1. {ಒಂದು ಹೊಸ ದಿನ ಬರುವುದು} [PS] ಹಿಂದಿನ ಕಾಲದಲ್ಲಿ, ಜೆಬುಲೂನ್ ಮತ್ತು ನಫ್ತಾಲಿ ಪ್ರಾಂತ್ಯಗಳು ವಿಶೇಷವಾದವುಗಳಲ್ಲ ಎಂದು ಜನರು ತಿಳಿದುಕೊಂಡಿದ್ದರು. ಆದರೆ ಆಮೇಲೆ ಸಮುದ್ರಕ್ಕೆ ಸಮೀಪದಲ್ಲಿರುವ ಪ್ರಾಂತ್ಯ, ಜೋರ್ಡನಿನ ಆಚೆಗಿರುವ ಸ್ಥಳ ಮತ್ತು ಯೆಹೂದ್ಯರಲ್ಲದವರು ವಾಸಿಸುವ ಗಲಿಲಾಯ ಪ್ರಾಂತ್ಯ ಇವುಗಳನ್ನು ಮುಂದೆ ದೇವರು ಮಹಾದೇಶವನ್ನಾಗಿ ಮಾಡುವನು.
2. ಈಗ ಅವರು ಕತ್ತಲಲ್ಲಿ ವಾಸಿಸುವರು. ಆದರೆ ಒಂದು ದೊಡ್ಡ ಬೆಳಕನ್ನು ಅವರು ನೋಡುವರು. ಅವರಿರುವ ಸ್ಥಳವು ಮರಣದ ಸ್ಥಳದಂತೆ ಅಂಧಕಾರದಿಂದ ತುಂಬಿದೆ. ಆದರೆ ದೊಡ್ಡ ಬೆಳಕು ಅವರ ಮೇಲೆ ಪ್ರಕಾಶಿಸುವದು. [PE][PS]
3. ದೇವರೇ, ಆ ದೇಶವನ್ನು ನೀನು ಅಭಿವೃದ್ಧಿಪಡಿಸುವೆ. ನೀನು ಆ ಜನರನ್ನು ಸಂತೋಷಪಡಿಸುವೆ. ಅವರು ತಮ್ಮ ಸಂತಸವನ್ನು ವ್ಯಕ್ತಪಡಿಸುವರು. ಅದು ಸುಗ್ಗಿಕಾಲದಲ್ಲಿರುವ ಸಂತಸದಂತೆಯೂ ಯುದ್ಧದಲ್ಲಿ ಗಳಿಸಿದ ಕೊಳ್ಳೆಯ ಪಾಲು ದೊರೆತಾಗ ಉಂಟಾಗುವ ಸಂತಸದಂತೆಯೂ ಇರುವುದು.
4. ಯಾಕೆಂದರೆ ಅವರ ಮೇಲಿದ್ದ ಭಾರವನ್ನು ನೀನು ತೆಗೆದುಬಿಡುವೆ. ಅವರ ಬೆನ್ನಿನ ಮೇಲಿದ್ದ ಭಾರವಾದ ನೊಗವನ್ನು ನೀನು ತೆಗೆದುಹಾಕುವೆ; ವೈರಿಗಳು ನಿನ್ನ ಜನರನ್ನು ಶಿಕ್ಷಿಸಲು ಉಪಯೋಗಿಸುವ ಬೆತ್ತವನ್ನು ತೆಗೆದುಬಿಡುವೆ. ಆ ಸಮಯವು ನೀನು ಮಿದ್ಯಾನರನ್ನು ಸೋಲಿಸಿದ ಸಮಯದಂತಿರುವದು. [PE][PS]
5. ರಣರಂಗದಲ್ಲಿ ನಡೆಯುವ ಪ್ರತಿಯೊಂದು ಪಾದರಕ್ಷೆಯನ್ನೂ ನಾಶಮಾಡಲಾಗುವುದು; ರಕ್ತದ ಕಲೆಯಿರುವ ಪ್ರತಿಯೊಂದು ಸಮವಸ್ತ್ರವನ್ನೂ ನಾಶಮಾಡಲಾಗುವದು. ಅವುಗಳೆಲ್ಲವನ್ನು ಬೆಂಕಿಯಲ್ಲಿ ಹಾಕಲಾಗುವದು.
6. ವಿಶೇಷವಾದ ಗಂಡುಮಗುವು ಜನಿಸಿದಾಗ ಇವೆಲ್ಲಾ ಸಂಭವಿಸುವದು. ದೇವರು ನಮಗೊಬ್ಬ ವರದ ಮಗನನ್ನು ಕೊಡುವನು. ಈ ವರದ ಮಗನು ಜನರನ್ನು ನಡಿಸುವದಕ್ಕೆ ಜವಾಬ್ದಾರಿಯನ್ನು ಹೊಂದಿದವನಾಗುವನು. ಆತನ ಹೆಸರು “ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭುವು” ಎಂಬುದಾಗಿ ಇರುವದು.
7. ಆತನ ರಾಜ್ಯದಲ್ಲಿ ಸಮಾಧಾನವೂ ಅಧಿಕಾರವೂ ಇರುತ್ತದೆ. ದಾವೀದನ ಕುಟುಂಬದವನ ರಾಜ್ಯದಲ್ಲಿ ಅವು ಸ್ಥಿರವಾಗಿರುತ್ತವೆ. ಈ ಅರಸನು ನ್ಯಾಯನೀತಿಗಳಿಂದ ನಿತ್ಯಕಾಲಕ್ಕೂ ರಾಜ್ಯವಾಳುವನು. ಸರ್ವಶಕ್ತನಾದ ಯೆಹೋವನಿಗೆ ತನ್ನ ಜನರ ಮೇಲೆ ಬಲವಾದ ಪ್ರೀತಿಯಿದೆ. ಆತನ ಈ ಕಾರ್ಯಗಳನ್ನೆಲ್ಲಾ ಮಾಡಲು ಬಲವಾದ ಪ್ರೀತಿಯೇ ಕಾರಣ. [PS]
8. {ದೇವರು ಇಸ್ರೇಲನ್ನು ಶಿಕ್ಷಿಸುವನು} [PS] ಯಾಕೋಬನ ಜನರಿಗೆ, ನನ್ನ ದೇವರಾದ ಯೆಹೋವನು ಆಜ್ಞೆಯನ್ನು ಕೊಟ್ಟಿದ್ದಾನೆ. ಇಸ್ರೇಲರಿಗೆ ವಿರುದ್ಧವಾಗಿರುವ ಈ ಆಜ್ಞೆಯು ನೆರವೇರಲ್ಪಡುವುದು.
9. ಆಗ ಎಫ್ರಾಯೀಮಿನಲ್ಲಿರುವ (ಇಸ್ರೇಲಿನಲ್ಲಿರುವ) ಪ್ರತಿಯೊಬ್ಬನೂ, ಸಮಾರ್ಯದ ನಾಯಕರೂ, ದೇವರು ತಮ್ಮನ್ನು ಶಿಕ್ಷಿಸಿದ್ದಾನೆಂದು ತಿಳಿದುಕೊಳ್ಳುವರು. [PE][PS] ಅವರು ಬಹು ಗರ್ವಿಷ್ಠರಾಗಿ ಹೆಚ್ಚಳಪಡುತ್ತಿದ್ದಾರೆ. ಅವರು ಹೇಳುವುದೇನೆಂದರೆ,
10. “ಈ ಇಟ್ಟಿಗೆಗಳು ಕೆಳಗೆ ಬಿದ್ದರೂ ನಾವು ಅವುಗಳನ್ನು ಮತ್ತೆ ಕಟ್ಟುತ್ತೇವೆ. ನಾವು ಅದನ್ನು ಬಲವಾದ ಕಲ್ಲುಗಳಿಂದ ಕಟ್ಟುವೆವು. ಈ ಸಣ್ಣಸಣ್ಣ ಮರಗಳು ಕಡಿದುಹಾಕಲ್ಪಟ್ಟರೂ ಆ ಸ್ಥಳದಲ್ಲಿ ನಾವು ದೇವದಾರು ಮರಗಳನ್ನು ನೆಡುವೆವು. ಆ ದೇವದಾರು ಮರಗಳು ಎತ್ತರವಾಗಿಯೂ ಬಲವಾಗಿಯೂ ಇರುತ್ತವೆ.” [PE][PS]
11. ಹೀಗೆ ಯೆಹೋವನು ಇಸ್ರೇಲಿಗೆ ವಿರುದ್ಧವಾಗಿ ಯುದ್ಧ ಮಾಡುವವರನ್ನು ಕಂಡುಹಿಡಿಯುವನು. ಯೆಹೋವನು ರೆಚೀನನ ವೈರಿಗಳನ್ನು ಅವರಿಗೆ ವಿರುದ್ಧವಾಗಿ ಎಬ್ಬಿಸುವನು.
12. ಯೆಹೋವನು ಪೂರ್ವದಿಂದ ಅರಾಮ್ಯರನ್ನೂ ಪಶ್ಚಿಮದಿಂದ ಫಿಲಿಷ್ಟಿಯರನ್ನೂ ಕರೆತರುವನು. ಆ ಶತ್ರುಗಳು ಇಸ್ರೇಲರನ್ನು ಅವರ ಸೈನ್ಯದೊಂದಿಗೆ ಸೋಲಿಸಿಬಿಡುವರು. ಆದರೆ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡಿರುವುದರಿಂದ ಅವರನ್ನು ಶಿಕ್ಷಿಸಲು ಇನ್ನೂ ಸಿದ್ಧನಾಗಿರುವನು. [PE][PS]
13. ದೇವರು ಜನರನ್ನು ಶಿಕ್ಷಿಸಿದರೂ ಅವರು ಪಾಪ ಮಾಡುವದನ್ನು ನಿಲ್ಲಿಸುವದಿಲ್ಲ. ಅವರು ಆತನ ಬಳಿಗೆ ಹಿಂದಿರುಗಿಬರುವದಿಲ್ಲ. ಸರ್ವಶಕ್ತನಾದ ಯೆಹೋವನನ್ನು ಅವರು ಹಿಂಬಾಲಿಸುವುದಿಲ್ಲ.
14. ಆದ್ದರಿಂದ ಯೆಹೋವನು ಇಸ್ರೇಲರ ತಲೆಯನ್ನೂ ಬಾಲವನ್ನೂ ಕತ್ತರಿಸುವನು. ಒಂದೇ ದಿವಸದಲ್ಲಿ ಯೆಹೋವನು ಮರದ ಕಾಂಡವನ್ನೂ ಕೊಂಬೆಗಳನ್ನೂ ಕತ್ತರಿಸಿಬಿಡುವನು.
15. ತಲೆ ಅಂದರೆ ಹಿರಿಯರು ಮತ್ತು ಪ್ರಮುಖರು. ಬಾಲವೆಂದರೆ ಸುಳ್ಳುಪ್ರವಾದಿಗಳು. [PE][PS]
16. ಜನರಿಗೆ ಮಾರ್ಗದರ್ಶನ ಮಾಡುವ ನಾಯಕರು ಜನರನ್ನು ತಪ್ಪುದಾರಿಯಲ್ಲಿ ನಡಿಸುತ್ತಿದ್ದಾರೆ. ಅವರನ್ನು ಹಿಂಬಾಲಿಸುವ ಜನರು ನಾಶವಾಗುವರು.
17. ಜನರೆಲ್ಲರೂ ದುಷ್ಟರಾಗಿದ್ದಾರೆ. ಆದ್ದರಿಂದ ಯೆಹೋವನು ಯುವಕರಲ್ಲಿ ಸಂತೋಷಿಸುವದಿಲ್ಲ. ಅವರ ವಿಧವೆಯರಿಗೆ ಮತ್ತು ಅನಾಥರಿಗೆ ದೇವರು ದಯೆ ತೋರಿಸುವುದಿಲ್ಲ; ಯಾಕೆಂದರೆ ಎಲ್ಲಾ ಜನರು ದುಷ್ಟರಾಗಿದ್ದಾರೆ. ಅವರು ದೇವರಿಗೆ ವಿರುದ್ಧವಾಗಿ ನಡೆಯುತ್ತಾರೆ. ಅವರು ಸುಳ್ಳಾಡುತ್ತಾರೆ. [PE][PS] ಆದ್ದರಿಂದ ದೇವರು ಅವರ ಮೇಲೆ ಕೋಪದಿಂದಲೇ ಇರುವನು; ಅವರನ್ನು ದಂಡಿಸುತ್ತಲೇ ಇರುವನು. [PE][PS]
18. ದುಷ್ಟತನವು ಒಂದು ಚಿಕ್ಕ ಬೆಂಕಿಯಂತಿದೆ. ಮೊಟ್ಟ ಮೊದಲು ಬೆಂಕಿಯು ಹಣಜಿಗಳನ್ನು ಮತ್ತು ಮುಳ್ಳುಗಿಡಗಳನ್ನು ಸುಡುವುದು. ಅನಂತರ ಬೆಂಕಿಯು ಕಾಡಿನ ದೊಡ್ಡ ಪೊದೆಗಳನ್ನು ಸುಡುವುದು. ಕೊನೆಗದು ದೊಡ್ಡ ಗಾತ್ರದ ಬೆಂಕಿಯಾಗಿ ಎಲ್ಲವನ್ನೂ ಸುಟ್ಟುಬಿಟ್ಟು ಎಲ್ಲವೂ ಹೊಗೆಯಾಗಿ ಪರಿಣಮಿಸುವದು. [PE][PS]
19. ಸರ್ವಶಕ್ತನಾದ ಯೆಹೋವನು ಕೋಪಗೊಂಡಿರುವುದರಿಂದ ದೇಶವೆಲ್ಲಾ ಸುಟ್ಟುಹೋಗುವದು. ಆ ಬೆಂಕಿಯಲ್ಲಿ ಜನರೆಲ್ಲಾ ಸುಟ್ಟುಹೋಗುವರು. ಯಾರೂ ತನ್ನ ಸಹೋದರರನ್ನು ರಕ್ಷಿಸಲು ಪ್ರಯತ್ನಿಸುವದಿಲ್ಲ.
20. ಜನರು ತಮ್ಮ ಬಲಗಡೆಯಲ್ಲಿರುವದನ್ನು ಕಿತ್ತುಕೊಳ್ಳುವರು. ಆದರೆ ಅದು ಅವರ ಹಸಿವೆಯನ್ನು ನೀಗುವುದಿಲ್ಲ. ಜನರು ಎಡಬದಿಯಲ್ಲಿರುವದನ್ನು ತಿನ್ನುವರು; ಆದರೆ ಅವರ ಹೊಟ್ಟೆತುಂಬುವದಿಲ್ಲ. ಆ ಬಳಿಕ ಪ್ರತಿಯೊಬ್ಬನು ತನ್ನ ಶರೀರವನ್ನೇ ತಿನ್ನಲು ಪ್ರಾರಂಭಿಸುವನು.
21. ಇದರರ್ಥವೇನೆಂದರೆ ಮನಸ್ಸೆಯು ಎಫ್ರಾಯೀಮನೊಡನೆ ಯುದ್ಧ ಮಾಡುವನು ಮತ್ತು ಎಫ್ರಾಯೀಮನು ಮನಸ್ಸೆಯೊಂದಿಗೆ ಯುದ್ಧಮಾಡುವನು. ಆಮೇಲೆ ಅವರಿಬ್ಬರೂ ಸೇರಿ ಯೆಹೂದದೊಂದಿಗೆ ಯುದ್ಧ ಮಾಡುವರು. [PE][PS] ಯೆಹೋವನು ಇಸ್ರೇಲರ ಮೇಲೆ ಇನ್ನೂ ಕೋಪದಿಂದಿದ್ದಾನೆ; ತನ್ನ ಜನರನ್ನು ಇನ್ನೂ ಶಿಕ್ಷಿಸಲು ಸಿದ್ಧನಾಗಿದ್ದಾನೆ. [PE]