ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಯೆಶಾಯ
1. {ದೇವರು ತನ್ನ ಜನರನ್ನು ಸಂತೈಸುವನು} [PS] ಮರಭೂಮಿಯೂ ಒಣನೆಲವೂ ಬಹಳವಾಗಿ ಸಂತೋಷಿಸುವದು. ಅದು ಹರ್ಷಿಸುತ್ತಾ ಪುಷ್ಪದಂತೆ ಫಲಿಸುವುದು.
2. ಮರುಭೂಮಿಯು ಹರ್ಷದಿಂದ ಅರಳಿದ ಹೂಗಳಿಂದ ತುಂಬಿಹೋಗುವುದು. ಸಂತೋಷದಿಂದ, ಕುಣಿದಾಡುವದೋ ಎಂಬಂತೆ ತೋರುವದು. ಲೆಬನೋನಿನ ಅರಣ್ಯದಂತೆಯೂ ಕರ್ಮೆಲ್ ಬೆಟ್ಟದಂತೆಯೂ ಶಾರೋನಿನ ಕಣಿವೆಯಂತೆಯೂ ಮನೋಹರವಾಗಿರುವದು. ಇವೆಲ್ಲಾ ನೆರವೇರುವದು ಯಾಕೆಂದರೆ ಎಲ್ಲಾ ಜನರು ಯೆಹೋವನ ಮಹಿಮೆಯನ್ನು ನಮ್ಮ ದೇವರ ಪ್ರಭಾವವನ್ನೂ ಕಾಣುವರು. [PE][PS]
3. ಬಲಹೀನವಾದ ಕೈಗಳನ್ನು ಬಲಗೊಳಿಸಿರಿ, ನಡುಗುವ ಮೊಣಕಾಲುಗಳನ್ನು ಬಲಗೊಳಿಸಿರಿ.
4. ಜನರು ಭಯದಿಂದ ಗಲಿಬಿಲಿಗೊಂಡಿದ್ದಾರೆ. ಅವರಿಗೆ ಹೀಗೆ ಹೇಳು, “ಧೈರ್ಯಗೊಳ್ಳಿರಿ, ಭಯಪಡಬೇಡಿ.” ಇಗೋ, ನಿಮ್ಮ ದೇವರು ಬಂದು ನಿಮ್ಮ ವೈರಿಗಳನ್ನು ಶಿಕ್ಷಿಸುವನು. ಆತನು ಬಂದು ನಿಮಗೆ ಪ್ರತಿಫಲವನ್ನು ಕೊಡುವನು. ಯೆಹೋವನು ನಿಮ್ಮನ್ನು ಕಾಪಾಡುತ್ತಾನೆ.
5. ಆಗ ಕುರುಡರಿಗೆ ದೃಷ್ಟಿ ಬರುವದು. ಅವರ ಕಣ್ಣುಗಳು ತೆರೆಯಲ್ಪಡುವವು. ಆಗ ಕಿವುಡರು ಕೇಳಿಸಿಕೊಳ್ಳುವರು. ಅವರ ಕಿವಿಗಳು ತೆರೆಯಲ್ಪಡುವವು.
6. ಕುಂಟರು ಜಿಂಕೆಯಂತೆ ಜಿಗಿದಾಡುವರು. ಮಾತನಾಡಲು ಸಾಧ್ಯವಾಗದ ಜನರು ಆಗ ಹರ್ಷಗಾನವನ್ನು ಹಾಡುವರು. ಯಾವಾಗ ಮರುಭೂಮಿಯಲ್ಲಿ ತೊರೆಯ ನೀರು ಹರಿಯುವದೋ ಆಗ ಇವೆಲ್ಲಾ ಜರಗುವವು. ಒಣಭೂಮಿಯಲ್ಲಿ ಒರತೆಯ ನೀರು ಹರಿಯುವದು.
7. ಆಗ ಜನರು ಬಿಸುಲ್ಗುದುರೆಯನ್ನು ನೋಡಿ ನೀರು ಎಂದು ಭಾವಿಸುವರು. ಆದರೆ ಆಗ ನೀರಿನ ಕೊಳಗಳೇ ಇರುವವು. ಬೆಂಗಾಡಿನಲ್ಲಿ ಬಾವಿಗಳಿರುವವು. ನೆಲದೊಳಗಿಂದ ನೀರು ಉಕ್ಕುವುದು. ಒಂದು ಕಾಲದಲ್ಲಿ ಕಾಡುಪ್ರಾಣಿಗಳು ವಾಸವಾಗಿದ್ದ ಸ್ಥಳದಲ್ಲಿ ಎತ್ತರವಾದ ನೀರವಂಜಿಗಳು ಬೆಳೆಯುವವು. [PE][PS]
8. ಆ ಸಮಯದಲ್ಲಿ ಅಲ್ಲಿ ಮಾರ್ಗವಿರುವದು. ಆ ಹೆದ್ದಾರಿಯು “ಪರಿಶುದ್ಧ” ಮಾರ್ಗವೆಂದು ಕರೆಯಲ್ಪಡುವದು. ದುಷ್ಟಜನರಿಗೆ ಆ ಮಾರ್ಗದಲ್ಲಿ ನಡೆಯಲು ಅನುಮತಿ ಇರುವದಿಲ್ಲ. ಮೂರ್ಖರು ಆ ಮಾರ್ಗದಲ್ಲಿ ನಡೆಯರು. ಆ ಮಾರ್ಗದಲ್ಲಿ ಒಳ್ಳೆಯ ಜನರು ಮಾತ್ರ ನಡೆಯುವರು.
9. ಆ ಮಾರ್ಗದಲ್ಲಿ ಅಪಾಯವಿರುವದಿಲ್ಲ. ಜನರಿಗೆ ಹಾನಿಮಾಡಲು ಸಿಂಹಗಳಾಗಲಿ ಕ್ರೂರಜಂತುಗಳಾಗಲಿ ಆ ಮಾರ್ಗದಲ್ಲಿರುವದಿಲ್ಲ. ದೇವರು ರಕ್ಷಿಸುವ ಜನರಿಗೆ ಮಾತ್ರವೇ ಆ ಮಾರ್ಗವಿರುವುದು. [PE][PS]
10. ಯೆಹೋವನು ತನ್ನ ಜನರನ್ನು ಸ್ವತಂತ್ರರನ್ನಾಗಿ ಮಾಡುತ್ತಾನೆ. ಆ ಜನರು ಆತನ ಬಳಿಗೆ ಹಿಂದಿರುಗಿ ಬರುವರು. ಚೀಯೋನಿಗೆ ಜನರು ಬರುವಾಗ ಅವರು ಸಂತೋಷಭರಿತರಾಗುವರು. ಅವರು ನಿತ್ಯವೂ ಸಂತೋಷವಾಗಿರುವರು. ತಲೆಯ ಮೇಲಿನ ಕಿರೀಟದಂತೆ ಅವರ ಸಂತೋಷವಿರುವದು. ಅವರಲ್ಲಿ ಹರ್ಷವೂ ಸಂತಸವೂ ಸಂಪೂರ್ಣವಾಗಿ ತುಂಬಿರುವವು. ದುಃಖವೂ ಚಿಂತೆಯೂ ಬಹು ದೂರವಾಗಿರುವವು. [PE]
ಒಟ್ಟು 66 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 35 / 66
ದೇವರು ತನ್ನ ಜನರನ್ನು ಸಂತೈಸುವನು 1 ಮರಭೂಮಿಯೂ ಒಣನೆಲವೂ ಬಹಳವಾಗಿ ಸಂತೋಷಿಸುವದು. ಅದು ಹರ್ಷಿಸುತ್ತಾ ಪುಷ್ಪದಂತೆ ಫಲಿಸುವುದು. 2 ಮರುಭೂಮಿಯು ಹರ್ಷದಿಂದ ಅರಳಿದ ಹೂಗಳಿಂದ ತುಂಬಿಹೋಗುವುದು. ಸಂತೋಷದಿಂದ, ಕುಣಿದಾಡುವದೋ ಎಂಬಂತೆ ತೋರುವದು. ಲೆಬನೋನಿನ ಅರಣ್ಯದಂತೆಯೂ ಕರ್ಮೆಲ್ ಬೆಟ್ಟದಂತೆಯೂ ಶಾರೋನಿನ ಕಣಿವೆಯಂತೆಯೂ ಮನೋಹರವಾಗಿರುವದು. ಇವೆಲ್ಲಾ ನೆರವೇರುವದು ಯಾಕೆಂದರೆ ಎಲ್ಲಾ ಜನರು ಯೆಹೋವನ ಮಹಿಮೆಯನ್ನು ನಮ್ಮ ದೇವರ ಪ್ರಭಾವವನ್ನೂ ಕಾಣುವರು. 3 ಬಲಹೀನವಾದ ಕೈಗಳನ್ನು ಬಲಗೊಳಿಸಿರಿ, ನಡುಗುವ ಮೊಣಕಾಲುಗಳನ್ನು ಬಲಗೊಳಿಸಿರಿ. 4 ಜನರು ಭಯದಿಂದ ಗಲಿಬಿಲಿಗೊಂಡಿದ್ದಾರೆ. ಅವರಿಗೆ ಹೀಗೆ ಹೇಳು, “ಧೈರ್ಯಗೊಳ್ಳಿರಿ, ಭಯಪಡಬೇಡಿ.” ಇಗೋ, ನಿಮ್ಮ ದೇವರು ಬಂದು ನಿಮ್ಮ ವೈರಿಗಳನ್ನು ಶಿಕ್ಷಿಸುವನು. ಆತನು ಬಂದು ನಿಮಗೆ ಪ್ರತಿಫಲವನ್ನು ಕೊಡುವನು. ಯೆಹೋವನು ನಿಮ್ಮನ್ನು ಕಾಪಾಡುತ್ತಾನೆ. 5 ಆಗ ಕುರುಡರಿಗೆ ದೃಷ್ಟಿ ಬರುವದು. ಅವರ ಕಣ್ಣುಗಳು ತೆರೆಯಲ್ಪಡುವವು. ಆಗ ಕಿವುಡರು ಕೇಳಿಸಿಕೊಳ್ಳುವರು. ಅವರ ಕಿವಿಗಳು ತೆರೆಯಲ್ಪಡುವವು. 6 ಕುಂಟರು ಜಿಂಕೆಯಂತೆ ಜಿಗಿದಾಡುವರು. ಮಾತನಾಡಲು ಸಾಧ್ಯವಾಗದ ಜನರು ಆಗ ಹರ್ಷಗಾನವನ್ನು ಹಾಡುವರು. ಯಾವಾಗ ಮರುಭೂಮಿಯಲ್ಲಿ ತೊರೆಯ ನೀರು ಹರಿಯುವದೋ ಆಗ ಇವೆಲ್ಲಾ ಜರಗುವವು. ಒಣಭೂಮಿಯಲ್ಲಿ ಒರತೆಯ ನೀರು ಹರಿಯುವದು. 7 ಆಗ ಜನರು ಬಿಸುಲ್ಗುದುರೆಯನ್ನು ನೋಡಿ ನೀರು ಎಂದು ಭಾವಿಸುವರು. ಆದರೆ ಆಗ ನೀರಿನ ಕೊಳಗಳೇ ಇರುವವು. ಬೆಂಗಾಡಿನಲ್ಲಿ ಬಾವಿಗಳಿರುವವು. ನೆಲದೊಳಗಿಂದ ನೀರು ಉಕ್ಕುವುದು. ಒಂದು ಕಾಲದಲ್ಲಿ ಕಾಡುಪ್ರಾಣಿಗಳು ವಾಸವಾಗಿದ್ದ ಸ್ಥಳದಲ್ಲಿ ಎತ್ತರವಾದ ನೀರವಂಜಿಗಳು ಬೆಳೆಯುವವು. 8 ಆ ಸಮಯದಲ್ಲಿ ಅಲ್ಲಿ ಮಾರ್ಗವಿರುವದು. ಆ ಹೆದ್ದಾರಿಯು “ಪರಿಶುದ್ಧ” ಮಾರ್ಗವೆಂದು ಕರೆಯಲ್ಪಡುವದು. ದುಷ್ಟಜನರಿಗೆ ಆ ಮಾರ್ಗದಲ್ಲಿ ನಡೆಯಲು ಅನುಮತಿ ಇರುವದಿಲ್ಲ. ಮೂರ್ಖರು ಆ ಮಾರ್ಗದಲ್ಲಿ ನಡೆಯರು. ಆ ಮಾರ್ಗದಲ್ಲಿ ಒಳ್ಳೆಯ ಜನರು ಮಾತ್ರ ನಡೆಯುವರು. 9 ಆ ಮಾರ್ಗದಲ್ಲಿ ಅಪಾಯವಿರುವದಿಲ್ಲ. ಜನರಿಗೆ ಹಾನಿಮಾಡಲು ಸಿಂಹಗಳಾಗಲಿ ಕ್ರೂರಜಂತುಗಳಾಗಲಿ ಆ ಮಾರ್ಗದಲ್ಲಿರುವದಿಲ್ಲ. ದೇವರು ರಕ್ಷಿಸುವ ಜನರಿಗೆ ಮಾತ್ರವೇ ಆ ಮಾರ್ಗವಿರುವುದು. 10 ಯೆಹೋವನು ತನ್ನ ಜನರನ್ನು ಸ್ವತಂತ್ರರನ್ನಾಗಿ ಮಾಡುತ್ತಾನೆ. ಆ ಜನರು ಆತನ ಬಳಿಗೆ ಹಿಂದಿರುಗಿ ಬರುವರು. ಚೀಯೋನಿಗೆ ಜನರು ಬರುವಾಗ ಅವರು ಸಂತೋಷಭರಿತರಾಗುವರು. ಅವರು ನಿತ್ಯವೂ ಸಂತೋಷವಾಗಿರುವರು. ತಲೆಯ ಮೇಲಿನ ಕಿರೀಟದಂತೆ ಅವರ ಸಂತೋಷವಿರುವದು. ಅವರಲ್ಲಿ ಹರ್ಷವೂ ಸಂತಸವೂ ಸಂಪೂರ್ಣವಾಗಿ ತುಂಬಿರುವವು. ದುಃಖವೂ ಚಿಂತೆಯೂ ಬಹು ದೂರವಾಗಿರುವವು.
ಒಟ್ಟು 66 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 35 / 66
×

Alert

×

Kannada Letters Keypad References