1. {ದೇವರು ತನ್ನ ವಿಶೇಷ ಸೇವಕನನ್ನು ಕರೆಯುತ್ತಾನೆ} [PS] ದೂರದೇಶದಲ್ಲಿರುವ ಜನರೇ, ನನ್ನ ಮಾತುಗಳಿಗೆ ಕಿವಿಗೊಡಿರಿ; [QBR2] ಭೂಮಿಯ ಮೇಲೆ ವಾಸಿಸುವ ಜನರೇ, ನನ್ನ ಮಾತುಗಳನ್ನು ಕೇಳಿರಿ. [QBR] ನಾನು ಹುಟ್ಟುವ ಮೊದಲೇ ಯೆಹೋವನು ನನ್ನನ್ನು ತನ್ನ ಸೇವೆಗಾಗಿ ಕರೆದನು. [QBR2] ನಾನು ತಾಯಿಯ ಗರ್ಭದಲ್ಲಿರುವಾಗಲೇ ಯೆಹೋವನು ನನ್ನ ಹೆಸರೆತ್ತಿ ಕರೆದನು. [QBR]
2. ತನ್ನ ಪರವಾಗಿ ಮಾತನಾಡಲು ಯೆಹೋವನು ನನ್ನನ್ನು ಉಪಯೋಗಿಸುತ್ತಾನೆ. [QBR] ಹದವಾದ ಕತ್ತಿಯಂತೆ ನನ್ನನ್ನು ಉಪಯೋಗಿಸುತ್ತಾನೆ. [QBR2] ಅದೇ ಸಮಯದಲ್ಲಿ ನನ್ನನ್ನು ತನ್ನ ಕೈಯೊಳಗೆ ಸುರಕ್ಷಿತವಾಗಿ ಇರಿಸುತ್ತಾನೆ. [QBR] ಯೆಹೋವನು ನನ್ನನ್ನು ಬಾಣದಂತೆ ಉಪಯೋಗಿಸುತ್ತಾನೆ, [QBR2] ಅದೇ ಸಮಯದಲ್ಲಿ ಬತ್ತಳಿಕೆಯಲ್ಲಿ ನನ್ನನ್ನು ಅಡಗಿಸಿಡುತ್ತಾನೆ.
3. ಯೆಹೋವನು ಹೀಗೆಂದನು: “ಇಸ್ರೇಲೇ, ನೀನೇ ನನ್ನ ಸೇವಕನು. [QBR2] ನಾನು ನಿನಗೆ ಆಶ್ಚರ್ಯವಾದ ಕಾರ್ಯಗಳನ್ನು ಮಾಡುವೆನು.”
4. ಆಗ ನಾನು “ನಾನು ಕಷ್ಟಪಟ್ಟು ಮಾಡಿದ ಕಾರ್ಯಗಳೆಲ್ಲವೂ ನಿಷ್ಪ್ರಯೋಜನವಾದವು. [QBR2] ನಾನು ನನ್ನನ್ನೇ ಸವೆಯಿಸಿದೆನು. ಆದರೆ ಪ್ರಯೋಜನವಾದದ್ದನ್ನು ನಾನು ಮಾಡಲಿಲ್ಲ. [QBR] ನಾನು ನನ್ನ ಶಕ್ತಿಯನ್ನೆಲ್ಲಾ ಉಪಯೋಗಿಸಿದರೂ ಏನೂ ಮಾಡಲಾಗಲಿಲ್ಲ. [QBR] ಆದ್ದರಿಂದ ನನಗೆ ಮಾಡಬೇಕಾದುದನ್ನು ಯೆಹೋವನೇ ತೀರ್ಮಾನಿಸಲಿ. [QBR2] ನನಗೆ ದೊರಕಬೇಕಾದ ಬಹುಮಾನವನ್ನು ದೇವರೇ ತೀರ್ಮಾನಿಸಲಿ” ಎಂದು ಹೇಳಿದೆನು. [QBR]
5. ನಾನು ಯೆಹೋವನ ಸೇವಕನಾಗಿರಬೇಕೆಂದು [QBR2] ಆತನು ನನ್ನನ್ನು ನನ್ನ ತಾಯಿಯ ಗರ್ಭದಲ್ಲಿಯೇ ರೂಪಿಸಿದನು. [QBR] ಇಸ್ರೇಲರನ್ನೂ ಯಾಕೋಬನನ್ನೂ ಆತನ ಬಳಿಗೆ ಮತ್ತೆ ಕರೆದುಕೊಂಡು ಬರಲು [QBR2] ಆತನು ನನ್ನನ್ನು ರೂಪಿಸಿದನು. [QBR] ಯೆಹೋವನು ನನ್ನನ್ನು ಸನ್ಮಾನಿಸುವನು. [QBR2] ನಾನು ಆತನಿಂದ ಬಲವನ್ನು ಹೊಂದುವೆನು.
6. ಯೆಹೋವನು ನನಗೆ ಹೇಳಿದ್ದೇನೆಂದರೆ: [QBR2] “ನನ್ನ ಸೇವಕನಾದ ಯಾಕೋಬನ ಕುಲಗಳನ್ನು ಮೇಲೆತ್ತಿ [QBR2] ಇಸ್ರೇಲಿನ ಅಳಿದುಳಿದವರನ್ನು ಪುನಃಸ್ಥಾಪಿಸುವೆ. [QBR] ಆದರೆ ನಿನಗೆ ಇನ್ನೊಂದು ಕೆಲಸವಿದೆ. ಅದು ಇದಕ್ಕಿಂತಲೂ ಮಹತ್ತಾದದ್ದು. [QBR2] ನಾನು ನಿನ್ನನ್ನು ಎಲ್ಲಾ ಜನಾಂಗಗಳಿಗೆ ಬೆಳಕನ್ನಾಗಿ ಮಾಡುವೆನು. [QBR2] ಲೋಕದ ಎಲ್ಲಾ ಜನರನ್ನು ರಕ್ಷಿಸಲು ನೀನು ನನ್ನ ಮಾರ್ಗವಾಗುವೆ.”
7. ಇಸ್ರೇಲಿನ ಪರಿಶುದ್ಧನೂ ವಿಮೋಚಕನೂ ಆದ ಯೆಹೋವನು ಇಸ್ರೇಲನ್ನು ಬಿಡಿಸುವನು. [QBR2] ಆತನು ಹೇಳುವುದೇನೆಂದರೆ, “ನನ್ನ ಸೇವಕನು ದೀನನಾಗಿದ್ದಾನೆ. ಆತನು ಅರಸರನ್ನು ಸೇವಿಸುವನು. [QBR2] ಆದರೆ ಜನರು ಆತನನ್ನು ದ್ವೇಷಿಸುವರು. [QBR] ಆದರೆ ರಾಜರುಗಳು ಅವನನ್ನು ನೋಡಿ ಎದ್ದುನಿಂತು ಗೌರವಿಸುವರು. [QBR2] ಶ್ರೇಷ್ಠ ನಾಯಕರು ಆತನ ಮುಂದೆ ಅಡ್ಡಬೀಳುವರು.” [PS] ಇದು ಇಸ್ರೇಲರ ಪರಿಶುದ್ಧನಾದ ಯೆಹೋವನ ಚಿತ್ತಕ್ಕನುಸಾರವಾಗಿದೆ. ಆತನು ಭರವಸೆಗೆ ಯೋಗ್ಯನಾಗಿದ್ದಾನೆ. ಆತನೇ ನಿನ್ನನ್ನು ಆರಿಸಿಕೊಂಡನು.
8. {ರಕ್ಷಣೆಯ ದಿನ} [PS] ಯೆಹೋವನು ಹೇಳುವುದೇನೆಂದರೆ, [QBR] “ನನ್ನ ದಯೆಯನ್ನು ತೋರಿಸಲು ಒಂದು ವಿಶೇಷ ಸಮಯವಿದೆ. [QBR2] ಆಗ ನಾನು ನಿನ್ನ ಪ್ರಾರ್ಥನೆಗೆ ಉತ್ತರ ಕೊಡುವೆನು. [QBR] ನಿನ್ನನ್ನು ರಕ್ಷಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನಗೆ ಸಹಾಯ ಮಾಡುವೆನು, [QBR2] ನಿನ್ನನ್ನು ಕಾಪಾಡುವೆನು. [QBR2] ಜನರೊಂದಿಗೆ ನಾನು ಒಡಂಬಡಿಕೆ ಮಾಡಿಕೊಂಡಿದ್ದೇನೆ ಎಂಬುದಕ್ಕೆ ನೀನೇ ಸಾಕ್ಷಿಯಾಗಿರುವೆ. [QBR] ದೇಶವು ಈಗ ನಾಶವಾಗಿದೆ, [QBR2] ಆದರೆ ಈ ಭೂಮಿಯು ಯಾರದಾಗಿತ್ತೋ ಅವರಿಗೆ ನೀನದನ್ನು ಹಿಂದಕ್ಕೆ ಕೊಡುವೆ. [QBR]
9. ಸೆರೆಮನೆಯಲ್ಲಿರುವವರಿಗೆ ನೀವು, [QBR2] ‘ಸೆರೆಮನೆಯಿಂದ ಹೊರಗೆ ಬನ್ನಿರಿ’ ಎಂದು ಹೇಳುವಿರಿ. [QBR] ಅಂಧಕಾರದಲ್ಲಿರುವವರಿಗೆ, [QBR2] ‘ಕತ್ತಲೆಯಿಂದ ಹೊರಗೆ ಬನ್ನಿರಿ’ ಎಂದು ಹೇಳುವಿರಿ. [QBR] ಪ್ರಯಾಣದಲ್ಲಿರುವವರು ತಿನ್ನುತ್ತಾ ಹೋಗುವರು. [QBR2] ಬೋಳುಬೆಟ್ಟಗಳಲ್ಲೂ ನಿಮಗೆ ಆಹಾರ ದೊರೆಯುವದು. [QBR]
10. ಜನರಿಗೆ ಹಸಿವೆಯಾಗದು, ಬಾಯಾರಿಕೆಯಾಗದು. [QBR2] ಸೂರ್ಯನ ಉರಿ ಬಿಸಿಲಾಗಲಿ ಗಾಳಿಯಾಗಲಿ ಅವರಿಗೆ ಹಾನಿಮಾಡದು. [QBR] ಯಾಕೆಂದರೆ ದೇವರು ತಾನೇ ಅವರನ್ನು ಸಂತೈಸುವನು, [QBR2] ಅವರನ್ನು ಬುಗ್ಗೆಗಳ ಬಳಿಗೆ ನಡಿಸುವನು. [QBR]
11. ನಾನು ನನ್ನ ಜನರಿಗೊಂದು ಮಾರ್ಗ ಸಿದ್ಧಮಾಡುವೆನು. [QBR2] ಬೆಟ್ಟವು ನೆಲದ ಮಟ್ಟಕ್ಕೆ ಇಳಿಯುವುದು; [QBR2] ತಗ್ಗು ಏರಿಸಲ್ಪಡುವದು.
12. “ಇಗೋ, ದೂರದೇಶಗಳಿಂದ ಜನರು ನನ್ನ ಬಳಿಗೆ ಬರುತ್ತಿದ್ದಾರೆ. [QBR2] ಉತ್ತರ, ಪಶ್ಚಿಮ ದಿಕ್ಕುಗಳಿಂದ ಜನರು ನನ್ನ ಬಳಿಗೆ ಬರುತ್ತಿದ್ದಾರೆ. [QBR2] ಈಜಿಪ್ಟಿನ ಅಸ್ವಾನಿನಿಂದ ಜನರು ನನ್ನ ಬಳಿಗೆ ಬರುತ್ತಿದ್ದಾರೆ.”
13. ಭೂಮ್ಯಾಕಾಶಗಳೇ, ಸಂತೋಷಪಡಿರಿ! [QBR2] ಪರ್ವತಗಳೇ, ಹರ್ಷಧ್ವನಿ ಮಾಡಿರಿ! [QBR] ಯಾಕೆಂದರೆ ಯೆಹೋವನು ತನ್ನ ಜನರನ್ನು ಸಂತೈಸುತ್ತಾನೆ. [QBR2] ಆತನು ಬಡವರಿಗೆ ಕರುಣೆ ತೋರಿಸುತ್ತಾನೆ.
14. ಆದರೆ ಈಗ ಚೀಯೋನ್ ಹೇಳುವುದೇನೆಂದರೆ, “ಯೆಹೋವನು ನನ್ನನ್ನು ಬಿಟ್ಟುಹೋಗಿದ್ದಾನೆ. [QBR2] ನನ್ನ ಒಡೆಯನು ನನ್ನನ್ನು ತೊರೆದಿದ್ದಾನೆ.”
15. ಆದರೆ ನಾನು ಹೇಳುವುದೇನೆಂದರೆ, [QBR] “ಒಬ್ಬ ತಾಯಿಯು ತನ್ನ ಮಗುವನ್ನು ಮರೆತಾಳೇ? [QBR2] ತಾನು ಹೆತ್ತ ಶಿಶುವನ್ನು ತಾಯಿಯು ಮರೆತುಬಿಡುವಳೇ? ಇಲ್ಲ. [QBR] ಒಂದುವೇಳೆ ತಾಯಿ ತನ್ನ ಮಕ್ಕಳನ್ನು ಮರೆತಾಳು, [QBR2] ಆದರೆ ಯೆಹೋವನಾದ ನಾನು ನಿಮ್ಮನ್ನು ಮರೆಯುವದಿಲ್ಲ. [QBR]
16. ನೋಡಿ, ನಿಮ್ಮ ಹೆಸರುಗಳನ್ನು ನಾನು ನನ್ನ ಅಂಗೈಗಳಲ್ಲಿ ಕೆತ್ತಿರುತ್ತೇನೆ. [QBR2] ನಿಮ್ಮನ್ನು ಯಾವಾಗಲೂ ಜ್ಞಾಪಿಸಿಕೊಳ್ಳುತ್ತೇನೆ. [QBR]
17. ನಿನ್ನ ಮಕ್ಕಳು ನಿನ್ನ ಬಳಿಗೆ ಹಿಂದಿರುಗಿ ಬರುವರು. [QBR2] ಜನರು ನಿಮ್ಮನ್ನು ಸೋಲಿಸಿದರೂ ಅವರು ನಿಮ್ಮನ್ನು ನಿಮ್ಮಷ್ಟಕ್ಕೆ ಬಿಡುವರು.” [QBR]
18. ಮೇಲಕ್ಕೆ ನೋಡು! ನಿನ್ನ ಸುತ್ತಲೂ ನೋಡು! [QBR2] ನಿನ್ನ ಮಕ್ಕಳೆಲ್ಲಾ ಒಟ್ಟಾಗಿ ಸೇರಿ ನಿನ್ನ ಬಳಿಗೆ ಬರುತ್ತಿದ್ದಾರೆ. [QBR] ಯೆಹೋವನು ಹೇಳುವುದೇನೆಂದರೆ, [QBR] “ನನ್ನ ಜೀವದಾಣೆ, [QBR2] ನಿನ್ನ ಮಕ್ಕಳು ನೀನು ಕೊರಳಲ್ಲಿ ಧರಿಸುವ ಹಾರದಂತಿರುವರು. [QBR2] ಮದುಮಗಳು ಧರಿಸುವ ಕಂಠಹಾರದಂತೆ ನಿನ್ನ ಮಕ್ಕಳಿರುವರು.
19. “ಈಗ ನೀನು ಸೋತವಳೂ ನಾಶವಾದವಳೂ ಆಗಿರುವಿ. [QBR2] ನಿನ್ನ ಭೂಮಿಯು ನಿಷ್ಪ್ರಯೋಜಕವಾಗಿದೆ. [QBR] ಆದರೆ ಸ್ವಲ್ಪ ಸಮಯದ ನಂತರ ನಿನ್ನ ದೇಶವು ಜನರಿಂದ ತುಂಬುವದು. [QBR2] ನಿನ್ನನ್ನು ನಾಶಮಾಡಿದವರು ಬಹುದೂರ ಹೋಗುವರು. [QBR]
20. ಕಳೆದುಹೋದ ನಿನ್ನ ಮಕ್ಕಳಿಗಾಗಿ ನೀನು ವ್ಯಸನವಾಗಿದ್ದಿ. [QBR2] ಆದರೆ ಆ ಮಕ್ಕಳು, ‘ಈ ದೇಶವು ನಮಗೆ ಸಾಲುವದಿಲ್ಲ. [QBR2] ಇದಕ್ಕಿಂತ ದೊಡ್ಡ ದೇಶ ನಮಗೆ ಕೊಡು’ ಎಂದು ಕೇಳುವರು. [QBR]
21. ಆಗ ನೀನು ನಿನ್ನ ಮನಸ್ಸಿನೊಳಗೆ, ‘ಈ ಮಕ್ಕಳನ್ನೆಲ್ಲಾ ನನಗೆ ಯಾರು ಕೊಟ್ಟರು? [QBR2] ಇದು ಸಂತಸದ ಸಂಗತಿ! ನಾನು ಒಬ್ಬಂಟಿಗಳಾಗಿ ದುಃಖಿಸುತ್ತಿದ್ದೆನು. [QBR] ನಾನು ಸೋಲಲ್ಪಟ್ಟವಳಾಗಿ ನನ್ನ ಜನರಿಂದ ದೂರವಿದ್ದೆನು. [QBR2] ಹೀಗಿರುವಾಗ ಈ ಮಕ್ಕಳನ್ನೆಲ್ಲಾ ಯಾರು ಕೊಟ್ಟರು? [QBR] ನಾನು ಒಬ್ಬಂಟಿಗಳಾಗಿ ಇದ್ದೆನಲ್ಲಾ! [QBR2] ಇಷ್ಟೆಲ್ಲಾ ಮಕ್ಕಳನ್ನು ನನಗೆ ಕೊಟ್ಟವರು ಯಾರು?’ ” ಎಂದು ಅಂದುಕೊಳ್ಳುವಿ.
22. ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, [QBR] “ನಾನು ಜನಾಂಗಗಳಿಗೆ ಕೈಬೀಸಿ ಸನ್ನೆ ಮಾಡುವೆನು. [QBR2] ಎಲ್ಲಾ ಜನರು ನೋಡುವಂತೆ ನಾನು ನನ್ನ ಧ್ವಜವನ್ನು ಎತ್ತುವೆನು. [QBR] ಆಗ ಅವರು ನಿನ್ನ ಮಕ್ಕಳನ್ನು ನಿನಗೆ ತಂದೊಪ್ಪಿಸುವರು. [QBR2] ಅವರು ನಿನ್ನ ಮಕ್ಕಳನ್ನು ಹೆಗಲ ಮೇಲೆ ಕುಳ್ಳಿರಿಸಿಕೊಂಡು ತರುವರು. [QBR2] ತಮ್ಮ ಕೈಗಳಲ್ಲಿ ಅವರನ್ನು ಎತ್ತಿಕೊಂಡು ಬರುವರು. [QBR]
23. ನಿನ್ನ ಮಕ್ಕಳಿಗೆ ಅರಸರು ಉಪಾಧ್ಯಾಯರಾಗಿರುವರು. [QBR2] ರಾಜಪುತ್ರಿಯರು ನಿನ್ನ ಮಕ್ಕಳನ್ನು ನೋಡಿಕೊಳ್ಳುವರು. [QBR] ಆ ಅರಸರೂ ರಾಜಪುತ್ರಿಯರೂ ನಿನಗೆ ಅಡ್ಡಬೀಳುವರು. [QBR2] ನಿನ್ನ ಕಾಲಿನ ಧೂಳಿಗೆ ಮುತ್ತು ಕೊಡುವರು. [QBR] ಆಗ ನಾನು ಯೆಹೋವನೆಂದು ನೀನು ತಿಳಿದುಕೊಳ್ಳುವಿ. [QBR2] ನನ್ನ ಮೇಲೆ ಭರವಸವಿಡುವವನು ಆಶಾಭಂಗಪಡನು ಎಂದು ಆಗ ನೀನು ತಿಳಿದುಕೊಳ್ಳುವಿ.”
24. ಯುದ್ಧವೀರನು ಯುದ್ಧದಲ್ಲಿ ಕೊಳ್ಳೆಹೊಡೆದದ್ದನ್ನು [QBR2] ನೀನು ಅವನಿಂದ ಕಿತ್ತುಕೊಳ್ಳಲಾರೆ. [QBR] ಬಲಿಷ್ಠ ಸೈನಿಕನು ಯುದ್ಧ ಕೈದಿಯನ್ನು ಕಾವಲು ಕಾಯುವಾಗ [QBR2] ಆ ಕೈದಿಯು ತಪ್ಪಿಸಿಕೊಳ್ಳಲಾರನು. [QBR]
25. ಆದರೆ ಯೆಹೋವನು ಹೇಳುವುದೇನೆಂದರೆ, [QBR] “ಕೈದಿಗಳು ತಪ್ಪಿಸಿಕೊಳ್ಳುವರು. [QBR2] ಬಲಿಷ್ಠ ಸೈನಿಕನಿಂದ ಯಾರೋ ಒಬ್ಬನು ಕೈದಿಯನ್ನು ಬಿಡಿಸಿಕೊಳ್ಳುವನು. ಇದು ಹೇಗೆ ಸಾಧ್ಯ? [QBR] ಹೇಗೆಂದರೆ, ನಾನೇ ನಿನ್ನ ಬದಲಾಗಿ ಯುದ್ಧ ಮಾಡುವೆನು; [QBR2] ನಿನ್ನ ಮಕ್ಕಳನ್ನು ರಕ್ಷಿಸುವೆನು. [QBR]
26. ನಿನ್ನನ್ನು ಹಿಂಸಿಸುವವರು [QBR2] ತಮ್ಮ ದೇಹದ ಮಾಂಸವನ್ನೇ ತಿನ್ನುವಂತೆ ಮಾಡುವೆನು; ದ್ರಾಕ್ಷಾರಸವನ್ನು ಕುಡಿಯುವಂತೆ [QBR2] ತಮ್ಮ ಸ್ವಂತ ರಕ್ತವನ್ನೇ ಕುಡಿಸಿ ಅಮಲೇರಿಸುವೆನು; [QBR] ಆಗ ಯೆಹೋವನೇ ನಿನ್ನನ್ನು ರಕ್ಷಿಸಿದನೆಂದು ಜನರೆಲ್ಲರೂ ತಿಳಿದುಕೊಳ್ಳುವರು. [QBR2] ಯಾಕೋಬ್ಯರ ಸರ್ವಶಕ್ತನಾದ ದೇವರು ನಿಮ್ಮನ್ನು ರಕ್ಷಿಸಿದನೆಂದು ಎಲ್ಲರೂ ತಿಳಿಯುವರು.” [PE]