದನು.
|
6. ಮರುದಿನ ಮುಂಜಾನೆ ಜನರೆಲ್ಲರೂ ಬೇಗನೆ ಎದ್ದು ತಮ್ಮ ಪಶುಗಳನ್ನು ವಧಿಸಿ ಸರ್ವಾಂಗ ಹೋಮಗಳನ್ನಾಗಿಯೂ ಸಮಾಧಾನಯಜ್ಞಗಳನ್ನಾಗಿಯೂ ಅರ್ಪಿಸಿ ತಿನ್ನುವುದಕ್ಕೂ ಕುಡಿಯುವುದಕ್ಕೂ ಕುಳಿತುಕೊಂಡರು. ಬಳಿಕ ಎದ್ದು ಕುಣಿದಾಡಿದರು ಮತ್ತು ಕೂಗಾಡಿದರು.
|
7. ಅದೇ ಸಮಯದಲ್ಲಿ ಯೆಹೋವನು ಮೋಶೆಗೆ, “ಬೆಟ್ಟದಿಂದ ಇಳಿದುಹೋಗು. ನೀನು ಈಜಿಪ್ಟಿನಿಂದ ಕರೆದುಕೊಂಡು ಬಂದ ನಿನ್ನ ಜನರು ಭಯಂಕರವಾದ ಪಾಪ ಮಾಡಿದ್ದಾರೆ.
|
8. ನಾನು ಅವರಿಗೆ ಆಜ್ಞಾಪಿಸಿದವುಗಳಿಗೆ ಬಹುಬೇಗನೆ ಅವಿಧೇಯರಾಗಿದ್ದಾರೆ. ಚಿನ್ನವನ್ನು ಕರಗಿಸಿ ಅದರಿಂದ ಬಸವನನ್ನು ಮಾಡಿಕೊಂಡು ಅದನ್ನು ಪೂಜಿಸುತ್ತಾ ಅದಕ್ಕೆ ಯಜ್ಞಗಳನ್ನು ಸಮರ್ಪಿಸುತ್ತಿದ್ದಾರೆ. ‘ಇಸ್ರೇಲರೇ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳು’ ಎಂದು ಜನರು ಹೇಳುತ್ತಿದ್ದಾರೆ” ಎಂದನು.
|
9. ಯೆಹೋವನು ಮೋಶೆಗೆ, “ನಾನು ಈ ಜನರನ್ನು ನೋಡಿದ್ದೇನೆ. ಅವರು ಬಹಳ ಮೊಂಡರೆಂದು ನಾನು ಬಲ್ಲೆನು. ಅವರು ಯಾವಾಗಲೂ ನಿನಗೆ ವಿರೋಧವಾಗಿ ದಂಗೆ ಏಳುವರು.”
|
10. “ಆದ್ದರಿಂದ ನಾನು ಅವರನ್ನು ಕೋಪದಿಂದ ನಾಶಮಾಡಿಬಿಡುತ್ತೇನೆ. ನನ್ನನ್ನು ತಡೆಯಬೇಡ. ಬಳಿಕ ನಾನು ನಿನ್ನಿಂದ ಒಂದು ಮಹಾಜನಾಂಗವನ್ನು ಉಂಟುಮಾಡುವೆನು” ಎಂದು ಹೇಳಿದನು.
|
11. ಆದರೆ ಮೋಶೆಯು ತನ್ನ ದೇವರಾದ ಯೆಹೋವನಿಗೆ, “ಯೆಹೋವನೇ, ನಿನ್ನ ಕೋಪವು ನಿನ್ನ ಜನರನ್ನು ನಾಶಮಾಡದಿರಲಿ. ನಿನ್ನ ಮಹಾಶಕ್ತಿಯಿಂದಲೂ ಬಲದಿಂದಲೂ ಈ ಜನರನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದೆಯಲ್ಲಾ.
|
12. ಆದರೆ ನೀನು ನಿನ್ನ ಜನರನ್ನು ನಾಶಮಾಡಿದರೆ, ಈಜಿಪ್ಟಿನವರು, ‘ಯೆಹೋವನು ತನ್ನ ಜನರಿಗೆ ಕೇಡನ್ನು ಮಾಡುವುದಕ್ಕಾಗಿಯೇ ಈಜಿಪ್ಟಿನಿಂದ ಕರೆದುಕೊಂಡು ಹೋದನು. ಆತನು ಅವರನ್ನು ಬೆಟ್ಟಗಳಲ್ಲಿ ಕೊಲ್ಲಬೇಕೆಂದಿದ್ದನು; ತನ್ನ ಜನರನ್ನು ಭೂಮಿಯಿಂದ ನಿರ್ಮೂಲ ಮಾಡಬೇಕೆಂದಿದ್ದನು’ ಎಂದು ಹೇಳುವರು. ಆದ್ದರಿಂದ ನಿನ್ನ ಜನರ ಮೇಲೆ ಕೋಪಗೊಳ್ಳಬೇಡ. ನಿನ್ನ ಕೋಪವನ್ನು ಬಿಟ್ಟುಬಿಡು. ನಿನ್ನ ಜನರನ್ನು ನಾಶಮಾಡಬೇಡ.
|
13. ನಿನ್ನ ಸೇವೆಮಾಡಿದ ಅಬ್ರಹಾಮನನ್ನು, ಇಸಾಕನನ್ನು, ಇಸ್ರೇಲನನ್ನು ಜ್ಞಾಪಿಸಿಕೊ. ನೀನು ನಿನ್ನ ಹೆಸರನ್ನು ಉಪಯೋಗಿಸಿ ಆ ಜನರಿಗೆ ವಾಗ್ದಾನವನ್ನು ಮಾಡಿದೆ. ‘ನಾನು ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಷ್ಟು ಮಾಡುವೆನು. ನಾನು ವಾಗ್ದಾನ ಮಾಡಿದಂತೆ ಈ ದೇಶವನ್ನೆಲ್ಲಾ ನಿನ್ನ ಸಂತತಿಗಳವರಿಗೆ ಕೊಡುವೆನು. ಈ ದೇಶ ಎಂದೆಂದಿಗೂ ಅವರದಾಗಿರುವುದು’ ಎಂದು ನೀನು ನಿನ್ನ ಹೆಸರಿನಲ್ಲಿ ವಾಗ್ದಾನ ಮಾಡಿದೆಯಲ್ಲಾ” ಅಂದನು.
|
14. ಆದ್ದರಿಂದ ಯೆಹೋವನು ಜನರಿಗಾಗಿ ಮರುಕಪಟ್ಟು ತನ್ನ ಮನಸ್ಸನ್ನು ಮಾರ್ಪಡಿಸಿಕೊಂಡನು; ತಾನು ಹೇಳಿದ್ದ ಕೇಡನ್ನು ಮಾಡಲಿಲ್ಲ; ತನ್ನ ಜನರನ್ನು ನಾಶಮಾಡಲಿಲ್ಲ.
|
15. ಬಳಿಕ ಮೋಶೆ ಬೆಟ್ಟದಿಂದಿಳಿದು ಹೋದನು. ಮೋಶೆಯೊಡನೆ ಆಜ್ಞಾಶಾಸನಗಳ ಎರಡು ಕಲ್ಲಿನ ಹಲಿಗೆಗಳಿದ್ದವು. ಈ ಆಜ್ಞಾಶಾಸನಗಳ ಕಲ್ಲುಗಳ ಮುಂದೆಯೂ ಹಿಂದೆಯೂ ಬರೆಯಲ್ಪಟ್ಟಿದ್ದವು.
|
17. ಇಸ್ರೇಲರ ಗದ್ದಲವನ್ನೂ ಕೂಗಾಟವನ್ನೂ ಯೆಹೋಶುವನು ಕೇಳಿ ಮೋಶೆಗೆ, “ಪಾಳೆಯದ ಕಡೆಯಿಂದ ಯುದ್ಧದ ಧ್ವನಿ ಕೇಳಿಬರುತ್ತಿದೆ” ಅಂದನು.
|
18. ಅದಕ್ಕೆ ಮೋಶೆ, “ಅದು ಸೈನ್ಯದ ಜಯಧ್ವನಿಯಲ್ಲ. ಅದು ಸೋಲಿನಿಂದ ಕೂಗುವ ಸೈನ್ಯದ ಧ್ವನಿಯೂ ಅಲ್ಲ. ನಾನು ಕೇಳುತ್ತಿರುವುದು ಗೋಷ್ಠಿಯ ಧ್ವನಿ” ಎಂದು ಉತ್ತರಿಸಿದನು.
|
19. ಮೋಶೆಯು ಪಾಳೆಯದ ಹತ್ತಿರಕ್ಕೆ ಬಂದನು. ಅವನು ಚಿನ್ನದ ಬಸವನನ್ನೂ ಜನರ ನರ್ತನವನ್ನೂ ನೋಡಿ ಬಹುಕೋಪಗೊಂಡು ಕಲ್ಲಿನ ಹಲಿಗೆಗಳನ್ನು ನೆಲದ ಮೇಲೆ ಬಿಸಾಡಿಬಿಟ್ಟನು; ಅವು ಚೂರುಚೂರಾಗಿ ಒಡೆದುಹೋದವು.
|
20. ಬಳಿಕ ಮೋಶೆಯು ಆ ಬಸವನ ಮೂರ್ತಿಯನ್ನು ಬೆಂಕಿಯಲ್ಲಿ ಕರಗಿಸಿ ಅದರ ಚಿನ್ನವನ್ನು ಧೂಳಿನಂತೆ ಅರೆದು ನೀರಿಗೆ ಹಾಕಿ ಆ ನೀರನ್ನು ಇಸ್ರೇಲರಿಗೆ ಕುಡಿಸಿದನು.
|
21. ಮೋಶೆಯು ಆರೋನನಿಗೆ, “ಈ ಜನರು ನಿನಗೇನು ಮಾಡಿದರು? ಇಂಥಾ ಕೆಟ್ಟ ಪಾಪವನ್ನು ಮಾಡುವಂತೆ ಯಾಕೆ ಅವರನ್ನು ನಡಿಸಿದೆ?” ಎಂದು ಹೇಳಿದನು.
|
23. ಅವರು ನನಗೆ, ‘ಮೋಶೆಯು ನಮ್ಮನ್ನು ಈಜಿಪ್ಟಿನಿಂದ ಹೊರಗೆ ನಡೆಸಿದನು. ಆದರೆ ಅವನಿಗೇನಾಯಿತೊ ನಮಗೆ ತಿಳಿಯದು. ಆದ್ದರಿಂದ ನಮ್ಮನ್ನು ಮುನ್ನಡೆಸಲು ದೇವರುಗಳನ್ನು ಮಾಡಿಕೊಡು’ ಎಂದು ಕೇಳಿದರು.
|
24. ಆದ್ದರಿಂದ ನಾನು ಅವರಿಗೆ, “ನಿಮ್ಮಲ್ಲಿ ಚಿನ್ನದ ಆಭರಣಗಳಿದ್ದರೆ ನನಗೆ ಕೊಡಿರಿ’ ಎಂದು ಹೇಳಿದೆನು. ಅವರು ಆಭರಣಗಳನ್ನು ನನಗೆ ತಂದುಕೊಟ್ಟರು. ನಾನು ಅವುಗಳನ್ನು ಬೆಂಕಿಯಲ್ಲಿ ಕರಗಿಸಿ ಈ ಬಸವನ ಮೂರ್ತಿಯನ್ನು ಎರಕಹೊಯ್ದೆನು” ಎಂದು ಉತ್ತರಿಸಿದನು.
|
25. ಜನರು ಅಂಕೆತಪ್ಪಿ ತಮ್ಮ ಇಷ್ಟಬಂದಂತೆ ಮಾಡುವುದಕ್ಕೆ ಆರೋನನು ಅವರನ್ನು ಬಿಟ್ಟುಬಿಟ್ಟಿರುವುದು ಮೋಶೆಗೆ ತಿಳಿಯಿತು. ಜನರು ಕ್ರಮವಿಲ್ಲದೆ ಸ್ವೇಚ್ಛೆಯಿಂದ ನಡೆಯುತ್ತಿದ್ದರು; ಅವರ ಮೂರ್ಖತನವು ಅವರ ವಿರೋಧಿಗಳಿಗೆ ಎದ್ದು ಕಾಣುತ್ತಿತ್ತು!
|
26. ಆದ್ದರಿಂದ ಪಾಳೆಯದ ದ್ವಾರದಲ್ಲಿ ಮೋಶೆಯು ನಿಂತು, “ಯೆಹೋವನ ಪಕ್ಷದವರು ನನ್ನ ಬಳಿಗೆ ಬರಬೇಕು” ಎಂದು ಹೇಳಿದನು. ಲೇವಿ ಕುಲದವರೆಲ್ಲಾ ಮೋಶೆಯ ಬಳಿಗೆ ಬಂದರು.
|
27. ಆಗ ಮೋಶೆ ಅವರಿಗೆ, “ಇಸ್ರೇಲರ ದೇವರಾದ ಯೆಹೋವನು ಹೇಳುವುದನ್ನು ನಿಮಗೆ ತಿಳಿಸುತ್ತೇನೆ! ‘ನಿಮ್ಮಲ್ಲಿ ಪ್ರತಿಯೊಬ್ಬನು ಕತ್ತಿಯನ್ನು ತೆಗೆದುಕೊಂಡು ಪಾಳೆಯದ ಒಂದು ಕೊನೆಯಿಂದ ಇನ್ನೊಂದು ಕೊನೆಯವರೆಗೆ ಹೋಗಿ ಜನರನ್ನು ಶಿಕ್ಷಿಸಬೇಕು. ನಿಮ್ಮ ಸಹೋದರರಾಗಿದ್ದರೂ ಸ್ನೇಹಿತರಾಗಿದ್ದರೂ ಅಥವಾ ನೆರೆಯವರಾಗಿದ್ದರೂ ಸರಿ, ಕೊಲ್ಲಿರಿ”‘ ಎಂದು ಹೇಳಿದನು.
|
29. ಆಗ ಮೋಶೆಯು ಅವರಿಗೆ, “ಇಂದು ನೀವು ಯೆಹೋವನಿಗೆ ಮೀಸಲಾದ ಜನರಾದಿರಿ; ಯಾಕೆಂದರೆ ನೀವು ನಿಮ್ಮ ಸ್ವಂತ ಗಂಡು ಮಗನಿಗೂ ಸಹೋದರನಿಗೂ ವಿರೋಧವಾದಿರಿ. ಇಂದು ಆತನು ನಿಮ್ಮನ್ನು ಆಶೀರ್ವದಿಸಿದ್ದಾನೆ” ಅಂದನು.
|
30. ಮರುದಿನ ಮುಂಜಾನೆ ಮೋಶೆಯು ಜನರಿಗೆ, “ನೀವು ಭಯಂಕರವಾದ ಪಾಪವನ್ನು ಮಾಡಿದ್ದೀರಿ. ಆದರೆ ಈಗ ನಾನು ಯೆಹೋವನ ಬಳಿಗೆ ಹೋಗಿ, ಆತನು ನಿಮ್ಮ ಪಾಪಗಳನ್ನು ಕ್ಷಮಿಸುವಂತೆ ನಾನೇನಾದರೂ ಮಾಡಬಹುದೊ ಎಂದು ವಿಚಾರಿಸುತ್ತೇನೆ” ಎಂದನು.
|
31. ಅಂತೆಯೇ ಮೋಶೆಯು ಯೆಹೋವನ ಬಳಿಗೆ ಮರಳಿ ಹೋಗಿ, “ದಯವಿಟ್ಟು ಆಲಿಸು! ಈ ಜನರು ಬಹಳ ಕೆಟ್ಟ ಪಾಪವನ್ನು ಮಾಡಿದ್ದಾರೆ. ಚಿನ್ನದಿಂದ ಮೂರ್ತಿಯನ್ನು ಮಾಡಿಕೊಂಡಿದ್ದಾರೆ.
|
32. ಅವರ ಈ ಪಾಪವನ್ನು ಕ್ಷಮಿಸು. ನೀನು ಅವರನ್ನು ಕ್ಷಮಿಸುವುದಿಲ್ಲವಾದರೆ ನಿನ್ನ ಜೀವಭಾದ್ಯರ ಪಟ್ಟಿಯ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು” ಎಂದು ಪ್ರಾರ್ಥಿಸಿದನು.
|
34. ಆದ್ದರಿಂದ ಈಗ ಕೆಳಗಿಳಿದು ನಾನು ನಿನಗೆ ಹೇಳುವಲ್ಲಿಗೆ ಜನರನ್ನು ನಡಿಸು. ನನ್ನ ದೂತನು ನಿನ್ನ ಮುಂದೆ ಹೋಗಿ ನಿನ್ನನ್ನು ನಡಿಸುವನು. ಪಾಪಮಾಡಿದ ಜನರನ್ನು ಶಿಕ್ಷಿಸುವ ಸಮಯ ಬಂದಾಗ ಅವರು ಶಿಕ್ಷಿಸಲ್ಪಡುವರು” ಎಂದು ಹೇಳಿದನು.
|
35. ಆದ್ದರಿಂದ ಯೆಹೋವನು ಜನರಿಗೆ ಭಯಂಕರವಾದ ವ್ಯಾದಿಯನ್ನು ಬರಮಾಡಿದನು. ಅವರು ಆರೋನನಿಂದ ಬಸವನನ್ನು ಮಾಡಿಸಿಕೊಂಡದ್ದೇ ಇದಕ್ಕೇ ಕಾರಣ. “ನು ನಿಮ್ಮೊಂದಿಗೆ ಬರುವುದಿಲ್ಲ
|