2. ಜೆರುಸಲೇಮಿನೊಂದಿಗೆ ಕರುಣೆಯಿಂದ ಮಾತಾಡು. ಜೆರುಸಲೇಮಿಗೆ ಹೀಗೆ ಹೇಳು, ‘ನಿನ್ನ ಸೆರೆವಾಸದ ಸಮಯವು ಅಂತ್ಯವಾಯಿತು. ನೀನು ನಿನ್ನ ಪಾಪಗಳ ಶಿಕ್ಷೆಯನ್ನು ಅನುಭವಿಸಿದೆ.’ ಜೆರುಸಲೇಮ್ ಮಾಡಿದ ಪ್ರತಿಯೊಂದು ಪಾಪ ಕೃತ್ಯಗಳಿಗಾಗಿ ಯೆಹೋವನು ಎರಡು ಬಾರಿ ಶಿಕ್ಷಿಸಿದನು.”
|
3. ಒಬ್ಬ ಮನುಷ್ಯನು ಕೂಗಿಹೇಳುವದನ್ನು ಕೇಳಿರಿ: “ಯೆಹೋವನಿಗೆ ಅಡವಿಯಲ್ಲಿ ದಾರಿಯನ್ನು ಸಿದ್ಧಮಾಡಿರಿ! ನಮ್ಮ ದೇವರಿಗೆ ಅಲ್ಲಿ ಮಾರ್ಗವನ್ನು ನೆಟ್ಟಗೆಮಾಡಿರಿ!
|
4. ತಗ್ಗುಗಳನ್ನು ಸಮತಟ್ಟು ಮಾಡಿರಿ. ಎಲ್ಲಾ ಬೆಟ್ಟಗುಡ್ಡಗಳನ್ನು ನೆಲಸಮ ಮಾಡಿರಿ. ಕೊರಕಲು ರಸ್ತೆಗಳನ್ನು ನೆಟ್ಟಗೆ ಮಾಡಿರಿ. ಏರುತಗ್ಗು ನೆಲವನ್ನು ಸಮಗೊಳಿಸಿರಿ.
|
5. ಆಗ ಯೆಹೋವನ ಮಹಿಮೆಯು ಪ್ರದರ್ಶಿಸಲ್ಪಡುವದು. ಆಗ ಎಲ್ಲರೂ ಯೆಹೋವನ ಮಹಿಮೆಯನ್ನು ನೋಡುವರು. ಯೆಹೋವನೇ ಇವುಗಳನ್ನು ಸ್ವತಃ ನುಡಿದಿದ್ದಾನೆ.”
|
6. ಒಂದು ಸ್ವರವು “ಮಾತನಾಡು” ಎಂದಿತು. ಅದಕ್ಕೆ ಮನುಷ್ಯನು, “ಏನು ಮಾತಾಡಲಿ” ಅಂದನು. ಆಗ ಸ್ವರವು, “ಜನರು ಶಾಶ್ವತವಾಗಿ ಜೀವಿಸುವದಿಲ್ಲ, ಅವರೆಲ್ಲರೂ ಹುಲ್ಲಿನಂತಿದ್ದಾರೆ. ಅವರ ಒಳ್ಳೆಯತನವು ಕಾಡುಹೂವಿನಂತಿದೆ.
|
7. ಯೆಹೋವನ ಕಡೆಯಿಂದ ಒಂದು ಬಲವಾದ ಗಾಳಿಯು ಹುಲ್ಲಿನ ಮೇಲೆ ಬೀಸಿತು. ಆ ಹುಲ್ಲು ಒಣಗಿಹೋಯಿತು. ಕಾಡಿನ ಪುಷ್ಪವು ಬಾಡಿ ಹೋಯಿತು.
|
8. ಜನರೆಲ್ಲರೂ ಹುಲ್ಲಿನಂತಿದ್ದಾರೆ. ಹುಲ್ಲು ಸಾಯುತ್ತದೆ. ಪುಷ್ಪಗಳು ಉದುರುತ್ತವೆ. ಆದರೆ ನಮ್ಮ ದೇವರ ಮಾತುಗಳು ಶಾಶ್ವತವಾಗಿವೆ” ಎಂದು ಹೇಳಿತು.
|
9. ಚೀಯೋನೇ, ಸಾರಿ ತಿಳಿಸಲು ನಿನಗೆ ಒಂದು ಶುಭವಾರ್ತೆಯಿದೆ. ಉನ್ನತ ಪರ್ವತಕ್ಕೆ ಏರಿಹೋಗಿ ಶುಭವಾರ್ತೆಯನ್ನು ಗಟ್ಟಿಯಾಗಿ ಸಾರು! ಜೆರುಸಲೇಮೇ, ನಿನಗೆ ತಿಳಿಸಲು ಒಳ್ಳೆಯ ವಾರ್ತೆ ಇದೆ. ಹೆದರಬೇಡ. ಅದನ್ನು ಗಟ್ಟಿಯಾಗಿ ಸಾರು. ಯೆಹೂದದ ಎಲ್ಲಾ ನಗರಗಳಲ್ಲಿ ತಿಳಿಸು: “ಇಗೋ! ನಿನ್ನ ದೇವರು ಇಲ್ಲಿದ್ದಾನೆ.”
|
10. ಇಗೋ, ನನ್ನ ಒಡೆಯನಾದ ಯೆಹೋವನು ಬಲಸಾಮರ್ಥ್ಯಗಳೊಡನೆ ಬರುತ್ತಿದ್ದಾನೆ. ಆತನು ತನ್ನ ಪರಾಕ್ರಮದಿಂದ ಎಲ್ಲಾ ಜನರನ್ನು ಆಳುವನು. ಆತನು ತನ್ನ ಜನರಿಗೆ ಪ್ರತಿಫಲಗಳನ್ನು ತರುವನು. ಅವರ ಸಂಬಳವು ಆತನ ಕೈಯಲ್ಲಿದೆ.
|
11. ಯೆಹೋವನು ತನ್ನ ಜನರನ್ನು ನಡಿಸುತ್ತಾನೆ. ಕುರಿಗಳನ್ನು ನಡಿಸುವ ಕುರುಬನಂತೆ ಯೆಹೋವನು ತನ್ನ ಭುಜಬಲದಿಂದ ತನ್ನ ಕುರಿಗಳನ್ನು ಒಟ್ಟುಗೂಡಿಸುವನು. ಯೆಹೋವನು ಕುರಿಮರಿಗಳನ್ನು ಎತ್ತಿಕೊಂಡು ಅಪ್ಪಿಕೊಳ್ಳುವನು. ಅದರ ತಾಯಿ ಆತನ ಪಕ್ಕದಲ್ಲೇ ನಡೆಯುವವು.
|
12. ತನ್ನ ಅಂಗೈಯಿಂದ ಸಾಗರಗಳನ್ನು ಅಳತೆ ಮಾಡಿದವರ್ಯಾರು? ತನ್ನ ಹಸ್ತದಿಂದ ಆಕಾಶವನ್ನು ಅಳತೆ ಮಾಡಿದವರ್ಯಾರು? ಭೂಮಿಯ ಧೂಳನ್ನೆಲ್ಲಾ ಒಂದು ಬೋಗುಣಿಯಲ್ಲಿ ಅಳೆದವರ್ಯಾರು? ಪರ್ವತಗಳನ್ನು ಮತ್ತು ಬೆಟ್ಟಗಳನ್ನು ಅಳೆಯಲು ಅಳತೆ ಕೋಲನ್ನು ಯಾರು ಉಪಯೋಗಿಸಿದರು?
|
13. ಯೆಹೋವನ ಆತ್ಮಕ್ಕೆ ಆತನು ಮಾಡಬೇಕಾದದ್ದನ್ನು ತಿಳಿಸಿದವರು ಯಾರೂ ಇಲ್ಲ. ಆತನು ಮಾಡಿದ ಕಾರ್ಯಗಳನ್ನು ಹೀಗೆ ಮಾಡಬೇಕೆಂದು ಹೇಳಿದವರಿಲ್ಲ.
|
14. ಯೆಹೋವನು ಯಾರಿಂದಾದರೂ ಸಹಾಯ ಕೇಳಿದನೋ? ಯಾರಾದರೂ ಆತನಿಗೆ ನ್ಯಾಯನೀತಿಯನ್ನು ಕಲಿಸಿದರೋ? ಯಾರಾದರೂ ಆತನಿಗೆ ಜ್ಞಾನವನ್ನು ತಿಳಿಸಿಕೊಟ್ಟರೋ? ಯಾವನಾದರೂ ಯೆಹೋವನಿಗೆ ತಿಳುವಳಿಕೆಯನ್ನು ಹೇಳಿಕೊಟ್ಟನೋ?
|
15. ಇಗೋ, ಈ ಪ್ರಪಂಚದ ಜನಾಂಗಗಳು ಕೊಡದಲ್ಲಿರುವ ಒಂದು ಹನಿ ನೀರಿನಂತಿವೆ. ದೂರದಲ್ಲಿರುವ ಎಲ್ಲಾ ಜನಾಂಗಗಳನ್ನು ಯೆಹೋವನು ಒಟ್ಟುಗೂಡಿಸಿ ತಕ್ಕಡಿಯಲ್ಲಿ ತೂಗಿದರೆ ಅವು ಧೂಳಿನ ಕಣದಂತಿವೆ.
|
16. ಯೆಹೋವನಿಗೆ ಲೆಬನೋನಿನಲ್ಲಿರುವ ಮರಗಳನ್ನೆಲ್ಲಾ ಸುಟ್ಟರೂ ಸಾಲದು, ಲೆಬನೋನಿನಲ್ಲಿರುವ ಪ್ರಾಣಿಗಳು ಆತನ ಯಜ್ಞಕ್ಕೆ ಸಾಲವು.
|
19. ಇಲ್ಲ, ಆದರೆ ಕೆಲವರು ವಿಗ್ರಹಗಳನ್ನು ಕಲ್ಲಿನಿಂದ ಅಥವಾ ಮರದಿಂದ ತಯಾರಿಸುತ್ತಾರೆ. ಅವುಗಳನ್ನು ಅವರು ದೇವರು ಎಂದು ಕರೆಯುತ್ತಾರೆ. ಒಬ್ಬನು ಒಂದು ವಿಗ್ರಹವನ್ನು ಮಾಡುತ್ತಾನೆ. ಇನ್ನೊಬ್ಬನು ಅದಕ್ಕೆ ಬಂಗಾರದ ತಗಡನ್ನು ಹೊದಿಸುತ್ತಾನೆ, ಮತ್ತು ಬೆಳ್ಳಿಹಾರವನ್ನು ಮಾಡಿಹಾಕುತ್ತಾನೆ.
|
20. ಅದರ ಪೀಠಕ್ಕಾಗಿ ವಿಶೇಷ ಜಾತಿಯ ಮರವನ್ನು ಆರಿಸುವನು. ಈ ಬಗೆಯ ಮರವು ಕೊಳೆತು ಹೋಗುವದಿಲ್ಲ. ಆ ಬಳಿಕ ಅವನು ಒಳ್ಳೆಯ ಬಡಗಿಯನ್ನು ನೇಮಿಸುವನು. ಆ ಬಡಗಿಯು ವಿಗ್ರಹ ನಿಲ್ಲಿಸಿದಾಗ ಅದು ಪಕ್ಕಕ್ಕೆ ವಾಲಿ ಬೀಳದಂತೆ ಮಾಡುವನು.
|
21. ಈ ವಿಷಯಗಳನ್ನೆಲ್ಲಾ ನೀವು ಸರಿಯಾಗಿ ತಿಳಿದಿದ್ದೀರಲ್ಲವೆ? ಇದರ ವಿಚಾರವಾಗಿ ನೀವು ಕೇಳಿರುವಿರಿ. ಎಷ್ಟೋ ವರುಷಗಳ ಹಿಂದೆ ಯಾರೋ ನಿಮಗೆ ಹೇಳಿದ್ದಿರಬಹುದು. ಖಂಡಿತವಾಗಿಯೂ ಭೂಮಿಯನ್ನು ಯಾರು ನಿರ್ಮಿಸಿದ್ದಾರೆಂದು ನೀವು ತಿಳಿದಿರುವಿರಿ.
|
22. ಯೆಹೋವನು ಸತ್ಯವಾದ ದೇವರು. ಆತನು ಉನ್ನತವಾದ ಆಕಾಶದಲ್ಲಿ ಕುಳಿತುಕೊಳ್ಳುವನು. ಆತನಿಗೆ ಹೋಲಿಸಿದರೆ ಜನರು ಮಿಡತೆಗಳಂತಿರುವರು. ಆತನು ಬಟ್ಟೆಯಂತೆ ಆಕಾಶಮಂಡಲವನ್ನು ಸುರುಳಿಯಾಗಿ ಸುತ್ತುವನು. ಆಕಾಶಮಂಡಲವನ್ನು ಆತನು ಎಳೆದು ಗುಡಾರದಂತೆ ಅಗಲಮಾಡಿ ಅದರಡಿಯಲ್ಲಿ ಕುಳಿತುಕೊಳ್ಳುವನು.
|
24. ಇವರು ನೆಲದಲ್ಲಿ ನೆಟ್ಟಿರುವ ಸಸಿಗಳಂತಿರುವರು. ಅವುಗಳ ಬೇರುಗಳು ನೆಲದೊಳಗೆ ಆಳವಾಗಿ ಹೋಗುವ ಮೊದಲೇ ದೇವರ ಉಸಿರಿಗೆ ಅವು ಬಾಡಿ ಸಾಯುವವು; ಗಾಳಿಯು ಭತ್ತದ ಒಣಹುಲ್ಲಿನಂತೆ ಅವುಗಳನ್ನು ಹಾರಿಸಿ ಬಿಡುವದು.
|
26. ಆಕಾಶಮಂಡಲದ ಕಡೆಗೆ ನೋಡಿರಿ! ಆ ನಕ್ಷತ್ರಗಳನ್ನೆಲ್ಲಾ ಮಾಡಿದವರು ಯಾರು? ಆಕಾಶದಲ್ಲಿರುವ ಆ “ಸೈನ್ಯಗಳನ್ನು” ಸಿದ್ಧ ಮಾಡಿದವರು ಯಾರು? ಪ್ರತಿಯೊಂದು ನಕ್ಷತ್ರವನ್ನು ಹೆಸರೆತ್ತಿ ಕರೆಯುವವರು ಯಾರು? ಆತನು ಬಲಿಷ್ಠನೂ ಪರಾಕ್ರಮಶಾಲಿಯೂ ಆಗಿದ್ದಾನೆ. ಆದುದರಿಂದ ಆ ನಕ್ಷತ್ರಗಳಲ್ಲಿ ಒಂದೂ ನಾಶವಾಗಲಿಲ್ಲ.”
|
27. ಯಾಕೋಬೇ, ಇದು ಸತ್ಯ! ಇಸ್ರೇಲೇ, ನೀನದನ್ನು ನಂಬಬೇಕು. ಹೀಗಿರಲು ನೀನು, “ಯೆಹೋವನು ನನ್ನ ನಡತೆಯನ್ನು ಗಮನಿಸುವದಿಲ್ಲ. ನನ್ನನ್ನು ಕಂಡುಹಿಡಿದು ಶಿಕ್ಷಿಸುವದಿಲ್ಲ” ಎಂದು ಹೇಳುವೆ.
|
28. ದೇವರಾದ ಯೆಹೋವನು ಜ್ಞಾನಿಯೆಂಬುದನ್ನು ನೀನು ಖಂಡಿತವಾಗಿಯೂ ಕೇಳಿರುವೆ. ಆತನು ತಿಳಿದಿರುವ ಪ್ರತಿಯೊಂದನ್ನೂ ಕಲಿತುಕೊಳ್ಳಲು ಜನರಿಗೆ ಸಾಧ್ಯವಿಲ್ಲ. ಆತನು ಆಯಾಸಗೊಳ್ಳುವದಿಲ್ಲ; ಆತನಿಗೆ ವಿಶ್ರಾಂತಿಯ ಅವಶ್ಯವಿಲ್ಲ. ಭೂಮಿಯಲ್ಲಿರುವ ದೂರ ಸ್ಥಳಗಳನ್ನೆಲ್ಲಾ ಮಾಡಿದವನು ಆತನೇ. ಆತನು ನಿರಂತರಕ್ಕೂ ಜೀವಿಸುವಾತನಾಗಿದ್ದಾನೆ.
|
31. ಆದರೆ ಯೆಹೋವನಲ್ಲಿ ಭರವಸೆಯಿಟ್ಟವರು ಮತ್ತೆ ಬಲಹೊಂದುವರು. ಹದ್ದು ಹೊಸಗರಿಗಳನ್ನು ಹೊಂದುವಂತೆ ಅವರು ಹೊಸ ಬಲವನ್ನು ಹೊಂದುವರು. ಅವರು ಓಡಾಡಿದರೂ ಆಯಾಸಗೊಳ್ಳುವದಿಲ್ಲ. ನಡೆದಾಡಿದರೂ ಬಳಲಿ ಹೋಗುವುದಿಲ್ಲ.
|