2. ದೇವರು ಅವರನ್ನು ಗಂಡುಮತ್ತು ಹೆಣ್ಣುಗಳಾಗಿ ಉಂಟುಮಾಡಿದನು. ಆತನು ಅವರನ್ನು ನಿರ್ಮಿಸಿದ ದಿನದಲ್ಲೇ ಅವರನ್ನು ಆಶೀರ್ವದಿಸಿ ಅವರಿಗೆ, “ಮನುಷ್ಯ” ಎಂದು ಹೆಸರಿಟ್ಟನು.
|
3. ಆದಾಮನು 130 ವರ್ಷದವನಾದಾಗ ಮತ್ತೊಬ್ಬ ಮಗನನ್ನು ಪಡೆದನು. ಆ ಮಗನು ರೂಪದಲ್ಲಿ ಆದಾಮನಂತಿದ್ದನು. ಆದಾಮನು ಅವನಿಗೆ ಸೇತ ಎಂದು ಹೆಸರಿಟ್ಟನು.
|
4. ಸೇತನು ಹುಟ್ಟಿದ ಮೇಲೆ ಆದಾಮನು 800 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
|
7. ಎನೋಷನು ಹುಟ್ಟಿದ ಮೇಲೆ ಸೇತನು 807 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಸೇತನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
|
10. ಕೇನಾನನು ಹುಟ್ಟಿದ ಮೇಲೆ ಎನೋಷನು 815 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಬೇರೆ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
|
13. ಮಹಲಲೇಲನು ಹುಟ್ಟಿದ ಮೇಲೆ ಕೇನಾನನು 840 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಕೇನಾನನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
|
16. ಯೆರೆದನು ಹುಟ್ಟಿದ ಮೇಲೆ ಮಹಲಲೇಲನು 830 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
|
19. ಹನೋಕನು ಹುಟ್ಟಿದ ಮೇಲೆ ಯೆರೆದನು 800 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
|
22. ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ದೇವರ ಅನ್ಯೋನ್ಯತೆಯಲ್ಲಿ 300 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
|
24. ಹನೋಕನು ದೇವರ ಅನ್ಯೋನ್ಯತೆಯಲ್ಲಿ ಜೀವಿಸುತ್ತಿದ್ದಾಗ, ದೇವರು ಅವನನ್ನು ತನ್ನ ಬಳಿಗೆ ಕರೆದುಕೊಂಡನು. ಅಂದಿನಿಂದ ಅವನು ಕಣ್ಮರೆಯಾದನು.
|
26. ಲೆಮೆಕನು ಹುಟ್ಟಿದ ಮೇಲೆ ಮೆತೂಷೆಲಹನು 782 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
|
29. ಲೆಮೆಕನು, “ನಾವು ರೈತರಾಗಿ ಕಷ್ಟಪಟ್ಟು ಕೆಲಸ ಮಾಡುತ್ತೇವೆ, ಯಾಕೆಂದರೆ ದೇವರು ಭೂಮಿಯನ್ನು ಶಪಿಸಿದನು. ಆದರೆ ಈ ಮಗನು ನಮಗೆ ವಿಶ್ರಾಂತಿ ಕೊಡುವನು” ಎಂದು ಹೇಳಿ ಆ ಮಗುವಿಗೆ ನೋಹ ಎಂದು ಹೆಸರಿಟ್ಟನು.
|
30. ನೋಹನು ಹುಟ್ಟಿದ ಮೇಲೆ, ಲೆಮೆಕನು 595 ವರ್ಷ ಜೀವಿಸಿದನು. ಆ ಕಾಲದಲ್ಲಿ ಅವನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
|