1. ಮೋಶೆಗೆ ಸಾಕ್ಷಿ ಆಗ ಮೋಶೆಯು ಯೆಹೋವನಿಗೆ, “ಆದರೆ ನೀನು ನನ್ನನ್ನು ಕಳುಹಿಸಿರುವೆ ಎಂದು ಇಸ್ರೇಲರು ನಂಬುವುದೂ ಇಲ್ಲ; ಕೇಳುವುದೂ ಇಲ್ಲ. ಅವರು, ‘ಯೆಹೋವನು ನಿನಗೆ ಪ್ರತ್ಯಕ್ಷನಾಗಲಿಲ್ಲ’ ಎಂದು ಹೇಳುವರು” ಎಂದು ಹೇಳಿದನು.
|
3. ಆಗ ಯೆಹೋವನು, “ನಿನ್ನ ಊರುಗೋಲನ್ನು ನೆಲದ ಮೇಲೆ ಬಿಸಾಡು” ಅಂದನು. ಮೋಶೆ, ತನ್ನ ಊರುಗೋಲನ್ನು ನೆಲದ ಮೇಲೆ ಬಿಸಾಡಿದನು. ಆಗ ಕೋಲು ಹಾವಾಯಿತು. ಮೋಶೆ ಅದರ ಬಳಿಯಿಂದ ಓಡಿಹೋದನು.
|
4. ಬಳಿಕ ಯೆಹೋವನು ಮೋಶೆಗೆ, “ನಿನ್ನ ಕೈಚಾಚಿ ಅದರ ಬಾಲವನ್ನು ಹಿಡಿದುಕೊ” ಎಂದು ಹೇಳಿದನು.’ ಮೋಶೆಯು ಕೈಚಾಚಿ ಹಾವಿನ ಬಾಲವನ್ನು ಹಿಡಿದನು. ಆಗ ಹಾವು ಕೋಲಾಯಿತು.
|
5. ಆಗ ದೇವರು, “ನಿನ್ನ ಕೋಲನ್ನು ಈ ರೀತಿಯಲ್ಲಿ ಉಪಯೋಗಿಸು. ನಿನ್ನ ಪೂರ್ವಿಕರ, ಅಬ್ರಹಾಮನ, ಇಸಾಕನ ಮತ್ತು ಯಾಕೋಬನ ದೇವರು ನಿನಗೆ ಪ್ರತ್ಯಕ್ಷನಾದನೆಂದು ಆಗ ಅವರು ನಂಬುವರು” ಎಂದು ಹೇಳಿದನು.
|
6. ಬಳಿಕ ಯೆಹೋವನು ಮೋಶೆಗೆ, “ನಾನು ನಿನಗೆ ಇನ್ನೊಂದು ಸಾಕ್ಷಿಯನ್ನು ಕೊಡುತ್ತೇನೆ. ನಿನ್ನ ಕೈಯನ್ನು ಉಡಿಯಲ್ಲಿ ಹಾಕು” ಅಂದನು. ಮೋಶೆ ತನ್ನ ಕೈಯನ್ನು ಉಡಿಯಲ್ಲಿ ಹಾಕಿ ಹೊರತೆಗೆದಾಗ ಅದಕ್ಕೆ ತೊನ್ನು ಹಿಡಿದಿತ್ತು.
|
7. ಆಗ ದೇವರು, “ನಿನ್ನ ಕೈಯನ್ನು ತಿರಿಗಿ ಉಡಿಯಲ್ಲಿ ಹಾಕು” ಅಂದನು. ಅಂತೆಯೇ ಮೋಶೆಯು ತನ್ನ ಕೈಯನ್ನು ಮತ್ತೆ ಉಡಿಯಲ್ಲಿ ಹಾಕಿ ಹೊರತೆಗೆದಾಗ ಅದು ಮೊದಲಿನಂತೆ ಆಗಿತ್ತು.
|
8. ಆಗ ಯೆಹೋವನು ಅವನಿಗೆ, “ನೀನು ನಿನ್ನ ಊರುಗೋಲಿನಿಂದ ಸೂಚಕಕಾರ್ಯ ಮಾಡುವಾಗ ಜನರು ನಿನ್ನನ್ನು ನಂಬುವರು; ನಿನ್ನ ಮಾತಿಗೆ ಲಕ್ಷ್ಯಕೊಡುವರು.
|
9. ನೀನು ಈ ಎರಡು ಸೂಚಕಕಾರ್ಯಗಳನ್ನು ತೋರಿಸಿದ ನಂತರವೂ ಅವರು ನಂಬದಿದ್ದರೆ, ನೈಲ್ ನದಿಯಿಂದ ಸ್ವಲ್ಪ ನೀರನ್ನು ತೆಗೆದುಕೊಂಡು ಅದನ್ನು ನೆಲದ ಮೇಲೆ ಸುರಿ; ನೀರು ನೆಲವನ್ನು ಮುಟ್ಟಿದ ಕೊಡಲೇ ರಕ್ತವಾಗುವುದು” ಎಂದು ಹೇಳಿದನು.
|
10. ಮೋಶೆಯು ಯೆಹೋವನಿಗೆ, “ಸ್ವಾಮೀ, ನಾನು ನಿನಗೆ ಸತ್ಯವಾಗಿ ಹೇಳುವುದೇನೆಂದರೆ ನನಗೆ ವಾಕ್ಚಾತುರ್ಯವಿಲ್ಲ. ನನ್ನ ಮಾತೂ ನಾಲಿಗೆಯೂ ಮಂದವಾಗಿವೆ” ಎಂದು ಹೇಳಿದನು.
|
11. ಆಗ ಯೆಹೋವನು ಅವನಿಗೆ, “ಮನುಷ್ಯನ ಬಾಯನ್ನು ಯಾರು ಮಾಡಿದರು? ಮನುಷ್ಯನನ್ನು ಕಿವುಡನನ್ನಾಗಿ ಅಥವಾ ಮೂಕನನ್ನಾಗಿ ಮಾಡಬಲ್ಲವರು ಯಾರು? ಮನುಷ್ಯನನ್ನು ಕುರುಡನನ್ನಾಗಿ ಮಾಡಬಲ್ಲವರು ಯಾರು? ಮನುಷ್ಯನಿಗೆ ದೃಷ್ಟಿಕೊಟ್ಟವನು ಯಾರು? ಯೆಹೋವನಾದ ನಾನಲ್ಲವೇ.
|
12. ಈಗ ಹೋಗು. ನೀನು ಮಾತಾಡುವಾಗ ನಾನೇ ನಿನ್ನೊಂದಿಗಿರುವೆನು. ನೀನು ಹೇಳಬೇಕಾದ ಮಾತುಗಳನ್ನು ನಾನು ನಿನಗೆ ಕೊಡುವೆನು” ಎಂದು ಹೇಳಿದನು.
|
14. ಯೆಹೋವನು ಮೋಶೆಯ ಮೇಲೆ ಕೋಪಗೊಂಡು, “ಹಾಗಾದರೆ ನಿನ್ನ ಅಣ್ಣನಾದ ಲೇವಿ ಕುಟುಂಬದ ಆರೋನನನ್ನೂ ನಾನು ಉಪಯೋಗಿಸುವೆನು. ಅವನಿಗೆ ವಾಕ್ಚಾತುರ್ಯವಿದೆ. ಈಗ ಅವನು ನಿನ್ನ ಬಳಿಗೆ ಬರುತ್ತಿದ್ದಾನೆ. ನಿನ್ನನ್ನು ಕಂಡು ಅವನಿಗೆ ಸಂತೋಷವಾಗುವುದು.
|
15. ಅವನು ನಿನ್ನೊಡನೆ ಫರೋಹನ ಬಳಿಗೆ ಬರುವನು. ನೀನು ಹೇಳಬೇಕಾದದ್ದನ್ನು ನಾನೇ ನಿನಗೆ ತಿಳಿಸುವೆನು. ಅದನ್ನು ನೀನು ಆರೋನನಿಗೆ ತಿಳಿಸು. ಆರೋನನು ಫರೋಹನೊಡನೆ ಸರಿಯಾಗಿ ಮಾತಾಡುವನು.
|
16. ಆರೋನನು ಜನರೊಂದಿಗೂ ನಿನ್ನ ಪರವಾಗಿಯೂ ಮಾತಾಡುವನು. ನೀನು ಮಹಾರಾಜನಂತೆ ಇರುವೆ; ಅವನು ನಿನಗೆ ಅಧಿಕೃತ ಮಾತುಗಾರನಂತೆ ಇರುವನು.
|
17. ಆದ್ದರಿಂದ ಹೋಗು. ನಿನ್ನ ಊರುಗೋಲನ್ನೂ ತೆಗೆದುಕೊಂಡು ಹೋಗು. ಯಾಕೆಂದರೆ ಅದರಿಂದಲೇ ನೀನು ಅದ್ಭುತಕಾರ್ಯಗಳನ್ನು ಮಾಡುವೆ” ಎಂದು ಹೇಳಿದನು. ಮೋಶೆ ಈಜಿಪ್ಟಿಗೆ ಹಿಂತಿರುಗಿದ್ದು
|
18. ಬಳಿಕ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂತಿರುಗಿದನು. ಮೋಶೆ ಇತ್ರೋನನಿಗೆ, “ಈಜಿಪ್ಟಿನಲ್ಲಿರುವ ನನ್ನ ಜನರ ಬಳಿಗೆ ಹೋಗಿ ಅವರು ಇನ್ನೂ ಜೀವಂತವಾಗಿದ್ದಾರೋ ಏನೋ ನೋಡುವೆನು” ಎಂದು ಹೇಳಿದನು. ಇತ್ರೋನನು ಮೋಶೆಗೆ, “ನೀನು ಸಮಾಧಾನದಿಂದ ಹೋಗಿ ಬಾ” ಎಂದು ಹೇಳಿದನು.
|
19. ಮೋಶೆ ಇನ್ನೂ ಮಿದ್ಯಾನಿನಲ್ಲಿದ್ದಾಗ ಯೆಹೋವನು, “ಈಗ ನೀನು ಸುರಕ್ಷಿತವಾಗಿ ಈಜಿಪ್ಟಿಗೆ ಹೋಗಬಹುದು. ನಿನ್ನನ್ನು ಕೊಲ್ಲಬೇಕೆಂದಿದ್ದವರು ಸತ್ತುಹೋಗಿದ್ದಾರೆ” ಅಂದನು.
|
20. ಆದ್ದರಿಂದ ಮೋಶೆ ತನ್ನ ಹೆಂಡತಿಯನ್ನೂ ಗಂಡುಮಕ್ಕಳನ್ನೂ ಕತ್ತೆಗಳ ಮೇಲೆ ಕುಳ್ಳಿರಿಸಿ ಈಜಿಪ್ಟ್ ದೇಶಕ್ಕೆ ಮರಳಿ ಪ್ರಯಾಣ ಮಾಡಿದನು. ಮೋಶೆಯು ಯೆಹೋವನ ಶಕ್ತಿಯಿಂದ ಕೂಡಿದ ತನ್ನ ಊರುಗೋಲನ್ನು ಹಿಡಿದುಕೊಂಡು ಹೋದನು.
|
21. ಮೋಶೆ ಈಜಿಪ್ಟಿಗೆ ಪ್ರಯಾಣ ಮಾಡುತ್ತಿದ್ದಾಗ ಯೆಹೋವನು ಅವನೊಡನೆ ಮಾತಾಡಿ, “ನೀನು ಫರೋಹನೊಂದಿಗೆ ಮಾತಾಡುವಾಗ ನಾನು ತೋರಿಸಿಕೊಟ್ಟ ಅದ್ಭುತಕಾರ್ಯಗಳನ್ನೆಲ್ಲಾ ಅವನ ಮುಂದೆ ಮಾಡು. ಆದರೂ ನಾನು ಫರೋಹನ ಹೃದಯವನ್ನು ಕಠಿಣಗೊಳಿಸುವುದರಿಂದ ಅವನು ಇಸ್ರೇಲರನ್ನು ಹೋಗಗೊಡಿಸುವುದಿಲ್ಲ.
|
23. ನನ್ನ ಮಗನು ನಿನ್ನ ದೇಶದಿಂದ ಹೋಗಿ ನನ್ನನ್ನು ಆರಾಧಿಸಲು ನೀನು ಅಪ್ಪಣೆಕೊಡಬೇಕು. ಇಲ್ಲವಾದರೆ ನಾನು ನಿನ್ನ ಚೊಚ್ಚಲಮಗನನ್ನು ಕೊಲ್ಲುವೆನು’ ಎಂದು ಯೆಹೋವನು ಹೇಳುತ್ತಾನೆ” ಎಂಬುದಾಗಿ ತಿಳಿಸಬೇಕು.
|
24. ಮೋಶೆಯು ಈಜಿಪ್ಟಿಗೆ ತನ್ನ ಪ್ರಯಾಣವನ್ನು ಮುಂದುವರೆಸಿ ಛತ್ರವೊಂದರಲ್ಲಿ ಇಳಿದುಕೊಂಡನು. ಆಗ ಯೆಹೋವನು ಮೋಶೆಯನ್ನು ಸಂಧಿಸಿ ಅವನನ್ನು ಕೊಲ್ಲಬೇಕೆಂದಿದ್ದನು.
|
25. ಆದರೆ ಚಿಪ್ಪೋರಳು ಕಲ್ಲಿನ ಚೂರಿಯನ್ನು ತೆಗೆದುಕೊಂಡು ತನ್ನ ಮಗನಿಗೆ ಸುನ್ನತಿಮಾಡಿ ಚರ್ಮವನ್ನು ತೆಗೆದುಕೊಂಡು ಮೋಶೆಯ ಪಾದಗಳಿಗೆ ಮುಟ್ಟಿಸಿ, “ನೀನು ನನಗೆ ರಕ್ತಧಾರೆಯಿಂದಾದ ಮದುವಣಿಗನಾದೆ” ಅಂದಳು.
|
26. ಆಕೆ ಸುನ್ನತಿಯ ನಿಮಿತ್ತವೇ “ನೀನು ನನಗೆ ರಕ್ತಧಾರೆಯಿಂದಾದ ಮದುವಣಿಗನಾದೆ” ಎಂದು ಹೇಳಿದ್ದರಿಂದ ಯೆಹೋವನು ಅವನನ್ನು ಉಳಿಸಿದನು.
|
27. ಯೆಹೋವನು ಆರೋನನೊಡನೆ ಮಾತಾಡಿ ಅವನಿಗೆ, “ಅರಣ್ಯಕ್ಕೆ ಹೋಗಿ ಮೋಶೆಯನ್ನು ಭೇಟಿಯಾಗು” ಎಂದು ಹೇಳಿದ್ದನು. ಆದ್ದರಿಂದ ಆರೋನನು ಹೋಗಿ ದೇವರ ಬೆಟ್ಟದಲ್ಲಿ ಮೋಶೆಯನ್ನು ಭೇಟಿಯಾದನು. ಆರೋನನು ಮೋಶೆಯನ್ನು ಕಂಡು ಅವನಿಗೆ ಮುದ್ದಿಟ್ಟನು.
|
28. ಯೆಹೋವನು ಹೇಳಿದ್ದನ್ನೆಲ್ಲಾ ಮೋಶೆಯು ಆರೋನನಿಗೆ ತಿಳಿಸಿದನು. ಯೆಹೋವನು ತನ್ನನ್ನು ಯಾಕೆ ಕಳುಹಿಸಿದನೆಂದೂ ತಾನು ಯಾವ ಅದ್ಭುತಕಾರ್ಯಗಳನ್ನು ಮಾಡಬೇಕೆಂದೂ ಆರೋನನಿಗೆ ವಿವರಿಸಿದನು.
|
30. ಆಗ ಆರೋನನು ಜನರೊಂದಿಗೆ ಮಾತಾಡಿದನು. ಯೆಹೋವನು ಮೋಶೆಗೆ ಹೇಳಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸಿದನು. ಬಳಿಕ ಮೋಶೆ ಜನರೆಲ್ಲರೂ ನೋಡುವಂತೆ ಸಾಕ್ಷ್ಯಾಧಾರಗಳನ್ನು ಮಾಡಿದನು.
|
31. ಯೆಹೋವನು ಮೋಶೆಯನ್ನು ಕಳುಹಿಸಿದ್ದಾನೆಂದು ಜನರು ನಂಬಿದರು. ಯೆಹೋವನು ಇಸ್ರೇಲರಿಗೆ ಸಹಾಯಮಾಡಬೇಕೆಂದಿರುವುದನ್ನು ಅವರು ತಿಳಿದು ತಲೆಬಾಗಿ ಆತನನ್ನು ಆರಾಧಿಸಿದರು. ಯೆಹೋವನು ತಮ್ಮ ಸಂಕಟಗಳನ್ನು ನೋಡಿದ್ದರಿಂದ ಅವರು ಆತನನ್ನು ಆರಾಧಿಸಿದರು. ಫರೋಹನ ಮುಂದೆ ಮೋಶೆ ಆರೋನರು
|