2. ಅವಳು ಕಾನಾನ್ ದೇಶದ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಮರಣಹೊಂದಿದಳು. ಅಬ್ರಹಾಮನು ಅವಳಿಗೋಸ್ಕರ ಅಲ್ಲಿ ಬಹಳವಾಗಿ ಅತ್ತನು.
|
4. ಅವರಿಗೆ, “ನಾನು ಈ ನಾಡಿನವನಲ್ಲ. ನಾನು ಇಲ್ಲಿ ಕೇವಲ ಪ್ರವಾಸಿಗನಷ್ಟೇ. ಆದ್ದರಿಂದ ನನ್ನ ಹೆಂಡತಿಯನ್ನು ಸಮಾಧಿಮಾಡಲು ನನಗೆ ಸ್ವಲ್ಪ ಸ್ಥಳ ಬೇಕು” ಎಂದು ಹೇಳಿದನು. PEPS
|
6. “ಸ್ವಾಮೀ, ನೀನು ನಮ್ಮ ಮಹಾನಾಯಕರುಗಳಲ್ಲಿ ಒಬ್ಬನು. ತೀರಿಕೊಂಡ ನಿನ್ನ ಹೆಂಡತಿಯ ಸಮಾಧಿಗಾಗಿ ನಮ್ಮಲ್ಲಿರುವ ಸ್ಮಶಾನಗಳಲ್ಲಿ ಅತ್ಯುತ್ತಮವಾದ ಸ್ಥಳವನ್ನು ನೀನು ತೆಗೆದುಕೊಳ್ಳಬಹುದು. ನಿನ್ನ ಹೆಂಡತಿಯನ್ನು ಸಮಾಧಿಮಾಡಲು ನಮ್ಮಲ್ಲಿ ಯಾರೂ ಅಡ್ಡಿ ಮಾಡುವುದಿಲ್ಲ” ಎಂದು ಉತ್ತರಕೊಟ್ಟರು. PEPS
|
8. ಅವರಿಗೆ, “ತೀರಿಹೋದ ನನ್ನ ಹೆಂಡತಿಯನ್ನು ಸಮಾಧಿಮಾಡಲು ನೀವು ನಿಜವಾಗಿಯೂ ಸಹಾಯ ಮಾಡಬೇಕೆಂದಿದ್ದರೆ, ಚೋಹರನ ಮಗನಾದ ಎಫ್ರೋನನ ಸಂಗಡ ನನಗೋಸ್ಕರ ಮಾತಾಡಿರಿ.
|
9. ಮಕ್ಪೇಲದ ಗವಿಯನ್ನು ಕೊಂಡುಕೊಳ್ಳಲು ನನಗೆ ಇಷ್ಟವಿದೆ. ಅದು ಎಫ್ರೋನನದು. ಅದು ಅವನ ಜಮೀನಿನ ಅಂಚಿನಲ್ಲಿದೆ. ಅದಕ್ಕಾಗುವ ಬೆಲೆಯನ್ನು ನಾನು ಪೂರ್ತಿ ಕೊಡುತ್ತೇನೆ. ನಾನು ಅದನ್ನು ಸಮಾಧಿಯ ಸ್ಥಳಕ್ಕಾಗಿ ಕೊಂಡುಕೊಂಡಿರುವೆ ಎಂಬುದಕ್ಕೆ ನೀವೆಲ್ಲರೂ ಸಾಕ್ಷಿಗಳಾಗಿರಬೇಕು” ಎಂದು ಹೇಳಿದನು. PEPS
|
11. “ಸ್ವಾಮೀ ನಾನು ಆ ಸ್ಥಳವನ್ನೂ ಆ ಗವಿಯನ್ನೂ ನನ್ನ ಜನರ ಎದುರಿನಲ್ಲಿಯೇ ನಿನಗೆ ಕೊಡುವೆನು. ನಿನ್ನ ಹೆಂಡತಿಯನ್ನು ಅಲ್ಲಿ ಸಮಾಧಿಮಾಡು” ಎಂದು ಹೇಳಿದನು. PEPS
|
13. ಅಬ್ರಹಾಮನು ಜನರೆಲ್ಲರ ಎದುರಿನಲ್ಲಿ ಎಫ್ರೋನನಿಗೆ, “ಆ ಸ್ಥಳಕ್ಕಾಗುವ ಪೂರ್ತಿ ಬೆಲೆಯನ್ನು ನಾನು ನಿನಗೆ ಕೊಡುತ್ತೇನೆ; ನೀನು ಹಣವನ್ನು ತೆಗೆದುಕೊಳ್ಳುವುದಾದರೆ, ನನ್ನ ಹೆಂಡತಿಯನ್ನು ಅಲ್ಲಿ ಸಮಾಧಿಮಾಡುವೆನು” ಎಂದು ಹೇಳಿದನು. PEPS
|
15. “ಸ್ವಾಮೀ, ನನ್ನ ಮಾತನ್ನು ಕೇಳು. ಆ ಸ್ಥಳದ ಬೆಲೆ ನಾನೂರು ಬೆಳ್ಳಿ ರೂಪಾಯಿಗಳಷ್ಟೇ. ಆದರೆ ನಿನಗಾಗಲಿ, ನನಗಾಗಲಿ ಆ ನಾನೂರು ರೂಪಾಯಿ ಹೆಚ್ಚೇನೂ ಅಲ್ಲ. ಸ್ಥಳವನ್ನು ತೆಗೆದುಕೊಂಡು ನಿನ್ನ ಹೆಂಡತಿಯನ್ನು ಸಮಾಧಿಮಾಡು” ಎಂದು ಉತ್ತರಕೊಟ್ಟನು. PEPS
|
16. ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಅಬ್ರಹಾಮನು ಆ ಸ್ಥಳಕ್ಕಾಗಿ ನಾನೂರು ಬೆಳ್ಳಿ ರೂಪಾಯಿಗಳನ್ನು ಹಿತ್ತಿಯರ ಎದುರಿನಲ್ಲಿ ಹೇಳಿದ ಎಫ್ರೋನನಿಗೆ ಎಣಿಸಿಕೊಟ್ಟನು. PEPS
|
17. (17-18) ಈ ಜಮೀನು ಮಮ್ರೆಗೆ ಪೂರ್ವದಲ್ಲಿರುವ ಮಕ್ಪೇಲದಲ್ಲಿತ್ತು. ಅಬ್ರಹಾಮನು ಆ ಜಮೀನಿಗೂ ಅದರಲ್ಲಿದ್ದ ಗವಿಗೂ ಜಮೀನಿನಲ್ಲಿದ್ದ ಎಲ್ಲಾ ಮರಗಳಿಗೂ ಒಡೆಯನಾದನು. ಎಫ್ರೋನನಿಗೂ ಅಬ್ರಹಾಮನಿಗೂ ಆದ ಒಪ್ಪಂದಕ್ಕೆ ನಗರದವರೆಲ್ಲರು ಸಾಕ್ಷಿಗಳಾದರು.
|
19. ಬಳಿಕ ಅಬ್ರಹಾಮನು ತನ್ನ ಹೆಂಡತಿಯಾದ ಸಾರಳನ್ನು ಮಮ್ರೆಗೆ ಸಮೀಪದಲ್ಲಿದ್ದ ಜಮೀನಿನ ಗವಿಯಲ್ಲಿ ಸಮಾಧಿಮಾಡಿದನು. (ಅದು ಕಾನಾನ್ ದೇಶದ ಹೆಬ್ರೋನ್).
|
20. ಅಬ್ರಹಾಮನು ಆ ಜಮೀನನ್ನು ಮತ್ತು ಅದರಲ್ಲಿದ್ದ ಗವಿಯನ್ನು ಹಿತ್ತಿಯರಿಂದ ಕೊಂಡುಕೊಂಡನು. ಅದು ಅವನ ಆಸ್ತಿಯಾಯಿತು. ಅವನು ಅದನ್ನು ಸಮಾಧಿ ಸ್ಥಳವನ್ನಾಗಿ ಉಪಯೋಗಿಸಿದನು. PE
|