ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಹೋಶೇ
1. {ಹೋಶೇಯನ ಮುಖಾಂತರ ದೇವರಾದ ಯೆಹೋವನ ಸಂದೇಶ} [PS] ಬೆಯೇರಿಯ ಮಗನಾದ ಹೋಶೇಯನಿಗೆ ಯೋಹೋವನಿಂದ ಬಂದ ಸಂದೇಶ: ಈ ಸಂದೇಶವು ಯೆಹೂದ ಪ್ರಾಂತ್ಯದ ಅರಸರಾದ ಉಜ್ಜೀಯ, ಯೋಥಾವು, ಅಹಾಜ ಮತ್ತು ಹಿಜ್ಕೀಯ ಇವರ ಆಳ್ವಿಕೆಯ ಸಮಯದಲ್ಲಿ ಬಂದಿತು. ಇದು ಇಸ್ರೇಲಿನ ಅರಸನಾದ ಯೋವಾಷನ ಮಗನಾದ ಯಾರೊಬ್ಬಾಮನ ಆಳ್ವಿಕೆಯ ಕಾಲ. [PE][PS]
2. ಹೋಶೇಯನಿಗೆ ಯೆಹೋವನಿಂದ ಬಂದ ಸಂದೇಶದಲ್ಲಿ ಇದು ಮೊದಲನೆಯದು. ಯೆಹೋವನು ಹೇಳಿದ್ದೇನೆಂದರೆ, “ನೀನು ಹೋಗಿ ಒಬ್ಬ ವೇಶ್ಯೆಯನ್ನು ಮದುವೆಯಾಗು. ಆ ವೇಶ್ಯೆಯಿಂದ [*ವೇಶ್ಯೆಯಿಂದ ಅಂದರೆ ಆಕೆಯಲ್ಲಿ ಹುಟ್ಟುವ ಮಕ್ಕಳು ಆಕೆಯ ಸೂಳೆತನದ ಫಲವಾಗಿವೆ.] ಮಕ್ಕಳನ್ನು ಪಡೆದುಕೊ. ಯಾಕೆಂದರೆ ಈ ದೇಶದ ಜನರು ಸೂಳೆಯಂತೆ ವರ್ತಿಸಿರುತ್ತಾರೆ. ಅವರು ಯೆಹೋವನಿಗೆ ಅಪನಂಬಿಗಸ್ತಿಕೆಯುಳ್ಳವರಾಗಿರುತ್ತಾರೆ.” [PS]
3. {ಇಜ್ರೇಲನ ಜನನ} [PS] ಹಾಗೆ ಹೋಶೇಯನು ದಿಬ್ಲಯೀಮನ ಮಗಳಾದ ಗೋಮೆರ್ ಎಂಬಾಕೆಯನ್ನು ಮದುವೆಯಾದನು. ಗೋಮೆರಳು ಗರ್ಭಿಣಿಯಾಗಿ ಹೋಶೇಯನಿಗೆ ಗಂಡುಮಗುವನ್ನು ಹೆತ್ತಳು.
4. ಹೋಶೇಯನಿಗೆ ಯೆಹೋವನು ಹೇಳಿದ್ದೇನೆಂದರೆ, “ಅವನಿಗೆ ಇಜ್ರೇಲ್ ಎಂದು ಹೆಸರನ್ನಿಡು. ಯಾಕೆಂದರೆ, ಇನ್ನು ಸ್ವಲ್ಪ ಸಮಯದಲ್ಲಿ ನಾನು ಯೇಹುವಿನ ಸಂತತಿಯವರನ್ನು ಶಿಕ್ಷಿಸುವೆನು. ಅವನು ಇಜ್ರೇಲ್ ತಗ್ಗಿನಲ್ಲಿ ರಕ್ತವನ್ನು ಸುರಿಸಿರುತ್ತಾನಲ್ಲಾ? ಆ ಮೇಲೆ ನಾನು ಇಸ್ರೇಲ್ ರಾಜ್ಯಕ್ಕೆ ಅಂತ್ಯವನ್ನು ತರುವೆನು.
5. ಆಗ ಇಜ್ರೇಲ್ ತಗ್ಗಿನಲ್ಲಿ ಇಸ್ರೇಲಿನ ಬಿಲ್ಲನ್ನು ತುಂಡು ಮಾಡುವೆನು.” [PS]
6. {ಲೋರುಹಾಮಳ ಜನನ} [PS] ಗೋಮೆರಳು ತಿರುಗಿ ಗರ್ಭಿಣಿಯಾಗಿ ಹೆಣ್ಣುಮಗುವನ್ನು ಹೆತ್ತಳು. ಯೆಹೋವನು ಹೋಶೇಯನಿಗೆ, ಆಕೆಗೆ, “ಲೋರುಹಾಮ” ಎಂಬ ಹೆಸರನ್ನಿಡಲು ಹೇಳಿದನು. “ಯಾಕೆಂದರೆ, ನಾನು ಇನ್ನು ಮುಂದೆ ಇಸ್ರೇಲ್ ಜನಾಂಗವನ್ನು ಕ್ಷಮಿಸುವುದಿಲ್ಲ.
7. ಆದರೆ ನಾನು ಯೆಹೂದ ದೇಶಕ್ಕೆ ಕರುಣೆಯನ್ನು ತೋರಿಸುವೆನು. ನಾನು ಅವರನ್ನು ರಕ್ಷಿಸುವೆನು. ಅವರನ್ನು ರಕ್ಷಿಸಲು ನಾನು ಬಿಲ್ಲುಬಾಣಗಳನ್ನು ಉಪಯೋಗಿಸುವದಿಲ್ಲ. ಅಥವಾ ಯುದ್ಧಾಶ್ವಗಳನ್ನಾಗಲಿ ಸೈನ್ಯವನ್ನಾಗಲಿ ಉಪಯೋಗಿಸುವದಿಲ್ಲ. ನನ್ನ ಸ್ವಂತ ಸಾಮರ್ಥ್ಯದಿಂದಲೇ ನಾನು ಅವರನ್ನು ರಕ್ಷಿಸುವೆನು.” [PS]
8. {ಲೋಅಮ್ಮಿಯ ಜನನ} [PS] ಗೋಮೆರಳು ಲೋರುಹಾಮಳಿಗೆ ಮೊಲೆಯುಣಿಸುವದನ್ನು ನಿಲ್ಲಿಸಿದ ಬಳಿಕ ಆಕೆಯು ತಿರುಗಿ ಗರ್ಭಿಣಿಯಾಗಿ ಗಂಡುಮಗುವನ್ನು ಹೆತ್ತಳು.
9. ಆಗ ಯೆಹೋವನು, “ಅವನಿಗೆ ಲೋಅಮ್ಮಿ ಎಂದು ಹೆಸರಿಡು. ಯಾಕೆಂದರೆ ನೀವು ನನ್ನ ಜನರಲ್ಲ; ನಾನು ನಿಮ್ಮ ದೇವರಲ್ಲ” ಎಂದು ಹೇಳಿದನು. [PS]
10. {ಇಸ್ರೇಲ್ ಜನಾಂಗದವರೊಂದಿಗೆ ಯೆಹೋವನು ಮಾತಾಡುತ್ತಾನೆ} [PS] “ಇನ್ನು ಮುಂದೆ ಇಸ್ರೇಲರ ಜನಸಂಖ್ಯೆಯು ಸಮುದ್ರದ ಮರಳಿನಂತಿರುವದು. ನೀವು ಮರಳನ್ನು ಅಳತೆಮಾಡಲೂ ಅದನ್ನು ಲೆಕ್ಕಿಸಲೂ ಸಾಧ್ಯವಿಲ್ಲ. ಆಗ, ‘ನೀವು ನನ್ನ ಜನರಲ್ಲ’ ಎಂಬ ಹೇಳಿಕೆಯ ಬದಲಾಗಿ, ‘ನೀವು ಜೀವಸ್ವರೂಪನಾದ ದೇವರ ಮಕ್ಕಳು’ ಎಂಬುದಾಗಿ ಕರೆಯಲ್ಪಡುವಿರಿ. [PE][PS]
11. “ಆಗ ಇಸ್ರೇಲಿನ ಪ್ರಜೆಗಳು ಮತ್ತು ಯೆಹೂದ ಪ್ರಾಂತ್ಯದ ಪ್ರಜೆಗಳು ಒಂದಾಗಿ ಸೇರಲ್ಪಡುವರು. ತಮಗೆ ಒಬ್ಬ ಅರಸನನ್ನು ಅವರು ಆರಿಸಿಕೊಳ್ಳುವರು. ಅವರ ಜನಾಂಗಕ್ಕೆ ಆ ದೇಶವು ಸಾಲದೆ ಹೋಗುವದು. ಇಜ್ರೇಲನ ದಿನವು ನಿಜವಾಗಿಯೂ ಮಹತ್ವವುಳ್ಳದ್ದಾಗಿರುವದು.” [PE]
ಒಟ್ಟು 14 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 1 / 14
1 2 3 4 5 6 7 8 9 10 11 12 13 14
ಹೋಶೇಯನ ಮುಖಾಂತರ ದೇವರಾದ ಯೆಹೋವನ ಸಂದೇಶ 1 ಬೆಯೇರಿಯ ಮಗನಾದ ಹೋಶೇಯನಿಗೆ ಯೋಹೋವನಿಂದ ಬಂದ ಸಂದೇಶ: ಈ ಸಂದೇಶವು ಯೆಹೂದ ಪ್ರಾಂತ್ಯದ ಅರಸರಾದ ಉಜ್ಜೀಯ, ಯೋಥಾವು, ಅಹಾಜ ಮತ್ತು ಹಿಜ್ಕೀಯ ಇವರ ಆಳ್ವಿಕೆಯ ಸಮಯದಲ್ಲಿ ಬಂದಿತು. ಇದು ಇಸ್ರೇಲಿನ ಅರಸನಾದ ಯೋವಾಷನ ಮಗನಾದ ಯಾರೊಬ್ಬಾಮನ ಆಳ್ವಿಕೆಯ ಕಾಲ. 2 ಹೋಶೇಯನಿಗೆ ಯೆಹೋವನಿಂದ ಬಂದ ಸಂದೇಶದಲ್ಲಿ ಇದು ಮೊದಲನೆಯದು. ಯೆಹೋವನು ಹೇಳಿದ್ದೇನೆಂದರೆ, “ನೀನು ಹೋಗಿ ಒಬ್ಬ ವೇಶ್ಯೆಯನ್ನು ಮದುವೆಯಾಗು. ಆ ವೇಶ್ಯೆಯಿಂದ *ವೇಶ್ಯೆಯಿಂದ ಅಂದರೆ ಆಕೆಯಲ್ಲಿ ಹುಟ್ಟುವ ಮಕ್ಕಳು ಆಕೆಯ ಸೂಳೆತನದ ಫಲವಾಗಿವೆ. ಮಕ್ಕಳನ್ನು ಪಡೆದುಕೊ. ಯಾಕೆಂದರೆ ಈ ದೇಶದ ಜನರು ಸೂಳೆಯಂತೆ ವರ್ತಿಸಿರುತ್ತಾರೆ. ಅವರು ಯೆಹೋವನಿಗೆ ಅಪನಂಬಿಗಸ್ತಿಕೆಯುಳ್ಳವರಾಗಿರುತ್ತಾರೆ.” ಇಜ್ರೇಲನ ಜನನ 3 ಹಾಗೆ ಹೋಶೇಯನು ದಿಬ್ಲಯೀಮನ ಮಗಳಾದ ಗೋಮೆರ್ ಎಂಬಾಕೆಯನ್ನು ಮದುವೆಯಾದನು. ಗೋಮೆರಳು ಗರ್ಭಿಣಿಯಾಗಿ ಹೋಶೇಯನಿಗೆ ಗಂಡುಮಗುವನ್ನು ಹೆತ್ತಳು. 4 ಹೋಶೇಯನಿಗೆ ಯೆಹೋವನು ಹೇಳಿದ್ದೇನೆಂದರೆ, “ಅವನಿಗೆ ಇಜ್ರೇಲ್ ಎಂದು ಹೆಸರನ್ನಿಡು. ಯಾಕೆಂದರೆ, ಇನ್ನು ಸ್ವಲ್ಪ ಸಮಯದಲ್ಲಿ ನಾನು ಯೇಹುವಿನ ಸಂತತಿಯವರನ್ನು ಶಿಕ್ಷಿಸುವೆನು. ಅವನು ಇಜ್ರೇಲ್ ತಗ್ಗಿನಲ್ಲಿ ರಕ್ತವನ್ನು ಸುರಿಸಿರುತ್ತಾನಲ್ಲಾ? ಆ ಮೇಲೆ ನಾನು ಇಸ್ರೇಲ್ ರಾಜ್ಯಕ್ಕೆ ಅಂತ್ಯವನ್ನು ತರುವೆನು. 5 ಆಗ ಇಜ್ರೇಲ್ ತಗ್ಗಿನಲ್ಲಿ ಇಸ್ರೇಲಿನ ಬಿಲ್ಲನ್ನು ತುಂಡು ಮಾಡುವೆನು.” ಲೋರುಹಾಮಳ ಜನನ 6 ಗೋಮೆರಳು ತಿರುಗಿ ಗರ್ಭಿಣಿಯಾಗಿ ಹೆಣ್ಣುಮಗುವನ್ನು ಹೆತ್ತಳು. ಯೆಹೋವನು ಹೋಶೇಯನಿಗೆ, ಆಕೆಗೆ, “ಲೋರುಹಾಮ” ಎಂಬ ಹೆಸರನ್ನಿಡಲು ಹೇಳಿದನು. “ಯಾಕೆಂದರೆ, ನಾನು ಇನ್ನು ಮುಂದೆ ಇಸ್ರೇಲ್ ಜನಾಂಗವನ್ನು ಕ್ಷಮಿಸುವುದಿಲ್ಲ. 7 ಆದರೆ ನಾನು ಯೆಹೂದ ದೇಶಕ್ಕೆ ಕರುಣೆಯನ್ನು ತೋರಿಸುವೆನು. ನಾನು ಅವರನ್ನು ರಕ್ಷಿಸುವೆನು. ಅವರನ್ನು ರಕ್ಷಿಸಲು ನಾನು ಬಿಲ್ಲುಬಾಣಗಳನ್ನು ಉಪಯೋಗಿಸುವದಿಲ್ಲ. ಅಥವಾ ಯುದ್ಧಾಶ್ವಗಳನ್ನಾಗಲಿ ಸೈನ್ಯವನ್ನಾಗಲಿ ಉಪಯೋಗಿಸುವದಿಲ್ಲ. ನನ್ನ ಸ್ವಂತ ಸಾಮರ್ಥ್ಯದಿಂದಲೇ ನಾನು ಅವರನ್ನು ರಕ್ಷಿಸುವೆನು.” ಲೋಅಮ್ಮಿಯ ಜನನ 8 ಗೋಮೆರಳು ಲೋರುಹಾಮಳಿಗೆ ಮೊಲೆಯುಣಿಸುವದನ್ನು ನಿಲ್ಲಿಸಿದ ಬಳಿಕ ಆಕೆಯು ತಿರುಗಿ ಗರ್ಭಿಣಿಯಾಗಿ ಗಂಡುಮಗುವನ್ನು ಹೆತ್ತಳು. 9 ಆಗ ಯೆಹೋವನು, “ಅವನಿಗೆ ಲೋಅಮ್ಮಿ ಎಂದು ಹೆಸರಿಡು. ಯಾಕೆಂದರೆ ನೀವು ನನ್ನ ಜನರಲ್ಲ; ನಾನು ನಿಮ್ಮ ದೇವರಲ್ಲ” ಎಂದು ಹೇಳಿದನು. ಇಸ್ರೇಲ್ ಜನಾಂಗದವರೊಂದಿಗೆ ಯೆಹೋವನು ಮಾತಾಡುತ್ತಾನೆ 10 “ಇನ್ನು ಮುಂದೆ ಇಸ್ರೇಲರ ಜನಸಂಖ್ಯೆಯು ಸಮುದ್ರದ ಮರಳಿನಂತಿರುವದು. ನೀವು ಮರಳನ್ನು ಅಳತೆಮಾಡಲೂ ಅದನ್ನು ಲೆಕ್ಕಿಸಲೂ ಸಾಧ್ಯವಿಲ್ಲ. ಆಗ, ‘ನೀವು ನನ್ನ ಜನರಲ್ಲ’ ಎಂಬ ಹೇಳಿಕೆಯ ಬದಲಾಗಿ, ‘ನೀವು ಜೀವಸ್ವರೂಪನಾದ ದೇವರ ಮಕ್ಕಳು’ ಎಂಬುದಾಗಿ ಕರೆಯಲ್ಪಡುವಿರಿ. 11 “ಆಗ ಇಸ್ರೇಲಿನ ಪ್ರಜೆಗಳು ಮತ್ತು ಯೆಹೂದ ಪ್ರಾಂತ್ಯದ ಪ್ರಜೆಗಳು ಒಂದಾಗಿ ಸೇರಲ್ಪಡುವರು. ತಮಗೆ ಒಬ್ಬ ಅರಸನನ್ನು ಅವರು ಆರಿಸಿಕೊಳ್ಳುವರು. ಅವರ ಜನಾಂಗಕ್ಕೆ ಆ ದೇಶವು ಸಾಲದೆ ಹೋಗುವದು. ಇಜ್ರೇಲನ ದಿನವು ನಿಜವಾಗಿಯೂ ಮಹತ್ವವುಳ್ಳದ್ದಾಗಿರುವದು.”
ಒಟ್ಟು 14 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 1 / 14
1 2 3 4 5 6 7 8 9 10 11 12 13 14
×

Alert

×

Kannada Letters Keypad References