1. ಅಪೊಸ್ತಲನಾದ ಪೌಲನು ಬರೆಯುವ ಪತ್ರ. ನನ್ನನ್ನು ಅಪೊಸ್ತಲನನ್ನಾಗಿ ಆರಿಸಿದವರು ಮನುಷ್ಯರಲ್ಲ. ನಾನು ಮನುಷ್ಯರಿಂದ ಕಳುಹಿಸಲ್ಪಟ್ಟವನಲ್ಲ. ನನ್ನನ್ನು ಅಪೊಸ್ತಲನನ್ನಾಗಿ ಮಾಡಿದವರು ಯಾರೆಂದರೆ, ಯೇಸು ಕ್ರಿಸ್ತನು ಮತ್ತು ತಂದೆಯಾದ ದೇವರು. ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ದೇವರೇ.
|
3. ನಮ್ಮ ತಂದೆಯಾದ ದೇವರೂ ಪ್ರಭುವಾದ ಯೇಸು ಕ್ರಿಸ್ತನೂ ನಿಮಗೆ ಕೃಪೆ ತೋರಲಿ ಮತ್ತು ಶಾಂತಿಕೊಡಲಿ ಎಂದು ನಾವು ಪ್ರಾರ್ಥಿಸುತ್ತೇವೆ.
|
4. ನಾವು ವಾಸಿಸುತ್ತಿರುವ ಈ ಕೆಟ್ಟ ಲೋಕದೊಳಗಿಂದ ನಮ್ಮನ್ನು ಬಿಡುಗಡೆ ಮಾಡಬೇಕೆಂದು ಯೇಸು ನಮ್ಮ ಪಾಪಗಳಿಗಾಗಿ ತನ್ನನ್ನೇ ಕೊಟ್ಟುಬಿಟ್ಟನು. ಇದು ತಂದೆಯಾದ ದೇವರ ಚಿತ್ತವಾಗಿತ್ತು.
|
6. ಸ್ವಲ್ಪಕಾಲದ ಹಿಂದೆ ತನ್ನನ್ನು ಹಿಂಬಾಲಿಸುವುದಕ್ಕಾಗಿ ನಿಮ್ಮನ್ನು ಕರೆದಾತನು ದೇವರೇ. ಆತನು ನಿಮ್ಮನ್ನು ಯೇಸು ಕ್ರಿಸ್ತನ ಮೂಲಕವಾಗಿ ಬಂದ ತನ್ನ ಕೃಪೆಯ ಮೂಲಕ ಕರೆದನು. ಆದರೆ ಈಗ ನಾನು ನಿಮ್ಮೆಲ್ಲರ ವಿಷಯದಲ್ಲಿ ಆಶ್ಚರ್ಯಗೊಂಡಿದ್ದೇನೆ. ನೀವು ಈಗಾಗಲೇ ವಿಮುಖರಾಗಿ ಬೇರೊಂದು ಸುವಾರ್ತೆಯನ್ನು ನಂಬಿಕೊಂಡಿದ್ದೀರಿ.
|
7. ನಿಜವಾಗಿ ಹೇಳಬೇಕಾದರೆ, ಬೇರೊಂದು ಸತ್ಯಸುವಾರ್ತೆಯು ಇಲ್ಲವೇ ಇಲ್ಲ. ಆದರೆ ಕೆಲವು ಜನರು ನಿಮ್ಮನ್ನು ಗಲಿಬಿಲಿಗೊಳಿಸುತ್ತಿದ್ದಾರೆ. ಅವರು ಕ್ರಿಸ್ತನ ಸುವಾರ್ತೆಯನ್ನು ಬದಲಾಯಿಸಬೇಕೆಂದಿದ್ದಾರೆ.
|
8. ನಾವು ನಿಮಗೆ ಸತ್ಯಸುವಾರ್ತೆಯನ್ನು ತಿಳಿಸಿದೆವು. ಆದ್ದರಿಂದ ನಾವೇ ಆಗಲಿ, ಪರಲೋಕದ ದೇವದೂತರೇ ಆಗಲಿ ಮತ್ತೊಂದು ಸುವಾರ್ತೆಯನ್ನು ತಿಳಿಸಿದರೆ ಶಾಪಗ್ರಸ್ತರಾಗಲಿ.
|
9. ನಾನು ನಿಮಗೆ ಇದನ್ನು ಮೊದಲೇ ತಿಳಿಸಿದ್ದರೂ ಈಗ ಮತ್ತೆ ಹೇಳುತ್ತೇನೆ. ನೀವು ಈಗಾಗಲೇ ಸ್ವೀಕರಿಸಿಕೊಂಡಿರುವ ಸತ್ಯಸುವಾರ್ತೆಗೆ ವಿರುದ್ಧವಾದದ್ದನ್ನು ಯಾವನಾದರೂ ಸಾರಿದರೆ ಅವನು ಶಾಪಗ್ರಸ್ತನಾಗಲಿ.
|
10. ಮನುಷ್ಯರು ನನ್ನನ್ನು ಸ್ವೀಕರಿಸಿಕೊಳ್ಳುವಂತೆ ಮಾಡುವುದಕ್ಕಾಗಿ ನಾನು ಪ್ರಯತ್ನಿಸುತ್ತಿದ್ದೇನೆಂದು ನೀವು ಭಾವಿಸುತ್ತೀರೋ? ಇಲ್ಲ! ನಾನು ದೇವರನ್ನೇ ಮೆಚ್ಚಿಸಲು ಪ್ರಯತ್ನಿಸುತ್ತಿದ್ದೇನೆ. ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿ ನಾನು ಪ್ರಯತ್ನಿಸುತ್ತಿದ್ದೇನೋ? ನಾನು ಮನುಷ್ಯರನ್ನು ಮೆಚ್ಚಿಸಬೇಕೆಂದಿದ್ದರೆ ಯೇಸು ಕ್ರಿಸ್ತನ ಸೇವಕನಾಗುತ್ತಿರಲಿಲ್ಲ.
|
12. ನನಗೆ ಸುವಾರ್ತೆ ದೊರೆತದ್ದು ಮನುಷ್ಯರಿಂದಲ್ಲ. ಯಾವನೂ ನನಗೆ ಸುವಾರ್ತೆಯನ್ನು ಉಪದೇಶಿಸಲಿಲ್ಲ. ನಾನು ಜನರಿಗೆ ಉಪದೇಶಿಸಬೇಕಾದ ಸುವಾರ್ತೆಯನ್ನು ಯೇಸು ಕ್ರಿಸ್ತನೇ ನನಗೆ ಪ್ರಕಟಿಸಿದನು.
|
13. ನನ್ನ ಹಿಂದಿನ ಜೀವಿತದ ಬಗ್ಗೆ ನೀವು ಕೇಳಿದ್ದೀರಿ. ನಾನು ಯೆಹೂದ್ಯಧರ್ಮಕ್ಕೆ ಸೇರಿದವನಾಗಿದ್ದೆನು. ದೇವರ ಸಭೆಯನ್ನು ಬಹಳವಾಗಿ ಹಿಂಸಿಸಿದೆನು. ಕ್ರೈಸ್ತ ಸಭೆಯನ್ನು ನಾಶಮಾಡಲು ಪ್ರಯತ್ನಿಸುತ್ತಿದ್ದೆನು.
|
14. ಯೆಹೂದ್ಯಧರ್ಮದ ನಾಯಕನಾಗಲು ನನ್ನ ಸಮವಯಸ್ಕರರಿಗಿಂತ ಎಷ್ಟೋ ಕಾರ್ಯಗಳನ್ನು ಮಾಡಿದೆನು. ನಮ್ಮ ಪೂರ್ವಿಕರ ಸಂಪ್ರದಾಯಗಳನ್ನು ಬೇರೆಲ್ಲರಿಗಿಂತಲೂ ಅತ್ಯಧಿಕ ನಿಷ್ಠೆಯಿಂದ ಅನುಸರಿಸಿದೆನು.
|
15. ಆದರೆ ನಾನು ಹುಟ್ಟುವುದಕ್ಕಿಂತ ಮೊದಲೇ ನನ್ನ ವಿಷಯದಲ್ಲಿ ದೇವರಿಗೆ ವಿಶೇಷವಾದ ಯೋಜನೆಯಿತ್ತು. ಆದ್ದರಿಂದ ದೇವರು ತನ್ನ ಕೃಪೆಯಿಂದ ನನ್ನನ್ನು ಕರೆದನು.
|
16. ಆತನ ಮಗನ ವಿಷಯವಾದ ಸುವಾರ್ತೆಯನ್ನು ನಾನು ಯೆಹೂದ್ಯರಲ್ಲದವರಿಗೆ ತಿಳಿಸಬೇಕೆಂಬುದು ದೇವರ ಚಿತ್ತವಾಗಿತ್ತು. ಆದ್ದರಿಂದ ದೇವರು ತನ್ನ ಮಗನನ್ನು ನನಗೆ ತೋರಿಸಿದನು. ಆತನು ನನ್ನನ್ನು ಕರೆದಾಗ ನಾನು ಯಾರಿಂದಲೂ ಸಲಹೆಯನ್ನಾಗಲಿ ಸಹಾಯವನ್ನಾಗಲಿ ತೆಗೆದುಕೊಳ್ಳಲಿಲ್ಲ.
|
17. ಅಪೊಸ್ತಲರನ್ನು ನೋಡುವುದಕ್ಕಾಗಿ ಜೆರುಸಲೇಮಿಗೂ ಹೋಗಲಿಲ್ಲ. ಅವರು ನನಗಿಂತ ಮೊದಲೇ ಅಪೊಸ್ತಲರಾಗಿದ್ದರು. ಆದರೆ, ನಾನು ತಡಮಾಡದೆ ಅರೇಬಿಯಾಕ್ಕೆ ಹೋದೆನು. ಆ ಬಳಿಕ ದಮಸ್ಕ ಪಟ್ಟಣಕ್ಕೆ ಹಿಂತಿರುಗಿದೆನು.
|
23. “ಈ ಮನುಷ್ಯನು ನಮ್ಮನ್ನು ಹಿಂಸಿಸುತ್ತಿದ್ದನು. ಆದರೆ ಈಗ ಇವನು ತಾನು ಮೊದಲೊಮ್ಮೆ ನಾಶಮಾಡಲು ಪ್ರಯತ್ನಿಸಿದ ನಂಬಿಕೆಯ ಬಗ್ಗೆ ಜನರಿಗೆ ಹೇಳುತ್ತಿದ್ದಾನೆ” ಎಂಬುದನ್ನು ಮಾತ್ರ ಅವರು ಕೇಳಿದ್ದರು.
|