1. ಈಗ ನಮಗೆ ಸ್ವತಂತ್ರವಿದೆ. ಕ್ರಿಸ್ತನು ನಮ್ಮನ್ನು ಸ್ವತಂತ್ರರನ್ನಾಗಿ ಮಾಡಿದನು. ಆದ್ದರಿಂದ ದೃಢವಾಗಿರಿ. ಮನಸ್ಸನ್ನು ಬದಲಾಯಿಸಿಕೊಂಡು ಮತ್ತೆ ಧರ್ಮಶಾಸ್ತ್ರದ ಗುಲಾಮಗಿರಿಗೆ ಹೋಗಬೇಡಿರಿ.
|
2. ಕೇಳಿ, ನಾನೇ ಪೌಲನು. ನೀವು ಸುನ್ನತಿ ಮಾಡಿಸಿಕೊಂಡು ಧರ್ಮಶಾಸ್ತ್ರಕ್ಕೆ ಹಿಂತಿರುಗಿಕೊಳ್ಳುವುದಾದರೆ ಕ್ರಿಸ್ತನಿಂದ ನಿಮಗೇನೂ ಪ್ರಯೋಜನವಿಲ್ಲ.
|
3. ಮತ್ತೆ ನಾನು ಪ್ರತಿಯೊಬ್ಬನನ್ನೂ ಎಚ್ಚರಿಸುತ್ತೇನೆ. ನೀವು ಸುನ್ನತಿ ಮಾಡಿಸಿಕೊಂಡರೆ, ಧರ್ಮಶಾಸ್ತ್ರವನ್ನೆಲ್ಲಾ ಅನುಸರಿಸಬೇಕು.
|
4. ನೀವು ಧರ್ಮಶಾಸ್ತ್ರದ ಮೂಲಕ ನೀತಿವಂತರಾಗಲು ಪ್ರಯತ್ನಿಸುವವರಾಗಿದ್ದರೆ, ದೇವರ ಕೃಪಾಶ್ರಯದಿಂದ ಬಿದ್ದುಹೋದ ಕಾರಣ ಕ್ರಿಸ್ತನೊಂದಿಗಿರುವ ನಿಮ್ಮ ಜೀವಿತವು ಅಂತ್ಯಗೊಳ್ಳುವುದು.
|
5. ಆದರೆ ನಾವು ನಂಬಿಕೆಯ ಮೂಲಕ ನೀತಿವಂತರಾಗಿದ್ದೇವೆ ಎಂಬ ನಿರೀಕ್ಷೆ ನಮಗುಂಟು. ದೇವರಾತ್ಮನ ಸಹಾಯದಿಂದ ಈ ನಿರೀಕ್ಷೆ ಸಫಲವಾಗುವುದೆಂದು ತವಕದಿಂದ ಎದುರುನೋಡುತ್ತಿದ್ದೇವೆ.
|
6. ಒಬ್ಬನು ಕ್ರಿಸ್ತ ಯೇಸುವಿನಲ್ಲಿರುವಾಗ ಸುನ್ನತಿ ಹೊಂದಿದ್ದಾನೋ ಇಲ್ಲವೋ ಎಂಬುದು ಮುಖ್ಯವಲ್ಲ. ಮುಖ್ಯವಾದದ್ದೇನಂದರೆ ಪ್ರೀತಿಯಿಂದ ಕಾರ್ಯನಡೆಸುವ ನಂಬಿಕೆ.
|
7. ನೀವು ಚೆನ್ನಾಗಿ ಓಡುತ್ತಾ ಇದ್ದಿರಿ. ನೀವು ಸತ್ಯಕ್ಕೆ ವಿಧೇಯರಾಗಿದ್ದಿರಿ. ಸತ್ಯಮಾರ್ಗವನ್ನು ಅನುಸರಿಸದಂತೆ ನಿಮ್ಮನ್ನು ಒತ್ತಾಯಪಡಿಸಿದವರ್ಯಾರು?
|
10. ಆ ಬೇರೆ ಅಭಿಪ್ರಾಯಗಳನ್ನು ನೀವು ನಂಬುವುದಿಲ್ಲವೆಂದು ಪ್ರಭುವಿನಲ್ಲಿ ನಿಮ್ಮನ್ನು ಕುರಿತು ಭರವಸೆಯಿಂದಿದ್ದೇನೆ. ಯಾರೊ ಒಬ್ಬನು ಆ ಅಭಿಪ್ರಾಯಗಳಿಂದ ನಿಮ್ಮನ್ನು ಗಲಿಬಿಲಿಗೊಳಿಸುತ್ತಿದ್ದಾನೆ. ಅವನು ಯಾರೇ ಆಗಿದ್ದರೂ ದಂಡನೆ ಹೊಂದುವನು.
|
11. ನನ್ನ ಸಹೋದರ ಸಹೋದರಿಯರೇ, ಜನರು ಸುನ್ನತಿ ಮಾಡಿಸಿಕೊಳ್ಳಬೇಕೆಂದು ನಾನು ಬೋಧಿಸುವುದಿಲ್ಲ. ಸುನ್ನತಿಯ ಅಗತ್ಯತೆಯನ್ನು ಕುರಿತು ಉಪದೇಶಿಸುವವನಾಗಿದ್ದರೆ, ನಾನಿನ್ನೂ ಹಿಂಸೆಗೆ ಒಳಗಾಗಿರುವುದೇಕೆ? ಜನರು ಸುನ್ನತಿ ಮಾಡಿಸಿಕೊಳ್ಳಬೇಕೆಂದು ನಾನಿನ್ನೂ ಉಪದೇಶಿಸುವುದಾಗಿದ್ದರೆ, ಶಿಲುಬೆಯ ವಿಷಯವಾದ ನನ್ನ ಬೋಧನೆಗೆ ಅಡ್ಡಿಯಾಗುವುದೇ ಇಲ್ಲ.
|
13. ನನ್ನ ಸಹೋದರ ಸಹೋದರಿಯರೇ, ನೀವು ಸ್ವತಂತ್ರರಾಗಬೇಕೆಂದು ದೇವರು ನಿಮ್ಮನ್ನು ಕರೆದಿದ್ದಾನೆ. ಆದರೆ ಪಾಪಮಯವಾದ ನಿಮ್ಮ ಸ್ವಭಾವವನ್ನು ಮೆಚ್ಚಿಸುವುದಕ್ಕಾಗಿ ನಿಮ್ಮ ಸ್ವತಂತ್ರವನ್ನು ನೆಪಮಾಡಿಕೊಳ್ಳಬೇಡಿ. ಆದರೆ ಪ್ರೀತಿಯಿಂದ ಒಬ್ಬರ ಸೇವೆಯನ್ನೊಬ್ಬರು ಮಾಡಿರಿ.
|
14. “ನೀವು ನಿಮ್ಮನ್ನು ಪ್ರೀತಿಸುವಂತೆ ಇತರರನ್ನು ಪ್ರೀತಿಸಿರಿ” ಎಂಬ ಒಂದೇ ಒಂದು ಆಜ್ಞೆಯಲ್ಲಿ ಇಡೀ ಧರ್ಮಶಾಸ್ತ್ರವೇ ಅಡಕವಾಗಿದೆ.
|
15. ನೀವು ಒಬ್ಬರನ್ನೊಬ್ಬರು ಕಚ್ಚಿ ಹರಿದುಹಾಕಿ ನುಂಗುವುದಾದರೆ ಒಬ್ಬರಿಂದೊಬ್ಬರು ನಾಶವಾಗುತ್ತೀರಿ. ಆದ್ದರಿಂದ ಎಚ್ಚರಿಕೆಯಿಂದಿರಿ!
|
16. ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಪವಿತ್ರಾತ್ಮನನ್ನು ಅನುಸರಿಸುವವರಾಗಿರಿ. ಆಗ, ನಿಮ್ಮ ಶರೀರಭಾವವು ಬಯಸುವ ಕೆಟ್ಟ ಸಂಗತಿಗಳನ್ನು ನೀವು ಮಾಡುವುದಿಲ್ಲ.
|
17. ನಮ್ಮ ಶರೀರಭಾವವು ದೇವರಾತ್ಮನಿಗೆ ವಿರುದ್ಧವಾದ ಸಂಗತಿಗಳನ್ನು ಬಯಸುತ್ತದೆ. ದೇವರಾತ್ಮನು ನಮ್ಮ ಶರೀರಭಾವಕ್ಕೆ ವಿರುದ್ಧವಾದ ಸಂಗತಿಗಳನ್ನು ಬಯಸುತ್ತಾನೆ. ಆದ್ದರಿಂದ ನೀವು ನಿಜವಾಗಿಯೂ ಬಯಸುವಂಥವುಗಳನ್ನು ಮಾಡಲಾಗದಂತೆ ಅವು ಒಂದಕ್ಕೊಂದು ಹೋರಾಡುತ್ತವೆ.
|
21. ಮತ್ಸರ, ಕುಡಿಕತನ, ಮತ್ತು ಸ್ವೇಚ್ಫಾಚಾರದ ಕೂಟ, ಮೊದಲಾದವುಗಳೇ. ನಾನು ನಿಮ್ಮನ್ನು ಮೊದಲು ಎಚ್ಚರಿಸಿದಂತೆ ಈಗಲೂ ಎಚ್ಚರಿಸುತ್ತೇನೆ. ಇಂಥವುಗಳನ್ನು ಮಾಡುವ ಜನರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.
|
24. ಕ್ರಿಸ್ತ ಯೇಸುವಿನವರು ತಮ್ಮ ಶರೀರಭಾವವನ್ನು ಶಿಲುಬೆಗೇರಿಸಿದ್ದಾರೆ. ಅವರು ತಮ್ಮ ಹಳೆಯ ಸ್ವಾರ್ಥಪರವಾದ ಅಭಿಲಾಷೆಗಳನ್ನು ಮತ್ತು ತಾವು ಮಾಡಬೇಕೆಂದಿದ್ದ ಕೆಟ್ಟಕಾರ್ಯಗಳನ್ನು ಬಿಟ್ಟುಕೊಟ್ಟವರಾಗಿದ್ದಾರೆ.
|