1. {ದೇವ ಜನರ ದೇವದ್ರೋಹವು} [PS] ಯೆಹೋವನ ಈ ಸಂದೇಶವು ಯೆರೆಮೀಯನಿಗೆ ಬಂದಿತು:
2. “ಯೆರೆಮೀಯನೇ, ಹೋಗಿ ಜೆರುಸಲೇಮಿನ ಜನರೊಂದಿಗೆ ಮಾತನಾಡು, ಅವರಿಗೆ ಹೀಗೆ ಹೇಳು: “ಯೆಹೋವನು ಹೀಗೆನ್ನುತ್ತಾನೆ: ‘ನೀವು ಯುವ ರಾಷ್ಟ್ರವಾಗಿದ್ದಾಗ ನನಗೆ ನಂಬಿಗಸ್ತರಾಗಿದ್ದಿರಿ; [QBR2] ಯುವತಿಯಾದ ಮದುಮಗಳಂತೆ ನನ್ನನ್ನು ಹಿಂಬಾಲಿಸಿದಿರಿ. [QBR] ಎಂದೂ ಬೇಸಾಯಕ್ಕೆ ಬಳಸದ ಭೂಮಿಯಲ್ಲಿಯೂ [QBR2] ಮರಳುಗಾಡಿನಲ್ಲಿಯೂ ನನ್ನನ್ನು ಹಿಂಬಾಲಿಸಿದಿರಿ. [QBR]
3. ಇಸ್ರೇಲಿನ ಜನರು ಯೆಹೋವನಿಗೆ ಒಂದು ಪವಿತ್ರವಾದ ಕಾಣಿಕೆಯಾಗಿದ್ದರು. [QBR2] ಅವರು ಯೆಹೋವನ ಬೆಳೆಯ ಪ್ರಥಮ ಫಲವಾಗಿದ್ದರು. [QBR] ಇಸ್ರೇಲಿನ ಜನರನ್ನು ಪೀಡಿಸಲು ಪ್ರಯತ್ನಿಸಿದವರನ್ನು ಯಾರಾದರೂ ಆಗಿರಲಿ, ದೋಷಿಗಳೆಂದು ನಿರ್ಣಯಿಸಲಾಗುತ್ತಿತ್ತು. [QBR2] ಆ ಕೆಟ್ಟ ಜನರಿಗೆ ಕೇಡಾಗುತ್ತಿತ್ತು.’ ” [QBR] ಇದು ಯೆಹೋವನ ಸಂದೇಶ.
4. ಯಾಕೋಬನ ಮನೆತನದವರೇ, ಯೆಹೋವನ ಸಂದೇಶವನ್ನು ಕೇಳಿರಿ. [QBR2] ಇಸ್ರೇಲಿನ ಎಲ್ಲಾ ಕುಲದವರೇ, ಯೆಹೋವನ ಸಂದೇಶವನ್ನು ಕೇಳಿರಿ.
5. ಯೆಹೋವನು ಹೀಗೆನ್ನುತ್ತಾನೆ: [QBR] “ನಾನು ನಿಮ್ಮ ಪೂರ್ವಿಕರಿಗೆ ಅನ್ಯಾಯ ಮಾಡಿದೆನೇ? [QBR2] ಅದಕ್ಕಾಗಿ ಅವರು ನನ್ನನ್ನು ತಿರಸ್ಕರಿಸಿದರೇ? [QBR] ನಿಮ್ಮ ಪೂರ್ವಿಕರು ನಿಷ್ಪ್ರಯೋಜಕವಾದ ವಿಗ್ರಹಗಳನ್ನು ಪೂಜಿಸಿ [QBR2] ತಾವು ಸಹ ನಿಷ್ಪ್ರಯೋಜಕರಾದರು. [QBR]
6. ‘ಈಜಿಪ್ಟಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? [QBR2] ಮರಳುಗಾಡಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? [QBR] ನಿರ್ಜನವಾದ ಬೆಟ್ಟಪ್ರದೇಶದಿಂದ ನಮ್ಮನ್ನು ತಂದ ಯೆಹೋವನು ಎಲ್ಲಿದ್ದಾನೆ? [QBR2] ಎಂದು ನಿಮ್ಮ ಪೂರ್ವಿಕರು ಸ್ಮರಿಸಲಿಲ್ಲ. [QBR] ಯೆಹೋವನು ನಮ್ಮನ್ನು ಅಂಧಕಾರಮಯವಾದ [QBR2] ಮತ್ತು ಅಪಾಯಕಾರಿಯಾದ ಭೂಮಿಯಿಂದ ಕರೆದುತಂದನು. [QBR] ಆ ಭೂಮಿಯ ಮಾರ್ಗವಾಗಿ ಯಾರೂ ಪ್ರಯಾಣ ಮಾಡುವುದಿಲ್ಲ. [QBR2] ಯಾರೂ ಆ ಭೂಮಿಯ ಮೇಲೆ ವಾಸ ಮಾಡುವದಿಲ್ಲ. [QBR] ಈಗ ಆ ಯೆಹೋವನು ಎಲ್ಲಿದ್ದಾನೆ?’ ” [QBR2] ನಿಮ್ಮ ಪೂರ್ವಿಕರು ಆ ಪ್ರಶ್ನೆಗಳನ್ನು ಕೇಳಲೇ ಇಲ್ಲ.
7. “ನಾನು ನಿಮ್ಮನ್ನು ಅನೇಕ ಅಮೂಲ್ಯವಸ್ತುಗಳಿಂದ ಕೂಡಿದ [QBR2] ಫಲವತ್ತಾದ ಭೂಮಿಗೆ ಕರೆದುತಂದೆ. [QBR] ಅಲ್ಲಿ ಬೆಳೆಯುವ ಫಲಗಳನ್ನು ತಿನ್ನಲಿ ಎಂಬ ಉದ್ದೇಶದಿಂದ ನಾನು ಕರೆದುತಂದೆ. [QBR2] ಆದರೆ ನೀವು ಬಂದು ನನ್ನ ಭೂಮಿಯನ್ನು ಹೊಲಸು ಮಾಡಿದಿರಿ. [QBR] ನಾನು ಆ ಭೂಮಿಯನ್ನು ನಿಮಗೆ ಕೊಟ್ಟೆ, [QBR2] ಆದರೆ ನೀವು ಅದನ್ನು ಕೆಟ್ಟ ಸ್ಥಳವನ್ನಾಗಿ ಮಾಡಿದಿರಿ.
8. “ ‘ಯೆಹೋವನು ಎಲ್ಲಿ?’ [QBR2] ಎಂದು ಯಾಜಕರು ಕೇಳಲಿಲ್ಲ. [QBR] ಧರ್ಮಶಾಸ್ತ್ರವನ್ನು ಬಲ್ಲವರು ನನ್ನನ್ನು ತಿಳಿಯಬಯಸಲಿಲ್ಲ. [QBR2] ಇಸ್ರೇಲರ ಜನನಾಯಕರು ನನ್ನ ವಿರೋಧಿಗಳಾದರು. [QBR] ಪ್ರವಾದಿಗಳು ಸುಳ್ಳುದೇವರಾದ ಬಾಳನ ಹೆಸರಿನಿಂದ ಭವಿಷ್ಯವಾಣಿಯನ್ನು ನುಡಿದರು. [QBR2] ಅವರು ನಿಷ್ಪ್ರಯೋಜಕವಾದ ವಿಗ್ರಹಗಳನ್ನು ಪೂಜಿಸಿದರು.”
9. “ಆದ್ದರಿಂದ ನಾನು ನಿಮ್ಮನ್ನು ಮತ್ತೊಮ್ಮೆ ಆಪಾದಿಸುವೆನು. [QBR2] ನಾನು ನಿಮ್ಮ ಮೊಮ್ಮಕ್ಕಳ ಮೇಲೂ ಆಪಾದಿಸುವೆನು” ಎನ್ನುತ್ತಾನೆ ಯೆಹೋವನು. [QBR]
10. ಸಮುದ್ರದ ಆಚೆಗಿದ್ದ ಕಿತ್ತೀಮ್ ದಿಬಪಗಳಿಗೆ ಹೋಗಿ ನೋಡಿರಿ. [QBR2] ಸೂಕ್ಷ್ಮವಾಗಿ ಪರಿಶೀಲಿಸಲು ಯಾರನ್ನಾದರೂ ಕೇದಾರಿಗೆ ಕಳುಹಿಸಿರಿ. [QBR] ಯಾರಾದರೂ ಎಂದಾದರೂ [QBR2] ಇಂಥ ಕೆಲಸ ಮಾಡಿರುವರೇ, ನೋಡಿರಿ. [QBR]
11. ಯಾವ ಜನಾಂಗವಾದರೂ ಎಂದಾದರೂ [QBR2] ತಮ್ಮ ಹಳೆಯ ದೇವರುಗಳನ್ನು ಬದಲಾಯಿಸಿ ಹೊಸ ದೇವರುಗಳನ್ನು ಪಡೆಯಿತೇ? [QBR] ಇಲ್ಲ. (ಅವರ ದೇವರುಗಳು ನಿಜವಾದ ದೇವರುಗಳೇ ಅಲ್ಲ.) [QBR] ಆದರೆ ನನ್ನ ಜನರು ತಮ್ಮ ಮಹಿಮಾಶಾಲಿಯಾದ ದೇವರನ್ನು [QBR2] ಅಪ್ರಯೋಜಕವಾದ ವಿಗ್ರಹಗಳೊಂದಿಗೆ ಬದಲಾಯಿಸಿಕೊಂಡಿದ್ದಾರೆ.
12. “ಆಕಾಶಮಂಡಲವೇ, ನಡೆದ ಸಂಗತಿಗಳಿಗಾಗಿ ಬೆಚ್ಚಿಬೆರಗಾಗು! [QBR2] ಭಯದಿಂದ ನಡುಗು!” [QBR] ಎಂದು ಯೆಹೋವನು ನುಡಿಯುತ್ತಾನೆ. [QBR]
13. “ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ. [QBR2] ಅವರು ನನ್ನಿಂದ ಮುಖ ತಿರುವಿದ್ದಾರೆ. [QBR] ನಾನು ಜೀವಜಲದ ಬುಗ್ಗೆಯಾಗಿದ್ದೇನೆ. [QBR2] ಅವರು ತಮ್ಮದೇ ಆದ ನೀರಿನ ತೊಟ್ಟಿಗಳನ್ನು ನಿರ್ಮಿಸಿಕೊಂಡಿದ್ದಾರೆ. [QBR] ಅವರು ಇತರ ದೇವರುಗಳ ಕಡೆಗೆ ತಿರುಗಿಕೊಂಡಿದ್ದಾರೆ. [QBR2] ಅವರ ತೊಟ್ಟಿಗಳು ಒಡೆದಿವೆ. ಅವುಗಳಲ್ಲಿ ನೀರು ತುಂಬಿಡಲು ಸಾಧ್ಯವಿಲ್ಲ.
14. “ಇಸ್ರೇಲಿನ ಜನರು ಗುಲಾಮರಾಗಿರುವರೇ? [QBR2] ಅವರು ಗುಲಾಮರಾಗಿ ಹುಟ್ಟಿದ ಮನುಷ್ಯನಂತಿರುವರೇ? [QBR2] ಬೇರೆಯವರು ಇಸ್ರೇಲರ ಸಂಪತ್ತನ್ನು ಏಕೆ ತೆಗೆದುಕೊಂಡರು? [QBR]
15. ಪ್ರಾಯದಸಿಂಹಗಳು (ವೈರಿಗಳು) ಇಸ್ರೇಲ್ ಜನಾಂಗದ ಮೇಲೆ ಗರ್ಜಿಸುತ್ತಿವೆ. [QBR2] ಆ ಸಿಂಹಗಳು ಆರ್ಭಟಿಸುತ್ತಿವೆ; ಇಸ್ರೇಲರ ನಾಡನ್ನು ನಾಶಮಾಡಿವೆ. [QBR] ಇಸ್ರೇಲ್‌ನ ನಗರಗಳು ಸುಡಲ್ಪಟ್ಟಿವೆ; [QBR2] ಅವುಗಳು ನಿರ್ಜನವಾಗಿವೆ. [QBR]
16. ಮೆಂಫೀಸ್ ಮತ್ತು ತಹಪನೇಸ್ ನಗರಗಳ ಜನರು [QBR2] ನಿನ್ನ ತಲೆಬುರುಡೆಯನ್ನು ಒಡೆದುಬಿಟ್ಟಿದ್ದಾರೆ. [QBR]
17. ತೊಂದರೆಯು ನಿನ್ನ ತಪ್ಪಿನ ಫಲ. [QBR2] ನಿನ್ನನ್ನು ಸರಿಯಾದ ಮಾರ್ಗದಲ್ಲಿ ನಡೆಸುತ್ತಿದ್ದ [QBR2] ನಿನ್ನ ದೇವರಾದ ಯೆಹೋವನಿಗೆ ನೀನು ವಿಮುಖನಾದೆ. [QBR]
18. ಯೆಹೂದದ ಜನರೇ, ಅದರ ಬಗ್ಗೆ ಯೋಚಿಸಿರಿ. [QBR2] ಇದರಿಂದ ನಿಮಗೆ ಈಜಿಪ್ಟಿಗೆ ಹೋಗಲು ಸಹಾಯವಾಯಿತೇ? ನೈಲ್ ನದಿಯ ನೀರನ್ನು ಕುಡಿಯಲು ಈಜಿಪ್ಟಿಗೆ ಹೋಗುವುದೇಕೆ? [*ನೈಲ್ … ಹೋಗುವುದೇಕೆ? ಅಥವಾ “ಈಜಿಪ್ಟ್ ಮತ್ತು ಅಸ್ಸೀರಿಯಾಗಳಿಂದ ನೀನು ಸಹಾಯ ಬೇಡುವುದೇಕೆ?”] [QBR2] ಅವರ ನದಿಯ ನೀರನ್ನು ಕುಡಿಯಲು ಅಸ್ಸೀರಿಯಕ್ಕೆ ಹೋಗುವುದೇಕೆ? [QBR]
19. ನೀವು ಕೆಟ್ಟದ್ದನ್ನು ಮಾಡಿದರೆ [QBR2] ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. [QBR] ನಿಮಗೆ ವಿಪತ್ತು ಬರುತ್ತದೆ. [QBR2] ಆ ವಿಪತ್ತು ನಿಮಗೊಂದು ಪಾಠವನ್ನು ಕಲಿಸುತ್ತದೆ. [QBR] ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. [QBR2] ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” [QBR] ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು. [QBR]
20. “ಯೆಹೂದವೇ, ಬಹಳ ದಿನಗಳ ಹಿಂದೆಯೇ ನೀನು ನಿನ್ನ ನೊಗವನ್ನು ಕಳಚಿ ಎಸೆದುಬಿಟ್ಟೆ. [QBR2] ನನ್ನೊಂದಿಗೆ ಬಂಧಿಸಿದ ಕಣ್ಣಿಗಳನ್ನು ಹರಿದುಬಿಟ್ಟೆ. [QBR2] ‘ನಾನು ನಿನ್ನನ್ನು ಸೇವಿಸುವದಿಲ್ಲ’ವೆಂದು ನನಗೆ ಹೇಳಿಬಿಟ್ಟೆ. [QBR] ನಿಜವಾಗಿ ನೋಡಿದರೆ ಎತ್ತರವಾದ ಎಲ್ಲಾ ಪರ್ವತಗಳ ಮೇಲೂ ಮತ್ತು ಸೊಂಪಾಗಿ ಬೆಳೆದ ಎಲ್ಲಾ ಮರಗಳ ಕೆಳಗೂ [QBR2] ನೀನು ಮಲಗಿಕೊಂಡು ವೇಶ್ಯೆಯರಂತೆ ವರ್ತಿಸಿದೆ. [†ಎತ್ತರ … ವರ್ತಿಸಿದೆ ಈ ಸ್ಥಳಗಳಲ್ಲಿ ಜನರು ತಮ್ಮ ಸುಳ್ಳುದೇವರುಗಳನ್ನು ಪೂಜಿಸಿದರು ಎಂದರ್ಥ.] [QBR]
21. ಯೆಹೂದವೇ, ನಾನು ನಿನ್ನನ್ನು ಅತ್ಯುತ್ತಮ ದ್ರಾಕ್ಷಾಲತೆಯಂತೆ ನೆಟ್ಟೆ. [QBR2] ನೀನು ಒಳ್ಳೆಯ ಬೀಜದಂತಿದ್ದಿ. [QBR] ನೀನು ಕೆಟ್ಟ ಫಲಗಳನ್ನು ಫಲಿಸುವ ಬೇರೆ ದ್ರಾಕ್ಷಿಯ ಬಳ್ಳಿಯಾದದ್ದು ಹೇಗೆ? [QBR]
22. ನೀನು ಚೌಳನಿಂದ ತೊಳೆದುಕೊಂಡರೂ [QBR2] ಹೆಚ್ಚು ಸೋಪನ್ನು ಉಪಯೋಗಿಸಿದರೂ [QBR2] ನಾನು ನಿನ್ನ ದೋಷವನ್ನು ಕಂಡುಹಿಡಿಯಬಲ್ಲೆ” ಅನ್ನುತ್ತಾನೆ ಯೆಹೋವನು. [QBR]
23. “ಯೆಹೂದವೇ, ‘ನಾನು ತಪ್ಪಿತಸ್ಥಳಲ್ಲವೆಂದೂ ನಾನು ಬಾಳನ ವಿಗ್ರಹಗಳನ್ನು ಪೂಜಿಸಲಿಲ್ಲವೆಂದೂ’ [QBR2] ನೀನು ನನಗೆ ಹೇಗೆ ಹೇಳುವೆ? [QBR] ನೀನು ಕಣಿವೆಯಲ್ಲಿ ಮಾಡಿದ ಕಾರ್ಯಗಳ ಬಗ್ಗೆ ಯೋಚಿಸು. [QBR2] ನೀನು ಮಾಡಿದ ಕೆಲಸಗಳ ಬಗ್ಗೆ ಯೋಚಿಸು. [QBR] ನೀನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಓಡಿಹೋಗುವ [QBR2] ತೀವ್ರಗತಿಯ ಹೆಣ್ಣು ಒಂಟೆಯಂತೆ ಇರುವೆ. [QBR]
24. ನೀನು ಮರುಭೂಮಿಯಲ್ಲಿ ವಾಸಿಸುವ ಕಾಡುಕತ್ತೆಯಂತೆ ಇರುವೆ. [QBR2] ಅದು ಬೆದೆಯ ಕಾಲದಲ್ಲಿ ಗಾಳಿಯನ್ನು ಮೂಸಿ ನೋಡುತ್ತದೆ. [QBR2] ಅದಕ್ಕೆ ಬೆದೆ ಏರಿದಾಗ ಯಾರೂ ಅದನ್ನು ಹಿಡಿಯಲು ಸಾಧ್ಯವಿಲ್ಲ. [QBR] ಅದು ಬೆದೆಗೆ ಬಂದಾಗ ಅದನ್ನು ಇಷ್ಟಪಡುವ ಪ್ರತಿಯೊಂದು ಗಂಡು ಕತ್ತೆಗೆ ಅದು ಲಭಿಸುವುದು. [QBR2] ಆಗ ಅದನ್ನು ಪಡೆಯುವುದು ಬಹಳ ಸುಲಭ. [QBR]
25. ಯೆಹೂದವೇ, ವಿಗ್ರಹಗಳ ಬೆನ್ನುಹತ್ತಿ ಹೋಗುವದನ್ನು ನಿಲ್ಲಿಸು! [QBR2] ಆ ಅನ್ಯದೇವರುಗಳ ಬಗ್ಗೆ ನಿನ್ನಲ್ಲಿರುವ ಬಯಕೆಯನ್ನು ತೊರೆದುಬಿಡು. [QBR] ಆದರೆ ನೀನು ‘ಹಾಗೆ ಮಾಡಿದರೆ ಪ್ರಯೋಜನವೇನು? ನಾನು ಅವುಗಳನ್ನು ಬಿಡಲಾರೆ. [QBR2] ನಾನು ಆ ಅನ್ಯದೇವರುಗಳನ್ನು ಪ್ರೀತಿಸುತ್ತೇನೆ. [QBR2] ನಾನು ಅವುಗಳನ್ನು ಪೂಜಿಸಬಯಸುತ್ತೇನೆ’ ಎಂದು ಹೇಳುವೆ.
26. “ಜನರ ಕೈಗೆ ಸಿಕ್ಕಿಬಿದ್ದಾಗ [QBR2] ಕಳ್ಳನಿಗೆ ನಾಚಿಕೆಯಾಗುತ್ತದೆ. [QBR] ಅದೇ ರೀತಿಯಲ್ಲಿ ಇಸ್ರೇಲ್ ವಂಶವು ನಾಚಿಕೆಪಡುತ್ತದೆ. [QBR2] ರಾಜರು ಮತ್ತು ನಾಯಕರು ನಾಚಿಕೆಪಡುವರು. ಯಾಜಕರು ಮತ್ತು ಪ್ರವಾದಿಗಳು ನಾಚಿಕೆಪಡುವರು. [QBR]
27. ಅವರು ಮರದ ತುಂಡುಗಳೊಡನೆ ಮಾತನಾಡಿ, [QBR2] ‘ನೀನು ನಮ್ಮ ತಂದೆ’ ಎಂದು ಹೇಳುವರು. [QBR] ಆ ಜನರು ಕಲ್ಲುಬಂಡೆಯೊಂದಿಗೆ ಮಾತನಾಡಿ, [QBR2] ‘ನೀನು ನಮಗೆ ಜನ್ಮಕೊಟ್ಟ ತಾಯಿ’ ಎಂದು ಹೇಳುವರು. [QBR] ಆ ಜನರೆಲ್ಲರು ನಾಚಿಕೆಪಡುವರು. [QBR] ಅವರು ನನ್ನ ಕಡೆಗೆ ನೋಡುವದಿಲ್ಲ. [QBR2] ಅವರು ನನಗೆ ವಿಮುಖರಾಗಿದ್ದಾರೆ. [QBR] ಆದರೆ ಯೆಹೂದದ ಜನರು ಕಷ್ಟದಲ್ಲಿ ಸಿಕ್ಕಿಹಾಕಿಕೊಂಡಾಗ, [QBR2] ‘ಬಾ ನಮ್ಮನ್ನು ರಕ್ಷಿಸು’ ಎಂದು ನನ್ನನ್ನು ಕೇಳುತ್ತಾರೆ. [QBR]
28. ಆ ವಿಗ್ರಹಗಳು ಬಂದು ನಿಮ್ಮನ್ನು ರಕ್ಷಿಸಲಿ, ನೀವು ಮಾಡಿದ ವಿಗ್ರಹಗಳು ಎಲ್ಲಿವೆ? [QBR2] ನೀವು ಕಷ್ಟದಲ್ಲಿದ್ದಾಗ ಆ ವಿಗ್ರಹಗಳು ಬಂದು ನಿಮ್ಮನ್ನು ರಕ್ಷಿಸುವವೇ ಎಂಬುದನ್ನು ನೋಡೋಣ. [QBR] ಯೆಹೂದದ ನಿವಾಸಿಗಳೇ, ನಿಮ್ಮಲ್ಲಿ ಎಷ್ಟು ಪಟ್ಟಣಗಳಿವೆಯೋ ಅಷ್ಟು ವಿಗ್ರಹಗಳಿವೆ.
29. “ನೀವು ನನ್ನೊಂದಿಗೆ ಏಕೆ ಚರ್ಚೆಮಾಡುವಿರಿ, [QBR2] ನೀವೆಲ್ಲರೂ ನನ್ನ ವಿರುದ್ಧ ದಂಗೆ ಎದ್ದಿದ್ದೀರಿ” [QBR] ಎನ್ನುತ್ತಾನೆ ಯೆಹೋವನು. [QBR]
30. “ಯೆಹೂದದ ಜನರೇ ನಾನು ನಿಮ್ಮನ್ನು ಶಿಕ್ಷಿಸಿದೆ, [QBR2] ಆದರೆ ಅದರಿಂದ ಪ್ರಯೋಜನವಾಗಲಿಲ್ಲ. [QBR] ಶಿಕ್ಷಿಸಿದರೂ ನೀವು ಹಿಂತಿರುಗಿ ಬರಲಿಲ್ಲ. [QBR] ನಿಮ್ಮಲ್ಲಿಗೆ ಬಂದ ಪ್ರವಾದಿಗಳನ್ನು ನೀವು ಕತ್ತಿಯಿಂದ ಕೊಂದುಹಾಕಿದಿರಿ. [QBR2] ನೀವು ಅಪಾಯಕಾರಿಯಾದ ಸಿಂಹದಂತಿದ್ದು ಪ್ರವಾದಿಗಳನ್ನು ಕೊಂದುಹಾಕಿದಿರಿ.” [QBR]
31. ಈ ಪೀಳಿಗೆಯ ಜನರೇ, ಯೆಹೋವನ ಸಂದೇಶದ ಕಡೆಗೆ ಗಮನ ಕೊಡಿ, “ಇಸ್ರೇಲಿನ ಜನರಿಗೆ ನಾನು ಮರಳುಗಾಡಿನಂತೆ ಇರುವೆನೇ? [QBR2] ನಾನು ಗಾಢಾಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಂತೆ ಇರುವೆನೇ? [QBR] ನನ್ನ ಜನರು, ‘ನಮಗೆ ಇಷ್ಟವಾದ ಮಾರ್ಗವನ್ನು ಅನುಸರಿಸಲು ನಾವು ಸ್ವತಂತ್ರರಾಗಿದ್ದೇವೆ. [QBR2] ಯೆಹೋವನೇ, ನಾವು ಪುನಃ ನಿನ್ನಲ್ಲಿಗೆ ಬರುವದಿಲ್ಲ’ ಎಂದು ಹೇಳುತ್ತಾರೆ. [QBR] ಅವರು ಹಾಗೆ ಏಕೆ ಹೇಳುತ್ತಾರೆ? [QBR]
32. ಯುವತಿಯು ತನ್ನ ಆಭರಣಗಳನ್ನು ಮರೆಯುವಳೇ? ಇಲ್ಲ. [QBR2] ವಧುವು ಮದುವೆಯ ಉಡುಪನ್ನು ಧರಿಸಿಕೊಳ್ಳಲು ಮರೆಯುವಳೇ? ಇಲ್ಲ. [QBR] ಆದರೆ ನನ್ನ ಜನರು ನನ್ನನ್ನು ಅಸಂಖ್ಯಾತ ದಿನಗಳವರೆಗೆ ಮರೆತುಬಿಟ್ಟಿದ್ದಾರೆ.
33. “ಯೆಹೂದವೇ, ಪ್ರಿಯತಮನ ಬೆನ್ನುಹತ್ತಿ ಹೋಗುವದು ನಿನಗೆ ಗೊತ್ತು. [QBR2] ಆದಕಾರಣ ದುರಾಭ್ಯಾಸವನ್ನು ನೀನು ಕಲಿತುಕೊಂಡಿರುವೆ. [QBR]
34. ನಿನ್ನ ಕೈಗಳ ಮೇಲೆ ರಕ್ತದ ಕಲೆ ಇದೆ. [QBR2] ಅದು ನಿರ್ದೋಷಿಗಳಾದ ಬಡವರ ರಕ್ತ. [QBR] ಅವರು ನಿನ್ನ ಕೈಗೆ ಸಿಕ್ಕಿಹಾಕಿಕೊಂಡ ಕಳ್ಳರಾಗಿರಲಿಲ್ಲ. [QBR2] ಆದರೂ ನೀನು ಅವರನ್ನು ಕೊಲೆ ಮಾಡಿರುವೆ. ನೀನು ಅಂಥ ಕೆಟ್ಟ ಕೆಲಸವನ್ನು ಮಾಡಿರುವೆ. [QBR]
35. ಆದರೆ ನೀನು, ‘ನಾನು ತಪ್ಪು ಮಾಡಿಲ್ಲ. [QBR2] ದೇವರು ನನ್ನ ಮೇಲೆ ಕೋಪಗೊಂಡಿಲ್ಲ’ ಎಂದು ಹೇಳುತ್ತಿರುವೆ. [QBR] ಆದ್ದರಿಂದ ನೀನು ಸುಳ್ಳು ಹೇಳಿದ ಅಪರಾಧಿಯೆಂದು ನಾನು ನಿನಗೆ ತೀರ್ಪುನೀಡುತ್ತೇನೆ. [QBR2] ಏಕೆಂದರೆ ‘ನಾನು ಯಾವ ತಪ್ಪೂ ಮಾಡಿಲ್ಲ’ ಎಂದು ನೀನು ಹೇಳಿಕೊಳ್ಳುತ್ತಿರುವೆ. [QBR]
36. ನಿನ್ನ ವಿಚಾರಗಳನ್ನು ಬದಲಾಯಿಸುವದು ನಿನಗೆ ಸುಲಭ. [QBR2] ಅಸ್ಸೀರಿಯಾ ನಿನ್ನನ್ನು ನಿರಾಶೆಗೊಳಿಸಿತು. [QBR] ಆಗ ನೀನು ಅಸ್ಸೀರಿಯರನ್ನು ಬಿಟ್ಟು ಈಜಿಪ್ಟಿನ ಸಹಾಯವನ್ನು ಕೇಳಿದೆ, [QBR2] ಈಜಿಪ್ಟ್ ನಿನ್ನನ್ನು ನಿರಾಶೆಗೊಳಿಸುತ್ತದೆ. [QBR]
37. ಕೊನೆಗೆ ನೀನು ಈಜಿಪ್ಟನ್ನು ಬಿಡುವೆ, ನಾಚಿಕೆಯಿಂದ [QBR2] ತಲೆಯ ಮೇಲೆ ಕೈಯಿಟ್ಟುಕೊಂಡು ಹೊರಡುವೆ. [QBR] ನೀನು ಆ ದೇಶಗಳನ್ನು ನಂಬಿರುವೆ, [QBR2] ಆದರೆ ಆ ದೇಶಗಳಿಂದ ನಿನಗೆ ಯಾವ ಅನುಕೂಲವೂ ಆಗದು. ಯೆಹೋವನು ಆ ದೇಶಗಳನ್ನು ನಿರಾಕರಿಸಿದ್ದಾನೆ.” [PE]