ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಯೆಶಾಯ
1. ನೀನು ಆಕಾಶವನ್ನು ಹರಿದು ಕೆಳಗೆ ಭೂಮಿಗಿಳಿದು ಬರುವದಾದರೆ [QBR2] ಎಲ್ಲವೂ ಬದಲಾಗುವದು. [QBR2] ಪರ್ವತಗಳು ನಿನ್ನ ಎದುರು ಕರಗಿಹೋಗುವವು. [QBR]
2. ಒಣಎಲೆಯು ಸುಟ್ಟುಹೋಗುವಂತೆ ಪರ್ವತಗಳು ಸುಟ್ಟು ಭಸ್ಮವಾಗುವವು. [QBR2] ಬೆಂಕಿಯಲ್ಲಿ ನೀರು ಕುದಿಯುವಂತೆ ಪರ್ವತಗಳು ಕುದಿಯುವವು. [QBR] ಆಗ ನಿನ್ನ ಶತ್ರುಗಳು ನಿನ್ನ ವಿಷಯವಾಗಿ ತಿಳಿಯುವರು. [QBR2] ಆಗ ಜನಾಂಗದವರೆಲ್ಲಾ ನಿನ್ನನ್ನು ನೋಡಿ ಭಯದಿಂದ ನಡುಗುವರು. [QBR]
3. ಆದರೆ ನೀನು ಹೀಗೆ ಮಾಡುವುದು ನಿಜವಾಗಿಯೂ ನಮಗಿಷ್ಟವಿಲ್ಲ. [QBR2] ಪರ್ವತಗಳು ನಿನ್ನೆದುರು ಕರಗಿಹೋದರೂ [QBR]
4. ನಿನ್ನ ಜನರು ನಿನಗೆ ಕಿವಿಗೊಡಲಿಲ್ಲ. [QBR2] ನೀನು ಹೇಳಿದ್ದನ್ನು ನಿನ್ನ ಜನರು ನಿಜವಾಗಿಯೂ ಕೇಳಲಿಲ್ಲ. [QBR] ನಿನ್ನಂಥ ದೇವರನ್ನು ಯಾರೂ ನೋಡಿಲ್ಲ. ನಿನ್ನ ಹೊರತು ಬೇರೆ ಯಾರೂ ದೇವರಿಲ್ಲ. [QBR2] ಜನರು ತಾಳ್ಮೆಯಿಂದಿದ್ದು ನಿನ್ನ ಸಹಾಯಕ್ಕಾಗಿ ಕಾದಿದ್ದರೆ [QBR2] ನೀನು ಅವರಿಗಾಗಿ ಮಹಾಕಾರ್ಯಗಳನ್ನು ಮಾಡುವೆ.
5. ಒಳ್ಳೆಯದನ್ನು ಮಾಡುವದರಲ್ಲಿ ಸಂತೋಷಪಡುವವರೊಂದಿಗೆ ನೀನಿರುವೆ. [QBR2] ಅವರು ನಿನ್ನ ಮಾರ್ಗಗಳನ್ನು ನೆನಪಿನಲ್ಲಿಡುತ್ತಾರೆ. [QBR] ಇಗೋ, ಗತಿಸಿದ ದಿವಸಗಳಲ್ಲಿ ನಾವು ನಿನಗೆ ವಿರುದ್ಧವಾಗಿ ಪಾಪಮಾಡಿದೆವು. [QBR2] ಆದ್ದರಿಂದ ನೀನು ನಮ್ಮ ಮೇಲೆ ಕೋಪಗೊಂಡೆ. [QBR2] ಈಗ ನಾವು ಹೇಗೆ ರಕ್ಷಿಸಲ್ಪಡುವೆವು? [QBR]
6. ನಾವೆಲ್ಲರೂ ಪಾಪದಿಂದ ಮಲಿನರಾಗಿದ್ದೇವೆ. [QBR2] ನಮ್ಮ ಸುಕಾರ್ಯಗಳೆಲ್ಲಾ ಹಳೇ ಕೊಳಕು ಬಟ್ಟೆಯಂತಿವೆ. [QBR] ನಾವೆಲ್ಲಾ ಒಣಗಿಹೋದ ಎಲೆಗಳಂತಿದ್ದೇವೆ. [QBR2] ನಮ್ಮ ಪಾಪಗಳು ಬಿರುಗಾಳಿಯಂತೆ ನಮ್ಮನ್ನು ಬಡಿದುಕೊಂಡುಹೋಗಿವೆ. [QBR]
7. ನಿನ್ನ ಹೆಸರನ್ನು ಯಾರೂ ಕರೆಯುವದಿಲ್ಲ. [QBR2] ನಿನ್ನನ್ನು ಹಿಂಬಾಲಿಸಲು ಯಾರಿಗೂ ಇಷ್ಟವಿಲ್ಲ; [QBR] ಯಾಕೆಂದರೆ ನೀನು ನಮಗೆ ವಿಮುಖನಾಗಿರುವೆ [QBR2] ಮತ್ತು ನಮ್ಮನ್ನು ನಮ್ಮ ಪಾಪಗಳ ದೋಷಕ್ಕೆ ಒಪ್ಪಿಸಿಕೊಟ್ಟಿರುವಿ. [QBR]
8. ಯೆಹೋವನೇ, ನೀನು ನಮ್ಮ ತಂದೆಯಾಗಿರುವೆ. [QBR2] ನಾವು ಜೇಡಿಮಣ್ಣಿನಂತಿದ್ದೇವೆ. [QBR] ನೀನಾದರೋ ಕುಂಬಾರನಾಗಿರುವೆ. [QBR2] ನಿನ್ನ ಕೈಗಳು ನಮ್ಮನ್ನು ನಿರ್ಮಿಸಿದವು. [QBR]
9. ಯೆಹೋವನೇ, ನಮ್ಮ ಮೇಲೆ ಸಿಟ್ಟಿನಿಂದಲೇ ಇರಬೇಡ. [QBR2] ನಮ್ಮ ಪಾಪಗಳನ್ನು ನಿನ್ನ ನೆನಪಿನಲ್ಲಿಟ್ಟುಕೊಂಡೇ ಇರಬೇಡ. [QBR] ದಯಮಾಡಿ ನಮ್ಮ ಕಡೆಗೆ ನೋಡು. [QBR2] ನಾವು ನಿನ್ನ ಜನರೇ. [QBR]
10. ನಿನ್ನ ಪವಿತ್ರ ಪಟ್ಟಣಗಳು ಜನಶೂನ್ಯವಾಗಿವೆ. ಆ ಪಟ್ಟಣಗಳು ಈಗ ಮರುಭೂಮಿಯಂತಿವೆ. [QBR2] ಚೀಯೋನು ಈಗ ಮರುಭೂಮಿಯಾಗಿದೆ. [QBR2] ಜೆರುಸಲೇಮ್ ನಿರ್ಜನವಾಗಿದೆ. [QBR]
11. ನಮ್ಮ ಪವಿತ್ರ ಆಲಯವು ಬೆಂಕಿಯಿಂದ ಸುಡಲ್ಪಟ್ಟಿದೆ. [QBR2] ಆ ದೇವಾಲಯವು ನಮಗೆ ಅತ್ಯಂತ ಅಮೂಲ್ಯವಾದದ್ದಾಗಿದೆ. [QBR] ನಮ್ಮ ಪೂರ್ವಿಕರು ನಿನ್ನನ್ನು ಅಲ್ಲಿ ಆರಾಧಿಸಿದರು. [QBR2] ನಾವು ಹೊಂದಿದಂಥ ಎಲ್ಲಾ ಒಳ್ಳೆಯವುಗಳು ಈಗ ನಾಶವಾದವು. [QBR]
12. ನಮ್ಮ ಮೇಲೆ ನಿನ್ನ ಪ್ರೀತಿಯನ್ನು ತೋರಿಸಲು ಇವುಗಳು ಯಾವಾಗಲೂ ನಿನಗೆ ಅಡ್ಡಿಮಾಡುತ್ತವೋ? [QBR2] ನಮ್ಮೊಂದಿಗೆ ಮಾತನಾಡದೆ ಇನ್ನೂ ಇರುವಿಯೋ? [QBR2] ನಮ್ಮನ್ನು ಸದಾಕಾಲ ನೀನು ಶಿಕ್ಷಿಸುವಿಯೋ? [PE]

ಟಿಪ್ಪಣಿಗಳು

No Verse Added

ಒಟ್ಟು 66 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 64 / 66
ಯೆಶಾಯ 64:12
1 ನೀನು ಆಕಾಶವನ್ನು ಹರಿದು ಕೆಳಗೆ ಭೂಮಿಗಿಳಿದು ಬರುವದಾದರೆ ಎಲ್ಲವೂ ಬದಲಾಗುವದು. ಪರ್ವತಗಳು ನಿನ್ನ ಎದುರು ಕರಗಿಹೋಗುವವು. 2 ಒಣಎಲೆಯು ಸುಟ್ಟುಹೋಗುವಂತೆ ಪರ್ವತಗಳು ಸುಟ್ಟು ಭಸ್ಮವಾಗುವವು. ಬೆಂಕಿಯಲ್ಲಿ ನೀರು ಕುದಿಯುವಂತೆ ಪರ್ವತಗಳು ಕುದಿಯುವವು. ಆಗ ನಿನ್ನ ಶತ್ರುಗಳು ನಿನ್ನ ವಿಷಯವಾಗಿ ತಿಳಿಯುವರು. ಆಗ ಜನಾಂಗದವರೆಲ್ಲಾ ನಿನ್ನನ್ನು ನೋಡಿ ಭಯದಿಂದ ನಡುಗುವರು. 3 ಆದರೆ ನೀನು ಹೀಗೆ ಮಾಡುವುದು ನಿಜವಾಗಿಯೂ ನಮಗಿಷ್ಟವಿಲ್ಲ. ಪರ್ವತಗಳು ನಿನ್ನೆದುರು ಕರಗಿಹೋದರೂ 4 ನಿನ್ನ ಜನರು ನಿನಗೆ ಕಿವಿಗೊಡಲಿಲ್ಲ. ನೀನು ಹೇಳಿದ್ದನ್ನು ನಿನ್ನ ಜನರು ನಿಜವಾಗಿಯೂ ಕೇಳಲಿಲ್ಲ. ನಿನ್ನಂಥ ದೇವರನ್ನು ಯಾರೂ ನೋಡಿಲ್ಲ. ನಿನ್ನ ಹೊರತು ಬೇರೆ ಯಾರೂ ದೇವರಿಲ್ಲ. ಜನರು ತಾಳ್ಮೆಯಿಂದಿದ್ದು ನಿನ್ನ ಸಹಾಯಕ್ಕಾಗಿ ಕಾದಿದ್ದರೆ ನೀನು ಅವರಿಗಾಗಿ ಮಹಾಕಾರ್ಯಗಳನ್ನು ಮಾಡುವೆ. 5 ಒಳ್ಳೆಯದನ್ನು ಮಾಡುವದರಲ್ಲಿ ಸಂತೋಷಪಡುವವರೊಂದಿಗೆ ನೀನಿರುವೆ. ಅವರು ನಿನ್ನ ಮಾರ್ಗಗಳನ್ನು ನೆನಪಿನಲ್ಲಿಡುತ್ತಾರೆ. ಇಗೋ, ಗತಿಸಿದ ದಿವಸಗಳಲ್ಲಿ ನಾವು ನಿನಗೆ ವಿರುದ್ಧವಾಗಿ ಪಾಪಮಾಡಿದೆವು. ಆದ್ದರಿಂದ ನೀನು ನಮ್ಮ ಮೇಲೆ ಕೋಪಗೊಂಡೆ. ಈಗ ನಾವು ಹೇಗೆ ರಕ್ಷಿಸಲ್ಪಡುವೆವು? 6 ನಾವೆಲ್ಲರೂ ಪಾಪದಿಂದ ಮಲಿನರಾಗಿದ್ದೇವೆ. ನಮ್ಮ ಸುಕಾರ್ಯಗಳೆಲ್ಲಾ ಹಳೇ ಕೊಳಕು ಬಟ್ಟೆಯಂತಿವೆ. ನಾವೆಲ್ಲಾ ಒಣಗಿಹೋದ ಎಲೆಗಳಂತಿದ್ದೇವೆ. ನಮ್ಮ ಪಾಪಗಳು ಬಿರುಗಾಳಿಯಂತೆ ನಮ್ಮನ್ನು ಬಡಿದುಕೊಂಡುಹೋಗಿವೆ. 7 ನಿನ್ನ ಹೆಸರನ್ನು ಯಾರೂ ಕರೆಯುವದಿಲ್ಲ. ನಿನ್ನನ್ನು ಹಿಂಬಾಲಿಸಲು ಯಾರಿಗೂ ಇಷ್ಟವಿಲ್ಲ; ಯಾಕೆಂದರೆ ನೀನು ನಮಗೆ ವಿಮುಖನಾಗಿರುವೆ ಮತ್ತು ನಮ್ಮನ್ನು ನಮ್ಮ ಪಾಪಗಳ ದೋಷಕ್ಕೆ ಒಪ್ಪಿಸಿಕೊಟ್ಟಿರುವಿ. 8 ಯೆಹೋವನೇ, ನೀನು ನಮ್ಮ ತಂದೆಯಾಗಿರುವೆ. ನಾವು ಜೇಡಿಮಣ್ಣಿನಂತಿದ್ದೇವೆ. ನೀನಾದರೋ ಕುಂಬಾರನಾಗಿರುವೆ. ನಿನ್ನ ಕೈಗಳು ನಮ್ಮನ್ನು ನಿರ್ಮಿಸಿದವು. 9 ಯೆಹೋವನೇ, ನಮ್ಮ ಮೇಲೆ ಸಿಟ್ಟಿನಿಂದಲೇ ಇರಬೇಡ. ನಮ್ಮ ಪಾಪಗಳನ್ನು ನಿನ್ನ ನೆನಪಿನಲ್ಲಿಟ್ಟುಕೊಂಡೇ ಇರಬೇಡ. ದಯಮಾಡಿ ನಮ್ಮ ಕಡೆಗೆ ನೋಡು. ನಾವು ನಿನ್ನ ಜನರೇ. 10 ನಿನ್ನ ಪವಿತ್ರ ಪಟ್ಟಣಗಳು ಜನಶೂನ್ಯವಾಗಿವೆ. ಆ ಪಟ್ಟಣಗಳು ಈಗ ಮರುಭೂಮಿಯಂತಿವೆ. ಚೀಯೋನು ಈಗ ಮರುಭೂಮಿಯಾಗಿದೆ. ಜೆರುಸಲೇಮ್ ನಿರ್ಜನವಾಗಿದೆ. 11 ನಮ್ಮ ಪವಿತ್ರ ಆಲಯವು ಬೆಂಕಿಯಿಂದ ಸುಡಲ್ಪಟ್ಟಿದೆ. ಆ ದೇವಾಲಯವು ನಮಗೆ ಅತ್ಯಂತ ಅಮೂಲ್ಯವಾದದ್ದಾಗಿದೆ. ನಮ್ಮ ಪೂರ್ವಿಕರು ನಿನ್ನನ್ನು ಅಲ್ಲಿ ಆರಾಧಿಸಿದರು. ನಾವು ಹೊಂದಿದಂಥ ಎಲ್ಲಾ ಒಳ್ಳೆಯವುಗಳು ಈಗ ನಾಶವಾದವು. 12 ನಮ್ಮ ಮೇಲೆ ನಿನ್ನ ಪ್ರೀತಿಯನ್ನು ತೋರಿಸಲು ಇವುಗಳು ಯಾವಾಗಲೂ ನಿನಗೆ ಅಡ್ಡಿಮಾಡುತ್ತವೋ? ನಮ್ಮೊಂದಿಗೆ ಮಾತನಾಡದೆ ಇನ್ನೂ ಇರುವಿಯೋ? ನಮ್ಮನ್ನು ಸದಾಕಾಲ ನೀನು ಶಿಕ್ಷಿಸುವಿಯೋ?
ಒಟ್ಟು 66 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 64 / 66
Common Bible Languages
West Indian Languages
×

Alert

×

kannada Letters Keypad References