2. ಸಾರಳು ವೃದ್ಧನಾಗಿದ್ದ ಅಬ್ರಹಾಮನಿಂದ ಗರ್ಭಿಣಿಯಾಗಿ, ಒಂದು ಗಂಡುಮಗುವನ್ನು ಹೆತ್ತಳು. ದೇವರು ವಾಗ್ದಾನ ಮಾಡಿದಂತೆಯೇ ಈ ಸಂಗತಿಗಳೆಲ್ಲ ತಕ್ಕಕಾಲದಲ್ಲಿ ನಡೆದವು.
|
7. ಅಬ್ರಹಾಮನಿಗೆ ಸಾರಳಲ್ಲಿ ಮಗನು ಹುಟ್ಟುತ್ತಾನೆಂದು ಯಾರೂ ಯೋಚಿಸಿರಲಿಲ್ಲ. ಅಬ್ರಹಾಮನು ವೃದ್ಧನಾಗಿದ್ದರೂ ಈಗ ನಾನು ಅವನಿಗೆ ಒಬ್ಬ ಮಗನನ್ನು ಕೊಟ್ಟಿದ್ದೇನೆ” ಅಂದಳು. PS
|
8. {ಕುಟುಂಬದಲ್ಲಾದ ಒಡಕು} PS ಇಸಾಕನು ಬೆಳೆದು ಊಟಮಾಡುವಷ್ಟು ದೊಡ್ಡವನಾದನು. ಆಗ ಅಬ್ರಹಾಮನು ಒಂದು ದೊಡ್ಡ ಔತಣವನ್ನು ಮಾಡಿಸಿದನು.
|
9. ಮೊದಲು, ಈಜಿಪ್ಟಿನ ಸೇವಕಿಯಾದ ಹಾಗರಳಲ್ಲಿ ಒಬ್ಬ ಮಗನು ಹುಟ್ಟಿದ್ದನು. ಅವನಿಗೂ ಅಬ್ರಹಾಮನು ತಂದೆಯಾಗಿದ್ದನು. ಆದರೆ ಆ ಮೊದಲನೆ ಮಗನು ಇಸಾಕನಿಗೆ ತೊಂದರೆ ಕೊಡುವುದನ್ನು ಸಾರಳು ಗಮನಿಸಿದಳು.
|
10. ಸಾರಳು ಅಬ್ರಹಾಮನಿಗೆ, “ಆ ಸೇವಕಿಯನ್ನೂ ಅವಳ ಮಗನನ್ನೂ ಕಳುಹಿಸಿಬಿಡು. ನಾವು ಸತ್ತಾಗ ನಮ್ಮ ಆಸ್ತಿಯನ್ನೆಲ್ಲ ನಮ್ಮ ಮಗನಾದ ಇಸಾಕನೇ ಪಡೆದುಕೊಳ್ಳಲಿ; ನಮ್ಮ ಆಸ್ತಿಯಲ್ಲಿ ಇಸಾಕನೊಡನೆ ಅವನು ಪಾಲುಹೊಂದುವುದು ನನಗೆ ಇಷ್ಟವಿಲ್ಲ” ಎಂದು ಹೇಳಿದಳು. PEPS
|
12. ಆದರೆ ದೇವರು ಅಬ್ರಹಾಮನಿಗೆ, “ಆ ಹುಡುಗನ ಕುರಿತಾಗಲಿ ಸೇವಕಿಯ ಕುರಿತಾಗಲಿ ಚಿಂತೆಮಾಡಬೇಡ. ಸಾರಳ ಇಷ್ಟದಂತೆ ಮಾಡು. ಇಸಾಕನೊಬ್ಬನೇ ಬಾಧ್ಯಸ್ತನಾಗಬೇಕು.
|
13. ಆದರೆ ನಿನ್ನ ಸೇವಕಿಯ ಮಗನನ್ನು ಸಹ ನಾನು ಆಶೀರ್ವದಿಸುವೆನು. ಅವನು ನಿನ್ನ ಮಗನು. ಆದ್ದರಿಂದ ಅವನಿಂದಲೂ ನಾನು ದೊಡ್ಡ ಜನಾಂಗವನ್ನು ಉಂಟುಮಾಡುವೆನು” ಎಂದು ಹೇಳಿದನು. PEPS
|
14. ಮರುದಿನ ಮುಂಜಾನೆ, ಅಬ್ರಹಾಮನು ಸ್ವಲ್ಪ ಆಹಾರವನ್ನು ಮತ್ತು ಸ್ವಲ್ಪ ನೀರನ್ನು ತೆಗೆದು ಹಾಗರಳಿಗೆ ಕೊಟ್ಟನು. ಹಾಗರಳು ಅವುಗಳನ್ನು ತೆಗೆದುಕೊಂಡು ತನ್ನ ಮಗನೊಡನೆ ಅಲ್ಲಿಂದ ಹೊರಟುಹೋದಳು. ಹಾಗರಳು ಆ ಸ್ಥಳವನ್ನು ಬಿಟ್ಟು ಬೇರ್ಷೆಬದ ಮರಳುಗಾಡಿನಲ್ಲಿ ಅಲೆಯತೊಡಗಿದಳು. PEPS
|
15. ಸ್ವಲ್ಪ ಸಮಯದ ನಂತರ, ಇದ್ದ ನೀರೆಲ್ಲಾ ಮುಗಿದುಹೋಯಿತು. ಕುಡಿಯುವುದಕ್ಕೆ ಏನೂ ಇರಲಿಲ್ಲ. ಆದ್ದರಿಂದ ಹಾಗರಳು ತನ್ನ ಮಗನನ್ನು ಪೊದೆಯ ಕೆಳಗೆ ಮಲಗಿಸಿದಳು.
|
17. ಮಗುವಿನ ಕೂಗು ದೇವರಿಗೆ ಕೇಳಿಸಿತು. ಆಗ ದೇವದೂತನು ಆಕಾಶದಿಂದ ಆಕೆಯನ್ನು ಕರೆದು, “ಹಾಗರಳೇ, ನಿನಗೇನಾಯಿತು? ಭಯಪಡಬೇಡ; ಮಗುವಿನ ಕೂಗನ್ನು ಯೆಹೋವನು ಕೇಳಿದ್ದಾನೆ.
|
19. ಆಮೇಲೆ ದೇವರು ಹಾಗರಳಿಗೆ ಒಂದು ಬಾವಿ ಕಾಣಿಸುವಂತೆ ಮಾಡಿದನು. ಹಾಗರಳು ಬಾವಿಗೆ ಹೋಗಿ ತನ್ನ ತಿತ್ತಿಯಲ್ಲಿ ನೀರನ್ನು ತುಂಬಿಸಿಕೊಂಡು ಬಂದು ಮಗುವಿಗೆ ಕುಡಿಸಿದಳು. PEPS
|
20. ದೇವರು ಆ ಮಗುವಿನ ಸಂಗಡವಿದ್ದ ಕಾರಣ ಆ ಮಗುವು ಬೆಳೆದು ದೊಡ್ಡವನಾದನು; ಕಾಡಿನಲ್ಲಿ ವಾಸವಾಗಿದ್ದು ಚತುರ ಬಿಲ್ಲುಗಾರನಾದನು.
|
21. ಅವನ ತಾಯಿಯು ಅವನಿಗೆ ಈಜಿಪ್ಟಿನ ಹುಡುಗಿಯನ್ನು ತಂದು ಮದುವೆ ಮಾಡಿಸಿದಳು. ಅವರು ಪಾರಾನ್ ಕಾಡಿನಲ್ಲಿ ತಮ್ಮ ವಾಸವನ್ನು ಮುಂದುವರಿಸಿದರು. PS
|
22. {ಅಬ್ರಹಾಮನು ಅಬೀಮೆಲೆಕನೊಡನೆ ಮಾಡಿಕೊಂಡ ಒಪ್ಪಂದ} PS ಆಮೇಲೆ ಅಬೀಮೆಲೆಕನು ಮತ್ತು ಫೀಕೋಲನು ಅಬ್ರಹಾಮನೊಡನೆ ಮಾತಾಡಿದರು. ಫೀಕೋಲನು ಅಬೀಮೆಲೆಕನ ಸೈನ್ಯಾಧಿಕಾರಿಯಾಗಿದ್ದನು. ಅಬೀಮೆಲೆಕನು ಅಬ್ರಹಾಮನಿಗೆ, “ನೀನು ಮಾಡುವ ಪ್ರತಿಯೊಂದರಲ್ಲೂ ದೇವರು ನಿನ್ನೊಡನೆ ಇದ್ದಾನೆ.
|
23. ಆದ್ದರಿಂದ ನೀನು ನನ್ನೊಡನೆ ಮತ್ತು ನನ್ನ ಮಕ್ಕಳೊಡನೆ ನ್ಯಾಯವಾಗಿ ನಡೆದುಕೊಳ್ಳುವುದಾಗಿ ದೇವರ ಮೇಲೆ ಪ್ರಮಾಣಮಾಡು. ನನಗೂ ಮತ್ತು ನೀನು ವಾಸಿಸುತ್ತಿರುವ ಈ ನಾಡಿಗೂ ದಯೆತೋರುವುದಾಗಿ ನೀನು ಪ್ರಮಾಣಮಾಡು. ನಾನು ನಿನಗೆ ದಯೆತೋರಿದಂತೆ ನೀನೂ ನನಗೆ ದಯೆತೋರುವುದಾಗಿ ಪ್ರಮಾಣಮಾಡು” ಎಂದು ಹೇಳಿದನು. PEPS
|
25. ಆಮೇಲೆ ಅಬ್ರಹಾಮನು ಅಬೀಮೆಲೆಕನಿಗೆ, “ನಿನ್ನ ಸೇವಕರು ನೀರಿದ್ದ ಒಂದು ಬಾವಿಯನ್ನು ವಶಪಡಿಸಿಕೊಂಡಿದ್ದಾರೆ” ಎಂದು ದೂರು ಹೇಳಿದನು. PEPS
|
26. ಅದಕ್ಕೆ ಅಬೀಮೆಲೆಕನು, “ಅದನ್ನು ಯಾರು ಮಾಡಿದರೋ ನನಗೆ ಗೊತ್ತಿಲ್ಲ. ಇಂದಿನವರೆಗೂ ನೀನು ಇದನ್ನು ನನಗೆ ಹೇಳಲೇ ಇಲ್ಲ” ಎಂದು ಹೇಳಿದನು. PEPS
|
27. ಆಗ ಅಬ್ರಹಾಮನು ಮತ್ತು ಅಬೀಮೆಲೆಕನು ಒಂದು ಒಪ್ಪಂದವನ್ನು ಮಾಡಿಕೊಂಡರು. ಅಬ್ರಹಾಮನು ಅವನಿಗೆ ಕೆಲವು ದನಕುರಿಗಳನ್ನು ಒಪ್ಪಂದದ ಗುರುತಾಗಿ ಕೊಟ್ಟನು;
|
30. ಅಬ್ರಹಾಮನು “ಆ ಬಾವಿಯನ್ನು ತೋಡಿಸಿದವನು ನಾನೇ ಎಂಬುದಕ್ಕೆ ಸಾಕ್ಷಿಯಾಗಿ ನೀನು ಈ ಕುರಿಗಳನ್ನು ನನ್ನಿಂದ ಸ್ವೀಕರಿಸಿಕೊಳ್ಳಬೇಕು” ಎಂದು ಉತ್ತರಿಸಿದನು. PEPS
|
32. ಬೇರ್ಷೆಬದಲ್ಲಿ ಒಪ್ಪಂದವನ್ನು ಮಾಡಿಕೊಂಡ ಮೇಲೆ ಅಬೀಮೆಲೆಕನು ಮತ್ತು ಅವನ ಸೈನ್ಯಾಧಿಕಾರಿಯು ಫಿಲಿಷ್ಟಿಯರ ದೇಶಕ್ಕೆ ಹಿಂತಿರುಗಿದರು. PEPS
|
33. ಅಬ್ರಹಾಮನು ಬೇರ್ಷೆಬದಲ್ಲಿ ವಿಶೇಷವಾದ ಒಂದು ಮರವನ್ನು ನೆಟ್ಟನು. ಆ ಸ್ಥಳದಲ್ಲಿ ಅವನು ಸದಾಕಾಲ ಜೀವಿಸುವ ದೇವರಾದ ಯೆಹೋವನಿಗೆ ಪ್ರಾರ್ಥಿಸಿದನು.
|