3. ಅಲ್ಲಿಗೆ ಎಲ್ಲಾ ದೇಶಗಳಿಂದ ಜನರು ಸತತವಾಗಿ ತೊರೆಗಳಂತೆ ಬರುವರು. ಹೊರಟುಬಂದ ಆ ಜನರು, “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ. ಯಾಕೋಬನ ದೇವರ ಆಲಯಕ್ಕೆ ಹೋಗೋಣ. ಆತನು ನಮಗೆ ಜೀವಮಾರ್ಗವನ್ನು ಅಲ್ಲಿ ಬೋಧಿಸುವನು. ನಾವು ಆತನನ್ನು ಹಿಂಬಾಲಿಸೋಣ” ಎಂದು ಹೇಳುವರು. ಯೆಹೋವನ ಸಂದೇಶ, ಬೋಧನೆಗಳು ಜೆರುಸಲೇಮಿನಲ್ಲಿರುವ ಚೀಯೋನ್ ಪರ್ವತದಿಂದ ಪ್ರಾರಂಭವಾಗಿ ಇಡೀ ಪ್ರಪಂಚಕ್ಕೆ ಹರಡುವದು.
|
4. ಈಗ ಎಲ್ಲಾ ದೇಶಗಳಿಗೆ ದೇವರೇ ನ್ಯಾಯಧೀಶನಾಗಿರುವನು. ಅನೇಕ ಜನರ ತರ್ಕಗಳನ್ನು ದೇವರು ಕೊನೆಗಾಣಿಸುವನು. ಆ ಜನರು ಯುದ್ಧಕ್ಕಾಗಿ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು; ತಮ್ಮ ಖಡ್ಗಗಳಿಂದ ಅವರು ನೇಗಿಲುಗಳನ್ನು ತಯಾರಿಸುವರು; ತಮ್ಮ ಬರ್ಜಿಗಳಿಂದ ಸಸಿಗಳನ್ನು ಕೊಯ್ಯುವ ಕುಡುಗೋಲುಗಳನ್ನು ಮಾಡುವರು. ಪರಸ್ಪರ ಹೊಡೆದಾಡಿಕೊಳ್ಳುವದನ್ನು ಜನಾಂಗಗಳು ನಿಲ್ಲಿಸುವರು. ಇನ್ನೆಂದಿಗೂ ಜನಾಂಗಗಳು ಯುದ್ಧಾಭ್ಯಾಸ ತರಬೇತಿಯನ್ನು ಹೊಂದುವುದಿಲ್ಲ.
|
6. ನೀವು ನಿಮ್ಮ ಜನರನ್ನು ತೊರೆದದ್ದರಿಂದ ನಾನು ನಿಮಗೆ ಹೀಗೆ ಹೇಳಿದೆನು. ಪೂರ್ವದೇಶದ ಜನರಿಗಿರುವ ತಪ್ಪು ತಿಳುವಳಿಕೆಯು ನಿಮ್ಮ ಜನರಲ್ಲಿ ತುಂಬಿಹೋಯಿತು. ಫಿಲಿಷ್ಟಿಯರಂತೆ ನಿಮ್ಮ ಜನರು ಭವಿಷ್ಯ ಹೇಳಲು ಪ್ರಯತ್ನಿಸಿ ಆ ತಪ್ಪು ತಿಳುವಳಿಕೆಗೆ ಮಾರುಹೋದರು.
|
7. ನಿಮ್ಮ ದೇಶವು ಬೆಳ್ಳಿಬಂಗಾರಗಳಿಂದಲೂ ಮಿತಿಯಿಲ್ಲದ ನಿಕ್ಷೇಪಗಳಿಂದಲೂ ಕುದುರೆಗಳಿಂದಲೂ ಅಸಂಖ್ಯಾತವಾದ ರಥಗಳಿಂದಲೂ ತುಂಬಿಹೋಯಿತು.
|
9. ಜನರು ಕೆಟ್ಟದಾರಿಯಲ್ಲಿ ಹೋಗುತ್ತಿದ್ದಾರೆ; ಹೀನಸ್ಥಿತಿಯಲ್ಲಿ ಮುಂದುವರಿಯುತ್ತಿದ್ದಾರೆ. ದೇವರೇ, ನೀನು ಅವರನ್ನು ಖಂಡಿತವಾಗಿಯೂ ಕ್ಷಮಿಸಬೇಡ.
|
10. ಬಂಡೆಗಳ ಹಿಂಬದಿಯಲ್ಲಿಯೂ ಹೊಲಸಿನಲ್ಲಿಯೂ ಅವಿತುಕೊಳ್ಳಿರಿ. ನೀವು ಯೆಹೋವನಿಗೆ ಭಯಪಟ್ಟು ಆತನ ಮಹಾಶಕ್ತಿಗೆ ಮರೆಯಾಗಿ ಅವಿತುಕೊಳ್ಳಬೇಕು.
|
11. ಗರ್ವಿಷ್ಠರ ಗರ್ವವು ಕುಗ್ಗಿಸಲ್ಪಡುವುದು; ಅಹಂಕಾರಿಗಳ ಅಹಂಕಾರವು ತಗ್ಗಿಸಲ್ಪಡುವುದು. ಆ ಸಮಯದಲ್ಲಿ ಯೆಹೋವನೊಬ್ಬನೇ ಉನ್ನತೋನ್ನತವಾಗಿರುವನು.
|
12. ಸರ್ವಶಕ್ತನಾದ ಯೆಹೋವನು ಒಂದು ವಿಶೇಷ ದಿನವನ್ನು ಯೋಜಿಸಿರುತ್ತಾನೆ. ಆ ದಿನದಲ್ಲಿ ಯೆಹೋವನು ಅಹಂಕಾರಿಗಳನ್ನೂ ಜಂಬ ಕೊಚ್ಚಿಕೊಳ್ಳುವವರನ್ನೂ ಶಿಕ್ಷಿಸುವನು. ಆಗ ಆ ಅಹಂಕಾರಿಗಳನ್ನು ಜನರು ದೊಡ್ಡಜನರೆಂದು ಪರಿಗಣಿಸುವುದಿಲ್ಲ.
|
13. ಆ ಅಹಂಕಾರದ ಜನರು ಲೆಬನೋನಿನ ದೇವದಾರು ಮರಗಳಂತಿರುವರು. ಬಾಷಾನಿನ ಮಹಾದೇವದಾರು ಮರಗಳಂತಿರುವರು. ಆದರೆ ಯೆಹೋವನು ಅವರನ್ನು ಶಿಕ್ಷಿಸುವನು.
|
16. ಆ ಅಹಂಕಾರಿಗಳು ತಾರ್ಷೀಷಿನ ದೊಡ್ಡ ಹಡಗುಗಳಂತಿದ್ದಾರೆ. ಈ ಹಡಗುಗಳಲ್ಲಿ ಶ್ರೇಷ್ಠವಾದ ವಸ್ತುಗಳು ತುಂಬಿವೆ. ಆದರೆ ದೇವರು ಆ ಅಹಂಕಾರಿಗಳನ್ನು ಶಿಕ್ಷಿಸುವನು.
|
17. ಆ ಸಮಯದಲ್ಲಿ ಜನರು ತಮ್ಮ ಅಹಂಕಾರವನ್ನು ತೋರಿಸುವುದಿಲ್ಲ. ಈಗ ಅಹಂಕಾರಿಗಳಾಗಿರುವವರು ನೆಲದತನಕ ಬಗ್ಗಿಹೋಗುವರು. ಆ ಸಮಯದಲ್ಲಿ ಯೆಹೋವನೊಬ್ಬನೇ ಉನ್ನತೋನ್ನತವಾಗಿರುವನು.
|
19. ಜನರು ಬಂಡೆಗಳ ಸಂದುಗಳಲ್ಲಿಯೂ ನೆಲದ ಬಿರುಕುಗಳಲ್ಲಿಯೂ ಅಡಗಿಕೊಳ್ಳುವರು. ಜನರು ಯೆಹೋವನಿಗೂ ಆತನ ಪರಾಕ್ರಮಕ್ಕೂ ಭಯಪಡುವರು. ಯೆಹೋವನು ಎದ್ದು ಈ ಪ್ರಪಂಚವನ್ನು ಅಲುಗಾಡಿಸುವಾಗ ಇವೆಲ್ಲಾ ಸಂಭವಿಸುವವು.
|
20. ಆ ಸಮಯದಲ್ಲಿ ಜನರು ತಮ್ಮ ಬೆಳ್ಳಿಬಂಗಾರಗಳ ವಿಗ್ರಹಗಳನ್ನೆತ್ತಿ ಬಿಸಾಡಿಬಿಡುವರು. ಈ ವಿಗ್ರಹಗಳನ್ನು ಜನರು ಪೂಜಿಸುವದಕ್ಕಾಗಿ ಮಾಡಿಕೊಂಡರು. ಬಾವಲಿಗಳೂ, ಇಲಿಗಳೂ ವಾಸಿಸುವ ಸಂದುಗಳಲ್ಲಿ ಈ ವಿಗ್ರಹಗಳನ್ನು
|
21. ಜನರು ಬಿಸಾಡಿ, ಸಂದುಗೊಂದುಗಳಲ್ಲಿ ಅಡಗಿಕೊಳ್ಳುವರು. ಯೆಹೋವನಿಗೂ ಆತನ ಮಹಾಶಕ್ತಿಗೂ ಹೆದರಿ ಅವರು ಹಾಗೆ ಮಾಡುವರು. ಯೆಹೋವನು ಎದ್ದು ಭೂಮಿಯನ್ನು ಅಲುಗಾಡಿಸುವ ಸಮಯದಲ್ಲಿ ಇವೆಲ್ಲಾ ಸಂಭವಿಸುವವು.
|
22. ನಿಮ್ಮ ರಕ್ಷಣೆಗಾಗಿ ನೀವು ಇತರರ ಮೇಲೆ ನಂಬಿಕೆ ಇಡಕೂಡದು. ಅವರು ಕೇವಲ ಸಾಯುವ ಮನುಷ್ಯರಷ್ಟೇ. ಆದುದರಿಂದ ಅವರನ್ನು ನೀವು ದೇವರಂತೆ ಬಲಿಷ್ಠರೆಂದು ನೆನಸಬಾರದು.
|