1. {ಬಾಬಿಲೋನಿಗೆ ದೇವರ ಸಂದೇಶ} [PS] ಸಮುದ್ರದ ಮರುಭೂಮಿಗೆ ದುಃಖದ ಸಂದೇಶ: ನೆಗೆವ್ ಮೂಲಕ ಬೀಸುವ ಬಿರುಗಾಳಿಯಂತೆ ಮರುಭೂಮಿಯಿಂದಲೂ [QBR2] ಭಯಂಕರ ದೇಶದಿಂದಲೂ ಒಬ್ಬನು ದಂಡೆತ್ತಿ ಬರುವನು. [QBR]
2. ನಡೆಯಲಿರುವ ಒಂದು ಭಯಂಕರ ಘಟನೆಯನ್ನು ನಾನು ದರ್ಶನದಲ್ಲಿ ನೋಡಿದ್ದೇನೆ. [QBR2] ನಿನಗೆ ವಿರುದ್ಧವಾಗಿ ದ್ರೋಹಿಗಳು ಏಳುತ್ತಿದ್ದಾರೆ. [QBR2] ನಿನ್ನ ಧನೈಶ್ವರ್ಯಗಳನ್ನು ಜನರು ಕಿತ್ತುಕೊಳ್ಳುತ್ತಿದ್ದಾರೆ. ಏಲಾಮೇ, ಹೋಗಿ ಆ ಜನರೊಂದಿಗೆ ಹೋರಾಡು. [QBR2] ಮೇದ್ಯವೇ, ಆ ಪಟ್ಟಣವನ್ನು ನಿನ್ನ ಸೈನ್ಯದಿಂದ ಸೋಲಿಸು. [QBR2] ಆ ನಗರದ ಎಲ್ಲಾ ದುಷ್ಟತನವನ್ನು ನಾನು ಕೊನೆಗಾಣಿಸುವೆನು.
3. ನಾನು ಆ ಭಯಂಕರ ಸಂಗತಿಗಳನ್ನು ನೋಡಿದ್ದರಿಂದ ಈಗ ಭಯಪೀಡಿತನಾಗಿದ್ದೇನೆ. [QBR2] ಭಯದಿಂದ ನನ್ನ ಹೊಟ್ಟೆಯು ನೋಯುತ್ತಿದೆ. ಆ ನೋವು ಪ್ರಸವವೇದನೆಯಂತಿದೆ. [QBR] ನಾನು ಕೇಳುವ ವಿಷಯಗಳು ನನ್ನನ್ನು ಭಯಪಡಿಸಿವೆ; [QBR2] ನಾನು ನೋಡುವ ವಿಷಯಗಳು ನನ್ನನ್ನು ನಡುಗಿಸುತ್ತಿವೆ. [QBR]
4. ನಾನು ಚಿಂತೆಯಿಂದಲೂ ಭಯದಿಂದಲೂ ನಡುಗುತ್ತಿದ್ದೇನೆ. [QBR2] ನನ್ನ ಆನಂದದ ರಾತ್ರಿಯು ಭಯಂಕರವಾಗಿದೆ.
5. ಜನರಾದರೋ, “ಊಟ ಬಡಿಸಿರಿ! [QBR2] ತಿನ್ನೋಣ, ಕುಡಿಯೋಣ” ಎಂದು ಹೇಳುತ್ತಿದ್ದಾರೆ. [QBR] ಅದೇ ಸಮಯದಲ್ಲಿ ಸೈನಿಕರು, “ಕಾವಲುಗಾರರನ್ನು ಇರಿಸಿರಿ, [QBR2] ಸೇನಾಪತಿಗಳೇ ಎದ್ದೇಳಿರಿ, [QBR2] ನಿಮ್ಮ ಗುರಾಣಿಗಳನ್ನು ಉಜ್ಜಿ ನಯಗೊಳಿಸಿರಿ” ಎಂದು ಹೇಳುತ್ತಿದ್ದಾರೆ. [PS]
6. ನನ್ನ ಒಡೆಯನು ನನಗೆ, “ಹೋಗಿ ಈ ನಗರವನ್ನು ಕಾಯಲು ಒಬ್ಬ ಮನುಷ್ಯನನ್ನು ಕಂಡುಹಿಡಿ. ಅವನು ಏನೂ ನೋಡಿದರೂ ನಮಗೆ ತಿಳಿಸಬೇಕು.
7. ಅವನು ಸಾಲಾಗಿ ಬರುತ್ತಿರುವ ಸೈನಿಕರನ್ನೋ, ಕತ್ತೆಗಳನ್ನೋ, ಒಂಟೆಗಳನ್ನೋ ನೋಡಿದರೆ ಬಹಳ ಸೂಕ್ಷ್ಮವಾಗಿ ಆಲಿಸಬೇಕು.” [PE][PS]
8. ಒಂದು ದಿವಸ ಆ ಕಾವಲುಗಾರನು, “ನನ್ನ ಒಡೆಯನೇ, ಪ್ರತಿ ದಿನವೂ ನಾನು ಹಗಲಿರುಳು [QBR2] ಕಾವಲಿನ ಬುರುಜಿನಲ್ಲಿ ನಿಂತುಕೊಂಡು ಕಾವಲು ಕಾಯುತ್ತಿದ್ದೇನೆ; [QBR]
9. ನೋಡು, ಅವರು ಬರುತ್ತಿದ್ದಾರೆ. ಅಶ್ವದಳಗಳು ಸಾಲುಸಾಲಾಗಿಯೂ ಬರುತ್ತಿವೆ” ಎಂದು ಕೂಗಿಕೊಂಡನು. ಆಗ ಒಬ್ಬ ದೂತನು, [QBR2] “ಬಾಬಿಲೋನಿಗೆ ಸೋಲಾಯಿತು. [QBR2] ಬಾಬಿಲೋನು ನೆಲಕ್ಕೆ ಅಪ್ಪಳಿಸಲ್ಪಟ್ಟಿತು. [QBR] ಅದರ ದೇವ ದೇವತೆಯರ ವಿಗ್ರಹಗಳೆಲ್ಲಾ [QBR2] ನೆಲದ ಮೇಲೆ ಚೂರುಚೂರಾಗಿ ಬಿದ್ದಿವೆ” ಎಂದು ಹೇಳಿದನು. [PS]
10. ನನ್ನ ಬಡಿತಕ್ಕೆ ಈಡಾದ ಜನರೇ, ಸರ್ವಶಕ್ತನೂ ದೇವರೂ ಆಗಿರುವ ಯೆಹೋವನು ಹೇಳಿದ್ದನ್ನೆಲ್ಲಾ ಇಸ್ರೇಲರಾದ ನಿಮಗೆ ತಿಳಿಸಿದ್ದೇನೆ. ಕಣದಲ್ಲಿ ಧಾನ್ಯವು ನುಚ್ಚುನೂರಾಗುವಂತೆ ನೀವು ನಜ್ಜುಗುಜ್ಜಾಗುವಿರಿ. [PS]
11. {ಎದೋಮಿಗೆ ದೇವರ ಸಂದೇಶ} [PS] ದೂಮದ ಕುರಿತು ದುಃಖದ ದೈವೋಕ್ತಿ: ಸೇಯಿರ್‌ನಿಂದ ಎದೋಮನ್ನು ಯಾರೋ ಒಬ್ಬನು, [QBR2] “ಕಾವಲುಗಾರನೇ, ರಾತ್ರಿ ಮುಗಿಯಲು ಎಷ್ಟು ಸಮಯ ಉಂಟು? [QBR2] ರಾತ್ರಿಗೆ ಇನ್ನು ಎಷ್ಟು ಕಾಲ ಉಂಟು?” ಎಂದು ಕೇಳಿದನು.
12. ಅದಕ್ಕೆ ಕಾವಲುಗಾರ, [QBR2] “ಮುಂಜಾನೆ ಬರುತ್ತಿದೆ. ಆದರೆ ರಾತ್ರಿ ತಿರುಗಿ ಬರುತ್ತಿದೆ. [QBR] ನೀನೇನಾದರೋ ಕೇಳಬೇಕಿದ್ದರೆ ಮತ್ತೆ ಬಂದು ವಿಚಾರಿಸು” [QBR2] ಎಂದು ಉತ್ತರಿಸಿದನು. [PS]
13. {ಅರೇಬಿಯಕ್ಕೆ ದೇವರ ಸಂದೇಶ} [PS] ಅರೇಬಿಯದ ಬಗ್ಗೆ ದುಃಖಕರವಾದ ಸಂದೇಶ: ದೇದಾನಿನಿಂದ ಬಂದ ಪ್ರಯಾಣಿಕರು [QBR2] ಅರೇಬಿಯ ಮರುಭೂಮಿಯಲ್ಲಿನ ಪೊದೆಗಳಲ್ಲಿ ರಾತ್ರಿ ತಂಗಿದರು. [QBR]
14. ಬಾಯಾರಿದ ಪ್ರಯಾಣಿಕರಿಗೆ ಅವರು ಕುಡಿಯಲು ನೀರು ಕೊಟ್ಟರು. [QBR2] ತೇಮದ ಕೆಲವರು ಹಸಿದ ಪ್ರವಾಸಿಗಳಿಗೆ ಊಟ ಕೊಟ್ಟರು. [QBR]
15. ಅವರು ತಮ್ಮನ್ನು ಸಾಯಿಸಲಿಕ್ಕಿದ್ದ [QBR2] ಕತ್ತಿಯಿಂದ ತಪ್ಪಿಸಿಕೊಂಡು ಬಂದವರು. [QBR] ಅವರು ತಮ್ಮನ್ನು ಹೊಡೆಯಲು ಸಿದ್ಧವಾಗಿದ್ದ [QBR2] ಬಾಣಗಳಿಂದ ಪಾರಾಗಿ ಬಂದವರು. [QBR] ಅವರು ಘೋರ ರಣರಂಗದಿಂದ ಓಡಿಬಂದವರು. [PS]
16. ನನ್ನ ಒಡೆಯನಾದ ಯೆಹೋವನು ಈ ವಿಷಯಗಳು ಸಂಭವಿಸುವವೆಂದು ಹೇಳಿದನು. ಆತನು ಹೇಳಿದ್ದೇನೆಂದರೆ: “ಇನ್ನೊಂದು ವರ್ಷದಲ್ಲಿ ಕೂಲಿಗಾರನು ತನ್ನ ಸಮಯವನ್ನು ಲೆಕ್ಕಿಸುವಂತೆ ಕೇದಾರಿನ ಘನತೆಯೆಲ್ಲವೂ ಹೋಗಿ ಬಿಡುವದು.
17. ಆ ಸಮಯದಲ್ಲಿ ಕೆಲವೇ ಮಂದಿ ಬಿಲ್ಲುಗಾರರು ಕೇದಾರಿನ ವೀರರೊಳಗಿಂದ ಉಳಿಯುವರು.” ಇಸ್ರೇಲರ ದೇವರಾದ ಯೆಹೋವನು ಇದನ್ನು ನುಡಿದನು. [PE]