2. ಏಸಾವನು ಕಾನಾನ್ ದೇಶದ ಸ್ತ್ರೀಯರನ್ನು ಮದುವೆಯಾದನು. ಏಸಾವನ ಹೆಂಡತಿಯರು: ಹಿತ್ತಿಯನಾದ ಏಲೋನನ ಮಗಳಾದ ಆದಾ; ಹಿವ್ವಿಯನಾದ ಸಿಬೆಯೋನನಿಗೆ ಹುಟ್ಟಿದ ಅನಾಹ ಎಂಬಾಕೆಯ ಮಗಳಾಗಿದ್ದ ಒಹೊಲೀಬಾಮ;
|
5. ಒಹೊಲೀಬಾಮಳಿಗೆ ಮೂವರು ಗಂಡುಮಕ್ಕಳಿದ್ದರು: ಯೆಗೂಷ, ಯಳಾಮ ಮತ್ತು ಕೋರಹ. ಇವರೆಲ್ಲರೂ ಏಸಾವನ ಗಂಡುಮಕ್ಕಳು ಮತ್ತು ಕಾನಾನ್ ದೇಶದಲ್ಲಿ ಹುಟ್ಟಿದವರು.
|
10. ಏಸಾವನ ಗಂಡುಮಕ್ಕಳು: ಎಲೀಫಜ, ಇವನು ಏಸಾವನಿಗೆ ಆದಾ ಎಂಬಾಕೆಯಲ್ಲಿ ಹುಟ್ಟಿದ ಮಗನು. ರೆಗೂವೇಲ, ಇವನು ಏಸಾವನಿಗೆ ಬಾಸೆಮತಳಲ್ಲಿ ಹುಟ್ಟಿದ ಮಗನು.
|
12. ಎಲೀಫಜನಿಗೆ ತಿಮ್ನ ಎಂಬ ಒಬ್ಬ ದಾಸಿಯೂ ಇದ್ದಳು. ತಿಮ್ನಳಿಗೆ ಮತ್ತು ಎಲೀಫಜನಿಗೆ ಅಮಾಲೇಕ ಎಂಬ ಒಬ್ಬ ಗಂಡುಮಗನಿದ್ದನು.
|
13. ರೆಗೂವೇಲನಿಗೆ ನಾಲ್ಕು ಮಂದಿ ಗಂಡುಮಕ್ಕಳಿದ್ದರು: ನಹತ್, ಜೆರಹ, ಶಮ್ಮಾ ಮತ್ತು ಮಿಜ್ಜಾ. ಇವರು ಏಸಾವನ ಮೊಮ್ಮಕ್ಕಳು. ಇವರು ಏಸಾವನ ಹೆಂಡತಿಯಾದ ಬಾಸೆಮತಳ ಸಂತತಿಯವರು.
|
14. ಏಸಾವನ ಮೂರನೆ ಹೆಂಡತಿಯು ಅನಾಹನ ಮಗಳಾದ ಒಹೊಲೀಬಾಮ; (ಅನಾಹನು ಸಿಬೆಯೋನನ ಮಗನು.) ಏಸಾವನ ಮತ್ತು ಒಹೊಲೀಬಾಮಳ ಮಕ್ಕಳು: ಯೆಗೂಷ್, ಯಳಾಮ್ ಮತ್ತು ಕೋರಹ.
|
15. ಏಸಾವನ ವಂಶಸ್ಥರ ಕುಲಪತಿಗಳು: ಏಸಾವನ ಮೊದಲನೆ ಮಗನಾದ ಎಲೀಫಜ. ಎಲೀಫಜನಿಂದ ಬಂದವರು: ತೇಮಾನ್, ಓಮಾರ್, ಚೆಫೋ, ಕೆನೆಜ್,
|
17. ಏಸಾವನ ಮಗನಾದ ರೆಗೂವೇಲನು ಈ ಕುಟುಂಬಗಳ ತಂದೆಯಾಗಿದ್ದನು: ನಹತ, ಜೆರಹ, ಶಮ್ಮಾ ಮತ್ತು ಮಿಜ್ಜಾ. ಈ ಕುಟುಂಬಗಳೆಲ್ಲವು ಏಸಾವನ ಹೆಂಡತಿಯಾದ ಬಾಸೆಮತಳ ಸಂತತಿಯವರು.
|
18. ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ್ದ ಒಹೊಲೀಬಾಮಳಲ್ಲಿ ಹುಟ್ಟಿದವರು: ಯಗೂಷ್, ಯೆಳಾಮ ಮತ್ತು ಕೋರಹ. ಈ ಮೂವರು ತಮ್ಮ ಕುಟುಂಬಗಳ ತಂದೆಯಾಗಿದ್ದರು.
|
20. ಏಸಾವನಿಗಿಂತ ಮೊದಲು ಹೋರಿಯ ಜನಾಂಗದ ಸೇಯೀರ್ ಎಂಬವನು ಎದೋಮಿನಲ್ಲಿ ವಾಸವಾಗಿದ್ದನು. ಸೇಯೀರನ ಗಂಡುಮಕ್ಕಳು: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ,
|
24. ಸಿಬೆಯೋನನಿಗೆ ಅಯ್ಯಾ ಮತ್ತು ಅನಾಹ ಎಂಬ ಇಬ್ಬರು ಗಂಡುಮಕ್ಕಳಿದ್ದರು. (ತನ್ನ ತಂದೆಯ ಕತ್ತೆಗಳನ್ನು ಮೇಯಿಸುತ್ತಿದ್ದಾಗ ಬಿಸಿನೀರಿನ ಒರತೆಗಳನ್ನು ಕಂಡುಕೊಂಡವನೇ ಅನಾಹ.)
|
35. ಹುಷಾಮನು ಸತ್ತಮೇಲೆ, ಹದದನು ಆ ದೇಶವನ್ನು ಆಳಿದನು. ಹದದನು ಬೆದದನ ಮಗನು. (ಮೊವಾಬ್ಯರನ್ನು ಮಿದ್ಯಾನರ ದೇಶದಲ್ಲಿ ಸೋಲಿಸಿದವನೇ ಬೆದದನು.) ಹದದನು ಅವೀತ್ ಪಟ್ಟಣದವನು.
|
39. ಬಾಳ್ಹಾನಾನನು ಸತ್ತಮೇಲೆ ಆ ದೇಶವನ್ನು ಹದದನು ಆಳಿದನು. ಹದದನು ಪಾಗು ಎಂಬ ಪಟ್ಟಣದವನು. ಹದದನ ಹೆಂಡತಿಯ ಹೆಸರು ಮಹೇಟಬೇಲ್. ಮಹೇಟಬೇಲಳು ಮಟ್ರೇದ ಎಂಬಾಕೆಯ ಮಗಳು. (ಮಟ್ರೇದಳು ಮೇಜಾಹಾಬನ ಮಗಳು.)
|