1. {ಫರೋಹನ ಕನಸುಗಳು} PS ಎರಡು ವರ್ಷಗಳ ನಂತರ ಫರೋಹನಿಗೆ ಒಂದು ಕನಸಾಯಿತು. ಫರೋಹನು ಕನಸಿನಲ್ಲಿ ನೈಲ್ ನದಿಯ ತೀರದಲ್ಲಿ ನಿಂತಿದ್ದನು.
|
3. ಬಳಿಕ ಬಡಕಲಾಗಿದ್ದ ಮತ್ತು ಕುರೂಪವಾಗಿದ್ದ ಏಳು ಹಸುಗಳು ನದಿಯೊಳಗಿಂದ ಬಂದು ಲಕ್ಷಣವಾಗಿದ್ದ ಏಳು ಹಸುಗಳ ಪಕ್ಕದಲ್ಲಿ ನಿಂತುಕೊಂಡವು.
|
5. ಫರೋಹನು ಮತ್ತೆ ಮಲಗಿಕೊಂಡನು. ಅವನಿಗೆ ಎರಡನೆಯ ಕನಸಾಯಿತು. ಪುಷ್ಟಿಯುಳ್ಳ ಏಳು ತೆನೆಗಳು ಒಂದೇ ಗಿಡದಲ್ಲಿ ಹುಟ್ಟಿದವು.
|
7. ಬತ್ತಿಹೋಗಿದ್ದ ತೆನೆಗಳು ಪುಷ್ಟಿಯಾಗಿದ್ದ ತೆನೆಗಳನ್ನು ತಿಂದುಬಿಟ್ಟವು. ಫರೋಹನು ಎಚ್ಚರಗೊಂಡಾಗ ಅದು ಕೇವಲ ಕನಸೆಂದು ತಿಳಿದುಕೊಂಡನು.
|
8. ಮರುದಿನ ಮುಂಜಾನೆ ಈ ಕನಸುಗಳ ಬಗ್ಗೆ ತುಂಬ ಚಿಂತೆಗೊಳಗಾಗಿ ಈಜಿಪ್ಟಿನಲ್ಲಿದ್ದ ಎಲ್ಲಾ ಮಂತ್ರಗಾರರನ್ನೂ ಎಲ್ಲಾ ವಿದ್ವಾಂಸರನ್ನೂ ಕರೆಯಿಸಿ ಕನಸುಗಳನ್ನು ತಿಳಿಸಿದನು. ಆದರೆ ಅವರಲ್ಲಿ ಯಾರಿಗೂ ಕನಸುಗಳ ಅರ್ಥವನ್ನು ತಿಳಿಸುವುದಕ್ಕಾಗಲಿ ವಿವರಿಸುವುದಕ್ಕಾಗಲಿ ಆಗಲಿಲ್ಲ. PS
|
9. {ಪಾನದಾಯಕನು ಫರೋಹನಿಗೆ ಯೋಸೇಫನ ಬಗ್ಗೆ ತಿಳಿಸಿದ್ದು} PS ಆಗ ಪಾನದಾಯಕನು ಯೋಸೇಫನನ್ನು ಜ್ಞಾಪಿಸಿಕೊಂಡು ಫರೋಹನಿಗೆ, “ನನಗೆ ಸಂಭವಿಸಿದ್ದು ನನ್ನ ನೆನಪಿಗೆ ಬರುತ್ತಿದೆ.
|
12. ನಮ್ಮ ಜೊತೆಯಲ್ಲಿ ಒಬ್ಬ ಇಬ್ರಿಯ ಯುವಕನಿದ್ದನು. ಅವನು ಕಾವಲುಗಾರರ ಅಧಿಕಾರಿಯ ಸೇವಕನಾಗಿದ್ದನು. ನಾವು ಅವನಿಗೆ ನಮ್ಮ ಕನಸುಗಳನ್ನು ತಿಳಿಸಿದೆವು. ಅವನು ನಮಗೆ ಅವುಗಳನ್ನು ವಿವರಿಸಿ ನಮ್ಮ ಕನಸಿನ ಅರ್ಥವನ್ನು ತಿಳಿಸಿದನು.
|
13. ಅವನು ಹೇಳಿದ ಅರ್ಥಕ್ಕೆ ಸರಿಯಾಗಿ ನನಗೆ ಆಯಿತು; ಮೊದಲಿನ ಉದ್ಯೋಗವು ದೊರೆಯಿತು; ಅವನು ಭಕ್ಷ್ಯಗಾರನನ್ನು ಕುರಿತು ತಿಳಿಸಿದಂತೆಯೇ ಅವನಿಗೆ ಮರಣದಂಡನೆ ಆಯಿತು” ಎಂದು ಹೇಳಿದನು. PS
|
14. {ಕನಸುಗಳ ಅರ್ಥವನ್ನು ತಿಳಿಸಲು ಯೋಸೇಫನನ್ನು ಕರೆಸಿದ್ದು} PS ಆಗ ಫರೋಹನು ಯೋಸೇಫನನ್ನು ಸೆರೆಮನೆಯಿಂದ ಕರೆಸಿದನು. ಯೋಸೇಫನು ಕ್ಷೌರಮಾಡಿಕೊಂಡು ಶುದ್ಧವಾದ ಬಟ್ಟೆಗಳನ್ನು ಹಾಕಿಕೊಂಡು ಹೋಗಿ ಫರೋಹನ ಮುಂದೆ ನಿಂತುಕೊಂಡನು.
|
15. ಫರೋಹನು ಯೋಸೇಫನಿಗೆ, “ನನಗೆ ಒಂದು ಕನಸಾಯಿತು. ಆದರೆ ಅದರ ಅರ್ಥವನ್ನು ತಿಳಿಸಬಲ್ಲವರು ಇಲ್ಲಿ ಯಾರೂ ಇಲ್ಲ. ನೀನು ಕನಸುಗಳ ಅರ್ಥವನ್ನು ಹೇಳಬಲ್ಲೆ ಎಂಬುದಾಗಿ ನಿನ್ನ ಬಗ್ಗೆ ಕೇಳಿದೆ” ಎಂದು ಹೇಳಿದನು. PEPS
|
16. ಯೋಸೇಫನು, “ಕನಸುಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ನನ್ನಲ್ಲಿಲ್ಲ. ಆ ಶಕ್ತಿಯನ್ನು ಹೊಂದಿರುವವನು ದೇವರೊಬ್ಬನೇ. ಆದರೆ ದೇವರು ಫರೋಹನಿಗೋಸ್ಕರ ಅರ್ಥವನ್ನು ತಿಳಿಸುವನು” ಎಂದು ಹೇಳಿದನು. PEPS
|
19. ಆಗ ಬಡಕಲಾಗಿದ್ದ ಮತ್ತು ಕುರೂಪವಾಗಿದ್ದ ಏಳು ಹಸುಗಳು ನದಿಯೊಳಗಿಂದ ಬಂದು ನಿಂತುಕೊಂಡವು. ಅಂಥಾ ಬಡಕಲು ಹಸುಗಳನ್ನು ನಾನು ಈಜಿಪ್ಟಿನಲ್ಲಿ ಎಂದೂ ನೋಡಿಲ್ಲ.
|
21. ಅವು ಏಳು ಹಸುಗಳನ್ನು ತಿಂದ ಮೇಲೆಯೂ ತಿಂದಂತೆ ಕಾಣುತ್ತಿರಲಿಲ್ಲ; ಅವು ಮೊದಲಿನಂತೆಯೇ ಬಡಕಲಾಗಿದ್ದವು ಮತ್ತು ಕುರೂಪವಾಗಿದ್ದವು. ಆಗ ನನಗೆ ಎಚ್ಚರವಾಯಿತು. PEPS
|
24. ಬತ್ತಿಹೋಗಿದ್ದ ತೆನೆಗಳು ಪುಷ್ಟಿಯಾದ ಏಳು ತೆನೆಗಳನ್ನು ತಿಂದುಬಿಟ್ಟವು. PEPS “ನಾನು ಈ ಕನಸುಗಳನ್ನು ಮಂತ್ರಗಾರರಿಗೂ ವಿದ್ವಾಂಸರಿಗೂ ತಿಳಿಸಿದೆನು. ಆದರೆ ಅವರಲ್ಲಿ ಯಾರೂ ನನಗೆ ಈ ಕನಸುಗಳ ಅರ್ಥವನ್ನು ವಿವರಿಸಲಾಗಲಿಲ್ಲ. ಅವುಗಳ ಅರ್ಥವೇನು?” ಎಂದು ಕೇಳಿದನು. PS
|
25. {ಯೋಸೇಫನಿಂದ ಕನಸುಗಳ ಅರ್ಥವಿವರಣೆ} PS ಆಗ ಯೋಸೇಫನು ಫರೋಹನಿಗೆ, “ಆ ಎರಡು ಕನಸುಗಳ ಅರ್ಥವು ಒಂದೇ. ಮುಂದೆ ನಡೆಯಲಿರುವುದನ್ನು ದೇವರು ತಮಗೆ ತಿಳಿಸಿದ್ದಾನೆ.
|
26. ಒಳ್ಳೆಯ ಏಳು ಹಸುಗಳೇ ಏಳು ವರ್ಷಗಳು. ಒಳ್ಳೆಯ ಏಳು ತೆನೆಗಳೇ ಏಳು ವರ್ಷಗಳು. ಎರಡು ಕನಸುಗಳೂ ಒಂದೇ ಅರ್ಥವನ್ನು ಹೊಂದಿವೆ.
|
27. ಬಡಕಲಾದ ಮತ್ತು ಕುರೂಪವಾದ ಏಳು ಹಸುಗಳು ಮತ್ತು ಕೆಟ್ಟುಹೋದ ಕಾಳಿನ ಏಳು ತೆನೆಗಳು, ದೇಶಕ್ಕೆ ಬರುವ ಏಳು ವರ್ಷಗಳ ಬರಗಾಲವನ್ನು ಸೂಚಿಸುತ್ತವೆ. ಈ ಏಳು ವರ್ಷಗಳು ಒಳ್ಳೆಯ ವರ್ಷಗಳ ನಂತರ ಬರುತ್ತವೆ.
|
30. ಆದರೆ ಆ ಏಳು ವರ್ಷಗಳಾದ ಮೇಲೆ ದೇಶದಲ್ಲೆಲ್ಲಾ ಏಳು ವರ್ಷಗಳವರೆಗೆ ಬರಗಾಲವಿರುವುದು. ಆಗ ಈಜಿಪ್ಟಿನ ಜನರು ತಾವು ಮೊದಲು ಬೆಳೆದ ಆಹಾರವನ್ನೆಲ್ಲಾ ಮರೆತುಬಿಡುವರು. ಈ ಕ್ಷಾಮವು ದೇಶವನ್ನು ನಾಶಮಾಡುವುದು.
|
33. ಆದ್ದರಿಂದ ತಾವು ತುಂಬ ಬುದ್ಧಿವಂತನೂ ವಿವೇಕಿಯೂ ಆಗಿರುವ ಒಬ್ಬನನ್ನು ಆರಿಸಿಕೊಂಡು ಅವನನ್ನು ಈಜಿಪ್ಟ್ ದೇಶದ ಮೇಲೆ ಆಡಳಿತಾಧಿಕಾರಿಯನ್ನಾಗಿ ನೇಮಿಸಬೇಕು.
|
34. ಅಲ್ಲದೆ ಜನರಿಂದ ಆಹಾರವನ್ನು ಶೇಖರಿಸುವುದಕ್ಕಾಗಿ ತಾವು ಸಂಗ್ರಹಕರನ್ನು ನೇಮಿಸಿ ಒಳ್ಳೆಯ ಏಳು ವರ್ಷಗಳಲ್ಲಿ ಪ್ರತಿಯೊಬ್ಬ ಬೆಳೆಗಾರನಿಂದಲೂ ಬೆಳೆಯ ಐದನೆ ಒಂದು ಭಾಗವನ್ನು ಕಂದಾಯ ರೂಪದಲ್ಲಿ ವಸೂಲಿ ಮಾಡಬೇಕು.
|
36. ಉಗ್ರಾಣಗಳಲ್ಲಿ ಸಾಕಷ್ಟು ಆಹಾರವಿರುವುದರಿಂದ ಈಜಿಪ್ಟಿನವರು ಬರಗಾಲದ ಏಳು ವರ್ಷಗಳಲ್ಲಿ ಆಹಾರವಿಲ್ಲದೆ ಸಾಯುವುದಿಲ್ಲ” ಎಂದು ಹೇಳಿದನು. PEPS
|
38. ಫರೋಹನು ತನ್ನ ಸೇವಕರಿಗೆ, “ಈ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಯೋಸೇಫನಿಗಿಂತಲೂ ಉತ್ತಮನಾದ ವ್ಯಕ್ತಿಯನ್ನು ಕಂಡುಕೊಳ್ಳಲು ಸಾಧ್ಯವೇ? ದೇವರಾತ್ಮನೇ ಇವನ ಸಂಗಡವಿದ್ದಾನೆ” ಎಂದು ಹೇಳಿದನು. PEPS
|
39. ಫರೋಹನು ಯೋಸೇಫನಿಗೆ, “ದೇವರು ನಿನಗೆ ಈ ಎಲ್ಲಾ ವಿಷಯಗಳನ್ನು ತೋರಿಸಿರುವುದರಿಂದ ನಿನಗಿಂತ ಬುದ್ಧಿವಂತನೂ ವಿವೇಕಿಯೂ ಇಲ್ಲವೇ ಇಲ್ಲ.
|
40. ಆದ್ದರಿಂದ ನಾನು ನಿನ್ನನ್ನು ದೇಶದ ರಾಜ್ಯಪಾಲನನ್ನಾಗಿ ನೇಮಿಸುವೆನು; ಜನರು ನಿನ್ನ ಆಜ್ಞೆಗಳಿಗೆಲ್ಲಾ ವಿಧೇಯರಾಗುವರು. ಈ ದೇಶದಲ್ಲಿ ನಿನಗೆ ಅಧಿಪತಿಯಾಗಿರುವವನು ನಾನೊಬ್ಬನೇ” ಎಂದು ಹೇಳಿದನು. PEPS
|
42. ರಾಜಮುದ್ರೆಯನ್ನು ಹೊಂದಿದ್ದ ತನ್ನ ಉಂಗುರವನ್ನು ಕೊಟ್ಟನು; ಧರಿಸಿಕೊಳ್ಳಲು ಒಳ್ಳೆಯ ನಾರುಬಟ್ಟೆಯ ನಿಲುವಂಗಿಯನ್ನು ಕೊಟ್ಟನು; ಕೊರಳಿಗೆ ಚಿನ್ನದ ಸರವನ್ನು ಹಾಕಿದನು.
|
43. ಫರೋಹನು ಯೋಸೇಫನಿಗೆ ಎರಡನೆಯ ರಾಜರಥವನ್ನು ಸಂಚಾರಕ್ಕಾಗಿ ಕೊಟ್ಟನು. ವಿಶೇಷಕಾವಲುಗಾರರು ಅವನ ರಥದ ಮುಂದೆ ನಡೆದುಹೋಗುತ್ತಾ “ಪ್ರಜೆಗಳೇ, ಯೋಸೇಫನಿಗೆ ತಲೆಬಾಗಿ ನಮಸ್ಕರಿಸಿರಿ” ಎಂದು ಪ್ರಕಟಿಸಿದರು. ಹೀಗೆ ಯೋಸೇಫನು ಈಜಿಪ್ಟಿಗೆಲ್ಲಾ ರಾಜ್ಯಪಾಲನಾದನು. PEPS
|
44. ಫರೋಹನು ಅವನಿಗೆ, “ನಾನು ರಾಜ ಫರೋಹ. ಆದ್ದರಿಂದ ನನಗೆ ಇಷ್ಟವಾದದ್ದನ್ನು ಮಾಡುವೆನು. ಆದರೆ ನಿನ್ನ ಅಪ್ಪಣೆಯಿಲ್ಲದೆ ಈಜಿಪ್ಟಿನ ಬೇರೆ ಯಾರೂ ಕೈಯೆತ್ತಲೂ ಸಾಧ್ಯವಿಲ್ಲ, ಕಾಲನ್ನು ಚಲಿಸಲೂ ಸಾಧ್ಯವಿಲ್ಲ” ಎಂದು ಹೇಳಿದನು.
|
45. ಫರೋಹನು ಯೋಸೇಫನಿಗೆ, ಸಾಫ್ನತ್ಪನ್ನೇಹ ಎಂಬ ಹೆಸರನ್ನು ಕೊಟ್ಟನು. ಇದಲ್ಲದೆ ಫರೋಹನು ಯೋಸೇಫನಿಗೆ ಆಸನತ್ ಎಂಬಾಕೆಯನ್ನು ಮದುವೆ ಮಾಡಿಸಿದನು. ಆಕೆ ಓನ್ ನಗರದ ಆಚಾರ್ಯನಾಗಿದ್ದ ಫೋಟೀಫರನ ಮಗಳು. ಹೀಗೆ ಯೋಸೇಫನು ಈಜಿಪ್ಟ್ ದೇಶಕ್ಕೆಲ್ಲಾ ರಾಜ್ಯಪಾಲನಾದನು. PEPS
|
46. ಯೋಸೇಫನು ಈಜಿಪ್ಟ್ ರಾಜನ ಸೇವೆಯನ್ನು ಪ್ರಾರಂಭಿಸಿದಾಗ ಮೂವತ್ತು ವರ್ಷದವನಾಗಿದ್ದನು. ಯೋಸೇಫನು ಈಜಿಪ್ಟ್ ದೇಶದಲ್ಲೆಲ್ಲಾ ಸಂಚರಿಸಿದನು.
|
48. ಈಜಿಪ್ಟಿನಲ್ಲಿ ಯೋಸೇಫನು ಆ ಏಳು ವರ್ಷಗಳ ಕಾಲದಲ್ಲಿ ಆಹಾರವನ್ನು ಸಂಗ್ರಹಿಸಿ ನಗರಗಳ ಉಗ್ರಾಣಗಳಲ್ಲಿಟ್ಟನು. ಪ್ರತಿಯೊಂದು ನಗರದ ಸುತ್ತುಮುತ್ತಲಿನ ಹೊಲಗಳಲ್ಲಿ ಬೆಳೆದ ದವಸಧಾನ್ಯವನ್ನು ಆಯಾ ನಗರಗಳಲ್ಲಿ ಕೂಡಿಸಿಟ್ಟನು.
|
49. ಯೋಸೇಫನು ಬಹಳ ದವಸಧಾನ್ಯಗಳನ್ನು ಸಂಗ್ರಹಿಸಿದ್ದರಿಂದ ಸಮುದ್ರದ ಮರಳಿನ ರಾಶಿಯೆಂಬಂತೆ ತೋರಿತು; ಲೆಕ್ಕಿಸುವುದಕ್ಕೂ ಅಸಾಧ್ಯವಾಯಿತು. PEPS
|
50. ಯೋಸೇಫನ ಹೆಂಡತಿ ಆಸನತ್ ಓನ್ ನಗರದಲ್ಲಿ ಆಚಾರ್ಯನಾಗಿದ್ದ ಪೋಟೀಫೆರನ ಮಗಳು. ಬರಗಾಲದ ಮೊದಲನೆಯ ವರ್ಷ ಬರುವುದಕ್ಕಿಂತ ಮೊದಲೇ ಯೋಸೇಫನಿಗೆ ಆಸನತಳಲ್ಲಿ ಇಬ್ಬರು ಗಂಡುಮಕ್ಕಳು ಹುಟ್ಟಿದರು.
|
51. ಮೊದಲನೆಯ ಮಗನು ಹುಟ್ಟಿದಾಗ, “ನನ್ನ ಎಲ್ಲಾ ಕಷ್ಟಗಳನ್ನೂ ನನ್ನ ತಂದೆಯ ಮನೆಯವರನ್ನೂ ಮರೆತುಬಿಡುವಂತೆ ದೇವರು ನನಗೆ ಸಹಾಯ ಮಾಡಿದನು” ಎಂದು ಹೇಳಿ ಯೋಸೇಫನು ಆ ಮಗುವಿಗೆ, “ಮನಸ್ಸೆ” ಎಂದು ಹೆಸರಿಟ್ಟನು.
|
52. ಎರಡನೆ ಮಗನು ಹುಟ್ಟಿದಾಗ, “ನನಗೆ ಕಷ್ಟ ಬಂದ ದೇಶದಲ್ಲೇ ದೇವರು ನನ್ನನ್ನು ಅಭಿವೃದ್ಧಿಪಡಿಸಿದನು” ಎಂದು ಹೇಳಿ, ಆ ಮಗುವಿಗೆ, “ಎಫ್ರಾಯೀಮ್” ಎಂದು ಹೆಸರಿಟ್ಟನು. PS
|
54. ಯೋಸೇಫನು ಹೇಳಿದ್ದಂತೆಯೇ ಕ್ಷಾಮದ ಏಳು ವರ್ಷಗಳು ಆರಂಭಗೊಂಡವು. ಕ್ಷಾಮವು ಸುತ್ತಮುತ್ತಲಿನ ಪ್ರದೇಶಗಳಿಗೆಲ್ಲಾ ಹಬ್ಬಿಕೊಂಡಿತು. ಈಜಿಪ್ಟಿನಲ್ಲಿ ಮಾತ್ರ ಆಹಾರ ದೊರಕುತ್ತಿತ್ತು.
|
55. ಬರಗಾಲವು ಪ್ರಾರಂಭವಾದಾಗ ಜನರು ಆಹಾರಕ್ಕಾಗಿ ಫರೋಹನನ್ನು ಬೇಡಿಕೊಂಡರು. ಫರೋಹನು ಈಜಿಪ್ಟಿನ ಜನರಿಗೆ, “ಯೋಸೇಫನನ್ನು ಕೇಳಿರಿ; ಅವನು ಹೇಳಿದಂತೆ ಮಾಡಿರಿ” ಎಂದು ಹೇಳಿದನು. PEPS
|
56. ಎಲ್ಲೆಲ್ಲಿಯೂ ಬರಗಾಲವಾದಾಗ, ಯೋಸೇಫನು ಉಗ್ರಾಣಗಳನ್ನು ತೆಗೆಸಿ ದವಸಧಾನ್ಯಗಳನ್ನು ಜನರಿಗೆ ಮಾರಾಟ ಮಾಡಿಸಿದನು. ಈಜಿಪ್ಟಿನಲ್ಲಿ ಬರವು ಭೀಕರವಾಗಿತ್ತು.
|
57. ಭೂಲೋಕದಲ್ಲೆಲ್ಲಾ ಕ್ಷಾಮವು ಭಯಂಕರವಾಗಿದ್ದುದರಿಂದ ಎಲ್ಲಾ ದೇಶಗಳವರು ಯೋಸೇಫನಿಂದ ಆಹಾರವನ್ನು ಪಡೆದುಕೊಳ್ಳುವುದಕ್ಕಾಗಿ ಈಜಿಪ್ಟಿಗೆ ಬಂದರು. PE
|