1. {ಅಶ್ಶೂರವು ದೇವದಾರು ಮರದಂತಿರುವದು} [PS] ಸೆರೆಹಿಡಿದ ಹನ್ನೊಂದನೇ ವರ್ಷದ ಮೂರನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆಹೋವನ ಸಂದೇಶ ನನಗೆ ಬಂದಿತು. ಆತನು ಹೇಳಿದ್ದೇನೆಂದರೆ,
2. “ನರಪುತ್ರನೇ, ಇದನ್ನು ಈಜಿಪ್ಟಿನ ರಾಜನಾದ ಫರೋಹನಿಗೂ ಅವನ ಜನರಿಗೂ ಹೇಳು: “ ‘ನೀನು ಅತ್ಯಂತ ಪ್ರಭಾವಶಾಲಿ, [QBR2] ನಿನ್ನನ್ನು ಯಾರಿಗೆ ಹೋಲಿಸಲಿ? [QBR]
3. ಅಶ್ಶೂರವು ಲೆಬನೋನಿನಲ್ಲಿರುವ ದೇವದಾರು ಮರದಂತೆ ಎತ್ತರವಾಗಿ, [QBR2] ಸುಂದರವಾದ ಕೊಂಬೆಗಳಿಂದಲೂ [QBR2] ಕಾಡಿನ ನೆರಳಿನಲ್ಲಿಯೂ ಶೋಭಿಸುತ್ತದೆ. [QBR] ಅದರ ಮೇಲಿನ ತುದಿಯು ಮುಗಿಲನ್ನು ಮುಟ್ಟುವದು. [QBR]
4. ನೀರು ಆ ಮರವನ್ನು ಬೆಳೆಯುವಂತೆ ಮಾಡಿತು. [QBR2] ನದಿಯು ಅದನ್ನು ಎತ್ತರವಾಗುವಂತೆ ಮಾಡಿತು. [QBR] ಆ ಮರವು ನೆಡಲ್ಪಟ್ಟ ಸ್ಥಳದ ಸುತ್ತಲೂ ಹೊಳೆಯು ಹರಿಯುತ್ತಿದೆ. [QBR2] ಆ ಮರದಿಂದ ಬೇರೆ ಮರಗಳಿಗೆ ಸಣ್ಣ ಕಾಲುವೆಗಳು ಹೊರಡುತ್ತವೆ. [QBR]
5. ಯಾಕೆಂದರೆ ಈ ಮರವು ಬೇರೆ ಮರಗಳಿಗಿಂತ ಉನ್ನತವಾಗಿ ಕಾಣಿಸಿಕೊಳ್ಳಲು, [QBR2] ಅದು ಅನೇಕ ಕೊಂಬೆಗಳನ್ನು ಬಿಟ್ಟಿತು. [QBR] ಅಲ್ಲಿ ಬೇಕಾದಷ್ಟು ನೀರು ಇದ್ದುದರಿಂದ [QBR2] ಕೊಂಬೆಗಳು ಉದ್ದವಾಗಿಯೂ ವಿಶಾಲವಾಗಿಯೂ ಬೆಳೆದವು. [QBR]
6. ಅದರ ಕೊಂಬೆಗಳಲ್ಲಿ ಆಕಾಶದ ಪಕ್ಷಿಗಳು ಗೂಡುಗಳನ್ನು ಕಟ್ಟಿದವು. [QBR2] ಆ ಮರದ ಅಡಿಯಲ್ಲಿ ಪ್ರಾಣಿಗಳು ಮರಿಗಳನ್ನು ಈದವು. [QBR] ಆ ಮರದ ನೆರಳಿನಲ್ಲಿ [QBR2] ಎಲ್ಲಾ ದೊಡ್ಡ ಜನಾಂಗಗಳು ವಾಸಿಸಿದವು. [QBR]
7. ಆ ಮರವು ಮನೋಹರವಾಗಿತ್ತು. [QBR2] ಅದು ದೊಡ್ಡದಾಗಿತ್ತು. [QBR2] ಅದರ ಕೊಂಬೆಗಳು ವಿಶಾಲವಾಗಿದ್ದವು. [QBR2] ಅದರ ಬೇರುಗಳಿಗೆ ಧಾರಾಳವಾದ ನೀರಿತ್ತು. [QBR]
8. ದೇವರ ತೋಟದಲ್ಲಿರುವ ದೇವದಾರು ಮರಗಳೂ [QBR2] ಈ ಮರದಷ್ಟು ಎತ್ತರವಾಗಿರಲಿಲ್ಲ. [QBR] ಈ ಮಹಾ ಮರಕ್ಕಿರುವಷ್ಟು ಕೊಂಬೆಗಳು ಸೈಪ್ರಸ್ ಮರಗಳಿಗೂ ಇಲ್ಲ. [QBR2] ದೇವರ ತೋಟದಲ್ಲಿದ್ದ ಯಾವ ಮರವಾದರೂ ಇದರಷ್ಟು ಅಂದವಾಗಿರಲಿಲ್ಲ. [QBR]
9. ನಾನು ಅದಕ್ಕೆ ಅನೇಕ ಕೊಂಬೆಗಳನ್ನು ಕೊಟ್ಟು [QBR2] ಅಂದವಾಗಿ ಕಾಣುವಂತೆ ಮಾಡಿದೆನು. [QBR] ದೇವರ ತೋಟವಾಗಿರುವ ಏದೆನಿನಲ್ಲಿರುವ [QBR2] ಮರಗಳೆಲ್ಲಾ ಅಸೂಯೆಪಡುತ್ತಿದ್ದವು.’ ” [PS]
10. ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ಆ ಮರವು ಎತ್ತರವಾಗಿ ಬೆಳೆಯಿತು. ಅದರ ತುದಿ ಮುಗಿಲನ್ನು ಮುಟ್ಟಿತು. ಇದು ಅದಕ್ಕೆ ಹೆಮ್ಮೆಯನ್ನು ತಂದಿತು.
11. ಆಗ ನಾನು ಒಬ್ಬ ಬಲಾಢ್ಯನಾದ ರಾಜನು ಬಂದು ಆ ಮರವನ್ನು ತೆಗೆದುಕೊಳ್ಳುವಂತೆ ಮಾಡಿದೆನು. ಆ ರಾಜನು ಮರವು ಮಾಡಿದ ದುಷ್ಕೃತ್ಯಗಳಿಗಾಗಿ ಅದನ್ನು ಶಿಕ್ಷಿಸಿದನು. ಆ ಮರವನ್ನು ನಾನು ನನ್ನ ತೋಟದಿಂದ ತೆಗೆದು ಹಾಕಿದೆನು.
12. ಪರದೇಶದ ಕ್ರೂರ ಜನರು ಅದನ್ನು ಕಡಿದು ಅದರ ರೆಂಬೆಗಳನ್ನೆಲ್ಲಾ ಬೆಟ್ಟ, ಬಯಲು, ತಗ್ಗುಗಳಲ್ಲಿ ಚದರಿಸಿಬಿಟ್ಟರು. ಅದರ ಮುರಿಯಲ್ಪಟ್ಟ ಕೊಂಬೆಗಳು ಆ ದೇಶದಲ್ಲಿ ಹರಿಯುವ ನದಿಯಲ್ಲಿ ತೇಲಿದವು. ಆ ಮರದಡಿಯಲ್ಲಿ ಈಗ ನೆರಳು ಇಲ್ಲ. ಆದ್ದರಿಂದ ಅಲ್ಲಿ ವಾಸವಾಗಿದ್ದ ಜನರೆಲ್ಲಾ ಅಲ್ಲಿಂದ ಹೊರಟುಹೋದರು.
13. ಕೆಳಗೆ ಬಿದ್ದ ಮರದ ಮೇಲೆ ಪಕ್ಷಿಗಳು ವಾಸಿಸಿದವು. ಕೆಳಗೆ ಬಿದ್ದ ಅದರ ಕೊಂಬೆಗಳ ಮೇಲೆ ಕಾಡುಪ್ರಾಣಿಗಳು ನಡೆದವು. [PE][PS]
14. “ಈಗ ಆ ನೀರಿನ ಬಳಿಯಲ್ಲಿರುವ ಯಾವ ಮರಗಳೂ ಹೆಮ್ಮೆಪಡುವದಿಲ್ಲ. ಅವು ಮುಗಿಲನ್ನು ಮುಟ್ಟಲು ಪ್ರಯತ್ನಿಸುವದಿಲ್ಲ. ಚೆನ್ನಾಗಿ ಬೆಳೆದ ಮರಗಳು ಆ ನೀರನ್ನು ಕುಡಿದು ತಾನು ಉದ್ದವಾಗಿ ಬೆಳೆದಿದ್ದೇನೆ ಎಂದು ಕೊಚ್ಚಿಕೊಳ್ಳುವದಿಲ್ಲ. ಯಾಕೆಂದರೆ ಎಲ್ಲವೂ ಸಾಯುವುದಕ್ಕಾಗಿ ನೇಮಕಗೊಂಡಿವೆ. ಅವುಗಳೆಲ್ಲಾ ಮರಣದ ಸ್ಥಳವನ್ನು ಸೇರುವವು. ಅಲ್ಲಿ ಸತ್ತು, ಮರಣದ ಆ ಸ್ಥಳಕ್ಕೆ ಹೋಗಿ ಪಾತಾಳಕ್ಕೆ ಸೇರಿದವರನ್ನು ಸೇರುವವು.” [PE][PS]
15. ನನ್ನ ಒಡೆಯನಾದ ಯೆಹೋವನು ಇದನ್ನು ನುಡಿದಿದ್ದಾನೆ: “ಆ ಮರವು ಪಾತಾಳಕ್ಕೆ ಹೋದ ದಿವಸದಲ್ಲಿ ನಾನು ಜನರನ್ನು ಅಳುವಂತೆ ಮಾಡಿದೆನು. ಅದನ್ನು ನಾನು ಆಳವಾದ ಸಾಗರದಿಂದ ಮುಚ್ಚಿಬಿಟ್ಟೆನು. ನಾನು ಅದರ ನದಿಗಳನ್ನೂ ಬೇರೆ ನೀರಿನ ತೊರೆಗಳನ್ನೂ ನಿಲ್ಲಿಸಿಬಿಟ್ಟೆನು. ಲೆಬನೋನ್ ಅದಕ್ಕಾಗಿ ಶೋಕಿಸುವಂತೆ ಮಾಡಿದೆನು. ಆ ದೊಡ್ಡ ಮರವು ಹೋದುದಕ್ಕಾಗಿ ಆ ಪ್ರಾಂತ್ಯದ ಬೇರೆ ಎಲ್ಲಾ ಮರಗಳು ದುಃಖದಿಂದ ಕಾಯಿಲೆಯಲ್ಲಿ ಬಿದ್ದವು.
16. ನಾನು ಆ ಮರವನ್ನು ಬೀಳಿಸಿದೆನು. ಬೀಳುವ ಅದರ ಶಬ್ದವನ್ನು ಕೇಳಿ ರಾಜ್ಯಗಳೆಲ್ಲಾ ಭಯದಿಂದ ನಡುಗಿದವು. ನಾನು ಆ ಮರವನ್ನು ಪಾತಾಳಕ್ಕೆ ಕಳುಹಿಸಿದೆನು. ಅದು ಹೋಗಿ ಅದಕ್ಕಿಂತ ಮೊದಲೇ ಆ ಆಳವಾದ ಗುಂಡಿಗೆ ಹೋಗಿರುವವರೊಂದಿಗೆ ಸೇರಿಕೊಂಡಿತು. ಗತಿಸಿದ ದಿವಸಗಳಲ್ಲಿ ಏದೆನಿನಲ್ಲಿದ್ದ ಎಲ್ಲಾ ಮರಗಳು, ಲೆಬನೋನಿನ ಉತ್ಕೃಷ್ಟ ಮರಗಳು ಆ ನೀರನ್ನು ಕುಡಿದಿದ್ದವು. ಅವೆಲ್ಲವೂ ಪಾತಾಳದಲ್ಲಿ ಸಂತೈಸಿಕೊಂಡವು.
17. ಹೌದು, ಆ ಮರವೂ ಅದರ ನೆರಳಿನ ಆಶ್ರಯವನ್ನು ಪಡೆದುಕೊಂಡಿದ್ದ ಅದರ ಎಲ್ಲಾ ಸಂತತಿಗಳವರೂ ಯುದ್ಧದಲ್ಲಿ ಸತ್ತುಹೋಗಿದ್ದ ಸೈನಿಕರೊಂದಿಗೆ ಇರುವದಕ್ಕಾಗಿ ಪಾತಾಳಕ್ಕೆ ಇಳಿದು ಹೋಗಿದ್ದವು. [PE][PS]
18. “ಈಜಿಪ್ಟೇ, ಏದೆನಿನಲ್ಲಿ ಎಷ್ಟೋ ದೊಡ್ಡ, ಬಲಶಾಲಿಯಾಗಿರುವ ಮರಗಳಿವೆ. ಅದರ ಯಾವ ಮರಕ್ಕೆ ನಿನ್ನನ್ನು ಹೋಲಿಸಲಿ? ಅವೆಲ್ಲವೂ ಭೂಮಿಯ ಕೆಳಗೆ ಪಾತಾಳವನ್ನು ಸೇರಿದವು. ನೀನು ಕೂಡಾ ಆ ಪರದೇಶಸ್ಥರೊಂದಿಗೆ ಆ ಸ್ಥಳಕ್ಕೆ ಸೇರುವಿ. ರಣರಂಗದಲ್ಲಿ ಸತ್ತವರೊಂದಿಗೆ ನೀನು ಬಿದ್ದುಕೊಳ್ಳುವಿ. [PE][PS] “ಹೌದು, ಈ ರೀತಿಯಾಗಿ ಫರೋಹನಿಗೂ ಅವನೊಂದಿಗಿರುವ ಜನರ ಗುಂಪಿಗೂ ಆಗುವದು.” ಇದು ಒಡೆಯನಾದ ಯೆಹೋವನ ನುಡಿ. [PE]