1. {ಸೇವಕಿಯಾಗಿದ್ದ ಹಾಗರಳು} PS ಸಾರಯಳು ಅಬ್ರಾಮನ ಹೆಂಡತಿ. ಆಕೆಗೆ ಮಕ್ಕಳಿರಲಿಲ್ಲ. ಸಾರಯಳಿಗೆ ಈಜಿಪ್ಟಿನ ಒಬ್ಬ ಸೇವಕಿಯಿದ್ದಳು. ಅವಳ ಹೆಸರು ಹಾಗರಳು.
|
2. ಸಾರಯಳು ಅಬ್ರಾಮನಿಗೆ, “ಯೆಹೋವನು ನನಗೆ ಮಕ್ಕಳನ್ನು ಪಡೆಯುವ ಅವಕಾಶವನ್ನು ಕೊಡಲಿಲ್ಲ. ಆದ್ದರಿಂದ ನನ್ನ ಸೇವಕಿಯಾದ ಹಾಗರಳ ಬಳಿಗೆ ಹೋಗು. ಆಕೆಯಲ್ಲಿ ಹುಟ್ಟುವ ಮಗುವನ್ನು ನನ್ನ ಮಗುವಂತೆ ಸ್ವೀಕರಿಸಿಕೊಳ್ಳುವೆನು” ಎಂದು ಹೇಳಿದಳು. ಅಬ್ರಾಮನು ತನ್ನ ಹೆಂಡತಿಯಾದ ಸಾರಯಳಿಗೆ ವಿಧೇಯನಾದನು. PEPS
|
3. ಅಬ್ರಾಮನು ಕಾನಾನಿಗೆ ಬಂದು ಹತ್ತು ವರ್ಷಗಳಾದ ಮೇಲೆ ಇದು ನಡೆಯಿತು. ಹೀಗೆ ಸಾರಯಳು ತನ್ನ ಗಂಡನಾದ ಅಬ್ರಾಮನಿಗೆ ಹಾಗರಳನ್ನು ಕೊಟ್ಟಳು. ಹಾಗರಳು ಆಕೆಯ ಈಜಿಪ್ಟಿನ ಸೇವಕಿಯಾಗಿದ್ದಳು.
|
5. ಆಗ ಸಾರಯಳು ಅಬ್ರಾಮನಿಗೆ, “ನನ್ನ ಸಂಕಟಕ್ಕೆ ನೀನೇ ಕಾರಣ. ನಾನು ಅವಳನ್ನು ನಿನಗೆ ಕೊಟ್ಟೆನು. ಈಗ ಅವಳು ಗರ್ಭಿಣಿಯಾಗಿದ್ದಾಳೆ ಮತ್ತು ನನ್ನನ್ನೇ ಕಡೆಗಣಿಸುತ್ತಿದ್ದಾಳೆ. ಯೆಹೋವನೇ ನನಗೂ ನಿನಗೂ ನ್ಯಾಯ ತೀರಿಸಲಿ” ಎಂದು ಹೇಳಿದಳು. PEPS
|
6. ಅದಕ್ಕೆ ಅಬ್ರಾಮನು ಸಾರಯಳಿಗೆ, “ನೀನು ಹಾಗರಳ ಯಜಮಾನಿ. ನೀನು ಅವಳಿಗೆ ಏನುಬೇಕಾದರೂ ಮಾಡಬಹುದು” ಎಂದು ಹೇಳಿದನು. ಆದ್ದರಿಂದ ಸಾರಯಳು ಹಾಗರಳನ್ನು ಶಿಕ್ಷಿಸಿದಳು. ಆಗ ಹಾಗರಳು ಓಡಿಹೋದಳು. PS
|
7. {ಹಾಗರಳ ಮಗನಾದ ಇಷ್ಮಾಯೇಲ} PS ಯೆಹೋವನ ದೂತನು ಹಾಗರಳನ್ನು ಮರುಳುಗಾಡಿನ ಒರತೆಯೊಂದರ ಬಳಿಯಲ್ಲಿ ಕಂಡನು. ಆ ಒರತೆಯು ಶೂರಿಗೆ ಹೋಗುವ ದಾರಿಯ ಬಳಿಯಲ್ಲಿತ್ತು.
|
8. ದೇವದೂತನು ಅವಳಿಗೆ, “ಹಾಗರಳೇ, ನೀನು ಸಾರಯಳ ಸೇವಕಿಯಾಗಿದ್ದರೂ ಯಾಕೆ ಇಲ್ಲಿರುವೆ? ನೀನು ಎಲ್ಲಿಗೆ ಹೋಗುತ್ತಿರುವೆ?” ಎಂದು ಕೇಳಿದನು. PEPS ಹಾಗರಳು, “ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಿರುವೆ” ಎಂದು ಹೇಳಿದಳು. PEPS
|
9. ಯೆಹೋವನ ದೂತನು ಹಾಗರಳಿಗೆ, “ಸಾರಯಳು ನಿನ್ನ ಯಜಮಾನಿ. ನೀನು ಆಕೆಯ ಬಳಿಗೆ ಹಿಂತಿರುಗಿ ಹೋಗಿ ಆಕೆಗೆ ವಿಧೇಯಳಾಗಿರು” ಎಂದು ಹೇಳಿದನು.
|
11. ಇದಲ್ಲದೆ ದೇವದೂತನು ಆಕೆಗೆ, “ಹಾಗರಳೇ, ಈಗ ನೀನು ಗರ್ಭಿಣಿಯಾಗಿರುವೆ;
ನಿನಗೆ ಒಬ್ಬ ಮಗನು ಹುಟ್ಟುವನು. ನೀನು ಅವನಿಗೆ ಇಷ್ಮಾಯೇಲ್ ಎಂದು ಹೆಸರಿಡಬೇಕು; ಯಾಕೆಂದರೆ ಯೆಹೋವನು ನಿನ್ನ ಕಷ್ಟಗಳನ್ನು ಕೇಳಿದ್ದಾನೆ; ಆತನು ನಿನಗೆ ಸಹಾಯ ಮಾಡುವನು. |
12. ಇಷ್ಮಾಯೇಲನು ಕಾಡುಕತ್ತೆಯಂತೆ
ಗಡುಸಾಗಿದ್ದು ಸ್ವತಂತ್ರವಾಗಿರುವನು. ಅವನು ಪ್ರತಿಯೊಬ್ಬರಿಗೂ ವಿರೋಧವಾಗಿರುವನು; ಪ್ರತಿಯೊಬ್ಬರೂ ಅವನಿಗೆ ವಿರೋಧವಾಗಿರುವರು. ಅವನು ಸ್ಥಳದಿಂದ ಸ್ಥಳಕ್ಕೆ ಹೋಗುತ್ತಾ ತನ್ನ ಸಹೋದರರ ಸಮೀಪದಲ್ಲಿ ವಾಸಿಸಿದರೂ ಅವರಿಗೆ ವಿರೋಧವಾಗಿರುವನು.” ಎಂದು ಹೇಳಿ ಹೊರಟುಹೋದನು. PEPS |
13. ಯೆಹೋವನು ತನ್ನೊಡನೆ ಮಾತಾಡಿದ್ದರಿಂದ ಹಾಗರಳು, “ಈ ಸ್ಥಳದಲ್ಲಿಯೂ ದೇವರು ನನ್ನನ್ನು ನೋಡಿ ನನಗಾಗಿ ಚಿಂತಿಸುತ್ತಾನೆ ಎಂದುಕೊಂಡು ಆತನಿಗೆ ‘ನನ್ನನ್ನು ನೋಡುವ ದೇವರು’ ” ಎಂದು ಹೆಸರಿಟ್ಟಳು.
|
14. ಆದ್ದರಿಂದ ಆ ಬಾವಿಗೆ ಬೀರ್ಲಹೈರೋಯಿ (ಬೀರ್ಲಹೈರೋಯಿ. ಇದರರ್ಥ: “ನನ್ನನ್ನು ನೋಡುವ ಜೀವಸ್ವರೂಪನ ಬಾವಿ.”) ಎಂದು ಹೆಸರಾಯಿತು. ಈ ಬಾವಿಯು ಕಾದೇಶಿಗೂ ಬೆರೆದಿಗೂ ನಡುವೆ ಇದೆ. PEPS
|