1. {ಬಾಬಿಲೋನಿನಲ್ಲಿದ್ದ ಯೆಹೂದದ ಸೆರೆಯಾಳುಗಳಿಗೆ ಒಂದು ಪತ್ರ} PS ಯೆರೆಮೀಯನು ಬಾಬಿಲೋನಿನಲ್ಲಿದ್ದ ಯೆಹೂದ್ಯ ಸೆರೆಯಾಳುಗಳಿಗೆ, ಅಂದರೆ ಹಿರಿಯನಾಯಕರಿಗೆ, ಯಾಜಕರಿಗೆ, ಪ್ರವಾದಿಗಳಿಗೆ ಮತ್ತು ಇನ್ನುಳಿದ ಸಮಸ್ತ ಜನರಿಗೆ ಪತ್ರವನ್ನು ಕಳುಹಿಸಿದನು. ಇವರನ್ನು ನೆಬೂಕದ್ನೆಚ್ಚರನು ಜೆರುಸಲೇಮಿನಿಂದ ಬಾಬಿಲೋನಿಗೆ ಸೆರೆಯಾಳುಗಳಾಗಿ ಕೊಂಡೊಯ್ದನು.
|
2. (ರಾಜನಾದ ಯೆಹೋಯಾಕೀನನನ್ನು, ರಾಜಮಾತೆಯನ್ನು, ಯೆಹೂದದ ಮತ್ತು ಜೆರುಸಲೇಮಿನ ಅಧಿಕಾರಿಗಳನ್ನು, ಮುಂದಾಳುಗಳನ್ನು, ಬಡಗಿಗಳನ್ನು ಮತ್ತು ಕಮ್ಮಾರರನ್ನು ಜೆರುಸಲೇಮಿನಿಂದ ತೆಗೆದುಕೊಂಡು ಹೋದ ಮೇಲೆ ಈ ಪತ್ರವನ್ನು ಕಳಿಸಲಾಯಿತು.)
|
3. ಚಿದ್ಕೀಯನು ಎಲ್ಲಾಸ ಮತ್ತು ಗೆಮರ್ಯರನ್ನು ರಾಜನಾದ ನೆಬೂಕದ್ನೆಚ್ಚರನ ಬಳಿಗೆ ಕಳಿಸಿದನು. ಚಿದ್ಕೀಯನು ಯೆಹೂದದ ರಾಜನಾಗಿದ್ದನು. ಎಲ್ಲಾಸನು ಶಾಫಾನನ ಮಗನಾಗಿದ್ದನು. ಗೆಮರ್ಯನು ಹಿಲ್ಕೀಯನ ಮಗನಾಗಿದ್ದನು. ಬಾಬಿಲೋನಿಗೆ ಕೊಂಡೊಯ್ಯುವಂತೆ ಯೆರೆಮೀಯನು ಅವರಿಗಾಗಿ ಪತ್ರವನ್ನು ಕೊಟ್ಟನು. ಆ ಪತ್ರದಲ್ಲಿ ಹೀಗೆ ಬರೆಯಲಾಗಿತ್ತು:
|
4. ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ತಾನು ಜೆರುಸಲೇಮಿನಿಂದ ಬಾಬಿಲೋನಿಗೆ ಬಂಧಿಗಳನ್ನಾಗಿ ಕಳುಹಿಸಿದ ಎಲ್ಲಾ ಜನರಿಗೆ ಈ ಮಾತುಗಳನ್ನು ಹೇಳುತ್ತಾನೆ.
|
5. “ಮನೆಗಳನ್ನು ಕಟ್ಟಿ ಅವುಗಳಲ್ಲಿ ವಾಸಿಸಿರಿ. ಆ ಪ್ರದೇಶದಲ್ಲಿ ನೆಲೆಸಿರಿ. ತೋಟಗಳನ್ನು ಬೆಳೆಸಿರಿ ಮತ್ತು ನೀವು ಬೆಳೆಸಿದ ಆಹಾರವನ್ನು ಸೇವಿಸಿರಿ.
|
6. ಮದುವೆ ಮಾಡಿಕೊಳ್ಳಿರಿ; ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆಯಿರಿ. ನಿಮ್ಮ ಗಂಡುಮಕ್ಕಳಿಗೂ ನಿಮ್ಮ ಹೆಣ್ಣುಮಕ್ಕಳಿಗೂ ಮದುವೆ ಮಾಡಿರಿ. ಅವರಿಗೂ ಗಂಡು ಮತ್ತು ಹೆಣ್ಣು ಮಕ್ಕಳಾಗಲಿ. ಅನೇಕ ಮಕ್ಕಳನ್ನು ಹೆತ್ತು ಬಾಬಿಲೋನಿನಲ್ಲಿ ಬಹುಸಂಖ್ಯಾತರಾಗಿ. ಅಲ್ಪಸಂಖ್ಯಾತರಾಗಬೇಡಿ.
|
7. ಅಂತೆಯೇ, ನಾನು ನಿಮ್ಮನ್ನು ಕಳುಹಿಸಿದ ನಗರಕ್ಕೆ ಒಳ್ಳೆಯದನ್ನು ಮಾಡಿರಿ. ನೀವು ವಾಸಮಾಡುತ್ತಿರುವ ನಗರಕ್ಕಾಗಿ ಯೆಹೋವನಿಗೆ ಪ್ರಾರ್ಥಿಸಿರಿ. ಏಕೆಂದರೆ ಆ ನಗರದಲ್ಲಿ ನೆಮ್ಮದಿಯಿದ್ದರೆ ನಿಮಗೂ ನೆಮ್ಮದಿ ಸಿಗುವುದು.”
|
8. ಇಸ್ರೇಲರ ದೇವರೂ, ಸರ್ವಶಕ್ತನೂ ಆಗಿರುವ ಯೆಹೋವನು, ಹೀಗೆನ್ನುತ್ತಾನೆ: “ನಿಮ್ಮ ಪ್ರವಾದಿಗಳು ಮತ್ತು ಮಾಟಮಂತ್ರಗಾರರು ನಿಮ್ಮನ್ನು ಮರುಳುಗೊಳಿಸದಿರಲಿ. ಅವರು ನೋಡುವ ಕನಸುಗಳಿಗೆ ಕಿವಿಗೊಡಬೇಡಿ.
|
9. ಅವರು ಸುಳ್ಳುಗಳನ್ನು ಬೋಧಿಸುತ್ತಿರುವರು. ಅವರ ಸಂದೇಶವು ನನ್ನಿಂದ ಬಂದುದು ಎಂದು ಅವರು ಹೇಳುತ್ತಿರುವರು. ಆದರೆ ನಾನು ಅದನ್ನು ಕಳುಹಿಸಲಿಲ್ಲ.” ಈ ಸಂದೇಶವು ಯೆಹೋವನಿಂದ ಬಂದದ್ದು.
|
10. ಯೆಹೋವನು ಹೀಗೆನ್ನುತ್ತಾನೆ: “ಬಾಬಿಲೋನ್ ಎಪ್ಪತ್ತು ವರ್ಷಗಳವರೆಗೆ ಬಲಿಷ್ಠವಾಗಿರುವುದು. ಅನಂತರ ನಾನು ಬಾಬಿಲೋನಿನಲ್ಲಿ ವಾಸಮಾಡುತ್ತಿರುವ ನಿಮ್ಮ ಬಳಿಗೆ ಬಂದು ನನ್ನ ವಾಗ್ದಾನದಂತೆ ನಿಮ್ಮನ್ನು ಜೆರುಸಲೇಮಿಗೆ ಮತ್ತೆ ಕರೆದುಕೊಂಡು ಬರುವೆನು.
|
11. ನಾನು ನಿಮಗಾಗಿ ಹಾಕಿದ ಯೋಜನೆಗಳು ನನಗೆ ಗೊತ್ತಿರುವುದರಿಂದ ನಾನು ಹೀಗೆ ಹೇಳುತ್ತಿದ್ದೇನೆ.” ಇದು ಯೆಹೋವನ ಸಂದೇಶ. “ನಾನು ನಿಮಗಾಗಿ ಒಳ್ಳೆಯ ಯೋಜನೆಗಳನ್ನು ಹಾಕಿದ್ದೇನೆ. ನಿಮಗೆ ಕೆಟ್ಟದ್ದನ್ನು ಮಾಡುವ ವಿಚಾರ ನನಗಿಲ್ಲ. ನಾನು ನಿಮಗಾಗಿ ಆಶಾದಾಯಕವಾದ ಮತ್ತು ಒಳ್ಳೆಯ ಭವಿಷ್ಯದ ವಿಚಾರಗಳನ್ನಿಟ್ಟುಕೊಂಡಿದ್ದೇನೆ.
|
12. ಆಗ ನೀವು ನನ್ನಲ್ಲಿ ಮೊರೆಯಿಡುವಿರಿ. ನೀವು ನನ್ನಲ್ಲಿಗೆ ಬಂದು ನನ್ನನ್ನು ಪ್ರಾರ್ಥಿಸಿರಿ; ಆಗ ನಾನು ನಿಮಗೆ ಕಿವಿಗೊಡುವೆನು.
|
14. ನಾನು ನಿಮಗೆ ದೊರೆಯುವೆನು.” ಇದು ಯೆಹೋವನ ನುಡಿ. “ನಾನು ನಿಮ್ಮನ್ನು ನಿಮ್ಮ ಬಂಧನದಿಂದ ಬಿಡಿಸಿ ಕರೆದುತರುವೆನು. ನಾನು ಈ ಸ್ಥಳವನ್ನು ಬಿಡಲು ನಿಮಗೆ ಒತ್ತಾಯಿಸಿದೆ. ಆದರೆ ನಾನು ನಿಮ್ಮನ್ನು ಕಳುಹಿಸಿದ್ದ ಎಲ್ಲಾ ಜನಾಂಗಗಳಿಂದ ಮತ್ತು ಎಲ್ಲಾ ಸ್ಥಳಗಳಿಂದ ನಿಮ್ಮನ್ನು ಒಟ್ಟುಗೂಡಿಸಿ ಈ ಸ್ಥಳಕ್ಕೆ ಕರೆದು ತರುವೆನು.” ಇದು ಯೆಹೋವನ ನುಡಿ.
|
16. ಬಾಬಿಲೋನಿಗೆ ತೆಗೆದುಕೊಂಡು ಹೋಗದ ನಿಮ್ಮ ಆಪ್ತರ ಬಗ್ಗೆ ಯೆಹೋವನು ಹೀಗೆನ್ನುತ್ತಾನೆ. ಈಗ ದಾವೀದನ ಸಿಂಹಾಸನಾರೂಢನಾದ ರಾಜನ ವಿಷಯವಾಗಿಯೂ ಇನ್ನೂ ಜೆರುಸಲೇಮ್ ನಗರದಲ್ಲಿಯೇ ಇರುವ ಜನರ ವಿಷಯವಾಗಿಯೂ ಹೇಳುತ್ತಿರುವೆನು.
|
17. ಸರ್ವಶಕ್ತನಾದ ಯೆಹೋವನು ಹೇಳಿದನು: “ಇನ್ನೂ ಜೆರುಸಲೇಮಿನಲ್ಲಿಯೇ ಇದ್ದ ಜನರ ವಿರುದ್ಧ ನಾನು ಬೇಗನೆ ಖಡ್ಗವನ್ನು, ಹಸಿವನ್ನು ಮತ್ತು ಭಯಂಕರವಾದ ವ್ಯಾಧಿಯನ್ನು ಕಳುಹಿಸುವೆನು. ನಾನು ಅವರನ್ನು, ಅತೀ ಕೊಳೆತು ತಿನ್ನಲಾಗದ ಅಂಜೂರದ ಹಣ್ಣುಗಳಂತೆ ಮಾಡುವೆನು.
|
18. ಇನ್ನೂ ಜೆರುಸಲೇಮಿನಲ್ಲಿರುವ ಜನರಿಗೆ ಖಡ್ಗ, ಹಸಿವು ಮತ್ತು ಭಯಂಕರವಾದ ವ್ಯಾಧಿಗಳಿಂದೊಡಗೂಡಿ ಬೆನ್ನಟ್ಟುವೆನು. ಆ ಜನರ ದುರ್ಗತಿಯನ್ನು ನೋಡಿ ಭೂಲೋಕದ ಸಮಸ್ತ ರಾಜ್ಯಗಳಿಗೆ ಭಯ ಉಂಟಾಗುವಂತೆ ಮಾಡುವೆನು. ಆ ಜನರನ್ನು ನಾಶಮಾಡುವೆನು. ನಡೆದ ವಿಷಯಗಳ ಬಗ್ಗೆ ಕೇಳಿ ಜನರು ಬೆರಗಾಗಿ ಸಿಳ್ಳುಹಾಕುವರು. ಯಾರಿಗಾದರೂ, ಕೇಡಾಗಲಿ ಎಂದು ಹೇಳಬೇಕಾದರೆ ಜನರು ಅವರ ಉದಾಹರಣೆಯನ್ನು ಕೊಡುವರು. ನಾನು ಅವರನ್ನು ಅಟ್ಟಿದ ಎಲ್ಲೆಡೆಯಲ್ಲಿಯೂ ಜನರು ಅವರನ್ನು ಅವಮಾನಗೊಳಿಸುವರು.
|
19. ಜೆರುಸಲೇಮಿನವರು ನನ್ನ ಸಂದೇಶಕ್ಕೆ ಕಿವಿಗೊಟ್ಟಿಲ್ಲವಾದ ಕಾರಣ ನಾನು ಹಾಗೆಲ್ಲ ನಡೆಯುವಂತೆ ಮಾಡುವೆನು” ಇದು ಯೆಹೋವನ ನುಡಿ. “ನಾನು ಮತ್ತೆಮತ್ತೆ ನನ್ನ ಸಂದೇಶವನ್ನು ಅವರಿಗೆ ಕೊಟ್ಟೆ. ಆ ಜನರಿಗೆ ಸಂದೇಶಗಳನ್ನು ಕೊಡುವದಕ್ಕಾಗಿ ನನ್ನ ಸೇವಕರಾದ ಪ್ರವಾದಿಗಳನ್ನು ಉಪಯೋಗಿಸಿಕೊಂಡೆ. ಆದರೆ ಆ ಜನರು ಕೇಳಲಿಲ್ಲ.” ಇದು ಯೆಹೋವನ ನುಡಿ.
|
20. “ನೀವು ಬಂಧಿಗಳು. ನಾನು ನಿಮ್ಮನ್ನು ಜೆರುಸಲೇಮ್ ಬಿಟ್ಟು ಬಾಬಿಲೋನಿಗೆ ಹೋಗುವಂತೆ ಒತ್ತಾಯಿಸಿದೆ. ಆದ್ದರಿಂದ ಯೆಹೋವನ ಸಂದೇಶವನ್ನು ಕೇಳಿರಿ.”
|
21. ಕೊಲಾಯನ ಮಗನಾದ ಅಹಾಬ ಮತ್ತು ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಸರ್ವಶಕ್ತನಾದ ಯೆಹೋವನು ಹೀಗೆಂದನು: “ಇವರಿಬ್ಬರು ನಿಮಗೆ ಸುಳ್ಳುಪ್ರವಾದನೆ ಮಾಡಿದ್ದಾರೆ. ಅವರ ಸಂದೇಶವು ನನ್ನಿಂದ ಬಂದದ್ದು ಎಂದು ಅವರು ಹೇಳಿದ್ದಾರೆ. ಆದರೆ ಅವರು ಹೇಳಿದ್ದು ಸುಳ್ಳು. ನಾನು ಆ ಇಬ್ಬರು ಪ್ರವಾದಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುವೆನು. ನೆಬೂಕದ್ನೆಚ್ಚರನು ಬಾಬಿಲೋನಿನಲ್ಲಿ ಬಂಧಿಯಾಗಿರುವ ನಿಮ್ಮೆಲ್ಲರ ಸಮ್ಮುಖದಲ್ಲಿ ಆ ಇಬ್ಬರು ಪ್ರವಾದಿಗಳನ್ನು ಕೊಲ್ಲುವನು.
|
22. ಯೆಹೂದದ ಬಂಧಿಗಳೆಲ್ಲಾ ಬೇರೆಯವರಿಗೆ ಕೇಡಾಗಲಿ ಎಂದು ಕೇಳಿಕೊಳ್ಳುವಾಗ ಆ ಜನರ ಉದಾಹರಣೆ ಕೊಡುವರು. ಆ ಬಂಧಿಗಳು ಹೀಗೆನ್ನುವರು: ‘ಬಾಬಿಲೋನಿನ ರಾಜನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಮತ್ತು ಅಹಾಬನ ಗತಿಯನ್ನು ಯೆಹೋವನು ನಿನಗೆ ತರಲಿ.’
|
23. ಆ ಪ್ರವಾದಿಗಳಿಬ್ಬರು ಇಸ್ರೇಲಿನಲ್ಲಿ ಹೆಚ್ಚಿನ ದುರಾಚಾರವನ್ನು ನಡೆಸಿದರು. ಅವರು ತಮ್ಮ ನೆರೆಯವರ ಹೆಂಡತಿಯರೊಂದಿಗೆ ವ್ಯಭಿಚಾರ ಮಾಡಿದರು. ಅವರು ಸುಳ್ಳುಗಳನ್ನು ಹೇಳಿದರು. ಆ ಸುಳ್ಳುಗಳನ್ನು ಯೆಹೋವನಾದ ನನ್ನ ಸಂದೇಶವೆಂದು ಹೇಳಿದರು. ಹಾಗೆ ಮಾಡಲು ನಾನು ಅವರಿಗೆ ಹೇಳಿಲ್ಲ, ಅವರು ಏನು ಮಾಡಿದ್ದಾರೆಂಬುದನ್ನು ನಾನು ಬಲ್ಲೆ. ಅದಕ್ಕೆ ನಾನೇ ಸಾಕ್ಷಿ.” ಇದು ಯೆಹೋವನ ಸಂದೇಶ. PS
|
24. {ಶೆಮಾಯನಿಗೆ ದೇವರ ಸಂದೇಶ} PS (ಯೆಹೋವನು ಯೆರೆಮೀಯನಿಗೆ ಈ ಅಪ್ಪಣೆಯನ್ನು ಕೊಟ್ಟನು.) ನೀನು ನೆಹೆಲಾಮ್ಯನಾದ ಶೆಮಾಯನಿಗೆ ಕೂಡ ಒಂದು ಸಂದೇಶವನ್ನು ಕೊಡು.
|
25. ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: “ಶೆಮಾಯನೇ, ಜೆರುಸಲೇಮಿನಲ್ಲಿರುವ ಎಲ್ಲಾ ಜನರಿಗೆ ನೀನು ಪತ್ರವನ್ನು ಕಳುಹಿಸಿದೆ. ನೀನು ಮಾಸೇಯನ ಮಗನಾಗಿರುವ ಯಾಜಕನಾದ ಚೆಫನ್ಯನಿಗೂ ಮತ್ತು ಎಲ್ಲಾ ಯಾಜಕರಿಗೂ ಪತ್ರಗಳನ್ನು ಕಳುಹಿಸಿದೆ. ಆ ಪತ್ರಗಳನ್ನು ಯೆಹೋವನ ಆದೇಶದ ಪ್ರಕಾರ ಕಳುಹಿಸದೆ, ನಿನ್ನ ಹೆಸರಿನಿಂದ ಕಳುಹಿಸಿದೆ.
|
26. ಶೆಮಾಯನೇ, ನೀನು ಚೆಫನ್ಯನಿಗೆ ಬರೆದ ಪತ್ರದಲ್ಲಿ ಹೀಗೆ ಹೇಳಿರುವೆ: ‘ಚೆಫನ್ಯನೇ, ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇಮಿಸಿದ್ದಾನೆ. ನೀನು ಯೆಹೋವನ ಆಲಯದ ಮೇಲಿಬಚಾರಕನಾಗಿರುವೆ. ಹುಚ್ಚನಂತೆ ವರ್ತಿಸುವ ಮತ್ತು ಪ್ರವಾದಿಯಂತೆ ನಟಿಸುವ ವ್ಯಕ್ತಿಯನ್ನು ನೀನು ಬಂಧಿಸಬೇಕು, ಅವನಿಗೆ ಕೋಳ ಹಾಕಿ ಕೊರಳಿಗೆ ಕಬ್ಬಿಣದ ಕಂಠಪಟ್ಟಿಯನ್ನು ಹಾಕಬೇಕು.
|
28. ಯೆರೆಮೀಯನು ಬಾಬಿಲೋನಿನಲ್ಲಿದ್ದ ನಮಗೆ ಈ ಸಂದೇಶವನ್ನು ಕಳುಹಿಸಿದ್ದಾನೆ: ಬಾಬಿಲೋನಿನಲ್ಲಿರುವ ನೀವು ಅಲ್ಲಿ ಬಹಳ ಕಾಲದವರೆಗೆ ಇರುವಿರಿ. ಆದ್ದರಿಂದ ಮನೆಗಳನ್ನು ಕಟ್ಟಿಕೊಂಡು ಅಲ್ಲಿ ನೆಲೆಸಿರಿ; ತೋಟಗಳನ್ನು ಬೆಳೆಸಿರಿ; ಮತ್ತು ನೀವು ಬೆಳೆದದ್ದನ್ನು ಆಹಾರವನ್ನಾಗಿ ಬಳಸಿರಿ.’ ” PEPS
|
31. “ಯೆರೆಮೀಯನೇ, ಬಾಬಿಲೋನಿನಲ್ಲಿರುವ ಎಲ್ಲಾ ಬಂಧಿಗಳಿಗೆ ಈ ಸಂದೇಶವನ್ನು ಕಳುಹಿಸು, ‘ನೆಹೆಲಾಮ್ಯನಾದ ಶೆಮಾಯನ ವಿಷಯದಲ್ಲಿ ಯೆಹೋವನು ಹೀಗೆನ್ನುವನು: ಶೆಮಾಯನು ನಿಮಗೆ ಪ್ರವಾದನೆ ಮಾಡಿದ್ದಾನೆ. ಆದರೆ ನಾನು ಅವನನ್ನು ಕಳುಹಿಸಲಿಲ್ಲ. ನೀವು ಸುಳ್ಳನ್ನು ನಂಬುವಂತೆ ಅವನು ಮಾಡಿದ್ದಾನೆ.
|
32. ಆದ್ದರಿಂದ ಅವನನ್ನು ನಾನು ತಕ್ಷಣ ದಂಡಿಸುತ್ತೇನೆ. ನಾನು ಅವನ ಕುಟುಂಬವನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ. ನಾನು ನನ್ನ ಜನರಿಗಾಗಿ ಮಾಡುವ ಒಳ್ಳೆಯವುಗಳಲ್ಲಿ ಅವನು ಪಾಲು ಹೊಂದುವುದಿಲ್ಲ.’ ” ಇದು ಯೆಹೋವನ ನುಡಿ. “ ‘ಶೆಮಾಯನು, ಜನರನ್ನು ಯೆಹೋವನಾದ ನನ್ನ ವಿರುದ್ಧ ತಿರುಗುವಂತೆ ಮಾಡಿದ್ದರಿಂದ ನಾನು ಅವನನ್ನು ದಂಡಿಸುವೆನು.’ ” PE
|