1. {ಯೇಸು ಮೋಶೆಗಿಂತ ಶ್ರೇಷ್ಠನು} PS ಆದ್ದರಿಂದ ನನ್ನ ಸಹೋದರ ಸಹೋದರಿಯರೇ, ಪರಿಶುದ್ಧ ಜನರಾಗುವುದಕ್ಕಾಗಿ ದೇವರಿಂದ ಕರೆಯಲ್ಪಟ್ಟವರಾದ ನೀವು ಯೇಸುವನ್ನೇ ಕುರಿತು ಆಲೋಚಿಸಿರಿ. ದೇವರು ಆತನನ್ನು ನಮ್ಮ ಬಳಿಗೆ ಕಳುಹಿಸಿದನು. ಆತನೇ ನಮ್ಮ ನಂಬಿಕೆಯ ಪ್ರಧಾನಯಾಜಕನು.
|
2. ಯೇಸುವನ್ನು ದೇವರು ನಮ್ಮ ಬಳಿಗೆ ಕಳುಹಿಸಿ, ಆತನನ್ನು ನಮ್ಮ ಪ್ರಧಾನಯಾಜಕನನ್ನಾಗಿ ಮಾಡಿದನು. ಆತನು ಮೋಶೆಯಂತೆ ದೇವರಿಗೆ ನಂಬಿಗಸ್ತನಾಗಿದ್ದನು. ದೇವರ ಮನೆಯಲ್ಲಿ ದೇವರ ಇಷ್ಟಕ್ಕನುಗುಣವಾಗಿ ಮಾಡಬೇಕಾದುದನ್ನೆಲ್ಲ ಆತನು ಮಾಡಿದನು.
|
3. ಒಬ್ಬ ಮನುಷ್ಯನು ಮನೆಯನ್ನು ಕಟ್ಟಿದಾಗ, ಜನರು ಮನೆಗಿಂತಲೂ ಅವನಿಗೇ ಹೆಚ್ಚು ಮಾನ್ಯತೆಯನ್ನು ಕೊಡುವಂತೆಯೇ ಯೇಸು ಮೋಶೆಗಿಂತ ಹೆಚ್ಚು ಮಾನ್ಯತೆಯನ್ನು ಹೊಂದಿದ್ದಾನೆ.
|
5. ದೇವರ ಮನೆಯಲ್ಲೆಲ್ಲಾ ಮೋಶೆಯು ಸೇವಕನಂತೆ ನಂಬಿಗಸ್ತನಾಗಿದ್ದನು. ಮುಂದೆ ಪ್ರಕಟವಾಗಲಿದ್ದ ಸಂಗತಿಗಳಿಗೆ ಅವನು ಸಾಕ್ಷಿಯಾಗಿದ್ದನು.
|
6. ಕ್ರಿಸ್ತನಾದರೋ ಮಗನಾಗಿ ದೇವರ ಮನೆಯನ್ನು ಆಳುವುದರಲ್ಲಿ ನಂಬಿಗಸ್ತನಾಗಿದ್ದಾನೆ. ವಿಶ್ವಾಸಿಗಳಾದ ನಾವು ನಮಗಿರುವ ಮಹಾ ನಿರೀಕ್ಷೆಯಲ್ಲಿ ದೃಢವಾಗಿಯೂ ಹೆಮ್ಮೆಯಿಂದಲೂ ಇರುವುದಾಗಿದ್ದರೆ ದೇವರ ಮನೆಯವರಾಗಿದ್ದೇವೆ. PS
|
7. {ನಾವು ದೇವರನ್ನು ಅನುಸರಿಸಲೇಬೇಕು} PS ಆದ್ದರಿಂದ ಪವಿತ್ರಾತ್ಮನು ಹೇಳುವ ಪ್ರಕಾರ, “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ,
|
8. ಪೂರ್ವಕಾಲದಲ್ಲಿ ನಿಮ್ಮ ಹಿರಿಯರು ದೇವರಿಗೆ ವಿರುದ್ಧವಾಗಿದ್ದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿ.
ಅಂದು ಅವರು ಮರುಭೂಮಿಯಲ್ಲಿ ದೇವರನ್ನು ಪರೀಕ್ಷಿಸಿದರು. |
9. ನಾನು ಮರಳುಗಾಡಿನಲ್ಲಿ ನಲವತ್ತು ವರ್ಷಗಳ ಕಾಲ ಮಾಡಿದ್ದನ್ನು ನಿಮ್ಮ ಪೂರ್ವಿಕರು ನೋಡಿದರೂ
ನನ್ನನ್ನೂ ನನ್ನ ತಾಳ್ಮೆಯನ್ನೂ ಪರೀಕ್ಷಿಸಿದರು. |
10. ಆದ್ದರಿಂದ ಅವರ ಮೇಲೆ ನಾನು ಕೋಪಗೊಂಡಿದ್ದೆನು.
‘ಅವರ ಆಲೋಚನೆಗಳು ಯಾವಾಗಲೂ ತಪ್ಪಾಗಿವೆ. ನನ್ನ ಮಾರ್ಗವನ್ನು ಅವರು ಅರ್ಥಮಾಡಿಕೊಳ್ಳಲೇ ಇಲ್ಲ’ ಎಂದು ನಾನು ಹೇಳಿದೆನು. |
11. ‘ಆ ಜನರು ನನ್ನ ವಿಶ್ರಾಂತಿಯಲ್ಲಿ ಎಂದಿಗೂ ಪ್ರವೇಶಿಸುವುದಿಲ್ಲ’
ಎಂದು ನಾನು ಕೋಪಗೊಂಡು ಪ್ರಮಾಣ ಮಾಡಿದೆನು.” ಕೀರ್ತನೆ. 95:7-11 PS |
12. ಆದ್ದರಿಂದ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಯಾರೂ ಕೆಟ್ಟಬುದ್ಧಿಯುಳ್ಳವರಾಗದಂತೆ, ನಂಬದವರಾಗದಂತೆ, ಜೀವಸ್ವರೂಪನಾದ ದೇವರನ್ನು ತೊರೆಯದಂತೆ ಎಚ್ಚರಿಕೆಯಿಂದಿರಿ.
|
13. ಆದರೆ ಒಬ್ಬರನ್ನೊಬ್ಬರು ಪ್ರತಿದಿನವೂ ಸಂತೈಸಿರಿ. “ಈ ದಿನ”ವು ಇನ್ನೂ ಇರುವಾಗಲೇ ಇದನ್ನೆಲ್ಲ ಮಾಡಿರಿ. ಪಾಪದಿಂದಾಗಲಿ ಪಾಪವು ಮೋಸಗೊಳಿಸುವ ರೀತಿಯಿಂದಾಗಲಿ ನಿಮ್ಮಲ್ಲಿ ಯಾರೂ ಕಠಿಣರಾಗದಂತೆ ಒಬ್ಬರಿಗೊಬ್ಬರು ಸಹಾಯ ಮಾಡಿರಿ.
|
14. ನಾವೆಲ್ಲರೂ ಒಟ್ಟಾಗಿ ಕ್ರಿಸ್ತನಲ್ಲಿ ಪಾಲುಗಾರರಾಗಿದ್ದೇವೆ. ಆರಂಭದಲ್ಲಿ ನಮಗಿದ್ದ ದೃಢನಂಬಿಕೆಯನ್ನು ಅಂತ್ಯದವರೆಗೂ ಬಲವಾಗಿ ಹಿಡಿದುಕೊಳ್ಳುವುದಾದರೆ ಇದು ನಿಜವಾಗುತ್ತದೆ.
|
15. ಪವಿತ್ರ ಗ್ರಂಥವು ಹೇಳುವುದೇನೆಂದರೆ: “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ,
ಪೂರ್ವಕಾಲದಲ್ಲಿ ನಿಮ್ಮ ಹಿರಿಯರು ದೇವರಿಗೆ ವಿರುದ್ಧವಾಗಿದ್ದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿ.” ಕೀರ್ತನೆ 95:7-8 PS |
17. ನಲವತ್ತು ವರ್ಷಗಳ ಕಾಲ ದೇವರು ಯಾರ ಮೇಲೆ ಕೋಪಗೊಂಡಿದ್ದನು? ಪಾಪವನ್ನು ಮಾಡಿದವರ ಮೇಲಲ್ಲವೇ? ಅವರೆಲ್ಲರೂ ಮರುಭೂಮಿಯಲ್ಲಿ ಸತ್ತುಹೋದರು.
|
18. ತನ್ನ ವಿಶ್ರಾಂತಿಯಲ್ಲಿ ಅವರು ಸೇರುವುದೇ ಇಲ್ಲವೆಂದು ದೇವರು ಪ್ರಮಾಣ ಮಾಡಿದಾಗ, ಆತನು ಯಾರೊಡನೆ ಮಾತಾಡುತ್ತಿದ್ದನು? ತನಗೆ ಅವಿಧೇಯರಾದ ಜನರ ಬಗ್ಗೆ ಅಲ್ಲವೇ?
|
19. ಆದ್ದರಿಂದ ದೇವರ ವಿಶ್ರಾಂತಿಯಲ್ಲಿ ಪ್ರವೇಶಿಸಲು ಆ ಜನರಿಗೆ ಅವಕಾಶ ದೊರೆಯಲಿಲ್ಲ. ಅವರಲ್ಲಿ ನಂಬಿಕೆ ಇಲ್ಲದಿದ್ದ ಕಾರಣವೇ ಅವರು ಪ್ರವೇಶಿಸಲಿಲ್ಲ. PE
|