1. ದೇವರಾದ ಯೆಹೋವನು ಸೃಷ್ಟಿಸಿದ ಪ್ರಾಣಿಗಳಲ್ಲೆಲ್ಲಾ ಹಾವು ಅತಿ ಬುದ್ಧಿವಂತವಾದ ಮತ್ತು ಕುತಂತ್ರವುಳ್ಳ ಜಂತುವಾಗಿತ್ತು. ಹಾವು ಸ್ತ್ರೀಯನ್ನು ಮೋಸಗೊಳಿಸಬೇಕೆಂದಿತ್ತು. ಹಾವು ಅವಳಿಗೆ, “ಅಮ್ಮಾ, ಈ ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ನೀವು ತಿನ್ನಕೂಡದೆಂದು ದೇವರು ನಿಮಗೆ ಹೇಳಿರುವುದು ನಿಜವೇ?” ಎಂದು ಕೇಳಿತು.
|
3. ಆದರೆ ಒಂದು ಮರದ ಹಣ್ಣನ್ನು ಮಾತ್ರ ನಾವು ತಿನ್ನಕೂಡದು. ದೇವರು ನಮಗೆ, ‘ತೋಟದ ಮಧ್ಯದಲ್ಲಿರುವ ಮರದ ಹಣ್ಣನ್ನು ನೀವು ತಿನ್ನಕೂಡದು; ಆ ಮರವನ್ನು ಮುಟ್ಟಕೂಡದು, ಇಲ್ಲವಾದರೆ ನೀವು ಸಾಯುವಿರಿ’ ಎಂದು ಹೇಳಿದ್ದಾನೆ”‘ ಎಂಬುದಾಗಿ ಉತ್ತರಕೊಟ್ಟಳು.
|
5. ನೀವು ಆ ಮರದ ಹಣ್ಣನ್ನು ತಿಂದರೆ ನಿಮಗೆ ಒಳ್ಳೆಯದರ ಮತ್ತು ಕೆಟ್ಟದ್ದರ ಬಗ್ಗೆ ಜ್ಞಾನ ಬರುತ್ತದೆಯೆಂದು ದೇವರಿಗೆ ಗೊತ್ತಿದೆ. ಅಲ್ಲದೆ ನೀವು ದೇವರಿಗೆ ಸರಿಸಮಾನರಾಗುವಿರಿ” ಎಂದು ಹೇಳಿತು.
|
6. ಸ್ತ್ರೀಗೆ ಆ ಮರವು ಸುಂದರವಾಗಿ ಕಂಡಿತು. ಅದರ ಹಣ್ಣು ಆಕೆಗೆ ತಿನ್ನಲು ಯೋಗ್ಯವಾಗಿ ಕಂಡಿತು. ಆ ಮರವು ತನ್ನನ್ನು ಜ್ಞಾನಿಯನ್ನಾಗಿ ಮಾಡುತ್ತದೆಯೆಂದು ಆಕೆ ಉತ್ಸಾಹಗೊಂಡಳು. ಆದ್ದರಿಂದ ಸ್ತ್ರೀಯು ಆ ಮರದ ಹಣ್ಣನ್ನು ಕಿತ್ತುಕೊಂಡು ತಿಂದಳು; ತನ್ನೊಂದಿಗಿದ್ದ ಗಂಡನಿಗೂ ಸ್ವಲ್ಪ ಹಣ್ಣನ್ನು ಕೊಟ್ಟಳು. ಅವನು ಸಹ ಅದನ್ನು ತಿಂದನು.
|
7. ಕೂಡಲೇ ಪುರುಷನಲ್ಲಿಯೂ ಸ್ತ್ರೀಯಲ್ಲಿಯೂ ಬದಲಾವಣೆಗಳಾದವು. ಅವರ ಕಣ್ಣುಗಳು ತೆರೆದವು. ಅವರಿಗೆ ಎಲ್ಲವೂ ವಿಚಿತ್ರವಾಗಿ ಕಂಡವು. ತಾವು ಬೆತ್ತಲೆಯಿಂದಿರುವುದನ್ನು ಕಂಡು ಅಂಜೂರದ ಎಲೆಗಳನ್ನು ಕಿತ್ತು ಒಂದಕ್ಕೊಂದು ಜೋಡಿಸಿ ಸುತ್ತಿಕೊಂಡರು.
|
8. ಅಂದು ಸಂಜೆ ತಂಗಾಳಿ ಬೀಸುತ್ತಿರಲು ದೇವರಾದ ಯೆಹೋವನು ತೋಟದಲ್ಲಿ ತಿರುಗಾಡುತ್ತಿದ್ದನು. ಆತನ ಸಪ್ಪಳವನ್ನು ಕೇಳಿದ ಪುರುಷನು ಮತ್ತು ಅವನ ಹೆಂಡತಿಯು ತೋಟದ ಮರಗಳ ಮರೆಯಲ್ಲಿ ಅಡಗಿಕೊಂಡರು.
|
10. ಅದಕ್ಕೆ ಪುರುಷನು, “ನೀನು ತೋಟದಲ್ಲಿ ತಿರುಗಾಡುತ್ತಿರುವ ಸಪ್ಪಳವನ್ನು ನಾನು ಕೇಳಿದೆನು. ಆದರೆ ನಾನು ಬೆತ್ತಲೆಯಾಗಿದ್ದರಿಂದ ಭಯದಿಂದ ಅಡಗಿಕೊಂಡೆನು” ಎಂದು ಹೇಳಿದನು.
|
11. ದೇವರು ಪುರುಷನಿಗೆ, “ನೀನು ಬೆತ್ತಲೆಯಾಗಿರುವೆ ಎಂದು ನಿನಗೆ ಹೇಳಿದವರು ಯಾರು? ವಿಶೇಷವಾದ ಆ ಮರದ ಹಣ್ಣನ್ನು ನೀನು ತಿಂದೆಯಾ? ಆ ಮರದ ಹಣ್ಣನ್ನು ತಿನ್ನಕೂಡದೆಂದು ನಾನು ನಿನಗೆ ಆಜ್ಞಾಪಿಸಿದ್ದೆನಲ್ಲಾ!” ಎಂದು ಹೇಳಿದನು.
|
12. ಅದಕ್ಕೆ ಪುರುಷನು, “ನೀನು ನನಗಾಗಿ ಕೊಟ್ಟ ಸ್ತ್ರೀಯು ಆ ಮರದ ಹಣ್ಣನ್ನು ನನಗೆ ಕೊಟ್ಟಳು; ಆದ್ದರಿಂದ ನಾನು ತಿಂದೆ” ಅಂದನು.
|
13. ಆಗ ದೇವರಾದ ಯೆಹೋವನು ಸ್ತ್ರೀಗೆ, “ನೀನು ಮಾಡಿದ್ದೇನು?” ಎಂದು ಕೇಳಿದನು. ಅದಕ್ಕೆ ಸ್ತ್ರೀಯು, “ಆ ಹಾವಿನ ಮೋಸಕ್ಕೆ ಒಳಗಾಗಿ ನಾನು ಆ ಹಣ್ಣನ್ನು ತಿಂದೆ” ಅಂದಳು.
|
14. ಆಗ ದೇವರಾದ ಯೆಹೋವನು ಹಾವಿಗೆ, “ನೀನು ಮಾಡಿದ ಈ ಕೆಟ್ಟಕಾರ್ಯದಿಂದ ನಿನಗೂ ಕೇಡುಗಳಾಗುವುದು. ಬೇರೆಲ್ಲಾ ಪ್ರಾಣಿಗಳಿಗಿಂತಲೂ ನಿನಗೆ ಹೀನಸ್ಥಿತಿ ಉಂಟಾಗುವುದು. ನೀನು ಹೊಟ್ಟೆಯಿಂದಲೇ ತೆವಳಿಕೊಂಡು ನಿನ್ನ ಜೀವಮಾನವೆಲ್ಲಾ ಮಣ್ಣನ್ನೇ ತಿನ್ನಬೇಕು.
|
15. ನೀನು ಮತ್ತು ಸ್ತ್ರೀಯು ಒಬ್ಬರಿಗೊಬ್ಬರು ವೈರಿಗಳಾಗಿರುವಂತೆ ಮಾಡುವೆನು. ನಿನ್ನ ಮಕ್ಕಳು ಮತ್ತು ಅವಳ ಮಕ್ಕಳು ಒಬ್ಬರಿಗೊಬ್ಬರು ವೈರಿಗಳಾಗಿರುವರು. ನೀನು ಆಕೆಯ ಮಗನ ಪಾದವನ್ನು ಕಚ್ಚುವೆ. ಆದರೆ ಅವನು ನಿನ್ನ ತಲೆಯನ್ನು ಜಜ್ಜಿ ಹಾಕುವನು” ಎಂದನು.
|
16. ಬಳಿಕ ದೇವರಾದ ಯೆಹೋವನು ಸ್ತ್ರೀಗೆ, “ನೀನು ಗರ್ಭಿಣಿಯಾಗಿರುವಾಗ ಬಹು ಸಂಕಟಪಡುವೆ. ನೀನು ಮಕ್ಕಳನ್ನು ಹೆರುವಾಗ ಬಹಳ ವೇದನೆಪಡುವೆ. ನೀನು ಗಂಡನನ್ನು ಬಹಳವಾಗಿ ಇಷ್ಟಪಡುವೆ; ಆದರೆ ಅವನು ನಿನ್ನನ್ನು ಆಳುವನು” ಎಂದನು.
|
17. ಆಮೇಲೆ ದೇವರಾದ ಯೆಹೋವನು ಪುರುಷನಿಗೆ, “ವಿಶೇಷವಾದ ಆ ಮರದ ಹಣ್ಣನ್ನು ತಿನ್ನಕೂಡದೆಂದು ನಾನು ನಿನಗೆ ಆಜ್ಞಾಪಿಸಿದ್ದೆ. ಆದರೆ ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ಆ ಮರದ ಹಣ್ಣನ್ನು ತಿಂದೆ. ನಿನ್ನ ದೆಸೆಯಿಂದ ನಾನು ಭೂಮಿಯನ್ನು ಶಪಿಸುವೆನು. ಭೂಮಿಯು ಫಲಿಸುವ ಆಹಾರಕ್ಕಾಗಿ ನೀನು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಕಷ್ಟಪಟ್ಟು ದುಡಿಯಲೇಬೇಕು.
|
18. “ಭೂಮಿಯು ನಿನಗೋಸ್ಕರ ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸುವುದು. ಹೊಲದಲ್ಲಿ ಬೆಳೆಯುವ ಬೆಳೆಯನ್ನು ನೀನು ತಿನ್ನುವೆ.
|
19. ನಿನ್ನ ಮುಖದಲ್ಲಿ ಬೆವರು ಹರಿಯುವ ತನಕ ನೀನು ಆಹಾರಕ್ಕಾಗಿ ಕಷ್ಟಪಟ್ಟು ದುಡಿಯುವೆ. ನೀನು ಸಾಯುವ ದಿನದವರೆಗೆ ಕಷ್ಟಪಟ್ಟು ಕೆಲಸ ಮಾಡುವೆ. ಆಮೇಲೆ ನೀನು ಮಣ್ಣಾಗುವೆ. ನಾನು ನಿನ್ನನ್ನು ನಿರ್ಮಿಸಲು ಮಣ್ಣನ್ನು ಉಪಯೋಗಿಸಿದೆ. ನೀನು ಸತ್ತಾಗ ಮತ್ತೆ ಮಣ್ಣೇ ಆಗುವೆ” ಎಂದನು.
|
20. ಆದಾಮನು ತನ್ನ ಹೆಂಡತಿಗೆ ಹವ್ವ ಎಂದು ಹೆಸರಿಟ್ಟನು. ಆದಾಮನು ಹವ್ವ ಎಂದು ಹೆಸರಿಡಲು ಕಾರಣವೇನೆಂದರೆ ಈ ಲೋಕದಲ್ಲಿ ಹುಟ್ಟಿದ ಪ್ರತಿಯೊಬ್ಬರಿಗೂ ಆಕೆಯೇ ಮೂಲ ತಾಯಿ.
|
22. ದೇವರಾದ ಯೆಹೋವನು, “ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬಗ್ಗೆ ತಿಳಿದುಕೊಂಡು ನಮ್ಮಂತಾದನು. ಈಗ ಮನುಷ್ಯನು ಜೀವದಾಯಕ ಮರದ ಹಣ್ಣನ್ನೇನಾದರೂ ತೆಗೆದುಕೊಂಡು ತಿಂದರೆ ಅವನು ಸದಾಕಾಲ ಬದುಕುವನು” ಅಂದುಕೊಂಡನು.
|
23. ಆದ್ದರಿಂದ ಆತನು ಆದಾಮನನ್ನು ಅವನು ಉತ್ಪತ್ತಿಗೊಂಡಿದ್ದ ನೆಲದಲ್ಲಿ ವ್ಯವಸಾಯ ಮಾಡಲು ಬಲವಂತವಾಗಿ ಏದೆನ್ ತೋಟದಿಂದ ಹೊರಡಿಸಿಬಿಟ್ಟನು.
|
24. ಅಲ್ಲದೆ ಏದೆನ್ ತೋಟವನ್ನು ಸಂರಕ್ಷಿಸುವುದಕ್ಕಾಗಿ ಆತನು ಕೆರೂಬಿದೂತರನ್ನು ತೋಟದ ಪೂರ್ವಭಾಗದಲ್ಲಿ ಇರಿಸಿದನು. ಇದಲ್ಲದೆ ಆತನು ಬೆಂಕಿಯ ಖಡ್ಗವನ್ನು ಅಲ್ಲಿಟ್ಟನು. ಈ ಖಡ್ಗವು ಎಲ್ಲಾ ದಿಕ್ಕುಗಳತ್ತ ತಿರುಗುತ್ತಾ ಧಗಧಗನೆ ಪ್ರಜ್ವಲಿಸುತ್ತಾ ಜೀವದಾಯಕ ಮರದ ಮಾರ್ಗವನ್ನು ಕಾಯುತ್ತಿತ್ತು.
|