1. {ಹದ್ದುಗಳು ಮತ್ತು ದಾಕ್ಷಾಲತೆಗಳು} [PS] ಯೆಹೋವನ ಮಾತುಗಳು ನನಗೆ ಬಂದವು. ಆತನು ಹೇಳಿದ್ದೇನೆಂದರೆ,
2. “ನರಪುತ್ರನೇ, ಈ ಕಥೆಯನ್ನು ಇಸ್ರೇಲ್ ಜನಾಂಗಕ್ಕೆ ಹೇಳು. ಇದರ ಅರ್ಥವೇನೆಂದು ಅವರನ್ನು ಕೇಳು.
3. ಅವರಿಗೆ ಹೀಗೆ ಹೇಳು, ದೇವರಾದ ಯೆಹೋವನು ಹೀಗೆನ್ನುತ್ತಾನೆ: “ ‘ಅಗಲವಾದ ರೆಕ್ಕೆಗಳುಳ್ಳ ದೊಡ್ಡ ಹದ್ದು (ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರ್) [QBR2] ಲೆಬನೋನಿಗೆ ಬಂದಿತು. ಅದರ ರೆಕ್ಕೆಗಳು ಅನೇಕ ಚುಕ್ಕೆಗಳನ್ನು ಹೊಂದಿತ್ತು. [QBR]
4. ಆ ಹದ್ದು ದೇವದಾರು ಮರದ (ಯೆಹೂದದ ರಾಜನಾದ ಯೆಹೋಯಾಖೀನ್) ಮೇಲ್ಭಾಗವನ್ನು ಮುರಿದುಬಿಟ್ಟಿತು. [QBR2] ಅದನ್ನು ವ್ಯಾಪಾರಿಗಳ ದೇಶಕ್ಕೆ ತಂದುಹಾಕಿತು. [QBR]
5. ನಂತರ ಆ ಹದ್ದು ದೇಶದ ಬೀಜಗಳಲ್ಲಿ ಒಂದನ್ನು (ಹಿಜ್ಕೀಯ) ತೆಗೆದುಕೊಂಡು [QBR2] ಅದನ್ನು ಒಳ್ಳೆಯ ಮಣ್ಣಿನಲ್ಲಿ ಬಿತ್ತಿತು; [QBR] ಸಮೃದ್ಧಿಕರವಾದ ನೀರಿನ ಸಮೀಪದಲ್ಲಿ ಬೆಳೆಯುವ [QBR2] ನೀರವಂಜಿಯಂತೆ ಅದನ್ನು ಬೆಳೆಯಿಸಿತು. [QBR]
6. ಆ ಬೀಜವು ಚಿಗುರಿ, ಚಿಕ್ಕ ಜಾತಿಯ ದ್ರಾಕ್ಷಾಲತೆಯಂತೆ ನೆಲದ ಮೇಲೆ ಹಬ್ಬಿಕೊಂಡು, [QBR2] ತನ್ನ ಕೊಂಬೆಗಳನ್ನು ಗರುಡದ ಕಡೆಗೆ ಚಾಚಿಕೊಂಡು ತನ್ನ ಬೇರುಗಳನ್ನು ಬಿಟ್ಟಿತು: [QBR] ಅಂತೆಯೇ ಅದು ಲತೆಯಾಗಿ ಕೊಂಬೆಗಳನ್ನು ಬೆಳೆಸಿ, [QBR2] ಎಲೆಗಳನ್ನು ಹೊರಡಿಸಿತು. [QBR]
7. ಆಗ ಅಗಲ ರೆಕ್ಕೆಗಳಿದ್ದ ಇನ್ನೊಂದು ಹದ್ದು ದ್ರಾಕ್ಷಾಲತೆಯನ್ನು ನೋಡಿತು. [QBR2] ಈ ಹದ್ದಿಗೆ ತುಂಬಾ ಪುಕ್ಕಗಳಿದ್ದವು. [QBR] ದ್ರಾಕ್ಷಾಲತೆಯು ತನ್ನ ಬೇರುಗಳನ್ನು [QBR2] ಹದ್ದಿನ ಕಡೆಗೆ ತಿರುಗಿಸಿತ್ತು. [QBR] ಹದ್ದಿಗೆ ನೀರು ಹಾಯಿಸಲು ಸಾಧ್ಯವಾಗುವಂತೆ [QBR2] ಅದು ತನ್ನ ರೆಂಬೆಗಳನ್ನು ಹದ್ದಿನ ಕಡೆಗೆ ಚಾಚಿಕೊಂಡಿತ್ತು. [QBR] ಅದು ತಾನು ನೆಡಲ್ಪಟ್ಟಿದ್ದ ಸ್ಥಳದಿಂದ ಬೇರೆ ಕಡೆಗೆ ತಿರುಗಿಕೊಂಡಿತು. [QBR]
8. ಆ ದ್ರಾಕ್ಷಾಲತೆಯು ಸಮೃದ್ಧಿಕರವಾಗಿ ನೀರಿದ್ದ ಒಳ್ಳೆಯ ಭೂಮಿಯಲ್ಲಿ ನೆಡಲ್ಪಟ್ಟಿತ್ತು. [QBR2] ಕೊಂಬೆಗಳನ್ನು ಬೆಳೆಸಿ, ಹಣ್ಣುಗಳನ್ನು ಫಲಿಸಿ [QBR2] ಅಮೋಬವಾದ ದ್ರಾಕ್ಷಾಲತೆಯಾಗಬೇಕೆಂಬುದು ಅದರ ಬಯಕೆಯಾಗಿತ್ತು.’ ”
9. ನೀನು ಹೀಗೆ ಹೇಳು: ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: [QBR] “ಆ ದ್ರಾಕ್ಷಾಲತೆಯು ಬಂದುಕಿ ಬೆಳೆಯುವುದೋ? [QBR] ಇಲ್ಲ. ಮೊದಲನೆ ಹದ್ದು ದ್ರಾಕ್ಷಾಲತೆಗಳ ಬೇರುಗಳನ್ನು ಎಳೆದುಹಾಕಿ, [QBR2] ಅದರ ದ್ರಾಕ್ಷಿಹಣ್ಣುಗಳನ್ನು ಕಿತ್ತುಹಾಕುವುದು. [QBR] ಆಗ ಚಿಗುರುಗಳು ಬಾಡಿ ಒಣಗಿಹೋಗುವವು. [QBR2] ಆ ಸಸಿಯು ಬಲಹೀನವಾಗುವುದು. [QBR] ಆಗ ಅದನ್ನು ಬೇರುಸಹಿತ ಕಿತ್ತುಹಾಕಲು ಮಹಾ ಬಲವಾಗಲಿ [QBR2] ಅಥವಾ ದೊಡ್ಡಸೈನ್ಯವಾಗಲಿ ಅಗತ್ಯವಿರುವದಿಲ್ಲ. [QBR]
10. ಆ ಸಸಿಯು ನೆಟ್ಟಿದ ಸ್ಥಳದಲ್ಲಿ ಬೆಳೆಯುವುದೋ? [QBR2] ಇಲ್ಲ! ಪೂರ್ವದ ಬಿಸಿಗಾಳಿಯು ಬೀಸುವದು, [QBR2] ಆಗ ಸಸಿಯು ತಾನು ನೆಡಲ್ಪಟ್ಟಿದ್ದ ಸ್ಥಳದಲ್ಲೇ ಬಾಡಿಹೋಗಿ ಸಾಯುವುದು.” [PS]
11. {ರಾಜ ಚಿದ್ಕೀಯನನ್ನು ದಂಡಿಸಿದ್ದು} [PS] ಯೆಹೋವನ ನುಡಿಯು ನನಗೆ ಬಂತು. ಆತನು ಹೇಳಿದ್ದೇನೆಂದರೆ,
12. “ದಂಗೆಕೋರರಿಗೆ ಇದನ್ನು ಹೇಳು: ಈ ಸಂಗತಿಗಳ ಅರ್ಥವು ನಿಮಗೆ ಗೊತ್ತಿಲ್ಲವೇ? ಅವರಿಗೆ ಹೇಳು: ಮೊದಲಿನ ಗರುಡ ಪಕ್ಷಿ ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನು. ಅವನು ಜೆರುಸಲೇಮಿಗೆ ಬಂದು ಅದರ ರಾಜನನ್ನೂ ಅದರ ಹಿರಿಯರನ್ನೂ ಬಂಧಿಸಿ, ಅವರನ್ನು ತನ್ನ ರಾಜ್ಯವಾದ ಬಾಬಿಲೋನಿಗೆ ಕೊಂಡೊಯ್ದನು.
13. ಯೆಹೂದದ ರಾಜನನ್ನಾಗಿ ಮಾಡುವುದಾಗಿ ನೆಬೂಕದ್ನೆಚ್ಚರನು ರಾಜನ ಕುಟುಂಬದವರಲ್ಲೊಬ್ಬನೊಡನೆ ಒಪ್ಪಂದಮಾಡಿಕೊಂಡು ತನಗೆ (ನೆಬೂಕದ್ನೆಚ್ಚರನಿಗೆ) ಆಧಿನವಾಗಿರುವದಾಗಿ ಅವನಿಂದ (ರಾಜನ ಕುಟುಂಬದವನಿಂದ) ಪ್ರಮಾಣ ಮಾಡಿಸಿಕೊಂಡನು. ಅವನು ಯೆಹೂದದ ಬಲಿಷ್ಠರೆಲ್ಲರನ್ನು ಸಹ ಈ ಒಪ್ಪಂದದಲ್ಲಿ ಸೇರಿಸಿದನು.
14. ಯೆಹೂದ ರಾಜ್ಯವು ದೀನತೆಯಿಂದಿದ್ದು ದಂಗೆ ಏಳದೆ ತನ್ನ ಒಪ್ಪಂದಕ್ಕೆ ಶಾಶ್ವತವಾಗಿ ಬದ್ಧವಾಗಿರಬೇಕೆಂಬುದು ನೆಬೂಕದ್ನೆಚ್ಚರನ ಬಯಕೆಯಾಗಿತ್ತು.
15. ಆದರೆ ಈ ಹೊಸ ರಾಜನು ನೆಬೂಕದ್ನೆಚ್ಚರನಿಗೆ ತಿರುಗಿ ಬೀಳಲು ಪ್ರಯತ್ನಿಸಿದನು. ಅವನು ಈಜಿಪ್ಟಿಗೆ ದೂತರನ್ನು ಕಳುಹಿಸಿ ಸಹಾಯವನ್ನು ಕೇಳಿದನು. ಬಹಳ ಕುದುರೆಗಳನ್ನೂ ಸೈನಿಕರನ್ನೂ ಕೇಳಿದನು. ಯೆಹೂದದ ಹೊಸ ರಾಜನು ತನ್ನ ಪ್ರಯತ್ನದಲ್ಲಿ ಜಯಶಾಲಿಯಾಗುವನು ಎಂದು ಭಾವಿಸುವಿರೋ? ಈ ಹೊಸ ರಾಜನು ಒಪ್ಪಂದವನ್ನು ಮುರಿದು ಶಿಕ್ಷೆಯಿಂದ ಪಾರಾಗುವನೆಂದು ನೀವು ಭಾವಿಸುವಿರೋ?” [PE][PS]
16. ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ನನ್ನ ಜೀವದಾಣೆ, ಈ ಹೊಸ ರಾಜನು ಬಾಬಿಲೋನಿನಲ್ಲಿ ಸಾಯುವನು. ಈ ಮನುಷ್ಯನನ್ನು ಯೆಹೂದದ ರಾಜನನ್ನಾಗಿ ಮಾಡಿದ ರಾಜ ನೆಬೂಕದ್ನೆಚ್ಚರನ ನಾಡಿನಲ್ಲಿ ಇವನು ಸಾಯುವನು. ಈ ಮನುಷ್ಯನು ಆ ರಾಜನೊಡನೆ ಮಾಡಿದ ಪ್ರಮಾಣವನ್ನು ತಿರಸ್ಕರಿಸಿ ಆ ರಾಜನೊಡನೆ ಮಾಡಿಕೊಂಡಿದ್ದ ಒಪ್ಪಂದವನ್ನು ಮುರಿದು ಹಾಕಿದನು.
17. ಈಜಿಪ್ಟಿನ ರಾಜನು ಯೆಹೂದದ ರಾಜನನ್ನು ರಕ್ಷಿಸಲು ಸಾಧ್ಯವಿಲ್ಲ. ಅವನು ಬಹಳ ಸೈನಿಕರನ್ನು ಕಳುಹಿಸಬಹುದು, ಆದರೆ ಈಜಿಪ್ಟಿನ ಶಕ್ತಿಯು ಯೆಹೂದವನ್ನು ರಕ್ಷಿಸಲಾರದು. ನೆಬೂಕದ್ನೆಚ್ಚರನ ಸೈನ್ಯವು ಕೆಸರಿನ ಇಳಿಜಾರುಗಳನ್ನೂ ತಡೆಗಟ್ಟುಗಳನ್ನೂ ಕಟ್ಟಿ ಪಟ್ಟಣವನ್ನು ವಶಪಡಿಸಿಕೊಳ್ಳುವುದು. ಎಷ್ಟೋ ಮಂದಿ ಸಾಯುವರು.
18. ಆದರೆ ಯೆಹೂದದ ರಾಜನಿಗೆ ತಪ್ಪಿಸಿಕೊಳ್ಳಲು ಸಾಧ್ಯವಾಗುವದಿಲ್ಲ. ಯಾಕೆಂದರೆ ಅವನು ತನ್ನ ಪ್ರಮಾಣವನ್ನು ತಿರಸ್ಕರಿಸಿದನು ಮತ್ತು ತಾನು ಮಾಡಿಕೊಂಡ ಒಡಂಬಡಿಕೆಯನ್ನು ಮುರಿದುಹಾಕಿದನು.”
19. ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನನ್ನ ಜೀವದಾಣೆ, ನಾನು ಯೆಹೂದದ ರಾಜನನ್ನು ಶಿಕ್ಷಿಸುವೆನು. ಯಾಕೆಂದರೆ ಅವನು ನನ್ನ ಮುಂದೆ ಮಾಡಿದ ಪ್ರಮಾಣಕ್ಕೆ ಗಮನಕೊಡಲಿಲ್ಲ ಮತ್ತು ನಾನು ಸಾಕ್ಷಿಯಾಗಿದ್ದ ಒಪ್ಪಂದವನ್ನು ಅವನು ಮುರಿದುಹಾಕಿದನು.
20. ನಾನು ಅವನಿಗೆ ಉರುಲನ್ನೊಡ್ಡುವೆನು; ಅವನು ಅದರೊಳಗೆ ಸಿಕ್ಕಿಕೊಳ್ಳುವನು. ನಾನು ಅವನನ್ನು ಬಾಬಿಲೋನಿಗೆ ತಂದು ಅಲ್ಲಿ ಶಿಕ್ಷಿಸುವೆನು. ಯಾಕೆಂದರೆ ಅವನು ನನಗೆ ಅಪನಂಬಿಗಸ್ತನಾದನು.
21. ಅವನ ಸೈನ್ಯವನ್ನು ನಾಶಮಾಡುವೆನು. ಅವನಲ್ಲಿದ್ದ ಶೂರರನ್ನು ನಾಶಮಾಡುವೆನು. ಅಳಿದುಳಿದವರನ್ನು ಗಾಳಿ ಬೀಸುವ ಪ್ರತಿಯೊಂದು ದಿಕ್ಕಿನಲ್ಲಿಯೂ ಚದರಿಸಿಬಿಡುವೆನು. ಆಗ ಯೆಹೋವನಾದ ನಾನು ನಿಮಗೆ ಇದನ್ನು ಹೇಳಿದೆನೆಂದು ತಿಳಿಯುವುದು.” [PE][PS]
22. ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು: “ನಾನು ಎತ್ತರವಾದ ದೇವದಾರು ಮರದಿಂದ ಒಂದು ಕೊಂಬೆಯನ್ನು ಕೀಳುವೆನು. [QBR2] ಆ ಮರದ ಮೇಲಿರುವ ಒಂದು ಸಣ್ಣ ಕೊಂಬೆಯನ್ನು ಕೀಳುವೆನು. [QBR2] ಅದನ್ನು ನಾನು ಎತ್ತರವಾದ ಪರ್ವತದಲ್ಲಿ ನೆಡುವೆನು. [QBR]
23. ಸಬತಃ ನಾನೇ ಅದನ್ನು ಇಸ್ರೇಲಿನ ಉನ್ನತವಾದ ಪರ್ವತದ ಮೇಲೆ ನೆಡುವೆನು. [QBR2] ಅದು ಕೊಂಬೆಗಳನ್ನು ಬೆಳೆಸಿ, ಫಲವನ್ನು ಫಲಿಸಿ, [QBR] ಅಮೋಬವಾದ ದೇವದಾರು ಮರವಾಗುವುದು; [QBR2] ಅದರ ಕೊಂಬೆಗಳ ಮೇಲೆ ಅನೇಕ ಬಗೆಯ ಪಕ್ಷಿಗಳು ವಾಸಿಸುವವು. [QBR] ಅದರ ಕೊಂಬೆಯ ನೆರಳಿನಲ್ಲಿ [QBR2] ವಿವಿಧ ಬಗೆಯ ಪಕ್ಷಿಗಳು ವಾಸಿಸುವವು.
24. “ಆಗ ಬೇರೆ ಮರಗಳಿಗೆ, ನಾನು ದೊಡ್ಡ ಮರಗಳನ್ನು ನೆಲಕ್ಕೆ ಬೀಳಿಸುವೆನೆಂತಲೂ, [QBR2] ಚಿಕ್ಕ ಮರಗಳನ್ನು ಉದ್ದವಾಗಿ ಬೆಳೆಯುವಂತೆ ಮಾಡುತ್ತೇನೆಂತಲೂ ಗೊತ್ತಾಗುವದು. [QBR] ಹಸಿರು ಮರಗಳು ಒಣಗಿಹೋಗುವಂತೆಯೂ [QBR2] ಒಣಗಿಹೋದ ಮರಗಳು ಹಸಿರಾಗಿ ಬೆಳೆಯುವಂತೆಯೂ ನಾನು ಮಾಡುತ್ತೇನೆ. [QBR] ನಾನೇ ಯೆಹೋವನು. [QBR2] ಇದನ್ನು ನಾನೇ ಹೇಳಿದ್ದೇನೆ; ಮತ್ತು ನಾನೇ ಇದನ್ನು ನೆರವೇರಿಸುವೆನು.” [PE]