1. {ಕ್ರಿಸ್ತನ ಯಜ್ಞವು ನಮ್ಮನ್ನು ನಿಷ್ಕಳಂಕರನ್ನಾಗಿ ಮಾಡುವುದು} PS ಧರ್ಮಶಾಸ್ತ್ರವು ಮುಂದೆ ಬರುವ ಉತ್ತಮ ಸಂಗತಿಗಳ ಅಸ್ಪಷ್ಟ ಚಿತ್ರಣವಾಗಿದೆ. ಅದು ನಿಜವಾದ ಸಂಗತಿಗಳ ಸ್ಪಷ್ಟ ಚಿತ್ರಣವಲ್ಲ. ಪ್ರತಿ ವರ್ಷವೂ ಒಂದೇ ರೀತಿಯ ಯಜ್ಞಗಳನ್ನು ಅರ್ಪಿಸಬೇಕೆಂದು ಅದು ಜನರಿಗೆ ತಿಳಿಸಿತು. ದೇವರನ್ನು ಆರಾಧಿಸಲು ಬರುವ ಜನರು ಅದೇ ರೀತಿಯ ಯಜ್ಞಗಳನ್ನು ಅರ್ಪಿಸುತ್ತಿದ್ದರು. ಆದರೆ ಆ ಜನರನ್ನು ಧರ್ಮಶಾಸ್ತ್ರವು ಎಂದಿಗೂ ನಿಷ್ಕಳಂಕರನ್ನಾಗಿ ಮಾಡಲಿಲ್ಲ.
|
2. ಅದು ಜನರನ್ನು ನಿಷ್ಕಳಂಕರನ್ನಾಗಿ ಮಾಡಿದ್ದರೆ, ಆ ಯಜ್ಞಗಳು ಈಗಾಗಲೇ ನಿಂತುಹೋಗುತ್ತಿದ್ದವು. ಆ ಜನರು ಆಗಲೇ ತಮ್ಮ ಪಾಪಗಳಿಂದ ಬಿಡುಗಡೆ ಹೊಂದಿ ಪರಿಶುದ್ಧರಾಗುತ್ತಿದ್ದರು. ತಾವು ಪಾಪಿಗಳೆಂಬ ಅರಿವು ಅವರಿಗಿರುತ್ತಿರಲಿಲ್ಲ.
|
5. ಕ್ರಿಸ್ತನು ಈ ಲೋಕದಲ್ಲಿ ಪ್ರತ್ಯಕ್ಷನಾದಾಗ ಹೇಳಿದ್ದೇನೆಂದರೆ: “ದೇವರೇ, ನಿನಗೆ ಯಜ್ಞನೈವೇದ್ಯಗಳು ಬೇಕಾಗಿಲ್ಲ.
ಆದರೆ ನೀನು ನನಗಾಗಿ ಒಂದು ದೇಹವನ್ನು ಸಿದ್ಧಮಾಡಿಕೊಟ್ಟಿರುವೆ. |
7. ಆಗ ನಾನು, ‘ದೇವರೇ, ನಾನು ಇಲ್ಲಿದ್ದೇನೆ.
ಧರ್ಮಶಾಸ್ತ್ರದಲ್ಲಿ ನನ್ನ ಬಗ್ಗೆ ಬರೆದಿರುವಂತೆಯೇ ನಿನ್ನ ಚಿತ್ತಕ್ಕನುಸಾರವಾಗಿ ಮಾಡಲು ನಾನು ಬಂದಿದ್ದೇನೆ’ ಎಂದು ಹೇಳಿದೆ.” ಕೀರ್ತನೆ. 40:6-8 |
8. ಈ ಪವಿತ್ರ ಗ್ರಂಥದಲ್ಲಿ ಕ್ರಿಸ್ತನು ಮೊದಲನೆಯದಾಗಿ ಹೇಳಿದ್ದೇನೆಂದರೆ: “ನಿನಗೆ ಯಜ್ಞನೈವೇದ್ಯಗಳು ಬೇಕಾಗಿಲ್ಲ. ನೀನು ಸರ್ವಾಂಗಹೋಮಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ಸಂತೋಷಪಡಲಿಲ್ಲ.” (ಇವುಗಳೆಲ್ಲ ಧರ್ಮಶಾಸ್ತ್ರವು ಆಜ್ಞಾಪಿಸುವ ಯಜ್ಞಗಳು.)
|
9. ನಂತರ ಕ್ರಿಸ್ತನು ಹೇಳಿದ್ದೇನೆಂದರೆ, “ದೇವರೇ, ನಾನು ಇಲ್ಲಿದ್ದೇನೆ. ನಿನ್ನ ಚಿತ್ತಕ್ಕನುಸಾರವಾಗಿ ಮಾಡಲು ನಾನು ಬಂದಿದ್ದೇನೆ.” ✡ಉಲ್ಲೇಖನ: ಕೀರ್ತನೆ. 40:6-7. ಆದ್ದರಿಂದ ದೇವರು ಯಜ್ಞಗಳ ಮೊದಲನೆ ವ್ಯವಸ್ಥೆಯನ್ನು ಕೊನೆಗೊಳಿಸಿ, ತನ್ನ ಹೊಸ ಮಾರ್ಗವನ್ನು ಆರಂಭಿಸಿದ್ದಾನೆ.
|
10. ದೇವರ ಇಷ್ಟಕ್ಕನುಸಾರವಾದ ಕಾರ್ಯಗಳನ್ನು ಯೇಸು ಕ್ರಿಸ್ತನು ಮಾಡಿದನು. ಆ ಕಾರಣದಿಂದಲೇ, ಯಜ್ಞವಾಗಿ ಅರ್ಪಿತವಾದ ಆತನ ದೇಹದ ಮೂಲಕ ನಾವು ಪರಿಶುದ್ಧರಾದೆವು. ಆತನು ಶಾಶ್ವತವಾದ ಯಜ್ಞವನ್ನು ಒಂದೇ ಸಲ ಅರ್ಪಿಸಿದನು. PEPS
|
11. ಪ್ರತಿದಿನವೂ ಯಾಜಕರು ನಿಂತುಕೊಂಡು ತಮ್ಮ ಧಾರ್ಮಿಕ ಸೇವೆಯನ್ನು ಮಾಡುತ್ತಾರೆ. ಅವರು ಮತ್ತೆಮತ್ತೆ ಅದೇ ಯಜ್ಞಗಳನ್ನು ಅರ್ಪಿಸುತ್ತಾರೆ. ಆದರೆ ಅವರ ಪಾಪಗಳನ್ನು ತೆಗೆದುಹಾಕಲು ಯಜ್ಞಗಳಿಗೆ ಎಂದಿಗೂ ಸಾಧ್ಯವಿಲ್ಲ.
|
12. ಆದರೆ ಕ್ರಿಸ್ತನು ಪಾಪಗಳಿಗಾಗಿ ಶಾಶ್ವತವಾದ ಒಂದೇ ಯಜ್ಞವನ್ನು ಅರ್ಪಿಸಿದನು. ನಂತರ ಆತನು ದೇವರ ಬಲಗಡೆಯಲ್ಲಿ ಕುಳಿತುಕೊಂಡನು.
|
14. ಒಂದೇ ಯಜ್ಞದ ಮೂಲಕ ಆತನು ತನ್ನ ಜನರನ್ನು ಎಂದೆಂದಿಗೂ ನಿಷ್ಕಳಂಕರನ್ನಾಗಿ ಮಾಡಿದನು. ಪರಿಶುದ್ಧರಾಗಿ ಮಾಡಲ್ಪಡುತ್ತಿರುವ ಜನರೇ ಇವರು. PEPS
|
16. “ಮುಂದಿನ ಕಾಲದಲ್ಲಿ ನಾನು ನನ್ನ ಜನರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿದೆ ಎಂದು ಪ್ರಭುವು ಹೇಳುತ್ತಾನೆ:
ನಾನು ನನ್ನ ಆಜ್ಞೆಗಳನ್ನು ಅವರ ಹೃದಯದಲ್ಲಿ ಇಡುವೆನು; ಅವರ ಮನಸ್ಸಿನ ಮೇಲೆ ಬರೆಯುವೆನು.” ಯೆರೆಮೀಯ 31:33 |
17. ನಂತರ ಆತನು ಹೇಳುವುದೇನೆಂದರೆ: “ನಾನು ಅವರ ಪಾಪಗಳನ್ನು ಮತ್ತು ಅವರ ಕೆಟ್ಟಕಾರ್ಯಗಳನ್ನು ಕ್ಷಮಿಸುತ್ತೇನೆ.
ಅವುಗಳನ್ನು ಮತ್ತೆಂದಿಗೂ ನೆನಪು ಮಾಡಿಕೊಳ್ಳುವುದಿಲ್ಲ.” ಯೆರೆಮೀಯ 31:34 |
19. {ಸಮೀಪಕ್ಕೆ ಬನ್ನಿರಿ} PS (19-20) ಸಹೋದರ ಸಹೋದರಿಯರೇ, ನಾವು ಮಹಾ ಪವಿತ್ರಸ್ಥಳವನ್ನು ಪ್ರವೇಶಿಸಲು ಸಂಪೂರ್ಣವಾಗಿ ಸ್ವತಂತ್ರರಾಗಿದ್ದೇವೆ. ಯೇಸು ನಮಗಾಗಿ ತೆರೆದಿರುವ ಹೊಸ ಮಾರ್ಗದ ಮೂಲಕ ನಾವು ಭಯವಿಲ್ಲದೆ ಪ್ರವೇಶಿಸಬಹುದು. ಅದು ಜೀವವುಳ್ಳ ಮಾರ್ಗ. ಕ್ರಿಸ್ತನ ದೇಹವೆಂಬ ತೆರೆಯ ಮೂಲಕ ಈ ಹೊಸ ಮಾರ್ಗವು ನಮ್ಮನ್ನು ಮುಂದಕ್ಕೆ ಕೊಂಡೊಯ್ಯವುದು.
|
22. ನಾವು ತೊಳೆಯಲ್ಪಟ್ಟವರಾಗಿದ್ದು ಕೆಟ್ಟ ಮನಸ್ಸಾಕ್ಷಿಯಿಂದ ಬಿಡುಗಡೆ ಹೊಂದಿದ್ದೇವೆ. ನಮ್ಮ ದೇಹಗಳನ್ನು ಶುದ್ಧವಾದ ನೀರಿನಿಂದ ತೊಳೆಯಲಾಗಿದೆ. ಆದ್ದರಿಂದ ಪೂರ್ಣನಂಬಿಕೆಯಿಂದಲೂ ಶುದ್ಧವಾದ ಹೃದಯದಿಂದಲೂ ದೇವರ ಬಳಿಗೆ ಬರೋಣ.
|
23. ನಮ್ಮಲ್ಲಿರುವ ನಿರೀಕ್ಷೆಯನ್ನು ದೃಢವಾಗಿ ಕಾಯ್ದುಕೊಂಡು ಅದರ ಬಗ್ಗೆ ಜನರಿಗೆ ತಿಳಿಸುವುದರಲ್ಲಿ ದೃಢವಾಗಿರೋಣ. ದೇವರು ತನ್ನ ವಾಗ್ದಾನವನ್ನು ಈಡೇರಿಸುತ್ತಾನೆ ಎಂಬ ಭರವಸೆ ನಮ್ಮಲ್ಲಿರಬೇಕು. PS
|
24. {ಒಬ್ಬರಿಗೊಬ್ಬರು ಸಹಾಯಮಾಡಿ ಶಕ್ತಿಯುಳ್ಳವರಾಗಿರಿ} PS ಒಬ್ಬರಿಗೊಬ್ಬರು ಹಿತಚಿಂತಕರಾಗಿರೋಣ. ಆಗ ಒಬ್ಬರಿಗೊಬ್ಬರು ಪ್ರೀತಿಯನ್ನು ತೋರ್ಪಡಿಸುವುದಕ್ಕೂ ಒಳ್ಳೆಯಕಾರ್ಯಗಳನ್ನು ಮಾಡುವುದಕ್ಕೂ ಪ್ರೋತ್ಸಾಹಿಸಲು ಸಾಧ್ಯವಾಗುತ್ತದೆ.
|
25. ನಾವು ಸಭೆಯಾಗಿ ಸೇರಿಬರುವುದನ್ನು ಬಿಡಬಾರದು. ಕೆಲವರು ಸಭೆಗೆ ಬರುತ್ತಿಲ್ಲ. ನಾವು ಒಟ್ಟಾಗಿ ಸೇರಿಬಂದು ಒಬ್ಬರನ್ನೊಬ್ಬರು ಬಲಪಡಿಸಬೇಕು. ಯೇಸುವು ಪ್ರತ್ಯಕ್ಷನಾಗುವ ದಿನ *ಯೇಸುವು … ದಿನ ಇದು ಕ್ರಿಸ್ತನ ಎರಡನೇ ಬರೋಣದ ಸೂಚನೆಯಾಗಿದೆ. ಸಮೀಪವಾಗುತ್ತಿರುವುದರಿಂದ ನೀವು ಇದನ್ನು ಮತ್ತಷ್ಟು ಹೆಚ್ಚಾಗಿ ಮಾಡಬೇಕು. PS
|
26. {ಕ್ರಿಸ್ತನಿಂದ ದೂರ ಸರಿಯದಿರಿ} PS ನಾವು ಸತ್ಯವನ್ನು ತಿಳಿದುಕೊಂಡ ಮೇಲೆಯೂ ಪಾಪಗಳನ್ನು ಮಾಡುತ್ತಲೇ ಇದ್ದರೆ, ನಮ್ಮ ಪಾಪಗಳನ್ನು ಯಾವ ಯಜ್ಞವೂ ಪರಿಹರಿಸುವುದಿಲ್ಲ.
|
27. ನಾವು ಪಾಪಗಳಲ್ಲಿಯೇ ಮುಂದುವರಿದರೆ, ನ್ಯಾಯತೀರ್ಪಿನ ಭಯದಲ್ಲಿ ಮತ್ತು ದೇವರ ವಿರುದ್ಧವಾಗಿ ಜೀವಿಸುವವರನ್ನು ದಹಿಸುವ ಭಯಂಕರ ಬೆಂಕಿಯ ಭಯದಲ್ಲಿ ಜೀವಿಸಬೇಕಾಗುತ್ತದೆ.
|
28. ಮೋಶೆಯ ನಿಯಮಗಳಿಗೆ ಅವಿಧೇಯನಾದ ವ್ಯಕ್ತಿಯು ಇಬ್ಬರು ಅಥವಾ ಮೂವರು ಸಾಕ್ಷಿಗಳಿಂದ ತಪ್ಪಿತಸ್ಥನೆಂದು ನಿರ್ಧರಿಸಲ್ಪಟ್ಟರೆ, ಅವನಿಗೆ ಕ್ಷಮೆ ದೊರೆಯುತ್ತಿರಲಿಲ್ಲ. ಅವನನ್ನು ಕೊಂದುಹಾಕುತ್ತಿದ್ದರು.
|
29. ಹೀಗಿರಲು ದೇವರ ಮಗನನ್ನು ದ್ವೇಷಿಸುವ ಒಬ್ಬ ವ್ಯಕ್ತಿಯನ್ನು ಏನು ಮಾಡಬೇಕೆಂದು ನೀವು ಆಲೋಚಿಸುವಿರಿ? ನಿಜವಾಗಿಯೂ ಆ ವ್ಯಕ್ತಿಗೆ ಇದಕ್ಕಿಂತಲೂ ತೀವ್ರವಾದ ದಂಡನೆಯನ್ನು ವಿಧಿಸಬೇಕಲ್ಲವೇ? ಹೌದು, ಹೊಸ ಒಡಂಬಡಿಕೆಯ ರಕ್ತಕ್ಕೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ಕ್ರೂರವಾದ ದಂಡನೆಯಾಗಬೇಕು. ಆ ರಕ್ತವು ಅವನನ್ನು ಪವಿತ್ರನನ್ನಾಗಿಸಿತು. ದೇವರಾತ್ಮನ ಕೃಪೆಗೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ತೀವ್ರವಾದ ದಂಡನೆಯಾಗಬೇಕು.
|
30. “ಜನರು ಮಾಡುವ ತಪ್ಪು ಕಾರ್ಯಗಳಿಗಾಗಿ ನಾನು ಅವರನ್ನು ದಂಡಿಸುತ್ತೇನೆ. ನಾನು ಮುಯ್ಯಿಗೆ ಮುಯ್ಯಿ ತೀರಿಸುತ್ತೇನೆ.” ✡ಉಲ್ಲೇಖನ: ಕೀರ್ತನೆ. 135:14. ಎಂದು ದೇವರು ಹೇಳಿದ್ದು ನಮಗೆ ತಿಳಿದೇ ಇದೆ.
|
31. “ಪ್ರಭುವು ತನ್ನ ಜನರಿಗೆ ನ್ಯಾಯತೀರ್ಪು ನೀಡುತ್ತಾನೆ” ಎಂದು ಸಹ ದೇವರು ಹೇಳಿದ್ದಾನೆ. ಜೀವಸ್ವರೂಪನಾದ ದೇವರ ಹಿಡಿತಕ್ಕೆ ಸಿಕ್ಕಿ ಬೀಳುವುದು ಪಾಪಿಗೆ ಭಯಂಕರವಾಗಿದೆ. PS
|
32. {ನಿಮ್ಮಲ್ಲಿರುವ ಸಂತೋಷ ಮತ್ತು ಧೈರ್ಯಗಳನ್ನು ಬಿಡಬೇಡಿ} PS ನೀವು ಸತ್ಯವನ್ನು ತಿಳಿದುಕೊಂಡ ಆ ದಿನಗಳನ್ನು ನೆನಪು ಮಾಡಿಕೊಳ್ಳಿ. ನೀವು ಅನೇಕ ಸಂಕಟಗಳಲ್ಲಿ ಹೋರಾಟ ಮಾಡಿದರೂ, ಧೃತಿಗೆಡದೆ ಮುಂದುವರಿದಿರಿ.
|
33. ಕೆಲವು ಸಂದರ್ಭಗಳಲ್ಲಿ ಜನರು ನಿಮಗೆ ದ್ವೇಷಮಯ ಸಂಗತಿಗಳನ್ನು ಹೇಳಿದರು ಹಾಗೂ ಅನೇಕ ಜನರ ಮುಂದೆ ನಿಮ್ಮನ್ನು ಹಿಂಸಿಸಿದರು. ಅದೇ ರೀತಿಯ ಹಿಂಸೆಗೆ ಗುರಿಯಾಗಿದ್ದ ಜನರಿಗೆ ಕೆಲವು ಸಂದರ್ಭಗಳಲ್ಲಿ ಸಹಾಯ ಮಾಡಿದಿರಿ.
|
34. ಹೌದು, ಸೆರೆಯಲ್ಲಿರುವ ಜನರಿಗೆ ಸಹಾಯ ಮಾಡಿದಿರಿ ಮತ್ತು ಅವರ ಸಂಕಟಗಳಲ್ಲಿ ಪಾಲ್ಗೊಂಡಿರಿ. ನಿಮ್ಮ ಸ್ವತ್ತುಗಳನ್ನೆಲ್ಲ ನಿಮ್ಮಿಂದ ಕಿತ್ತುಕೊಂಡು ಹೋದಾಗಲೂ ಸಂತೋಷದಿಂದಲೇ ಇದ್ದಿರಿ. ಅದಕ್ಕಿಂತಲೂ ಉತ್ತಮವಾದದ್ದೂ ಶಾಶ್ವತವಾದದ್ದೂ ನಿಮಗೆ ದೊರೆತಿದೆ ಎಂದು ನಿಮಗೆ ತಿಳಿದಿದ್ದ ಕಾರಣ ನೀವು ಸಂತೋಷವಾಗಿದ್ದಿರಿ. PEPS
|
36. ನೀವು ತಾಳ್ಮೆಯಿಂದಿರಬೇಕು, ನೀವು ದೇವರ ಚಿತ್ತಾನುಸಾರವಾಗಿ ಮಾಡಿದ ನಂತರ ಆತನ ವಾಗ್ದಾನದಂತೆ ನಿಮಗೆ ಪ್ರತಿಫಲವು ಸಿಕ್ಕೇ ಸಿಗುತ್ತದೆ.
|
38. ನೀತಿವಂತನು ನಂಬಿಕೆಯಿಂದಲೇ
ಜೀವವನ್ನು ಹೊಂದಿಕೊಳ್ಳುವನು. ಆದರೆ ಅವನು ಭಯದಿಂದ ಹಿಂಜರಿದರೆ ನಾನು ಅವನಲ್ಲಿ ಸಂತೋಷಪಡುವುದಿಲ್ಲ.”ಹಬಕ್ಕೂಕ 2:3-4 |
39. ಆದರೆ ನಾವು ಹಿಂಜರಿಯುವ ಜನರಲ್ಲ, ನಾಶವಾಗುವ ಜನರೂ ಅಲ್ಲ. ನಾವು ನಂಬಿಕೆಯುಳ್ಳವರಾಗಿದ್ದೇವೆ ಮತ್ತು ರಕ್ಷಣೆ ಹೊಂದಿದವರಾಗಿದ್ದೇವೆ. PE
|