5. ಭೂಮಿಯ ಮೇಲಿರುವ ಜನರು ತುಂಬ ದುಷ್ಟರಾಗಿದ್ದು ಯಾವಾಗಲೂ ಕೆಟ್ಟವಿಷಯಗಳ ಬಗ್ಗೆ ಆಲೋಚಿಸುತ್ತಿರುವುದನ್ನು ಯೆಹೋವನು ನೋಡಿದನು.
|
7. ಆದ್ದರಿಂದ ಯೆಹೋವನು, “ನಾನು ಸೃಷ್ಟಿಸಿದ ಜನರನ್ನೆಲ್ಲ ಭೂಮುಖದಿಂದ ನಾಶಮಾಡುವೆನು. ಪ್ರತಿಯೊಬ್ಬ ಮನುಷ್ಯನನ್ನೂ ಪ್ರತಿಯೊಂದು ಪ್ರಾಣಿಯನ್ನೂ ನೆಲದ ಮೇಲೆ ಹರಿದಾಡುವ ಪ್ರತಿಯೊಂದು ಜಂತುವನ್ನೂ ಆಕಾಶದಲ್ಲಿ ಹಾರಾಡುವ ಪಕ್ಷಿಗಳನ್ನೂ ನಾಶಮಾಡುವೆನು. ಇವುಗಳನ್ನೆಲ್ಲಾ ಸೃಷ್ಟಿಸಿದ್ದರಿಂದ ನನಗೆ ದುಃಖವಾಯಿತು” ಅಂದುಕೊಂಡನು.
|
13. ಆದ್ದರಿಂದ ದೇವರು ನೋಹನಿಗೆ, “ನಾನು ಎಲ್ಲಾ ಜನರಿಗೂ ಅಂತ್ಯವನ್ನು ಬರಮಾಡಬೇಕೆಂದಿದ್ದೇನೆ; ಯಾಕೆಂದರೆ ಅವರು ಕೋಪ, ಹಿಂಸೆಗಳಿಂದ ಭೂಮಿಯನ್ನು ತುಂಬಿಸಿದ್ದಾರೆ. ಆದಕಾರಣ ನಾನು ಎಲ್ಲಾ ಜೀವಿಗಳನ್ನು ನಾಶಮಾಡುವೆನು.
|
14. ನಿನಗೋಸ್ಕರ ಒಂದು ನಾವೆಯನ್ನು ತುರಾಯಿ ಮರದಿಂದ ತಯಾರಿಸು. ಆ ನಾವೆಯಲ್ಲಿ ಕೋಣೆಗಳನ್ನು ಮಾಡು. ಇಡೀ ನಾವೆಗೆ ಒಳಭಾಗದಲ್ಲೂ ಹೊರಭಾಗದಲ್ಲೂ ರಾಳವನ್ನು ಹಚ್ಚು.
|
15. “ನೀನು ತಯಾರಿಸುವ ನಾವೆಯು ನಾನೂರೈವತ್ತು ಅಡಿ ಉದ್ದವಾಗಿಯೂ ಎಪ್ಪತ್ತೈದು ಅಡಿ ಅಗಲವಾಗಿಯೂ ನಲವತ್ತೈದು ಅಡಿ ಎತ್ತರವಾಗಿಯೂ ಇರಬೇಕು.
|
16. ಕಿಟಕಿಯ ಮೇಲ್ಛಾವಣಿಗೆ ಹದಿನೆಂಟು ಇಂಚು ಕೆಳಗಿರಲಿ. ನಾವೆಯ ಪಾರ್ಶ್ವದಲ್ಲಿ ಬಾಗಿಲಿರಲಿ. ನಾವೆಯಲ್ಲಿ ಮೇಲಂತಸ್ತು ಮಧ್ಯಂತಸ್ತು ಮತ್ತು ಕೆಳಂತಸ್ತು ಎಂಬ ಮೂರು ಅಂತಸ್ತುಗಳಿರಲಿ.
|
17. “ನಾನು ನಿನಗೆ ಹೇಳುತ್ತಿರುವುದನ್ನು ಅರ್ಥಮಾಡಿಕೊ. ನಾನು ಭೂಮಿಯ ಮೇಲೆ ಮಹಾ ಜಲಪ್ರಳಯವನ್ನು ತರುವೆನು. ಆಕಾಶದ ಕೆಳಗಿರುವ ಎಲ್ಲಾ ಜೀವಿಗಳನ್ನು ನಾಶಮಾಡುವೆನು. ಭೂಮಿಯ ಮೇಲಿರುವ ಪ್ರತಿಯೊಂದೂ ಸಾಯುವುದು.
|
18. ನಾನು ನಿನ್ನೊಂದಿಗೆ ವಿಶೇಷ ಒಡಂಬಡಿಕೆಯನ್ನು ಮಾಡಿಕೊಳ್ಳುವೆ. ಅದೇನಂದರೆ, ನೀನು ಮತ್ತು ನಿನ್ನ ಹೆಂಡತಿ, ನಿನ್ನ ಗಂಡುಮಕ್ಕಳು ಮತ್ತು ಸೊಸೆಯಂದಿರು ನಾವೆಯೊಳಗೆ ಹೋಗುವಿರಿ.
|
19. ಇದಲ್ಲದೆ, ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯಲ್ಲಿ ಒಂದು ಗಂಡನ್ನೂ ಒಂದು ಹೆಣ್ಣನ್ನೂ ನಾವೆಯೊಳಗೆ ಸೇರಿಸಿಕೊ. ನಿನ್ನೊಡನೆ ಅವುಗಳನ್ನು ಜೀವದಿಂದುಳಿಸಿ ಕಾಪಾಡು.
|
20. ಭೂಮಿಯ ಮೇಲಿರುವ ಪ್ರತಿಯೊಂದು ಬಗೆಯ ಪಕ್ಷಿಗಳಲ್ಲಿ ಎರಡೆರಡೂ ಪ್ರತಿಯೊಂದು ಪ್ರಾಣಿಗಳಲ್ಲಿ ಎರಡೆರಡೂ ಮತ್ತು ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಜಂತುಗಳಲ್ಲಿ ಎರಡೆರಡೂ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುವುದಕ್ಕಾಗಿ ನಿನ್ನೊಂದಿಗಿರಲಿ.
|
21. ಭೂಮಿಯ ಮೇಲೆ ದೊರೆಯುವ ಎಲ್ಲಾ ಬಗೆಯ ಆಹಾರವನ್ನು ನಿಮಗಾಗಿಯೂ ಮತ್ತು ಪ್ರಾಣಿಗಳಿಗಾಗಿಯೂ ನಾವೆಯಲ್ಲಿ ತುಂಬಿಸಿಕೊ” ಎಂದು ಹೇಳಿದನು.
|