1. {ಮನಸ್ಸೆ ಮತ್ತು ಎಫ್ರಾಯೀಮರಿಗೆ ಆಶೀರ್ವಾದಗಳು} PS ಸ್ವಲ್ಪ ಕಾಲದ ನಂತರ, ತಂದೆಯು ಬಹಳ ಅನಾರೋಗ್ಯದಿಂದಿರುವುದು ಯೋಸೇಫನಿಗೆ ತಿಳಿಯಿತು. ಆದ್ದರಿಂದ ಅವನು ತನ್ನ ಇಬ್ಬರು ಗಂಡುಮಕ್ಕಳಾದ ಮನಸ್ಸೆಯನ್ನು ಮತ್ತು ಎಫ್ರಾಯೀಮನನ್ನು ಕರೆದುಕೊಂಡು ತನ್ನ ತಂದೆಯ ಬಳಿಗೆ ಬಂದನು.
|
2. ಯೋಸೇಫನು ಬಂದಾಗ ಯಾರೋ ಒಬ್ಬನು ಇಸ್ರೇಲನಿಗೆ, “ನಿನ್ನ ಮಗನಾದ ಯೋಸೇಫನು ನಿನ್ನನ್ನು ನೋಡಲು ಬಂದಿದ್ದಾನೆ” ಎಂದು ಹೇಳಿದನು. ಆಗ ಅವನು ಬಹಳ ಬಲಹೀನನಾಗಿದ್ದರೂ ಕಷ್ಟಪಟ್ಟು ಹಾಸಿಗೆಯ ಮೇಲೆ ಕುಳಿತುಕೊಂಡನು. PEPS
|
3. ಬಳಿಕ ಇಸ್ರೇಲನು ಯೋಸೇಫನಿಗೆ, “ಸರ್ವಶಕ್ತನಾದ ದೇವರು ನನಗೆ ಕಾನಾನ್ ದೇಶದ ಲೂಜ್ ಎಂಬ ಸ್ಥಳದಲ್ಲಿ ಕಾಣಿಸಿಕೊಂಡು ನನ್ನನ್ನು ಆಶೀರ್ವದಿಸಿದನು.
|
4. ದೇವರು ನನಗೆ, ‘ನಾನು ನಿನಗೆ ಅನೇಕ ಮಕ್ಕಳನ್ನು ಕೊಡುತ್ತೇನೆ; ನಿನ್ನ ಸಂತತಿಯವರು ಅನೇಕ ಜನಾಂಗಗಳಾಗುವರು; ನಿನ್ನ ಸಂತತಿಯವರಿಗೆ ನಾನು ಈ ದೇಶವನ್ನು ಶಾಶ್ವತವಾಗಿ ಕೊಡುವೆನು’ ಎಂದು ಹೇಳಿದನು.
|
5. ಈಗ ನಿನಗೆ ಇಬ್ಬರು ಗಂಡುಮಕ್ಕಳಿದ್ದಾರೆ. ನಾನು ಈಜಿಪ್ಟಿಗೆ ಬರುವುದಕ್ಕಿಂತ ಮೊದಲೇ ಅವರು ಇಲ್ಲಿ ಹುಟ್ಟಿದರು. ನಿನ್ನ ಇಬ್ಬರು ಗಂಡುಮಕ್ಕಳಾದ ಮನಸ್ಸೆ ಮತ್ತು ಎಫ್ರಾಯೀಮ್ ನನ್ನ ಮಕ್ಕಳಂತೆಯೇ ಇದ್ದಾರೆ. ಅವರು ನನಗೆ ರೂಬೇನ್ ಮತ್ತು ಸಿಮೆಯೋನರಂತೆಯೇ ಇದ್ದಾರೆ.
|
6. ಆದ್ದರಿಂದ ಈ ಇಬ್ಬರು ಗಂಡುಮಕ್ಕಳು ನನಗೆ ಮಕ್ಕಳಂತೆಯೇ ಇರುತ್ತಾರೆ. ನಾನು ಹೊಂದಿರುವ ಪ್ರತಿಯೊಂದರಲ್ಲಿಯೂ ಅವರು ಪಾಲನ್ನು ಹೊಂದುವರು. ಆದರೆ ನಿನಗೆ ಬೇರೆ ಗಂಡುಮಕ್ಕಳಿದ್ದರೆ ಅವರು ಎಫ್ರಾಯೀಮ್ ಮತ್ತು ಮನಸ್ಸೆಯವರಿಗೆ ಮಕ್ಕಳಾಗಿರುತ್ತಾರೆ. ಅಂದರೆ ಎಫ್ರಾಯೀಮ್ ಮತ್ತು ಮನಸ್ಸೆ ಹೊಂದಿರುವ ಪ್ರತಿಯೊಂದರಲ್ಲಿ ಅವರು ಪಾಲನ್ನು ಹೊಂದುವರು.
|
7. ಪದ್ದನ್ಅರಾಮಿನಿಂದ ಹಿಂತಿರುಗಿ ಬರುತ್ತಿರುವಾಗ ರಾಹೇಲಳು ಸತ್ತಳು. ಇದು ನನಗೆ ತುಂಬ ದುಃಖವನ್ನು ಉಂಟುಮಾಡಿತು. ನಾವು ಕಾನಾನ್ ದೇಶದಲ್ಲಿ ಎಫ್ರಾತ್ ನಗರದ ಕಡೆಗೆ ಪ್ರಯಾಣ ಮಾಡುತ್ತಿದ್ದೆವು. ಆದ್ದರಿಂದ ನಾನು ಅವಳನ್ನು ಬೆತ್ಲೆಹೇಮೆಂಬ ಎಫ್ರಾತ್ ನಗರದ ರಸ್ತೆಯಲ್ಲಿ ಸಮಾಧಿ ಮಾಡಿದೆನು” ಎಂದು ಹೇಳಿದನು. PEPS
|
9. ಯೋಸೇಫನು ತನ್ನ ತಂದೆಗೆ, “ಇವರು ನನ್ನ ಮಕ್ಕಳು. ದೇವರು ನನಗೆ ಕೊಟ್ಟಿರುವ ಗಂಡುಮಕ್ಕಳೇ ಇವರು” ಎಂದು ಹೇಳಿದನು. PEPS ಇಸ್ರೇಲನು, “ಅವರನ್ನು ನನ್ನ ಬಳಿಗೆ ಕರೆದುಕೊಂಡು ಬಾ, ನಾನು ಅವರನ್ನು ಆಶೀರ್ವದಿಸುತ್ತೇನೆ” ಎಂದು ಹೇಳಿದನು. PEPS
|
10. ಇಸ್ರೇಲನಿಗೆ ತುಂಬ ವಯಸ್ಸಾಗಿತ್ತು. ಅವನಿಗೆ ಕಣ್ಣು ಸರಿಯಾಗಿ ಕಾಣುತ್ತಿರಲಿಲ್ಲ. ಆದ್ದರಿಂದ ಯೋಸೇಫನು ಅವರನ್ನು ತಂದೆಯ ಬಳಿಗೆ ಕರೆದುಕೊಂಡು ಬಂದನು. ಇಸ್ರೇಲನು ಆ ಹುಡುಗರನ್ನು ಅಪ್ಪಿಕೊಂಡು ಮುದ್ದಿಟ್ಟನು.
|
11. ಬಳಿಕ ಇಸ್ರೇಲನು ಯೋಸೇಫನಿಗೆ, “ನಾನು ಮತ್ತೆ ನಿನ್ನ ಮುಖವನ್ನು ನೋಡುತ್ತೇನೆ ಎಂದು ಯೋಚಿಸಿರಲಿಲ್ಲ. ಆದರೆ ನಾನು ನಿನ್ನನ್ನೂ ನಿನ್ನ ಮಕ್ಕಳನ್ನೂ ನೋಡುವಂತೆ ದೇವರು ಅನುಗ್ರಹಿಸಿದ್ದಾನೆ” ಎಂದು ಹೇಳಿದನು. PEPS
|
12. ಆಗ ಯೋಸೇಫನು ಇಸ್ರೇಲನ ತೊಡೆಯ ಮೇಲೆ ಕುಳಿತಿದ್ದ ತನ್ನ ಗಂಡುಮಕ್ಕಳನ್ನು ಎತ್ತಿಕೊಂಡನು. ಬಳಿಕ ಅವರು ಇಸ್ರೇಲನ ಮುಂದೆ ಅಡ್ಡಬಿದ್ದು ನಮಸ್ಕರಿಸಿದರು.
|
13. ಯೋಸೇಫನು ಎಫ್ರಾಯೀಮನನ್ನು ತನ್ನ ಬಲಭಾಗದಲ್ಲಿಯೂ ಮನಸ್ಸೆಯನ್ನು ತನ್ನ ಎಡಭಾಗದಲ್ಲಿಯೂ ಕುಳ್ಳಿರಿಸಿದನು. (ಆದ್ದರಿಂದ ಎಫ್ರಾಯೀಮನು ಇಸ್ರೇಲನ ಎಡಭಾಗದಲ್ಲಿಯೂ ಮನಸ್ಸೆಯು ಬಲಭಾಗದಲ್ಲಿಯೂ ಇದ್ದರು.)
|
14. ಆದರೆ ಇಸ್ರೇಲನು ತನ್ನ ಕೈಗಳನ್ನು ವಾರೆ ಮಾಡಿ ತನ್ನ ಬಲಗೈಯನ್ನು ಚಿಕ್ಕ ಮಗನಾದ ಎಫ್ರಾಯೀಮನ ತಲೆಯ ಮೇಲಿಟ್ಟು ಎಡಗೈಯನ್ನು ದೊಡ್ಡ ಮಗನಾದ ಮನಸ್ಸೆಯ ತಲೆಯ ಮೇಲಿಟ್ಟನು. ಮನಸ್ಸೆಯು ಹಿರಿಯ ಮಗನಾಗಿದ್ದರೂ ಇಸ್ರೇಲನು ಮನಸ್ಸೆಯ ತಲೆಯ ಮೇಲೆ ಎಡಗೈಯನ್ನಿಟ್ಟನು.
|
15. ಬಳಿಕ ಇಸ್ರೇಲನು ಯೋಸೇಫನನ್ನು ಆಶೀರ್ವದಿಸಿ ಹೀಗೆಂದನು: “ನನ್ನ ಪೂರ್ವಿಕರಾದ ಅಬ್ರಹಾಮನೂ ಇಸಾಕನೂ ನಮ್ಮ ದೇವರನ್ನು ಆರಾಧಿಸಿದರು.
ಆ ದೇವರೇ ನನ್ನನ್ನು ನನ್ನ ಜೀವಮಾನವೆಲ್ಲಾ ನಡೆಸಿದನು. |
16. ನನ್ನನ್ನು ಎಲ್ಲಾ ತೊಂದರೆಗಳಿಂದ ಕಾಪಾಡಿದ ದೂತನೇ ಆತನು.
ಈ ಹುಡುಗರನ್ನು ಆಶೀರ್ವದಿಸಬೇಕೆಂದು ನಾನು ಆತನಲ್ಲಿ ಪ್ರಾರ್ಥಿಸುವೆನು. ಇಂದಿನಿಂದ ಈ ಮಕ್ಕಳು ನನ್ನ ಹೆಸರನ್ನೇ ಹೊಂದಿಕೊಳ್ಳುವರು. ನನ್ನ ಪೂರ್ವಿಕರಾದ ಅಬ್ರಹಾಮ್ ಮತ್ತು ಇಸಾಕರ ಹೆಸರನ್ನು ಇವರು ಹೊಂದಿಕೊಳ್ಳುವರು. ಇವರು ಭೂಮಿಯ ಮೇಲೆ ಬೆಳೆದು ದೊಡ್ಡ ಕುಟುಂಬಗಳಾಗುವಂತೆಯೂ ದೊಡ್ಡ ಜನಾಂಗಗಳಾಗುವಂತೆಯೂ ನಾನು ಪ್ರಾರ್ಥಿಸುವೆನು.” PS |
17. ಇಸ್ರೇಲನು ತನ್ನ ಬಲಗೈಯನ್ನು ಎಫ್ರಾಯೀಮನ ತಲೆಯ ಮೇಲಿಟ್ಟಿದ್ದರಿಂದ ಯೋಸೇಫನು ಅಸಮಾಧಾನದಿಂದ ನೋಡಿ ತಂದೆಯ ಕೈಯನ್ನು ಹಿಡಿದುಕೊಂಡನು; ಅಲ್ಲದೆ ತಂದೆಯ ಕೈಯನ್ನು ಎಫ್ರಾಯೀಮನ ತಲೆಯ ಮೇಲಿಂದ ತೆಗೆದುಕೊಂಡು ಮನಸ್ಸೆಯ ತಲೆಯ ಮೇಲೆ ಇಡಬೇಕೆಂದಿದ್ದನು.
|
18. ಯೋಸೇಫನು ತನ್ನ ತಂದೆಗೆ, “ನೀನು ನಿನ್ನ ಬಲಗೈಯನ್ನು ತಪ್ಪಾಗಿ ಎಫ್ರಾಯೀಮನ ಮೇಲೆ ಇಟ್ಟಿರುವೆ. ಮೊದಲು ಹುಟ್ಟಿದವನು ಮನಸ್ಸೆ” ಎಂದು ಹೇಳಿದನು. PEPS
|
19. ಅದಕ್ಕೆ ಅವನ ತಂದೆಯು “ನನಗೆ ಗೊತ್ತು ಮಗನೇ, ನನಗೆ ಗೊತ್ತು. ಮನಸ್ಸೆ ಮೊದಲು ಹುಟ್ಟಿದವನು. ಅವನು ಮಹಾವ್ಯಕ್ತಿಯಾಗುವನು. ಅವನು ಅನೇಕ ಜನರಿಗೆ ತಂದೆಯಾಗುವನು. ಆದರೆ ತಮ್ಮನು ಅಣ್ಣನಿಗಿಂತ ಮಹಾವ್ಯಕ್ತಿಯಾಗುವನು. ಅವನ ಕುಟುಂಬವು ತುಂಬ ದೊಡ್ಡದಾಗುವುದು” ಎಂದು ಹೇಳಿದನು. PEPS
|
20. ಅಂದು ಇಸ್ರೇಲನು ಅವರನ್ನು ಆಶೀರ್ವದಿಸಿ, “ಇಸ್ರೇಲರು ನಿಮ್ಮ ಹೆಸರುಗಳ ಮೂಲಕ
ಬೇರೆಯವರನ್ನು ಆಶೀರ್ವದಿಸುವರು. ‘ದೇವರು ನಿನ್ನನ್ನು ಎಫ್ರಾಯೀಮನಂತೆಯೂ ಮನಸ್ಸೆಯಂತೆಯೂ ಮಾಡಲಿ’ ಎಂದು ಹೇಳುವರು” ಎಂದನು. PS ಹೀಗೆ, ಇಸ್ರೇಲನು ಎಫ್ರಾಯೀಮನನ್ನು ಮನಸ್ಸೆಗಿಂತ ದೊಡ್ಡವನನ್ನಾಗಿ ಮಾಡಿದನು. PEPS |
21. ಬಳಿಕ ಇಸ್ರೇಲನು ಯೋಸೇಫನಿಗೆ, “ನೋಡು, ನಾನು ಸಾಯುವ ಕಾಲ ಸಮೀಪಿಸಿದೆ. ಆದರೆ ದೇವರು ಇನ್ನೂ ನಿನ್ನ ಸಂಗಡವಿರುವನು. ಅವನು ನಿನ್ನನ್ನು ನಿನ್ನ ಪೂರ್ವಿಕರ ದೇಶಕ್ಕೆ ಹಿಂತಿರುಗಿಸುವನು.
|
22. ನಾನು ನಿನ್ನ ಸಹೋದರರಿಗೆ ಕೊಟ್ಟ ಪಾಲಿಗಿಂತ ಹೆಚ್ಚಾಗಿ ಬೇರೊಂದನ್ನು ನಿನಗೆ ಕೊಟ್ಟಿದ್ದೇನೆ. ನಾನು ಅಮೋರಿಯರಿಂದ ಗೆದ್ದುಕೊಂಡಿರುವ ಬೆಟ್ಟವನ್ನು ನಿನಗೆ ಕೊಡುವೆನು. ನಾನು ಅವರೊಂದಿಗೆ ಖಡ್ಗಗಳಿಂದಲೂ ಬಿಲ್ಲುಗಳಿಂದಲೂ ಹೋರಾಡಿ ಆ ಬೆಟ್ಟವನ್ನು ವಶಪಡಿಸಿಕೊಂಡಿದ್ದೇನೆ” ಎಂದು ಹೇಳಿದನು. PE
|