ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಇಬ್ರಿಯರಿಗೆ
1. {ನಂಬಿಕೆ} [PS] ನಂಬಿಕೆ ಎಂದರೆ ನಾವು ನಿರೀಕ್ಷೆಯಿಂದಿರುವ ಸಂಗತಿಗಳಲ್ಲಿ ಭರವಸದಿಂದಿರುವುದೂ ನಮ್ಮ ಕಣ್ಣಿಗೆ ಕಾಣದಿರುವುದನ್ನು ನಿಜವೆಂದು ತಿಳಿದುಕೊಳ್ಳುವುದೂ ಆಗಿದೆ.
2. ಬಹಳ ಹಿಂದಿನ ಕಾಲದಲ್ಲಿ ಜೀವಿಸಿದ್ದ ಜನರಲ್ಲಿ ಈ ರೀತಿಯ ನಂಬಿಕೆಯಿದ್ದುದರಿಂದ ದೇವರು ಅವರ ವಿಷಯದಲ್ಲಿ ಸಂತೋಷಪಟ್ಟನು. [PE][PS]
3. ದೇವರು ತನ್ನ ಆಜ್ಞೆಯಿಂದ ಈ ಲೋಕವನ್ನು ಸೃಷ್ಟಿಸಿದನೆಂಬುದನ್ನು ಅರ್ಥಮಾಡಿಕೊಳ್ಳಲು ನಂಬಿಕೆ ನಮಗೆ ಸಹಾಯ ಮಾಡುತ್ತದೆ. ಹೇಗೆಂದರೆ ನಮ್ಮ ಕಣ್ಣಿಗೆ ಕಾಣುವಂಥ ವಸ್ತುಗಳಿಂದ ಈ ಜಗತ್ತು ಸೃಷ್ಟಿಯಾಗಲಿಲ್ಲ. [PE][PS]
4. ಕಾಯಿನ ಮತ್ತು ಹೇಬೆಲರಿಬ್ಬರೂ ದೇವರಿಗೆ ಯಜ್ಞಗಳನ್ನು ಅರ್ಪಿಸಿದರು. ಆದರೆ ಹೇಬೆಲನಲ್ಲಿ ನಂಬಿಕೆಯಿದ್ದುದರಿಂದ ಅವನು ದೇವರಿಗೆ ಉತ್ತಮವಾದ ಯಜ್ಞವನ್ನು ಅರ್ಪಿಸಿದನು. ಅವನು ಅರ್ಪಿಸಿದ ವಸ್ತುಗಳಿಂದ ತನಗೆ ಸಂತೋಷವಾಯಿತೆಂದು ದೇವರೇ ಹೇಳಿದನು. ಅವನಲ್ಲಿ ನಂಬಿಕೆಯಿದ್ದುದರಿಂದ ದೇವರು ಅವನನ್ನು ಒಳ್ಳೆಯ ಮನುಷ್ಯನೆಂದು ಕರೆದನು. ಹೇಬೆಲನು ಸತ್ತುಹೋದನು, ಆದರೂ ತನ್ನ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ. [PE][PS]
5. ಹನೋಕನು ಸಾವನ್ನು ಅನುಭವಿಸದೆ ಈ ಲೋಕದಿಂದ ಮೇಲೋಕಕ್ಕೆ ಒಯ್ಯಲ್ಪಟ್ಟನು. ಪವಿತ್ರ ಗ್ರಂಥವು ಹೇಳುವಂತೆ, ಅವನು ಒಯ್ಯಲ್ಪಡುವುದಕ್ಕಿಂತ ಮೊದಲು ದೇವರಿಗೆ ನಿಜವಾಗಿಯೂ ಮೆಚ್ಚಿಕೆಯಾಗಿದ್ದನು. ತರುವಾಯ ಜನರಿಗೆ ಅವನು ಸಿಕ್ಕಲೇ ಇಲ್ಲ. ಅವನ ನಂಬಿಕೆಯ ದೆಸೆಯಿಂದ ದೇವರು ಅವನನ್ನು ತನ್ನೊಡನಿರಲು ಕೊಂಡೊಯ್ದನು.
6. ನಂಬಿಕೆಯಿಲ್ಲದೆ ದೇವರನ್ನು ಯಾರೂ ಮೆಚ್ಚಿಸಲಾಗುವುದಿಲ್ಲ. ದೇವರ ಬಳಿಗೆ ಬರುವ ಯಾರೇ ಆಗಲಿ, ದೇವರು ಇದ್ದಾನೆಂತಲೂ ಆತನನ್ನು ಮನಃಪೂರ್ವಕವಾಗಿ ಹುಡುಕುವ ಜನರಿಗೆ ಆತನು ಪ್ರತಿಫಲವನ್ನು ಕೊಡುತ್ತಾನೆಂತಲೂ ನಂಬಬೇಕು. [PE][PS]
7. ಕಣ್ಣಿಗೆ ಇನ್ನೂ ಕಾಣದಿದ್ದ ಸಂಗತಿಗಳ ಬಗ್ಗೆ ದೇವರು ನೋಹನನ್ನು ಎಚ್ಚರಿಸಿದನು. ನೋಹನು ದೇವರಲ್ಲಿ ನಂಬಿಕೆಯಿಟ್ಟಿದ್ದನು ಮತ್ತು ಭಕ್ತಿಯುಳ್ಳವನಾಗಿದ್ದನು. ಆದ್ದರಿಂದ ಅವನು ತನ್ನ ಕುಟುಂಬ ರಕ್ಷಣೆಗಾಗಿ ದೊಡ್ಡ ನಾವೆಯನ್ನು ಕಟ್ಟಿ, ಈ ಲೋಕದ ತಪ್ಪನ್ನು ತೋರ್ಪಡಿಸಿದನು. ಹೀಗೆ, ನಂಬಿಕೆಯ ಮೂಲಕ ನೀತಿವಂತರಾದ ಜನರಲ್ಲಿ ಅವನೂ ಒಬ್ಬನಾದನು. [PE][PS]
8. ದೇವರು ತಾನು ಕೊಡುತ್ತೇನೆಂದು ವಾಗ್ದಾನ ಮಾಡಿದ್ದ ಸ್ಥಳಕ್ಕೆ ಪ್ರಯಾಣ ಮಾಡಬೇಕೆಂದು ಅಬ್ರಹಾಮನನ್ನು ಕರೆದನು. ಆ ಸ್ಥಳವು ಎಲ್ಲಿದೆಯೆಂಬುದು ಅವನಿಗೆ ತಿಳಿದಿರಲಿಲ್ಲ. ಅಬ್ರಹಾಮನಲ್ಲಿ ನಂಬಿಕೆಯಿದ್ದುದರಿಂದ, ದೇವರಿಗೆ ವಿಧೇಯನಾಗಿ ಪ್ರಯಾಣ ಮಾಡಲಾರಂಭಿಸಿದನು.
9. ದೇವರು ಕೊಡುವುದಾಗಿ ವಾಗ್ದಾನ ಮಾಡಿದ್ದ ದೇಶದಲ್ಲಿ ಅವನು ಪ್ರವಾಸಿಗನಂತೆ ವಾಸಮಾಡಿದ್ದು ನಂಬಿಕೆಯಿಂದಲೇ. ಅದೇ ವಾಗ್ದಾನಕ್ಕೆ ಸಹ ಭಾದ್ಯರಾಗಿದ್ದ ಇಸಾಕನೂ ಯಾಕೋಬನೂ ಅವನಂತೆಯೇ ಡೇರೆಗಳಲ್ಲಿ ವಾಸಿಸಿದರು.
10. ಅಬ್ರಹಾಮನು ಶಾಶ್ವತವಾದ ಅಡಿಪಾಯಗಳುಳ್ಳ ನಗರಕ್ಕಾಗಿ ಕಾದಿದ್ದನು. ದೇವರೇ ಸಂಕಲ್ಪಿಸಿ, ನಿರ್ಮಿಸಿದ ನಗರಕ್ಕಾಗಿ ಅವನು ಕಾದಿದ್ದನು. [PE][PS]
11. ಅಬ್ರಹಾಮನು ಮಕ್ಕಳನ್ನು ಪಡೆಯಲಾಗದಷ್ಟು ವೃದ್ಧನಾಗಿದ್ದನು. ಸಾರಳು ಮಕ್ಕಳನ್ನು ಪಡೆಯಲು ಸಮರ್ಥಳಾಗಿರಲಿಲ್ಲ. ಆದರೆ ಅಬ್ರಹಾಮನಿಗೆ ದೇವರಲ್ಲಿ ನಂಬಿಕೆಯಿದ್ದುದರಿಂದ, ಅವರು ಮಕ್ಕಳನ್ನು ಪಡೆಯಲು ಸಮರ್ಥರಾಗುವಂತೆ ದೇವರು ಮಾಡಿದನು.
12. ಅವನು ಮೃತಪ್ರಾಯನಾಗಿದ್ದವನಂತೆ ವೃದ್ಧನಾಗಿದ್ದರೂ ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದ ಉಸುಬಿನಂತೆಯೂ ಅಸಂಖ್ಯಾತವಾಗಿ ಮಕ್ಕಳು ಹುಟ್ಟಿದರು. [PE][PS]
13. ಈ ಮಹಾಪುರಷರೆಲ್ಲರೂ ತಾವು ಸಾಯುವವರೆಗೂ ನಂಬಿಕೆಯುಳ್ಳವರಾಗಿದ್ದರು. ದೇವರು ತನ್ನ ಜನರಿಗೆ ವಾಗ್ದಾನ ಮಾಡಿದ್ದವುಗಳನ್ನು ಆ ಜನರು ಪಡೆಯಲಿಲ್ಲ. ಮುಂದೆ ಬಹುಕಾಲದ ನಂತರ ಬರಲಿದ್ದ ಅವುಗಳನ್ನು ನೋಡಿ ಅವರು ಸಂತೋಷಗೊಂಡರು. ಅವರು ತಾವು ಈ ಲೋಕದಲ್ಲಿ ಪ್ರವಾಸಿಗಳಂತೆ ಮತ್ತು ಅಪರಿಚಿತರಂತೆ ಇದ್ದೇವೆ ಎಂಬುದನ್ನು ಒಪ್ಪಿಕೊಂಡರು.
14. ಅವರು ಹಾಗೆ ಒಪ್ಪಿಕೊಂಡಿದ್ದರಿಂದ ತಾವು ಸ್ವದೇಶಕ್ಕಾಗಿ ಕಾದಿರುವುದಾಗಿ ತೋರ್ಪಡಿಸಿಕೊಂಡಂತಾಯಿತು.
15. ಆ ಜನರು ತಾವು ಬಿಟ್ಟುಬಂದ ದೇಶದ ಮೇಲೇನಾದರೂ ಮನಸ್ಸಿಟ್ಟಿದ್ದರೆ, ಅವರು ಮರಳಿಹೋಗುತ್ತಿದ್ದರು.
16. ಆದರೆ ಆ ಜನರು ಉತ್ತಮ ದೇಶವಾದ ಪರಲೋಕಕ್ಕಾಗಿ ಕಾದಿದ್ದರು. ಆದ್ದರಿಂದ ದೇವರು ತನ್ನನ್ನು ಅವರ ದೇವರೆಂದು ಹೇಳಿಕೊಳ್ಳಲು ನಾಚಿಕೆಪಡದೆ ಅವರಿಗಾಗಿ ಒಂದು ನಗರವನ್ನು ಸಿದ್ಧಪಡಿಸಿದನು. [PE][PS]
17. (17-18) ದೇವರು ಅಬ್ರಹಾಮನ ನಂಬಿಕೆಯನ್ನು ಪರೀಕ್ಷಿಸಿದನು. ಇಸಾಕನನ್ನು ಯಜ್ಞವಾಗಿ ಸಮರ್ಪಿಸೆಂದು ದೇವರು ಅವನಿಗೆ ಹೇಳಿದನು. ಅಬ್ರಹಾಮನಲ್ಲಿ ನಂಬಿಕೆಯಿದ್ದುದರಿಂದ ವಿಧೇಯನಾದನು. ದೇವರು ಅವನಿಗೆ, “ನಿನ್ನ ಸಂತತಿಗಳವರು ಇಸಾಕನ ಮೂಲಕ ಬರುವರು” [✡ಉಲ್ಲೇಖನ: ಆದಿಕಾಂಡ 21:12.] ಎಂದು ಮೊದಲೇ ವಾಗ್ದಾನ ಮಾಡಿದ್ದನು. ಆದರೂ ತನ್ನ ಒಬ್ಬನೇ ಮಗನನ್ನು ಅರ್ಪಿಸಲು ಅವನು ಸಿದ್ಧನಾಗಿದ್ದನು.
18.
19. ದೇವರು ಸತ್ತವರನ್ನು ಜೀವಂತವಾಗಿ ಎಬ್ಬಿಸಬಲ್ಲನೆಂದು ಅವನು ನಂಬಿದ್ದನು. ಇಸಾಕನನ್ನು ಕೊಲ್ಲದಂತೆ ದೇವರು ಅವನನ್ನು ತಡೆದಾಗ, ಅವನಿಗೆ ನಿಜವಾಗಿಯೂ ಇಸಾಕನನ್ನು ಸಾವಿನಿಂದ ಮರಳಿ ಪಡೆದಂತಾಯಿತು. [PE][PS]
20. ಇಸಾಕನು ಯಾಕೋಬನ ಮತ್ತು ಏಸಾವನ ಭವಿಷ್ಯತ್ತನ್ನು ಆಶೀರ್ವದಿಸಿದನು. ಇಸಾಕನಲ್ಲಿದ್ದ ನಂಬಿಕೆಯೇ ಇದಕ್ಕೆ ಕಾರಣ.
21. ಯಾಕೋಬನು ಯೋಸೇಫನ ಮಕ್ಕಳಿಬ್ಬರನ್ನೂ ತಾನು ಸಾಯುವ ಗಳಿಗೆಯಲ್ಲಿ ಆಶೀರ್ವದಿಸಿದನು. ಅವನು ಊರುಗೋಲಿನ ಮೇಲೆ ಬಾಗಿಕೊಂಡು ದೇವರನ್ನು ಆರಾಧಿಸುತ್ತಿದ್ದನು. ಅವನಲ್ಲಿದ್ದ ನಂಬಿಕೆಯೇ ಇದಕ್ಕೆ ಕಾರಣ. [PE][PS]
22. ಯೋಸೇಫನು ಸಾಯುವ ಗಳಿಗೆಯಲ್ಲಿದ್ದಾಗ, ಇಸ್ರೇಲರು ಈಜಿಪ್ಟನ್ನು ಬಿಟ್ಟುಹೋಗುವುದರ ಕುರಿತು ಮಾತನಾಡಿದನು; ತನ್ನ ದೇಹವನ್ನು ಏನು ಮಾಡಬೇಕೆಂಬುದರ ಬಗ್ಗೆಯೂ ತಿಳಿಸಿದನು. ಅದಕ್ಕೆ ಅವನ ನಂಬಿಕೆಯೇ ಕಾರಣ. [PE][PS]
23. ಮೋಶೆಯು ಹುಟ್ಟಿದಾಗ ಅವನ ತಂದೆತಾಯಿಗಳು ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳವರೆಗೆ ಅಡಗಿಸಿಟ್ಟರು. ಮಗುವಾಗಿದ್ದ ಮೋಶೆಯ ಸೌಂದರ್ಯವನ್ನು ಅವರು ಕಂಡದ್ದರಿಂದ ರಾಜನಾದ ಫರೋಹನ ಆಜ್ಞೆಗೂ ಅವಿಧೇಯರಾಗಲು ಹಿಂಜರಿಯಲಿಲ್ಲ. [PE][PS]
24. ಮೋಶೆಯು ಬೆಳೆದು ದೊಡ್ಡವನಾದನು. ಅವನು ಫರೋಹನ ಮಗಳ ಮಗನೆಂದು ಕರೆಸಿಕೊಳ್ಳಲು ಒಪ್ಪಲಿಲ್ಲ.
25. ಅವನು ಪಾಪಗಳಿಂದ ಸಿಗುವ ಸುಖವನ್ನು ಆರಿಸಿಕೊಳ್ಳಲಿಲ್ಲ. ಆ ಸುಖಗಳು ಬೇಗನೆ ಕೊನೆಗೊಳ್ಳುತ್ತವೆ. ಆದ್ದರಿಂದ ಅವನು ದೇವಜನರೊಂದಿಗೆ ಕಷ್ಟಪಡುವುದನ್ನೇ ಆರಿಸಿಕೊಂಡನು. ಅವನಲ್ಲಿದ್ದ ನಂಬಿಕೆಯೇ ಇದಕ್ಕೆ ಕಾರಣ.
26. ಈಜಿಪ್ಟಿನ ಭಂಡಾರವನ್ನೆಲ್ಲ ಪಡೆಯುವುದಕ್ಕಿಂತ ಕ್ರಿಸ್ತನಿಗಾಗಿ ಸಂಕಟವನ್ನು ಅನುಭವಿಸುವುದು ಶ್ರೇಯಸ್ಕರವೆಂದು ಅವನು ಭಾವಿಸಿದನು. ದೇವರು ತನಗೆ ನೀಡುವ ಪ್ರತಿಫಲಕ್ಕಾಗಿ ಅವನು ಕಾಯುತ್ತಿದ್ದನು. [PE][PS]
27. ಅವನು ಈಜಿಪ್ಟನ್ನು ಬಿಟ್ಟುಹೋದದ್ದು ನಂಬಿಕೆಯಿಂದಲೇ. ಫರೋಹನ ಸಿಟ್ಟಿಗೆ ಅವನು ಭಯಪಡಲಿಲ್ಲ. ಯಾರಿಗೂ ಕಾಣದ ದೇವರು ತನಗೆ ಕಾಣುತ್ತಿರುವನೋ ಎಂಬಂತೆ ಅವನು ದೃಢಚಿತ್ತನಾಗಿದ್ದನು;
28. ಪಸ್ಕಹಬ್ಬವನ್ನು ಆಚರಿಸಿ, ಬಾಗಿಲುಗಳ ಮೇಲೆ ರಕ್ತವನ್ನು ಹಚ್ಚಿದನು. ಯೆಹೂದ್ಯ ಜನರ ಚೊಚ್ಚಲು ಮಕ್ಕಳನ್ನು ಮರಣದೂತನು ಸಂಹರಿಸಿದಂತೆ ರಕ್ತವನ್ನು ಬಾಗಿಲುಗಳ ಮೇಲೆ ಹಚ್ಚಲಾಯಿತು. ಅವನು ತನ್ನಲ್ಲಿದ್ದ ನಂಬಿಕೆಯಿಂದಲೇ ಹೀಗೆ ಮಾಡಿದನು. [PE][PS]
29. ಮೋಶೆಯಿಂದ ಮುನ್ನಡೆಸಲ್ಪಟ್ಟ ಜನರು ಕೆಂಪುಸಮುದ್ರವನ್ನು ಒಣಭೂಮಿಯೋ ಎಂಬಂತೆ ದಾಟಿದ್ದು ನಂಬಿಕೆಯಿಂದಲೇ. ಆದರೆ ಈಜಿಪ್ಟ್ ದೇಶದವರು ಕೆಂಪುಸಮುದ್ರವನ್ನು ದಾಟಲು ಪ್ರಯತ್ನಿಸಿ, ಮುಳುಗಿಹೋದರು. [PE][PS]
30. ದೇವಜನರ ನಂಬಿಕೆಯಿಂದಲೇ ಜೆರಿಕೊ ಪಟ್ಟಣದ ಗೋಡೆಗಳ ಸುತ್ತಲೂ ಏಳು ದಿನಗಳವರೆಗೆ ಸುತ್ತಿದಾಗ ಅವು ಬಿದ್ದುಹೋದವು. [PE][PS]
31. ರಹಾಬಳೆಂಬ ವೇಶ್ಯೆಯು ಇಸ್ರೇಲಿನ ಗೂಢಚಾರರನ್ನು ಬರಮಾಡಿಕೊಂಡು, ಅವರನ್ನು ಸ್ನೇಹಿತರಂತೆ ನೋಡಿಕೊಂಡಳು. ನಂಬಲೊಲ್ಲದ ಜನರನ್ನು ಕೊಂದಾಗ ಅವಳನ್ನು ಕೊಲ್ಲದೆ ಹೋದದ್ದು ಅವಳಲ್ಲಿದ್ದ ಆ ನಂಬಿಕೆಯಿಂದಲೇ. [PE][PS]
32. ನಾನು ನಿಮಗೆ ಮತ್ತಷ್ಟು ದೃಷ್ಟಾಂತಗಳನ್ನು ಹೇಳುವ ಅಗತ್ಯವಿದೆಯೋ? ನಾನು ಗಿದ್ಯೋನನ, ಬಾರಾಕನ, ಸಂಸೋನನ, ಯೆಫ್ತಾಹನ, ದಾವೀದನ, ಸಮುವೇಲನ ಮತ್ತು ಪ್ರವಾದಿಗಳ ಕುರಿತು ನಿಮಗೆ ಹೇಳುವಷ್ಟು ಸಮಯ ನನಗಿಲ್ಲ.
33. ಆ ಜನರೆಲ್ಲರೂ ಬಲವಾದ ನಂಬಿಕೆಯುಳ್ಳವರಾಗಿದ್ದರು. ಆ ನಂಬಿಕೆಯಿಂದಲೇ ರಾಜ್ಯಗಳನ್ನು ಸೋಲಿಸಿದರು. ಅವರು ಯೋಗ್ಯವಾದ ಕಾರ್ಯಗಳನ್ನು ಮಾಡಿದರು ಮತ್ತು ದೇವರು ವಾಗ್ದಾನ ಮಾಡಿದ್ದವುಗಳನ್ನು ಪಡೆದುಕೊಂಡರು. ಅವರಲ್ಲಿ ಕೆಲವರು ತಮ್ಮ ನಂಬಿಕೆಯಿಂದ ಸಿಂಹಗಳ ಬಾಯಿಗಳನ್ನು ಮುಚ್ಚಿದರು;
34. ಕೆಲವರು ಉರಿಯುವ ಬೆಂಕಿಯನ್ನು ನಂದಿಸಿದರು; ಇನ್ನು ಕೆಲವರು ಕತ್ತಿಗಳ ಬಾಯಿಂದ ಪಾರಾದರು; ದುರ್ಬಲರಾಗಿದ್ದವರು ತಮ್ಮ ನಂಬಿಕೆಯಿಂದ ಪ್ರಬಲರಾದರು; ಯುದ್ಧದಲ್ಲಿ ಶಕ್ತಿಶಾಲಿಗಳಾಗಿ ಶತ್ರುಗಳನ್ನು ಸೋಲಿಸಿದರು.
35. ಸತ್ತುಹೋಗಿದ್ದವರು ಸಾವಿನಿಂದ ಮೇಲೆದ್ದರು ಮತ್ತು ಅವರನ್ನು ಅವರವರ ಕುಟುಂಬಗಳ ಸ್ತ್ರೀಯರಿಗೆ ಒಪ್ಪಿಸಲಾಯಿತು. ಇತರ ಕೆಲವರು ಯಾತನೆಯನ್ನು ಅನುಭವಿಸುತ್ತಿದ್ದಾಗಲೂ ಪುನರುತ್ಥಾನದ ನಂತರವಿರುವ ಶ್ರೇಷ್ಠ ಜೀವಿತಕ್ಕಾಗಿ ಬಿಡುಗಡೆ ಹೊಂದಲು ಒಪ್ಪಲಿಲ್ಲ.
36. ಕೆಲವರು ಇತರರಿಂದ ಅಪಹಾಸ್ಯಕ್ಕೆ ಗುರಿಯಾದರು, ಪೆಟ್ಟುಗಳನ್ನು ಅನುಭವಿಸಿದರು, ಸೆರೆವಾಸದಲ್ಲಿದ್ದರು.
37. ಕೆಲವರನ್ನು ಕಲ್ಲೆಸೆದು ಕೊಂದರು, ಕೆಲವರನ್ನು ಅರ್ಧಕತ್ತರಿಸಿ ಎರಡು ಭಾಗ ಮಾಡಿದರು. ಕೆಲವರನ್ನು ಕತ್ತಿಗಳಿಂದ ಇರಿದುಕೊಂದರು. ಇವರಲ್ಲಿ ಕೆಲವರು ಕುರಿ ಮತ್ತು ಹೋತಗಳ ಚರ್ಮಗಳನ್ನು ತೊಟ್ಟುಕೊಂಡಿದ್ದರು; ಕೆಲವರು ಬಡವರಾಗಿದ್ದರು; ಹಿಂಸೆಗೆ ಒಳಗಾಗಿದ್ದರು ಮತ್ತು ಜನರ ಕ್ರೂರ ವರ್ತನೆಗೆ ಗುರಿಯಾಗಿದ್ದರು.
38. ಇವರಿಗೆ ಈ ಲೋಕವು ಯೋಗ್ಯವಾಗಿರಲಿಲ್ಲ. ಇವರು ಮರುಭೂಮಿಗಳಲ್ಲಿ, ಬೆಟ್ಟಗಳಲ್ಲಿ ಅಲೆಯುತ್ತಾ ಗುಹೆಗಳಲ್ಲಿಯೂ ನೆಲದ ಕುಣಿಗಳಲ್ಲಿಯೂ ವಾಸಿಸುತ್ತಿದ್ದರು. [PE][PS]
39. ಇವರೆಲ್ಲರೂ ತಮ್ಮ ನಂಬಿಕೆಯ ವಿಷಯದಲ್ಲಿ ಪ್ರಸಿದ್ಧರಾಗಿದ್ದರು. ಆದರೆ ದೇವರ ದೊಡ್ಡ ವಾಗ್ದಾನವನ್ನು ಇವರಲ್ಲಿ ಯಾರೂ ಹೊಂದಿಕೊಳ್ಳಲಿಲ್ಲ.
40. ದೇವರು ನಮಗೆ ಶ್ರೇಷ್ಠವಾದದ್ದನ್ನು ಕೊಡಲು ಯೋಜನೆ ಮಾಡಿದನು. ನಮ್ಮೊಡನೆ ಮಾತ್ರ ಅವರು ಪರಿಪೂರ್ಣರಾಗಬೇಕೆಂಬುದೇ ಆ ಯೋಜನೆ. [PE]
ಒಟ್ಟು 13 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 11 / 13
1 2 3 4 5 6 7 8 9 10 11 12 13
ನಂಬಿಕೆ 1 ನಂಬಿಕೆ ಎಂದರೆ ನಾವು ನಿರೀಕ್ಷೆಯಿಂದಿರುವ ಸಂಗತಿಗಳಲ್ಲಿ ಭರವಸದಿಂದಿರುವುದೂ ನಮ್ಮ ಕಣ್ಣಿಗೆ ಕಾಣದಿರುವುದನ್ನು ನಿಜವೆಂದು ತಿಳಿದುಕೊಳ್ಳುವುದೂ ಆಗಿದೆ. 2 ಬಹಳ ಹಿಂದಿನ ಕಾಲದಲ್ಲಿ ಜೀವಿಸಿದ್ದ ಜನರಲ್ಲಿ ಈ ರೀತಿಯ ನಂಬಿಕೆಯಿದ್ದುದರಿಂದ ದೇವರು ಅವರ ವಿಷಯದಲ್ಲಿ ಸಂತೋಷಪಟ್ಟನು. 3 ದೇವರು ತನ್ನ ಆಜ್ಞೆಯಿಂದ ಈ ಲೋಕವನ್ನು ಸೃಷ್ಟಿಸಿದನೆಂಬುದನ್ನು ಅರ್ಥಮಾಡಿಕೊಳ್ಳಲು ನಂಬಿಕೆ ನಮಗೆ ಸಹಾಯ ಮಾಡುತ್ತದೆ. ಹೇಗೆಂದರೆ ನಮ್ಮ ಕಣ್ಣಿಗೆ ಕಾಣುವಂಥ ವಸ್ತುಗಳಿಂದ ಈ ಜಗತ್ತು ಸೃಷ್ಟಿಯಾಗಲಿಲ್ಲ. 4 ಕಾಯಿನ ಮತ್ತು ಹೇಬೆಲರಿಬ್ಬರೂ ದೇವರಿಗೆ ಯಜ್ಞಗಳನ್ನು ಅರ್ಪಿಸಿದರು. ಆದರೆ ಹೇಬೆಲನಲ್ಲಿ ನಂಬಿಕೆಯಿದ್ದುದರಿಂದ ಅವನು ದೇವರಿಗೆ ಉತ್ತಮವಾದ ಯಜ್ಞವನ್ನು ಅರ್ಪಿಸಿದನು. ಅವನು ಅರ್ಪಿಸಿದ ವಸ್ತುಗಳಿಂದ ತನಗೆ ಸಂತೋಷವಾಯಿತೆಂದು ದೇವರೇ ಹೇಳಿದನು. ಅವನಲ್ಲಿ ನಂಬಿಕೆಯಿದ್ದುದರಿಂದ ದೇವರು ಅವನನ್ನು ಒಳ್ಳೆಯ ಮನುಷ್ಯನೆಂದು ಕರೆದನು. ಹೇಬೆಲನು ಸತ್ತುಹೋದನು, ಆದರೂ ತನ್ನ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ. 5 ಹನೋಕನು ಸಾವನ್ನು ಅನುಭವಿಸದೆ ಈ ಲೋಕದಿಂದ ಮೇಲೋಕಕ್ಕೆ ಒಯ್ಯಲ್ಪಟ್ಟನು. ಪವಿತ್ರ ಗ್ರಂಥವು ಹೇಳುವಂತೆ, ಅವನು ಒಯ್ಯಲ್ಪಡುವುದಕ್ಕಿಂತ ಮೊದಲು ದೇವರಿಗೆ ನಿಜವಾಗಿಯೂ ಮೆಚ್ಚಿಕೆಯಾಗಿದ್ದನು. ತರುವಾಯ ಜನರಿಗೆ ಅವನು ಸಿಕ್ಕಲೇ ಇಲ್ಲ. ಅವನ ನಂಬಿಕೆಯ ದೆಸೆಯಿಂದ ದೇವರು ಅವನನ್ನು ತನ್ನೊಡನಿರಲು ಕೊಂಡೊಯ್ದನು. 6 ನಂಬಿಕೆಯಿಲ್ಲದೆ ದೇವರನ್ನು ಯಾರೂ ಮೆಚ್ಚಿಸಲಾಗುವುದಿಲ್ಲ. ದೇವರ ಬಳಿಗೆ ಬರುವ ಯಾರೇ ಆಗಲಿ, ದೇವರು ಇದ್ದಾನೆಂತಲೂ ಆತನನ್ನು ಮನಃಪೂರ್ವಕವಾಗಿ ಹುಡುಕುವ ಜನರಿಗೆ ಆತನು ಪ್ರತಿಫಲವನ್ನು ಕೊಡುತ್ತಾನೆಂತಲೂ ನಂಬಬೇಕು. 7 ಕಣ್ಣಿಗೆ ಇನ್ನೂ ಕಾಣದಿದ್ದ ಸಂಗತಿಗಳ ಬಗ್ಗೆ ದೇವರು ನೋಹನನ್ನು ಎಚ್ಚರಿಸಿದನು. ನೋಹನು ದೇವರಲ್ಲಿ ನಂಬಿಕೆಯಿಟ್ಟಿದ್ದನು ಮತ್ತು ಭಕ್ತಿಯುಳ್ಳವನಾಗಿದ್ದನು. ಆದ್ದರಿಂದ ಅವನು ತನ್ನ ಕುಟುಂಬ ರಕ್ಷಣೆಗಾಗಿ ದೊಡ್ಡ ನಾವೆಯನ್ನು ಕಟ್ಟಿ, ಈ ಲೋಕದ ತಪ್ಪನ್ನು ತೋರ್ಪಡಿಸಿದನು. ಹೀಗೆ, ನಂಬಿಕೆಯ ಮೂಲಕ ನೀತಿವಂತರಾದ ಜನರಲ್ಲಿ ಅವನೂ ಒಬ್ಬನಾದನು. 8 ದೇವರು ತಾನು ಕೊಡುತ್ತೇನೆಂದು ವಾಗ್ದಾನ ಮಾಡಿದ್ದ ಸ್ಥಳಕ್ಕೆ ಪ್ರಯಾಣ ಮಾಡಬೇಕೆಂದು ಅಬ್ರಹಾಮನನ್ನು ಕರೆದನು. ಆ ಸ್ಥಳವು ಎಲ್ಲಿದೆಯೆಂಬುದು ಅವನಿಗೆ ತಿಳಿದಿರಲಿಲ್ಲ. ಅಬ್ರಹಾಮನಲ್ಲಿ ನಂಬಿಕೆಯಿದ್ದುದರಿಂದ, ದೇವರಿಗೆ ವಿಧೇಯನಾಗಿ ಪ್ರಯಾಣ ಮಾಡಲಾರಂಭಿಸಿದನು. 9 ದೇವರು ಕೊಡುವುದಾಗಿ ವಾಗ್ದಾನ ಮಾಡಿದ್ದ ದೇಶದಲ್ಲಿ ಅವನು ಪ್ರವಾಸಿಗನಂತೆ ವಾಸಮಾಡಿದ್ದು ನಂಬಿಕೆಯಿಂದಲೇ. ಅದೇ ವಾಗ್ದಾನಕ್ಕೆ ಸಹ ಭಾದ್ಯರಾಗಿದ್ದ ಇಸಾಕನೂ ಯಾಕೋಬನೂ ಅವನಂತೆಯೇ ಡೇರೆಗಳಲ್ಲಿ ವಾಸಿಸಿದರು. 10 ಅಬ್ರಹಾಮನು ಶಾಶ್ವತವಾದ ಅಡಿಪಾಯಗಳುಳ್ಳ ನಗರಕ್ಕಾಗಿ ಕಾದಿದ್ದನು. ದೇವರೇ ಸಂಕಲ್ಪಿಸಿ, ನಿರ್ಮಿಸಿದ ನಗರಕ್ಕಾಗಿ ಅವನು ಕಾದಿದ್ದನು. 11 ಅಬ್ರಹಾಮನು ಮಕ್ಕಳನ್ನು ಪಡೆಯಲಾಗದಷ್ಟು ವೃದ್ಧನಾಗಿದ್ದನು. ಸಾರಳು ಮಕ್ಕಳನ್ನು ಪಡೆಯಲು ಸಮರ್ಥಳಾಗಿರಲಿಲ್ಲ. ಆದರೆ ಅಬ್ರಹಾಮನಿಗೆ ದೇವರಲ್ಲಿ ನಂಬಿಕೆಯಿದ್ದುದರಿಂದ, ಅವರು ಮಕ್ಕಳನ್ನು ಪಡೆಯಲು ಸಮರ್ಥರಾಗುವಂತೆ ದೇವರು ಮಾಡಿದನು. 12 ಅವನು ಮೃತಪ್ರಾಯನಾಗಿದ್ದವನಂತೆ ವೃದ್ಧನಾಗಿದ್ದರೂ ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದ ಉಸುಬಿನಂತೆಯೂ ಅಸಂಖ್ಯಾತವಾಗಿ ಮಕ್ಕಳು ಹುಟ್ಟಿದರು. 13 ಈ ಮಹಾಪುರಷರೆಲ್ಲರೂ ತಾವು ಸಾಯುವವರೆಗೂ ನಂಬಿಕೆಯುಳ್ಳವರಾಗಿದ್ದರು. ದೇವರು ತನ್ನ ಜನರಿಗೆ ವಾಗ್ದಾನ ಮಾಡಿದ್ದವುಗಳನ್ನು ಆ ಜನರು ಪಡೆಯಲಿಲ್ಲ. ಮುಂದೆ ಬಹುಕಾಲದ ನಂತರ ಬರಲಿದ್ದ ಅವುಗಳನ್ನು ನೋಡಿ ಅವರು ಸಂತೋಷಗೊಂಡರು. ಅವರು ತಾವು ಈ ಲೋಕದಲ್ಲಿ ಪ್ರವಾಸಿಗಳಂತೆ ಮತ್ತು ಅಪರಿಚಿತರಂತೆ ಇದ್ದೇವೆ ಎಂಬುದನ್ನು ಒಪ್ಪಿಕೊಂಡರು. 14 ಅವರು ಹಾಗೆ ಒಪ್ಪಿಕೊಂಡಿದ್ದರಿಂದ ತಾವು ಸ್ವದೇಶಕ್ಕಾಗಿ ಕಾದಿರುವುದಾಗಿ ತೋರ್ಪಡಿಸಿಕೊಂಡಂತಾಯಿತು. 15 ಆ ಜನರು ತಾವು ಬಿಟ್ಟುಬಂದ ದೇಶದ ಮೇಲೇನಾದರೂ ಮನಸ್ಸಿಟ್ಟಿದ್ದರೆ, ಅವರು ಮರಳಿಹೋಗುತ್ತಿದ್ದರು. 16 ಆದರೆ ಆ ಜನರು ಉತ್ತಮ ದೇಶವಾದ ಪರಲೋಕಕ್ಕಾಗಿ ಕಾದಿದ್ದರು. ಆದ್ದರಿಂದ ದೇವರು ತನ್ನನ್ನು ಅವರ ದೇವರೆಂದು ಹೇಳಿಕೊಳ್ಳಲು ನಾಚಿಕೆಪಡದೆ ಅವರಿಗಾಗಿ ಒಂದು ನಗರವನ್ನು ಸಿದ್ಧಪಡಿಸಿದನು. 17 (17-18) ದೇವರು ಅಬ್ರಹಾಮನ ನಂಬಿಕೆಯನ್ನು ಪರೀಕ್ಷಿಸಿದನು. ಇಸಾಕನನ್ನು ಯಜ್ಞವಾಗಿ ಸಮರ್ಪಿಸೆಂದು ದೇವರು ಅವನಿಗೆ ಹೇಳಿದನು. ಅಬ್ರಹಾಮನಲ್ಲಿ ನಂಬಿಕೆಯಿದ್ದುದರಿಂದ ವಿಧೇಯನಾದನು. ದೇವರು ಅವನಿಗೆ, “ನಿನ್ನ ಸಂತತಿಗಳವರು ಇಸಾಕನ ಮೂಲಕ ಬರುವರು” ಉಲ್ಲೇಖನ: ಆದಿಕಾಂಡ 21:12. ಎಂದು ಮೊದಲೇ ವಾಗ್ದಾನ ಮಾಡಿದ್ದನು. ಆದರೂ ತನ್ನ ಒಬ್ಬನೇ ಮಗನನ್ನು ಅರ್ಪಿಸಲು ಅವನು ಸಿದ್ಧನಾಗಿದ್ದನು. 18 19 ದೇವರು ಸತ್ತವರನ್ನು ಜೀವಂತವಾಗಿ ಎಬ್ಬಿಸಬಲ್ಲನೆಂದು ಅವನು ನಂಬಿದ್ದನು. ಇಸಾಕನನ್ನು ಕೊಲ್ಲದಂತೆ ದೇವರು ಅವನನ್ನು ತಡೆದಾಗ, ಅವನಿಗೆ ನಿಜವಾಗಿಯೂ ಇಸಾಕನನ್ನು ಸಾವಿನಿಂದ ಮರಳಿ ಪಡೆದಂತಾಯಿತು. 20 ಇಸಾಕನು ಯಾಕೋಬನ ಮತ್ತು ಏಸಾವನ ಭವಿಷ್ಯತ್ತನ್ನು ಆಶೀರ್ವದಿಸಿದನು. ಇಸಾಕನಲ್ಲಿದ್ದ ನಂಬಿಕೆಯೇ ಇದಕ್ಕೆ ಕಾರಣ. 21 ಯಾಕೋಬನು ಯೋಸೇಫನ ಮಕ್ಕಳಿಬ್ಬರನ್ನೂ ತಾನು ಸಾಯುವ ಗಳಿಗೆಯಲ್ಲಿ ಆಶೀರ್ವದಿಸಿದನು. ಅವನು ಊರುಗೋಲಿನ ಮೇಲೆ ಬಾಗಿಕೊಂಡು ದೇವರನ್ನು ಆರಾಧಿಸುತ್ತಿದ್ದನು. ಅವನಲ್ಲಿದ್ದ ನಂಬಿಕೆಯೇ ಇದಕ್ಕೆ ಕಾರಣ. 22 ಯೋಸೇಫನು ಸಾಯುವ ಗಳಿಗೆಯಲ್ಲಿದ್ದಾಗ, ಇಸ್ರೇಲರು ಈಜಿಪ್ಟನ್ನು ಬಿಟ್ಟುಹೋಗುವುದರ ಕುರಿತು ಮಾತನಾಡಿದನು; ತನ್ನ ದೇಹವನ್ನು ಏನು ಮಾಡಬೇಕೆಂಬುದರ ಬಗ್ಗೆಯೂ ತಿಳಿಸಿದನು. ಅದಕ್ಕೆ ಅವನ ನಂಬಿಕೆಯೇ ಕಾರಣ. 23 ಮೋಶೆಯು ಹುಟ್ಟಿದಾಗ ಅವನ ತಂದೆತಾಯಿಗಳು ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳವರೆಗೆ ಅಡಗಿಸಿಟ್ಟರು. ಮಗುವಾಗಿದ್ದ ಮೋಶೆಯ ಸೌಂದರ್ಯವನ್ನು ಅವರು ಕಂಡದ್ದರಿಂದ ರಾಜನಾದ ಫರೋಹನ ಆಜ್ಞೆಗೂ ಅವಿಧೇಯರಾಗಲು ಹಿಂಜರಿಯಲಿಲ್ಲ. 24 ಮೋಶೆಯು ಬೆಳೆದು ದೊಡ್ಡವನಾದನು. ಅವನು ಫರೋಹನ ಮಗಳ ಮಗನೆಂದು ಕರೆಸಿಕೊಳ್ಳಲು ಒಪ್ಪಲಿಲ್ಲ. 25 ಅವನು ಪಾಪಗಳಿಂದ ಸಿಗುವ ಸುಖವನ್ನು ಆರಿಸಿಕೊಳ್ಳಲಿಲ್ಲ. ಆ ಸುಖಗಳು ಬೇಗನೆ ಕೊನೆಗೊಳ್ಳುತ್ತವೆ. ಆದ್ದರಿಂದ ಅವನು ದೇವಜನರೊಂದಿಗೆ ಕಷ್ಟಪಡುವುದನ್ನೇ ಆರಿಸಿಕೊಂಡನು. ಅವನಲ್ಲಿದ್ದ ನಂಬಿಕೆಯೇ ಇದಕ್ಕೆ ಕಾರಣ. 26 ಈಜಿಪ್ಟಿನ ಭಂಡಾರವನ್ನೆಲ್ಲ ಪಡೆಯುವುದಕ್ಕಿಂತ ಕ್ರಿಸ್ತನಿಗಾಗಿ ಸಂಕಟವನ್ನು ಅನುಭವಿಸುವುದು ಶ್ರೇಯಸ್ಕರವೆಂದು ಅವನು ಭಾವಿಸಿದನು. ದೇವರು ತನಗೆ ನೀಡುವ ಪ್ರತಿಫಲಕ್ಕಾಗಿ ಅವನು ಕಾಯುತ್ತಿದ್ದನು. 27 ಅವನು ಈಜಿಪ್ಟನ್ನು ಬಿಟ್ಟುಹೋದದ್ದು ನಂಬಿಕೆಯಿಂದಲೇ. ಫರೋಹನ ಸಿಟ್ಟಿಗೆ ಅವನು ಭಯಪಡಲಿಲ್ಲ. ಯಾರಿಗೂ ಕಾಣದ ದೇವರು ತನಗೆ ಕಾಣುತ್ತಿರುವನೋ ಎಂಬಂತೆ ಅವನು ದೃಢಚಿತ್ತನಾಗಿದ್ದನು; 28 ಪಸ್ಕಹಬ್ಬವನ್ನು ಆಚರಿಸಿ, ಬಾಗಿಲುಗಳ ಮೇಲೆ ರಕ್ತವನ್ನು ಹಚ್ಚಿದನು. ಯೆಹೂದ್ಯ ಜನರ ಚೊಚ್ಚಲು ಮಕ್ಕಳನ್ನು ಮರಣದೂತನು ಸಂಹರಿಸಿದಂತೆ ರಕ್ತವನ್ನು ಬಾಗಿಲುಗಳ ಮೇಲೆ ಹಚ್ಚಲಾಯಿತು. ಅವನು ತನ್ನಲ್ಲಿದ್ದ ನಂಬಿಕೆಯಿಂದಲೇ ಹೀಗೆ ಮಾಡಿದನು. 29 ಮೋಶೆಯಿಂದ ಮುನ್ನಡೆಸಲ್ಪಟ್ಟ ಜನರು ಕೆಂಪುಸಮುದ್ರವನ್ನು ಒಣಭೂಮಿಯೋ ಎಂಬಂತೆ ದಾಟಿದ್ದು ನಂಬಿಕೆಯಿಂದಲೇ. ಆದರೆ ಈಜಿಪ್ಟ್ ದೇಶದವರು ಕೆಂಪುಸಮುದ್ರವನ್ನು ದಾಟಲು ಪ್ರಯತ್ನಿಸಿ, ಮುಳುಗಿಹೋದರು. 30 ದೇವಜನರ ನಂಬಿಕೆಯಿಂದಲೇ ಜೆರಿಕೊ ಪಟ್ಟಣದ ಗೋಡೆಗಳ ಸುತ್ತಲೂ ಏಳು ದಿನಗಳವರೆಗೆ ಸುತ್ತಿದಾಗ ಅವು ಬಿದ್ದುಹೋದವು. 31 ರಹಾಬಳೆಂಬ ವೇಶ್ಯೆಯು ಇಸ್ರೇಲಿನ ಗೂಢಚಾರರನ್ನು ಬರಮಾಡಿಕೊಂಡು, ಅವರನ್ನು ಸ್ನೇಹಿತರಂತೆ ನೋಡಿಕೊಂಡಳು. ನಂಬಲೊಲ್ಲದ ಜನರನ್ನು ಕೊಂದಾಗ ಅವಳನ್ನು ಕೊಲ್ಲದೆ ಹೋದದ್ದು ಅವಳಲ್ಲಿದ್ದ ಆ ನಂಬಿಕೆಯಿಂದಲೇ. 32 ನಾನು ನಿಮಗೆ ಮತ್ತಷ್ಟು ದೃಷ್ಟಾಂತಗಳನ್ನು ಹೇಳುವ ಅಗತ್ಯವಿದೆಯೋ? ನಾನು ಗಿದ್ಯೋನನ, ಬಾರಾಕನ, ಸಂಸೋನನ, ಯೆಫ್ತಾಹನ, ದಾವೀದನ, ಸಮುವೇಲನ ಮತ್ತು ಪ್ರವಾದಿಗಳ ಕುರಿತು ನಿಮಗೆ ಹೇಳುವಷ್ಟು ಸಮಯ ನನಗಿಲ್ಲ. 33 ಆ ಜನರೆಲ್ಲರೂ ಬಲವಾದ ನಂಬಿಕೆಯುಳ್ಳವರಾಗಿದ್ದರು. ಆ ನಂಬಿಕೆಯಿಂದಲೇ ರಾಜ್ಯಗಳನ್ನು ಸೋಲಿಸಿದರು. ಅವರು ಯೋಗ್ಯವಾದ ಕಾರ್ಯಗಳನ್ನು ಮಾಡಿದರು ಮತ್ತು ದೇವರು ವಾಗ್ದಾನ ಮಾಡಿದ್ದವುಗಳನ್ನು ಪಡೆದುಕೊಂಡರು. ಅವರಲ್ಲಿ ಕೆಲವರು ತಮ್ಮ ನಂಬಿಕೆಯಿಂದ ಸಿಂಹಗಳ ಬಾಯಿಗಳನ್ನು ಮುಚ್ಚಿದರು; 34 ಕೆಲವರು ಉರಿಯುವ ಬೆಂಕಿಯನ್ನು ನಂದಿಸಿದರು; ಇನ್ನು ಕೆಲವರು ಕತ್ತಿಗಳ ಬಾಯಿಂದ ಪಾರಾದರು; ದುರ್ಬಲರಾಗಿದ್ದವರು ತಮ್ಮ ನಂಬಿಕೆಯಿಂದ ಪ್ರಬಲರಾದರು; ಯುದ್ಧದಲ್ಲಿ ಶಕ್ತಿಶಾಲಿಗಳಾಗಿ ಶತ್ರುಗಳನ್ನು ಸೋಲಿಸಿದರು. 35 ಸತ್ತುಹೋಗಿದ್ದವರು ಸಾವಿನಿಂದ ಮೇಲೆದ್ದರು ಮತ್ತು ಅವರನ್ನು ಅವರವರ ಕುಟುಂಬಗಳ ಸ್ತ್ರೀಯರಿಗೆ ಒಪ್ಪಿಸಲಾಯಿತು. ಇತರ ಕೆಲವರು ಯಾತನೆಯನ್ನು ಅನುಭವಿಸುತ್ತಿದ್ದಾಗಲೂ ಪುನರುತ್ಥಾನದ ನಂತರವಿರುವ ಶ್ರೇಷ್ಠ ಜೀವಿತಕ್ಕಾಗಿ ಬಿಡುಗಡೆ ಹೊಂದಲು ಒಪ್ಪಲಿಲ್ಲ. 36 ಕೆಲವರು ಇತರರಿಂದ ಅಪಹಾಸ್ಯಕ್ಕೆ ಗುರಿಯಾದರು, ಪೆಟ್ಟುಗಳನ್ನು ಅನುಭವಿಸಿದರು, ಸೆರೆವಾಸದಲ್ಲಿದ್ದರು. 37 ಕೆಲವರನ್ನು ಕಲ್ಲೆಸೆದು ಕೊಂದರು, ಕೆಲವರನ್ನು ಅರ್ಧಕತ್ತರಿಸಿ ಎರಡು ಭಾಗ ಮಾಡಿದರು. ಕೆಲವರನ್ನು ಕತ್ತಿಗಳಿಂದ ಇರಿದುಕೊಂದರು. ಇವರಲ್ಲಿ ಕೆಲವರು ಕುರಿ ಮತ್ತು ಹೋತಗಳ ಚರ್ಮಗಳನ್ನು ತೊಟ್ಟುಕೊಂಡಿದ್ದರು; ಕೆಲವರು ಬಡವರಾಗಿದ್ದರು; ಹಿಂಸೆಗೆ ಒಳಗಾಗಿದ್ದರು ಮತ್ತು ಜನರ ಕ್ರೂರ ವರ್ತನೆಗೆ ಗುರಿಯಾಗಿದ್ದರು. 38 ಇವರಿಗೆ ಈ ಲೋಕವು ಯೋಗ್ಯವಾಗಿರಲಿಲ್ಲ. ಇವರು ಮರುಭೂಮಿಗಳಲ್ಲಿ, ಬೆಟ್ಟಗಳಲ್ಲಿ ಅಲೆಯುತ್ತಾ ಗುಹೆಗಳಲ್ಲಿಯೂ ನೆಲದ ಕುಣಿಗಳಲ್ಲಿಯೂ ವಾಸಿಸುತ್ತಿದ್ದರು. 39 ಇವರೆಲ್ಲರೂ ತಮ್ಮ ನಂಬಿಕೆಯ ವಿಷಯದಲ್ಲಿ ಪ್ರಸಿದ್ಧರಾಗಿದ್ದರು. ಆದರೆ ದೇವರ ದೊಡ್ಡ ವಾಗ್ದಾನವನ್ನು ಇವರಲ್ಲಿ ಯಾರೂ ಹೊಂದಿಕೊಳ್ಳಲಿಲ್ಲ. 40 ದೇವರು ನಮಗೆ ಶ್ರೇಷ್ಠವಾದದ್ದನ್ನು ಕೊಡಲು ಯೋಜನೆ ಮಾಡಿದನು. ನಮ್ಮೊಡನೆ ಮಾತ್ರ ಅವರು ಪರಿಪೂರ್ಣರಾಗಬೇಕೆಂಬುದೇ ಆ ಯೋಜನೆ.
ಒಟ್ಟು 13 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 11 / 13
1 2 3 4 5 6 7 8 9 10 11 12 13
×

Alert

×

Kannada Letters Keypad References