ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
1. ಸಾರಳು ನೂರಿಪ್ಪತ್ತೇಳು ವರ್ಷ ಬದುಕಿದ್ದಳು.
2. ಅವಳು ಕಾನಾನ್ ದೇಶದ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಮರಣಹೊಂದಿದಳು. ಅಬ್ರಹಾಮನು ಅವಳಿಗೋಸ್ಕರ ಅಲ್ಲಿ ಬಹಳವಾಗಿ ಅತ್ತನು.
3. ಬಳಿಕ ಆಕೆಯ ಶವದ ಬಳಿಯಿಂದ ಎದ್ದು ಹಿತ್ತಿಯರ ಬಳಿಗೆ ಹೋಗಿ,
4. ಅವರಿಗೆ, “ನಾನು ಈ ನಾಡಿನವನಲ್ಲ. ನಾನು ಇಲ್ಲಿ ಕೇವಲ ಪ್ರವಾಸಿಗನಷ್ಟೆ. ಆದ್ದರಿಂದ ನನ್ನ ಹೆಂಡತಿಯನ್ನು ಸಮಾಧಿಮಾಡಲು ನನಗೆ ಸ್ವಲ್ಪ ಸ್ಥಳ ಬೇಕು” ಎಂದು ಹೇಳಿದನು.
5. ಹಿತ್ತಿಯರು ಅಬ್ರಹಾಮನಿಗೆ,
6. “ಸ್ವಾಮೀ, ನೀನು ನಮ್ಮ ಮಹಾನಾಯಕರುಗಳಲ್ಲಿ ಒಬ್ಬನು. ತೀರಿಕೊಂಡ ನಿನ್ನ ಹೆಂಡತಿಯ ಸಮಾಧಿಗಾಗಿ ನಮ್ಮಲ್ಲಿರುವ ಸ್ಮಶಾನಗಳಲ್ಲಿ ಅತ್ಯುತ್ತಮವಾದ ಸ್ಥಳವನ್ನು ನೀನು ತೆಗೆದುಕೊಳ್ಳಬಹುದು. ನಿನ್ನ ಹೆಂಡತಿಯನ್ನು ಸಮಾಧಿಮಾಡಲು ನಮ್ಮಲ್ಲಿ ಯಾರೂ ಅಡ್ಡಿ ಮಾಡುವುದಿಲ್ಲ” ಎಂದು ಉತ್ತರಕೊಟ್ಟರು.
7. ಅಬ್ರಹಾಮನು ಎದ್ದುನಿಂತು ಅವರಿಗೆ ನಮಸ್ಕರಿಸಿ,
8. ಅವರಿಗೆ, “ತೀರಿಹೋದ ನನ್ನ ಹೆಂಡತಿಯನ್ನು ಸಮಾಧಿಮಾಡಲು ನೀವು ನಿಜವಾಗಿಯೂ ಸಹಾಯ ಮಾಡಬೇಕೆಂದಿದ್ದರೆ, ಚೋಹರನ ಮಗನಾದ ಎಫ್ರೋನನ ಸಂಗಡ ನನಗೋಸ್ಕರ ಮಾತಾಡಿರಿ.
9. ಮಕ್ಪೇಲದ ಗವಿಯನ್ನು ಕೊಂಡುಕೊಳ್ಳಲು ನನಗೆ ಇಷ್ಟವಿದೆ. ಅದು ಎಫ್ರೋನನದು. ಅದು ಅವನ ಜಮೀನಿನ ಅಂಚಿನಲ್ಲಿದೆ. ಅದಕ್ಕಾಗುವ ಬೆಲೆಯನ್ನು ನಾನು ಪೂರ್ತಿ ಕೊಡುತ್ತೇನೆ. ನಾನು ಅದನ್ನು ಸಮಾಧಿಯ ಸ್ಥಳಕ್ಕಾಗಿ ಕೊಂಡುಕೊಂಡಿರುವೆ ಎಂಬುದಕ್ಕೆ ನೀವೆಲ್ಲರೂ ಸಾಕ್ಷಿಗಳಾಗಿರಬೇಕು” ಎಂದು ಹೇಳಿದನು.
10. ಎಫೋನನು ಪಟ್ಟಣದ ಬಾಗಿಲ ಬಳಿಯಲ್ಲಿ ಹಿತ್ತಿಯರೊಂದಿಗೆ ಕುಳಿತುಕೊಂಡಿದ್ದನು. ಕೂಡಲೇ ಅವನು ಅಬ್ರಹಾಮನಿಗೆ,
11. “ಸ್ವಾಮೀ ನಾನು ಆ ಸ್ಥಳವನ್ನೂ ಆ ಗವಿಯನ್ನೂ ನನ್ನ ಜನರ ಎದುರಿನಲ್ಲಿಯೇ ನಿನಗೆ ಕೊಡುವೆನು. ನಿನ್ನ ಹೆಂಡತಿಯನ್ನು ಅಲ್ಲಿ ಸಮಾಧಿಮಾಡು” ಎಂದು ಹೇಳಿದನು.
12. ಆಗ ಅಬ್ರಹಾಮನು ಹಿತ್ತಿಯರಿಗೆ ತಲೆಬಾಗಿ ನಮಸ್ಕರಿಸಿದನು.
13. ಅಬ್ರಹಾಮನು ಜನರೆಲ್ಲರ ಎದುರಿನಲ್ಲಿ ಎಫ್ರೋನನಿಗೆ, “ಆ ಸ್ಥಳಕ್ಕಾಗುವ ಪೂರ್ತಿ ಬೆಲೆಯನ್ನು ನಾನು ನಿನಗೆ ಕೊಡುತ್ತೇನೆ; ನೀನು ಹಣವನ್ನು ತೆಗೆದುಕೊಳ್ಳುವುದಾದರೆ, ನನ್ನ ಹೆಂಡತಿಯನ್ನು ಅಲ್ಲಿ ಸಮಾಧಿಮಾಡುವೆನು” ಎಂದು ಹೇಳಿದನು.
14. ಎಫ್ರೋನನು ಅಬ್ರಹಾಮನಿಗೆ,
15. “ಸ್ವಾಮೀ, ನನ್ನ ಮಾತನ್ನು ಕೇಳು. ಆ ಸ್ಥಳದ ಬೆಲೆ ನಾನೂರು ಬೆಳ್ಳಿ ರೂಪಾಯಿಗಳಷ್ಟೆ. ಆದರೆ ನಿನಗಾಗಲಿ, ನನಗಾಗಲಿ ಆ ನಾನೂರು ರೂಪಾಯಿ ಹೆಚ್ಚೇನೂ ಅಲ್ಲ. ಸ್ಥಳವನ್ನು ತೆಗೆದುಕೊಂಡು ನಿನ್ನ ಹೆಂಡತಿಯನ್ನು ಸಮಾಧಿಮಾಡು” ಎಂದು ಉತ್ತರಕೊಟ್ಟನು.
16. ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಅಬ್ರಹಾಮನು ಆ ಸ್ಥಳಕ್ಕಾಗಿ ನಾನೂರು ಬೆಳ್ಳಿ ರೂಪಾಯಿಗಳನ್ನು ಹಿತ್ತಿಯರ ಎದುರಿನಲ್ಲಿ ಹೇಳಿದ ಎಫ್ರೋನನಿಗೆ ಎಣಿಸಿಕೊಟ್ಟನು.
17. [This verse may not be a part of this translation]
18. [This verse may not be a part of this translation]
19. ಬಳಿಕ ಅಬ್ರಹಾಮನು ತನ್ನ ಹೆಂಡತಿಯಾದ ಸಾರಳನ್ನು ಮಮ್ರೆಗೆ ಸಮೀಪದಲ್ಲಿದ್ದ ಜಮೀನಿನ ಗವಿಯಲ್ಲಿ ಸಮಾಧಿಮಾಡಿದನು. (ಅದು ಕಾನಾನ್ ದೇಶದ ಹೆಬ್ರೋನ್).
20. ಅಬ್ರಹಾಮನು ಆ ಜಮೀನನ್ನು ಮತ್ತು ಅದರಲ್ಲಿದ್ದ ಗವಿಯನ್ನು ಹಿತ್ತಿಯರಿಂದ ಕೊಂಡುಕೊಂಡನು. ಅದು ಅವನ ಆಸ್ತಿಯಾಯಿತು. ಅವನು ಅದನ್ನು ಸಮಾಧಿ ಸ್ಥಳವನ್ನಾಗಿ ಉಪಯೋಗಿಸಿದನು.

Notes

No Verse Added

Total 50 Chapters, Current Chapter 23 of Total Chapters 50
ಆದಿಕಾಂಡ 23:21
1. ಸಾರಳು ನೂರಿಪ್ಪತ್ತೇಳು ವರ್ಷ ಬದುಕಿದ್ದಳು.
2. ಅವಳು ಕಾನಾನ್ ದೇಶದ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಮರಣಹೊಂದಿದಳು. ಅಬ್ರಹಾಮನು ಅವಳಿಗೋಸ್ಕರ ಅಲ್ಲಿ ಬಹಳವಾಗಿ ಅತ್ತನು.
3. ಬಳಿಕ ಆಕೆಯ ಶವದ ಬಳಿಯಿಂದ ಎದ್ದು ಹಿತ್ತಿಯರ ಬಳಿಗೆ ಹೋಗಿ,
4. ಅವರಿಗೆ, “ನಾನು ನಾಡಿನವನಲ್ಲ. ನಾನು ಇಲ್ಲಿ ಕೇವಲ ಪ್ರವಾಸಿಗನಷ್ಟೆ. ಆದ್ದರಿಂದ ನನ್ನ ಹೆಂಡತಿಯನ್ನು ಸಮಾಧಿಮಾಡಲು ನನಗೆ ಸ್ವಲ್ಪ ಸ್ಥಳ ಬೇಕು” ಎಂದು ಹೇಳಿದನು.
5. ಹಿತ್ತಿಯರು ಅಬ್ರಹಾಮನಿಗೆ,
6. “ಸ್ವಾಮೀ, ನೀನು ನಮ್ಮ ಮಹಾನಾಯಕರುಗಳಲ್ಲಿ ಒಬ್ಬನು. ತೀರಿಕೊಂಡ ನಿನ್ನ ಹೆಂಡತಿಯ ಸಮಾಧಿಗಾಗಿ ನಮ್ಮಲ್ಲಿರುವ ಸ್ಮಶಾನಗಳಲ್ಲಿ ಅತ್ಯುತ್ತಮವಾದ ಸ್ಥಳವನ್ನು ನೀನು ತೆಗೆದುಕೊಳ್ಳಬಹುದು. ನಿನ್ನ ಹೆಂಡತಿಯನ್ನು ಸಮಾಧಿಮಾಡಲು ನಮ್ಮಲ್ಲಿ ಯಾರೂ ಅಡ್ಡಿ ಮಾಡುವುದಿಲ್ಲ” ಎಂದು ಉತ್ತರಕೊಟ್ಟರು.
7. ಅಬ್ರಹಾಮನು ಎದ್ದುನಿಂತು ಅವರಿಗೆ ನಮಸ್ಕರಿಸಿ,
8. ಅವರಿಗೆ, “ತೀರಿಹೋದ ನನ್ನ ಹೆಂಡತಿಯನ್ನು ಸಮಾಧಿಮಾಡಲು ನೀವು ನಿಜವಾಗಿಯೂ ಸಹಾಯ ಮಾಡಬೇಕೆಂದಿದ್ದರೆ, ಚೋಹರನ ಮಗನಾದ ಎಫ್ರೋನನ ಸಂಗಡ ನನಗೋಸ್ಕರ ಮಾತಾಡಿರಿ.
9. ಮಕ್ಪೇಲದ ಗವಿಯನ್ನು ಕೊಂಡುಕೊಳ್ಳಲು ನನಗೆ ಇಷ್ಟವಿದೆ. ಅದು ಎಫ್ರೋನನದು. ಅದು ಅವನ ಜಮೀನಿನ ಅಂಚಿನಲ್ಲಿದೆ. ಅದಕ್ಕಾಗುವ ಬೆಲೆಯನ್ನು ನಾನು ಪೂರ್ತಿ ಕೊಡುತ್ತೇನೆ. ನಾನು ಅದನ್ನು ಸಮಾಧಿಯ ಸ್ಥಳಕ್ಕಾಗಿ ಕೊಂಡುಕೊಂಡಿರುವೆ ಎಂಬುದಕ್ಕೆ ನೀವೆಲ್ಲರೂ ಸಾಕ್ಷಿಗಳಾಗಿರಬೇಕು” ಎಂದು ಹೇಳಿದನು.
10. ಎಫೋನನು ಪಟ್ಟಣದ ಬಾಗಿಲ ಬಳಿಯಲ್ಲಿ ಹಿತ್ತಿಯರೊಂದಿಗೆ ಕುಳಿತುಕೊಂಡಿದ್ದನು. ಕೂಡಲೇ ಅವನು ಅಬ್ರಹಾಮನಿಗೆ,
11. “ಸ್ವಾಮೀ ನಾನು ಸ್ಥಳವನ್ನೂ ಗವಿಯನ್ನೂ ನನ್ನ ಜನರ ಎದುರಿನಲ್ಲಿಯೇ ನಿನಗೆ ಕೊಡುವೆನು. ನಿನ್ನ ಹೆಂಡತಿಯನ್ನು ಅಲ್ಲಿ ಸಮಾಧಿಮಾಡು” ಎಂದು ಹೇಳಿದನು.
12. ಆಗ ಅಬ್ರಹಾಮನು ಹಿತ್ತಿಯರಿಗೆ ತಲೆಬಾಗಿ ನಮಸ್ಕರಿಸಿದನು.
13. ಅಬ್ರಹಾಮನು ಜನರೆಲ್ಲರ ಎದುರಿನಲ್ಲಿ ಎಫ್ರೋನನಿಗೆ, “ಆ ಸ್ಥಳಕ್ಕಾಗುವ ಪೂರ್ತಿ ಬೆಲೆಯನ್ನು ನಾನು ನಿನಗೆ ಕೊಡುತ್ತೇನೆ; ನೀನು ಹಣವನ್ನು ತೆಗೆದುಕೊಳ್ಳುವುದಾದರೆ, ನನ್ನ ಹೆಂಡತಿಯನ್ನು ಅಲ್ಲಿ ಸಮಾಧಿಮಾಡುವೆನು” ಎಂದು ಹೇಳಿದನು.
14. ಎಫ್ರೋನನು ಅಬ್ರಹಾಮನಿಗೆ,
15. “ಸ್ವಾಮೀ, ನನ್ನ ಮಾತನ್ನು ಕೇಳು. ಸ್ಥಳದ ಬೆಲೆ ನಾನೂರು ಬೆಳ್ಳಿ ರೂಪಾಯಿಗಳಷ್ಟೆ. ಆದರೆ ನಿನಗಾಗಲಿ, ನನಗಾಗಲಿ ನಾನೂರು ರೂಪಾಯಿ ಹೆಚ್ಚೇನೂ ಅಲ್ಲ. ಸ್ಥಳವನ್ನು ತೆಗೆದುಕೊಂಡು ನಿನ್ನ ಹೆಂಡತಿಯನ್ನು ಸಮಾಧಿಮಾಡು” ಎಂದು ಉತ್ತರಕೊಟ್ಟನು.
16. ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಅಬ್ರಹಾಮನು ಸ್ಥಳಕ್ಕಾಗಿ ನಾನೂರು ಬೆಳ್ಳಿ ರೂಪಾಯಿಗಳನ್ನು ಹಿತ್ತಿಯರ ಎದುರಿನಲ್ಲಿ ಹೇಳಿದ ಎಫ್ರೋನನಿಗೆ ಎಣಿಸಿಕೊಟ್ಟನು.
17. This verse may not be a part of this translation
18. This verse may not be a part of this translation
19. ಬಳಿಕ ಅಬ್ರಹಾಮನು ತನ್ನ ಹೆಂಡತಿಯಾದ ಸಾರಳನ್ನು ಮಮ್ರೆಗೆ ಸಮೀಪದಲ್ಲಿದ್ದ ಜಮೀನಿನ ಗವಿಯಲ್ಲಿ ಸಮಾಧಿಮಾಡಿದನು. (ಅದು ಕಾನಾನ್ ದೇಶದ ಹೆಬ್ರೋನ್).
20. ಅಬ್ರಹಾಮನು ಜಮೀನನ್ನು ಮತ್ತು ಅದರಲ್ಲಿದ್ದ ಗವಿಯನ್ನು ಹಿತ್ತಿಯರಿಂದ ಕೊಂಡುಕೊಂಡನು. ಅದು ಅವನ ಆಸ್ತಿಯಾಯಿತು. ಅವನು ಅದನ್ನು ಸಮಾಧಿ ಸ್ಥಳವನ್ನಾಗಿ ಉಪಯೋಗಿಸಿದನು.
Total 50 Chapters, Current Chapter 23 of Total Chapters 50
×

Alert

×

kannada Letters Keypad References