1. {ಈಜಿಪ್ಟಿನಲ್ಲಿ ಯೋಸೇಫನನ್ನು ಪೋಟೀಫರನಿಗೆ ಮಾರಿದ್ದು} PS ಯೋಸೇಫನನ್ನು ಖರೀದಿಮಾಡಿದ ವ್ಯಾಪಾರಿಗಳು ಅವನನ್ನು ಈಜಿಪ್ಟಿಗೆ ತೆಗೆದುಕೊಂಡು ಬಂದು ಫರೋಹನ ಕಾವಲುಗಾರರ ನಾಯಕನಾದ ಪೋಟೀಫರನಿಗೆ ಮಾರಿದರು.
|
3. ಯೆಹೋವನು ಯೋಸೇಫನ ಸಂಗಡವಿದ್ದು ಅವನನ್ನು ಎಲ್ಲಾ ಕೆಲಸಕಾರ್ಯಗಳಲ್ಲಿ ಯಶಸ್ವಿಯಾಗುವಂತೆ ಮಾಡುತ್ತಿರುವುದನ್ನು ಪೋಟೀಫರನು ಗಮನಿಸಿದನು.
|
4. ಪೋಟೀಫರನು ಯೋಸೇಫನ ವಿಷಯದಲ್ಲಿ ತುಂಬ ಸಂತೋಷಪಟ್ಟು ಸ್ವಂತ ಸೇವಕನನ್ನಾಗಿ ಮಾಡಿಕೊಂಡನು; ಅಲ್ಲದೆ ಮನೆಯ ಮೇಲ್ವಿಚಾರಣೆಯನ್ನು ಒಪ್ಪಿಸಿಕೊಟ್ಟನು; ತನ್ನ ಆಸ್ತಿಗೆಲ್ಲಾ ಮೇಲಾಧಿಕಾರಿಯನ್ನಾಗಿ ನೇಮಿಸಿದನು.
|
5. ಪೋಟೀಫರನು ಯೋಸೇಫನಿಗೆ ಮನೆಯ ಮೇಲ್ವಿಚಾರಣೆಯನ್ನು ಕೊಟ್ಟು ಆಸ್ತಿಗೆ ಅವನನ್ನು ಜವಾಬ್ದಾರನನ್ನಾಗಿ ಮಾಡಿದ ಮೇಲೆ ಯೆಹೋವನು ಪೋಟೀಫರನ ಮನೆಯನ್ನೂ ಬೆಳೆಗಳನ್ನೂ ಆಸ್ತಿಯನ್ನೂ ಆಶೀರ್ವದಿಸಿದನು.
|
6. ಆದ್ದರಿಂದ ಪೋಟೀಫರನು ತಾನು ಊಟಮಾಡುವ ಆಹಾರವೊಂದನ್ನು ಬಿಟ್ಟು ಉಳಿದೆಲ್ಲದರ ಜವಾಬ್ದಾರಿಯನ್ನು ಯೋಸೇಫನಿಗೆ ವಹಿಸಿ ನಿಶ್ಚಿಂತೆಯಿಂದ ಇದ್ದನು. PS ಯೋಸೇಫನು ನೋಡಲು ಸುಂದರನಾಗಿಯೂ ರೂಪವಂತನಾಗಿಯೂ ಇದ್ದನು.
|
7. {ಯೋಸೇಫನು ಪೋಟೀಫರನ ಹೆಂಡತಿಯನ್ನು ತಿರಸ್ಕರಿಸಿದ್ದು} PS ಸ್ವಲ್ಪ ಕಾಲದನಂತರ, ಯೋಸೇಫನ ಒಡೆಯನ ಹೆಂಡತಿಯು ಯೋಸೇಫನ ಮೇಲೆ ಆಸೆಪಟ್ಟಳು. ಒಂದು ದಿನ ಆಕೆ ಅವನಿಗೆ, “ನನ್ನೊಂದಿಗೆ ಮಲಗಿಕೊ” ಎಂದು ಹೇಳಿದಳು. PEPS
|
8. ಆದರೆ ಯೋಸೇಫನು ತಿರಸ್ಕರಿಸಿದನು. ಅವನು, “ನನ್ನ ಧಣಿಯು ಈ ಮನೆಯ ಜವಾಬ್ದಾರಿಕೆಗಳನ್ನೆಲ್ಲಾ ನನಗೆ ವಹಿಸಿ ನಿಶ್ಚಿಂತೆಯಿಂದಿದ್ದಾನೆ.
|
9. ನನ್ನ ಧಣಿಯು ಈ ಮನೆಯ ಸರ್ವಾಧಿಕಾರವನ್ನು ನನಗೆ ಕೊಟ್ಟಿದ್ದರೂ ತನ್ನ ಧರ್ಮಪತ್ನಿಯಾದ ನಿನ್ನನ್ನು ನನಗೆ ಅಧೀನಪಡಿಸಿಲ್ಲ. ಹೀಗಿರಲು ಇಂಥಾ ಮಹಾ ದುಷ್ಕೃತ್ಯವನ್ನು ನಡೆಸಿ ದೇವರಿಗೆ ವಿರುದ್ಧವಾಗಿ ಹೇಗೆ ಪಾಪಮಾಡಲಿ” ಎಂದು ಉತ್ತರಕೊಟ್ಟನು. PEPS
|
12. ಅವನ ಧಣಿಯ ಹೆಂಡತಿಯು ಅವನ ಮೇಲಂಗಿಯನ್ನು ಹಿಡಿದುಕೊಂಡು, “ಬಾ ನನ್ನೊಂದಿಗೆ ಮಲಗಿಕೊ” ಎಂದು ಕರೆದಳು. ಕೂಡಲೇ ಯೋಸೇಫನು ತನ್ನ ಮೇಲಂಗಿಯನ್ನೇ ಬಿಟ್ಟು ಅಲ್ಲಿಂದ ಓಡಿಹೋದನು. PEPS
|
14. ಮನೆಯ ಹೊರಗಿದ್ದ ಸೇವಕರನ್ನು ಕರೆದು, “ನೋಡಿ, ನಮಗೆ ಅವಮಾನ ಮಾಡುವುದಕ್ಕಾಗಿ ಈ ಇಬ್ರಿಯ ಗುಲಾಮನನ್ನು ಇಲ್ಲಿಗೆ ತರಲಾಗಿದೆ. ಅವನು ಮನೆಯೊಳಗೆ ಬಂದು ನನ್ನ ಮೇಲೆ ಬಲಾತ್ಕಾರ ಮಾಡಲು ಪ್ರಯತ್ನಿಸಿದ. ಆಗ ನಾನು ಗಟ್ಟಿಯಾಗಿ ಕೂಗಿಕೊಂಡೆ.
|
17. ಪತಿಯು ಬಂದಾಗ ಆಕೆ ಅದೇ ರೀತಿ ಹೇಳಿ, “ನೀನು ಸೇರಿಸಿಕೊಂಡ ಈ ಇಬ್ರಿಯ ಗುಲಾಮನು ನನ್ನ ಮೇಲೆ ಬಲಾತ್ಕಾರ ಮಾಡಲು ಪ್ರಯತ್ನಿಸಿದ.
|
20. ರಾಜನ ವೈರಿಗಳನ್ನು ಹಾಕುವ ಒಂದು ಸೆರೆಮನೆಯಿತ್ತು. ಆದ್ದರಿಂದ ಪೋಟೀಫರನು ಯೋಸೇಫನನ್ನು ಆ ಸೆರೆಮನೆಗೆ ಹಾಕಿಸಿದನು. ಅಂದಿನಿಂದ ಯೋಸೇಫನು ಅಲ್ಲಿದ್ದನು. PS
|
21. {ಯೋಸೇಫನಿಗೆ ಸೆರೆವಾಸ} PS ಆದರೆ ಯೆಹೋವನು ಯೋಸೇಫನ ಸಂಗಡವಿದ್ದು ಕರುಣೆತೋರಿದನು. ಸ್ವಲ್ಪಕಾಲವಾದ ಮೇಲೆ ಸೆರೆಮನೆಯ ಮುಖ್ಯಾಧಿಕಾರಿಯು ಯೋಸೇಫನನ್ನು ಪ್ರೀತಿಸತೊಡಗಿದನು.
|
22. ಅವನು ಎಲ್ಲಾ ಕೈದಿಗಳನ್ನು ಯೋಸೇಫನ ವಶಕ್ಕೆ ಒಪ್ಪಿಸಿದನು. ಅಲ್ಲಿ ಮಾಡಬೇಕಾದದ್ದನ್ನೆಲ್ಲಾ ಯೋಸೇಫನೇ ಮಾಡಿಸುತ್ತಿದ್ದನು.
|
23. ಯೆಹೋವನು ಯೋಸೇಫನ ಸಂಗಡವಿದ್ದು ಅವನ ಎಲ್ಲಾ ಕೆಲಸಕಾರ್ಯಗಳನ್ನು ಯಶಸ್ವಿಗೊಳಿಸುತ್ತಿದ್ದದ್ದರಿಂದ ಮುಖ್ಯಾಧಿಕಾರಿಯು ಎಲ್ಲಾ ವಿಷಯಗಳನ್ನು ಯೋಸೇಫನಿಗೆ ವಹಿಸಿ ನಿಶ್ಚಿಂತೆಯಾಗಿದ್ದನು. PE
|