3. ದೇವರು ತನ್ನ ಎಲ್ಲಾ ಸೃಷ್ಟಿಕಾರ್ಯಗಳನ್ನೆಲ್ಲಾ ಮುಗಿಸಿ ಏಳನೆ ದಿನದಲ್ಲಿ ವಿಶ್ರಮಿಸಿಕೊಂಡದ್ದರಿಂದ ಆ ದಿನವು “ಪರಿಶುದ್ಧ ದಿನವಾಗಿರಲಿ” ಎಂದು ಆಶೀರ್ವದಿಸಿದನು. PS
|
4. {ಮಾನವನ ಪ್ರಾರಂಭ} PS ಇದು ಆಕಾಶದ ಮತ್ತು ಭೂಮಿಯ ಚರಿತ್ರೆ. ದೇವರು ಭೂಮಿಯನ್ನು ಮತ್ತು ಆಕಾಶವನ್ನು ಸೃಷ್ಟಿಸಿದಾಗ ನಡೆದ ಸಂಗತಿಗಳೇ ಈ ಚರಿತ್ರೆ.
|
5. ಆಗ ಭೂಮಿಯ ಮೇಲೆ ಯಾವ ಮರಗಿಡಗಳೂ ಇರಲಿಲ್ಲ. ಭೂಮಿಯ ಮೇಲೆ ಯಾವ ಸಸಿಯೂ ಬೆಳೆಯುತ್ತಿರಲಿಲ್ಲ; ಯಾಕೆಂದರೆ ಯೆಹೋವನು ಭೂಮಿಯ ಮೇಲೆ ಇನ್ನೂ ಮಳೆಯನ್ನು ಸುರಿಸಿರಲಿಲ್ಲ; ಭೂಮಿಯನ್ನು ಬೇಸಾಯ ಮಾಡಲು ಯಾರೂ ಇರಲಿಲ್ಲ. PEPS
|
7. ಹೀಗಿರಲು ದೇವರಾದ ಯೆಹೋವನು ನೆಲದಿಂದ ಮಣ್ಣನ್ನು ತೆಗೆದುಕೊಂಡು ಮನುಷ್ಯನನ್ನು ರೂಪಿಸಿ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಸಜೀವಿಯಾದನು.
|
8. ದೇವರಾದ ಯೆಹೋವನು ಪೂರ್ವ ದಿಕ್ಕಿನಲ್ಲಿದ್ದ ಏದೆನ್ ಸೀಮೆಯಲ್ಲಿ ಒಂದು ತೋಟವನ್ನು ಮಾಡಿ ತಾನು ಸೃಷ್ಟಿಸಿದ ಮನುಷ್ಯನನ್ನು ಆ ತೋಟದಲ್ಲಿರಿಸಿದನು.
|
9. ದೇವರಾದ ಯೆಹೋವನು ಆ ತೋಟದಲ್ಲಿ ಸುಂದರವಾದ ಪ್ರತಿಯೊಂದು ಮರವನ್ನು ಮತ್ತು ಊಟಕ್ಕೆ ಬೇಕಾದ ಒಳ್ಳೆಯ ಹಣ್ಣುಗಳನ್ನು ಬಿಡುವ ಪ್ರತಿಯೊಂದು ಮರವನ್ನು ಬೆಳೆಸಿದನು. ಇದಲ್ಲದೆ ತೋಟದ ಮಧ್ಯಭಾಗದಲ್ಲಿ ಜೀವದಾಯಕ ಮರವನ್ನೂ ಅಲ್ಲದೆ ಒಳ್ಳೆಯದರ ಮತ್ತು ಕೆಟ್ಟದ್ದರ ಬಗ್ಗೆ ಜ್ಞಾನ ಕೊಡುವ ಮರವನ್ನೂ ಬೆಳೆಸಿದನು. PEPS
|
10. ಏದೆನಿನಿಂದ ಹರಿದುಬರುತ್ತಿದ್ದ ನದಿಯು ತೋಟಕ್ಕೆ ಬೇಕಾದ ನೀರನ್ನು ಒದಗಿಸುತ್ತಿತ್ತು. ಬಳಿಕ ಅದೇ ನದಿಯು ಶಾಖೆಗಳಾಗಿ ಒಡೆದು ನಾಲ್ಕು ಉಪನದಿಗಳಾಯಿತು.
|
14. ಮೂರನೆ ನದಿಯ ಹೆಸರು ಟೈಗ್ರಿಸ್. ದಕ್ಷಿಣ ಅಸ್ಸೀರಿಯ ದೇಶದಲ್ಲಿ ಹರಿಯುತ್ತಿದ್ದ ನದಿ ಇದೇ. ನಾಲ್ಕನೆ ನದಿಯ ಹೆಸರು ಯೂಫ್ರೇಟೀಸ್. PEPS
|
15. ದೇವರಾದ ಯೆಹೋವನು ಆ ಮನುಷ್ಯನನ್ನು ಏದೆನ್ ತೋಟಕ್ಕೆ ಕರೆದೊಯ್ದು ವ್ಯವಸಾಯ ಮಾಡುವುದಕ್ಕಾಗಿಯೂ ಅದನ್ನು ನೋಡಿಕೊಳ್ಳುವುದಕ್ಕೂ ಅದರಲ್ಲಿರಿಸಿದನು.
|
17. ಆದರೆ ಒಳ್ಳೆಯದು ಮತ್ತು ಕೆಟ್ಟದ್ದರ ಬಗ್ಗೆ ಜ್ಞಾನ ಕೊಡುವ ಮರದ ಹಣ್ಣನ್ನು ಮಾತ್ರ ನೀನು ತಿನ್ನಕೂಡದು. ಒಂದುವೇಳೆ ಆ ಮರದ ಹಣ್ಣನ್ನು ತಿಂದರೆ ನೀನು ಸಾಯುವೆ!” ಎಂದು ಆಜ್ಞಾಪಿಸಿದನು. PS
|
18. {ಮೊದಲನೆ ಸ್ತ್ರೀ} PS ಬಳಿಕ ದೇವರಾದ ಯೆಹೋವನು, “ಮನುಷ್ಯನು ಒಬ್ಬಂಟಿಗನಾಗಿರುವುದು ಒಳ್ಳೆಯದಲ್ಲವೆಂದು ನನಗೆ ತೋರುತ್ತದೆ. ಅವನಿಗೆ ಸರಿಹೊಂದುವ ಸಹಕಾರಿಣಿಯನ್ನು ಉಂಟುಮಾಡುವೆನು” ಎಂದುಕೊಂಡನು. PEPS
|
19. ದೇವರಾದ ಯೆಹೋವನು ನೆಲದ ಮಣ್ಣಿನಿಂದ ಭೂಮಿಯ ಮೇಲಿರುವ ಪ್ರತಿಯೊಂದು ಪಶುವನ್ನೂ ಆಕಾಶದಲ್ಲಿರುವ ಪ್ರತಿಯೊಂದು ಪಕ್ಷಿಯನ್ನೂ ನಿರ್ಮಿಸಿ ಮನುಷ್ಯನ ಬಳಿಗೆ ಬರಮಾಡಿದನು. ಅವುಗಳಿಗೆಲ್ಲಾ ಮನುಷ್ಯನು ಹೆಸರಿಟ್ಟನು.
|
20. ಭೂಮಿಯ ಮೇಲಿನ ಎಲ್ಲಾ ಪಶುಗಳಿಗೂ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೂ ಮತ್ತು ಕಾಡಿನಲ್ಲಿರುವ ಎಲ್ಲಾ ಕ್ರೂರಪ್ರಾಣಿಗಳಿಗೂ ಮನುಷ್ಯನು ಹೆಸರಿಟ್ಟನು. ಮನುಷ್ಯನು ಅನೇಕಾನೇಕ ಪ್ರಾಣಿಗಳನ್ನು ಮತ್ತು ಪಕ್ಷಿಗಳನ್ನು ನೋಡಿದನು. ಆದರೆ ಅವುಗಳಲ್ಲಿ ತನಗೆ ಸರಿಹೊಂದುವ ಸಹಕಾರಿಣಿಯನ್ನು ಅವನು ಕಾಣಲಿಲ್ಲ.
|
21. ಆದ್ದರಿಂದ ದೇವರಾದ ಯೆಹೋವನು ಮನುಷ್ಯನಿಗೆ ಗಾಢವಾದ ನಿದ್ರೆಯನ್ನು ಬರಮಾಡಿ ಅವನ ದೇಹದ ಪಕ್ಕೆಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಆ ಪಕ್ಕೆಲುಬಿನ ಸ್ಥಳವನ್ನು ಮಾಂಸದಿಂದ ಮುಚ್ಚಿದನು.
|
23. ಆಗ ಅವನು ಆಕೆಯನ್ನು ನೋಡಿ, “ಈಗ ಸರಿ, ಈಕೆ ನನ್ನಂತೆಯೇ ಇದ್ದಾಳೆ.
ಈಕೆಯ ಎಲುಬುಗಳು ನನ್ನ ಎಲುಬುಗಳಿಂದ ಬಂದಿವೆ. ಈಕೆಯ ದೇಹವು ನನ್ನ ದೇಹದಿಂದ ಬಂದಿದೆ. ಈಕೆ ಮನುಷ್ಯನಿಂದ ಉತ್ಪತ್ತಿಯಾದವಳು. ಆದ್ದರಿಂದ ಈಕೆಗೆ ನಾನು ‘ಸ್ತ್ರೀ’ ಎಂದು ಹೆಸರಿಡುವೆ” ಎಂದನು. PS |
24. ಆದ್ದರಿಂದ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರೂ ಒಂದೇ ಶರೀರವಾಗುವರು. PEPS
|