1. {ದೀನಳ ಮಾನಭಂಗ} PS ದೀನಳು ಲೇಯಾ ಮತ್ತು ಯಾಕೋಬನ ಮಗಳು. ದೀನಳು ಒಂದು ದಿನ ಆ ದೇಶದ ಸ್ತ್ರೀಯರನ್ನು ನೋಡಲು ಹೊರಗೆ ಹೋದಳು.
|
3. ಶೆಕೆಮನಿಗೆ ದೀನಳ ಮೇಲೆ ಪ್ರೀತಿಯುಂಟಾಗಿ ಆಕೆಯನ್ನು ಮದುವೆ ಮಾಡಿಕೊಳ್ಳಲು ಇಷ್ಟಪಟ್ಟನು. ಅವನು ತನ್ನನ್ನು ಮದುವೆಯಾಗಬೇಕೆಂದು ಆಕೆಯ ಸಂಗಡ ಮನವೊಲಿಸುವ ಮಾತುಗಳನ್ನಾಡಿದನು.
|
5. ಯಾಕೋಬನು ತನ್ನ ಮಗಳಿಗೆ ಶೆಕೆಮನಿಂದ ಮಾನಭಂಗವಾದ ಸುದ್ದಿಯನ್ನು ಕೇಳಿದನು. ಆದರೆ ಅವನ ಗಂಡುಮಕ್ಕಳೆಲ್ಲ ಕುರಿಗಳೊಂದಿಗೆ ಹೊಲದಲ್ಲಿದ್ದುದರಿಂದ ಅವರು ಮನೆಗೆ ಬರುವತನಕ ಏನೂ ಮಾಡಲಿಲ್ಲ.
|
7. ಹೊಲದಲ್ಲಿದ್ದ ಯಾಕೋಬನ ಗಂಡುಮಕ್ಕಳು ನಡೆದ ಸಂಗತಿಯನ್ನು ಕೇಳಿ ತುಂಬ ಕೋಪಗೊಂಡರು. ಶೆಕೆಮನು ಯಾಕೋಬನ ಮಗಳನ್ನು ಮಾನಭಂಗ ಮಾಡಿ ಇಸ್ರೇಲರಿಗೆ ಅವಮಾನ ಮಾಡಿದ್ದರಿಂದ ಅವರು ಆವೇಶಗೊಂಡರು. ಶೆಕೆಮನು ತುಂಬ ಕೆಟ್ಟದ್ದನ್ನು ಮಾಡಿದ್ದರಿಂದ ಅಣ್ಣಂದಿರು ಹೊಲದಿಂದ ಹಿಂತಿರುಗಿದರು. PEPS
|
8. ಆದರೆ ಹಮೋರನು ದೀನಳ ಅಣ್ಣಂದಿರೊಡನೆ ಮಾತಾಡಿದನು. ಅವನು ಅವರಿಗೆ, “ನನ್ನ ಮಗನಾದ ಶೆಕೆಮನು ದೀನಳನ್ನು ತುಂಬ ಇಷ್ಟಪಡುತ್ತಾನೆ. ಅವನು ಆಕೆಯನ್ನು ಮದುವೆ ಮಾಡಿಕೊಳ್ಳಲು ದಯವಿಟ್ಟು ಅವಕಾಶಕೊಡಿ.
|
9. ಈ ಮದುವೆಯು ನಮಗಾಗಿರುವ ಒಂದು ವಿಶೇಷ ಒಪ್ಪಂದವನ್ನು ತೋರಿಸುತ್ತದೆ. ಅದೇನೆಂದರೆ, ನಮ್ಮ ಗಂಡಸರು ನಿಮ್ಮ ಸ್ತ್ರೀಯರನ್ನು ಮದುವೆಯಾಗಬಹುದು ಮತ್ತು ನಿಮ್ಮ ಗಂಡಸರು ನಮ್ಮ ಸ್ತ್ರೀಯರನ್ನು ಮದುವೆಯಾಗಬಹುದು.
|
10. ನೀವು ನಮ್ಮೊಂದಿಗೆ ಒಂದೇ ದೇಶದಲ್ಲಿ ವಾಸವಾಗಿರಬಹುದು. ನಿಮಗೆ ಇಲ್ಲಿ ಜಮೀನು ಮಾಡಿಕೊಳ್ಳಲು ಮತ್ತು ವ್ಯಾಪಾರ ಮಾಡಲು ಸ್ವತಂತ್ರವಿದೆ” ಎಂದು ಹೇಳಿದನು. PEPS
|
11. ಶೆಕೆಮನು ಸಹ ಯಾಕೋಬನೊಡನೆ ಮತ್ತು ದೀನಳ ಅಣ್ಣಂದಿರೊಡನೆ ಮಾತಾಡಿದನು. ಶೆಕೆಮನು ಅವರಿಗೆ, “ದಯವಿಟ್ಟು ನನ್ನನ್ನು ಸ್ವೀಕಾರಮಾಡಿ ನೀವು ಏನೇ ಹೇಳಿದರೂ ನಾನು ಮಾಡುತ್ತೇನೆ.
|
12. ನಾನು ದೀನಳನ್ನು ಮದುವೆಯಾಗಲು ನೀವು ನನಗೆ ಅವಕಾಶಕೊಟ್ಟರೆ ಸಾಕು. ನಾನು ನಿಮಗೆ ಯಾವ ಉಡುಗೊರೆಯನ್ನು ಬೇಕಾದರೂ ಕೊಡುವೆನು. ನೀವು ಏನು ಕೇಳಿದರೂ ಕೊಡುವೆನು. ಆದರೆ ನನಗೆ ದೀನಳನ್ನು ಮದುವೆ ಮಾಡಿಸಿಕೊಡಿ” ಎಂದು ಕೇಳಿಕೊಂಡನು. PEPS
|
13. ಯಾಕೋಬನ ಗಂಡುಮಕ್ಕಳು ಶೆಕೆಮನಿಗೂ ಅವನ ತಂದೆಗೂ ಸುಳ್ಳು ಹೇಳಲು ನಿರ್ಧರಿಸಿದರು. ತಮ್ಮ ತಂಗಿಯಾದ ದೀನಳಿಗೆ ಶೆಕೆಮನು ಅಂಥ ಕೆಟ್ಟಕಾರ್ಯವನ್ನು ಮಾಡಿದ್ದರಿಂದ ಅವರು ಇನ್ನೂ ಆವೇಶದಿಂದ ಇದ್ದರು.
|
14. ಆದ್ದರಿಂದ ಆಕೆಯ ಅಣ್ಣಂದಿರು ಅವನಿಗೆ, “ನೀನು ನಮ್ಮ ತಂಗಿಯನ್ನು ಮದುವೆಯಾಗಲು ನಾವು ಅವಕಾಶ ಕೊಡುವಂತಿಲ್ಲ; ಯಾಕೆಂದರೆ ನಿನಗಿನ್ನೂ ಸುನ್ನತಿಯಾಗಿಲ್ಲ. ನಮ್ಮ ತಂಗಿಯು ನಿನ್ನನ್ನು ಮದುವೆಯಾಗುವುದು ತಪ್ಪಾಗುತ್ತದೆ.
|
15. ಆದರೆ ನೀನು ಮತ್ತು ನಿಮ್ಮ ಪಟ್ಟಣದಲ್ಲಿರುವ ಪ್ರತಿಯೊಬ್ಬ ಗಂಡಸು ನಮ್ಮಂತೆ ಸುನ್ನತಿ ಮಾಡಿಸಿಕೊಂಡರೆ ನೀನು ಆಕೆಯನ್ನು ಮದುವೆಯಾಗಬಹುದು.
|
16. ಆಮೇಲೆ ನಿಮ್ಮ ಗಂಡಸರು ನಮ್ಮ ಸ್ತ್ರೀಯರನ್ನು ಮದುವೆಯಾಗಬಹುದು ಮತ್ತು ನಮ್ಮ ಗಂಡಸರು ನಿಮ್ಮ ಸ್ತ್ರೀಯರನ್ನು ಮದುವೆಯಾಗಬಹುದು. ಆಗ ನಾವು ಒಂದೇ ಜನಾಂಗವಾಗುವೆವು.
|
19. ದೀನಳ ಅಣ್ಣಂದಿರು ಹೇಳಿದ್ದನ್ನು ಮಾಡಲು ಶೆಕೆಮನು ಸಂತೋಷದಿಂದ ಒಪ್ಪಿಕೊಂಡನು. PEPS ಶೆಕೆಮನಿಗೆ ಅವರ ಕುಟುಂಬದಲ್ಲಿ ತುಂಬ ಗೌರವವಿತ್ತು.
|
21. “ಈ ಇಸ್ರೇಲರಿಗೆ ನಮ್ಮ ಸ್ನೇಹಿತರಾಗಿರಲು ಇಷ್ಟ; ಇವರು ನಮ್ಮ ದೇಶದಲ್ಲಿ ವಾಸವಾಗಿದ್ದುಕೊಂಡು ನಮ್ಮೊಂದಿಗೆ ಸಮಾಧಾನದಿಂದಿರುವುದು ನಮಗೂ ಇಷ್ಟ; ನಮ್ಮೆಲ್ಲರಿಗೂ ಬೇಕಾಗುವಷ್ಟು ಭೂಮಿ ನಮ್ಮಲ್ಲಿದೆ. ನಾವು ಅವರ ಸ್ತ್ರೀಯರನ್ನು ಮದುವೆಯಾಗವುದಕ್ಕೂ ನಮ್ಮ ಸ್ತ್ರೀಯರನ್ನು ಅವರಿಗೆ ಮದುವೆ ಮಾಡಿಕೊಡುವುದಕ್ಕೂ ಸಂತೋಷಪಡುತ್ತೇವೆ.
|
22. ಆದರೆ ನಾವು ಮಾಡಬೇಕಾದ ಒಂದೇ ಒಂದು ಕಾರ್ಯವೇನೆಂದರೆ, ಇಸ್ರೇಲರಂತೆ ನಮ್ಮ ಎಲ್ಲಾ ಗಂಡಸರು ಸುನ್ನತಿ ಮಾಡಿಸಿಕೊಳ್ಳಬೇಕು.
|
23. ನಾವು ಹೀಗೆ ಮಾಡಿದರೆ, ಅವರ ಎಲ್ಲಾ ದನಕುರಿಗಳಿಂದಲೂ ಪಶುಗಳಿಂದಲೂ ಐಶ್ವರ್ಯವಂತರಾಗುತ್ತೇವೆ. ನಾವು ಈ ಒಪ್ಪಂದವನ್ನು ಅವರೊಂದಿಗೆ ಮಾಡಿಕೊಂಡರೆ ಅವರು ನಮ್ಮೊಂದಿಗೆ ಇಲ್ಲಿ ವಾಸಿಸುವರು” ಎಂದು ಹೇಳಿದರು.
|
24. ಸಭಾಸ್ಥಳದಲ್ಲಿದ್ದ ಗಂಡಸರೆಲ್ಲರೂ ಹಮೋರ ಮತ್ತು ಶೆಕೆಮರ ಮಾತಿಗೆ ಒಪ್ಪಿಕೊಂಡರು. ಬಳಿಕ ಎಲ್ಲಾ ಗಂಡಸರು ಸುನ್ನತಿ ಮಾಡಿಸಿಕೊಂಡರು. PEPS
|
25. ಮೂರು ದಿನಗದರೂ ಸುನ್ನತಿ ಮಾಡಿಸಿಕೊಂಡಿದ್ದ ಗಂಡಸರು ಇನ್ನೂ ಗಾಯದ ನೋವಿನಲ್ಲಿದ್ದರು. ಈ ಸಮಯದಲ್ಲಿ ಗಂಡಸರು ಬಲಹೀನರಾಗಿರುತ್ತಾರೆ ಎಂಬುದು ಯಾಕೋಬನ ಇಬ್ಬರು ಗಂಡುಮಕ್ಕಳಾದ ಸಿಮೆಯೋನ್ ಮತ್ತು ಲೇವಿಗೆ ತಿಳಿದಿತ್ತು. ಆದ್ದರಿಂದ ಅವರು ಪಟ್ಟಣಕ್ಕೆ ಹೋಗಿ ಅಲ್ಲಿದ್ದ ಎಲ್ಲಾ ಗಂಡಸರನ್ನು ಕೊಂದುಹಾಕಿದರು.
|
26. ದೀನಳ ಅಣ್ಣಂದಿರಾದ ಸಿಮೆಯೋನನು ಮತ್ತು ಲೇವಿಯು ಹಮೋರನನ್ನೂ ಅವನ ಮಗನಾದ ಶೆಕೆಮನನ್ನೂ ಕೊಂದುಹಾಕಿ ದೀನಳನ್ನು ಶೆಕಮನ ಮನೆಯಿಂದ ಕರೆದುಕೊಂಡು ಬಂದರು.
|
27. ಯಾಕೋಬನ ಗಂಡುಮಕ್ಕಳು ಪಟ್ಟಣದೊಳಗೆ ಹೋಗಿ ಅಲ್ಲಿದ್ದ ಪ್ರತಿಯೊಂದನ್ನು ತೆಗೆದುಕೊಂಡರು. ತಮ್ಮ ತಂಗಿಗೆ ಶೆಕೆಮನು ಮಾಡಿದ ಮಾನಭಂಗದಿಂದ ಅವರು ಇನ್ನೂ ಕೋಪದಲ್ಲಿದ್ದರು.
|
28. ಹೀಗೆ ದೀನಳ ಅಣ್ಣಂದಿರು ಅವರ ದನಕುರಿಗಳನ್ನೂ ಕತ್ತೆಗಳನ್ನೂ ಪಟ್ಟಣದಲ್ಲಿಯೂ ಹೊಲದಲ್ಲಿಯೂ ಇದ್ದ ಆಸ್ತಿಯೆಲ್ಲವನ್ನೂ ತೆಗೆದುಕೊಂಡರು.
|
30. ಆದರೆ ಯಾಕೋಬನು ಸಿಮೆಯೋನನಿಗೆ ಮತ್ತು ಲೇವಿಗೆ, “ನೀವು ನನ್ನನ್ನು ಅಪಾಯಕ್ಕೆ ಗುರಿಮಾಡಿದಿರಿ. ಈ ದೇಶದಲ್ಲಿರುವ ಎಲ್ಲಾ ಕಾನಾನ್ಯರು ಮತ್ತು ಪೆರಿಜೀಯರು ನನ್ನನ್ನು ದ್ವೇಷಿಸಿ ನನಗೆ ವಿರೋಧವಾಗುವರು. ನನಗಿರುವ ಜನರು ಕೆಲವರೇ. ಈ ದೇಶದಲ್ಲಿರುವ ಜನರು ಒಟ್ಟಾಗಿ ಸೇರಿಕೊಂಡು ನನಗೆ ವಿರೋಧವಾಗಿ ಹೋರಾಡಿದರೆ ನಾನೂ ನನ್ನ ಜನರೆಲ್ಲರೂ ನಾಶವಾಗುವೆವು” ಎಂದು ಹೇಳಿದನು. PEPS
|
31. ಆದರೆ ದೀನಳ ಅಣ್ಣಂದಿರು, “ನಮ್ಮ ತಂಗಿಯನ್ನು ಆ ಜನರು ಸೂಳೆಯಂತೆ ಉಪಯೋಗಿಸಿಕೊಳ್ಳಲು ನಾವು ಬಿಡಬೇಕೇ? ಇಲ್ಲ, ನಮ್ಮ ತಂಗಿಗೆ ಆ ಜನರು ಮಾಡಿದ್ದು ತಪ್ಪು” ಎಂದು ಹೇಳಿದರು. PE
|