ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ವಿಮೋಚನಕಾಂಡ
1. {#1ಯಜ್ಞವೇದಿಕೆ } [PS]ತರುವಾಯ ಬೆಚಲೇಲನು ಯಜ್ಞವೇದಿಕೆಯನ್ನು ಜಾಲೀಮರದಿಂದ ಮಾಡಿದನು. ಈ ವೇದಿಕೆಯು ಸರ್ವಾಂಗಹೋಮಗಳನ್ನು ಅರ್ಪಿಸುವುದಕ್ಕೆ ಕಟ್ಟಲ್ಪಟ್ಟಿತ್ತು. ವೇದಿಕೆಯು ಚೌಕವಾಗಿತ್ತು. ಅದು ಐದು ಮೊಳ ಉದ್ದ, ಐದು ಮೊಳ ಅಗಲ ಮತ್ತು ಮೂರು ಮೊಳ ಎತ್ತರ ಇತ್ತು.
2. ಅವನು ಯಜ್ಞವೇದಿಕೆಯ ನಾಲ್ಕು ಮೂಲೆಗಳಲ್ಲಿ ಒಂದೊಂದು ಕೊಂಬುಗಳನ್ನು ಇಟ್ಟು ಪ್ರತಿಯೊಂದೂ ಕೊಂಬನ್ನು ಅದರ ಮೂಲೆಗೆ ಸೇರಿಸಿದನು. ಹೀಗಾಗಿ ಪ್ರತಿಯೊಂದೂ ಅಖಂಡವಾದ ಒಂದೇ ವಸ್ತುವಿನಂತಾಯಿತು. ಅವನು ಯಜ್ಞವೇದಿಕೆಯನ್ನು ತಾಮ್ರದಿಂದ ಹೊದಿಸಿದನು.
3. ಬಳಿಕ ವೇದಿಕೆಯಲ್ಲಿ ಉಪಯೋಗಿಸುವ ಎಲ್ಲಾ ಉಪಕರಣಗಳನ್ನು ಅಂದರೆ ಮಡಿಕೆಗಳು, ಸಲಿಕೆಗಳು, ಬೋಗುಣಿಗಳು, ಮುಳ್ಳುಗಳು ಮತ್ತು ಅಗ್ಗಿಷ್ಟಿಗೆಗಳನ್ನು ತಾಮ್ರದಿಂದ ಮಾಡಿದನು.
4. ಬಳಿಕ ಅವನು ವೇದಿಕೆಗೆ ತಾಮ್ರದ ಜಾಳಿಗೆಯನ್ನು ಮಾಡಿದನು. ಜಾಳಿಗೆಯು ಹೆಣಿಗೇ ಕೆಲಸದಿಂದ ಮಾಡಲಾಗಿತ್ತು. ಜಾಳಿಗೆಯು ವೇದಿಕೆಯ ಕೆಳಭಾಗದಲ್ಲಿರುವ ಕಟ್ಟೆಯ ಕೆಳಗೆ ಇಡಲ್ಪಟ್ಟಿತ್ತು. ಅದು ಕೆಳಗಿನಿಂದ ವೇದಿಕೆಯ ಅರ್ಧಭಾಗದಷ್ಟು ಮೇಲಕ್ಕೆ ಹೋಯಿತು.
5. ಬಳಿಕ ಅವನು ತಾಮ್ರದ ಬಳೆಗಳನ್ನು ಮಾಡಿದನು. ಈ ಬಳೆಗಳು ವೇದಿಕೆಯನ್ನು ಕೋಲುಗಳಿಂದ ಹೊರುವುದಕ್ಕೆ ಉಪಯುಕ್ತವಾಗಿದ್ದವು. ಅವನು ಬಳೆಗಳನ್ನು ಜಾಳಿಗೆಯ ನಾಲ್ಕು ಮೂಲೆಗಳಲ್ಲಿ ಇಟ್ಟನು.
6. ಬಳಿಕ ಅವನು ಜಾಲೀಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ತಾಮ್ರದಿಂದ ಹೊದಿಸಿದನು.
7. ಅವನು ವೇದಿಕೆಯ ಪಾರ್ಶ್ವಗಳಲ್ಲಿದ್ದ ಬಳೆಗಳಲ್ಲಿ ಕೋಲುಗಳನ್ನು ಸೇರಿಸಿದನು. ಕೋಲುಗಳು ವೇದಿಕೆಯನ್ನು ಹೊರುವುದಕ್ಕಾಗಿ ಉಪಯುಕ್ತವಾಗಿದ್ದವು. ಅವನು ವೇದಿಕೆಯನ್ನು ಪೆಟ್ಟಿಗೆಯಂತೆ ಮಾಡಲು ಹಲಗೆಗಳನ್ನು ಉಪಯೋಗಿಸಿದನು. ಅದು ಟೊಳ್ಳಾಗಿತ್ತು. [PE]
8. [PS]ಅವನು ತಾಮ್ರದಿಂದ ಗಂಗಾಳವನ್ನೂ ಅದರ ಪೀಠವನ್ನೂ ಮಾಡಿದನು. ದೇವದರ್ಶನಗುಡಾರದ ಬಾಗಿಲಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರು ಕೊಟ್ಟ ತಾಮ್ರದ ದರ್ಪಣಗಳನ್ನು ಅದಕ್ಕೆ ಉಪಯೋಗಿಸಿದನು. [PE]
9. {#1ಪವಿತ್ರಗುಡಾರದ ಸುತ್ತಲಿನ ಅಂಗಳ } [PS]ಬಳಿಕ ಅವನು ಅಂಗಳವನ್ನು ಮಾಡಿದನು. ದಕ್ಷಿಣ ಭಾಗದಲ್ಲಿ ನೂರು ಮೊಳ ಉದ್ದದ ಪರದೆಯ ಗೋಡೆಯನ್ನು ಮಾಡಿದನು. ಪರದೆಗಳು ಶ್ರೇಷ್ಠ ನಾರುಬಟ್ಟೆಯಿಂದ ಮಾಡಲಾಗಿದ್ದವು.
10. ದಕ್ಷಿಣ ಭಾಗದಲ್ಲಿದ್ದ ಪರದೆಗಳಿಗೆ ಇಪ್ಪತ್ತು ಕಂಬಗಳಿದ್ದವು. ಕಂಬಗಳಿಗೆ ಇಪ್ಪತ್ತು ತಾಮ್ರದ ಗದ್ದಿಗೇಕಲ್ಲುಗಳಿದ್ದವು. ಕಂಬಗಳ ಕೊಂಡಿಗಳು ಮತ್ತು ಪರದೆಯ ಕೋಲುಗಳು ಬೆಳ್ಳಿಯಿಂದ ಮಾಡಲ್ಪಟ್ಟಿದ್ದವು.
11. ಅಂಗಳದ ಉತ್ತರ ಭಾಗದಲ್ಲಿಯೂ ನೂರು ಮೊಳ ಉದ್ದದ ಪರದೆಗಳ ಗೋಡೆಯಿತ್ತು. ಅವುಗಳಿಗೆ ಇಪ್ಪತ್ತು ಕಂಬಗಳು, ಇಪ್ಪತ್ತು ತಾಮ್ರದ ಗದ್ದಿಗೇಕಲ್ಲುಗಳು ಇದ್ದವು. ಕಂಬಗಳ ಕೊಂಡಿಗಳು ಮತ್ತು ಪರದೆಯ ಕೋಲುಗಳು ಬೆಳ್ಳಿಯಿಂದ ಮಾಡಲ್ಪಟ್ಟಿದ್ದವು. [PE]
12. [PS]ಅಂಗಳದ ಪಶ್ಚಿಮ ಭಾಗದಲ್ಲಿ ಪರದೆಗಳ ಗೋಡೆಯು ಐವತ್ತು ಮೊಳ ಉದ್ದವಾಗಿತ್ತು. ಅಲ್ಲಿ ಹತ್ತು ಕಂಬಗಳೂ ಹತ್ತು ಗದ್ದಿಗೇಕಲ್ಲುಗಳೂ ಇದ್ದವು. ಕಂಬಗಳ ಕೊಂಡಿಗಳು ಮತ್ತು ಪರದೆಯ ಕೋಲುಗಳು ಬೆಳ್ಳಿಯಿಂದ ಮಾಡಲ್ಪಟ್ಟಿದ್ದವು. [PE]
13. [PS]ಅಂಗಳದ ಪೂರ್ವ ಭಾಗವು ಐವತ್ತು ಮೊಳ ಅಗಲವಾಗಿತ್ತು. ಅಂಗಳದ ಪ್ರವೇಶದ್ವಾರವು ಈ ಭಾಗದಲ್ಲಿತ್ತು.
14. ಬಾಗಿಲಿನ ಒಂದು ಕಡೆಯಲ್ಲಿ ಪರದೆಗಳ ಗೋಡೆಯು ಹದಿನೈದು ಮೊಳ ಉದ್ದವಾಗಿತ್ತು. ಆ ಕಡೆಯಲ್ಲಿ ಮೂರು ಕಂಬಗಳೂ ಮೂರು ಗದ್ದಿಗೇಕಲ್ಲುಗಳೂ ಇದ್ದವು.
15. ಬಾಗಿಲಿನ ಇನ್ನೊಂದು ಕಡೆಯಲ್ಲೂ ಪರದೆಗಳ ಗೋಡೆಯು ಹದಿನೈದು ಮೊಳ ಉದ್ದವಾಗಿತ್ತು. ಆ ಕಡೆಯಲ್ಲಿ ಮೂರು ಕಂಬಗಳೂ ಮೂರು ಗದ್ದೀಗೆಕಲ್ಲುಗಳೂ ಇದ್ದವು.
16. ಅಂಗಳದ ಸುತ್ತಲಿದ್ದ ಪರದೆಗಳೆಲ್ಲಾ ಶ್ರೇಷ್ಠ ನಾರುಬಟ್ಟೆಯಿಂದ ಮಾಡಲ್ಪಟ್ಟಿದ್ದವು.
17. ಕಂಬಗಳ ಗದ್ದಿಗೇಕಲ್ಲುಗಳನ್ನು ತಾಮ್ರದಿಂದ ಮಾಡಲಾಗಿತ್ತು. ಕೊಂಡಿಗಳನ್ನು ಮತ್ತು ಪರದೆಯ ಕೋಲುಗಳನ್ನು ಬೆಳ್ಳಿಯಿಂದ ಮಾಡಲಾಗಿತ್ತು. ಕಂಬಗಳ ತುದಿಗಳನ್ನೂ ಬೆಳ್ಳಿಯಿಂದ ಹೊದಿಸಲಾಗಿತ್ತು. ಅಂಗಳದಲ್ಲಿದ್ದ ಕಂಬಗಳಿಗೆಲ್ಲಾ ಬೆಳ್ಳಿಯಿಂದ ಮಾಡಿದ ಪರದೆಯ ಕೋಲುಗಳಿದ್ದವು. [PE]
18. [PS]ಅಂಗಳದ ಬಾಗಿಲಿನ ಪರದೆಯು ಶ್ರೇಷ್ಠ ನಾರುಬಟ್ಟೆಯಿಂದಲೂ, ನೀಲಿ, ನೇರಳೆ, ಕೆಂಪುದಾರಗಳಿಂದಲೂ ಮಾಡಲಾಗಿತ್ತು. ಪರದೆಯಲ್ಲಿ ನಕಾಸಿ ಕೆಲಸ ಮಾಡಲಾಗಿತ್ತು. ಪರದೆಯು ಇಪ್ಪತ್ತು ಮೊಳ ಉದ್ದ ಮತ್ತು ಐದು ಮೊಳ ಅಗಲವಾಗಿತ್ತು. ಅಂಗಳದ ಸುತ್ತಲಿದ್ದ ಎಲ್ಲಾ ಪರದೆಗಳ ಎತ್ತರ ಒಂದೇ ಆಗಿತ್ತು.
19. ಪರದೆಗಳಿಗೆ ನಾಲ್ಕು ಕಂಬಗಳು ಮತ್ತು ನಾಲ್ಕು ತಾಮ್ರದ ಗದ್ದಿಗೇಕಲ್ಲುಗಳು ಇದ್ದವು. ಕಂಬಗಳ ಕೊಂಡಿಗಳನ್ನು ಬೆಳ್ಳಿಯಿಂದ ಮಾಡಲಾಗಿತ್ತು. ಕಂಬಗಳ ತುದಿಗಳು ಬೆಳ್ಳಿಯಿಂದ ಮಾಡಲ್ಪಟ್ಟಿದ್ದವು.
20. ಪವಿತ್ರಗುಡಾರದ ಎಲ್ಲಾ ಗೂಟಗಳು ಮತ್ತು ಅಂಗಳದ ಸುತ್ತಲಿದ್ದ ಪರದೆಗಳ ಗೂಟಗಳು ತಾಮ್ರದಿಂದ ಮಾಡಲ್ಪಟ್ಟಿದ್ದವು. [PE]
21. [PS]ಒಡಂಬಡಿಕೆಯ ಗುಡಾರವಾದ ಪವಿತ್ರಗುಡಾರವನ್ನು ಮಾಡಲು ಉಪಯೋಗಿಸಿದ ಎಲ್ಲಾ ವಸ್ತುಗಳನ್ನು ಬರೆದಿಡಬೇಕೆಂದು ಮೋಶೆಯು ಲೇವಿಯರಿಗೆ ಆಜ್ಞಾಪಿಸಿದನು. ಈ ಪಟ್ಟಿಯು ಆರೋನನ ಮಗನಾದ ಈತಾಮಾರನ ವಶದಲ್ಲಿ ಇತ್ತು. [PE]
22. [PS]ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರತಿಯೊಂದನ್ನೂ ಯೆಹೂದಕುಲದ ಹೂರನ ಮೊಮ್ಮಗನೂ ಊರಿಯ ಮಗನೂ ಆದ ಬೆಚಲೇಲನು ಮಾಡಿದನು.
23. ದಾನ್‌ಕುಲದ ಅಹೀಸಾಮಾಕನ ಮಗನಾದ ಒಹೊಲೀಯಾಬನು ಅವನಿಗೆ ಸಹಾಯ ಮಾಡಿದನು. ಒಹೊಲೀಯಾಬನು ನಿಪುಣನಾದ ಕೆಲಸಗಾರನೂ ನಕಾಸಿ ಕೆಲಸ ಮಾಡುವವನೂ ಆಗಿದ್ದನು. ಅವನು ಶ್ರೇಷ್ಠ ನಾರುಬಟ್ಟೆಯಲ್ಲಿ ನೀಲಿ, ನೇರಳೆ, ಕೆಂಪುದಾರಗಳಿಂದ ಬುಟೇದಾರೀ ಕೆಲಸ ಮಾಡಲು ನಿಪುಣನಾಗಿದ್ದನು. [PE]
24. [PS]ಪವಿತ್ರಸ್ಥಳಕ್ಕಾಗಿ ಎರಡು ಟನ್‌ಗಿಂತ ಹೆಚ್ಚು ಬಂಗಾರವು ಯೆಹೋವನಿಗೆ ಕಾಣಿಕೆಯಾಗಿ ಕೊಡಲ್ಪಟ್ಟಿತು. (ಅಧಿಕೃತ ಅಳತೆಯನ್ನು ಉಪಯೋಗಿಸಿ ಇದನ್ನು ತೂಕ ಮಾಡಲಾಯಿತು.) [PE]
25. [PS]ಲೆಕ್ಕಿಸಲ್ಪಟ್ಟ ಒಟ್ಟು ಗಂಡಸರು ಮೂರುಮುಕ್ಕಾಲು ಟನ್‌ಗಿಂತ ಹೆಚ್ಚು ಬೆಳ್ಳಿಯನ್ನು ಕೊಟ್ಟರು. (ಅಧಿಕೃತ ಅಳತೆಯನ್ನು ಉಪಯೋಗಿಸಿ ಇದನ್ನು ತೂಕ ಮಾಡಲಾಯಿತು.)
26. ಇಪ್ಪತ್ತು ವರ್ಷ ಮತ್ತು ಅದಕ್ಕೆ ಮೇಲ್ಪಟ್ಟ ಎಲ್ಲಾ ಗಂಡಸರನ್ನು ಲೆಕ್ಕಿಸಲಾಯಿತು. ಅಲ್ಲಿ ಆರು ಲಕ್ಷದ ಮೂರು ಸಾವಿರದ ಐನೂರೈವತ್ತು ಮಂದಿ ಗಂಡಸರಿದ್ದರು ಮತ್ತು ಪ್ರತಿಯೊಬ್ಬನು ತಲಾ ಒಂದು [US]ಬೆಕಾ[UE][* ಬೆಕಾ 6 ಗ್ರಾಂ. ] ಬೆಳ್ಳಿಯನ್ನು ತೆರಿಗೆಯಾಗಿ ಕೊಡಬೇಕಾಯಿತು. (ಅಧಿಕೃತ ಅಳತೆಯ ಪ್ರಕಾರ ಒಂದು [US]ಬೆಕಾ[UE] ಅಂದರೆ ಅರ್ಧ ಶೆಕೆಲ್.)
27. ಯೆಹೋವನ ಪವಿತ್ರಸ್ಥಳ ಮತ್ತು ಪರದೆಗಳಿಗೆ ಬೇಕಾದ ನೂರು ಗದ್ದಿಗೇಕಲ್ಲುಗಳನ್ನು ಮಾಡಲು ಅವರು ಮೂರುಮುಕ್ಕಾಲು ಟನ್ ಬೆಳ್ಳಿಯನ್ನು ಉಪಯೋಗಿಸಿದರು. ಅವರು ಪ್ರತಿ ಗದ್ದಿಗೇಕಲ್ಲಿಗೆ ಎಪ್ಪತ್ತೈದು ಪೌಂಡು ಬೆಳ್ಳಿಯನ್ನು ಉಪಯೋಗಿಸಿದರು.
28. ಉಳಿದ ಐವತ್ತು ಪೌಂಡು ಬೆಳ್ಳಿಯನ್ನು, ಕೊಂಡಿಗಳನ್ನೂ ಪರದೆಯ ಕೋಲುಗಳನ್ನೂ ಮಾಡುವುದಕ್ಕೂ ಕಂಬಗಳಿಗೆ ಹೊದಿಸುವುದಕ್ಕೂ ಉಪಯೋಗಿಸಿದರು. [PE]
29. [PS]ಇಪ್ಪತ್ತಾರುವರೆ ಟನ್‌ಗಿಂತ ಹೆಚ್ಚು ತಾಮ್ರವನ್ನು ಯೆಹೋವನಿಗಾಗಿ ಕೊಡಲಾಯಿತು.
30. ಆ ತಾಮ್ರವನ್ನು ದೇವದರ್ಶನಗುಡಾರದ ಬಾಗಿಲಿನ ಗದ್ದಿಗೇಕಲ್ಲುಗಳನ್ನು ಮಾಡಲು ಉಪಯೋಗಿಸಲಾಯಿತು. ಯಜ್ಞವೇದಿಕೆಯನ್ನು ಮತ್ತು ತಾಮ್ರದ ಜಾಳಿಗೆಯನ್ನು ಮಾಡಲು ಅವರು ತಾಮ್ರವನ್ನು ಉಪಯೋಗಿಸಿದರು. ಯಜ್ಞವೇದಿಕೆಯ ಎಲ್ಲಾ ಉಪಕರಣಗಳನ್ನು ಮತ್ತು ಬಟ್ಟಲುಗಳನ್ನು ಮಾಡಲು ತಾಮ್ರವನ್ನು ಉಪಯೋಗಿಸಲಾಯಿತು.
31. ಅದನ್ನು ಅಂಗಳದ ಸುತ್ತಲಿರುವ ಪರದೆಗಳ ಮತ್ತು ಬಾಗಿಲಿನ ಪರದೆಗಳ ಗದ್ದಿಗೇಕಲ್ಲುಗಳಿಗೂ ಉಪಯೋಗಿಸಲಾಯಿತು. ತಾಮ್ರವನ್ನು ಪವಿತ್ರಗುಡಾರದ ಮತ್ತು ಅಂಗಳದ ಸುತ್ತಲಿರುವ ಪರದೆಗಳ ಗೂಟಗಳನ್ನು ಮಾಡಲು ಉಪಯೋಗಿಸಲಾಯಿತು. [PE]
ಒಟ್ಟು 40 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 38 / 40
ಯಜ್ಞವೇದಿಕೆ 1 ತರುವಾಯ ಬೆಚಲೇಲನು ಯಜ್ಞವೇದಿಕೆಯನ್ನು ಜಾಲೀಮರದಿಂದ ಮಾಡಿದನು. ಈ ವೇದಿಕೆಯು ಸರ್ವಾಂಗಹೋಮಗಳನ್ನು ಅರ್ಪಿಸುವುದಕ್ಕೆ ಕಟ್ಟಲ್ಪಟ್ಟಿತ್ತು. ವೇದಿಕೆಯು ಚೌಕವಾಗಿತ್ತು. ಅದು ಐದು ಮೊಳ ಉದ್ದ, ಐದು ಮೊಳ ಅಗಲ ಮತ್ತು ಮೂರು ಮೊಳ ಎತ್ತರ ಇತ್ತು. 2 ಅವನು ಯಜ್ಞವೇದಿಕೆಯ ನಾಲ್ಕು ಮೂಲೆಗಳಲ್ಲಿ ಒಂದೊಂದು ಕೊಂಬುಗಳನ್ನು ಇಟ್ಟು ಪ್ರತಿಯೊಂದೂ ಕೊಂಬನ್ನು ಅದರ ಮೂಲೆಗೆ ಸೇರಿಸಿದನು. ಹೀಗಾಗಿ ಪ್ರತಿಯೊಂದೂ ಅಖಂಡವಾದ ಒಂದೇ ವಸ್ತುವಿನಂತಾಯಿತು. ಅವನು ಯಜ್ಞವೇದಿಕೆಯನ್ನು ತಾಮ್ರದಿಂದ ಹೊದಿಸಿದನು. 3 ಬಳಿಕ ವೇದಿಕೆಯಲ್ಲಿ ಉಪಯೋಗಿಸುವ ಎಲ್ಲಾ ಉಪಕರಣಗಳನ್ನು ಅಂದರೆ ಮಡಿಕೆಗಳು, ಸಲಿಕೆಗಳು, ಬೋಗುಣಿಗಳು, ಮುಳ್ಳುಗಳು ಮತ್ತು ಅಗ್ಗಿಷ್ಟಿಗೆಗಳನ್ನು ತಾಮ್ರದಿಂದ ಮಾಡಿದನು. 4 ಬಳಿಕ ಅವನು ವೇದಿಕೆಗೆ ತಾಮ್ರದ ಜಾಳಿಗೆಯನ್ನು ಮಾಡಿದನು. ಜಾಳಿಗೆಯು ಹೆಣಿಗೇ ಕೆಲಸದಿಂದ ಮಾಡಲಾಗಿತ್ತು. ಜಾಳಿಗೆಯು ವೇದಿಕೆಯ ಕೆಳಭಾಗದಲ್ಲಿರುವ ಕಟ್ಟೆಯ ಕೆಳಗೆ ಇಡಲ್ಪಟ್ಟಿತ್ತು. ಅದು ಕೆಳಗಿನಿಂದ ವೇದಿಕೆಯ ಅರ್ಧಭಾಗದಷ್ಟು ಮೇಲಕ್ಕೆ ಹೋಯಿತು. 5 ಬಳಿಕ ಅವನು ತಾಮ್ರದ ಬಳೆಗಳನ್ನು ಮಾಡಿದನು. ಈ ಬಳೆಗಳು ವೇದಿಕೆಯನ್ನು ಕೋಲುಗಳಿಂದ ಹೊರುವುದಕ್ಕೆ ಉಪಯುಕ್ತವಾಗಿದ್ದವು. ಅವನು ಬಳೆಗಳನ್ನು ಜಾಳಿಗೆಯ ನಾಲ್ಕು ಮೂಲೆಗಳಲ್ಲಿ ಇಟ್ಟನು. 6 ಬಳಿಕ ಅವನು ಜಾಲೀಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ತಾಮ್ರದಿಂದ ಹೊದಿಸಿದನು. 7 ಅವನು ವೇದಿಕೆಯ ಪಾರ್ಶ್ವಗಳಲ್ಲಿದ್ದ ಬಳೆಗಳಲ್ಲಿ ಕೋಲುಗಳನ್ನು ಸೇರಿಸಿದನು. ಕೋಲುಗಳು ವೇದಿಕೆಯನ್ನು ಹೊರುವುದಕ್ಕಾಗಿ ಉಪಯುಕ್ತವಾಗಿದ್ದವು. ಅವನು ವೇದಿಕೆಯನ್ನು ಪೆಟ್ಟಿಗೆಯಂತೆ ಮಾಡಲು ಹಲಗೆಗಳನ್ನು ಉಪಯೋಗಿಸಿದನು. ಅದು ಟೊಳ್ಳಾಗಿತ್ತು. 8 ಅವನು ತಾಮ್ರದಿಂದ ಗಂಗಾಳವನ್ನೂ ಅದರ ಪೀಠವನ್ನೂ ಮಾಡಿದನು. ದೇವದರ್ಶನಗುಡಾರದ ಬಾಗಿಲಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರು ಕೊಟ್ಟ ತಾಮ್ರದ ದರ್ಪಣಗಳನ್ನು ಅದಕ್ಕೆ ಉಪಯೋಗಿಸಿದನು. ಪವಿತ್ರಗುಡಾರದ ಸುತ್ತಲಿನ ಅಂಗಳ 9 ಬಳಿಕ ಅವನು ಅಂಗಳವನ್ನು ಮಾಡಿದನು. ದಕ್ಷಿಣ ಭಾಗದಲ್ಲಿ ನೂರು ಮೊಳ ಉದ್ದದ ಪರದೆಯ ಗೋಡೆಯನ್ನು ಮಾಡಿದನು. ಪರದೆಗಳು ಶ್ರೇಷ್ಠ ನಾರುಬಟ್ಟೆಯಿಂದ ಮಾಡಲಾಗಿದ್ದವು. 10 ದಕ್ಷಿಣ ಭಾಗದಲ್ಲಿದ್ದ ಪರದೆಗಳಿಗೆ ಇಪ್ಪತ್ತು ಕಂಬಗಳಿದ್ದವು. ಕಂಬಗಳಿಗೆ ಇಪ್ಪತ್ತು ತಾಮ್ರದ ಗದ್ದಿಗೇಕಲ್ಲುಗಳಿದ್ದವು. ಕಂಬಗಳ ಕೊಂಡಿಗಳು ಮತ್ತು ಪರದೆಯ ಕೋಲುಗಳು ಬೆಳ್ಳಿಯಿಂದ ಮಾಡಲ್ಪಟ್ಟಿದ್ದವು. 11 ಅಂಗಳದ ಉತ್ತರ ಭಾಗದಲ್ಲಿಯೂ ನೂರು ಮೊಳ ಉದ್ದದ ಪರದೆಗಳ ಗೋಡೆಯಿತ್ತು. ಅವುಗಳಿಗೆ ಇಪ್ಪತ್ತು ಕಂಬಗಳು, ಇಪ್ಪತ್ತು ತಾಮ್ರದ ಗದ್ದಿಗೇಕಲ್ಲುಗಳು ಇದ್ದವು. ಕಂಬಗಳ ಕೊಂಡಿಗಳು ಮತ್ತು ಪರದೆಯ ಕೋಲುಗಳು ಬೆಳ್ಳಿಯಿಂದ ಮಾಡಲ್ಪಟ್ಟಿದ್ದವು. 12 ಅಂಗಳದ ಪಶ್ಚಿಮ ಭಾಗದಲ್ಲಿ ಪರದೆಗಳ ಗೋಡೆಯು ಐವತ್ತು ಮೊಳ ಉದ್ದವಾಗಿತ್ತು. ಅಲ್ಲಿ ಹತ್ತು ಕಂಬಗಳೂ ಹತ್ತು ಗದ್ದಿಗೇಕಲ್ಲುಗಳೂ ಇದ್ದವು. ಕಂಬಗಳ ಕೊಂಡಿಗಳು ಮತ್ತು ಪರದೆಯ ಕೋಲುಗಳು ಬೆಳ್ಳಿಯಿಂದ ಮಾಡಲ್ಪಟ್ಟಿದ್ದವು. 13 ಅಂಗಳದ ಪೂರ್ವ ಭಾಗವು ಐವತ್ತು ಮೊಳ ಅಗಲವಾಗಿತ್ತು. ಅಂಗಳದ ಪ್ರವೇಶದ್ವಾರವು ಈ ಭಾಗದಲ್ಲಿತ್ತು. 14 ಬಾಗಿಲಿನ ಒಂದು ಕಡೆಯಲ್ಲಿ ಪರದೆಗಳ ಗೋಡೆಯು ಹದಿನೈದು ಮೊಳ ಉದ್ದವಾಗಿತ್ತು. ಆ ಕಡೆಯಲ್ಲಿ ಮೂರು ಕಂಬಗಳೂ ಮೂರು ಗದ್ದಿಗೇಕಲ್ಲುಗಳೂ ಇದ್ದವು. 15 ಬಾಗಿಲಿನ ಇನ್ನೊಂದು ಕಡೆಯಲ್ಲೂ ಪರದೆಗಳ ಗೋಡೆಯು ಹದಿನೈದು ಮೊಳ ಉದ್ದವಾಗಿತ್ತು. ಆ ಕಡೆಯಲ್ಲಿ ಮೂರು ಕಂಬಗಳೂ ಮೂರು ಗದ್ದೀಗೆಕಲ್ಲುಗಳೂ ಇದ್ದವು. 16 ಅಂಗಳದ ಸುತ್ತಲಿದ್ದ ಪರದೆಗಳೆಲ್ಲಾ ಶ್ರೇಷ್ಠ ನಾರುಬಟ್ಟೆಯಿಂದ ಮಾಡಲ್ಪಟ್ಟಿದ್ದವು. 17 ಕಂಬಗಳ ಗದ್ದಿಗೇಕಲ್ಲುಗಳನ್ನು ತಾಮ್ರದಿಂದ ಮಾಡಲಾಗಿತ್ತು. ಕೊಂಡಿಗಳನ್ನು ಮತ್ತು ಪರದೆಯ ಕೋಲುಗಳನ್ನು ಬೆಳ್ಳಿಯಿಂದ ಮಾಡಲಾಗಿತ್ತು. ಕಂಬಗಳ ತುದಿಗಳನ್ನೂ ಬೆಳ್ಳಿಯಿಂದ ಹೊದಿಸಲಾಗಿತ್ತು. ಅಂಗಳದಲ್ಲಿದ್ದ ಕಂಬಗಳಿಗೆಲ್ಲಾ ಬೆಳ್ಳಿಯಿಂದ ಮಾಡಿದ ಪರದೆಯ ಕೋಲುಗಳಿದ್ದವು. 18 ಅಂಗಳದ ಬಾಗಿಲಿನ ಪರದೆಯು ಶ್ರೇಷ್ಠ ನಾರುಬಟ್ಟೆಯಿಂದಲೂ, ನೀಲಿ, ನೇರಳೆ, ಕೆಂಪುದಾರಗಳಿಂದಲೂ ಮಾಡಲಾಗಿತ್ತು. ಪರದೆಯಲ್ಲಿ ನಕಾಸಿ ಕೆಲಸ ಮಾಡಲಾಗಿತ್ತು. ಪರದೆಯು ಇಪ್ಪತ್ತು ಮೊಳ ಉದ್ದ ಮತ್ತು ಐದು ಮೊಳ ಅಗಲವಾಗಿತ್ತು. ಅಂಗಳದ ಸುತ್ತಲಿದ್ದ ಎಲ್ಲಾ ಪರದೆಗಳ ಎತ್ತರ ಒಂದೇ ಆಗಿತ್ತು. 19 ಪರದೆಗಳಿಗೆ ನಾಲ್ಕು ಕಂಬಗಳು ಮತ್ತು ನಾಲ್ಕು ತಾಮ್ರದ ಗದ್ದಿಗೇಕಲ್ಲುಗಳು ಇದ್ದವು. ಕಂಬಗಳ ಕೊಂಡಿಗಳನ್ನು ಬೆಳ್ಳಿಯಿಂದ ಮಾಡಲಾಗಿತ್ತು. ಕಂಬಗಳ ತುದಿಗಳು ಬೆಳ್ಳಿಯಿಂದ ಮಾಡಲ್ಪಟ್ಟಿದ್ದವು. 20 ಪವಿತ್ರಗುಡಾರದ ಎಲ್ಲಾ ಗೂಟಗಳು ಮತ್ತು ಅಂಗಳದ ಸುತ್ತಲಿದ್ದ ಪರದೆಗಳ ಗೂಟಗಳು ತಾಮ್ರದಿಂದ ಮಾಡಲ್ಪಟ್ಟಿದ್ದವು. 21 ಒಡಂಬಡಿಕೆಯ ಗುಡಾರವಾದ ಪವಿತ್ರಗುಡಾರವನ್ನು ಮಾಡಲು ಉಪಯೋಗಿಸಿದ ಎಲ್ಲಾ ವಸ್ತುಗಳನ್ನು ಬರೆದಿಡಬೇಕೆಂದು ಮೋಶೆಯು ಲೇವಿಯರಿಗೆ ಆಜ್ಞಾಪಿಸಿದನು. ಈ ಪಟ್ಟಿಯು ಆರೋನನ ಮಗನಾದ ಈತಾಮಾರನ ವಶದಲ್ಲಿ ಇತ್ತು. 22 ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರತಿಯೊಂದನ್ನೂ ಯೆಹೂದಕುಲದ ಹೂರನ ಮೊಮ್ಮಗನೂ ಊರಿಯ ಮಗನೂ ಆದ ಬೆಚಲೇಲನು ಮಾಡಿದನು. 23 ದಾನ್‌ಕುಲದ ಅಹೀಸಾಮಾಕನ ಮಗನಾದ ಒಹೊಲೀಯಾಬನು ಅವನಿಗೆ ಸಹಾಯ ಮಾಡಿದನು. ಒಹೊಲೀಯಾಬನು ನಿಪುಣನಾದ ಕೆಲಸಗಾರನೂ ನಕಾಸಿ ಕೆಲಸ ಮಾಡುವವನೂ ಆಗಿದ್ದನು. ಅವನು ಶ್ರೇಷ್ಠ ನಾರುಬಟ್ಟೆಯಲ್ಲಿ ನೀಲಿ, ನೇರಳೆ, ಕೆಂಪುದಾರಗಳಿಂದ ಬುಟೇದಾರೀ ಕೆಲಸ ಮಾಡಲು ನಿಪುಣನಾಗಿದ್ದನು. 24 ಪವಿತ್ರಸ್ಥಳಕ್ಕಾಗಿ ಎರಡು ಟನ್‌ಗಿಂತ ಹೆಚ್ಚು ಬಂಗಾರವು ಯೆಹೋವನಿಗೆ ಕಾಣಿಕೆಯಾಗಿ ಕೊಡಲ್ಪಟ್ಟಿತು. (ಅಧಿಕೃತ ಅಳತೆಯನ್ನು ಉಪಯೋಗಿಸಿ ಇದನ್ನು ತೂಕ ಮಾಡಲಾಯಿತು.) 25 ಲೆಕ್ಕಿಸಲ್ಪಟ್ಟ ಒಟ್ಟು ಗಂಡಸರು ಮೂರುಮುಕ್ಕಾಲು ಟನ್‌ಗಿಂತ ಹೆಚ್ಚು ಬೆಳ್ಳಿಯನ್ನು ಕೊಟ್ಟರು. (ಅಧಿಕೃತ ಅಳತೆಯನ್ನು ಉಪಯೋಗಿಸಿ ಇದನ್ನು ತೂಕ ಮಾಡಲಾಯಿತು.) 26 ಇಪ್ಪತ್ತು ವರ್ಷ ಮತ್ತು ಅದಕ್ಕೆ ಮೇಲ್ಪಟ್ಟ ಎಲ್ಲಾ ಗಂಡಸರನ್ನು ಲೆಕ್ಕಿಸಲಾಯಿತು. ಅಲ್ಲಿ ಆರು ಲಕ್ಷದ ಮೂರು ಸಾವಿರದ ಐನೂರೈವತ್ತು ಮಂದಿ ಗಂಡಸರಿದ್ದರು ಮತ್ತು ಪ್ರತಿಯೊಬ್ಬನು ತಲಾ ಒಂದು ಬೆಕಾ* ಬೆಕಾ 6 ಗ್ರಾಂ. ಬೆಳ್ಳಿಯನ್ನು ತೆರಿಗೆಯಾಗಿ ಕೊಡಬೇಕಾಯಿತು. (ಅಧಿಕೃತ ಅಳತೆಯ ಪ್ರಕಾರ ಒಂದು ಬೆಕಾ ಅಂದರೆ ಅರ್ಧ ಶೆಕೆಲ್.) 27 ಯೆಹೋವನ ಪವಿತ್ರಸ್ಥಳ ಮತ್ತು ಪರದೆಗಳಿಗೆ ಬೇಕಾದ ನೂರು ಗದ್ದಿಗೇಕಲ್ಲುಗಳನ್ನು ಮಾಡಲು ಅವರು ಮೂರುಮುಕ್ಕಾಲು ಟನ್ ಬೆಳ್ಳಿಯನ್ನು ಉಪಯೋಗಿಸಿದರು. ಅವರು ಪ್ರತಿ ಗದ್ದಿಗೇಕಲ್ಲಿಗೆ ಎಪ್ಪತ್ತೈದು ಪೌಂಡು ಬೆಳ್ಳಿಯನ್ನು ಉಪಯೋಗಿಸಿದರು. 28 ಉಳಿದ ಐವತ್ತು ಪೌಂಡು ಬೆಳ್ಳಿಯನ್ನು, ಕೊಂಡಿಗಳನ್ನೂ ಪರದೆಯ ಕೋಲುಗಳನ್ನೂ ಮಾಡುವುದಕ್ಕೂ ಕಂಬಗಳಿಗೆ ಹೊದಿಸುವುದಕ್ಕೂ ಉಪಯೋಗಿಸಿದರು. 29 ಇಪ್ಪತ್ತಾರುವರೆ ಟನ್‌ಗಿಂತ ಹೆಚ್ಚು ತಾಮ್ರವನ್ನು ಯೆಹೋವನಿಗಾಗಿ ಕೊಡಲಾಯಿತು. 30 ಆ ತಾಮ್ರವನ್ನು ದೇವದರ್ಶನಗುಡಾರದ ಬಾಗಿಲಿನ ಗದ್ದಿಗೇಕಲ್ಲುಗಳನ್ನು ಮಾಡಲು ಉಪಯೋಗಿಸಲಾಯಿತು. ಯಜ್ಞವೇದಿಕೆಯನ್ನು ಮತ್ತು ತಾಮ್ರದ ಜಾಳಿಗೆಯನ್ನು ಮಾಡಲು ಅವರು ತಾಮ್ರವನ್ನು ಉಪಯೋಗಿಸಿದರು. ಯಜ್ಞವೇದಿಕೆಯ ಎಲ್ಲಾ ಉಪಕರಣಗಳನ್ನು ಮತ್ತು ಬಟ್ಟಲುಗಳನ್ನು ಮಾಡಲು ತಾಮ್ರವನ್ನು ಉಪಯೋಗಿಸಲಾಯಿತು. 31 ಅದನ್ನು ಅಂಗಳದ ಸುತ್ತಲಿರುವ ಪರದೆಗಳ ಮತ್ತು ಬಾಗಿಲಿನ ಪರದೆಗಳ ಗದ್ದಿಗೇಕಲ್ಲುಗಳಿಗೂ ಉಪಯೋಗಿಸಲಾಯಿತು. ತಾಮ್ರವನ್ನು ಪವಿತ್ರಗುಡಾರದ ಮತ್ತು ಅಂಗಳದ ಸುತ್ತಲಿರುವ ಪರದೆಗಳ ಗೂಟಗಳನ್ನು ಮಾಡಲು ಉಪಯೋಗಿಸಲಾಯಿತು.
ಒಟ್ಟು 40 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 38 / 40
×

Alert

×

Kannada Letters Keypad References