ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
1. {ಇಸ್ರೇಲನು ಗೋಷೆನಿನಲ್ಲಿ ನೆಲೆಸಿದ್ದು} [PS] ಯೋಸೇಫನು ಫರೋಹನ ಬಳಿಗೆ ಹೋಗಿ, “ನನ್ನ ತಂದೆಯೂ ನನ್ನ ಸಹೋದರರೂ ಅವರೆಲ್ಲರ ಕುಟುಂಬಗಳವರೂ ಇಲ್ಲಿಗೆ ಬಂದಿದ್ದಾರೆ. ಅವರು ತಮ್ಮ ಎಲ್ಲಾ ಪಶುಗಳನ್ನೂ ಕಾನಾನಿನಲ್ಲಿ ಪಡೆದಿದ್ದ ಪ್ರತಿಯೊಂದನ್ನೂ ತೆಗೆದುಕೊಂಡು ಬಂದಿದ್ದಾರೆ. ಈಗ ಅವರು ಗೋಷೆನ್ ಪ್ರಾಂತ್ಯದಲ್ಲಿ ಇದ್ದಾರೆ” ಎಂದು ಹೇಳಿದನು.
2. ಯೋಸೇಫನು ತನ್ನ ಸಹೋದರರಲ್ಲಿ ಐದು ಮಂದಿಯನ್ನು ಆರಿಸಿಕೊಂಡು ಫರೋಹನ ಬಳಿಗೆ ಅವರನ್ನು ಕರೆದುಕೊಂಡು ಹೋದನು. [PE][PS]
3. ಫರೋಹನು ಸಹೋದರರಿಗೆ, “ನಿಮ್ಮ ಉದ್ಯೋಗವೇನು?” ಎಂದು ಕೇಳಿದನು. [PE][PS] ಸಹೋದರರು ಫರೋಹನಿಗೆ, “ಸ್ವಾಮೀ, ನಾವು ಕುರುಬರು. ನಮ್ಮ ಪೂರ್ವಿಕರು ನಮಗಿಂತ ಮೊದಲೇ ಕುರುಬರಾಗಿದ್ದರು” ಎಂದು ಹೇಳಿದರು.
4. ಅವರು ಫರೋಹನಿಗೆ, “ಬರಗಾಲವು ಕಾನಾನ್ ದೇಶದಲ್ಲಿ ತುಂಬ ಘೋರವಾಗಿದೆ. ಯಾವ ಹೊಲದಲ್ಲಿಯೂ ನಮ್ಮ ಪಶುಗಳಿಗೆ ಹುಲ್ಲು ಉಳಿದಿಲ್ಲ. ಆದ್ದರಿಂದ ನಾವು ಈ ದೇಶದಲ್ಲಿ ವಾಸಿಸಲು ಬಂದಿದ್ದೇವೆ. ನಾವು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲು ದಯವಿಟ್ಟು ನಮಗೆ ಅವಕಾಶ ಮಾಡಿಕೊಡಬೇಕೆಂದು ಕೇಳಿಕೊಳ್ಳುತ್ತಿದ್ದೇವೆ” ಎಂದು ಹೇಳಿದರು. [PE][PS]
5. ಆಗ ಫರೋಹನು ಯೋಸೇಫನಿಗೆ, “ನಿನ್ನ ತಂದೆಯೂ ನಿನ್ನ ಸಹೋದರರೂ ನಿನ್ನ ಬಳಿಗೆ ಬಂದಿದ್ದಾರೆ.
6. ಅವರ ವಾಸಕ್ಕಾಗಿ ಈಜಿಪ್ಟಿನಲ್ಲಿ ಯಾವ ಸ್ಥಳವನ್ನಾದರೂ ಆರಿಸಿಕೊಳ್ಳಬಹುದು. ನಿನ್ನ ತಂದೆಯೂ ನಿನ್ನ ಸಹೋದರರೂ ವಾಸವಾಗಿರಲು ಉತ್ತಮವಾದ ಪ್ರದೇಶವನ್ನು ಕೊಡು. ಅವರು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲಿ. ಅವರು ನಿಪುಣರಾದ ಕುರುಬರಾಗಿದ್ದರೆ, ಅವರು ನನ್ನ ದನಕರುಗಳನ್ನು ಸಹ ನೋಡಿಕೊಳ್ಳಬಹುದು” ಎಂದು ಹೇಳಿದನು. [PE][PS]
7. ಆಗ ಯೋಸೇಫನು ತನ್ನ ತಂದೆಯನ್ನು ಫರೋಹನ ಸನ್ನಿಧಿಗೆ ಕರೆಯಿಸಿದನು. ಯಾಕೋಬನು ಫರೋಹನನ್ನು ಆಶೀರ್ವದಿಸಿದನು. [PE][PS]
8. ಆಗ ಫರೋಹನು ಯಾಕೋಬನಿಗೆ, “ನಿನಗೆ ಎಷ್ಟು ವಯಸ್ಸಾಗಿದೆ?” ಎಂದು ಕೇಳಿದನು. [PE][PS]
9. ಯಾಕೋಬನು ಫರೋಹನಿಗೆ, “ನಾನು ನನ್ನ ಅಲ್ಪಕಾಲದ ಜೀವನದಲ್ಲಿ ಅನೇಕ ತೊಂದರೆಗಳನ್ನು ಅನುಭವಿಸಿದೆನು. ಈಗ ನನಗೆ ನೂರಮೂವತ್ತು ವರ್ಷ. ನನ್ನ ತಂದೆಯೂ ಅವನ ಪೂರ್ವಿಕರೂ ನನಗಿಂತ ಹೆಚ್ಚು ವರ್ಷ ಜೀವಿಸಿದರು” ಎಂದು ಹೇಳಿದನು. [PE][PS]
10. ಯಾಕೋಬನು ಫರೋಹನನ್ನು ಆಶೀರ್ವದಿಸಿದ ಬಳಿಕ ಫರೋಹನ ಸನ್ನಿಧಿಯಿಂದ ಹೊರಟುಹೋದನು. [PE][PS]
11. ಫರೋಹನು ಹೇಳಿದಂತೆಯೇ ಯೋಸೇಫನು ಮಾಡಿದನು. ಅವನು ತನ್ನ ತಂದೆಗೂ ಸಹೋದರರಿಗೂ ಈಜಿಪ್ಟಿನಲ್ಲಿ ವಾಸಿಸಲು ಉತ್ತಮವಾದ ಪ್ರದೇಶವನ್ನು ಕೊಟ್ಟನು. ಅದು ರಮ್ಸೇಸ್ ಪಟ್ಟಣದ ಸಮೀಪದಲ್ಲಿತ್ತು.
12. ಯೋಸೇಫನು ತನ್ನ ತಂದೆಗೂ ತನ್ನ ಸಹೋದರರಿಗೂ ಮತ್ತು ಅಲ್ಲಿನ ಎಲ್ಲಾ ಜನರಿಗೂ ಬೇಕಾಗಿದ್ದ ಆಹಾರವನ್ನು ಕೊಟ್ಟನು. [PS]
13. {ಯೋಸೇಫನು ಫರೋಹನಿಗೆ ಭೂಮಿಯನ್ನು ಕೊಂಡುಕೊಂಡದ್ದು} [PS] ಬರಗಾಲವು ಹೆಚ್ಚು ಭೀಕರವಾಯಿತು. ದೇಶದಲ್ಲಿ ಎಲ್ಲಿಯೂ ಆಹಾರ ಇರಲಿಲ್ಲ. ಈಜಿಪ್ಟ್ ಮತ್ತು ಕಾನಾನ್ ದೇಶಗಳು ಕೆಟ್ಟಕಾಲದಿಂದ ಬಡದೇಶಗಳಾದವು.
14. ಈಜಿಪ್ಟ್ ಮತ್ತು ಕಾನಾನ್ ದೇಶಗಳ ಜನರು ಧಾನ್ಯಗಳನ್ನು ಕೊಂಡುಕೊಂಡರು. ಯೋಸೇಫನು ಹಣವನ್ನು ಉಳಿಸಿ ಫರೋಹನ ಭಂಡಾರಕ್ಕೆ ಸೇರಿಸಿದನು.
15. ಸ್ವಲ್ಪ ಸಮಯದ ನಂತರ, ಈಜಿಪ್ಟ್ ಮತ್ತು ಕಾನಾನ್ ದೇಶಗಳಲ್ಲಿದ್ದ ಜನರಲ್ಲಿ ಹಣವು ಉಳಿದಿರಲಿಲ್ಲ. ಆದ್ದರಿಂದ ಈಜಿಪ್ಟಿನ ಜನರು ಯೋಸೇಫನ ಬಳಿಗೆ ಹೋಗಿ, “ದಯವಿಟ್ಟು ನಮಗೆ ಆಹಾರವನ್ನು ಕೊಡು. ನಮ್ಮ ಹಣವೆಲ್ಲ ಮುಗಿದುಹೋಗಿದೆ. ನಾವು ಊಟ ಮಾಡದಿದ್ದರೆ ನಿನ್ನೆದುರಿನಲ್ಲೇ ಸಾಯುತ್ತೇವೆ” ಎಂದು ಹೇಳಿದರು. [PE][PS]
16. ಅದಕ್ಕೆ ಯೋಸೇಫನು, “ನಿಮ್ಮ ದನಕರುಗಳನ್ನು ನನಗೆ ಕೊಡಿರಿ, ನಾನು ನಿಮಗೆ ಆಹಾರವನ್ನು ಕೊಡುತ್ತೇನೆ” ಎಂದು ಉತ್ತರಿಸಿದನು.
17. ಆದ್ದರಿಂದ ಜನರು ತಮ್ಮ ದನಕರುಗಳನ್ನೂ ಕುದುರೆಗಳನ್ನೂ ಇತರ ಎಲ್ಲಾ ಪಶುಗಳನ್ನೂ ಕೊಟ್ಟು ಆಹಾರವನ್ನು ಕೊಂಡುಕೊಂಡರು. ಆ ವರ್ಷ ಯೋಸೇಫನು ಅವರಿಗೆ ಆಹಾರವನ್ನು ಕೊಟ್ಟು ಅವರ ಪಶುಗಳನ್ನು ಕೊಂಡುಕೊಂಡನು. [PE][PS]
18. ಆದರೆ ಮುಂದಿನ ವರ್ಷ, ಪಶುಗಳನ್ನು ಕೊಟ್ಟು ಆಹಾರವನ್ನು ಕೊಂಡುಕೊಳ್ಳಲು ಜನರ ಬಳಿ ಪಶುಗಳಿರಲಿಲ್ಲ. ಆದ್ದರಿಂದ ಜನರು ಯೋಸೇಫನಲ್ಲಿಗೆ ಹೋಗಿ, “ನಮ್ಮಲ್ಲಿ ಹಣ ಇಲ್ಲವೆಂಬುದು ನಿನಗೆ ಗೊತ್ತೇ ಇದೆ. ಅಲ್ಲದೆ ನಮ್ಮ ಪಶುಗಳೂ ನಿನ್ನ ಸ್ವತ್ತಾಗಿವೆ. ಆದ್ದರಿಂದ ನಮ್ಮಲ್ಲಿ ಏನೂ ಉಳಿದಿಲ್ಲ. ನೀನು ನೋಡುತ್ತಿರುವ ನಮ್ಮ ಶರೀರ ಮತ್ತು ನಮ್ಮ ಜಮೀನು ಮಾತ್ರ ಉಳಿದಿದೆ.
19. ನಿನ್ನ ಕಣ್ಣೆದುರಿನಲ್ಲಿಯೇ ನಾವು ಖಂಡಿತವಾಗಿ ಸಾಯುತ್ತೇವೆ. ಆದರೆ ನೀನು ನಮಗೆ ಆಹಾರವನ್ನು ಕೊಟ್ಟರೆ, ನಾವು ಫರೋಹನಿಗೆ ನಮ್ಮ ಭೂಮಿಯನ್ನು ಕೊಟ್ಟು ಅವನ ಗುಲಾಮರಾಗಿರುತ್ತೇವೆ. ಬಿತ್ತನೆ ಮಾಡಲು ನಮಗೆ ಬೀಜವನ್ನು ಕೊಡು. ಆಗ ನಾವು ಬದುಕುತ್ತೇವೆ, ಸಾಯುವುದಿಲ್ಲ. ಮತ್ತು ಭೂಮಿಯೂ ಬೆಳೆಗಳನ್ನು ಫಲಿಸುತ್ತದೆ” ಎಂದು ಹೇಳಿದರು. [PE][PS]
20. ಆದ್ದರಿಂದ ಯೋಸೇಫನು ಈಜಿಪ್ಟಿನ ಎಲ್ಲಾ ಜಮೀನನ್ನು ಫರೋಹನಿಗಾಗಿ ಕೊಂಡುಕೊಂಡನು. ಹಸಿವೆಯಿಂದಾಗಿ ಈಜಿಪ್ಟಿನ ಎಲ್ಲಾ ಜನರು ಯೋಸೇಫನಿಗೆ ತಮ್ಮ ಜಮೀನುಗಳನ್ನು ಮಾರಿದರು.
21. ಈಜಿಪ್ಟಿನ ಎಲ್ಲಾ ಜನರು ಫರೋಹನ ಗುಲಾಮರಾಗಿದ್ದರು. [*ಎಲ್ಲಾ … ಗುಲಾಮರಾಗಿದ್ದರು ಅಥವಾ ಅವನು ಜನರೆಲ್ಲರನ್ನೂ ಪಟ್ಟಣಗಳಿಗೆ ಬರಮಾಡಿಕೊಂಡು ಅವರನ್ನು ಈಜಿಪ್ಟಿನ ಒಂದು ಗಡಿಯಿಂದ ಮತ್ತೊಂದು ಗಡಿಯವರೆಗೂ ಗುಲಾಮರನ್ನಾಗಿ ಮಾಡಿದನು.]
22. ಪುರೋಹಿತರು ಹೊಂದಿದ್ದ ಭೂಮಿಯನ್ನು ಮಾತ್ರ ಯೋಸೇಫನು ಕೊಂಡುಕೊಳ್ಳಲಿಲ್ಲ. ಭೂಮಿಯನ್ನು ಮಾರುವ ಅವಶ್ಯಕತೆ ಪುರೋಹಿತರಿಗೆ ಇರಲಿಲ್ಲ. ಯಾಕೆಂದರೆ ಫರೋಹನೇ ಅವರಿಗೆ ಸಂಬಳವನ್ನು ಕೊಡುತ್ತಿದ್ದನು. ಆದ್ದರಿಂದ ಅವರು ಆ ಹಣದಿಂದ ಆಹಾರವನ್ನು ಕೊಂಡುಕೊಂಡರು. [PE][PS]
23. ಯೋಸೇಫನು ಜನರಿಗೆ, “ಈಗ ನಾನು ನಿಮ್ಮನ್ನೂ ನಿಮ್ಮ ಜಮೀನನ್ನೂ ಫರೋಹನಿಗಾಗಿ ಕೊಂಡುಕೊಂಡಿದ್ದೇನೆ. ಆದ್ದರಿಂದ ನಾನು ನಿಮಗೆ ಬೀಜವನ್ನು ಕೊಡುತ್ತೇನೆ. ನೀವು ನಿಮ್ಮ ಜಮೀನುಗಳಲ್ಲಿ ಬಿತ್ತನೆಮಾಡಿರಿ.
24. ಸುಗ್ಗಿಕಾಲ ಬಂದಾಗ, ನಿಮ್ಮ ಬೆಳೆಗಳಲ್ಲಿ ಐದನೆ ಒಂದು ಭಾಗ ಫರೋಹನಿಗೆ ಸೇರಿದ್ದು. ಐದನೆ ನಾಲ್ಕು ಭಾಗವನ್ನು ನಿಮಗೋಸ್ಕರ ಇಟ್ಟುಕೊಳ್ಳಿರಿ. ನೀವು ಆಹಾರಕ್ಕಾಗಿ ಇಟ್ಟುಕೊಳ್ಳುವ ಬೀಜವನ್ನೇ ಮುಂದಿನ ವರ್ಷದ ಬಿತ್ತನೆಗಾಗಿ ಉಪಯೋಗಿಸಬಹುದು. ಹೀಗೆ ನೀವು ನಿಮ್ಮ ಕುಟುಂಬದವರಿಗೂ ಮಕ್ಕಳಿಗೂ ಪೋಷಣೆಮಾಡಿರಿ” ಎಂದು ಹೇಳಿದನು. [PE][PS]
25. ಆಗ ಜನರು, “ನೀನು ನಮ್ಮ ಜೀವವನ್ನು ಉಳಿಸಿರುವೆ. ನಾವು ಸಂತೋಷದಿಂದ ಫರೋಹನ ಗುಲಾಮರಾಗುತ್ತೇವೆ” ಎಂದು ಹೇಳಿದರು. [PE][PS]
26. ಆದ್ದರಿಂದ ಯೋಸೇಫನು ಒಂದು ಕಾನೂನನ್ನು ಮಾಡಿದನು. ಅದು ಇಂದಿಗೂ ಜಾರಿಯಲ್ಲಿದೆ. ಆ ಕಾನೂನಿನ ಪ್ರಕಾರ, ಭೂಮಿಯ ಫಸಲಿನಲ್ಲಿ ಐದನೇ ಒಂದು ಭಾಗವು ಫರೋಹನಿಗೆ ಸೇರಿದ್ದಾಗಿದೆ. ಫರೋಹನು ಎಲ್ಲಾ ಜಮೀನಿಗೂ ಒಡೆಯನಾಗಿದ್ದಾನೆ. ಪುರೋಹಿತರ ಭೂಮಿಯು ಮಾತ್ರ ಅವನಿಗೆ ಸೇರಿಲ್ಲ. “ನನ್ನನ್ನು ಈಜಿಪ್ಟಿನಲ್ಲಿ ಸಮಾಧಿ ಮಾಡಬೇಡ” [PS]
27. ಇಸ್ರೇಲನು ಈಜಿಪ್ಟಿನಲ್ಲಿ ಇಳಿದುಕೊಂಡನು. ಅವನು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಿದನು. ಅವನ ಕುಟುಂಬವು ಬೆಳೆದು ತುಂಬ ದೊಡ್ಡದಾಯಿತು. ಅವರು ಈಜಿಪ್ಟಿನಲ್ಲಿ ಜಮೀನನ್ನು ಪಡೆದುಕೊಂಡರು ಮತ್ತು ಸುಖವಾಗಿದ್ದರು. [PE][PS]
28. ಕೋಬನು ಈಜಿಪ್ಟಿನಲ್ಲಿ ಹದಿನೇಳು ವರ್ಷಗಳ ಕಾಲ ಜೀವಿಸಿದನು. ಆಗ ಯಾಕೋಬನಿಗೆ ನೂರನಲವತ್ತೇಳು ವರ್ಷವಾಗಿತ್ತು.
29. ಇಸ್ರೇಲನು ಸಾಯುವ ಕಾಲ ಸಮೀಪಿಸಿತು. ಅವನಿಗೆ ತಾನು ಸಾಯುತ್ತೇನೆಂದು ತಿಳಿದು ಬಂದಾಗ, ತನ್ನ ಮಗನಾದ ಯೋಸೇಫನನ್ನು ಕರೆಯಿಸಿ, “ನೀನು ನನ್ನನ್ನು ಪ್ರೀತಿಸುವುದಾದರೆ, ನಿನ್ನ ಕೈಯನ್ನು ನನ್ನ ತೊಡೆಯ ಕೆಳಗಿಟ್ಟು ಪ್ರಮಾಣಮಾಡು. ನಾನು ಹೇಳಿದ್ದನ್ನು ನಡೆಸುವುದಾಗಿಯೂ ನನಗೆ ನಂಬಿಗಸ್ತನಾಗಿರುವುದಾಗಿಯೂ ಪ್ರಮಾಣ ಮಾಡು. ನಾನು ಸತ್ತಾಗ, ನನ್ನನ್ನು ಈಜಿಪ್ಟಿನಲ್ಲಿ ಸಮಾಧಿ ಮಾಡಬೇಡ.
30. ನನ್ನ ಪೂರ್ವಿಕರನ್ನು ಸಮಾಧಿ ಮಾಡಿದ ಸ್ಥಳದಲ್ಲಿಯೇ ನನ್ನನ್ನು ಸಮಾಧಿ ಮಾಡು. ನನ್ನನ್ನು ಈಜಿಪ್ಟಿನಿಂದ ತೆಗೆದುಕೊಂಡು ಹೋಗಿ ನಮ್ಮ ಕುಟುಂಬದವರ ಸ್ಮಶಾನದಲ್ಲಿ ಸಮಾಧಿ ಮಾಡು” ಎಂದು ಹೇಳಿದನು. [PE][PS] ಯೋಸೇಫನು, “ನೀನು ಹೇಳಿದಂತೆಯೇ ಮಾಡುತ್ತೇನೆ” ಎಂದು ಪ್ರಮಾಣ ಮಾಡಿದನು. [PE][PS]
31. ಇಸ್ರೇಲನು, “ನನಗೆ ಪ್ರಮಾಣ ಮಾಡು” ಎಂದು ಹೇಳಿದ್ದರಿಂದ ಯೋಸೇಫನು ಅವನಿಗೆ ಪ್ರಮಾಣ ಮಾಡಿದನು. ಆಮೇಲೆ ಇಸ್ರೇಲನು ಹಾಸಿಗೆಯ ಮೇಲೆ ಮತ್ತೆ ತನ್ನ ತಲೆಬಾಗಿ ದೇವರಿಗೆ ನಮಸ್ಕರಿಸಿದನು. [PE]

Notes

No Verse Added

Total 50 Chapters, Current Chapter 47 of Total Chapters 50
ಆದಿಕಾಂಡ 47:65
1. {ಇಸ್ರೇಲನು ಗೋಷೆನಿನಲ್ಲಿ ನೆಲೆಸಿದ್ದು} PS ಯೋಸೇಫನು ಫರೋಹನ ಬಳಿಗೆ ಹೋಗಿ, “ನನ್ನ ತಂದೆಯೂ ನನ್ನ ಸಹೋದರರೂ ಅವರೆಲ್ಲರ ಕುಟುಂಬಗಳವರೂ ಇಲ್ಲಿಗೆ ಬಂದಿದ್ದಾರೆ. ಅವರು ತಮ್ಮ ಎಲ್ಲಾ ಪಶುಗಳನ್ನೂ ಕಾನಾನಿನಲ್ಲಿ ಪಡೆದಿದ್ದ ಪ್ರತಿಯೊಂದನ್ನೂ ತೆಗೆದುಕೊಂಡು ಬಂದಿದ್ದಾರೆ. ಈಗ ಅವರು ಗೋಷೆನ್ ಪ್ರಾಂತ್ಯದಲ್ಲಿ ಇದ್ದಾರೆ” ಎಂದು ಹೇಳಿದನು.
2. ಯೋಸೇಫನು ತನ್ನ ಸಹೋದರರಲ್ಲಿ ಐದು ಮಂದಿಯನ್ನು ಆರಿಸಿಕೊಂಡು ಫರೋಹನ ಬಳಿಗೆ ಅವರನ್ನು ಕರೆದುಕೊಂಡು ಹೋದನು. PEPS
3. ಫರೋಹನು ಸಹೋದರರಿಗೆ, “ನಿಮ್ಮ ಉದ್ಯೋಗವೇನು?” ಎಂದು ಕೇಳಿದನು. PEPS ಸಹೋದರರು ಫರೋಹನಿಗೆ, “ಸ್ವಾಮೀ, ನಾವು ಕುರುಬರು. ನಮ್ಮ ಪೂರ್ವಿಕರು ನಮಗಿಂತ ಮೊದಲೇ ಕುರುಬರಾಗಿದ್ದರು” ಎಂದು ಹೇಳಿದರು.
4. ಅವರು ಫರೋಹನಿಗೆ, “ಬರಗಾಲವು ಕಾನಾನ್ ದೇಶದಲ್ಲಿ ತುಂಬ ಘೋರವಾಗಿದೆ. ಯಾವ ಹೊಲದಲ್ಲಿಯೂ ನಮ್ಮ ಪಶುಗಳಿಗೆ ಹುಲ್ಲು ಉಳಿದಿಲ್ಲ. ಆದ್ದರಿಂದ ನಾವು ದೇಶದಲ್ಲಿ ವಾಸಿಸಲು ಬಂದಿದ್ದೇವೆ. ನಾವು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲು ದಯವಿಟ್ಟು ನಮಗೆ ಅವಕಾಶ ಮಾಡಿಕೊಡಬೇಕೆಂದು ಕೇಳಿಕೊಳ್ಳುತ್ತಿದ್ದೇವೆ” ಎಂದು ಹೇಳಿದರು. PEPS
5. ಆಗ ಫರೋಹನು ಯೋಸೇಫನಿಗೆ, “ನಿನ್ನ ತಂದೆಯೂ ನಿನ್ನ ಸಹೋದರರೂ ನಿನ್ನ ಬಳಿಗೆ ಬಂದಿದ್ದಾರೆ.
6. ಅವರ ವಾಸಕ್ಕಾಗಿ ಈಜಿಪ್ಟಿನಲ್ಲಿ ಯಾವ ಸ್ಥಳವನ್ನಾದರೂ ಆರಿಸಿಕೊಳ್ಳಬಹುದು. ನಿನ್ನ ತಂದೆಯೂ ನಿನ್ನ ಸಹೋದರರೂ ವಾಸವಾಗಿರಲು ಉತ್ತಮವಾದ ಪ್ರದೇಶವನ್ನು ಕೊಡು. ಅವರು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲಿ. ಅವರು ನಿಪುಣರಾದ ಕುರುಬರಾಗಿದ್ದರೆ, ಅವರು ನನ್ನ ದನಕರುಗಳನ್ನು ಸಹ ನೋಡಿಕೊಳ್ಳಬಹುದು” ಎಂದು ಹೇಳಿದನು. PEPS
7. ಆಗ ಯೋಸೇಫನು ತನ್ನ ತಂದೆಯನ್ನು ಫರೋಹನ ಸನ್ನಿಧಿಗೆ ಕರೆಯಿಸಿದನು. ಯಾಕೋಬನು ಫರೋಹನನ್ನು ಆಶೀರ್ವದಿಸಿದನು. PEPS
8. ಆಗ ಫರೋಹನು ಯಾಕೋಬನಿಗೆ, “ನಿನಗೆ ಎಷ್ಟು ವಯಸ್ಸಾಗಿದೆ?” ಎಂದು ಕೇಳಿದನು. PEPS
9. ಯಾಕೋಬನು ಫರೋಹನಿಗೆ, “ನಾನು ನನ್ನ ಅಲ್ಪಕಾಲದ ಜೀವನದಲ್ಲಿ ಅನೇಕ ತೊಂದರೆಗಳನ್ನು ಅನುಭವಿಸಿದೆನು. ಈಗ ನನಗೆ ನೂರಮೂವತ್ತು ವರ್ಷ. ನನ್ನ ತಂದೆಯೂ ಅವನ ಪೂರ್ವಿಕರೂ ನನಗಿಂತ ಹೆಚ್ಚು ವರ್ಷ ಜೀವಿಸಿದರು” ಎಂದು ಹೇಳಿದನು. PEPS
10. ಯಾಕೋಬನು ಫರೋಹನನ್ನು ಆಶೀರ್ವದಿಸಿದ ಬಳಿಕ ಫರೋಹನ ಸನ್ನಿಧಿಯಿಂದ ಹೊರಟುಹೋದನು. PEPS
11. ಫರೋಹನು ಹೇಳಿದಂತೆಯೇ ಯೋಸೇಫನು ಮಾಡಿದನು. ಅವನು ತನ್ನ ತಂದೆಗೂ ಸಹೋದರರಿಗೂ ಈಜಿಪ್ಟಿನಲ್ಲಿ ವಾಸಿಸಲು ಉತ್ತಮವಾದ ಪ್ರದೇಶವನ್ನು ಕೊಟ್ಟನು. ಅದು ರಮ್ಸೇಸ್ ಪಟ್ಟಣದ ಸಮೀಪದಲ್ಲಿತ್ತು.
12. ಯೋಸೇಫನು ತನ್ನ ತಂದೆಗೂ ತನ್ನ ಸಹೋದರರಿಗೂ ಮತ್ತು ಅಲ್ಲಿನ ಎಲ್ಲಾ ಜನರಿಗೂ ಬೇಕಾಗಿದ್ದ ಆಹಾರವನ್ನು ಕೊಟ್ಟನು. PS
13. {ಯೋಸೇಫನು ಫರೋಹನಿಗೆ ಭೂಮಿಯನ್ನು ಕೊಂಡುಕೊಂಡದ್ದು} PS ಬರಗಾಲವು ಹೆಚ್ಚು ಭೀಕರವಾಯಿತು. ದೇಶದಲ್ಲಿ ಎಲ್ಲಿಯೂ ಆಹಾರ ಇರಲಿಲ್ಲ. ಈಜಿಪ್ಟ್ ಮತ್ತು ಕಾನಾನ್ ದೇಶಗಳು ಕೆಟ್ಟಕಾಲದಿಂದ ಬಡದೇಶಗಳಾದವು.
14. ಈಜಿಪ್ಟ್ ಮತ್ತು ಕಾನಾನ್ ದೇಶಗಳ ಜನರು ಧಾನ್ಯಗಳನ್ನು ಕೊಂಡುಕೊಂಡರು. ಯೋಸೇಫನು ಹಣವನ್ನು ಉಳಿಸಿ ಫರೋಹನ ಭಂಡಾರಕ್ಕೆ ಸೇರಿಸಿದನು.
15. ಸ್ವಲ್ಪ ಸಮಯದ ನಂತರ, ಈಜಿಪ್ಟ್ ಮತ್ತು ಕಾನಾನ್ ದೇಶಗಳಲ್ಲಿದ್ದ ಜನರಲ್ಲಿ ಹಣವು ಉಳಿದಿರಲಿಲ್ಲ. ಆದ್ದರಿಂದ ಈಜಿಪ್ಟಿನ ಜನರು ಯೋಸೇಫನ ಬಳಿಗೆ ಹೋಗಿ, “ದಯವಿಟ್ಟು ನಮಗೆ ಆಹಾರವನ್ನು ಕೊಡು. ನಮ್ಮ ಹಣವೆಲ್ಲ ಮುಗಿದುಹೋಗಿದೆ. ನಾವು ಊಟ ಮಾಡದಿದ್ದರೆ ನಿನ್ನೆದುರಿನಲ್ಲೇ ಸಾಯುತ್ತೇವೆ” ಎಂದು ಹೇಳಿದರು. PEPS
16. ಅದಕ್ಕೆ ಯೋಸೇಫನು, “ನಿಮ್ಮ ದನಕರುಗಳನ್ನು ನನಗೆ ಕೊಡಿರಿ, ನಾನು ನಿಮಗೆ ಆಹಾರವನ್ನು ಕೊಡುತ್ತೇನೆ” ಎಂದು ಉತ್ತರಿಸಿದನು.
17. ಆದ್ದರಿಂದ ಜನರು ತಮ್ಮ ದನಕರುಗಳನ್ನೂ ಕುದುರೆಗಳನ್ನೂ ಇತರ ಎಲ್ಲಾ ಪಶುಗಳನ್ನೂ ಕೊಟ್ಟು ಆಹಾರವನ್ನು ಕೊಂಡುಕೊಂಡರು. ವರ್ಷ ಯೋಸೇಫನು ಅವರಿಗೆ ಆಹಾರವನ್ನು ಕೊಟ್ಟು ಅವರ ಪಶುಗಳನ್ನು ಕೊಂಡುಕೊಂಡನು. PEPS
18. ಆದರೆ ಮುಂದಿನ ವರ್ಷ, ಪಶುಗಳನ್ನು ಕೊಟ್ಟು ಆಹಾರವನ್ನು ಕೊಂಡುಕೊಳ್ಳಲು ಜನರ ಬಳಿ ಪಶುಗಳಿರಲಿಲ್ಲ. ಆದ್ದರಿಂದ ಜನರು ಯೋಸೇಫನಲ್ಲಿಗೆ ಹೋಗಿ, “ನಮ್ಮಲ್ಲಿ ಹಣ ಇಲ್ಲವೆಂಬುದು ನಿನಗೆ ಗೊತ್ತೇ ಇದೆ. ಅಲ್ಲದೆ ನಮ್ಮ ಪಶುಗಳೂ ನಿನ್ನ ಸ್ವತ್ತಾಗಿವೆ. ಆದ್ದರಿಂದ ನಮ್ಮಲ್ಲಿ ಏನೂ ಉಳಿದಿಲ್ಲ. ನೀನು ನೋಡುತ್ತಿರುವ ನಮ್ಮ ಶರೀರ ಮತ್ತು ನಮ್ಮ ಜಮೀನು ಮಾತ್ರ ಉಳಿದಿದೆ.
19. ನಿನ್ನ ಕಣ್ಣೆದುರಿನಲ್ಲಿಯೇ ನಾವು ಖಂಡಿತವಾಗಿ ಸಾಯುತ್ತೇವೆ. ಆದರೆ ನೀನು ನಮಗೆ ಆಹಾರವನ್ನು ಕೊಟ್ಟರೆ, ನಾವು ಫರೋಹನಿಗೆ ನಮ್ಮ ಭೂಮಿಯನ್ನು ಕೊಟ್ಟು ಅವನ ಗುಲಾಮರಾಗಿರುತ್ತೇವೆ. ಬಿತ್ತನೆ ಮಾಡಲು ನಮಗೆ ಬೀಜವನ್ನು ಕೊಡು. ಆಗ ನಾವು ಬದುಕುತ್ತೇವೆ, ಸಾಯುವುದಿಲ್ಲ. ಮತ್ತು ಭೂಮಿಯೂ ಬೆಳೆಗಳನ್ನು ಫಲಿಸುತ್ತದೆ” ಎಂದು ಹೇಳಿದರು. PEPS
20. ಆದ್ದರಿಂದ ಯೋಸೇಫನು ಈಜಿಪ್ಟಿನ ಎಲ್ಲಾ ಜಮೀನನ್ನು ಫರೋಹನಿಗಾಗಿ ಕೊಂಡುಕೊಂಡನು. ಹಸಿವೆಯಿಂದಾಗಿ ಈಜಿಪ್ಟಿನ ಎಲ್ಲಾ ಜನರು ಯೋಸೇಫನಿಗೆ ತಮ್ಮ ಜಮೀನುಗಳನ್ನು ಮಾರಿದರು.
21. ಈಜಿಪ್ಟಿನ ಎಲ್ಲಾ ಜನರು ಫರೋಹನ ಗುಲಾಮರಾಗಿದ್ದರು. *ಎಲ್ಲಾ ಗುಲಾಮರಾಗಿದ್ದರು ಅಥವಾ ಅವನು ಜನರೆಲ್ಲರನ್ನೂ ಪಟ್ಟಣಗಳಿಗೆ ಬರಮಾಡಿಕೊಂಡು ಅವರನ್ನು ಈಜಿಪ್ಟಿನ ಒಂದು ಗಡಿಯಿಂದ ಮತ್ತೊಂದು ಗಡಿಯವರೆಗೂ ಗುಲಾಮರನ್ನಾಗಿ ಮಾಡಿದನು.
22. ಪುರೋಹಿತರು ಹೊಂದಿದ್ದ ಭೂಮಿಯನ್ನು ಮಾತ್ರ ಯೋಸೇಫನು ಕೊಂಡುಕೊಳ್ಳಲಿಲ್ಲ. ಭೂಮಿಯನ್ನು ಮಾರುವ ಅವಶ್ಯಕತೆ ಪುರೋಹಿತರಿಗೆ ಇರಲಿಲ್ಲ. ಯಾಕೆಂದರೆ ಫರೋಹನೇ ಅವರಿಗೆ ಸಂಬಳವನ್ನು ಕೊಡುತ್ತಿದ್ದನು. ಆದ್ದರಿಂದ ಅವರು ಹಣದಿಂದ ಆಹಾರವನ್ನು ಕೊಂಡುಕೊಂಡರು. PEPS
23. ಯೋಸೇಫನು ಜನರಿಗೆ, “ಈಗ ನಾನು ನಿಮ್ಮನ್ನೂ ನಿಮ್ಮ ಜಮೀನನ್ನೂ ಫರೋಹನಿಗಾಗಿ ಕೊಂಡುಕೊಂಡಿದ್ದೇನೆ. ಆದ್ದರಿಂದ ನಾನು ನಿಮಗೆ ಬೀಜವನ್ನು ಕೊಡುತ್ತೇನೆ. ನೀವು ನಿಮ್ಮ ಜಮೀನುಗಳಲ್ಲಿ ಬಿತ್ತನೆಮಾಡಿರಿ.
24. ಸುಗ್ಗಿಕಾಲ ಬಂದಾಗ, ನಿಮ್ಮ ಬೆಳೆಗಳಲ್ಲಿ ಐದನೆ ಒಂದು ಭಾಗ ಫರೋಹನಿಗೆ ಸೇರಿದ್ದು. ಐದನೆ ನಾಲ್ಕು ಭಾಗವನ್ನು ನಿಮಗೋಸ್ಕರ ಇಟ್ಟುಕೊಳ್ಳಿರಿ. ನೀವು ಆಹಾರಕ್ಕಾಗಿ ಇಟ್ಟುಕೊಳ್ಳುವ ಬೀಜವನ್ನೇ ಮುಂದಿನ ವರ್ಷದ ಬಿತ್ತನೆಗಾಗಿ ಉಪಯೋಗಿಸಬಹುದು. ಹೀಗೆ ನೀವು ನಿಮ್ಮ ಕುಟುಂಬದವರಿಗೂ ಮಕ್ಕಳಿಗೂ ಪೋಷಣೆಮಾಡಿರಿ” ಎಂದು ಹೇಳಿದನು. PEPS
25. ಆಗ ಜನರು, “ನೀನು ನಮ್ಮ ಜೀವವನ್ನು ಉಳಿಸಿರುವೆ. ನಾವು ಸಂತೋಷದಿಂದ ಫರೋಹನ ಗುಲಾಮರಾಗುತ್ತೇವೆ” ಎಂದು ಹೇಳಿದರು. PEPS
26. ಆದ್ದರಿಂದ ಯೋಸೇಫನು ಒಂದು ಕಾನೂನನ್ನು ಮಾಡಿದನು. ಅದು ಇಂದಿಗೂ ಜಾರಿಯಲ್ಲಿದೆ. ಕಾನೂನಿನ ಪ್ರಕಾರ, ಭೂಮಿಯ ಫಸಲಿನಲ್ಲಿ ಐದನೇ ಒಂದು ಭಾಗವು ಫರೋಹನಿಗೆ ಸೇರಿದ್ದಾಗಿದೆ. ಫರೋಹನು ಎಲ್ಲಾ ಜಮೀನಿಗೂ ಒಡೆಯನಾಗಿದ್ದಾನೆ. ಪುರೋಹಿತರ ಭೂಮಿಯು ಮಾತ್ರ ಅವನಿಗೆ ಸೇರಿಲ್ಲ. “ನನ್ನನ್ನು ಈಜಿಪ್ಟಿನಲ್ಲಿ ಸಮಾಧಿ ಮಾಡಬೇಡ” PS
27. ಇಸ್ರೇಲನು ಈಜಿಪ್ಟಿನಲ್ಲಿ ಇಳಿದುಕೊಂಡನು. ಅವನು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಿದನು. ಅವನ ಕುಟುಂಬವು ಬೆಳೆದು ತುಂಬ ದೊಡ್ಡದಾಯಿತು. ಅವರು ಈಜಿಪ್ಟಿನಲ್ಲಿ ಜಮೀನನ್ನು ಪಡೆದುಕೊಂಡರು ಮತ್ತು ಸುಖವಾಗಿದ್ದರು. PEPS
28. ಕೋಬನು ಈಜಿಪ್ಟಿನಲ್ಲಿ ಹದಿನೇಳು ವರ್ಷಗಳ ಕಾಲ ಜೀವಿಸಿದನು. ಆಗ ಯಾಕೋಬನಿಗೆ ನೂರನಲವತ್ತೇಳು ವರ್ಷವಾಗಿತ್ತು.
29. ಇಸ್ರೇಲನು ಸಾಯುವ ಕಾಲ ಸಮೀಪಿಸಿತು. ಅವನಿಗೆ ತಾನು ಸಾಯುತ್ತೇನೆಂದು ತಿಳಿದು ಬಂದಾಗ, ತನ್ನ ಮಗನಾದ ಯೋಸೇಫನನ್ನು ಕರೆಯಿಸಿ, “ನೀನು ನನ್ನನ್ನು ಪ್ರೀತಿಸುವುದಾದರೆ, ನಿನ್ನ ಕೈಯನ್ನು ನನ್ನ ತೊಡೆಯ ಕೆಳಗಿಟ್ಟು ಪ್ರಮಾಣಮಾಡು. ನಾನು ಹೇಳಿದ್ದನ್ನು ನಡೆಸುವುದಾಗಿಯೂ ನನಗೆ ನಂಬಿಗಸ್ತನಾಗಿರುವುದಾಗಿಯೂ ಪ್ರಮಾಣ ಮಾಡು. ನಾನು ಸತ್ತಾಗ, ನನ್ನನ್ನು ಈಜಿಪ್ಟಿನಲ್ಲಿ ಸಮಾಧಿ ಮಾಡಬೇಡ.
30. ನನ್ನ ಪೂರ್ವಿಕರನ್ನು ಸಮಾಧಿ ಮಾಡಿದ ಸ್ಥಳದಲ್ಲಿಯೇ ನನ್ನನ್ನು ಸಮಾಧಿ ಮಾಡು. ನನ್ನನ್ನು ಈಜಿಪ್ಟಿನಿಂದ ತೆಗೆದುಕೊಂಡು ಹೋಗಿ ನಮ್ಮ ಕುಟುಂಬದವರ ಸ್ಮಶಾನದಲ್ಲಿ ಸಮಾಧಿ ಮಾಡು” ಎಂದು ಹೇಳಿದನು. PEPS ಯೋಸೇಫನು, “ನೀನು ಹೇಳಿದಂತೆಯೇ ಮಾಡುತ್ತೇನೆ” ಎಂದು ಪ್ರಮಾಣ ಮಾಡಿದನು. PEPS
31. ಇಸ್ರೇಲನು, “ನನಗೆ ಪ್ರಮಾಣ ಮಾಡು” ಎಂದು ಹೇಳಿದ್ದರಿಂದ ಯೋಸೇಫನು ಅವನಿಗೆ ಪ್ರಮಾಣ ಮಾಡಿದನು. ಆಮೇಲೆ ಇಸ್ರೇಲನು ಹಾಸಿಗೆಯ ಮೇಲೆ ಮತ್ತೆ ತನ್ನ ತಲೆಬಾಗಿ ದೇವರಿಗೆ ನಮಸ್ಕರಿಸಿದನು. PE
Total 50 Chapters, Current Chapter 47 of Total Chapters 50
×

Alert

×

kannada Letters Keypad References