ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಹೋಶೇ
1. {ಯೆಹೋವನ ಬಳಿಗೆ ಹಿಂದಿರುಗಿರಿ} [PS] ಇಸ್ರೇಲೇ, ನೀನು ಜಾರಿಬಿದ್ದು ದೇವರಿಗೆ ವಿರುದ್ಧವಾಗಿ ಪಾಪಮಾಡಿದಿ. ನಿನ್ನ ದೇವರಾದ ಯೆಹೋವನ ಬಳಿಗೆ ಹಿಂದಿರುಗಿ ಬಾ.
2. ನೀನು ಹೇಳಬೇಕಾದ ವಿಷಯಗಳ ಕುರಿತು ನೀನು ಆಲೋಚಿಸು ಮತ್ತು ಯೆಹೋವನ ಬಳಿಗೆ ಹಿಂದಿರುಗಿ ಬಾ ಮತ್ತು ಆತನಿಗೆ ಹೀಗೆ ಹೇಳು: “ನಮ್ಮ ಪಾಪಗಳನ್ನು ನಮ್ಮಿಂದ ತೆಗೆ. [QBR2] ನಾವು ಮಾಡುವ ಒಳ್ಳೆಯ ಕಾರ್ಯಗಳನ್ನು ಸ್ವೀಕರಿಸು. [QBR2] ಆಗ ನಮ್ಮ ತುಟಿಗಳಿಂದ ನಿನಗೆ ಸ್ತೋತ್ರವೆಂಬ ಕಾಣಿಕೆಯನ್ನು ಸಮರ್ಪಿಸುವೆವು. [QBR]
3. ಅಶ್ಶೂರವು ನಮ್ಮನ್ನು ರಕ್ಷಿಸಲಾರದು. [QBR2] ನಾವು ಕುದುರೆ ಮೇಲೆ ಸವಾರಿ ಮಾಡುವದಿಲ್ಲ. [QBR] ನಮ್ಮ ಕೈಗಳು ತಯಾರಿಸಿದ ಬೊಂಬೆಗಳಿಗೆ ನಾವು ಇನ್ನು [QBR2] ‘ನಮ್ಮ ದೇವರು’ ಎಂದು ಹೇಳುವದಿಲ್ಲ. [QBR] ಯಾಕೆಂದರೆ ಅನಾಥರಿಗೆ [QBR2] ಕರುಣೆಯನ್ನು ತೋರಿಸುವವನು ನೀನೇ.”
4. {ಯೆಹೋವನು ಇಸ್ರೇಲನ್ನು ಕ್ಷಮಿಸುವನು} [PS] ಯೆಹೋವನು ಹೇಳುವುದೇನೆಂದರೆ, [QBR] “ಅವರು ನನ್ನನ್ನು ತೊರೆದುಬಿಟ್ಟಿದ್ದನ್ನು ನಾನು ಕ್ಷಮಿಸುವೆನು. [QBR2] ಅವರನ್ನು ಅಧಿಕವಾಗಿಯೂ ಸ್ವಇಚ್ಛೆಯಿಂದಲೂ ಪ್ರೀತಿಸುವೆನು. [QBR2] ಈಗ ಅವರ ಮೇಲೆ ನಾನು ಕೋಪಿಸುವದಿಲ್ಲ. [QBR]
5. ಇಸ್ರೇಲಿಗೆ ನಾನು ಇಬ್ಬನಿಯಂತಿರುವೆನು. [QBR2] ನೆಲದಾವರೆಯಂತೆ ಇಸ್ರೇಲ್ ಅರಳುವನು. [QBR2] ಲೆಬನೋನಿನ ದೇವದಾರು ವೃಕ್ಷಗಳಂತೆ ಸೊಂಪಾಗಿ ಬೆಳೆಯುವನು. [QBR]
6. ಅವನ ಕೊಂಬೆಗಳು ಬೆಳೆದು ಹರಡಿಕೊಳ್ಳುತ್ತವೆ; [QBR2] ಅವನು ಅಂದವಾದ ಆಲೀವ್ ಮರದಂತಿರುವನು. [QBR] ಲೆಬನೋನಿನ ದೇವದಾರು ಮರಗಳ ಸುವಾಸನೆಯಂತೆ [QBR2] ಅವನು ಗಮಗಮಿಸುವನು. [QBR]
7. ಇಸ್ರೇಲಿನ ಜನರು ಮತ್ತೆ ನನ್ನ ಆಶ್ರಯದಲ್ಲಿ ವಾಸಿಸುವರು. [QBR2] ಧಾನ್ಯದ ಸಸಿಗಳಂತೆ ಬೆಳೆಯುವರು, [QBR] ದ್ರಾಕ್ಷಾಲತೆಯಿಂದ ಚಿಗುರುವರು. [QBR2] ಲೆಬನೋನಿನ ದ್ರಾಕ್ಷಿಬಳ್ಳಿಯಂತೆ ಅವರು ಇರುವರು.”
8. {ವಿಗ್ರಹಗಳ ಬಗ್ಗೆ ಯೆಹೋವನ ಎಚ್ಚರಿಕೆ} [PS] “ಎಫ್ರಾಯೀಮೇ, ಇನ್ನುಮುಂದೆ ವಿಗ್ರಹವು ನಿನ್ನಲ್ಲಿರಬಾರದು. [QBR2] ನಿನ್ನ ಪ್ರಾರ್ಥನೆಗೆ ಉತ್ತರಿಸುವವನು ನಾನೇ. ನಿನ್ನನ್ನು ಕಾಯುವವನು ನಾನೇ. [QBR] ನಾನು ತುರಾಯಿ ಮರದಂತೆ ಸದಾ ಹಸಿರಾಗಿರುವೆನು. [QBR2] ನಿನ್ನ ಫಲಗಳು ನನ್ನಿಂದ ಬರುವದು.”
9. {ಅಂತಿಮ ಸಲಹೆ} [PS] ಬುದ್ಧಿವಂತ ಮನುಷ್ಯನು ಇವುಗಳನ್ನು ಅರ್ಥಮಾಡಿಕೊಳ್ಳುತ್ತಾನೆ. [QBR2] ಜಾಣನು ಇದನ್ನು ಕಲಿತುಕೊಳ್ಳುತ್ತಾನೆ. [QBR] ಯೆಹೋವನ ಮಾರ್ಗವು ಸರಿಯಾದದ್ದು. [QBR2] ಒಳ್ಳೆಯ ಜನರು ಅವರೊಂದಿಗೆ ಜೀವಿಸುವರು. [QBR2] ಪಾಪಿಗಳು ಅವುಗಳಿಂದ ಸಾಯುವರು. [PE]
ಒಟ್ಟು 14 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 14 / 14
1 2 3 4 5 6 7 8 9 10 11 12 13 14
ಯೆಹೋವನ ಬಳಿಗೆ ಹಿಂದಿರುಗಿರಿ 1 ಇಸ್ರೇಲೇ, ನೀನು ಜಾರಿಬಿದ್ದು ದೇವರಿಗೆ ವಿರುದ್ಧವಾಗಿ ಪಾಪಮಾಡಿದಿ. ನಿನ್ನ ದೇವರಾದ ಯೆಹೋವನ ಬಳಿಗೆ ಹಿಂದಿರುಗಿ ಬಾ. 2 ನೀನು ಹೇಳಬೇಕಾದ ವಿಷಯಗಳ ಕುರಿತು ನೀನು ಆಲೋಚಿಸು ಮತ್ತು ಯೆಹೋವನ ಬಳಿಗೆ ಹಿಂದಿರುಗಿ ಬಾ ಮತ್ತು ಆತನಿಗೆ ಹೀಗೆ ಹೇಳು: “ನಮ್ಮ ಪಾಪಗಳನ್ನು ನಮ್ಮಿಂದ ತೆಗೆ. ನಾವು ಮಾಡುವ ಒಳ್ಳೆಯ ಕಾರ್ಯಗಳನ್ನು ಸ್ವೀಕರಿಸು. ಆಗ ನಮ್ಮ ತುಟಿಗಳಿಂದ ನಿನಗೆ ಸ್ತೋತ್ರವೆಂಬ ಕಾಣಿಕೆಯನ್ನು ಸಮರ್ಪಿಸುವೆವು.
3 ಅಶ್ಶೂರವು ನಮ್ಮನ್ನು ರಕ್ಷಿಸಲಾರದು. ನಾವು ಕುದುರೆ ಮೇಲೆ ಸವಾರಿ ಮಾಡುವದಿಲ್ಲ.
ನಮ್ಮ ಕೈಗಳು ತಯಾರಿಸಿದ ಬೊಂಬೆಗಳಿಗೆ ನಾವು ಇನ್ನು ‘ನಮ್ಮ ದೇವರು’ ಎಂದು ಹೇಳುವದಿಲ್ಲ.
ಯಾಕೆಂದರೆ ಅನಾಥರಿಗೆ ಕರುಣೆಯನ್ನು ತೋರಿಸುವವನು ನೀನೇ.”
ಯೆಹೋವನು ಇಸ್ರೇಲನ್ನು ಕ್ಷಮಿಸುವನು 4 ಯೆಹೋವನು ಹೇಳುವುದೇನೆಂದರೆ,
“ಅವರು ನನ್ನನ್ನು ತೊರೆದುಬಿಟ್ಟಿದ್ದನ್ನು ನಾನು ಕ್ಷಮಿಸುವೆನು. ಅವರನ್ನು ಅಧಿಕವಾಗಿಯೂ ಸ್ವಇಚ್ಛೆಯಿಂದಲೂ ಪ್ರೀತಿಸುವೆನು. ಈಗ ಅವರ ಮೇಲೆ ನಾನು ಕೋಪಿಸುವದಿಲ್ಲ.
5 ಇಸ್ರೇಲಿಗೆ ನಾನು ಇಬ್ಬನಿಯಂತಿರುವೆನು. ನೆಲದಾವರೆಯಂತೆ ಇಸ್ರೇಲ್ ಅರಳುವನು. ಲೆಬನೋನಿನ ದೇವದಾರು ವೃಕ್ಷಗಳಂತೆ ಸೊಂಪಾಗಿ ಬೆಳೆಯುವನು.
6 ಅವನ ಕೊಂಬೆಗಳು ಬೆಳೆದು ಹರಡಿಕೊಳ್ಳುತ್ತವೆ; ಅವನು ಅಂದವಾದ ಆಲೀವ್ ಮರದಂತಿರುವನು.
ಲೆಬನೋನಿನ ದೇವದಾರು ಮರಗಳ ಸುವಾಸನೆಯಂತೆ ಅವನು ಗಮಗಮಿಸುವನು.
7 ಇಸ್ರೇಲಿನ ಜನರು ಮತ್ತೆ ನನ್ನ ಆಶ್ರಯದಲ್ಲಿ ವಾಸಿಸುವರು. ಧಾನ್ಯದ ಸಸಿಗಳಂತೆ ಬೆಳೆಯುವರು,
ದ್ರಾಕ್ಷಾಲತೆಯಿಂದ ಚಿಗುರುವರು. ಲೆಬನೋನಿನ ದ್ರಾಕ್ಷಿಬಳ್ಳಿಯಂತೆ ಅವರು ಇರುವರು.”
ವಿಗ್ರಹಗಳ ಬಗ್ಗೆ ಯೆಹೋವನ ಎಚ್ಚರಿಕೆ 8 “ಎಫ್ರಾಯೀಮೇ, ಇನ್ನುಮುಂದೆ ವಿಗ್ರಹವು ನಿನ್ನಲ್ಲಿರಬಾರದು. ನಿನ್ನ ಪ್ರಾರ್ಥನೆಗೆ ಉತ್ತರಿಸುವವನು ನಾನೇ. ನಿನ್ನನ್ನು ಕಾಯುವವನು ನಾನೇ.
ನಾನು ತುರಾಯಿ ಮರದಂತೆ ಸದಾ ಹಸಿರಾಗಿರುವೆನು. ನಿನ್ನ ಫಲಗಳು ನನ್ನಿಂದ ಬರುವದು.”
ಅಂತಿಮ ಸಲಹೆ 9 ಬುದ್ಧಿವಂತ ಮನುಷ್ಯನು ಇವುಗಳನ್ನು ಅರ್ಥಮಾಡಿಕೊಳ್ಳುತ್ತಾನೆ. ಜಾಣನು ಇದನ್ನು ಕಲಿತುಕೊಳ್ಳುತ್ತಾನೆ.
ಯೆಹೋವನ ಮಾರ್ಗವು ಸರಿಯಾದದ್ದು. ಒಳ್ಳೆಯ ಜನರು ಅವರೊಂದಿಗೆ ಜೀವಿಸುವರು. ಪಾಪಿಗಳು ಅವುಗಳಿಂದ ಸಾಯುವರು.
ಒಟ್ಟು 14 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 14 / 14
1 2 3 4 5 6 7 8 9 10 11 12 13 14
×

Alert

×

Kannada Letters Keypad References