4. ಬಳಿಕ ಮೇಜನ್ನು ಒಳಗೆ ತರಿಸಿ ಮೇಜಿನ ಮೇಲಿರಬೇಕಾದ ವಸ್ತುಗಳನ್ನು ಅದರ ಮೇಲಿರಿಸು. ದೀಪಸ್ತಂಭವನ್ನು ಗುಡಾರದಲ್ಲಿ ಇರಿಸು. ದೀಪಸ್ತಂಭದಲ್ಲಿ ಸರಿಯಾದ ಜಾಗಗಳಲ್ಲಿ ಹಣತೆಗಳನ್ನು ಇರಿಸು.
|
5. ಗುಡಾರದೊಳಗೆ ಧೂಪವನ್ನು ಅರ್ಪಿಸಲು ಬಂಗಾರದ ವೇದಿಕೆಯನ್ನು ಇಡು. ವೇದಿಕೆಯನ್ನು ಒಡಂಬಡಿಕೆಯ ಪೆಟ್ಟಿಗೆಯ ಮುಂದಿರಿಸು. ಬಳಿಕ ಪವಿತ್ರಗುಡಾರದ ಪ್ರವೇಶದಲ್ಲಿ ಪರದೆಯನ್ನು ಇರಿಸು.
|
9. “ಅಭಿಷೇಕತೈಲವನ್ನು ಉಪಯೋಗಿಸಿ ಪವಿತ್ರಗುಡಾರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಅಭಿಷೇಕಿಸು. ನೀನು ತೈಲವನ್ನು ಈ ವಸ್ತುಗಳ ಮೇಲೆ ಹಾಕುವಾಗ, ಅವುಗಳನ್ನು ಪವಿತ್ರಗೊಳಿಸುವೆ.
|
10. ಯಜ್ಞವೇದಿಕೆಯನ್ನು ಅಭಿಷೇಕಿಸು. ವೇದಿಕೆಯ ಮೇಲಿರುವ ಪ್ರತಿಯೊಂದನ್ನು ಅಭಿಷೇಕಿಸಿ ಪ್ರತಿಷ್ಠಿಸು. ಆಗ ಅದು ಬಹು ಪವಿತ್ರವಾಗುವುದು.
|
13. ಬಳಿಕ ಆರೋನನಿಗೆ ವಿಶೇಷ ಬಟ್ಟೆಯನ್ನು ತೊಡಿಸು. ತೈಲದಿಂದ ಅವನನ್ನು ಅಭಿಷೇಕಿಸಿ ಪವಿತ್ರಗೊಳಿಸು. ಆಗ ಅವನು ಯಾಜಕನಾಗಿ ನನ್ನ ಸೇವೆ ಮಾಡಬಹುದು.
|
15. ಅವರ ತಂದೆಯನ್ನು ಅಭಿಷೇಕಿಸಿದಂತೆ ಪುತ್ರರನ್ನೂ ಅಭಿಷೇಕಿಸು. ಆಗ ಅವರು ಯಾಜಕರಾಗಿ ತಲೆತಲೆಮಾರುಗಳವರೆಗೆ ನನ್ನ ಸೇವೆ ಮಾಡಬಹುದು. ನೀನು ಅವರನ್ನು ಅಭಿಷೇಕಿಸಿದಾಗ, ಅವರು ಯಾಜಕರಾಗುವರು. ಇನ್ನು ಮುಂದೆ ಆ ಕುಟುಂಬವು ಯಾಜಕರಾಗಿ ಮುಂದುವರಿಯುವುದು” ಎಂದು ಹೇಳಿದನು.
|
17. ಆದ್ದರಿಂದ ಪವಿತ್ರಗುಡಾರವು, ಅವರು ಈಜಿಪ್ಟನ್ನು ಬಿಟ್ಟಕಾಲದಿಂದ ಎರಡನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸ್ಥಾಪಿಸಲ್ಪಟ್ಟಿತು.
|
18. ಯೆಹೋವನು ಹೇಳಿದಂತೆಯೇ ಮೋಶೆಯು ಪವಿತ್ರಗುಡಾರವನ್ನು ನಿಲ್ಲಿಸಿದನು. ಅವನು ಮೊದಲು ಗದ್ದಿಗೇಕಲ್ಲುಗಳನ್ನು ಕೆಳಗೆ ಇರಿಸಿದನು. ಬಳಿಕ ಅವನು ಗದ್ದಿಗೇಕಲ್ಲುಗಳ ಮೇಲೆ ಚೌಕಟ್ಟುಗಳನ್ನು ಇರಿಸಿದನು. ಬಳಿಕ ಅವನು ಅಗುಳಿಗಳನ್ನಿರಿಸಿ ಕಂಬಗಳನ್ನು ನಿಲ್ಲಿಸಿದನು.
|
19. ನಂತರ, ಮೋಶೆಯು ಪವಿತ್ರಗುಡಾರದ ಮೇಲೆ ಹೊರಗಣ ಡೇರೆಯನ್ನು ಹಾಕಿಸಿದನು. ಬಳಿಕ ಅವನು ಹೊರಗಿನ ಡೇರೆಗೆ ಮೇಲ್ಹೊದಿಕೆಯನ್ನು ಹಾಕಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಅವನು ಈ ಕಾರ್ಯಗಳನ್ನು ಮಾಡಿದನು.
|
20. ಮೋಶೆಯು ಒಡಂಬಡಿಕೆಯ ಆಜ್ಞಾಶಾಸನಗಳನ್ನು ತೆಗೆದುಕೊಂಡು ಪವಿತ್ರ ಪೆಟ್ಟಿಗೆಯಲ್ಲಿಟ್ಟನು. ಮೋಶೆಯು ಪೆಟ್ಟಿಗೆಯ ಎರಡು ಕಡೆಗಳಲ್ಲಿ ಕೋಲುಗಳನ್ನು ಇರಿಸಿದನು. ಬಳಿಕ ಅವನು ಪೆಟ್ಟಿಗೆಯ ಮೇಲೆ ಕೃಪಾಸನವನ್ನು ಇಟ್ಟನು.
|
21. ಬಳಿಕ ಮೋಶೆಯು ಪವಿತ್ರಪೆಟ್ಟಿಗೆಯನ್ನು ಪವಿತ್ರಗುಡಾರದೊಳಗೆ ತಂದನು. ಅದನ್ನು ಸಂರಕ್ಷಿಸುವುದಕ್ಕಾಗಿ ಸರಿಯಾದ ಸ್ಥಳದಲ್ಲಿ ಪರದೆಯನ್ನು ಹಾಕಿದನು. ಹೀಗೆ ಒಡಂಬಡಿಕೆ ಪೆಟ್ಟಿಗೆಯನ್ನು ಪರದೆಯ ಹಿಂಭಾಗದಲ್ಲಿರಿಸಿ ಸಂರಕ್ಷಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇದನ್ನು ಮಾಡಿದನು.
|
22. ತರುವಾಯ ಮೋಶೆಯು ದೇವದರ್ಶನಗುಡಾರದಲ್ಲಿ ಮೇಜನ್ನು ಇರಿಸಿದನು. ಪವಿತ್ರಗುಡಾರದ ಉತ್ತರಭಾಗದಲ್ಲಿ ಅದನ್ನು ಇರಿಸಿದನು. ಅವನು ಅದನ್ನು ಪವಿತ್ರಸ್ಥಳದಲ್ಲಿ ಪರದೆಯ ಮುಂಭಾಗದಲ್ಲಿ ಇರಿಸಿದನು.
|
23. ಬಳಿಕ ಅವನು ಯೆಹೋವನ ಸನ್ನಿಧಿಯಲ್ಲಿ ಮೇಜಿನ ಮೇಲೆ ನೈವೇದ್ಯದ ರೊಟ್ಟಿಯನ್ನಿರಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಅವನು ಇದನ್ನು ಮಾಡಿದನು.
|
24. ಬಳಿಕ ಮೋಶೆಯು ದೀಪಸ್ತಂಭವನ್ನು ಪವಿತ್ರಗುಡಾರದೊಳಗೆ ಇರಿಸಿದನು. ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನಿರಿಸಿದನು.
|
25. ತರುವಾಯ ಮೋಶೆಯು ಯೆಹೋವನ ಮುಂದಿರುವ ದೀಪಸ್ತಂಭದಲ್ಲಿ ಹಣತೆಗಳನ್ನು ಇರಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಅವನು ಇದನ್ನು ಮಾಡಿದನು.
|
26. ಬಳಿಕ ಮೋಶೆಯು ಚಿನ್ನದ ವೇದಿಕೆಯನ್ನು ದೇವದರ್ಶನಗುಡಾರದೊಳಗೆ ಇರಿಸಿದನು. ಅವನು ವೇದಿಕೆಯನ್ನು ಪರದೆಯ ಮುಂಭಾಗದಲ್ಲಿ ಇರಿಸಿದನು.
|
27. ಬಳಿಕ ಅವನು ವೇದಿಕೆಯ ಮೇಲೆ ಸುಗಂಧವಾಸನೆಯುಳ್ಳ ಧೂಪವನ್ನು ಉರಿಸಿದನು. ಯೆಹೋವನು ಅವನಿಗೆ ಆಜ್ಞಾಪಿಸಿದಂತೆಯೇ ಇದನ್ನು ಮಾಡಿದನು.
|
29. ಪವಿತ್ರಗುಡಾರದ ಪ್ರವೇಶದ್ವಾರದ ಬಳಿಯಲ್ಲಿ ಯಜ್ಞವೇದಿಕೆಯನ್ನು ಇರಿಸಿದನು. ಅವನು ಯೆಹೋವನಿಗಾಗಿ ಆ ವೇದಿಕೆಯ ಮೇಲೆ ಸರ್ವಾಂಗಹೋಮವನ್ನೂ ಧಾನ್ಯಸಮರ್ಪಣೆಯನ್ನೂ ಮಾಡಿದನು. ಯೆಹೋವನು ಆಜ್ಞಾಪಿಸಿದಂತೆ ಅವನು ಇದನ್ನು ಮಾಡಿದನು.
|
30. ತರುವಾಯ ಮೋಶೆಯು ಗಂಗಾಳವನ್ನು ದೇವದರ್ಶನಗುಡಾರ ಮತ್ತು ವೇದಿಕೆಯ ನಡುವೆ ಇಟ್ಟನು. ತೊಳೆದುಕೊಳ್ಳುವುದಕ್ಕಾಗಿ ನೀರನ್ನು ಗಂಗಾಳದಲ್ಲಿ ಹಾಕಿಸಿದನು.
|
31. ಮೋಶೆ, ಆರೋನ ಮತ್ತು ಆರೋನನ ಪುತ್ರರು ತಮ್ಮ ಕೈಕಾಲುಗಳನ್ನು ತೊಳೆದುಕೊಳ್ಳುವುದಕ್ಕಾಗಿ ಈ ಗಂಗಾಳವನ್ನು ಉಪಯೋಗಿಸಿದರು.
|
32. ಅವರು ದೇವದರ್ಶನಗುಡಾರವನ್ನು ಪ್ರವೇಶಿಸುವಾಗಲೆಲ್ಲಾ ಮತ್ತು ಯಜ್ಞವೇದಿಕೆಯ ಸಮೀಪ ಹೋಗುವಾಗಲೆಲ್ಲಾ ತಮ್ಮನ್ನು ತೊಳೆದುಕೊಳ್ಳುತ್ತಿದ್ದರು. ಯೆಹೋವನು ಮೋಶೆಗೆ ಅಜ್ಞಾಪಿಸಿದಂತೆಯೇ ಅವರು ಇದನ್ನು ಮಾಡಿದರು.
|
33. ತರುವಾಯ ಮೋಶೆಯು ಪವಿತ್ರಗುಡಾರದ ಅಂಗಳದ ಸುತ್ತಲೂ ಪರದೆಗಳನ್ನು ನಿಲ್ಲಿಸಿದನು. ಮೋಶೆಯು ವೇದಿಕೆಯನ್ನು ಅಂಗಳದಲ್ಲಿರಿಸಿದನು. ಬಳಿಕ ಅವನು ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಿಸಿದನು. ಹೀಗೆ ಮೋಶೆ ಯೆಹೋವನು ತನಗೆ ಕೊಟ್ಟ ಎಲ್ಲಾ ಕೆಲಸವನ್ನು ಮಾಡಿ ಮುಗಿಸಿದನು.
|
35. ಮೋಡವು ದೇವದರ್ಶನಗುಡಾರದ ಮೇಲೆ ನಿಂತಿತು. ಯೆಹೋವನ ಮಹಿಮೆಯು ಪವಿತ್ರಗುಡಾರವನ್ನು ತುಂಬಿಕೊಂಡಿದ್ದರಿಂದ ಮೋಶೆಯು ಒಳಗೆ ಪ್ರವೇಶಿಸಲಾಗಲಿಲ್ಲ.
|
36. ಜನರು ಯಾವಾಗ ಚಲಿಸಬೇಕೆಂದು ಮೋಡವು ತೋರಿಸುತ್ತಿತ್ತು. ಮೋಡವು ಪವಿತ್ರಗುಡಾರವನ್ನು ಬಿಟ್ಟು ಮೇಲೆದ್ದಾಗ, ಜನರು ಪ್ರಯಾಣ ಮಾಡತೊಡಗುತ್ತಿದ್ದರು.
|
37. ಆದರೆ ಮೋಡವು ಪವಿತ್ರಗುಡಾರದ ಮೇಲಿದ್ದಾಗ ಜನರು ಪ್ರಯಾಣ ಮಾಡುತ್ತಿರಲಿಲ್ಲ. ಮೋಡವು ಮೇಲೇಳುವವರೆಗೆ ಅವರು ಅಲ್ಲೇ ಇರುತ್ತಿದ್ದರು.
|
38. ಹೀಗೆ ಯೆಹೋವನ ಮೋಡವು ಹಗಲಿನಲ್ಲಿ ಪವಿತ್ರಗುಡಾರದ ಮೇಲೆ ನಿಂತಿತು. ರಾತ್ರಿಯಲ್ಲಿ ಮೋಡದಲ್ಲಿ ಅಗ್ನಿಯು ಪ್ರಕಾಶಿಸುತ್ತಿತ್ತು. ಆದ್ದರಿಂದ ಇಸ್ರೇಲ್ ಜನರೆಲ್ಲರೂ ತಾವು ಪ್ರಯಾಣ ಮಾಡುವಾಗ, ಮೋಡವನ್ನು ನೋಡಬಹುದಾಗಿತ್ತು.
|