ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಯೆಶಾಯ
1. ಆ ಸಮಯದಲ್ಲಿ ಯೆಹೋವನು ವಂಚನೆಯ ಸರ್ಪವಾದ ಲಿವ್ಯಾತಾನನಿಗೆ ನ್ಯಾಯತೀರಿಸುವನು. [QBR] ಯೆಹೋವನು ಕಠಿಣವೂ ಮಹತ್ವವೂ ಬಲವೂ ಆಗಿರುವ ತನ್ನ ಖಡ್ಗದಿಂದ [QBR2] ಸುತ್ತಿಕೊಂಡಿರುವ ಸರ್ಪವಾದ ಲಿವ್ಯಾತಾನನನ್ನು ಕೊಲ್ಲುವನು. [QBR2] ಯೆಹೋವನು ಸಮುದ್ರದಲ್ಲಿರುವ ಘಟಸರ್ಪವನ್ನು ಕೊಲ್ಲುವನು.
2. ಆ ಸಮಯದಲ್ಲಿ ಜನರು ಮನೋಹರವಾದ ದ್ರಾಕ್ಷಿತೋಟದ ವಿಷಯವಾಗಿ ಹಾಡುವರು. [QBR]
3. “ಯೆಹೋವನಾದ ನಾನು ಆ ತೋಟವನ್ನು ಚೆನ್ನಾಗಿ ನೋಡಿಕೊಳ್ಳುವೆನು; [QBR2] ಸರಿಯಾದ ಕಾಲದಲ್ಲಿ ತೋಟಕ್ಕೆ ನೀರು ಹೊಯ್ಯುವೆನು. [QBR] ಹಗಲಿರುಳು ತೋಟವನ್ನು ಕಾಯುವೆನು. [QBR2] ಆ ತೋಟವನ್ನು ಯಾರೂ ಹಾಳುಮಾಡುವದಿಲ್ಲ. [QBR]
4. ನಾನು ಕೋಪಗೊಂಡಿಲ್ಲ. [QBR] ಆದರೆ ಯುದ್ಧ ನಡೆಯುತ್ತಿರುವಾಗ ಯಾರಾದರೂ ಮುಳ್ಳುಬೇಲಿಯನ್ನು ಹಾಕಿದರೆ, [QBR2] ನಾನು ಮುನ್ನುಗ್ಗಿ ಅದನ್ನು ಸುಟ್ಟುಹಾಕುವೆನು. [QBR]
5. ಆದರೆ ಯಾವನಾದರೂ ಆಶ್ರಯಕ್ಕಾಗಿ ನನ್ನ ಬಳಿಗೆ ಬಂದು ನನ್ನೊಡನೆ ಸಮಾಧಾನ ಮಾಡಿಕೊಳ್ಳುವುದಾದರೆ [QBR2] ಅವನು ನನ್ನ ಬಳಿಗೆ ಬಂದು ಸಮಾಧಾನದಲ್ಲಿರಲಿ. [QBR]
6. ಜನರು ನನ್ನ ಬಳಿಗೆ ಬರುವರು. ಆ ಜನರು ಮುಂದಿನ ಕಾಲದಲ್ಲಿ ಯಾಕೋಬನನ್ನು ಆಳವಾದ ಬೇರುಳ್ಳ ಗಿಡದಂತೆ ಬಲಶಾಲಿಯನ್ನಾಗಿ ಮಾಡುವರು. [QBR] ಬೆಳೆದು ಹೂಬಿಡುವ ಗಿಡದಂತೆ ಅವರು ಇಸ್ರೇಲಿಗೆ ಮಾಡುವರು. [QBR2] ಹಣ್ಣುಗಳಂತೆ ಇಸ್ರೇಲರ ಮಕ್ಕಳು ಭೂಮಿಯ ಮೇಲೆ ತುಂಬಿಹೋಗುವರು.” [PS]
7. {ದೇವರು ಇಸ್ರೇಲರನ್ನು ಕಳುಹಿಸಿ ಬಿಡುವನು} [PS] ಯೆಹೋವನು ತನ್ನ ಜನರನ್ನು ಹೇಗೆ ಶಿಕ್ಷಿಸುವನು? ಹಿಂದಿನ ಕಾಲದಲ್ಲಿ ಶತ್ರುಗಳು ಜನರನ್ನು ಗಾಯಪಡಿಸಿದರು. ಯೆಹೋವನೂ ಹಾಗೆ ಮಾಡುವನೇ? ಹಿಂದಿನ ಕಾಲದಲ್ಲಿ ಅನೇಕ ಮಂದಿ ಕೊಲ್ಲಲ್ಪಟ್ಟರು. ಹಾಗೆಯೇ ಯೆಹೋವನು ಜನರನ್ನು ಕೊಲ್ಲುವನೇ? [PE][PS]
8. ಯೆಹೋವನು ತನ್ನ ಜನರನ್ನು ದೂರದೇಶಕ್ಕೆ ಕಳುಹಿಸುವದರ ಮೂಲಕ ಅವರನ್ನು ಶಿಕ್ಷಿಸುವನು. ಇಸ್ರೇಲರೊಂದಿಗೆ ಯೆಹೋವನು ಕಟುವಾಗಿ ಮಾತನಾಡುವನು. ಆತನ ಮಾತುಗಳು ಮರುಭೂಮಿಯ ಬಿಸಿಗಾಳಿಯಂತೆ ಸುಡುವವು. [PE][PS]
9. ಯಾಕೋಬನ ದೋಷವು ಹೇಗೆ ಕ್ಷಮಿಸಲ್ಪಡುವದು? ಅವನ ಪಾಪಗಳು ನಿವಾರಣೆಯಾಗುವದಕ್ಕೆ ಏನು ಮಾಡಬೇಕಾಗುವದು? ಇತರ ದೇವತೆಗಳ ಪೂಜಾಸ್ಥಳಗಳೂ ವೇದಿಕೆಯ ಕಲ್ಲುಗಳೂ ಪುಡಿಪುಡಿಯಾಗಿ ನಾಶವಾಗುವವು. [PE][PS]
10. ಆ ಸಮಯದಲ್ಲಿ ಆ ಮಹಾನಗರವು ನಿರ್ಜನವಾಗಿರುವದು. ಅದು ಮರುಭೂಮಿಯಂತಿರುವದು. ಜನರೆಲ್ಲರೂ ಹೊರಟುಹೋಗಿರುವರು. ಅವರು ಪಲಾಯನಗೈದಿದ್ದಾರೆ. ನಗರವು ತೆರೆದ ಹುಲ್ಲುಗಾವಲಿನಂತಿರುವುದು. ಪಶುಗಳು ಅಲ್ಲಿ ಹುಲ್ಲನ್ನು ಮೇಯುತ್ತವೆ. ದನಗಳು ದ್ರಾಕ್ಷಾಲತೆಯ ಚಿಗುರೆಲೆಗಳನ್ನು ತಿನ್ನುವವು.
11. ದ್ರಾಕ್ಷಿಬಳ್ಳಿ ಒಣಗಿಹೋಗುವದು. ಅದರ ಕೊಂಬೆಗಳು ಮುರಿದುಬೀಳುವವು. ಹೆಂಗಸರು ಆ ಕೊಂಬೆಗಳನ್ನು ಸೌದೆಯಾಗಿ ಉಪಯೋಗಿಸುವರು. [PE][PS] ಜನರು ತಿಳಿದುಕೊಳ್ಳುವದಕ್ಕೆ ಮನಸ್ಸು ಕೊಡುವದಿಲ್ಲ. ಆದ್ದರಿಂದ ಅವರ ನಿರ್ಮಾಣಿಕನಾದ ದೇವರು ಅವರನ್ನು ಸಂತೈಸುವದಿಲ್ಲ. ಅವರ ನಿರ್ಮಾಣಿಕನು ಅವರಿಗೆ ದಯೆ ತೋರುವದಿಲ್ಲ. [PE][PS]
12. ಆ ಸಮಯದಲ್ಲಿ, ಯೆಹೋವನು ತನ್ನ ಜನರನ್ನು ಬೇರೆಯವರಿಂದ ಬೇರ್ಪಡಿಸುವನು. ಆತನು ಯೂಫ್ರೇಟೀಸ್ ನದಿಯಿಂದ ಪ್ರಾರಂಭಿಸಿ ಈಜಿಪ್ಟಿನ ನದಿಯತನಕ ಎಲ್ಲಾ ಜನರನ್ನು ಒಟ್ಟುಗೂಡಿಸುವನು. [PE][PS] ಇಸ್ರೇಲ್ ಜನರೇ, ನೀವು ಒಬ್ಬೊಬ್ಬರಾಗಿಯೇ ಒಟ್ಟುಗೂಡಿಸಲ್ಪಡುವಿರಿ.
13. ನನ್ನ ಜನರಲ್ಲಿ ಹೆಚ್ಚಿನವರು ಅಶ್ಶೂರದಲ್ಲಿ ಈಗ ಕಳೆದುಹೋಗಿರುತ್ತಾರೆ; ಕೆಲವರು ಈಜಿಪ್ಟಿಗೆ ಓಡಿಹೋಗಿದ್ದಾರೆ. ಆ ಸಮಯದಲ್ಲಿ ಮಹಾದೊಡ್ಡ ತುತ್ತೂರಿಯ ಶಬ್ದವು ಕೇಳಿಸುವದು. ಆಗ ಆ ಜನರೆಲ್ಲರೂ ಜೆರುಸಲೇಮಿಗೆ ಹಿಂತಿರುಗುವರು. ಆ ಜನರು ಪರಿಶುದ್ಧ ಪರ್ವತದ ಮೇಲೆ ಯೆಹೋವನ ಮುಂದೆ ಅಡ್ಡಬೀಳುವರು. [PE]

ಟಿಪ್ಪಣಿಗಳು

No Verse Added

ಒಟ್ಟು 66 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 27 / 66
ಯೆಶಾಯ 27:17
1 ಆ ಸಮಯದಲ್ಲಿ ಯೆಹೋವನು ವಂಚನೆಯ ಸರ್ಪವಾದ ಲಿವ್ಯಾತಾನನಿಗೆ ನ್ಯಾಯತೀರಿಸುವನು. ಯೆಹೋವನು ಕಠಿಣವೂ ಮಹತ್ವವೂ ಬಲವೂ ಆಗಿರುವ ತನ್ನ ಖಡ್ಗದಿಂದ ಸುತ್ತಿಕೊಂಡಿರುವ ಸರ್ಪವಾದ ಲಿವ್ಯಾತಾನನನ್ನು ಕೊಲ್ಲುವನು. ಯೆಹೋವನು ಸಮುದ್ರದಲ್ಲಿರುವ ಘಟಸರ್ಪವನ್ನು ಕೊಲ್ಲುವನು. 2 ಆ ಸಮಯದಲ್ಲಿ ಜನರು ಮನೋಹರವಾದ ದ್ರಾಕ್ಷಿತೋಟದ ವಿಷಯವಾಗಿ ಹಾಡುವರು. 3 “ಯೆಹೋವನಾದ ನಾನು ಆ ತೋಟವನ್ನು ಚೆನ್ನಾಗಿ ನೋಡಿಕೊಳ್ಳುವೆನು; ಸರಿಯಾದ ಕಾಲದಲ್ಲಿ ತೋಟಕ್ಕೆ ನೀರು ಹೊಯ್ಯುವೆನು. ಹಗಲಿರುಳು ತೋಟವನ್ನು ಕಾಯುವೆನು. ಆ ತೋಟವನ್ನು ಯಾರೂ ಹಾಳುಮಾಡುವದಿಲ್ಲ. 4 ನಾನು ಕೋಪಗೊಂಡಿಲ್ಲ. ಆದರೆ ಯುದ್ಧ ನಡೆಯುತ್ತಿರುವಾಗ ಯಾರಾದರೂ ಮುಳ್ಳುಬೇಲಿಯನ್ನು ಹಾಕಿದರೆ, ನಾನು ಮುನ್ನುಗ್ಗಿ ಅದನ್ನು ಸುಟ್ಟುಹಾಕುವೆನು. 5 ಆದರೆ ಯಾವನಾದರೂ ಆಶ್ರಯಕ್ಕಾಗಿ ನನ್ನ ಬಳಿಗೆ ಬಂದು ನನ್ನೊಡನೆ ಸಮಾಧಾನ ಮಾಡಿಕೊಳ್ಳುವುದಾದರೆ ಅವನು ನನ್ನ ಬಳಿಗೆ ಬಂದು ಸಮಾಧಾನದಲ್ಲಿರಲಿ. 6 ಜನರು ನನ್ನ ಬಳಿಗೆ ಬರುವರು. ಆ ಜನರು ಮುಂದಿನ ಕಾಲದಲ್ಲಿ ಯಾಕೋಬನನ್ನು ಆಳವಾದ ಬೇರುಳ್ಳ ಗಿಡದಂತೆ ಬಲಶಾಲಿಯನ್ನಾಗಿ ಮಾಡುವರು. ಬೆಳೆದು ಹೂಬಿಡುವ ಗಿಡದಂತೆ ಅವರು ಇಸ್ರೇಲಿಗೆ ಮಾಡುವರು. ಹಣ್ಣುಗಳಂತೆ ಇಸ್ರೇಲರ ಮಕ್ಕಳು ಭೂಮಿಯ ಮೇಲೆ ತುಂಬಿಹೋಗುವರು.” ದೇವರು ಇಸ್ರೇಲರನ್ನು ಕಳುಹಿಸಿ ಬಿಡುವನು 7 ಯೆಹೋವನು ತನ್ನ ಜನರನ್ನು ಹೇಗೆ ಶಿಕ್ಷಿಸುವನು? ಹಿಂದಿನ ಕಾಲದಲ್ಲಿ ಶತ್ರುಗಳು ಜನರನ್ನು ಗಾಯಪಡಿಸಿದರು. ಯೆಹೋವನೂ ಹಾಗೆ ಮಾಡುವನೇ? ಹಿಂದಿನ ಕಾಲದಲ್ಲಿ ಅನೇಕ ಮಂದಿ ಕೊಲ್ಲಲ್ಪಟ್ಟರು. ಹಾಗೆಯೇ ಯೆಹೋವನು ಜನರನ್ನು ಕೊಲ್ಲುವನೇ? 8 ಯೆಹೋವನು ತನ್ನ ಜನರನ್ನು ದೂರದೇಶಕ್ಕೆ ಕಳುಹಿಸುವದರ ಮೂಲಕ ಅವರನ್ನು ಶಿಕ್ಷಿಸುವನು. ಇಸ್ರೇಲರೊಂದಿಗೆ ಯೆಹೋವನು ಕಟುವಾಗಿ ಮಾತನಾಡುವನು. ಆತನ ಮಾತುಗಳು ಮರುಭೂಮಿಯ ಬಿಸಿಗಾಳಿಯಂತೆ ಸುಡುವವು. 9 ಯಾಕೋಬನ ದೋಷವು ಹೇಗೆ ಕ್ಷಮಿಸಲ್ಪಡುವದು? ಅವನ ಪಾಪಗಳು ನಿವಾರಣೆಯಾಗುವದಕ್ಕೆ ಏನು ಮಾಡಬೇಕಾಗುವದು? ಇತರ ದೇವತೆಗಳ ಪೂಜಾಸ್ಥಳಗಳೂ ವೇದಿಕೆಯ ಕಲ್ಲುಗಳೂ ಪುಡಿಪುಡಿಯಾಗಿ ನಾಶವಾಗುವವು. 10 ಆ ಸಮಯದಲ್ಲಿ ಆ ಮಹಾನಗರವು ನಿರ್ಜನವಾಗಿರುವದು. ಅದು ಮರುಭೂಮಿಯಂತಿರುವದು. ಜನರೆಲ್ಲರೂ ಹೊರಟುಹೋಗಿರುವರು. ಅವರು ಪಲಾಯನಗೈದಿದ್ದಾರೆ. ನಗರವು ತೆರೆದ ಹುಲ್ಲುಗಾವಲಿನಂತಿರುವುದು. ಪಶುಗಳು ಅಲ್ಲಿ ಹುಲ್ಲನ್ನು ಮೇಯುತ್ತವೆ. ದನಗಳು ದ್ರಾಕ್ಷಾಲತೆಯ ಚಿಗುರೆಲೆಗಳನ್ನು ತಿನ್ನುವವು. 11 ದ್ರಾಕ್ಷಿಬಳ್ಳಿ ಒಣಗಿಹೋಗುವದು. ಅದರ ಕೊಂಬೆಗಳು ಮುರಿದುಬೀಳುವವು. ಹೆಂಗಸರು ಆ ಕೊಂಬೆಗಳನ್ನು ಸೌದೆಯಾಗಿ ಉಪಯೋಗಿಸುವರು. ಜನರು ತಿಳಿದುಕೊಳ್ಳುವದಕ್ಕೆ ಮನಸ್ಸು ಕೊಡುವದಿಲ್ಲ. ಆದ್ದರಿಂದ ಅವರ ನಿರ್ಮಾಣಿಕನಾದ ದೇವರು ಅವರನ್ನು ಸಂತೈಸುವದಿಲ್ಲ. ಅವರ ನಿರ್ಮಾಣಿಕನು ಅವರಿಗೆ ದಯೆ ತೋರುವದಿಲ್ಲ. 12 ಆ ಸಮಯದಲ್ಲಿ, ಯೆಹೋವನು ತನ್ನ ಜನರನ್ನು ಬೇರೆಯವರಿಂದ ಬೇರ್ಪಡಿಸುವನು. ಆತನು ಯೂಫ್ರೇಟೀಸ್ ನದಿಯಿಂದ ಪ್ರಾರಂಭಿಸಿ ಈಜಿಪ್ಟಿನ ನದಿಯತನಕ ಎಲ್ಲಾ ಜನರನ್ನು ಒಟ್ಟುಗೂಡಿಸುವನು. ಇಸ್ರೇಲ್ ಜನರೇ, ನೀವು ಒಬ್ಬೊಬ್ಬರಾಗಿಯೇ ಒಟ್ಟುಗೂಡಿಸಲ್ಪಡುವಿರಿ. 13 ನನ್ನ ಜನರಲ್ಲಿ ಹೆಚ್ಚಿನವರು ಅಶ್ಶೂರದಲ್ಲಿ ಈಗ ಕಳೆದುಹೋಗಿರುತ್ತಾರೆ; ಕೆಲವರು ಈಜಿಪ್ಟಿಗೆ ಓಡಿಹೋಗಿದ್ದಾರೆ. ಆ ಸಮಯದಲ್ಲಿ ಮಹಾದೊಡ್ಡ ತುತ್ತೂರಿಯ ಶಬ್ದವು ಕೇಳಿಸುವದು. ಆಗ ಆ ಜನರೆಲ್ಲರೂ ಜೆರುಸಲೇಮಿಗೆ ಹಿಂತಿರುಗುವರು. ಆ ಜನರು ಪರಿಶುದ್ಧ ಪರ್ವತದ ಮೇಲೆ ಯೆಹೋವನ ಮುಂದೆ ಅಡ್ಡಬೀಳುವರು.
ಒಟ್ಟು 66 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 27 / 66
Common Bible Languages
West Indian Languages
×

Alert

×

kannada Letters Keypad References