1. {ಹೊಸ ಪ್ರಾರಂಭ} PS ದೇವರು ನೋಹನನ್ನೂ ಅವನ ಮಕ್ಕಳನ್ನೂ ಆಶೀರ್ವದಿಸಿ ಅವರಿಗೆ, “ಅನೇಕ ಮಕ್ಕಳನ್ನು ಪಡೆದು ಭೂಮಿಯಲ್ಲೆಲ್ಲಾ ತುಂಬಿಕೊಳ್ಳಿರಿ.
|
2. ಭೂಮಿಯ ಮೇಲಿರುವ ಪ್ರತಿಯೊಂದು ಪ್ರಾಣಿಯೂ ನಿಮಗೆ ಹೆದರಿ ಭಯಪಡುವುದು; ಆಕಾಶದಲ್ಲಿ ಹಾರಾಡುವ ಪ್ರತಿಯೊಂದು ಪಕ್ಷಿಯೂ ನಿಮಗೆ ಹೆದರಿ ಭಯಪಡುವುದು; ನೆಲದ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯೂ ಮತ್ತು ಸಮುದ್ರದಲ್ಲಿರುವ ಪ್ರತಿಯೊಂದು ಮೀನೂ ನಿಮಗೆ ಹೆದರಿ ಭಯಪಡುವುದು. ನೀವು ಅವುಗಳಿಗೆಲ್ಲಾ ಒಡೆಯರಾಗಿರುತ್ತೀರಿ.
|
3. ಮೊದಲು, ನಿಮ್ಮ ಆಹಾರಕ್ಕಾಗಿ ಸಸ್ಯಗಳನ್ನು ಕೊಟ್ಟೆನು. ಈಗ ನಿಮ್ಮ ಆಹಾರಕ್ಕಾಗಿ ಪ್ರತಿಯೊಂದು ಪ್ರಾಣಿಯನ್ನೂ ಕೊಟ್ಟಿದ್ದೇನೆ. ಭೂಮಿಯ ಮೇಲಿರುವ ಎಲ್ಲವನ್ನೂ ನಾನು ನಿಮಗೋಸ್ಕರ ಕೊಟ್ಟಿದ್ದೇನೆ.
|
5. ಯಾವನಾದರೂ ನಿಮ್ಮ ಜೀವಹತ್ಯೆ ಮಾಡಿದರೆ, ನಾನು ಅವನ ಜೀವವನ್ನು ತೆಗೆಯುವೆನು. ಯಾವ ಪ್ರಾಣಿಯಾದರೂ ಮನುಷ್ಯನನ್ನು ಕೊಂದರೆ, ನಾನು ಆ ಪ್ರಾಣಿಯ ಪ್ರಾಣವನ್ನು ತೆಗೆಯುತ್ತೇನೆ.
|
6. “ದೇವರು ಮನುಷ್ಯನನ್ನು ತನ್ನ ಹೋಲಿಕೆಗನುಸಾರವಾಗಿ ನಿರ್ಮಿಸಿದನು.
ಆದ್ದರಿಂದ ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.” PS |
7. “ನೋಹನೇ, ನಿನಗೂ ನಿನ್ನ ಮಕ್ಕಳಿಗೂ ಅನೇಕ ಮಕ್ಕಳು ಹುಟ್ಟಲಿ. ನೀವು ಅಭಿವೃದ್ಧಿಗೊಂಡು ಭೂಮಿಯಲ್ಲಿ ತುಂಬಿಕೊಳ್ಳಿರಿ” ಎಂದು ಹೇಳಿದನು. PEPS
|
8. (8-9) ಆಮೇಲೆ ದೇವರು ನೋಹನಿಗೂ ಅವನ ಮಕ್ಕಳಿಗೂ, “ನಾನು ನಿಮಗೆ ಮತ್ತು ಮುಂದೆ ಜೀವಿಸುವ ನಿಮ್ಮ ಜನರಿಗೆ ವಾಗ್ದಾನ ಮಾಡುತ್ತೇನೆ.
|
10. ನಾವೆಯೊಳಗಿಂದ ಬಂದ ಎಲ್ಲಾ ಪಕ್ಷಿಗಳಿಗೆ, ಎಲ್ಲಾ ಪಶುಗಳಿಗೆ ಮತ್ತು ಪ್ರಾಣಿಗಳಿಗೆ ನಾನು ವಾಗ್ದಾನ ಮಾಡುತ್ತೇನೆ. ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಗೆ ವಾಗ್ದಾನ ಮಾಡುತ್ತೇನೆ.
|
11. ನಾನು ನಿಮಗೆ ಮಾಡುವ ವಾಗ್ದಾನವೇನೆಂದರೆ: ಭೂಮಿಯ ಮೇಲಿದ್ದ ಎಲ್ಲಾ ಜೀವಿಗಳು ಜಲಪ್ರಳಯದಿಂದ ನಾಶವಾದವು. ಆದರೆ ಮತ್ತೆಂದಿಗೂ ಈ ರೀತಿ ಆಗುವುದಿಲ್ಲ. ಜಲಪ್ರಳಯವು ಭೂಮಿಯ ಮೇಲಿರುವ ಎಲ್ಲಾ ಜೀವಿಗಳನ್ನು ಇನ್ನೆಂದಿಗೂ ನಾಶಗೊಳಿಸುವುದಿಲ್ಲ” ಎಂದು ಹೇಳಿದನು. PEPS
|
12. ಇದಲ್ಲದೆ ದೇವರು, “ನನ್ನ ವಾಗ್ದಾನಕ್ಕೆ ಸಾಕ್ಷಿಯಾಗಿ ನಾನು ನಿಮಗೊಂದು ಗುರುತನ್ನು ಕೊಡುವೆನು. ನಾನು ನಿಮ್ಮೊಡನೆ ಮತ್ತು ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯೊಡನೆ ಒಡಂಬಡಿಕೆ ಮಾಡಿಕೊಂಡಿರುವುದನ್ನು ಈ ಗುರುತು ತೋರಿಸುತ್ತದೆ. ಈ ಗುರುತು ಯಾವಾಗಲೂ ಇರುವುದು.
|
15. ನಾನು ಈ ಮುಗಿಲುಬಿಲ್ಲನ್ನು ನೋಡುವಾಗ, ನನಗೂ ನಿಮಗೂ ಮತ್ತು ಭೂಮಿಯ ಮೇಲಿರುವ ಎಲ್ಲಾ ಜೀವಿಗಳಿಗೂ ಆಗಿರುವ ಒಡಂಬಡಿಕೆಯನ್ನು ನೆನಪುಮಾಡಿಕೊಳ್ಳುವೆನು. ಜಲಪ್ರಳಯವು ಇನ್ನೆಂದಿಗೂ ಭೂಮಿಯ ಮೇಲಿರುವ ಎಲ್ಲಾ ಜೀವಿಗಳನ್ನು ನಾಶಗೊಳಿಸುವುದಿಲ್ಲ ಎಂಬುದೇ ಈ ಒಡಂಬಡಿಕೆ.
|
16. ನಾನು ಮೋಡಗಳಲ್ಲಿರುವ ಮುಗಿಲುಬಿಲ್ಲನ್ನು ನೋಡುವಾಗ, ಶಾಶ್ವತವಾದ ಈ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಳ್ಳುವೆನು. ನನಗೂ ಮತ್ತು ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಗಳಿಗೂ ಆದ ಒಡಂಬಡಿಕೆಯನ್ನು ನೆನಸಿಕೊಳ್ಳುವೆನು” ಎಂದು ಹೇಳಿದನು. PEPS
|
17. ಆದ್ದರಿಂದ ದೇವರು ನೋಹನಿಗೆ, “ಭೂಮಿಯ ಮೇಲಿರುವ ಎಲ್ಲಾ ಜೀವಿಗಳೊಡನೆ ನಾನು ಮಾಡಿಕೊಂಡ ಒಡಂಬಡಿಕೆಗೆ ಈ ಮುಗಿಲುಬಿಲ್ಲು ಗುರುತಾಗಿರುವುದು” ಎಂದು ಹೇಳಿದನು. PS
|
18. {ಸಮಸ್ಯೆಗಳ ಪ್ರಾರಂಭ} PS ನೋಹನ ಗಂಡುಮಕ್ಕಳು ನೋಹನೊಡನೆ ನಾವೆಯೊಳಗಿಂದ ಹೊರಬಂದರು. ಅವರ ಹೆಸರುಗಳು: ಶೇಮ್, ಹಾಮ್ ಮತ್ತು ಯೆಫೆತ್ (ಹಾಮನು ಕಾನಾನನ ತಂದೆ.)
|
22. ಕಾನಾನನ ತಂದೆಯಾದ ಹಾಮನು ತನ್ನ ತಂದೆ ಬೆತ್ತಲೆಯಾಗಿ ಮಲಗಿರುವುದನ್ನು ಕಂಡು ಈ ವಿಷಯವನ್ನು ಗುಡಾರದ ಹೊರಗಿದ್ದ ತನ್ನ ಸಹೋದರರಿಗೆ ತಿಳಿಸಿದನು.
|
23. ಆಗ ಶೇಮನು ಮತ್ತು ಯೆಫೆತನು ಒಂದು ಕಂಬಳಿಯನ್ನು ತಮ್ಮ ಬೆನ್ನಿನ ಮೇಲೆ ಹಾಕಿಕೊಂಡು ಹಿಮ್ಮುಖವಾಗಿ ಗುಡಾರದೊಳಗೆ ಬಂದು ತಮ್ಮ ತಂದೆಗೆ ಹೊದಿಸಿದರು. ಅವರು ಅವನ ಬೆತ್ತಲೆ ದೇಹವನ್ನು ನೋಡಲಿಲ್ಲ. PEPS
|
27. ದೇವರು ಯೆಫೆತನಿಗೆ ಹೆಚ್ಚು ಭೂಮಿಯನ್ನು ಕೊಡಲಿ.
ಶೇಮನ ಗುಡಾರಗಳಲ್ಲಿ ದೇವರು ವಾಸಿಸಲಿ ಮತ್ತು ಕಾನಾನನು ಅವರಿಗೆ ಗುಲಾಮನಾಗಿರಲಿ” ಎಂದು ಹೇಳಿದನು. PS |