ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
1. ಆ ಕಾಲದಲ್ಲಿ ಯೆಹೂದನು ತನ್ನ ಸಹೋದರರನ್ನು ಬಿಟ್ಟು ಹೀರಾ ಎಂಬುವನೊಂದಿಗೆ ವಾಸಿಸಲು ಹೋದನು. ಅವನು ಅದುಲ್ಲಾಮ್ ಊರಿನವನು.
2. ಯೆಹೂದನು ಅಲ್ಲಿ ಒಬ್ಬ ಕಾನಾನ್ಯನ ಮಗಳನ್ನು ಕಂಡು ಆಕೆಯನ್ನು ಮದುವೆಮಾಡಿಕೊಂಡನು. ಆ ಹುಡುಗಿಯ ತಂದೆಯ ಹೆಸರು ಶೂಗ.
3. ಆಕೆಯು ಒಬ್ಬ ಮಗನನ್ನು ಹೆತ್ತಳು. ಅವರು ಅವನಿಗೆ ಏರ ಎಂದು ಹೆಸರಿಟ್ಟರು.
4. ಬಳಿಕ ಆಕೆ ಮತ್ತೊಬ್ಬ ಮಗನಿಗೆ ಜನನವಿತ್ತಳು. ಅವರು ಆ ಮಗನಿಗೆ ಓನಾನ ಎಂದು ಹೆಸರಿಟ್ಟರು.
5. ಆಕೆಗೆ ಮೂರನೆಯ ಮಗನು ಹುಟ್ಟಿದಾಗ ಆಕೆ ಅದಕ್ಕೆ ಶೇಲಹ ಎಂದು ಹೆಸರಿಟ್ಟಳು. ಆ ಮಗು ಹುಟ್ಟಿದಾಗ ಯೆಹೂದನು ಕಜೀಬೂರಿನಲ್ಲಿ ವಾಸಿಸುತ್ತಿದ್ದನು.
6. ಯೆಹೂದನು ತನ್ನ ಮೊದಲನೆ ಮಗನಾದ ಏರನಿಗಾಗಿ ಒಬ್ಬ ಕನ್ನಿಕೆಯನ್ನು ಆಯ್ಕೆಮಾಡಿದನು. ಆಕೆಯ ಹೆಸರು ತಾಮಾರ.
7. ಆದರೆ ಏರನು ಅನೇಕ ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ಯೆಹೋವನು ಅವನನ್ನು ಸಾಯಿಸಿದನು.
8. ಆಗ ಯೆಹೂದನು ಏರನ ತಮ್ಮನಾದ ಓನಾನನಿಗೆ, “ಹೋಗು, ಸತ್ತುಹೋದ ನಿನ್ನ ಅಣ್ಣನ ಹೆಂಡತಿಗೆ ಗಂಡನಂತಿರು. ನಿನ್ನ ಮೂಲಕ ಆಕೆಯಲ್ಲಿ ಹುಟ್ಟುವ ಮಕ್ಕಳು ನಿನ್ನ ಅಣ್ಣನಾದ ಏರನ ಮಕ್ಕಳಾಗಿರಲಿ” ಎಂದು ಹೇಳಿದನು.
9. ತಾಮಾರಳಲ್ಲಿ ತನಗೆ ಹುಟ್ಟುವ ಮಕ್ಕಳು ತನ್ನವರಾಗುವುದಿಲ್ಲವೆಂದು ಅರಿತುಕೊಂಡು ಓನಾನನು ಆಕೆಯನ್ನು ಕೂಡಿದರೂ ವೀರ್ಯವನ್ನು ನೆಲದ ಪಾಲು ಮಾಡುತ್ತಿದ್ದನು.
10. ಇದು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿದ್ದರಿಂದ ಆತನು ಓನಾನನನ್ನು ಸಹ ಸಾಯಿಸಿದನು.
11. ಆಗ ಯೆಹೂದನು ತನ್ನ ಸೊಸೆಯಾದ ತಾಮಾರಳಿಗೆ, “ನಿನ್ನ ತಂದೆಯ ಮನೆಗೆ ಹಿಂತಿರುಗಿ ಹೋಗಿ ಅಲ್ಲಿರು. ನನ್ನ ಮಗನಾದ ಶೇಲಹನು ದೊಡ್ಡವನಾಗುವ ತನಕ ಮದುವೆಯಾಗಬೇಡ” ಎಂದು ಹೇಳಿದನು. ಶೇಲಹನು ಸಹ ತನ್ನ ಅಣ್ಣಂದಿರಂತೆ ಸಾಯಬಹುದೆಂದು ಯೆಹೂದನು ಹೆದರಿಕೊಂಡಿದ್ದನು. ಆದ್ದರಿಂದ ತಾಮಾರಳು ತನ್ನ ತಂದೆಯ ಮನೆಗೆ ಹಿಂತಿರುಗಿ ಹೋದಳು.
12. ಆಮೇಲೆ ಬಹುದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ತೀರಿಕೊಂಡಳು. ಯೆಹೂದನು ತನ್ನ ದುಃಖದ ಸಮಯ ತೀರಿದ ಮೇಲೆ ಅದುಲ್ಲಾಮ್ಯದವನಾದ ತನ್ನ ಸ್ನೇಹಿತ ಹೀರಾನೊಂದಿಗೆ ತನ್ನ ಕುರಿಗಳ ಉಣ್ಣೆ ಕತ್ತರಿಸುವುದಕ್ಕಾಗಿ ತಿಮ್ನಾ ಊರಿಗೆ ಹೋದನು.
13. ಮಾವನು ಉಣ್ಣೆ ಕತ್ತರಿಸುವುದಕ್ಕಾಗಿ ತಿಮ್ನಾ ಊರಿಗೆ ಹೋಗುತ್ತಿರುವುದು ತಾಮಾರಳಿಗೆ ತಿಳಿಯಿತು.
14. ತಾಮಾರಳು ಯಾವಾಗಲೂ ವಿಧವೆಯ ವಸ್ತ್ರಗಳನ್ನು ಧರಿಸಿಕೊಂಡಿರುತ್ತಿದ್ದಳು. ಆದರೆ ಈಗ ಆಕೆ ಬೇರೆ ಬಟ್ಟೆಗಳನ್ನು ಧರಿಸಿಕೊಂಡು ತನ್ನ ಮುಖವನ್ನು ಮುಸುಕಿನಿಂದ ಮುಚ್ಚಿಕೊಂಡು ತಿಮ್ನಾ ಊರಿನ ಸಮೀಪದಲ್ಲಿರುವ ಏನಯಿಮೂರಿನ ದಾರಿಯಲ್ಲಿ ಕುಳಿತುಕೊಂಡಳು. ಯೆಹೂದನ ಚಿಕ್ಕಮಗನಾದ ಶೇಲಹನು ಬೆಳೆದು ದೊಡ್ಡವನಾಗಿರುವುದು ತಾಮಾರಳಿಗೆ ತಿಳಿದಿತ್ತು. ಆದರೆ ಆಕೆಗೆ ಅವನನ್ನು ಮದುವೆ ಮಾಡಿಸಲು ಯೆಹೂದನು ಆಲೋಚಿಸಿರಲಿಲ್ಲ.
15. ಯೆಹೂದನು ಆ ದಾರಿಯಲ್ಲಿ ಪ್ರಯಾಣ ಮಾಡುತ್ತಿರಲು ಆಕೆಯನ್ನು ಕಂಡು ವೇಶ್ಯೆಯೆಂದು ಭಾವಿಸಿದನು. (ಆಕೆಯು ವೇಶ್ಯೆಯಂತೆ ಮುಸುಕು ಹಾಕಿಕೊಂಡಿದ್ದಳು.)
16. ಆದ್ದರಿಂದ ಯೆಹೂದನು ಆಕೆಯ ಬಳಿಗೆ ಹೋಗಿ, “ನಾನು ನಿನ್ನನ್ನು ಕೂಡಬಹುದೇ?” ಎಂದು ಕೇಳಿದನು. (ಆಕೆ ತನ್ನ ಸೊಸೆಯಾದ ತಾಮಾರಳೆಂದು ಯೆಹೂದನಿಗೆ ತಿಳಿದಿರಲಿಲ್ಲ.) ಅವಳು “ನೀನು ನನಗೆ ಏನು ಕೊಡುವೆ?” ಎಂದು ಕೇಳಿದಳು.
17. ಯೆಹೂದನು, “ನನ್ನ ಮಂದೆಯಿಂದ ನಿನಗೆ ಒಂದು ಆಡುಮರಿಯನ್ನು ಕಳುಹಿಸಿಕೊಡುವೆ” ಎಂದು ಉತ್ತರಿಸಿದನು. ಅವಳು “ಸರಿ, ನೀನು ನನಗೆ ಆಡುಮರಿಯನ್ನು ಕಳುಹಿಸಿ ಕೊಡುವ ತನಕ ನನ್ನಲ್ಲಿ ಏನಾದರೂ ಒತ್ತೆಯಿಡಬೇಕು” ಎಂದು ಹೇಳಿದಳು.
18. ಯೆಹೂದನು, “ಏನು ಒತ್ತೆಯಿಡಲಿ?” ಎಂದು ಕೇಳಿದನು. ತಾಮಾರಳು, “ನಿನ್ನ ಪತ್ರಗಳ ಮೇಲೆ ಉಪಯೋಗಿಸುವ ನಿನ್ನ ಮುದ್ರೆಯನ್ನೂ ಅದರ ದಾರವನ್ನೂ ಮತ್ತು ನಿನ್ನ ಊರುಗೋಲನ್ನೂ ಕೊಡು” ಎಂದು ಉತ್ತರಿಸಿದಳು. ಯೆಹೂದನು ಅವುಗಳನ್ನು ಆಕೆಗೆ ಕೊಟ್ಟನು. ಯೆಹೂದನು ಆಕೆಯನ್ನು ಕೂಡಿದನು; ಅವಳು ಗರ್ಭಿಣಿಯಾದಳು.
19. ತಾಮಾರಳು ಮನೆಗೆ ಹೋಗಿ ಮುಸುಕನ್ನು ತೆಗೆದುಹಾಕಿ ಮತ್ತೆ ವಿಧವಾವಸ್ತ್ರಗಳನ್ನು ಧರಿಸಿಕೊಂಡಳು.
20. ಯೆಹೂದನು ಮಾತು ಕೊಟ್ಟಿದ್ದಂತೆಯೇ ಒಂದು ಆಡುಮರಿಯನ್ನು ತನ್ನ ಸ್ನೇಹಿತನಾದ ಹೀರಾನ ಮೂಲಕ ಏನಯಿಮಿಗೆ ಕಳುಹಿಸಿ ಆ ಮುದ್ರೆಯನ್ನೂ ಊರುಗೋಲನ್ನೂ ತೆಗೆದುಕೊಂಡು ಬರುವಂತೆ ಅವನಿಗೆ ತಿಳಿಸಿದನು. ಆದರೆ ಅವನು ಅವಳನ್ನು ಕಂಡುಹಿಡಿಯಲಾಗಲಿಲ್ಲ.
21. ಅವನು ಏನಯಿಮ್ ಊರಿನ ಕೆಲವು ಗಂಡಸರಿಗೆ, “ಇಲ್ಲಿಯ ದಾರಿಯ ಸಮೀಪದಲ್ಲಿರುತ್ತಿದ್ದ ವೇಶ್ಯೆಯು ಎಲ್ಲಿದ್ದಾಳೆ?” ಎಂದು ಕೇಳಿದನು. ಅದಕ್ಕೆ ಅವರು, “ಇಲ್ಲಿ ಯಾವ ವೇಶ್ಯೆಯೂ ಇಲ್ಲ” ಎಂದು ಉತ್ತರಿಸಿದರು.
22. ಆದ್ದರಿಂದ ಅವನು ಯೆಹೂದನ ಬಳಿಗೆ ಹಿಂತಿರುಗಿ ಬಂದು, “ನಾನು ಆ ವೇಶ್ಯೆಯನ್ನು ಕಂಡುಹಿಡಿಯಲಾಗಲಿಲ್ಲ. ಅದಲ್ಲದೆ ಆ ಸ್ಥಳದ ಗಂಡಸರು ಅಲ್ಲಿ ಒಬ್ಬ ವೇಶ್ಯೆಯೂ ಇಲ್ಲ ಎಂದು ಹೇಳಿದರು” ಅಂದನು.
23. ಅದಕ್ಕೆ ಯೆಹೂದನು, “ಆಕೆ ಆ ವಸ್ತುಗಳನ್ನು ಇಟ್ಟುಕೊಳ್ಳಲಿ. ಜನರು ನಮ್ಮನ್ನು ಕಂಡು ನಗುವುದು ನನಗೆ ಇಷ್ಟವಿಲ್ಲ. ನಾನು ಅವಳಿಗೆ ಆಡನ್ನು ಕೊಡಲು ಪ್ರಯತ್ನಿಸಿದೆ. ಆದರೆ ಅವಳು ನಿನಗೆ ಸಿಕ್ಕಲಿಲ್ಲವಷ್ಟೆ” ಎಂದು ಹೇಳಿದನು.
24. ಮೂರು ತಿಂಗಳಾದ ಬಳಿಕ, ಯಾರೋ ಒಬ್ಬನು ಯೆಹೂದನಿಗೆ, “ನಿನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಗರ್ಭಿಣಿಯಾಗಿದ್ದಾಳೆ” ಎಂದು ತಿಳಿಸಿದನು. ಆಗ ಯೆಹೂದನು, “ಆಕೆಯನ್ನು ಎಳೆದುಕೊಂಡು ಹೋಗಿ ಸುಟ್ಟುಬಿಡಿ” ಎಂದು ಹೇಳಿದನು.
25. ಆ ಗಂಡಸರು ತಾಮಾರಳನ್ನು ಕೊಲ್ಲಲು ಆಕೆಯ ಬಳಿಗೆ ಹೋದರು. ಆದರೆ ಆಕೆ ತನ್ನ ಮಾವನಿಗೆ, “ನನ್ನನ್ನು ಗರ್ಭಿಣಿ ಮಾಡಿದವನು ಈ ವಸ್ತುಗಳ ಒಡೆಯ. ಈ ವಸ್ತುಗಳನ್ನು ನೋಡು! ಇವು ಯಾರವು? ಈ ಮುದ್ರೆಯೂ ದಾರವೂ ಯಾರವು? ಇದು ಯಾರ ಕೈಕೋಲು?” ಎಂಬ ಸಂದೇಶವನ್ನು ಹೇಳಿ ಕಳುಹಿಸಿದಳು.
26. ಯೆಹೂದನು ಆ ವಸ್ತುಗಳನ್ನು ಗುರುತಿಸಿ, “ಆಕೆ ಸರಿಯಾದದ್ದನ್ನೇ ಮಾಡಿದ್ದಾಳೆ. ನಾನೇ ತಪ್ಪು ಮಾಡಿದೆ. ನಾನು ಆಕೆಗೆ ಮಾತುಕೊಟ್ಟಂತೆ ನನ್ನ ಮಗನಾದ ಶೇಲಹನನ್ನು ಆಕೆಗೆ ಕೊಡಬೇಕಿತ್ತು” ಎಂದು ಹೇಳಿದನು. ಆದರೆ ಯೆಹೂದನು ಆಕೆಯೊಡನೆ ಮತ್ತೆ ಮಲಗಿಕೊಳ್ಳಲಿಲ್ಲ.
27. ತಾಮಾರಳಿಗೆ ಹೆರಿಗೆಕಾಲ ಬಂತು. ಆಕೆಗೆ ಅವಳಿಜವಳಿ ಮಕ್ಕಳಾಗುವುದನ್ನು ದಾದಿಯು ಗಮನಿಸಿದಳು.
28. ಆಕೆಗೆ ಹೆರಿಗೆಯಾಗುವಾಗ ಒಂದು ಮಗು ತನ್ನ ಕೈಚಾಚಿತು. ದಾದಿಯು ಆ ಮಗುವಿನ ಕೈಗೆ ಕೆಂಪುದಾರವನ್ನು ಕಟ್ಟಿ, “ಮೊದಲನೆಯವನು” ಅಂದಳು.
29. ಆದರೆ ಆ ಮಗು ತನ್ನ ಕೈಯನ್ನು ಹಿಂದಕ್ಕೆ ಎಳೆದುಕೊಂಡಿತು. ಆಮೇಲೆ ಮತ್ತೊಂದು ಮಗುವು ಮೊದಲು ಹುಟ್ಟಿತು. ಆದ್ದರಿಂದ ದಾದಿಯು, “ನೀನು ಮೊದಲನೆಯವನನ್ನು ಛೇದಿಸಿಕೊಂಡು ಬಂದೆ” ಅಂದಳು. ಆದ್ದರಿಂದ ಅವರು ಆ ಮಗುವಿಗೆ “ಪೆರೆಚ್” ಎಂದು ಹೆಸರಿಟ್ಟರು.
30. ಆ ಬಳಿಕ ಮತ್ತೊಂದು ಮಗುವು ಹೊರಬಂದಿತು. ಆ ಮಗುವಿನ ಕೈಯಲ್ಲಿ ಕೆಂಪುದಾರವಿತ್ತು. ಅವರು ಅವನಿಗೆ “ಜೆರಹ” ಎಂದು ಹೆಸರಿಟ್ಟರು.

Notes

No Verse Added

Total 50 Chapters, Current Chapter 38 of Total Chapters 50
ಆದಿಕಾಂಡ 38:18
1. ಕಾಲದಲ್ಲಿ ಯೆಹೂದನು ತನ್ನ ಸಹೋದರರನ್ನು ಬಿಟ್ಟು ಹೀರಾ ಎಂಬುವನೊಂದಿಗೆ ವಾಸಿಸಲು ಹೋದನು. ಅವನು ಅದುಲ್ಲಾಮ್ ಊರಿನವನು.
2. ಯೆಹೂದನು ಅಲ್ಲಿ ಒಬ್ಬ ಕಾನಾನ್ಯನ ಮಗಳನ್ನು ಕಂಡು ಆಕೆಯನ್ನು ಮದುವೆಮಾಡಿಕೊಂಡನು. ಹುಡುಗಿಯ ತಂದೆಯ ಹೆಸರು ಶೂಗ.
3. ಆಕೆಯು ಒಬ್ಬ ಮಗನನ್ನು ಹೆತ್ತಳು. ಅವರು ಅವನಿಗೆ ಏರ ಎಂದು ಹೆಸರಿಟ್ಟರು.
4. ಬಳಿಕ ಆಕೆ ಮತ್ತೊಬ್ಬ ಮಗನಿಗೆ ಜನನವಿತ್ತಳು. ಅವರು ಮಗನಿಗೆ ಓನಾನ ಎಂದು ಹೆಸರಿಟ್ಟರು.
5. ಆಕೆಗೆ ಮೂರನೆಯ ಮಗನು ಹುಟ್ಟಿದಾಗ ಆಕೆ ಅದಕ್ಕೆ ಶೇಲಹ ಎಂದು ಹೆಸರಿಟ್ಟಳು. ಮಗು ಹುಟ್ಟಿದಾಗ ಯೆಹೂದನು ಕಜೀಬೂರಿನಲ್ಲಿ ವಾಸಿಸುತ್ತಿದ್ದನು.
6. ಯೆಹೂದನು ತನ್ನ ಮೊದಲನೆ ಮಗನಾದ ಏರನಿಗಾಗಿ ಒಬ್ಬ ಕನ್ನಿಕೆಯನ್ನು ಆಯ್ಕೆಮಾಡಿದನು. ಆಕೆಯ ಹೆಸರು ತಾಮಾರ.
7. ಆದರೆ ಏರನು ಅನೇಕ ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ಯೆಹೋವನು ಅವನನ್ನು ಸಾಯಿಸಿದನು.
8. ಆಗ ಯೆಹೂದನು ಏರನ ತಮ್ಮನಾದ ಓನಾನನಿಗೆ, “ಹೋಗು, ಸತ್ತುಹೋದ ನಿನ್ನ ಅಣ್ಣನ ಹೆಂಡತಿಗೆ ಗಂಡನಂತಿರು. ನಿನ್ನ ಮೂಲಕ ಆಕೆಯಲ್ಲಿ ಹುಟ್ಟುವ ಮಕ್ಕಳು ನಿನ್ನ ಅಣ್ಣನಾದ ಏರನ ಮಕ್ಕಳಾಗಿರಲಿ” ಎಂದು ಹೇಳಿದನು.
9. ತಾಮಾರಳಲ್ಲಿ ತನಗೆ ಹುಟ್ಟುವ ಮಕ್ಕಳು ತನ್ನವರಾಗುವುದಿಲ್ಲವೆಂದು ಅರಿತುಕೊಂಡು ಓನಾನನು ಆಕೆಯನ್ನು ಕೂಡಿದರೂ ವೀರ್ಯವನ್ನು ನೆಲದ ಪಾಲು ಮಾಡುತ್ತಿದ್ದನು.
10. ಇದು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿದ್ದರಿಂದ ಆತನು ಓನಾನನನ್ನು ಸಹ ಸಾಯಿಸಿದನು.
11. ಆಗ ಯೆಹೂದನು ತನ್ನ ಸೊಸೆಯಾದ ತಾಮಾರಳಿಗೆ, “ನಿನ್ನ ತಂದೆಯ ಮನೆಗೆ ಹಿಂತಿರುಗಿ ಹೋಗಿ ಅಲ್ಲಿರು. ನನ್ನ ಮಗನಾದ ಶೇಲಹನು ದೊಡ್ಡವನಾಗುವ ತನಕ ಮದುವೆಯಾಗಬೇಡ” ಎಂದು ಹೇಳಿದನು. ಶೇಲಹನು ಸಹ ತನ್ನ ಅಣ್ಣಂದಿರಂತೆ ಸಾಯಬಹುದೆಂದು ಯೆಹೂದನು ಹೆದರಿಕೊಂಡಿದ್ದನು. ಆದ್ದರಿಂದ ತಾಮಾರಳು ತನ್ನ ತಂದೆಯ ಮನೆಗೆ ಹಿಂತಿರುಗಿ ಹೋದಳು.
12. ಆಮೇಲೆ ಬಹುದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ತೀರಿಕೊಂಡಳು. ಯೆಹೂದನು ತನ್ನ ದುಃಖದ ಸಮಯ ತೀರಿದ ಮೇಲೆ ಅದುಲ್ಲಾಮ್ಯದವನಾದ ತನ್ನ ಸ್ನೇಹಿತ ಹೀರಾನೊಂದಿಗೆ ತನ್ನ ಕುರಿಗಳ ಉಣ್ಣೆ ಕತ್ತರಿಸುವುದಕ್ಕಾಗಿ ತಿಮ್ನಾ ಊರಿಗೆ ಹೋದನು.
13. ಮಾವನು ಉಣ್ಣೆ ಕತ್ತರಿಸುವುದಕ್ಕಾಗಿ ತಿಮ್ನಾ ಊರಿಗೆ ಹೋಗುತ್ತಿರುವುದು ತಾಮಾರಳಿಗೆ ತಿಳಿಯಿತು.
14. ತಾಮಾರಳು ಯಾವಾಗಲೂ ವಿಧವೆಯ ವಸ್ತ್ರಗಳನ್ನು ಧರಿಸಿಕೊಂಡಿರುತ್ತಿದ್ದಳು. ಆದರೆ ಈಗ ಆಕೆ ಬೇರೆ ಬಟ್ಟೆಗಳನ್ನು ಧರಿಸಿಕೊಂಡು ತನ್ನ ಮುಖವನ್ನು ಮುಸುಕಿನಿಂದ ಮುಚ್ಚಿಕೊಂಡು ತಿಮ್ನಾ ಊರಿನ ಸಮೀಪದಲ್ಲಿರುವ ಏನಯಿಮೂರಿನ ದಾರಿಯಲ್ಲಿ ಕುಳಿತುಕೊಂಡಳು. ಯೆಹೂದನ ಚಿಕ್ಕಮಗನಾದ ಶೇಲಹನು ಬೆಳೆದು ದೊಡ್ಡವನಾಗಿರುವುದು ತಾಮಾರಳಿಗೆ ತಿಳಿದಿತ್ತು. ಆದರೆ ಆಕೆಗೆ ಅವನನ್ನು ಮದುವೆ ಮಾಡಿಸಲು ಯೆಹೂದನು ಆಲೋಚಿಸಿರಲಿಲ್ಲ.
15. ಯೆಹೂದನು ದಾರಿಯಲ್ಲಿ ಪ್ರಯಾಣ ಮಾಡುತ್ತಿರಲು ಆಕೆಯನ್ನು ಕಂಡು ವೇಶ್ಯೆಯೆಂದು ಭಾವಿಸಿದನು. (ಆಕೆಯು ವೇಶ್ಯೆಯಂತೆ ಮುಸುಕು ಹಾಕಿಕೊಂಡಿದ್ದಳು.)
16. ಆದ್ದರಿಂದ ಯೆಹೂದನು ಆಕೆಯ ಬಳಿಗೆ ಹೋಗಿ, “ನಾನು ನಿನ್ನನ್ನು ಕೂಡಬಹುದೇ?” ಎಂದು ಕೇಳಿದನು. (ಆಕೆ ತನ್ನ ಸೊಸೆಯಾದ ತಾಮಾರಳೆಂದು ಯೆಹೂದನಿಗೆ ತಿಳಿದಿರಲಿಲ್ಲ.) ಅವಳು “ನೀನು ನನಗೆ ಏನು ಕೊಡುವೆ?” ಎಂದು ಕೇಳಿದಳು.
17. ಯೆಹೂದನು, “ನನ್ನ ಮಂದೆಯಿಂದ ನಿನಗೆ ಒಂದು ಆಡುಮರಿಯನ್ನು ಕಳುಹಿಸಿಕೊಡುವೆ” ಎಂದು ಉತ್ತರಿಸಿದನು. ಅವಳು “ಸರಿ, ನೀನು ನನಗೆ ಆಡುಮರಿಯನ್ನು ಕಳುಹಿಸಿ ಕೊಡುವ ತನಕ ನನ್ನಲ್ಲಿ ಏನಾದರೂ ಒತ್ತೆಯಿಡಬೇಕು” ಎಂದು ಹೇಳಿದಳು.
18. ಯೆಹೂದನು, “ಏನು ಒತ್ತೆಯಿಡಲಿ?” ಎಂದು ಕೇಳಿದನು. ತಾಮಾರಳು, “ನಿನ್ನ ಪತ್ರಗಳ ಮೇಲೆ ಉಪಯೋಗಿಸುವ ನಿನ್ನ ಮುದ್ರೆಯನ್ನೂ ಅದರ ದಾರವನ್ನೂ ಮತ್ತು ನಿನ್ನ ಊರುಗೋಲನ್ನೂ ಕೊಡು” ಎಂದು ಉತ್ತರಿಸಿದಳು. ಯೆಹೂದನು ಅವುಗಳನ್ನು ಆಕೆಗೆ ಕೊಟ್ಟನು. ಯೆಹೂದನು ಆಕೆಯನ್ನು ಕೂಡಿದನು; ಅವಳು ಗರ್ಭಿಣಿಯಾದಳು.
19. ತಾಮಾರಳು ಮನೆಗೆ ಹೋಗಿ ಮುಸುಕನ್ನು ತೆಗೆದುಹಾಕಿ ಮತ್ತೆ ವಿಧವಾವಸ್ತ್ರಗಳನ್ನು ಧರಿಸಿಕೊಂಡಳು.
20. ಯೆಹೂದನು ಮಾತು ಕೊಟ್ಟಿದ್ದಂತೆಯೇ ಒಂದು ಆಡುಮರಿಯನ್ನು ತನ್ನ ಸ್ನೇಹಿತನಾದ ಹೀರಾನ ಮೂಲಕ ಏನಯಿಮಿಗೆ ಕಳುಹಿಸಿ ಮುದ್ರೆಯನ್ನೂ ಊರುಗೋಲನ್ನೂ ತೆಗೆದುಕೊಂಡು ಬರುವಂತೆ ಅವನಿಗೆ ತಿಳಿಸಿದನು. ಆದರೆ ಅವನು ಅವಳನ್ನು ಕಂಡುಹಿಡಿಯಲಾಗಲಿಲ್ಲ.
21. ಅವನು ಏನಯಿಮ್ ಊರಿನ ಕೆಲವು ಗಂಡಸರಿಗೆ, “ಇಲ್ಲಿಯ ದಾರಿಯ ಸಮೀಪದಲ್ಲಿರುತ್ತಿದ್ದ ವೇಶ್ಯೆಯು ಎಲ್ಲಿದ್ದಾಳೆ?” ಎಂದು ಕೇಳಿದನು. ಅದಕ್ಕೆ ಅವರು, “ಇಲ್ಲಿ ಯಾವ ವೇಶ್ಯೆಯೂ ಇಲ್ಲ” ಎಂದು ಉತ್ತರಿಸಿದರು.
22. ಆದ್ದರಿಂದ ಅವನು ಯೆಹೂದನ ಬಳಿಗೆ ಹಿಂತಿರುಗಿ ಬಂದು, “ನಾನು ವೇಶ್ಯೆಯನ್ನು ಕಂಡುಹಿಡಿಯಲಾಗಲಿಲ್ಲ. ಅದಲ್ಲದೆ ಸ್ಥಳದ ಗಂಡಸರು ಅಲ್ಲಿ ಒಬ್ಬ ವೇಶ್ಯೆಯೂ ಇಲ್ಲ ಎಂದು ಹೇಳಿದರು” ಅಂದನು.
23. ಅದಕ್ಕೆ ಯೆಹೂದನು, “ಆಕೆ ವಸ್ತುಗಳನ್ನು ಇಟ್ಟುಕೊಳ್ಳಲಿ. ಜನರು ನಮ್ಮನ್ನು ಕಂಡು ನಗುವುದು ನನಗೆ ಇಷ್ಟವಿಲ್ಲ. ನಾನು ಅವಳಿಗೆ ಆಡನ್ನು ಕೊಡಲು ಪ್ರಯತ್ನಿಸಿದೆ. ಆದರೆ ಅವಳು ನಿನಗೆ ಸಿಕ್ಕಲಿಲ್ಲವಷ್ಟೆ” ಎಂದು ಹೇಳಿದನು.
24. ಮೂರು ತಿಂಗಳಾದ ಬಳಿಕ, ಯಾರೋ ಒಬ್ಬನು ಯೆಹೂದನಿಗೆ, “ನಿನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಗರ್ಭಿಣಿಯಾಗಿದ್ದಾಳೆ” ಎಂದು ತಿಳಿಸಿದನು. ಆಗ ಯೆಹೂದನು, “ಆಕೆಯನ್ನು ಎಳೆದುಕೊಂಡು ಹೋಗಿ ಸುಟ್ಟುಬಿಡಿ” ಎಂದು ಹೇಳಿದನು.
25. ಗಂಡಸರು ತಾಮಾರಳನ್ನು ಕೊಲ್ಲಲು ಆಕೆಯ ಬಳಿಗೆ ಹೋದರು. ಆದರೆ ಆಕೆ ತನ್ನ ಮಾವನಿಗೆ, “ನನ್ನನ್ನು ಗರ್ಭಿಣಿ ಮಾಡಿದವನು ವಸ್ತುಗಳ ಒಡೆಯ. ವಸ್ತುಗಳನ್ನು ನೋಡು! ಇವು ಯಾರವು? ಮುದ್ರೆಯೂ ದಾರವೂ ಯಾರವು? ಇದು ಯಾರ ಕೈಕೋಲು?” ಎಂಬ ಸಂದೇಶವನ್ನು ಹೇಳಿ ಕಳುಹಿಸಿದಳು.
26. ಯೆಹೂದನು ವಸ್ತುಗಳನ್ನು ಗುರುತಿಸಿ, “ಆಕೆ ಸರಿಯಾದದ್ದನ್ನೇ ಮಾಡಿದ್ದಾಳೆ. ನಾನೇ ತಪ್ಪು ಮಾಡಿದೆ. ನಾನು ಆಕೆಗೆ ಮಾತುಕೊಟ್ಟಂತೆ ನನ್ನ ಮಗನಾದ ಶೇಲಹನನ್ನು ಆಕೆಗೆ ಕೊಡಬೇಕಿತ್ತು” ಎಂದು ಹೇಳಿದನು. ಆದರೆ ಯೆಹೂದನು ಆಕೆಯೊಡನೆ ಮತ್ತೆ ಮಲಗಿಕೊಳ್ಳಲಿಲ್ಲ.
27. ತಾಮಾರಳಿಗೆ ಹೆರಿಗೆಕಾಲ ಬಂತು. ಆಕೆಗೆ ಅವಳಿಜವಳಿ ಮಕ್ಕಳಾಗುವುದನ್ನು ದಾದಿಯು ಗಮನಿಸಿದಳು.
28. ಆಕೆಗೆ ಹೆರಿಗೆಯಾಗುವಾಗ ಒಂದು ಮಗು ತನ್ನ ಕೈಚಾಚಿತು. ದಾದಿಯು ಮಗುವಿನ ಕೈಗೆ ಕೆಂಪುದಾರವನ್ನು ಕಟ್ಟಿ, “ಮೊದಲನೆಯವನು” ಅಂದಳು.
29. ಆದರೆ ಮಗು ತನ್ನ ಕೈಯನ್ನು ಹಿಂದಕ್ಕೆ ಎಳೆದುಕೊಂಡಿತು. ಆಮೇಲೆ ಮತ್ತೊಂದು ಮಗುವು ಮೊದಲು ಹುಟ್ಟಿತು. ಆದ್ದರಿಂದ ದಾದಿಯು, “ನೀನು ಮೊದಲನೆಯವನನ್ನು ಛೇದಿಸಿಕೊಂಡು ಬಂದೆ” ಅಂದಳು. ಆದ್ದರಿಂದ ಅವರು ಮಗುವಿಗೆ “ಪೆರೆಚ್” ಎಂದು ಹೆಸರಿಟ್ಟರು.
30. ಬಳಿಕ ಮತ್ತೊಂದು ಮಗುವು ಹೊರಬಂದಿತು. ಮಗುವಿನ ಕೈಯಲ್ಲಿ ಕೆಂಪುದಾರವಿತ್ತು. ಅವರು ಅವನಿಗೆ “ಜೆರಹ” ಎಂದು ಹೆಸರಿಟ್ಟರು.
Total 50 Chapters, Current Chapter 38 of Total Chapters 50
×

Alert

×

kannada Letters Keypad References