1. ಯೆಹೋವನ ಸಂದೇಶವಿದು: “ಯೆಹೂದದ ಕುರುಬರಿಗೆ ಒಳ್ಳೆಯದಾಗುವದಿಲ್ಲ. ಈ ಕುರುಬರು ಕುರಿಗಳನ್ನು ಹಾಳುಮಾಡುತ್ತಿದ್ದಾರೆ. ಅವರು ನನ್ನ ಹುಲ್ಲುಗಾವಲಿನಿಂದ ಕುರಿಗಳು ಎಲ್ಲಾ ದಿಕ್ಕುಗಳಿಗೂ ಓಡಿಹೋಗುವಂತೆ ಮಾಡುತ್ತಿದ್ದಾರೆ.” [PE][PS]
2. ಆ ಕುರುಬರು ನನ್ನ ಜನರಿಗೆ ಹೊಣೆಗಾರರಾಗಿದ್ದಾರೆ. ಇಸ್ರೇಲಿನ ದೇವರಾದ ಯೆಹೋವನು ಆ ಕುರುಬರಿಗೆ ಹೀಗೆ ಹೇಳುತ್ತಾನೆ, “ನನ್ನ ಕುರಿಗಳು ಎಲ್ಲಾ ದಿಕ್ಕುಗಳಿಗೂ ಚದರುವಂತೆ ನೀವು ಮಾಡಿರುವಿರಿ. ನೀವು ಅವುಗಳನ್ನು ಓಡಿಸಿಬಿಟ್ಟಿದ್ದೀರಿ. ನೀವು ಅವುಗಳ ಯೋಗಕ್ಷೇಮವನ್ನು ನೋಡಿಕೊಳ್ಳಲಿಲ್ಲ. ಈಗ ನಾನು ನಿಮ್ಮನ್ನು ವಿಚಾರಿಸಿಕೊಳ್ಳುತ್ತೇನೆ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮ್ಮನ್ನು ದಂಡಿಸುತ್ತೇನೆ.” ಯೆಹೋವನು ಹೀಗೆ ಹೇಳಿದನು.
3. “ನಾನು ನನ್ನ ಕುರಿಗಳನ್ನು ಬೇರೆ ದೇಶಗಳಿಗೆ ಕಳುಹಿಸಿದೆ. ಆದರೆ ಉಳಿದ ನನ್ನ ಕುರಿಗಳನ್ನು ಒಂದೆಡೆ ಸೇರಿಸುವೆನು. ಅವುಗಳನ್ನು ಅವುಗಳ ಹುಲ್ಲುಗಾವಲಿಗೆ ತರುವೆನು. ಅವುಗಳಿಗೆ ಅನೇಕ ಮಕ್ಕಳಾಗಿ ಅವುಗಳ ಸಂಖ್ಯೆ ಬೆಳೆಯುವುದು.
4. ನನ್ನ ಕುರಿಗಳನ್ನು ನೋಡಿಕೊಳ್ಳುವದಕ್ಕೆ ನಾನು ಹೊಸ ಕುರುಬರನ್ನು ನೇಮಿಸುವೆನು. ಆ ಕುರುಬರು ನನ್ನ ಕುರಿಗಳ ಯೋಗಕ್ಷೇಮವನ್ನು ನೋಡಿಕೊಳ್ಳುವರು. ನನ್ನ ಕುರಿಗಳು ಬೆದರುವದಿಲ್ಲ, ಭಯಪಡುವದಿಲ್ಲ. ನನ್ನ ಒಂದು ಕುರಿಯೂ ಕಳೆದುಹೋಗುವದಿಲ್ಲ.” ಇದು ಯೆಹೋವನ ಸಂದೇಶ.
5. {ಸದ್ಧರ್ಮದ ಸಸಿ} [PS] ಇದು ಯೆಹೋವನ ಸಂದೇಶ: [QBR] “ನಾನು ಒಳ್ಳೆಯ ‘ಸಸಿಯನ್ನು’ ಚಿಗುರಿಸುವ ಕಾಲ ಬಂದಿದೆ. [QBR2] ಅವನು ಬುದ್ಧಿವಂತಿಕೆಯಿಂದ ಆಳುವ ರಾಜನಾಗಿರುವನು. [QBR] ಅವನು ದೇಶದಲ್ಲಿ ನೀತಿ ಮತ್ತು ನ್ಯಾಯಬದ್ಧವಾದದ್ದನ್ನು ಮಾಡುವನು. [QBR]
6. ಸದ್ಧರ್ಮದ ‘ಸಸಿಯ’ ಸಮಯದಲ್ಲಿ ಯೆಹೂದದ ಜನರು ರಕ್ಷಿಸಲ್ಪಡುವರು [QBR2] ಮತ್ತು ಇಸ್ರೇಲ್ ಸುರಕ್ಷಿತವಾಗಿರುವುದು. [QBR] ಯೆಹೋವನೇ, ನಮ್ಮ ಸದ್ಧರ್ಮ [QBR2] ಎಂಬ ಹೆಸರು ಅವನಿಗಾಗುವುದು.” [PS]
7. ಇದು ಯೆಹೋವನಿಂದ ಬಂದ ಸಂದೇಶ: “ಜನರು ಇನ್ನು ಮೇಲೆ ದೇವರ ಆಣೆಯನ್ನು ಹಳೆಯ ರೀತಿಯಲ್ಲಿ ಹೇಳಲಾರದ ಕಾಲ ಬರುತ್ತಿದೆ. ‘ಇಸ್ರೇಲರನ್ನು ಈಜಿಪ್ಟಿನಿಂದ ಹೊರತಂದ ಯೆಹೋವನ ಆಣೆ’ ಎಂಬುದು ದೇವರ ಆಣೆಯ ಹಳೆಯ ರೀತಿಯಾಗಿತ್ತು.
8. ಆದರೆ ಹೊಸ ಕಾಲ ಬರಲಿದೆ. ಆಗ, ‘ಇಸ್ರೇಲರನ್ನು ಉತ್ತರದ ನಾಡಿನಿಂದಲೂ ಅವರನ್ನು ಚದರಿಸಿಬಿಟ್ಟಿದ್ದ ಎಲ್ಲ ದೇಶಗಳಿಂದಲೂ ಹೊರತಂದ ಯೆಹೋವನಾಣೆ’ ಎಂದು ಹೇಳುವರು. ಆಗ ಇಸ್ರೇಲರು ಸ್ವದೇಶದಲ್ಲಿ ನೆಲಸುವರು.”
9. {ಸುಳ್ಳುಪ್ರವಾದಿಗಳ ಬಗ್ಗೆ ನ್ಯಾಯನಿರ್ಣಯ} [PS] ಪ್ರವಾದಿಗಳಿಗೊಂದು ಸಂದೇಶ. [QBR] ನಾನು ಬಹಳ ದುಃಖಿತನಾಗಿದ್ದೇನೆ. ನನ್ನ ಹೃದಯ ಒಡೆದುಹೋಗಿದೆ. [QBR2] ನನ್ನ ಎಲುಬುಗಳೆಲ್ಲಾ ನಡುಗುತ್ತಿವೆ. [QBR] ನಾನು ಅಮಲೇರಿದವನಂತಿದ್ದೇನೆ. [QBR2] ಯೆಹೋವನೂ ಆತನ ಪರಿಶುದ್ಧ ನುಡಿಗಳೂ ಇದಕ್ಕೆ ಕಾರಣ. [QBR]
10. ಯೆಹೂದ ದೇಶವು ವ್ಯಭಿಚಾರಿಗಳಿಂದ ತುಂಬಿಹೋಗಿದೆ. [QBR2] ಅವರು ಅನೇಕ ರೀತಿಯಲ್ಲಿ ಅಪನಂಬಿಗಸ್ತರಾಗಿದ್ದಾರೆ. [QBR] ಯೆಹೋವನು ನಾಡನ್ನು ಶಪಿಸಿದ್ದರಿಂದ [QBR2] ಅದು ಬರಡು ಭೂಮಿಯಾಯಿತು. [QBR] ಹುಲ್ಲುಗಾವಲಿನ ಸಸಿಗಳು ಒಣಗಿ ಸತ್ತುಹೋಗುತ್ತಲಿವೆ. [QBR2] ಹೊಲಗಳು ಮರುಭೂಮಿಯಂತಾಗಿವೆ. [QBR] ಪ್ರವಾದಿಗಳು ಸೆರೆ ಒಯ್ಯಲ್ಪಟ್ಟಿದ್ದಾರೆ. [QBR2] ಆ ಪ್ರವಾದಿಗಳು ತಮ್ಮ ಪ್ರಭಾವವನ್ನೂ ಶಕ್ತಿಯನ್ನೂ ತಪ್ಪಾಗಿ ಬಳಸಿಕೊಳ್ಳುತ್ತಿದ್ದಾರೆ. [QBR]
11. “ಪ್ರವಾದಿಗಳೂ ಯಾಜಕರೂ ದುಷ್ಟರಾಗಿದ್ದಾರೆ. [QBR2] ಅವರು ನನ್ನ ಪವಿತ್ರಾಲಯದಲ್ಲಿಯೇ ದುಷ್ಕೃತ್ಯಗಳನ್ನು ಮಾಡುವುದನ್ನು ನಾನು ನೋಡಿದ್ದೇನೆ. [QBR] ಇದು ಯೆಹೋವನಿಂದ ಬಂದ ಸಂದೇಶ. [QBR]
12. ಆದ್ದರಿಂದ ನಾನು ಅವರಿಗೆ ನನ್ನ ಸಂದೇಶಗಳನ್ನು ಇನ್ನು ಮೇಲೆ ಕೊಡುವುದಿಲ್ಲ. [QBR2] ಆಗ ಅವರು ಕತ್ತಲಲ್ಲಿ ನಡೆಯಬೇಕಾಗುವುದು. [QBR] ಆ ಪ್ರವಾದಿಗಳ ಮತ್ತು ಯಾಜಕರ ಮಾರ್ಗಗಳು ಜಾರುವ ದಾರಿಗಳಾಗಿವೆ. [QBR2] ಆ ಪ್ರವಾದಿಗಳು ಮತ್ತು ಯಾಜಕರು ಕತ್ತಲಲ್ಲಿ ಬೀಳುವರು. [QBR] ನಾನು ಅವರಿಗೆ ಕೇಡನ್ನು ಬರಮಾಡಿ ಅ [QBR2] ವರನ್ನು ದಂಡಿಸುವೆನು.” [QBR] ಇದು ಯೆಹೋವನಿಂದ ಬಂದ ಸಂದೇಶ.
13. “ಸಮಾರ್ಯದ ಪ್ರವಾದಿಗಳು ಕೆಟ್ಟದ್ದಾಗಿ ನಡೆದುಕೊಂಡದ್ದನ್ನು ನಾನು ನೋಡಿದ್ದೇನೆ. [QBR] ಅವರು ಬಾಳ್ ದೇವತೆಗೋಸ್ಕರ ಆವೇಶದಿಂದ ಪ್ರವಾದಿಸಿದ್ದನ್ನು ನಾನು ಕಂಡಿದ್ದೇನೆ. [QBR2] ಆ ಪ್ರವಾದಿಗಳು ಇಸ್ರೇಲಿನ ಜನರನ್ನು ಯೆಹೋವನಿಂದ ದೂರ ತೆಗೆದುಕೊಂಡು ಹೋಗಿದ್ದಾರೆ. [QBR]
14. ಯೆಹೂದದ ಪ್ರವಾದಿಗಳು ಜೆರುಸಲೇಮಿನಲ್ಲಿ [QBR2] ಭಯಂಕರ ದುಷ್ಕೃತ್ಯಗಳನ್ನು ಮಾಡುವುದನ್ನು ನಾನು ನೋಡಿದ್ದೇನೆ. [QBR] ಈ ಪ್ರವಾದಿಗಳು ವ್ಯಭಿಚಾರ ಮಾಡುತ್ತಾರೆ. [QBR2] ಅವರು ಸುಳ್ಳುಗಳನ್ನು ಕೇಳಿ, ಆ ಸುಳ್ಳುಬೋಧನೆಗಳನ್ನು ಪಾಲಿಸುತ್ತಾರೆ. [QBR] ಅವರು ದುಷ್ಟರಿಗೆ ಅವರ ದುಷ್ಟತನವನ್ನು ಮುಂದುವರಿಸಲು ಪ್ರೋತ್ಸಾಹಿಸುತ್ತಾರೆ. [QBR2] ಆದ್ದರಿಂದ ಜನರು ಪಾಪಮಾಡುವುದನ್ನು ನಿಲ್ಲಿಸಲಿಲ್ಲ. [QBR] ಅವರೆಲ್ಲರು ನನಗೆ ಸೊದೋಮ್ ನಗರದಂತೆ ಇದ್ದಾರೆ. [QBR2] ಜೆರುಸಲೇಮಿನ ಜನರು ಗೊಮೋರ ನಗರದಂತೆ ಇದ್ದಾರೆ.” [QBR]
15. ಸರ್ವಶಕ್ತನಾದ ಯೆಹೋವನು ಪ್ರವಾದಿಗಳ ಬಗ್ಗೆ ಹೀಗೆನ್ನುತ್ತಾನೆ, [QBR] “ನಾನು ಆ ಪ್ರವಾದಿಗಳನ್ನು ದಂಡಿಸುವೆನು. [QBR2] ಆ ಶಿಕ್ಷೆಯು ವಿಷಪೂರಿತ ಆಹಾರದಂತೆಯೂ ನೀರಿನಂತೆಯೂ ಇರುವುದು. [QBR] ಪ್ರವಾದಿಗಳು ಒಂದು ಆಧ್ಯಾತ್ಮಿಕ ವ್ಯಾಧಿಯನ್ನು ಪ್ರಾರಂಭಿಸಿದರು. [QBR2] ಆ ವ್ಯಾಧಿಯು ಇಡೀ ದೇಶದಲ್ಲೆಲ್ಲ ಪ್ರಸರಿಸಿತು. [QBR] ಆದ್ದರಿಂದ ನಾನು ಆ ಪ್ರವಾದಿಗಳನ್ನು ಶಿಕ್ಷಿಸುತ್ತೇನೆ. [QBR2] ಆ ವ್ಯಾಧಿಯು ಆ ಪ್ರವಾದಿಗಳಿಂದ ಜೆರುಸಲೇಮಿಗೆ ಬಂದಿತು.”
16. ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: [QBR2] “ಆ ಪ್ರವಾದಿಗಳು ನಿಮಗೆ ಹೇಳುತ್ತಿರುವ ವಿಷಯಗಳ ಕಡೆಗೆ ಗಮನ ಕೊಡಬೇಡಿರಿ. ಅವರು ನಿಮ್ಮನ್ನು ಮರುಳುಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಅವರು ದರ್ಶನಗಳ ಬಗ್ಗೆ ಹೇಳುತ್ತಾರೆ. ಅವರ ದರ್ಶನಗಳು ಅವರ ಮನಸ್ಸಿನಿಂದ ಬಂದವುಗಳೇ ಹೊರತು ನನ್ನಿಂದ ಬಂದವುಗಳಲ್ಲ. [QBR]
17. ಕೆಲವು ಜನರು ಯೆಹೋವನ ನಿಜವಾದ ಸಂದೇಶಗಳನ್ನು ದ್ವೇಷಿಸುತ್ತಾರೆ. [QBR2] ಆದ್ದರಿಂದ ಆ ಪ್ರವಾದಿಗಳು ಆ ಜನರಿಗೆ ಬೇರೆಯದನ್ನೇ ಹೇಳುತ್ತಾರೆ. ಅವರು ‘ನಿಮಗೆ ಶುಭವಾಗುವುದು’ ಎನ್ನುತ್ತಾರೆ. ಕೆಲವು ಜನರು ಬಹಳ ಮೊಂಡರಾಗಿದ್ದಾರೆ. ಅವರು ತಮ್ಮ ಮನಸ್ಸಿಗೆ ಬಂದುದನ್ನೇ ಮಾಡುತ್ತಾರೆ. ಅವರಿಗೆ ಈ ಪ್ರವಾದಿಗಳು ‘ನಿಮಗೆ ಯಾವ ಕೇಡೂ ಸಂಭವಿಸುವದಿಲ್ಲ’ ಎಂದು ಹೇಳುತ್ತಾರೆ. [QBR]
18. ಈ ಪ್ರವಾದಿಗಳಲ್ಲಿ ಒಬ್ಬನಾದರೂ ಪರಲೋಕದ ಸಭೆಯಲ್ಲಿ ನಿಂತಿಲ್ಲ. [QBR2] ಒಬ್ಬನಾದರೂ ಯೆಹೋವನ ಸಂದೇಶವನ್ನು ಕೇಳಿಲ್ಲ, ಅಥವಾ ನೋಡಿಲ್ಲ. [QBR2] ಒಬ್ಬನಾದರೂ ಆತನ ಸಂದೇಶವನ್ನು ಸೂಕ್ಷ್ಮವಾಗಿ ಪರಿಶೀಲಿಸಿಲ್ಲ. [QBR]
19. ಈಗ ಯೆಹೋವನಿಂದ ದಂಡನೆಯು ಬಿರುಗಾಳಿಯಂತೆ ಬರುವುದು. [QBR] ಯೆಹೋವನ ಕೋಪವು ತೂಫಾನಿನಂತೆ [QBR2] ದುಷ್ಟರ ತಲೆಯ ಮೇಲೆ ಆರ್ಭಟಿಸಿ ಬೀಳುವುದು. [QBR]
20. ಆತನು ಮಾಡಬೇಕೆಂದು ಯೋಜಿಸಿದ್ದನ್ನು ಮಾಡಿ ಮುಗಿಸುವವರೆಗೆ [QBR2] ಆತನ ಕೋಪವು ಕಡಿಮೆಯಾಗುವುದಿಲ್ಲ. [QBR] ಆ ದಿನವಾದ ಮೇಲೆ ನೀವು ಇದನ್ನು [QBR2] ಸರಿಯಾಗಿ ಅರ್ಥಮಾಡಿಕೊಳ್ಳುವಿರಿ. [QBR]
21. ನಾನು ಆ ಪ್ರವಾದಿಗಳನ್ನು ಕಳುಹಿಸಲಿಲ್ಲ. [QBR2] ಆದರೂ ಅವರು ತಮ್ಮ ಸಂದೇಶವನ್ನು ಕೊಡಲು ಆತುರಪಟ್ಟರು. [QBR] ನಾನು ಅವರೊಂದಿಗೆ ಮಾತನಾಡಲಿಲ್ಲ [QBR2] ಆದರೂ ಅವರು ನನ್ನ ಹೆಸರು ಹೇಳಿ ಉಪದೇಶ ಮಾಡಿದರು. [QBR]
22. ಅವರು ನನ್ನ ಪರಲೋಕದ ಸಭೆಯಲ್ಲಿ ಭಾಗವಹಿಸಿದ್ದ ಪಕ್ಷದಲ್ಲಿ [QBR2] ಅವರು ನನ್ನ ಸಂದೇಶಗಳನ್ನು ಯೆಹೂದದ ಜನರಿಗೆ ಹೇಳಬಹುದಾಗಿತ್ತು. [QBR] ಅವರ ಕೆಟ್ಟತನವನ್ನೂ [QBR2] ದುಷ್ಟತನವನ್ನೂ ತಡೆಯಬಹುದಾಗಿತ್ತು.”
23. ಈ ಸಂದೇಶ ಯೆಹೋವನಿಂದ ಬಂದಿತು: [QBR] “ನಾನೇ ಯೆಹೋವನು. ನಾನು ಯಾವಾಗಲೂ ಸಮೀಪವಾಗಿದ್ದೇನೆ. [QBR2] ನಾನು ಬಹಳ ದೂರವಿಲ್ಲ. [QBR]
24. ಒಬ್ಬನು ನನಗೆ ಕಾಣದಂತೆ ಗುಪ್ತವಾದ ಸ್ಥಳದಲ್ಲಿ ಅಡಗಿಕೊಳ್ಳಲು ಪ್ರಯತ್ನಿಸಿದರೂ [QBR] ನಾನು ಅವನನ್ನು ಸರಾಗವಾಗಿ ನೋಡಬಲ್ಲೆನು. [QBR2] ನಾನು ಭೂಮ್ಯಾಕಾಶಗಳ ಎಲ್ಲಾ ಕಡೆಗಳಲ್ಲೂ ಇದ್ದೇನೆ.” [PS] ಯೆಹೋವನೇ ಇವುಗಳನ್ನು ಹೇಳಿದ್ದಾನೆ.
25. “ನನ್ನ ಹೆಸರಿನಿಂದ ಸುಳ್ಳುಬೋಧನೆ ಮಾಡುವ ಪ್ರವಾದಿಗಳಿದ್ದಾರೆ. ಅವರು ‘ನಾನೊಂದು ಕನಸು ಕಂಡೆ, ನಾನೊಂದು ಕನಸು ಕಂಡೆ’ ಎಂದು ಹೇಳುತ್ತಾರೆ.
26. ಎಷ್ಟು ದಿನ ಹೀಗೆ ನಡೆಯುವುದು? ಆ ಪ್ರವಾದಿಗಳು ಸುಳ್ಳುಗಳನ್ನೇ ಯೋಚಿಸುತ್ತಾರೆ. ಆಮೇಲೆ ಆ ಸುಳ್ಳುಗಳನ್ನೇ ಜನರಿಗೆ ಬೋಧಿಸುತ್ತಾರೆ.
27. ಯೆಹೂದದ ಜನರು ನನ್ನ ಹೆಸರನ್ನು ಮರೆಯುವಂತೆ ಅವರು ಪ್ರಯತ್ನ ಮಾಡುತ್ತಿದ್ದಾರೆ. ಅವರು ಒಬ್ಬರಿಗೊಬ್ಬರು ಈ ಸುಳ್ಳು ಕನಸುಗಳ ಬಗ್ಗೆ ಹೇಳಿ ಹೀಗೆ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನನ್ನು ಮರೆತಂತೆಯೇ ನನ್ನ ಜನರು ಸಹ ನನ್ನನ್ನು ಮರೆಯಲೆಂದು ಪ್ರಯತ್ನ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನನ್ನು ಮರೆತು ಸುಳ್ಳುದೇವರಾದ ಬಾಳನನ್ನು ಪೂಜಿಸಿದರು.
28. ಹೊಟ್ಟು, ಗೋಧಿಯ ಕಾಳಲ್ಲ. ಅದೇ ರೀತಿ, ಆ ಪ್ರವಾದಿಗಳ ಕನಸುಗಳು ನನ್ನ ಸಂದೇಶಗಳಲ್ಲ. ಒಬ್ಬ ವ್ಯಕ್ತಿಗೆ ತನ್ನ ಕನಸಿನ ಬಗ್ಗೆ ಹೇಳಬೇಕೆನಿಸಿದರೆ, ಅವನು ಹೇಳಲಿ. ಆದರೆ ನನ್ನ ಸಂದೇಶವನ್ನು ಕೇಳಿದ ಮನುಷ್ಯನು ಆ ಸಂದೇಶವನ್ನು ಯಥಾರ್ಥವಾಗಿ ಹೇಳಲಿ.
29. ನನ್ನ ಸಂದೇಶವು ಬೆಂಕಿಯ ಜ್ವಾಲೆಯಂತಿದೆ. ಅದು ಕಲ್ಲುಬಂಡೆಯನ್ನು ಒಡೆದುಹಾಕುವ ಸುತ್ತಿಗೆಯಂತಿದೆ” ಇದು ಯೆಹೋವನ ನುಡಿ. [PE][PS]
30. “ನಾನು ಸುಳ್ಳುಪ್ರವಾದಿಗಳ ವಿರೋಧಿಯಾಗಿದ್ದೇನೆ.” ಇದು ಯೆಹೋವನ ನುಡಿ. “ಈ ಪ್ರವಾದಿಗಳು ನನ್ನ ಪದಗಳನ್ನು ಒಬ್ಬರಿಂದೊಬ್ಬರು ಕದಿಯುತ್ತಿದ್ದಾರೆ. [*ಈ ಪ್ರವಾದಿಗಳು … ಕದಿಯುತ್ತಿದ್ದಾರೆ ನಿಜವಾದ ಪ್ರವಾದಿಗಳ ನುಡಿಗಳನ್ನು ಅನುಕರಿಸಿ, ಯಾರು ನಿಜವಾದ ಪ್ರವಾದಿಗಳು ಮತ್ತು ಯಾರು ಸುಳ್ಳುಪ್ರವಾದಿಗಳು ಎಂದು ಶಂಕಿಸಲಾಗದಂತೆ ಮಾಡುತ್ತಿದ್ದ ಸುಳ್ಳುಪ್ರವಾದಿಗಳ ಬಗ್ಗೆ ಯೆರೆಮೀಯನು ಇಲ್ಲಿ ಹೀಗೆ ಹೇಳಿದ್ದಿರಬಹುದು.]
31. ನಾನು ಸುಳ್ಳುಪ್ರವಾದಿಗಳನ್ನು ವಿರೋಧಿಸುತ್ತೇನೆ.” ಇದು ಯೆಹೋವನ ನುಡಿ. “ಅವರು ತಮ್ಮ ಮಾತುಗಳನ್ನು ಹೇಳಿ ಅದು ನನ್ನ ಸಂದೇಶವೆಂಬುವಂತೆ ನಟನೆ ಮಾಡುತ್ತಾರೆ.
32. ನಾನು ಕಾಲ್ಪನಿಕ ಕನಸುಗಳನ್ನು ಬೋಧಿಸುವ ಸುಳ್ಳುಪ್ರವಾದಿಗಳ ವಿರೋಧಿಯಾಗಿದ್ದೇನೆ.” ಇದು ಪ್ರಭುವಿನ ನುಡಿ. “ಅವರು ತಮ್ಮ ಸುಳ್ಳುಬೋಧನೆಗಳಿಂದ ನನ್ನ ಜನರನ್ನು ಅಡ್ಡದಾರಿಗೆಳೆಯುತ್ತಾರೆ. ನಾನು ಜನರಿಗೆ ಉಪದೇಶ ಮಾಡುವದಕ್ಕಾಗಿ ಆ ಪ್ರವಾದಿಗಳನ್ನು ಕಳುಹಿಸಿಲ್ಲ. ನನಗೋಸ್ಕರವಾಗಿ ಏನನ್ನಾದರೂ ಮಾಡಲು ನಾನು ಅವರಿಗೆ ಎಂದೂ ಆಜ್ಞಾಪಿಸಿಲ್ಲ. ಅವರು ಯೆಹೂದದ ಜನರಿಗೆ ಸ್ವಲ್ಪವೂ ಸಹಾಯವನ್ನು ಮಾಡಲಾರರು” ಇದು ಯೆಹೋವನ ನುಡಿ. [PS]
33. {ಯೆಹೋವನಿಂದ ದುಃಖಕರ ಸಂದೇಶ} [PS] “ಯೆಹೂದದ ಜನರಾಗಲಿ ಪ್ರವಾದಿಯಾಗಲಿ ಯಾಜಕನಾಗಲಿ ‘ಯೆರೆಮೀಯನೇ, ಯೆಹೋವನು ದಯಪಾಲಿಸಿರುವ ಪ್ರಕಟನೆಯೇನು?’ ಎಂದು ನಿನ್ನನ್ನು ಕೇಳಬಹುದು. ನೀನು ಅವರಿಗೆ, ‘ಯೆಹೋವನಿಗೆ ನೀವೇ ದೊಡ್ಡ ಭಾರ. [†ಭಾರ ಹೀಬ್ರೂ ಭಾಷೆಯಲ್ಲಿ “ಸಂದೇಶ” ಮತ್ತು “ಭಾರ” ಎನ್ನುವದಕ್ಕೆ ಒಂದೇ ಪದವಿದೆ. ಇದು ಶಬ್ಧ ಚಮತ್ಕಾರ.] ನಾನು ಆ ಭಾರವನ್ನು ಕೆಳಗೆ ಎಸೆದುಬಿಡುತ್ತೇನೆ’ ” ಎಂದು ಉತ್ತರಿಸು. ಇದು ಯೆಹೋವನ ನುಡಿ. [PE][PS]
34. “ಒಬ್ಬ ಪ್ರವಾದಿಯಾಗಲಿ ಯಾಜಕನಾಗಲಿ ಸಾಮಾನ್ಯ ಮನುಷ್ಯನಾಗಲಿ ‘ಇದು ಯೆಹೋವನ ಭಾರ’ ಎಂದು ಹೇಳಿದರೆ ಅವನು ಸುಳ್ಳು ಹೇಳಿದಂತೆಯೇ. ಆದ್ದರಿಂದ ನಾನು ಆ ವ್ಯಕ್ತಿಯನ್ನು ಮತ್ತು ಅವರ ಇಡೀ ಕುಟುಂಬವನ್ನು ದಂಡಿಸುತ್ತೇನೆ.
35. ನೀವು ಪರಸ್ಪರ ‘ಯೆಹೋವನ ಉತ್ತರವೇನು?’ ಅಥವಾ ‘ಯೆಹೋವನು ಏನು ಹೇಳಿದನು?’ ಎಂದು ಮಾತನಾಡಬೇಕು.
36. ನೀವು ಪುನಃ ಎಂದಿಗೂ ‘ಯೆಹೋವನ ಭಾರ’ ಎಂಬ ಮಾತನ್ನು ಉಪಯೋಗಿಸಕೂಡದು. ಏಕೆಂದರೆ ಯೆಹೋವನ ಸಂದೇಶವು ಯಾರಿಗೂ ಭಾರವಾಗಬೇಕಾಗಿಲ್ಲ. ಆದರೆ ನೀವು ನಿಮ್ಮ ದೇವರ ಮಾತುಗಳನ್ನು ತಲೆಕೆಳಗೆ ಮಾಡಿದ್ದೀರಿ. ಆತನು ಸರ್ವಶಕ್ತನಾಗಿದ್ದಾನೆ ಮತ್ತು ಜೀವಸ್ವರೂಪನಾದ ದೇವರಾಗಿದ್ದಾನೆ. [PE][PS]
37. “ನೀವು ದೇವರ ಸಂದೇಶವನ್ನು ತಿಳಿದುಕೊಳ್ಳ ಬಯಸಿದರೆ ಪ್ರವಾದಿಯನ್ನು ಕುರಿತು ‘ಯೆಹೋವನು ನಿನಗೆ ಏನೆಂದು ಉತ್ತರವನ್ನು ಕೊಟ್ಟನು?’ ಅಥವಾ ‘ಯೆಹೋವನು ಏನು ಹೇಳಿದನು?’ ಎಂದು ಕೇಳಿರಿ.
38. ಆದರೆ ‘ಯೆಹೋವನ ಭಾರವೇನು?’ ಎಂದು ಕೇಳಬೇಡಿರಿ. ನೀವು ಆ ಪದಗಳನ್ನು ಬಳಸಿದರೆ ಯೆಹೋವನು ನಿಮಗೆ ಹೀಗೆ ಹೇಳುವನು: ‘ನೀವು ನನ್ನ ಸಂದೇಶವನ್ನು “ಯೆಹೋವನ ಭಾರವೆಂದು” ಹೇಳಬಾರದಾಗಿತ್ತು. ಆ ಪದಗಳನ್ನು ಬಳಸಬಾರದೆಂದು ನಾನು ನಿಮಗೆ ಹೇಳಿದ್ದೇನೆ.
39. ಆದರೆ ನೀವು ನನ್ನ ಸಂದೇಶವನ್ನು ಭಾರವಾದ ಹೊರೆ ಎಂದು ಹೇಳಿದ್ದೀರಿ. ಆದ್ದರಿಂದ ನಾನು ನಿಮ್ಮನ್ನು ಒಂದು ಭಾರವಾದ ಹೊರೆಯಂತೆ ಎತ್ತಿ ನನ್ನಿಂದ ದೂರ ಎಸೆಯುತ್ತೇನೆ. ನಾನು ನಿಮ್ಮ ಪೂರ್ವಿಕರಿಗೆ ಜೆರುಸಲೇಮ್ ನಗರವನ್ನು ಕೊಟ್ಟೆ. ಆದರೆ ನಾನು ನಿಮ್ಮನ್ನೂ ಆ ನಗರವನ್ನೂ ನನ್ನಿಂದ ದೂರ ಎಸೆಯುವೆನು.
40. ನಿಮಗೆ ಶಾಶ್ವತವಾದ ಅಪಕೀರ್ತಿಯನ್ನು ತರುವೆನು. ನೀವು ಈ ಅವಮಾನವನ್ನು ಎಂದಿಗೂ ಮರೆಯಲಾರಿರಿ.’ ” [PE]