ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಯೆಶಾಯ
1. {ಇಸ್ರೇಲಿನ ಶಿಕ್ಷೆಯು ಅಂತ್ಯವಾಗುವದು} [PS] ನಿನ್ನ ದೇವರು ಹೇಳುವುದೇನೆಂದರೆ: [QBR] “ನನ್ನ ಜನರನ್ನು ಸಂತೈಸು, ಸಂತೈಸು. [QBR]
2. ಜೆರುಸಲೇಮಿನೊಂದಿಗೆ ಕರುಣೆಯಿಂದ ಮಾತಾಡು. ಜೆರುಸಲೇಮಿಗೆ ಹೀಗೆ ಹೇಳು, [QBR2] ‘ನಿನ್ನ ಸೆರೆವಾಸದ ಸಮಯವು ಅಂತ್ಯವಾಯಿತು. [QBR2] ನೀನು ನಿನ್ನ ಪಾಪಗಳ ಶಿಕ್ಷೆಯನ್ನು ಅನುಭವಿಸಿದೆ.’ [QBR] ಜೆರುಸಲೇಮ್ ಮಾಡಿದ ಪ್ರತಿಯೊಂದು ಪಾಪಕೃತ್ಯಗಳಿಗಾಗಿ ಯೆಹೋವನು ಎರಡು ಬಾರಿ ಶಿಕ್ಷಿಸಿದನು.”
3. ಒಬ್ಬ ಮನುಷ್ಯನು ಕೂಗಿಹೇಳುವುದನ್ನು ಕೇಳಿರಿ: [QBR] “ಯೆಹೋವನಿಗೆ ಅಡವಿಯಲ್ಲಿ ದಾರಿಯನ್ನು ಸಿದ್ಧಮಾಡಿರಿ! [QBR2] ನಮ್ಮ ದೇವರಿಗೆ ಅಲ್ಲಿ ಮಾರ್ಗವನ್ನು ನೆಟ್ಟಗೆಮಾಡಿರಿ! [QBR]
4. ತಗ್ಗುಗಳನ್ನು ಸಮತಟ್ಟು ಮಾಡಿರಿ. [QBR2] ಎಲ್ಲಾ ಬೆಟ್ಟಗುಡ್ಡಗಳನ್ನು ನೆಲಸಮ ಮಾಡಿರಿ. [QBR] ಕೊರಕಲು ರಸ್ತೆಗಳನ್ನು ನೆಟ್ಟಗೆ ಮಾಡಿರಿ. [QBR2] ಏರುತಗ್ಗು ನೆಲವನ್ನು ಸಮಗೊಳಿಸಿರಿ. [QBR]
5. ಆಗ ಯೆಹೋವನ ಮಹಿಮೆಯು ಪ್ರದರ್ಶಿಸಲ್ಪಡುವದು. [QBR2] ಆಗ ಎಲ್ಲರೂ ಯೆಹೋವನ ಮಹಿಮೆಯನ್ನು ನೋಡುವರು. [QBR] ಯೆಹೋವನೇ ಇವುಗಳನ್ನು ಸ್ವತಃ ನುಡಿದಿದ್ದಾನೆ.”
6. ಒಂದು ಸ್ವರವು “ಮಾತನಾಡು” ಎಂದಿತು. [QBR2] ಅದಕ್ಕೆ ಮನುಷ್ಯನು, “ಏನು ಮಾತಾಡಲಿ” ಅಂದನು. [QBR] ಆಗ ಸ್ವರವು, “ಜನರು ಶಾಶ್ವತವಾಗಿ ಜೀವಿಸುವದಿಲ್ಲ, ಅವರೆಲ್ಲರೂ ಹುಲ್ಲಿನಂತಿದ್ದಾರೆ. [QBR2] ಅವರ ಒಳ್ಳೆಯತನವು ಕಾಡುಹೂವಿನಂತಿದೆ. [QBR]
7. ಯೆಹೋವನ ಕಡೆಯಿಂದ ಒಂದು ಬಲವಾದ ಗಾಳಿಯು ಹುಲ್ಲಿನ ಮೇಲೆ ಬೀಸಿತು. [QBR2] ಆ ಹುಲ್ಲು ಒಣಗಿಹೋಯಿತು. [QBR2] ಕಾಡಿನ ಪುಷ್ಪವು ಬಾಡಿಹೋಯಿತು. [QBR]
8. ಜನರೆಲ್ಲರೂ ಹುಲ್ಲಿನಂತಿದ್ದಾರೆ. ಹುಲ್ಲು ಸಾಯುತ್ತದೆ. ಪುಷ್ಪಗಳು ಉದುರುತ್ತವೆ. [QBR2] ಆದರೆ ನಮ್ಮ ದೇವರ ಮಾತುಗಳು ಶಾಶ್ವತವಾಗಿವೆ” ಎಂದು ಹೇಳಿತು.
9. {ದೇವರ ಸುವಾರ್ತೆ} [PS] ಚೀಯೋನೇ, ಸಾರಿ ತಿಳಿಸಲು ನಿನಗೆ ಒಂದು ಶುಭವಾರ್ತೆಯಿದೆ. [QBR2] ಉನ್ನತ ಪರ್ವತಕ್ಕೆ ಏರಿಹೋಗಿ ಶುಭವಾರ್ತೆಯನ್ನು ಗಟ್ಟಿಯಾಗಿ ಸಾರು! [QBR] ಜೆರುಸಲೇಮೇ, ನಿನಗೆ ತಿಳಿಸಲು ಒಳ್ಳೆಯ ವಾರ್ತೆ ಇದೆ. [QBR2] ಹೆದರಬೇಡ, ಅದನ್ನು ಗಟ್ಟಿಯಾಗಿ ಸಾರು. [QBR] ಯೆಹೂದದ ಎಲ್ಲಾ ನಗರಗಳಲ್ಲಿ ತಿಳಿಸು: [QBR2] “ಇಗೋ! ನಿನ್ನ ದೇವರು ಇಲ್ಲಿದ್ದಾನೆ.” [QBR]
10. ಇಗೋ, ನನ್ನ ಒಡೆಯನಾದ ಯೆಹೋವನು ಬಲಸಾಮರ್ಥ್ಯಗಳೊಡನೆ ಬರುತ್ತಿದ್ದಾನೆ. [QBR2] ಆತನು ತನ್ನ ಪರಾಕ್ರಮದಿಂದ ಎಲ್ಲಾ ಜನರನ್ನು ಆಳುವನು. [QBR] ಆತನು ತನ್ನ ಜನರಿಗೆ ಪ್ರತಿಫಲಗಳನ್ನು ತರುವನು. [QBR2] ಅವರ ಸಂಬಳವು ಆತನ ಕೈಯಲ್ಲಿದೆ. [QBR]
11. ಯೆಹೋವನು ತನ್ನ ಜನರನ್ನು ನಡಿಸುತ್ತಾನೆ. ಕುರಿಗಳನ್ನು ನಡಿಸುವ ಕುರುಬನಂತೆ ಯೆಹೋವನು ತನ್ನ ಭುಜಬಲದಿಂದ ತನ್ನ ಕುರಿಗಳನ್ನು ಒಟ್ಟುಗೂಡಿಸುವನು. [QBR2] ಯೆಹೋವನು ಕುರಿಮರಿಗಳನ್ನು ಎತ್ತಿಕೊಂಡು ಅಪ್ಪಿಕೊಳ್ಳುವನು. [QBR2] ಅದರ ತಾಯಿ ಆತನ ಪಕ್ಕದಲ್ಲೇ ನಡೆಯುವವು.
12. {ಪ್ರಪಂಚವನ್ನು ಸೃಷ್ಟಿಸಿದವನು ದೇವರೇ} [PS] ತನ್ನ ಅಂಗೈಯಿಂದ ಸಾಗರಗಳನ್ನು ಅಳತೆ ಮಾಡಿದವರ್ಯಾರು? [QBR2] ತನ್ನ ಹಸ್ತದಿಂದ ಆಕಾಶವನ್ನು ಅಳತೆ ಮಾಡಿದವರ್ಯಾರು? [QBR] ಭೂಮಿಯ ಧೂಳನ್ನೆಲ್ಲಾ ಒಂದು ಬೋಗುಣಿಯಲ್ಲಿ ಅಳೆದವರ್ಯಾರು? [QBR2] ಪರ್ವತಗಳನ್ನು ಮತ್ತು ಬೆಟ್ಟಗಳನ್ನು ಅಳೆಯಲು ಅಳತೆಕೋಲನ್ನು ಯಾರು ಉಪಯೋಗಿಸಿದರು? [QBR]
13. ಯೆಹೋವನ ಆತ್ಮಕ್ಕೆ ಆತನು ಮಾಡಬೇಕಾದದ್ದನ್ನು ತಿಳಿಸಿದವರು ಯಾರೂ ಇಲ್ಲ. [QBR2] ಆತನು ಮಾಡಿದ ಕಾರ್ಯಗಳನ್ನು ಹೀಗೆ ಮಾಡಬೇಕೆಂದು ಹೇಳಿದವರಿಲ್ಲ. [QBR]
14. ಯೆಹೋವನು ಯಾರಿಂದಾದರೂ ಸಹಾಯ ಕೇಳಿದನೋ? [QBR2] ಯಾರಾದರೂ ಆತನಿಗೆ ನ್ಯಾಯನೀತಿಯನ್ನು ಕಲಿಸಿದರೋ? [QBR2] ಯಾರಾದರೂ ಆತನಿಗೆ ಜ್ಞಾನವನ್ನು ತಿಳಿಸಿಕೊಟ್ಟರೋ? [QBR2] ಯಾವನಾದರೂ ಯೆಹೋವನಿಗೆ ತಿಳುವಳಿಕೆಯನ್ನು ಹೇಳಿಕೊಟ್ಟನೋ? [QBR]
15. ಇಗೋ, ಈ ಪ್ರಪಂಚದ ಜನಾಂಗಗಳು ಕೊಡದಲ್ಲಿರುವ ಒಂದು ಹನಿ ನೀರಿನಂತಿವೆ. [QBR] ದೂರದಲ್ಲಿರುವ ಎಲ್ಲಾ ಜನಾಂಗಗಳನ್ನು ಯೆಹೋವನು ಒಟ್ಟುಗೂಡಿಸಿ ತಕ್ಕಡಿಯಲ್ಲಿ ತೂಗಿದರೆ [QBR2] ಅವು ಧೂಳಿನ ಕಣದಂತಿವೆ. [QBR]
16. ಯೆಹೋವನಿಗೆ ಲೆಬನೋನಿನಲ್ಲಿರುವ ಮರಗಳನ್ನೆಲ್ಲಾ ಸುಟ್ಟರೂ ಸಾಲದು, [QBR2] ಲೆಬನೋನಿನಲ್ಲಿರುವ ಪ್ರಾಣಿಗಳು ಆತನ ಯಜ್ಞಕ್ಕೆ ಸಾಲವು. [QBR]
17. ಲೋಕದ ಜನಾಂಗದವರೆಲ್ಲರೂ ಯೆಹೋವನೆದುರು ಏನೂ ಅಲ್ಲ. [QBR2] ಆತನೆದುರು ಎಲ್ಲಾ ಜನಾಂಗದವರು ಏನೂ ಅಲ್ಲ.
18. {ದೇವರ ರೂಪವು ಜನರಿಗೆ ತಿಳಿಯದು} [PS] ದೇವರನ್ನು ಬೇರೆ ಯಾವುದಕ್ಕಾದರೂ ಹೋಲಿಸಬಹುದೇ? [QBR2] ದೇವರ ಚಿತ್ತವನ್ನು ಬರೆಯಬಹುದೇ? [QBR]
19. ಇಲ್ಲ, ಆದರೆ ಕೆಲವರು ವಿಗ್ರಹಗಳನ್ನು ಕಲ್ಲಿನಿಂದ ಅಥವಾ ಮರದಿಂದ ತಯಾರಿಸುತ್ತಾರೆ. [QBR2] ಅವುಗಳನ್ನು ಅವರು ದೇವರು ಎಂದು ಕರೆಯುತ್ತಾರೆ. [QBR] ಒಬ್ಬನು ಒಂದು ವಿಗ್ರಹವನ್ನು ಮಾಡುತ್ತಾನೆ. [QBR2] ಇನ್ನೊಬ್ಬನು ಅದಕ್ಕೆ ಬಂಗಾರದ ತಗಡನ್ನು ಹೊದಿಸುತ್ತಾನೆ ಮತ್ತು ಬೆಳ್ಳಿಹಾರವನ್ನು ಮಾಡಿಹಾಕುತ್ತಾನೆ. [QBR]
20. ಅದರ ಪೀಠಕ್ಕಾಗಿ ವಿಶೇಷ ಜಾತಿಯ ಮರವನ್ನು ಆರಿಸುವನು. [QBR2] ಈ ಬಗೆಯ ಮರವು ಕೊಳೆತುಹೋಗುವದಿಲ್ಲ. [QBR] ಆ ಬಳಿಕ ಅವನು ಒಳ್ಳೆಯ ಬಡಗಿಯನ್ನು ನೇಮಿಸುವನು. [QBR2] ಆ ಬಡಗಿಯು ವಿಗ್ರಹ ನಿಲ್ಲಿಸಿದಾಗ ಅದು ಪಕ್ಕಕ್ಕೆ ವಾಲಿ ಬೀಳದಂತೆ ಮಾಡುವನು. [QBR]
21. ಈ ವಿಷಯಗಳನ್ನೆಲ್ಲಾ ನೀವು ಸರಿಯಾಗಿ ತಿಳಿದಿದ್ದೀರಲ್ಲವೆ? [QBR2] ಇದರ ವಿಚಾರವಾಗಿ ನೀವು ಕೇಳಿರುವಿರಿ. [QBR2] ಎಷ್ಟೋ ವರ್ಷಗಳ ಹಿಂದೆ ಯಾರೋ ನಿಮಗೆ ಹೇಳಿದ್ದಿರಬಹುದು. [QBR2] ಖಂಡಿತವಾಗಿಯೂ ಭೂಮಿಯನ್ನು ಯಾರು ನಿರ್ಮಿಸಿದ್ದಾರೆಂದು ನೀವು ತಿಳಿದಿರುವಿರಿ. [QBR]
22. ಯೆಹೋವನು ಸತ್ಯವಾದ ದೇವರು. ಆತನು ಉನ್ನತವಾದ ಆಕಾಶದಲ್ಲಿ ಕುಳಿತುಕೊಳ್ಳುವನು. [QBR2] ಆತನಿಗೆ ಹೋಲಿಸಿದರೆ ಜನರು ಮಿಡತೆಗಳಂತಿರುವರು. [QBR] ಆತನು ಬಟ್ಟೆಯಂತೆ ಆಕಾಶಮಂಡಲವನ್ನು ಸುರುಳಿಯಾಗಿ ಸುತ್ತುವನು. [QBR2] ಆಕಾಶಮಂಡಲವನ್ನು ಆತನು ಎಳೆದು ಗುಡಾರದಂತೆ ಅಗಲಮಾಡಿ ಅದರಡಿಯಲ್ಲಿ ಕುಳಿತುಕೊಳ್ಳುವನು. [QBR]
23. ಆತನು ಅಧಿಪತಿಗಳನ್ನು ಅಯೋಗ್ಯರನ್ನಾಗಿ ಮಾಡುವನು. [QBR2] ಆತನು ಲೋಕದ ನ್ಯಾಯಾಧೀಶರನ್ನು ನಿಷ್ಪ್ರಯೋಜಕರನ್ನಾಗಿ ಮಾಡುವನು. [QBR]
24. ಇವರು ನೆಲದಲ್ಲಿ ನೆಟ್ಟಿರುವ ಸಸಿಗಳಂತಿರುವರು. [QBR2] ಅವುಗಳ ಬೇರುಗಳು ನೆಲದೊಳಗೆ ಆಳವಾಗಿ ಹೋಗುವ ಮೊದಲೇ [QBR] ದೇವರ ಉಸಿರಿಗೆ ಅವು ಬಾಡಿ ಸಾಯುವವು; [QBR2] ಗಾಳಿಯು ಒಣಹುಲ್ಲಿನಂತೆ ಅವುಗಳನ್ನು ಬಡಿದುಕೊಂಡು ಹೋಗುವದು. [QBR]
25. ಪರಿಶುದ್ಧನಾದ ದೇವರು ಹೇಳುವುದೇನೆಂದರೆ: “ನನ್ನನ್ನು ಯಾರಿಗಾದರೂ ಹೋಲಿಸಲು ಸಾಧ್ಯವೇ? [QBR2] ನನಗೆ ಸಮಾನರು ಯಾರೂ ಇಲ್ಲ.”
26. ಆಕಾಶಮಂಡಲದ ಕಡೆಗೆ ನೋಡಿರಿ! [QBR2] ಆ ನಕ್ಷತ್ರಗಳನ್ನೆಲ್ಲಾ ಮಾಡಿದವರು ಯಾರು? [QBR2] ಆಕಾಶದಲ್ಲಿರುವ ಆ “ಸೈನ್ಯಗಳನ್ನು” ಸಿದ್ಧ ಮಾಡಿದವರು ಯಾರು? [QBR2] ಪ್ರತಿಯೊಂದು ನಕ್ಷತ್ರವನ್ನು ಹೆಸರೆತ್ತಿ ಕರೆಯುವವರು ಯಾರು? [QBR] ಆತನು ಬಲಿಷ್ಠನೂ ಪರಾಕ್ರಮಶಾಲಿಯೂ ಆಗಿದ್ದಾನೆ. [QBR2] ಆದ್ದರಿಂದ ಆ ನಕ್ಷತ್ರಗಳಲ್ಲಿ ಒಂದೂ ನಾಶವಾಗಲಿಲ್ಲ.
27. ಯಾಕೋಬೇ, ಇದು ಸತ್ಯ! [QBR2] ಇಸ್ರೇಲೇ, ನೀನದನ್ನು ನಂಬಬೇಕು. [QBR] ಹೀಗಿರಲು ನೀನು, “ಯೆಹೋವನು ನನ್ನ ನಡತೆಯನ್ನು ಗಮನಿಸುವದಿಲ್ಲ. [QBR2] ನನ್ನನ್ನು ಕಂಡುಹಿಡಿದು ಶಿಕ್ಷಿಸುವದಿಲ್ಲ” ಎಂದು ಹೇಳುವೆ.
28. ದೇವರಾದ ಯೆಹೋವನು ಜ್ಞಾನಿಯೆಂಬುದನ್ನು [QBR2] ನೀನು ಖಂಡಿತವಾಗಿಯೂ ಕೇಳಿರುವೆ. [QBR] ಆತನು ತಿಳಿದಿರುವ ಪ್ರತಿಯೊಂದನ್ನೂ ಕಲಿತುಕೊಳ್ಳಲು ಜನರಿಗೆ ಸಾಧ್ಯವಿಲ್ಲ. [QBR2] ಆತನು ಆಯಾಸಗೊಳ್ಳುವದಿಲ್ಲ; ಆತನಿಗೆ ವಿಶ್ರಾಂತಿಯ ಅವಶ್ಯವಿಲ್ಲ. [QBR] ಭೂಮಿಯಲ್ಲಿರುವ ದೂರ ಸ್ಥಳಗಳನ್ನೆಲ್ಲಾ ಮಾಡಿದವನು ಆತನೇ. [QBR2] ಆತನು ನಿರಂತರಕ್ಕೂ ಜೀವಿಸುವಾತನಾಗಿದ್ದಾನೆ. [QBR]
29. ಬಳಲಿಹೋದವರನ್ನು ಆತನು ಬಲಶಾಲಿಗಳನ್ನಾಗಿ ಮಾಡುತ್ತಾನೆ. [QBR2] ಬಲಹೀನರನ್ನು ಶಕ್ತಿವಂತರನ್ನಾಗಿ ಮಾಡುತ್ತಾನೆ. [QBR]
30. ಯೌವನಸ್ಥರು ಆಯಾಸಗೊಳ್ಳುವರು. [QBR2] ಅವರಿಗೆ ವಿಶ್ರಾಂತಿ ಬೇಕು; ಹುಡುಗರೂ ಮುಗ್ಗರಿಸಿಬೀಳುವರು. [QBR]
31. ಆದರೆ ಯೆಹೋವನಲ್ಲಿ ಭರವಸೆಯಿಟ್ಟವರು ಮತ್ತೆ ಬಲಹೊಂದುವರು. ಹದ್ದು ಹೊಸಗರಿಗಳನ್ನು ಹೊಂದುವಂತೆ ಅವರು ಹೊಸ ಬಲವನ್ನು ಹೊಂದುವರು. [QBR2] ಅವರು ಓಡಾಡಿದರೂ ಆಯಾಸಗೊಳ್ಳುವದಿಲ್ಲ. [QBR2] ನಡೆದಾಡಿದರೂ ಬಳಲಿಹೋಗುವುದಿಲ್ಲ. [PE]
ಒಟ್ಟು 66 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 40 / 66
ಇಸ್ರೇಲಿನ ಶಿಕ್ಷೆಯು ಅಂತ್ಯವಾಗುವದು 1 ನಿನ್ನ ದೇವರು ಹೇಳುವುದೇನೆಂದರೆ:
“ನನ್ನ ಜನರನ್ನು ಸಂತೈಸು, ಸಂತೈಸು.
2 ಜೆರುಸಲೇಮಿನೊಂದಿಗೆ ಕರುಣೆಯಿಂದ ಮಾತಾಡು. ಜೆರುಸಲೇಮಿಗೆ ಹೀಗೆ ಹೇಳು, ‘ನಿನ್ನ ಸೆರೆವಾಸದ ಸಮಯವು ಅಂತ್ಯವಾಯಿತು. ನೀನು ನಿನ್ನ ಪಾಪಗಳ ಶಿಕ್ಷೆಯನ್ನು ಅನುಭವಿಸಿದೆ.’
ಜೆರುಸಲೇಮ್ ಮಾಡಿದ ಪ್ರತಿಯೊಂದು ಪಾಪಕೃತ್ಯಗಳಿಗಾಗಿ ಯೆಹೋವನು ಎರಡು ಬಾರಿ ಶಿಕ್ಷಿಸಿದನು.”
3 ಒಬ್ಬ ಮನುಷ್ಯನು ಕೂಗಿಹೇಳುವುದನ್ನು ಕೇಳಿರಿ:
“ಯೆಹೋವನಿಗೆ ಅಡವಿಯಲ್ಲಿ ದಾರಿಯನ್ನು ಸಿದ್ಧಮಾಡಿರಿ! ನಮ್ಮ ದೇವರಿಗೆ ಅಲ್ಲಿ ಮಾರ್ಗವನ್ನು ನೆಟ್ಟಗೆಮಾಡಿರಿ!
4 ತಗ್ಗುಗಳನ್ನು ಸಮತಟ್ಟು ಮಾಡಿರಿ. ಎಲ್ಲಾ ಬೆಟ್ಟಗುಡ್ಡಗಳನ್ನು ನೆಲಸಮ ಮಾಡಿರಿ.
ಕೊರಕಲು ರಸ್ತೆಗಳನ್ನು ನೆಟ್ಟಗೆ ಮಾಡಿರಿ. ಏರುತಗ್ಗು ನೆಲವನ್ನು ಸಮಗೊಳಿಸಿರಿ.
5 ಆಗ ಯೆಹೋವನ ಮಹಿಮೆಯು ಪ್ರದರ್ಶಿಸಲ್ಪಡುವದು. ಆಗ ಎಲ್ಲರೂ ಯೆಹೋವನ ಮಹಿಮೆಯನ್ನು ನೋಡುವರು.
ಯೆಹೋವನೇ ಇವುಗಳನ್ನು ಸ್ವತಃ ನುಡಿದಿದ್ದಾನೆ.”
6 ಒಂದು ಸ್ವರವು “ಮಾತನಾಡು” ಎಂದಿತು. ಅದಕ್ಕೆ ಮನುಷ್ಯನು, “ಏನು ಮಾತಾಡಲಿ” ಅಂದನು.
ಆಗ ಸ್ವರವು, “ಜನರು ಶಾಶ್ವತವಾಗಿ ಜೀವಿಸುವದಿಲ್ಲ, ಅವರೆಲ್ಲರೂ ಹುಲ್ಲಿನಂತಿದ್ದಾರೆ. ಅವರ ಒಳ್ಳೆಯತನವು ಕಾಡುಹೂವಿನಂತಿದೆ.
7 ಯೆಹೋವನ ಕಡೆಯಿಂದ ಒಂದು ಬಲವಾದ ಗಾಳಿಯು ಹುಲ್ಲಿನ ಮೇಲೆ ಬೀಸಿತು. ಆ ಹುಲ್ಲು ಒಣಗಿಹೋಯಿತು. ಕಾಡಿನ ಪುಷ್ಪವು ಬಾಡಿಹೋಯಿತು.
8 ಜನರೆಲ್ಲರೂ ಹುಲ್ಲಿನಂತಿದ್ದಾರೆ. ಹುಲ್ಲು ಸಾಯುತ್ತದೆ. ಪುಷ್ಪಗಳು ಉದುರುತ್ತವೆ. ಆದರೆ ನಮ್ಮ ದೇವರ ಮಾತುಗಳು ಶಾಶ್ವತವಾಗಿವೆ” ಎಂದು ಹೇಳಿತು. ದೇವರ ಸುವಾರ್ತೆ 9 ಚೀಯೋನೇ, ಸಾರಿ ತಿಳಿಸಲು ನಿನಗೆ ಒಂದು ಶುಭವಾರ್ತೆಯಿದೆ. ಉನ್ನತ ಪರ್ವತಕ್ಕೆ ಏರಿಹೋಗಿ ಶುಭವಾರ್ತೆಯನ್ನು ಗಟ್ಟಿಯಾಗಿ ಸಾರು!
ಜೆರುಸಲೇಮೇ, ನಿನಗೆ ತಿಳಿಸಲು ಒಳ್ಳೆಯ ವಾರ್ತೆ ಇದೆ. ಹೆದರಬೇಡ, ಅದನ್ನು ಗಟ್ಟಿಯಾಗಿ ಸಾರು.
ಯೆಹೂದದ ಎಲ್ಲಾ ನಗರಗಳಲ್ಲಿ ತಿಳಿಸು: “ಇಗೋ! ನಿನ್ನ ದೇವರು ಇಲ್ಲಿದ್ದಾನೆ.”
10 ಇಗೋ, ನನ್ನ ಒಡೆಯನಾದ ಯೆಹೋವನು ಬಲಸಾಮರ್ಥ್ಯಗಳೊಡನೆ ಬರುತ್ತಿದ್ದಾನೆ. ಆತನು ತನ್ನ ಪರಾಕ್ರಮದಿಂದ ಎಲ್ಲಾ ಜನರನ್ನು ಆಳುವನು.
ಆತನು ತನ್ನ ಜನರಿಗೆ ಪ್ರತಿಫಲಗಳನ್ನು ತರುವನು. ಅವರ ಸಂಬಳವು ಆತನ ಕೈಯಲ್ಲಿದೆ.
11 ಯೆಹೋವನು ತನ್ನ ಜನರನ್ನು ನಡಿಸುತ್ತಾನೆ. ಕುರಿಗಳನ್ನು ನಡಿಸುವ ಕುರುಬನಂತೆ ಯೆಹೋವನು ತನ್ನ ಭುಜಬಲದಿಂದ ತನ್ನ ಕುರಿಗಳನ್ನು ಒಟ್ಟುಗೂಡಿಸುವನು. ಯೆಹೋವನು ಕುರಿಮರಿಗಳನ್ನು ಎತ್ತಿಕೊಂಡು ಅಪ್ಪಿಕೊಳ್ಳುವನು. ಅದರ ತಾಯಿ ಆತನ ಪಕ್ಕದಲ್ಲೇ ನಡೆಯುವವು. ಪ್ರಪಂಚವನ್ನು ಸೃಷ್ಟಿಸಿದವನು ದೇವರೇ 12 ತನ್ನ ಅಂಗೈಯಿಂದ ಸಾಗರಗಳನ್ನು ಅಳತೆ ಮಾಡಿದವರ್ಯಾರು? ತನ್ನ ಹಸ್ತದಿಂದ ಆಕಾಶವನ್ನು ಅಳತೆ ಮಾಡಿದವರ್ಯಾರು?
ಭೂಮಿಯ ಧೂಳನ್ನೆಲ್ಲಾ ಒಂದು ಬೋಗುಣಿಯಲ್ಲಿ ಅಳೆದವರ್ಯಾರು? ಪರ್ವತಗಳನ್ನು ಮತ್ತು ಬೆಟ್ಟಗಳನ್ನು ಅಳೆಯಲು ಅಳತೆಕೋಲನ್ನು ಯಾರು ಉಪಯೋಗಿಸಿದರು?
13 ಯೆಹೋವನ ಆತ್ಮಕ್ಕೆ ಆತನು ಮಾಡಬೇಕಾದದ್ದನ್ನು ತಿಳಿಸಿದವರು ಯಾರೂ ಇಲ್ಲ. ಆತನು ಮಾಡಿದ ಕಾರ್ಯಗಳನ್ನು ಹೀಗೆ ಮಾಡಬೇಕೆಂದು ಹೇಳಿದವರಿಲ್ಲ.
14 ಯೆಹೋವನು ಯಾರಿಂದಾದರೂ ಸಹಾಯ ಕೇಳಿದನೋ? ಯಾರಾದರೂ ಆತನಿಗೆ ನ್ಯಾಯನೀತಿಯನ್ನು ಕಲಿಸಿದರೋ? ಯಾರಾದರೂ ಆತನಿಗೆ ಜ್ಞಾನವನ್ನು ತಿಳಿಸಿಕೊಟ್ಟರೋ? ಯಾವನಾದರೂ ಯೆಹೋವನಿಗೆ ತಿಳುವಳಿಕೆಯನ್ನು ಹೇಳಿಕೊಟ್ಟನೋ?
15 ಇಗೋ, ಈ ಪ್ರಪಂಚದ ಜನಾಂಗಗಳು ಕೊಡದಲ್ಲಿರುವ ಒಂದು ಹನಿ ನೀರಿನಂತಿವೆ.
ದೂರದಲ್ಲಿರುವ ಎಲ್ಲಾ ಜನಾಂಗಗಳನ್ನು ಯೆಹೋವನು ಒಟ್ಟುಗೂಡಿಸಿ ತಕ್ಕಡಿಯಲ್ಲಿ ತೂಗಿದರೆ ಅವು ಧೂಳಿನ ಕಣದಂತಿವೆ.
16 ಯೆಹೋವನಿಗೆ ಲೆಬನೋನಿನಲ್ಲಿರುವ ಮರಗಳನ್ನೆಲ್ಲಾ ಸುಟ್ಟರೂ ಸಾಲದು, ಲೆಬನೋನಿನಲ್ಲಿರುವ ಪ್ರಾಣಿಗಳು ಆತನ ಯಜ್ಞಕ್ಕೆ ಸಾಲವು.
17 ಲೋಕದ ಜನಾಂಗದವರೆಲ್ಲರೂ ಯೆಹೋವನೆದುರು ಏನೂ ಅಲ್ಲ. ಆತನೆದುರು ಎಲ್ಲಾ ಜನಾಂಗದವರು ಏನೂ ಅಲ್ಲ. ದೇವರ ರೂಪವು ಜನರಿಗೆ ತಿಳಿಯದು 18 ದೇವರನ್ನು ಬೇರೆ ಯಾವುದಕ್ಕಾದರೂ ಹೋಲಿಸಬಹುದೇ? ದೇವರ ಚಿತ್ತವನ್ನು ಬರೆಯಬಹುದೇ?
19 ಇಲ್ಲ, ಆದರೆ ಕೆಲವರು ವಿಗ್ರಹಗಳನ್ನು ಕಲ್ಲಿನಿಂದ ಅಥವಾ ಮರದಿಂದ ತಯಾರಿಸುತ್ತಾರೆ. ಅವುಗಳನ್ನು ಅವರು ದೇವರು ಎಂದು ಕರೆಯುತ್ತಾರೆ.
ಒಬ್ಬನು ಒಂದು ವಿಗ್ರಹವನ್ನು ಮಾಡುತ್ತಾನೆ. ಇನ್ನೊಬ್ಬನು ಅದಕ್ಕೆ ಬಂಗಾರದ ತಗಡನ್ನು ಹೊದಿಸುತ್ತಾನೆ ಮತ್ತು ಬೆಳ್ಳಿಹಾರವನ್ನು ಮಾಡಿಹಾಕುತ್ತಾನೆ.
20 ಅದರ ಪೀಠಕ್ಕಾಗಿ ವಿಶೇಷ ಜಾತಿಯ ಮರವನ್ನು ಆರಿಸುವನು. ಈ ಬಗೆಯ ಮರವು ಕೊಳೆತುಹೋಗುವದಿಲ್ಲ.
ಆ ಬಳಿಕ ಅವನು ಒಳ್ಳೆಯ ಬಡಗಿಯನ್ನು ನೇಮಿಸುವನು. ಆ ಬಡಗಿಯು ವಿಗ್ರಹ ನಿಲ್ಲಿಸಿದಾಗ ಅದು ಪಕ್ಕಕ್ಕೆ ವಾಲಿ ಬೀಳದಂತೆ ಮಾಡುವನು.
21 ಈ ವಿಷಯಗಳನ್ನೆಲ್ಲಾ ನೀವು ಸರಿಯಾಗಿ ತಿಳಿದಿದ್ದೀರಲ್ಲವೆ? ಇದರ ವಿಚಾರವಾಗಿ ನೀವು ಕೇಳಿರುವಿರಿ. ಎಷ್ಟೋ ವರ್ಷಗಳ ಹಿಂದೆ ಯಾರೋ ನಿಮಗೆ ಹೇಳಿದ್ದಿರಬಹುದು. ಖಂಡಿತವಾಗಿಯೂ ಭೂಮಿಯನ್ನು ಯಾರು ನಿರ್ಮಿಸಿದ್ದಾರೆಂದು ನೀವು ತಿಳಿದಿರುವಿರಿ.
22 ಯೆಹೋವನು ಸತ್ಯವಾದ ದೇವರು. ಆತನು ಉನ್ನತವಾದ ಆಕಾಶದಲ್ಲಿ ಕುಳಿತುಕೊಳ್ಳುವನು. ಆತನಿಗೆ ಹೋಲಿಸಿದರೆ ಜನರು ಮಿಡತೆಗಳಂತಿರುವರು.
ಆತನು ಬಟ್ಟೆಯಂತೆ ಆಕಾಶಮಂಡಲವನ್ನು ಸುರುಳಿಯಾಗಿ ಸುತ್ತುವನು. ಆಕಾಶಮಂಡಲವನ್ನು ಆತನು ಎಳೆದು ಗುಡಾರದಂತೆ ಅಗಲಮಾಡಿ ಅದರಡಿಯಲ್ಲಿ ಕುಳಿತುಕೊಳ್ಳುವನು.
23 ಆತನು ಅಧಿಪತಿಗಳನ್ನು ಅಯೋಗ್ಯರನ್ನಾಗಿ ಮಾಡುವನು. ಆತನು ಲೋಕದ ನ್ಯಾಯಾಧೀಶರನ್ನು ನಿಷ್ಪ್ರಯೋಜಕರನ್ನಾಗಿ ಮಾಡುವನು.
24 ಇವರು ನೆಲದಲ್ಲಿ ನೆಟ್ಟಿರುವ ಸಸಿಗಳಂತಿರುವರು. ಅವುಗಳ ಬೇರುಗಳು ನೆಲದೊಳಗೆ ಆಳವಾಗಿ ಹೋಗುವ ಮೊದಲೇ
ದೇವರ ಉಸಿರಿಗೆ ಅವು ಬಾಡಿ ಸಾಯುವವು; ಗಾಳಿಯು ಒಣಹುಲ್ಲಿನಂತೆ ಅವುಗಳನ್ನು ಬಡಿದುಕೊಂಡು ಹೋಗುವದು.
25 ಪರಿಶುದ್ಧನಾದ ದೇವರು ಹೇಳುವುದೇನೆಂದರೆ: “ನನ್ನನ್ನು ಯಾರಿಗಾದರೂ ಹೋಲಿಸಲು ಸಾಧ್ಯವೇ? ನನಗೆ ಸಮಾನರು ಯಾರೂ ಇಲ್ಲ.” 26 ಆಕಾಶಮಂಡಲದ ಕಡೆಗೆ ನೋಡಿರಿ! ಆ ನಕ್ಷತ್ರಗಳನ್ನೆಲ್ಲಾ ಮಾಡಿದವರು ಯಾರು? ಆಕಾಶದಲ್ಲಿರುವ ಆ “ಸೈನ್ಯಗಳನ್ನು” ಸಿದ್ಧ ಮಾಡಿದವರು ಯಾರು? ಪ್ರತಿಯೊಂದು ನಕ್ಷತ್ರವನ್ನು ಹೆಸರೆತ್ತಿ ಕರೆಯುವವರು ಯಾರು?
ಆತನು ಬಲಿಷ್ಠನೂ ಪರಾಕ್ರಮಶಾಲಿಯೂ ಆಗಿದ್ದಾನೆ. ಆದ್ದರಿಂದ ಆ ನಕ್ಷತ್ರಗಳಲ್ಲಿ ಒಂದೂ ನಾಶವಾಗಲಿಲ್ಲ.
27 ಯಾಕೋಬೇ, ಇದು ಸತ್ಯ! ಇಸ್ರೇಲೇ, ನೀನದನ್ನು ನಂಬಬೇಕು.
ಹೀಗಿರಲು ನೀನು, “ಯೆಹೋವನು ನನ್ನ ನಡತೆಯನ್ನು ಗಮನಿಸುವದಿಲ್ಲ. ನನ್ನನ್ನು ಕಂಡುಹಿಡಿದು ಶಿಕ್ಷಿಸುವದಿಲ್ಲ” ಎಂದು ಹೇಳುವೆ.
28 ದೇವರಾದ ಯೆಹೋವನು ಜ್ಞಾನಿಯೆಂಬುದನ್ನು ನೀನು ಖಂಡಿತವಾಗಿಯೂ ಕೇಳಿರುವೆ.
ಆತನು ತಿಳಿದಿರುವ ಪ್ರತಿಯೊಂದನ್ನೂ ಕಲಿತುಕೊಳ್ಳಲು ಜನರಿಗೆ ಸಾಧ್ಯವಿಲ್ಲ. ಆತನು ಆಯಾಸಗೊಳ್ಳುವದಿಲ್ಲ; ಆತನಿಗೆ ವಿಶ್ರಾಂತಿಯ ಅವಶ್ಯವಿಲ್ಲ.
ಭೂಮಿಯಲ್ಲಿರುವ ದೂರ ಸ್ಥಳಗಳನ್ನೆಲ್ಲಾ ಮಾಡಿದವನು ಆತನೇ. ಆತನು ನಿರಂತರಕ್ಕೂ ಜೀವಿಸುವಾತನಾಗಿದ್ದಾನೆ.
29 ಬಳಲಿಹೋದವರನ್ನು ಆತನು ಬಲಶಾಲಿಗಳನ್ನಾಗಿ ಮಾಡುತ್ತಾನೆ. ಬಲಹೀನರನ್ನು ಶಕ್ತಿವಂತರನ್ನಾಗಿ ಮಾಡುತ್ತಾನೆ.
30 ಯೌವನಸ್ಥರು ಆಯಾಸಗೊಳ್ಳುವರು. ಅವರಿಗೆ ವಿಶ್ರಾಂತಿ ಬೇಕು; ಹುಡುಗರೂ ಮುಗ್ಗರಿಸಿಬೀಳುವರು.
31 ಆದರೆ ಯೆಹೋವನಲ್ಲಿ ಭರವಸೆಯಿಟ್ಟವರು ಮತ್ತೆ ಬಲಹೊಂದುವರು. ಹದ್ದು ಹೊಸಗರಿಗಳನ್ನು ಹೊಂದುವಂತೆ ಅವರು ಹೊಸ ಬಲವನ್ನು ಹೊಂದುವರು. ಅವರು ಓಡಾಡಿದರೂ ಆಯಾಸಗೊಳ್ಳುವದಿಲ್ಲ. ನಡೆದಾಡಿದರೂ ಬಳಲಿಹೋಗುವುದಿಲ್ಲ.
ಒಟ್ಟು 66 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 40 / 66
×

Alert

×

Kannada Letters Keypad References