1. ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಯೆಹೂದದ ಜನರಿಗಾಗಿ ಪ್ರಾರ್ಥಿಸಿ, ಬೇಡಿಕೊಳ್ಳಲು ಮೋಶೆಯೂ ಸಮುವೇಲನೂ ಇದ್ದಿದ್ದರೂ ನಾನು ಈ ಜನರ ಬಗ್ಗೆ ಮರುಕಪಡುತ್ತಿರಲಿಲ್ಲ. ಯೆಹೂದದ ಜನರನ್ನು ನನ್ನಿಂದ ದೂರ ಕಳುಹಿಸು. ಅವರಿಗೆ ಹೋಗಲು ಹೇಳು.
2. ‘ನಾವು ಎಲ್ಲಿಗೆ ಹೋಗಬೇಕು’ ಎಂದು ಅವರು ಕೇಳಬಹುದು. ಯೆಹೋವನು ಹೀಗೆ ಹೇಳಿದ್ದಾನೆ ಎಂದು ನೀನು ಅವರಿಗೆ ಹೇಳು. “ ‘ಕೆಲವು ಜನರು ಮರಣಹೊಂದಬೇಕೆಂದು ನಾನು ಗೊತ್ತುಮಾಡಿದ್ದೇನೆ. [QBR2] ಅವರು ಮರಣಹೊಂದುತ್ತಾರೆ. [QBR] ಕೆಲವು ಜನರು ಖಡ್ಗಗಳಿಂದ ಕೊಲ್ಲಲ್ಪಡಬೇಕೆಂದು ನಾನು ಗೊತ್ತುಮಾಡಿದ್ದೇನೆ. [QBR2] ಅವರು ಖಡ್ಗಗಳಿಗೆ ಬಲಿಯಾಗುತ್ತಾರೆ. [QBR] ಕೆಲವು ಜನರು ಹೊಟ್ಟೆಗೆ ಅನ್ನವಿಲ್ಲದೆ ಸಾಯಬೇಕು ಎಂದು ನಾನು ಗೊತ್ತುಮಾಡಿದ್ದೇನೆ. [QBR2] ಅವರು ಹಸಿವಿನಿಂದ ಸಾಯುತ್ತಾರೆ. [QBR] ಕೆಲವು ಜನರನ್ನು ಶತ್ರುಗಳು ಸೆರೆಹಿಡಿದು ಪರದೇಶಕ್ಕೆ ತೆಗೆದುಕೊಂಡು ಹೋಗಲಿ ಎಂದು ಗೊತ್ತುಮಾಡಿದ್ದೇನೆ. [QBR2] ಅವರು ಪರದೇಶದಲ್ಲಿ ಸೆರೆಯಾಳುಗಳಾಗಿ ಇರುವರು. [QBR]
3. ನಾನು ಅವರ ವಿರುದ್ಧ ನಾಲ್ಕು ರೀತಿಯ ವಿನಾಶಕರನ್ನು ಕಳುಹಿಸುತ್ತೇನೆ.’ [QBR] ಇದು ಯೆಹೋವನ ನುಡಿ. [QBR] ‘ಅವರನ್ನು ಕೊಲೆಮಾಡಲು ಖಡ್ಗಧಾರಿಗಳಾದ ಶತ್ರುಗಳನ್ನು ಕಳುಹಿಸುತ್ತೇನೆ. [QBR] ಅವರ ದೇಹಗಳನ್ನು ಎಳೆದುಕೊಂಡು ಹೋಗುವುದಕ್ಕಾಗಿ ನಾಯಿಗಳನ್ನು ಕಳುಹಿಸುತ್ತೇನೆ. [QBR] ಅವರ ದೇಹಗಳನ್ನು ತಿನ್ನಲು ಮತ್ತು ನಾಶಮಾಡಲು [QBR2] ಗಾಳಿಯಲ್ಲಿ ಹಾರಾಡುವ ಪಕ್ಷಿಗಳನ್ನೂ ಕಾಡುಪ್ರಾಣಿಗಳನ್ನೂ ಕಳುಹಿಸುತ್ತೇನೆ. [QBR]
4. ಯೆಹೂದದ ಜನರನ್ನು ಭೂಲೋಕದ ಎಲ್ಲಾ ಜನರಿಗೆ [QBR2] ಒಂದು ಭಯಾನಕವಾದ ಉದಾಹರಣೆಯಾಗುವಂತೆ ಮಾಡುತ್ತೇನೆ. [QBR] ಮನಸ್ಸೆಯು ಜೆರುಸಲೇಮಿನಲ್ಲಿ ಮಾಡಿದ ಪಾಪಕೃತ್ಯಗಳ ಫಲವಾಗಿ [QBR2] ನಾನು ಯೆಹೂದದಲ್ಲಿ ಹೀಗೆ ಮಾಡುತ್ತೇನೆ. [QBR2] ಮನಸ್ಸೆಯು ರಾಜನಾದ ಹಿಜ್ಕೀಯನ ಮಗನಾಗಿದ್ದನು. [QBR2] ಮನಸ್ಸೆಯು ಯೆಹೂದದ ರಾಜನಾಗಿದ್ದನು.’
5. “ಜೆರುಸಲೇಮ್ ನಗರವೇ, ನಿನಗಾಗಿ ಯಾರೂ ವ್ಯಥೆಪಡುವದಿಲ್ಲ. [QBR2] ನಿನಗಾಗಿ ದುಃಖಪಡುವುದಿಲ್ಲ ಮತ್ತು ಆಳುವುದಿಲ್ಲ. [QBR2] ಯಾರೂ ತಮ್ಮ ದಿನನಿತ್ಯದ ಕೆಲಸಕಾರ್ಯಗಳನ್ನು ಬಿಟ್ಟು ನಿನ್ನ ಯೋಗಕ್ಷೇಮವನ್ನು ವಿಚಾರಿಸಲು ಬರುವುದಿಲ್ಲ. [QBR]
6. ಜೆರುಸಲೇಮೇ, ನೀನು ನನ್ನನ್ನು ತ್ಯಜಿಸಿದೆ” [QBR] ಇದು ಯೆಹೋವನ ನುಡಿ. [QBR] “ಮತ್ತೆಮತ್ತೆ ನೀನು ನನ್ನನ್ನು ತ್ಯಜಿಸಿದೆ. [QBR2] ಆದ್ದರಿಂದ ನಾನು ನಿನ್ನನ್ನು ದಂಡಿಸುತ್ತೇನೆ ಮತ್ತು ನಾಶಮಾಡುತ್ತೇನೆ. [QBR2] ನಿನಗೆ ಸಲ್ಲಬೇಕಾದ ಶಿಕ್ಷೆಯನ್ನು ಪುನಃ ತಡೆಹಿಡಿದು ನಾನು ದಣಿದಿದ್ದೇನೆ. [QBR]
7. ಯೆಹೂದದ ಜನರನ್ನು ನಾನು ಕವೆಗೋಲಿನಿಂದ ವಿಂಗಡಿಸಿದ [QBR2] ದೇಶದ ಎಲ್ಲಾ ನಗರಗಳ ದ್ವಾರದಲ್ಲಿ ಚದರಿಸುತ್ತೇನೆ. [QBR] ನನ್ನ ಜನರು ಬದಲಾಗಲಿಲ್ಲ. [QBR2] ನಾನು ಅವರನ್ನು ನಾಶಮಾಡುತ್ತೇನೆ. [QBR2] ನಾನು ಅವರ ಮಕ್ಕಳನ್ನು ಕಸಿದುಕೊಳ್ಳುತ್ತೇನೆ. [QBR]
8. ಅನೇಕ ಹೆಂಗಸರು ತಮ್ಮ ಗಂಡಂದಿರನ್ನು ಕಳೆದುಕೊಳ್ಳುವರು. [QBR2] ಸಮುದ್ರದಡದಲ್ಲಿದ್ದ ಮರಳು ಕಣಗಳಿಗಿಂತ ವಿಧವೆಯರ ಸಂಖ್ಯೆ ಹೆಚ್ಚಾಗುವುದು. [QBR] ಮಧ್ಯಾಹ್ನದಲ್ಲಿಯೇ ನಾನು ಬಾತುಕನನ್ನು ತರುವೆನು. [QBR2] ಆ ಘಾತುಕನು ಯೆಹೂದದ ತಾಯಂದಿರ ಮೇಲೆರಗುವನು. [QBR] ನಾನು ಯೆಹೂದದ ಜನರಿಗೆ ನೋವನ್ನು ಮತ್ತು ಭಯವನ್ನು ತರುವೆನು; [QBR2] ಅತೀ ಶೀಘ್ರದಲ್ಲಿಯೇ ಹೀಗಾಗುವಂತೆ ಮಾಡುವೆನು. [QBR]
9. ಶತ್ರುಗಳು ಖಡ್ಗಧಾರಿಗಳಾಗಿ ಬಂದು ಜನರ ಮೇಲೆರಗಿ ಕೊಲೆಮಾಡುವರು. [QBR2] ಯೆಹೂದದಲ್ಲಿ ಜೀವಂತ ಉಳಿದವರನ್ನು ಅವರು ವಧಿಸುವರು. [QBR] ಒಬ್ಬ ಸ್ತ್ರೀಗೆ ಏಳು ಜನ ಮಕ್ಕಳಿದ್ದರೂ ಅವರೆಲ್ಲ ಸತ್ತುಹೋಗುವರು. [QBR2] ಅವಳು ಅತ್ತೂಅತ್ತೂ ಬಳಲಿ ಉಸಿರಾಡದಂತಾಗುವಳು. [QBR] ಅವಳು ಕಳವಳಪಡುವಳು ಮತ್ತು ಗಾಬರಿಗೊಳ್ಳುವಳು. [QBR2] ಪ್ರಕಾಶಮಯವಾದ ದಿನವು ದುಃಖದ ನಿಮಿತ್ತ ಅವಳಿಗೆ ಕತ್ತಲಾಗುವುದು.”
10. {ಯೆರೆಮೀಯನು ಪುನಃ ದೇವರಲ್ಲಿ ದೂರುತ್ತಾನೆ} [PS] ನನ್ನ ತಾಯೀ, ನೀನು ಜನ್ಮಕೊಟ್ಟಿದ್ದಕ್ಕಾಗಿ [QBR2] ನನಗೆ ದುಃಖವಾಗುತ್ತದೆ. [QBR] ಯೆರೆಮೀಯನಾದ ನಾನು ಇಡೀ ದೇಶದ ಜನರ ವಿರುದ್ಧವಾಗಿ [QBR2] ವಾದಿಸುತ್ತಾ ನಿಂದಿಸುತ್ತಾ ಇರುವೆ. [QBR] ನಾನು ಯಾರಿಗೂ ಸಾಲವನ್ನು ಕೊಟ್ಟಿಲ್ಲ; ಸಾಲವನ್ನು ತೆಗೆದುಕೊಂಡಿಲ್ಲ. [QBR2] ಆದರೆ ಪ್ರತಿಯೊಬ್ಬರು ನನ್ನನ್ನು ಶಪಿಸುತ್ತಾರೆ. [QBR]
11. ದೇವರೇ, ನಿಜವಾಗಿಯೂ ನಾನು ನಿನ್ನ ಸೇವೆಯನ್ನು ಚೆನ್ನಾಗಿ ಮಾಡಿದ್ದೇನೆ. [QBR2] ಕಷ್ಟದ ಕಾಲದಲ್ಲಿ ನನ್ನ ವೈರಿಗಳ ಬಗ್ಗೆ ನಾನು ನಿನ್ನಲ್ಲಿ ಪ್ರಾರ್ಥಿಸಿದ್ದೇನೆ. [*ದೇವರೇ … ಪ್ರಾರ್ಥಿಸಿದ್ದೇನೆ ಇದನ್ನು ಈ ರೀತಿಯಲ್ಲಿಯೂ ಅನುವಾದಿಸಬಹುದು: “ಪ್ರಭುವು, ಇಕ್ಕಟ್ಟಿನಲ್ಲಿಯೂ ಆಪತ್ತಿನಲ್ಲಿಯೂ ನಿನ್ನ ಶತ್ರುಗಳು ಬೇಡಿಕೊಳ್ಳುವಂತೆ ಮಾಡುವನು.”]
12. {ಯೆರೆಮೀಯನಿಗೆ ದೇವರ ಉತ್ತರ} [PS] “ಯೆರೆಮೀಯನೇ, ಕಬ್ಬಿಣದ ತುಂಡನ್ನು ಪುಡಿ ಮಾಡಲು [QBR2] ಯಾರಿಗೂ ಸಾಧ್ಯವಿಲ್ಲವೆಂಬುದು ನಿನಗೆ ಗೊತ್ತು. [QBR] ಉತ್ತರದಿಂದ [†ಉತ್ತರ ಯೆಹೂದದ ಮೇಲೆ ಆಕ್ರಮಣ ಮಾಡಲು ಉತ್ತರ ದಿಕ್ಕಿನಿಂದ ಬರುವ ಬಾಬಿಲೋನಿನ ಸೈನ್ಯವನ್ನು ಇದು ಸೂಚಿಸುತ್ತದೆ.] ಬರುವವನು ಕಬ್ಬಿಣದಂತಿದ್ದಾನೆ. [QBR]
13. ಯೆಹೂದದ ಜನರಲ್ಲಿ ಅನೇಕ ಭಂಡಾರಗಳಿವೆ. [QBR2] ಆ ಭಂಡಾರಗಳನ್ನು ನಾನು ಬೇರೆಯವರಿಗೆ ಒಪ್ಪಿಸುತ್ತೇನೆ. [QBR] ಬೇರೆಯವರು ಆ ಭಂಡಾರಗಳನ್ನು ಹಣ ಕೊಟ್ಟು ತೆಗೆದುಕೊಳ್ಳಬೇಕಾಗಿಲ್ಲ. ನಾನು ಅವರಿಗೆ ಅವುಗಳನ್ನು ಉಚಿತವಾಗಿ ಕೊಟ್ಟುಬಿಡುತ್ತೇನೆ. [QBR2] ಏಕೆಂದರೆ ಯೆಹೂದವು ಅನೇಕ ಪಾಪಗಳನ್ನು ಮಾಡಿದೆ. [QBR2] ದೇಶದ ಪ್ರತಿಯೊಂದು ಭಾಗದಲ್ಲಿಯೂ ಯೆಹೂದ ಪಾಪಮಾಡಿದೆ. [QBR]
14. ಯೆಹೂದದ ಜನರೇ, ನಾನು ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವೆನು. [QBR2] ಅವರು ನೀವೆಂದೂ ತಿಳಿಯದ ಪ್ರದೇಶದಿಂದ ಬಂದು ನಿಮ್ಮನ್ನು ಅಲ್ಲಿಗೆ ಸಾಗಿಸುವರು. [QBR] ನನಗೆ ಅತಿಕೋಪ ಬಂದಿದೆ. [QBR2] ನನ್ನ ಕೋಪವು ಜ್ವಾಲೆಯಂತಿದೆ. [QBR2] ಆ ಜ್ವಾಲೆಯಿಂದ ನೀವು ಸುಟ್ಟುಹೋಗುವಿರಿ.”
15. ಯೆಹೋವನೇ, ನನ್ನ ವಿಷಯ ನಿನಗೆ ಗೊತ್ತು. [QBR2] ನನ್ನನ್ನು ಜ್ಞಾಪಕದಲ್ಲಿಟ್ಟುಕೊಂಡು ರಕ್ಷಿಸು. [QBR] ಜನರು ನನ್ನನ್ನು ತೊಂದರೆಗೀಡು ಮಾಡುತ್ತಿದ್ದಾರೆ. [QBR2] ಅವರಿಗೆ ತಕ್ಕ ಶಿಕ್ಷೆಯನ್ನು ಕೊಡು. [QBR] ನೀನು ಅವರೊಂದಿಗೆ ಬಹಳ ತಾಳ್ಮೆಯಿಂದ ವರ್ತಿಸುತ್ತಿರುವೆ. [QBR2] ಅವರೊಂದಿಗೆ ತಾಳ್ಮೆಯಿಂದ ಇದ್ದು ನನ್ನನ್ನು ಹಾಳುಮಾಡಬೇಡ. [QBR] ನನ್ನ ಬಗ್ಗೆ ವಿಚಾರ ಮಾಡು. [QBR2] ಯೆಹೋವನೇ, ನಿನಗಾಗಿ ನಾನು ಎಷ್ಟು ಕಷ್ಟಪಡುತ್ತಿದ್ದೇನೆ ಎಂಬುದನ್ನು ಯೋಚಿಸು. [QBR]
16. ನಿನ್ನ ಸಂದೇಶ ನನಗೆ ಬಂದಿತು. ನಾನು ನಿನ್ನ ಮಾತುಗಳನ್ನು ಆಹಾರವನ್ನಾಗಿ ಮಾಡಿಕೊಂಡೆ. [QBR2] ನಿನ್ನ ಸಂದೇಶದಿಂದ ನನಗೆ ತುಂಬಾ ಸಂತೋಷವಾಯಿತು. [QBR] ನಿನ್ನನ್ನು ಹೆಸರಿಡಿದು ಕರೆಯುವುದರಿಂದ ನನಗೆ ಹೆಚ್ಚಿನ ಸಂತೋಷವಾಗಿತ್ತು. ನಿನ್ನ ಹೆಸರು ಸರ್ವಶಕ್ತನಾದ ಯೆಹೋವನು. [QBR]
17. ತಮಾಷೆ ಮಾಡಿಕೊಂಡು ನಗುತ್ತಲಿದ್ದ [QBR2] ಗುಂಪಿನಲ್ಲಿ ನಾನೆಂದೂ ಸೇರಲಿಲ್ಲ. [QBR] ನನ್ನ ಮೇಲೆ ಆದ ನಿನ್ನ ಪ್ರಭಾವದಿಂದ ನಾನೊಬ್ಬನೇ ಕುಳಿತುಕೊಂಡಿರುತ್ತಿದ್ದೆ. [QBR] ನನ್ನ ಸುತ್ತಮುತ್ತಲಿನ ದುಷ್ಟತನದ ಮೇಲೆ ನನ್ನಲ್ಲಿ ರೋಷವನ್ನು ತುಂಬಿದೆ. [QBR]
18. ಹೀಗಿದ್ದರೂ ನನಗೇಕೆ ವ್ಯಥೆ ಉಂಟಾಗುತ್ತಿದೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. [QBR2] ನನ್ನ ಗಾಯ ಏಕೆ ಗುಣವಾಗುತ್ತಿಲ್ಲ? ಏಕೆ ವಾಸಿಯಾಗುತ್ತಿಲ್ಲ ಎಂಬುದು ನನಗೆ ತಿಳಿಯದು. [QBR] ಯೆಹೋವನೇ, ನಿನ್ನಲ್ಲಿ ಬದಲಾವಣೆಯಾಗಿದೆ ಎಂದು ನನಗೆ ಅನಿಸುತ್ತಿದೆ. [QBR2] ನೀನು ಪ್ರವಾಹ ನಿಂತುಹೋದ ನೀರಿನ ಬುಗ್ಗೆಯಂತಿರುವೆ.
19. ಆಗ ಯೆಹೋವನು ಹೇಳಿದನು: “ಯೆರೆಮೀಯನೇ, ನೀನು ಬದಲಾವಣೆ ಹೊಂದಿ ನನ್ನಲ್ಲಿಗೆ ಬಂದರೆ [QBR2] ನಾನು ನಿನ್ನನ್ನು ದಂಡಿಸುವುದಿಲ್ಲ. [QBR] ನೀನು ಬದಲಾವಣೆ ಹೊಂದಿ ನನ್ನಲ್ಲಿಗೆ ಬಂದರೆ [QBR2] ನೀನು ನನ್ನ ಸೇವೆ ಮಾಡಬಹುದು. [QBR] ಹುರುಳಿಲ್ಲದ ಮಾತುಗಳನ್ನು ಬಿಟ್ಟು ಮುಖ್ಯವಾದ ವಿಷಯಗಳನ್ನು ಕುರಿತು ಮಾತನಾಡುವದಾದರೆ [QBR2] ನೀನು ನನ್ನ ಪರವಾಗಿ ಮಾತನಾಡಬಹುದು. [QBR] ಯೆರೆಮೀಯನೇ, ಯೆಹೂದದ ಜನರು [QBR2] ಬದಲಾವಣೆ ಹೊಂದಿ ನಿನ್ನಲ್ಲಿಗೆ ಬರಬೇಕು. [QBR] ಆದರೆ ನೀನು ಬದಲಾವಣೆ ಹೊಂದಿ ಅವರಂತೆ ಆಗಬಾರದು. [QBR]
20. ನಾನು ನಿನ್ನನ್ನು ಬಲಶಾಲಿಯನ್ನಾಗಿ ಮಾಡುತ್ತೇನೆ. [QBR] ನೀನು ತಾಮ್ರದ ಗೋಡೆಯಂತೆ ಗಟ್ಟಿಯಾಗಿರುವೆ [QBR2] ಎಂದು ಆ ಜನರು ತಿಳಿದುಕೊಳ್ಳುವರು. [QBR] ಯೆಹೂದದ ಜನರು ನಿನ್ನ ವಿರುದ್ಧ ಹೋರಾಡುವರು. [QBR2] ಆದರೆ ಅವರು ನಿನ್ನನ್ನು ಸೋಲಿಸಲಾರರು. [QBR] ಏಕೆಂದರೆ ನಾನೇ ನಿನ್ನ ಜೊತೆಯಲ್ಲಿ ಇದ್ದೇನೆ. [QBR2] ನಾನು ನಿನಗೆ ಸಹಾಯಮಾಡುತ್ತೇನೆ ಮತ್ತು ನಾನು ನಿನ್ನನ್ನು ರಕ್ಷಿಸುತ್ತೇನೆ” ಇದು ಯೆಹೋವನಿಂದ ಬಂದ ನುಡಿ. [QBR]
21. “ನಾನು ನಿನ್ನನ್ನು ಆ ದುಷ್ಟ ಜನರಿಂದ ರಕ್ಷಿಸುತ್ತೇನೆ. [QBR2] ಆ ಜನರು ನಿನ್ನನ್ನು ಬೆದರಿಸುತ್ತಾರೆ. ಆದರೆ ನಾನು ನಿನ್ನನ್ನು ಆ ಜನರಿಂದ ರಕ್ಷಿಸುತ್ತೇನೆ.” [PE]