ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಯೆಶಾಯ
1. {ಮೋವಾಬಿನ ಕುರಿತು ದೈವಸಂದೇಶ} [PS] ಇದು ಮೋವಾಬನ್ನು ಕುರಿತ ದುಃಖಕರವಾದ ಸಂದೇಶ: ಒಂದು ರಾತ್ರಿ ಮೋವಾಬಿನ ಆರ್ ಪಟ್ಟಣದಿಂದ ಸಂಪತ್ತನ್ನು ಸೈನ್ಯವು ಸೂರೆ ಮಾಡಿತು. [QBR2] ಆ ರಾತ್ರಿ ನಗರವು ನಾಶಮಾಡಲ್ಪಟ್ಟಿತು. [QBR] ಒಂದು ರಾತ್ರಿ ಸೈನ್ಯವು ಮೋವಾಬಿನ ಕೀರ್ ಪಟ್ಟಣದಿಂದ ಸಂಪತ್ತನ್ನು ಸೂರೆ ಮಾಡಿತು. [QBR2] ಆ ರಾತ್ರಿ ಪಟ್ಟಣವು ಕೆಡವಲ್ಪಟ್ಟಿತು. [QBR]
2. ಅರಸನ ಪರಿವಾರದವರು ಮತ್ತು ದೀಬೋನಿನ ಜನರು ಪೂಜಾಸ್ಥಳಕ್ಕೆ ದುಃಖಿಸಲು ಹೋಗುತ್ತಿದ್ದಾರೆ. [QBR2] ಮೋವಾಬಿನ ಜನರು ನೆಬೋ ಮತ್ತು ಮೇದೆಬದವರಿಗಾಗಿ ರೋಧಿಸುತ್ತಾರೆ. [QBR2] ಜನರು ತಮ್ಮ ಗಡ್ಡಗಳನ್ನೂ ತಲೆಗಳನ್ನೂ ಬೋಳಿಸಿ ತಮ್ಮ ದುಃಖವನ್ನು ಪ್ರದರ್ಶಿಸುತ್ತಾರೆ. [QBR]
3. ಮೋವಾಬಿನ ಎಲ್ಲಾ ಕಡೆಗಳಲ್ಲೂ ಮನೆಯ ಚಾವಣಿಯ ಮೇಲೂ ಬೀದಿಗಳಲ್ಲೂ [QBR2] ಜನರು ಗೋಣಿತಟ್ಟುಗಳನ್ನು ಧರಿಸಿಕೊಂಡು ರೋಧಿಸುತ್ತಾರೆ. [QBR]
4. ಹೆಷ್ಬೋನ್ ಮತ್ತು ಎಲೆಯಾಲೆಯಲ್ಲಿರುವ ಜನರು ಗಟ್ಟಿಯಾಗಿ ಅಳುತ್ತಿದ್ದಾರೆ. [QBR2] ದೂರದಲ್ಲಿರುವ ಯಹಜ್ ಪಟ್ಟಣದವರಿಗೆ ಅವರ ರೋಧನವು ಕೇಳಿಸುತ್ತದೆ. [QBR] ಸೈನಿಕರೂ ಭಯಗೊಂಡಿದ್ದಾರೆ. [QBR2] ಹೆದರಿಕೆಯಿಂದ ನಡುಗುತ್ತಿದ್ದಾರೆ.
5. ಮೋವಾಬಿನ ಬಗ್ಗೆ ನನ್ನ ಹೃದಯವು ಮರುಗುತ್ತಿದೆ. [QBR2] ಜನರು ಸುರಕ್ಷತೆಗಾಗಿ ಅತ್ತಿತ್ತ ಓಡಾಡುತ್ತಿದ್ದಾರೆ. ಅವರು ಬಹುದೂರವಿರುವ ಚೋಯರಿಗೆ ಓಡುತ್ತಿದ್ದಾರೆ. [QBR2] ಎಗ್ಲತ್ ಶೆಲಿಶೀಯಕ್ಕೂ ಓಡುತ್ತಾರೆ. [QBR] ಪರ್ವತಮಾರ್ಗವಾಗಿ ಲೂಹೀಥ್ ಗೆ [QBR2] ಹೋಗುತ್ತಿರುವಾಗ ಜನರು ಅಳುತ್ತಾ ಹೋಗುತ್ತಾರೆ. [QBR] ಹೊರೊನಯಿಮಿಗೆ ಹೋಗುವ ಮಾರ್ಗದಲ್ಲಿ [QBR2] ಜನರು ಜೋರಾಗಿ ಅಳುತ್ತಾ ಹೋಗುತ್ತಿದ್ದಾರೆ. [QBR]
6. ಆದರೆ ನಿಮ್ರೀಮ್ ಹಳ್ಳವು ಒಣಗಿಹೋಗಿ ಮರುಭೂಮಿಗೆ ಸಮಾನವಾಗಿದೆ. [QBR2] ಹಸಿಹುಲ್ಲುಗಳೆಲ್ಲಾ ಬಾಡಿವೆ; [QBR2] ಸಸಿಗಳೆಲ್ಲಾ ಸತ್ತಿವೆ; [QBR2] ಎಲ್ಲಿಯೂ ಹಸಿರು ಕಾಣಿಸುವದಿಲ್ಲ. [QBR]
7. ಆದಕಾರಣ ಜನರು ತಮ್ಮ ವಸ್ತುಗಳನ್ನು ಒಟ್ಟಾಗಿ ಸೇರಿಸಿ ಮೋವಾಬನ್ನು ಬಿಟ್ಟುಹೋಗುತ್ತಿದ್ದಾರೆ. [QBR2] ಅವರು ತಮ್ಮ ವಸ್ತುಗಳನ್ನು ಹೊತ್ತುಕೊಂಡು ಪೊಪ್ಲಾರ್ ಹೊಳೆಯ ಬದಿಯಲ್ಲಿ ಗಡಿದಾಟುವರು.
8. ಮೋವಾಬ್ ದೇಶದಲ್ಲೆಲ್ಲಾ ಅಳುವ ಸದ್ದು ಕೇಳಿಸುತ್ತದೆ. [QBR2] ದೂರದಲ್ಲಿರುವ ಎಗ್ಲಯಿಮಿನಲ್ಲೂ ಜನರು ಅಳುತ್ತಿದ್ದಾರೆ. ಬೆಯೇರ್ ಏಲೀಮ್ ಪಟ್ಟಣದಲ್ಲೂ ಜನರು ರೋಧಿಸುತ್ತಾರೆ. [QBR]
9. ದೀಮೋನಿನ ನೀರು ರಕ್ತಮಯವಾಗಿದೆ. [QBR2] ಮತ್ತು ಯೆಹೋವನಾದ ನಾನು ದೀಮೋನಿಗೆ ಇನ್ನೂ ಕೇಡುಗಳನ್ನು ಬರಮಾಡುವೆನು. [QBR] ಮೋವಾಬಿನಲ್ಲಿ ವಾಸಿಸುವ ಕೆಲವೇ ಜನರು ಶತ್ರುಗಳಿಂದ ಪಾರಾಗಿದ್ದಾರೆ. [QBR2] ಆದರೆ ಅವರನ್ನು ಸಾಯಿಸಲು ನಾನು ಸಿಂಹಗಳನ್ನು ಕಳುಹಿಸುವೆನು. [PE]
ಒಟ್ಟು 66 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 15 / 66
ಮೋವಾಬಿನ ಕುರಿತು ದೈವಸಂದೇಶ 1 ಇದು ಮೋವಾಬನ್ನು ಕುರಿತ ದುಃಖಕರವಾದ ಸಂದೇಶ: ಒಂದು ರಾತ್ರಿ ಮೋವಾಬಿನ ಆರ್ ಪಟ್ಟಣದಿಂದ ಸಂಪತ್ತನ್ನು ಸೈನ್ಯವು ಸೂರೆ ಮಾಡಿತು. ಆ ರಾತ್ರಿ ನಗರವು ನಾಶಮಾಡಲ್ಪಟ್ಟಿತು.
ಒಂದು ರಾತ್ರಿ ಸೈನ್ಯವು ಮೋವಾಬಿನ ಕೀರ್ ಪಟ್ಟಣದಿಂದ ಸಂಪತ್ತನ್ನು ಸೂರೆ ಮಾಡಿತು. ಆ ರಾತ್ರಿ ಪಟ್ಟಣವು ಕೆಡವಲ್ಪಟ್ಟಿತು.
2 ಅರಸನ ಪರಿವಾರದವರು ಮತ್ತು ದೀಬೋನಿನ ಜನರು ಪೂಜಾಸ್ಥಳಕ್ಕೆ ದುಃಖಿಸಲು ಹೋಗುತ್ತಿದ್ದಾರೆ. ಮೋವಾಬಿನ ಜನರು ನೆಬೋ ಮತ್ತು ಮೇದೆಬದವರಿಗಾಗಿ ರೋಧಿಸುತ್ತಾರೆ. ಜನರು ತಮ್ಮ ಗಡ್ಡಗಳನ್ನೂ ತಲೆಗಳನ್ನೂ ಬೋಳಿಸಿ ತಮ್ಮ ದುಃಖವನ್ನು ಪ್ರದರ್ಶಿಸುತ್ತಾರೆ.
3 ಮೋವಾಬಿನ ಎಲ್ಲಾ ಕಡೆಗಳಲ್ಲೂ ಮನೆಯ ಚಾವಣಿಯ ಮೇಲೂ ಬೀದಿಗಳಲ್ಲೂ ಜನರು ಗೋಣಿತಟ್ಟುಗಳನ್ನು ಧರಿಸಿಕೊಂಡು ರೋಧಿಸುತ್ತಾರೆ.
4 ಹೆಷ್ಬೋನ್ ಮತ್ತು ಎಲೆಯಾಲೆಯಲ್ಲಿರುವ ಜನರು ಗಟ್ಟಿಯಾಗಿ ಅಳುತ್ತಿದ್ದಾರೆ. ದೂರದಲ್ಲಿರುವ ಯಹಜ್ ಪಟ್ಟಣದವರಿಗೆ ಅವರ ರೋಧನವು ಕೇಳಿಸುತ್ತದೆ.
ಸೈನಿಕರೂ ಭಯಗೊಂಡಿದ್ದಾರೆ. ಹೆದರಿಕೆಯಿಂದ ನಡುಗುತ್ತಿದ್ದಾರೆ.
5 ಮೋವಾಬಿನ ಬಗ್ಗೆ ನನ್ನ ಹೃದಯವು ಮರುಗುತ್ತಿದೆ. ಜನರು ಸುರಕ್ಷತೆಗಾಗಿ ಅತ್ತಿತ್ತ ಓಡಾಡುತ್ತಿದ್ದಾರೆ. ಅವರು ಬಹುದೂರವಿರುವ ಚೋಯರಿಗೆ ಓಡುತ್ತಿದ್ದಾರೆ. ಎಗ್ಲತ್ ಶೆಲಿಶೀಯಕ್ಕೂ ಓಡುತ್ತಾರೆ.
ಪರ್ವತಮಾರ್ಗವಾಗಿ ಲೂಹೀಥ್ ಗೆ ಹೋಗುತ್ತಿರುವಾಗ ಜನರು ಅಳುತ್ತಾ ಹೋಗುತ್ತಾರೆ.
ಹೊರೊನಯಿಮಿಗೆ ಹೋಗುವ ಮಾರ್ಗದಲ್ಲಿ ಜನರು ಜೋರಾಗಿ ಅಳುತ್ತಾ ಹೋಗುತ್ತಿದ್ದಾರೆ.
6 ಆದರೆ ನಿಮ್ರೀಮ್ ಹಳ್ಳವು ಒಣಗಿಹೋಗಿ ಮರುಭೂಮಿಗೆ ಸಮಾನವಾಗಿದೆ. ಹಸಿಹುಲ್ಲುಗಳೆಲ್ಲಾ ಬಾಡಿವೆ; ಸಸಿಗಳೆಲ್ಲಾ ಸತ್ತಿವೆ; ಎಲ್ಲಿಯೂ ಹಸಿರು ಕಾಣಿಸುವದಿಲ್ಲ.
7 ಆದಕಾರಣ ಜನರು ತಮ್ಮ ವಸ್ತುಗಳನ್ನು ಒಟ್ಟಾಗಿ ಸೇರಿಸಿ ಮೋವಾಬನ್ನು ಬಿಟ್ಟುಹೋಗುತ್ತಿದ್ದಾರೆ. ಅವರು ತಮ್ಮ ವಸ್ತುಗಳನ್ನು ಹೊತ್ತುಕೊಂಡು ಪೊಪ್ಲಾರ್ ಹೊಳೆಯ ಬದಿಯಲ್ಲಿ ಗಡಿದಾಟುವರು. 8 ಮೋವಾಬ್ ದೇಶದಲ್ಲೆಲ್ಲಾ ಅಳುವ ಸದ್ದು ಕೇಳಿಸುತ್ತದೆ. ದೂರದಲ್ಲಿರುವ ಎಗ್ಲಯಿಮಿನಲ್ಲೂ ಜನರು ಅಳುತ್ತಿದ್ದಾರೆ. ಬೆಯೇರ್ ಏಲೀಮ್ ಪಟ್ಟಣದಲ್ಲೂ ಜನರು ರೋಧಿಸುತ್ತಾರೆ.
9 ದೀಮೋನಿನ ನೀರು ರಕ್ತಮಯವಾಗಿದೆ. ಮತ್ತು ಯೆಹೋವನಾದ ನಾನು ದೀಮೋನಿಗೆ ಇನ್ನೂ ಕೇಡುಗಳನ್ನು ಬರಮಾಡುವೆನು.
ಮೋವಾಬಿನಲ್ಲಿ ವಾಸಿಸುವ ಕೆಲವೇ ಜನರು ಶತ್ರುಗಳಿಂದ ಪಾರಾಗಿದ್ದಾರೆ. ಆದರೆ ಅವರನ್ನು ಸಾಯಿಸಲು ನಾನು ಸಿಂಹಗಳನ್ನು ಕಳುಹಿಸುವೆನು.
ಒಟ್ಟು 66 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 15 / 66
×

Alert

×

Kannada Letters Keypad References