ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಯೆಶಾಯ
1. ನೀವು ದೇಶದ ಅಧಿಪತಿಗೆ ಕಾಣಿಕೆಗಳನ್ನು ಕಳುಹಿಸಬೇಕು. ನೀವು ಸೇಲದ ಕುರಿಮರಿಯನ್ನು ಮರುಭೂಮಿಯ ಮೂಲಕ ಚೀಯೋನ್ ಕುಮಾರ್ತೆಯ ಪರ್ವತಕ್ಕೆ ಕಳುಹಿಸಿಕೊಡಬೇಕು.
2. ಮೋವಾಬಿನ ಸ್ತ್ರೀಯರು ಅರ್ನೋನ್ ಹೊಳೆಯನ್ನು ದಾಟಲು ಪ್ರಯತ್ನಿಸುವರು. [QBR2] ಅವರು ಒಂದು ಕಡೆಯಿಂದ ಇನ್ನೊಂದು ಕಡೆಗೆ ಸಹಾಯಕ್ಕಾಗಿ ಓಡುವರು. [QBR2] ಗೂಡಿನಿಂದ ಕೆಳಗೆ ಬಿದ್ದ ಪಕ್ಷಿಮರಿಗಳಂತೆ ಅವರಿರುವರು. [QBR]
3. ಅವರು, “ನಮಗೆ ಸಹಾಯ ಮಾಡಿರಿ! [QBR2] ನಾವು ಮಾಡಬೇಕಾದದ್ದನ್ನು ತಿಳಿಸಿರಿ! [QBR] ವೈರಿಗಳಿಂದ ನಮ್ಮನ್ನು ರಕ್ಷಿಸಿರಿ. [QBR2] ನಮ್ಮನ್ನು ನಡುಮಧ್ಯಾಹ್ನದ ಸೂರ್ಯನ ಶಾಖದಿಂದ ನೆರಳು ಕಾಪಾಡುವಂತೆ ನಮ್ಮನ್ನು ಕಾಪಾಡಿರಿ. [QBR] ನಾವು ನಮ್ಮ ಶತ್ರುಗಳಿಂದ ಓಡಿಹೋಗುತ್ತಿದ್ದೇವೆ. [QBR2] ನಮ್ಮನ್ನು ಅಡಗಿಸಿಡಿರಿ, [QBR2] ವೈರಿಗಳ ಕೈಗೆ ನಮ್ಮನ್ನು ಕೊಡಬೇಡಿರಿ. [QBR]
4. ತಮ್ಮ ಮನೆಯನ್ನು ಬಿಟ್ಟುಹೋಗುವಂತೆ ಮೋವಾಬಿನ ಆ ಜನರನ್ನು ಬಲವಂತ ಮಾಡಲಾಯಿತು. [QBR2] ಆದ್ದರಿಂದ ಅವರು ನಿಮ್ಮ ದೇಶದಲ್ಲಿ ವಾಸಿಸಲಿ. [QBR2] ಶತ್ರುಗಳ ಕೈಗೆ ಸಿಗದಂತೆ ಅವರನ್ನು ಅಡಗಿಸಿಡಿರಿ” ಎಂದು ಹೇಳುವರು. ದರೋಡೆಯು ನಿಂತುಹೋಗುವದು. [QBR2] ಶತ್ರುಗಳು ಸೋಲಿಸಲ್ಪಡುವರು. [QBR] ಇತರರಿಗೆ ಕೇಡುಮಾಡುವವರು ದೇಶವನ್ನು ಬಿಟ್ಟುಹೋಗುವರು. [QBR]
5. ಆಗ ಹೊಸ ಅರಸನು ಬರುವನು. [QBR2] ಆತನು ನ್ಯಾಯವಾದವುಗಳನ್ನು ಮತ್ತು ಒಳ್ಳೆಯವುಗಳನ್ನು ಮಾಡುವನು. [QBR2] ಆತನು ದಾವೀದನ ವಂಶದವನಾಗಿದ್ದಾನೆ. [QBR] ಆತನು ಪ್ರಾಮಾಣಿಕನೂ ಪ್ರೀತಿದಯೆಗಳಿಂದ ತುಂಬಿದವನೂ ಆಗಿರುವನು. [QBR2] ಆತನ ನ್ಯಾಯತೀರ್ಪು ನ್ಯಾಯಕ್ಕನುಸಾರವಾಗಿರುವದು.
6. ಮೋವಾಬಿನ ಜನರು ತುಂಬ ಹೆಚ್ಚಳಪಡುವವರೂ [QBR2] ಜಂಬದವರೂ ಎಂದು ನಾವು ಕೇಳಿದ್ದೇವೆ. [QBR] ಇವರು ಹಿಂಸಕರಾಗಿದ್ದಾರೆ; ಬಡಾಯಿ ಕೊಚ್ಚುವವರಾಗಿದ್ದಾರೆ, [QBR2] ಅವರ ಬಡಾಯಿ ಕೇವಲ ಮಾತುಗಳಷ್ಟೇ. [QBR]
7. ಆ ಜಂಬದ ಪರಿಣಾಮವಾಗಿ ಇಡೀ ಮೋವಾಬ್ ಪ್ರದೇಶ ಸಂಕಟಕ್ಕೊಳಗಾಗುವದು. ಮೋವಾಬಿನ ಜನರೆಲ್ಲಾ ಅಳುವರು. [QBR] ಜನರು ತಮಗೆ ಹಿಂದೆ ಇದ್ದದ್ದೆಲ್ಲಾ ಬೇಕು ಎನ್ನುತ್ತಾ ದುಃಖಿಸುವರು. [QBR2] ಕೀರ್ ಹರೆಷೆಥಿನಲ್ಲಿ ತಯಾರಿಸಿದ ಅಂಜೂರದ ತಿಂಡಿ ಪದಾರ್ಥಗಳು ತಮಗೆ ಬೇಕು ಅನ್ನುವರು.
8. ಹೆಷ್ಬೋನಿನ ತೋಟಗಳು ಮತ್ತು ಸಿಬ್ಮದ ದ್ರಾಕ್ಷಾಲತೆಗಳು [QBR2] ದ್ರಾಕ್ಷಿಯನ್ನು ಫಲಿಸಲಾರದ ಕಾರಣ ಜನರು ವ್ಯಸನದಿಂದಿರುವರು. [QBR2] ಶತ್ರುಸೈನ್ಯವು ಯೆಜ್ಜೇರಿನಿಂದ ಮರುಭೂಮಿಯವರೆಗೂ ಮತ್ತು ಸಮುದ್ರದವರೆಗೂ ಆವರಿಸಿಕೊಂಡಿರುವರು. [QBR]
9. ದ್ರಾಕ್ಷಾಫಲವು ನಾಶವಾಗಿರುವದಕ್ಕಾಗಿ [QBR2] ನಾನು ಯೆಜ್ಜೇರ್ ಮತ್ತು ಸಿಬ್ಮದವರೊಂದಿಗೆ ಅಳುವೆನು. [QBR] ಸುಗ್ಗಿ ಇಲ್ಲದಿರುವದಕ್ಕಾಗಿ [QBR2] ನಾನು ಹೆಷ್ಬೋನ್ ಮತ್ತು ಎಲೆಯಾಲೆಯ ಜನರೊಂದಿಗೆ ಅಳುವೆನು. [QBR] ಬೇಸಿಗೆ ಕಾಲದ ಹಣ್ಣುಗಳಿರದು; [QBR2] ಹರ್ಷಧ್ವನಿಯೂ ಇರದು. [QBR]
10. ಕರ್ಮೆಲ್ ಬೆಟ್ಟದಲ್ಲಿ ಗಾಯನವಾಗಲಿ ಹರ್ಷಧ್ವನಿಯಾಗಲಿ ಇರದು. [QBR2] ಸುಗ್ಗಿಕಾಲದ ಎಲ್ಲಾ ಸಂತಸಗಳನ್ನು ನಾನು ನಿಲ್ಲಿಸುವೆನು. [QBR] ದ್ರಾಕ್ಷಿಯ ಹಣ್ಣುಗಳು ರಸ ತೆಗೆಯಲು ಪಕ್ವವಾಗಿವೆ. [QBR2] ಆದರೆ ಅವುಗಳೆಲ್ಲ ವ್ಯರ್ಥವಾಗುತ್ತವೆ. [QBR]
11. ನಾನು ಮೋವಾಬಿಗಾಗಿ ತುಂಬಾ ದುಃಖದಲ್ಲಿದ್ದೇನೆ. ನಾನು ಕೀರ್‌ಹೆರೆಸಿಗಾಗಿಯೂ ತುಂಬಾ ದುಃಖದಲ್ಲಿದ್ದೇನೆ. [QBR2] ಈ ನಗರಗಳಿಗಾಗಿ ನಾನು ಬಹಳವಾಗಿ ದುಃಖದಲ್ಲಿದ್ದೇನೆ. [QBR]
12. ಮೋವಾಬಿನ ಜನರು ತಮ್ಮ ಪೂಜಾಸ್ಥಳಗಳಿಗೆ ಹೋಗಿ ಆರಾಧನೆ ಮಾಡುವರು. [QBR] ಸಂಭವಿಸುವ ಸಂಗತಿಗಳನ್ನು ನೋಡಿದಾಗ [QBR2] ಪ್ರಾರ್ಥಿಸಲೂ ಅವರಲ್ಲಿ ಉತ್ಸಾಹವಿರುವುದಿಲ್ಲ. [PS]
13. ಮೋವಾಬಿನ ವಿಷಯವಾಗಿ ಯೆಹೋವನು ಅನೇಕ ಸಾರಿ ಇವುಗಳನ್ನು ಮುಂತಿಳಿಸಿದ್ದಾನೆ.
14. ಈಗ ಯೆಹೋವನು ಹೇಳುವುದೇನೆಂದರೆ: “ಇನ್ನು ಮೂರು ವರ್ಷದೊಳಗೆ ಕೂಲಿಗಾರನು ತನ್ನ ಸಮಯವನ್ನು ಲೆಕ್ಕಿಸುವಂತೆ ಎಲ್ಲಾ ಜನರು ಮತ್ತು ಅವರು ಹೆಮ್ಮೆಪಡುವ ವಸ್ತುಗಳು ಹೋಗಿಬಿಡುತ್ತವೆ. ಕೇವಲ ಸ್ವಲ್ಪ ಮಂದಿ ಮಾತ್ರ ಉಳಿಯುವರು. ದೇಶದಲ್ಲಿ ಹೆಚ್ಚುಮಂದಿ ಉಳಿಯರು.” [PE]

ಟಿಪ್ಪಣಿಗಳು

No Verse Added

ಒಟ್ಟು 66 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 16 / 66
ಯೆಶಾಯ 16:18
1 ನೀವು ದೇಶದ ಅಧಿಪತಿಗೆ ಕಾಣಿಕೆಗಳನ್ನು ಕಳುಹಿಸಬೇಕು. ನೀವು ಸೇಲದ ಕುರಿಮರಿಯನ್ನು ಮರುಭೂಮಿಯ ಮೂಲಕ ಚೀಯೋನ್ ಕುಮಾರ್ತೆಯ ಪರ್ವತಕ್ಕೆ ಕಳುಹಿಸಿಕೊಡಬೇಕು. 2 ಮೋವಾಬಿನ ಸ್ತ್ರೀಯರು ಅರ್ನೋನ್ ಹೊಳೆಯನ್ನು ದಾಟಲು ಪ್ರಯತ್ನಿಸುವರು. ಅವರು ಒಂದು ಕಡೆಯಿಂದ ಇನ್ನೊಂದು ಕಡೆಗೆ ಸಹಾಯಕ್ಕಾಗಿ ಓಡುವರು. ಗೂಡಿನಿಂದ ಕೆಳಗೆ ಬಿದ್ದ ಪಕ್ಷಿಮರಿಗಳಂತೆ ಅವರಿರುವರು. 3 ಅವರು, “ನಮಗೆ ಸಹಾಯ ಮಾಡಿರಿ! ನಾವು ಮಾಡಬೇಕಾದದ್ದನ್ನು ತಿಳಿಸಿರಿ! ವೈರಿಗಳಿಂದ ನಮ್ಮನ್ನು ರಕ್ಷಿಸಿರಿ. ನಮ್ಮನ್ನು ನಡುಮಧ್ಯಾಹ್ನದ ಸೂರ್ಯನ ಶಾಖದಿಂದ ನೆರಳು ಕಾಪಾಡುವಂತೆ ನಮ್ಮನ್ನು ಕಾಪಾಡಿರಿ. ನಾವು ನಮ್ಮ ಶತ್ರುಗಳಿಂದ ಓಡಿಹೋಗುತ್ತಿದ್ದೇವೆ. ನಮ್ಮನ್ನು ಅಡಗಿಸಿಡಿರಿ, ವೈರಿಗಳ ಕೈಗೆ ನಮ್ಮನ್ನು ಕೊಡಬೇಡಿರಿ. 4 ತಮ್ಮ ಮನೆಯನ್ನು ಬಿಟ್ಟುಹೋಗುವಂತೆ ಮೋವಾಬಿನ ಆ ಜನರನ್ನು ಬಲವಂತ ಮಾಡಲಾಯಿತು. ಆದ್ದರಿಂದ ಅವರು ನಿಮ್ಮ ದೇಶದಲ್ಲಿ ವಾಸಿಸಲಿ. ಶತ್ರುಗಳ ಕೈಗೆ ಸಿಗದಂತೆ ಅವರನ್ನು ಅಡಗಿಸಿಡಿರಿ” ಎಂದು ಹೇಳುವರು. ದರೋಡೆಯು ನಿಂತುಹೋಗುವದು. ಶತ್ರುಗಳು ಸೋಲಿಸಲ್ಪಡುವರು. ಇತರರಿಗೆ ಕೇಡುಮಾಡುವವರು ದೇಶವನ್ನು ಬಿಟ್ಟುಹೋಗುವರು. 5 ಆಗ ಹೊಸ ಅರಸನು ಬರುವನು. ಆತನು ನ್ಯಾಯವಾದವುಗಳನ್ನು ಮತ್ತು ಒಳ್ಳೆಯವುಗಳನ್ನು ಮಾಡುವನು. ಆತನು ದಾವೀದನ ವಂಶದವನಾಗಿದ್ದಾನೆ. ಆತನು ಪ್ರಾಮಾಣಿಕನೂ ಪ್ರೀತಿದಯೆಗಳಿಂದ ತುಂಬಿದವನೂ ಆಗಿರುವನು. ಆತನ ನ್ಯಾಯತೀರ್ಪು ನ್ಯಾಯಕ್ಕನುಸಾರವಾಗಿರುವದು. 6 ಮೋವಾಬಿನ ಜನರು ತುಂಬ ಹೆಚ್ಚಳಪಡುವವರೂ ಜಂಬದವರೂ ಎಂದು ನಾವು ಕೇಳಿದ್ದೇವೆ. ಇವರು ಹಿಂಸಕರಾಗಿದ್ದಾರೆ; ಬಡಾಯಿ ಕೊಚ್ಚುವವರಾಗಿದ್ದಾರೆ, ಅವರ ಬಡಾಯಿ ಕೇವಲ ಮಾತುಗಳಷ್ಟೇ. 7 ಆ ಜಂಬದ ಪರಿಣಾಮವಾಗಿ ಇಡೀ ಮೋವಾಬ್ ಪ್ರದೇಶ ಸಂಕಟಕ್ಕೊಳಗಾಗುವದು. ಮೋವಾಬಿನ ಜನರೆಲ್ಲಾ ಅಳುವರು. ಜನರು ತಮಗೆ ಹಿಂದೆ ಇದ್ದದ್ದೆಲ್ಲಾ ಬೇಕು ಎನ್ನುತ್ತಾ ದುಃಖಿಸುವರು. ಕೀರ್ ಹರೆಷೆಥಿನಲ್ಲಿ ತಯಾರಿಸಿದ ಅಂಜೂರದ ತಿಂಡಿ ಪದಾರ್ಥಗಳು ತಮಗೆ ಬೇಕು ಅನ್ನುವರು. 8 ಹೆಷ್ಬೋನಿನ ತೋಟಗಳು ಮತ್ತು ಸಿಬ್ಮದ ದ್ರಾಕ್ಷಾಲತೆಗಳು ದ್ರಾಕ್ಷಿಯನ್ನು ಫಲಿಸಲಾರದ ಕಾರಣ ಜನರು ವ್ಯಸನದಿಂದಿರುವರು. ಶತ್ರುಸೈನ್ಯವು ಯೆಜ್ಜೇರಿನಿಂದ ಮರುಭೂಮಿಯವರೆಗೂ ಮತ್ತು ಸಮುದ್ರದವರೆಗೂ ಆವರಿಸಿಕೊಂಡಿರುವರು. 9 ದ್ರಾಕ್ಷಾಫಲವು ನಾಶವಾಗಿರುವದಕ್ಕಾಗಿ ನಾನು ಯೆಜ್ಜೇರ್ ಮತ್ತು ಸಿಬ್ಮದವರೊಂದಿಗೆ ಅಳುವೆನು. ಸುಗ್ಗಿ ಇಲ್ಲದಿರುವದಕ್ಕಾಗಿ ನಾನು ಹೆಷ್ಬೋನ್ ಮತ್ತು ಎಲೆಯಾಲೆಯ ಜನರೊಂದಿಗೆ ಅಳುವೆನು. ಬೇಸಿಗೆ ಕಾಲದ ಹಣ್ಣುಗಳಿರದು; ಹರ್ಷಧ್ವನಿಯೂ ಇರದು. 10 ಕರ್ಮೆಲ್ ಬೆಟ್ಟದಲ್ಲಿ ಗಾಯನವಾಗಲಿ ಹರ್ಷಧ್ವನಿಯಾಗಲಿ ಇರದು. ಸುಗ್ಗಿಕಾಲದ ಎಲ್ಲಾ ಸಂತಸಗಳನ್ನು ನಾನು ನಿಲ್ಲಿಸುವೆನು. ದ್ರಾಕ್ಷಿಯ ಹಣ್ಣುಗಳು ರಸ ತೆಗೆಯಲು ಪಕ್ವವಾಗಿವೆ. ಆದರೆ ಅವುಗಳೆಲ್ಲ ವ್ಯರ್ಥವಾಗುತ್ತವೆ. 11 ನಾನು ಮೋವಾಬಿಗಾಗಿ ತುಂಬಾ ದುಃಖದಲ್ಲಿದ್ದೇನೆ. ನಾನು ಕೀರ್‌ಹೆರೆಸಿಗಾಗಿಯೂ ತುಂಬಾ ದುಃಖದಲ್ಲಿದ್ದೇನೆ. ಈ ನಗರಗಳಿಗಾಗಿ ನಾನು ಬಹಳವಾಗಿ ದುಃಖದಲ್ಲಿದ್ದೇನೆ. 12 ಮೋವಾಬಿನ ಜನರು ತಮ್ಮ ಪೂಜಾಸ್ಥಳಗಳಿಗೆ ಹೋಗಿ ಆರಾಧನೆ ಮಾಡುವರು. ಸಂಭವಿಸುವ ಸಂಗತಿಗಳನ್ನು ನೋಡಿದಾಗ ಪ್ರಾರ್ಥಿಸಲೂ ಅವರಲ್ಲಿ ಉತ್ಸಾಹವಿರುವುದಿಲ್ಲ. 13 ಮೋವಾಬಿನ ವಿಷಯವಾಗಿ ಯೆಹೋವನು ಅನೇಕ ಸಾರಿ ಇವುಗಳನ್ನು ಮುಂತಿಳಿಸಿದ್ದಾನೆ. 14 ಈಗ ಯೆಹೋವನು ಹೇಳುವುದೇನೆಂದರೆ: “ಇನ್ನು ಮೂರು ವರ್ಷದೊಳಗೆ ಕೂಲಿಗಾರನು ತನ್ನ ಸಮಯವನ್ನು ಲೆಕ್ಕಿಸುವಂತೆ ಎಲ್ಲಾ ಜನರು ಮತ್ತು ಅವರು ಹೆಮ್ಮೆಪಡುವ ವಸ್ತುಗಳು ಹೋಗಿಬಿಡುತ್ತವೆ. ಕೇವಲ ಸ್ವಲ್ಪ ಮಂದಿ ಮಾತ್ರ ಉಳಿಯುವರು. ದೇಶದಲ್ಲಿ ಹೆಚ್ಚುಮಂದಿ ಉಳಿಯರು.”
ಒಟ್ಟು 66 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 16 / 66
Common Bible Languages
West Indian Languages
×

Alert

×

kannada Letters Keypad References