ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಯೆರೆಮಿಯ
1. {ಯೆರೆಮೀಯನು ಹೊಲವನ್ನು ಕೊಂಡದ್ದು} [PS] ಯೆಹೂದದ ರಾಜನಾದ ಚಿದ್ಕೀಯನ ಆಳ್ವಿಕೆಯ ಹತ್ತನೆಯ ವರ್ಷದಲ್ಲಿ [*ಚಿದ್ಕೀಯನ ಆಳ್ವಿಕೆಯ ಹತ್ತನೆಯ ವರ್ಷ ಅಂದರೆ ಕ್ರಿ. ಪೂ. 588-587. ನೆಬೂಕದ್ನೆಚ್ಚರನು ಜೆರುಸಲೇಮನ್ನು ನಾಶಮಾಡಿದ್ದು ಈ ವರ್ಷದಲ್ಲಿಯೇ.] ಯೆರೆಮೀಯನಿಗೆ ಯೆಹೋವನಿಂದ ಬಂದ ಸಂದೇಶವಿದು. ಚಿದ್ಕೀಯನ ಆಳ್ವಿಕೆಯ ಹತ್ತನೆಯ ವರ್ಷ ನೆಬೂಕದ್ನೆಚ್ಚರನ ಆಳ್ವಿಕೆಯ ಹದಿನೆಂಟನೇ ವರ್ಷವಾಗಿತ್ತು.
2. ಆ ಸಮಯದಲ್ಲಿ ಬಾಬಿಲೋನಿನ ರಾಜನ ಸೈನ್ಯವು ಜೆರುಸಲೇಮನ್ನು ಮುತ್ತಿತ್ತು. ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು. ಈ ಕಾರಾಗೃಹವು ಯೆಹೂದದ ರಾಜನ ಅರಮನೆಗೆ ಸೇರಿತ್ತು.
3. ಯೆಹೂದದ ರಾಜನಾದ ಚಿದ್ಕೀಯನು ಯೆರೆಮೀಯನನ್ನು ಆ ಕಾರಾಗೃಹದಲ್ಲಿಟ್ಟಿದ್ದನು. ಯೆರೆಮೀಯನು ಪ್ರವಾದಿಸಿದ ವಿಷಯಗಳನ್ನು ಚಿದ್ಕೀಯನು ಮೆಚ್ಚಿಕೊಂಡಿರಲಿಲ್ಲ. ಯೆರೆಮೀಯನು ಹೇಳಿದ್ದೇನೆಂದರೆ: “ಯೆಹೋವನು ಹೀಗೆನ್ನುತ್ತಾನೆ: ‘ನಾನು ತಕ್ಷಣವೇ ಜೆರುಸಲೇಮ್ ನಗರವನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸುತ್ತೇನೆ. ನೆಬೂಕದ್ನೆಚ್ಚರನು ಈ ನಗರವನ್ನು ಸ್ವಾಧೀನಪಡಿಸಿಕೊಳ್ಳುವನು.
4. ಯೆಹೂದದ ರಾಜನಾದ ಚಿದ್ಕೀಯನು ಬಾಬಿಲೋನಿನ ಸೈನಿಕರಿಂದ ತಪ್ಪಿಸಿಕೊಳ್ಳಲಾರ. ಖಂಡಿತವಾಗಿಯೂ ಅವನನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸಲಾಗುವುದು. ಚಿದ್ಕೀಯನು ಮುಖಾಮುಖಿಯಾಗಿ ಬಾಬಿಲೋನಿನ ರಾಜನೊಂದಿಗೆ ಮಾತನಾಡುವನು. ಚಿದ್ಕೀಯನು ತನ್ನ ಕಣ್ಣುಗಳಿಂದ ಅವನನ್ನು ನೋಡುವನು.
5. ಬಾಬಿಲೋನಿನ ರಾಜನು ಚಿದ್ಕೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು. ನಾನು ಅವನನ್ನು ದಂಡಿಸುವವರೆಗೆ ಚಿದ್ಕೀಯನು ಅಲ್ಲಿರುವನು. ನೀವು ಕಸ್ದೀಯರೊಡನೆ ಯುದ್ಧ ಮಾಡಿದರೂ ನಿಮಗೆ ಜಯವಾಗದು.’ ” ಇದು ಯೆಹೋವನ ನುಡಿ. [PE][PS]
6. ಸೆರೆಯಲ್ಲಿದ್ದಾಗ ಯೆರೆಮೀಯನು ಹೇಳಿದನು, “ನನಗೆ ಯೆಹೋವನಿಂದ ಒಂದು ಸಂದೇಶ ಬಂದಿದೆ. ಅದು ಹೀಗಿದೆ:
7. ಯೆರೆಮೀಯನೇ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾಗಿರುವ ಹನಮೇಲನು ಶೀಘ್ರದಲ್ಲಿ ನಿನ್ನ ಬಳಿಗೆ ಬಂದು, ‘ಯೆರೆಮೀಯನೇ, ಅನಾತೋತ್ ಪಟ್ಟಣದ ಬಳಿಯಲ್ಲಿರುವ ನನ್ನ ಹೊಲವನ್ನು ಕೊಂಡುಕೊ. ನೀನು ನನ್ನ ಅತಿ ಸಮೀಪದ ಬಂಧುವಾದುದರಿಂದ ಅದನ್ನು ಕೊಂಡುಕೊ. ಆ ಹೊಲವನ್ನು ಕೊಂಡುಕೊಳ್ಳಲು ನಿನಗೆ ಅಧಿಕಾರವಿದೆ ಮತ್ತು ಅದು ನಿನ್ನ ಹೊಣೆಗಾರಿಕೆಯೂ ಹೌದು’ ಎಂದು ಹೇಳುವನು. [PE][PS]
8. “ಆಮೇಲೆ ಯೆಹೋವನು ಹೇಳಿದಂತೆಯೇ ಆಯಿತು. ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕಾರಾಗೃಹದ ಅಂಗಳದಲ್ಲಿದ್ದ ನನ್ನ ಬಳಿಗೆ ಬಂದು ಹೀಗೆ ಹೇಳಿದನು: ‘ಯೆರೆಮೀಯನೇ, ಬೆನ್ಯಾಮೀನ್ ಸೀಮೆಯ ಅನಾತೋತಿನಲ್ಲಿರುವ ನನ್ನ ಹೊಲವನ್ನು ಕೊಂಡುಕೊ. ಆ ಹೊಲವನ್ನು ನಿನಗಾಗಿ ಕೊಂಡುಕೊ. ಅದರ ಒಡೆಯನಾಗುವದಕ್ಕೆ ನಿನಗೆ ಹಕ್ಕಿದೆ.’ ” [PE][PS] ಇದು ಯೆಹೋವನ ಸಂದೇಶವೆಂದು ನನಗೆ ತಿಳಿಯಿತು.
9. ನಾನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿರುವ ಹೊಲವನ್ನು ಕೊಂಡು ಅದರ ಕ್ರಯವಾಗಿ ಹದಿನೇಳು ಶೆಕೆಲ್‌ [†ಶೆಕೆಲ್ 2:5 ಔನ್ಸ್ (ತೂಕ)] ಬೆಳ್ಳಿಯನ್ನು ತೂಕಹಾಕಿದೆನು.
10. ನಾನು ಕ್ರಯಪತ್ರಕ್ಕೆ ಸಹಿ ಹಾಕಿದೆನು. ಕ್ರಯಪತ್ರದ ಒಂದು ಪ್ರತಿಗೆ ರುಜು ಮಾಡಿಸಿದೆನು. ಇದಕ್ಕೆ ಸಾಕ್ಷಿಯಾಗಿ ಕೆಲಜನರನ್ನು ಕರೆಸಿದೆನು. ನಾನು ಬೆಳ್ಳಿಯನ್ನು ತಕ್ಕಡಿಯಲ್ಲಿ ತೂಕಹಾಕಿ ಕೊಟ್ಟೆನು.
11. ಆಮೇಲೆ ಕ್ರಯಪತ್ರದ ರುಜು ಮಾಡಿದ ಒಂದು ಪ್ರತಿಯನ್ನು ಮತ್ತು ರುಜು ಮಾಡದ ಒಂದು ಪ್ರತಿಯನ್ನು ತೆಗೆದುಕೊಂಡೆನು.
12. ನಾನು ಅವುಗಳನ್ನು ಬಾರೂಕನ ಕೈಗೆ ಕೊಟ್ಟೆನು. ಬಾರೂಕನು ನೇರೀಯನ ಮಗನಾಗಿದ್ದನು. ನೇರೀಯನು ಮಹ್ಸೇಮನ ಮಗನಾಗಿದ್ದನು. ಮೊಹರು ಮಾಡಿದ ಕ್ರಯಪತ್ರದಲ್ಲಿ ನಾನು ಹೊಲವನ್ನು ಕ್ರಯಕ್ಕೆ ಕೊಂಡ ಎಲ್ಲಾ ಷರತ್ತುಗಳಿದ್ದವು. ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಮತ್ತು ಉಳಿದ ಸಾಕ್ಷಿಗಳು ಅಲ್ಲಿದ್ದಾಗಲೇ ನಾನು ಈ ಕ್ರಯಪತ್ರವನ್ನು ಬಾರೂಕನ ಕೈಗೆ ಕೊಟ್ಟೆನು. ಆ ಸಾಕ್ಷಿಗಳು ಸಹ ಈ ಕ್ರಯಪತ್ರಕ್ಕೆ ಸಹಿಹಾಕಿದ್ದರು. ಆ ಅಂಗಳದಲ್ಲಿ ಕುಳಿತ ಹಲವಾರು ಜನ ಯೆಹೂದ್ಯರು ನಾನು ಬಾರೂಕನ ಕೈಗೆ ಆ ಕ್ರಯಪತ್ರ ಕೊಡುವದನ್ನು ನೋಡಿದರು. [PE][PS]
13. ಎಲ್ಲಾ ಜನರು ನೋಡುತ್ತಿದ್ದಂತೆಯೆ ನಾನು ಬಾರೂಕನಿಗೆ,
14. “ಸರ್ವಶಕ್ತನೂ ಇಸ್ರೇಲಿನ ದೇವರೂ ಆಗಿರುವ ಯೆಹೋವನು ಹೀಗೆನ್ನುತ್ತಾನೆ: ‘ಕ್ರಯಪತ್ರದ ಎರಡೂ ಪ್ರತಿಗಳನ್ನು ಅಂದರೆ ರುಜುಮಾಡಿದ ಮತ್ತು ರುಜುಮಾಡದ ಪ್ರತಿಗಳನ್ನು ತೆಗೆದುಕೊಂಡು ಅವುಗಳು ಬಹುಕಾಲ ಉಳಿಯುವಂತೆ ಒಂದು ಮಣ್ಣಿನ ಪಾತ್ರೆಯಲ್ಲಿ ಹಾಕಿ ಮುಚ್ಚಿಡು.’
15. ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು, ‘ಮುಂದಿನಕಾಲದಲ್ಲಿ ಇಸ್ರೇಲ್ ದೇಶದಲ್ಲಿ ನನ್ನ ಜನರು ಪುನಃ ಮನೆಗಳನ್ನು, ಹೊಲಗಳನ್ನು, ದ್ರಾಕ್ಷಿತೋಟಗಳನ್ನು ಕೊಂಡುಕೊಳ್ಳುವರು’ ಎಂದು ಅನ್ನುತ್ತಾನೆ.” [PE][PS]
16. ನೇರೀಯನ ಮಗನಾದ ಬಾರೂಕನಿಗೆ ಕ್ರಯಪತ್ರವನ್ನು ಕೊಟ್ಟ ಮೇಲೆ ನಾನು ಯೆಹೋವನಿಗೆ ಪ್ರಾರ್ಥಿಸಿ ಹೀಗೆಂದೆನು:
17. “ದೇವರಾದ ಯೆಹೋವನೇ, ನೀನು ಭೂಮ್ಯಾಕಾಶಗಳನ್ನು ಸೃಷ್ಟಿಸಿದೆ. ಅವುಗಳನ್ನು ನೀನು ನಿನ್ನ ಅಪಾರವಾದ ಶಕ್ತಿಯಿಂದ ಸೃಷ್ಟಿಸಿದೆ. ನಿನಗೆ ಅಸಾಧ್ಯವಾದುದು ಯಾವುದೂ ಇಲ್ಲ.
18. ಯೆಹೋವನೇ, ನೀನು ಸಾವಿರಾರು ಜನರಿಗೆ ನಂಬಿಗಸ್ತನಾಗಿಯೂ ಕರುಣಾಮಯಿಯಾಗಿಯೂ ಇರುವೆ. ಆದರೆ ತಂದೆಗಳು ಮಾಡಿದ ಪಾಪಕ್ಕಾಗಿ ಮಕ್ಕಳಿಗೆ ಶಿಕ್ಷೆಯನ್ನು ವಿಧಿಸುವಾತನೂ ನೀನೇ. ಮಹತ್ವವುಳ್ಳವನೇ, ಪರಾಕ್ರಮಿಯಾದ ದೇವರೇ, ಸರ್ವಶಕ್ತನಾದ ಯೆಹೋವನು ಎಂಬುದೇ ನಿನ್ನ ನಾಮಧೇಯ.
19. ನೀನು ಮಹತ್ತರವಾದ ಯೋಜನೆಗಳನ್ನು ಹಾಕಿ ಮಹತ್ಕಾರ್ಯಗಳನ್ನು ಮಾಡುವೆ. ಜನರು ಮಾಡುವ ಎಲ್ಲವನ್ನೂ ನೀನು ನೋಡುವೆ. ಒಳ್ಳೆಯದನ್ನು ಮಾಡುವವರಿಗೆ ನೀನು ಪ್ರತಿಫಲಗಳನ್ನು ಕೊಡುವೆ. ಕೆಟ್ಟದ್ದನ್ನು ಮಾಡುವವರನ್ನು ನೀನು ದಂಡಿಸುವೆ. ಅವರು ಯಾವುದಕ್ಕೆ ಅರ್ಹರೊ ಅದನ್ನು ಕೊಡುವೆ.
20. ಯೆಹೋವನೇ, ನೀನು ಈಜಿಪ್ಟ್ ದೇಶದಲ್ಲಿ ಅದ್ಭುತಕಾರ್ಯಗಳನ್ನು ಮಾಡಿದೆ. ಇಂದಿನವರೆಗೂ ನೀನು ಅದ್ಭುತಕಾರ್ಯಗಳನ್ನು ಮಾಡಿದೆ. ಇಸ್ರೇಲಿನಲ್ಲಿಯೂ ನೀನು ಅವುಗಳನ್ನು ಮಾಡಿದೆ. ಜನರು ಇರುವಲ್ಲೆಲ್ಲ ನೀನು ಅವುಗಳನ್ನು ಮಾಡಿದೆ. ಇವುಗಳಿಂದ ನೀನು ಸುಪ್ರಸಿದ್ಧನಾಗಿರುವೆ.
21. ಯೆಹೋವನೇ, ನೀನು ಅದ್ಭುತಕಾರ್ಯಗಳನ್ನು ಮಾಡಿ ನಿನ್ನ ಜನರನ್ನು ಈಜಿಪ್ಟಿನಿಂದ ಇಸ್ರೇಲಿಗೆ ಕರೆದುತಂದೆ. ಇದನ್ನು ಬಲವಾದ ಕೈಗಳಿಂದಲೇ ಮಾಡಿದೆ. ನಿನ್ನ ಸಾಮರ್ಥ್ಯ ಆಶ್ಚರ್ಯಕರವಾದದು.
22. “ಯೆಹೋವನೇ, ನೀನು ಈ ಭೂಮಿಯನ್ನು ಇಸ್ರೇಲರಿಗೆ ಕೊಟ್ಟೆ. ನೀನು ಬಹಳ ಕಾಲದ ಹಿಂದೆಯೇ ಈ ಭೂಮಿಯನ್ನು ಅವರ ಪೂರ್ವಿಕರಿಗೆ ಕೊಡುವದಾಗಿ ಮಾತು ಕೊಟ್ಟಿದ್ದೆ. ಇದು ಬಹಳ ಒಳ್ಳೆಯ ಭೂಮಿ. ಇದು ಅನೇಕ ಒಳ್ಳೆ ವಸ್ತುಗಳನ್ನು ಹೊಂದಿರುವ ಒಳ್ಳೆಯ ಭೂಮಿ. [‡ಇದು … ಭೂಮಿ ಅಕ್ಷರಶಃ, ಹಾಲು ಮತ್ತು ಜೇನು ಹರಿಯುವ ದೇಶ.]
23. ಇಸ್ರೇಲಿನ ಜನರು ಈ ಪ್ರದೇಶಕ್ಕೆ ಬಂದು ಅದನ್ನು ತಮ್ಮದನ್ನಾಗಿ ಮಾಡಿಕೊಂಡರು. ಆದರೆ ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ; ನಿನ್ನ ಉಪದೇಶಗಳನ್ನು ಅನುಸರಿಸಲಿಲ್ಲ; ನಿನ್ನ ಆಜ್ಞೆಯಂತೆ ಮಾಡಲಿಲ್ಲ. ಆದ್ದರಿಂದ ನೀನು ಇಸ್ರೇಲರಿಗೆ ಇಂಥಾ ದುರ್ಗತಿ ಬರುವಂತೆ ಮಾಡಿದೆ.
24. “ಈಗ ವೈರಿಗಳು ನಗರವನ್ನು ಮುತ್ತಿದ್ದಾರೆ. ಜೆರುಸಲೇಮಿನ ಗೋಡೆಯನ್ನು ಹತ್ತಿ ಅದನ್ನು ಸ್ವಾಧೀನಪಡಿಸಿಕೊಳ್ಳುವದಕ್ಕಾಗಿ ಅವರು ಇಳಿಜಾರುಗೋಡೆಗಳನ್ನು ಕಟ್ಟುತ್ತಿದ್ದಾರೆ. ಬಾಬಿಲೋನಿನ ಸೈನಿಕರು ತಮ್ಮ ಖಡ್ಗ, ಕ್ಷಾಮ ಮತ್ತು ಭಯಂಕರವ್ಯಾಧಿ ಇವುಗಳ ಸಹಾಯದಿಂದ ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವರು. ಬಾಬಿಲೋನಿನ ಸೈನಿಕರು ಈಗ ನಗರದ ಮೇಲೆ ಧಾಳಿ ಮಾಡುತ್ತಿದ್ದಾರೆ. ಯೆಹೋವನೇ, ಹೀಗಾಗುವದೆಂದು ನೀನು ಹೇಳಿದ್ದೆ, ಈಗ ನೀನು ಹೇಳಿದಂತೆಯೇ ಆಗುತ್ತಿದೆ.
25. “ನನ್ನ ಒಡೆಯನಾದ ಯೆಹೋವನೇ, ಆ ದುರ್ಬಟನೆಗಳೆಲ್ಲಾ ಸಂಭವಿಸುತ್ತಿವೆ. ಆದರೆ ಈಗ ನೀನು ‘ಯೆರೆಮೀಯನೇ, ಬೆಳ್ಳಿಯನ್ನು ಕೊಟ್ಟು ಹೊಲವನ್ನು ಕೊಂಡುಕೋ ಮತ್ತು ಈ ಖರೀದಿಗೆ ಸಾಕ್ಷಿಯಾಗಿ ಕೆಲವು ಜನರನ್ನು ಆರಿಸಿಕೋ’ ಎಂದು ಹೇಳುತ್ತಿರುವಿಯಲ್ಲ. ಬಾಬಿಲೋನಿನ ಸೈನ್ಯವು ನಗರವನ್ನು ಸ್ವಾಧೀನಪಡಿಸಿಕೊಳ್ಳಲು ಸಿದ್ಧವಾಗಿ ನಿಂತಿರುವಾಗ ನೀನು ಇದನ್ನು ಹೇಳುತ್ತಿರುವಿಯಲ್ಲ, ಏಕೆ? ಏಕೆ ನಾನು ಹಣವನ್ನು ಹೀಗೆ ವ್ಯರ್ಥವಾಗಿ ಕಳೆದುಕೊಳ್ಳಬೇಕು?” [PS]
26. ಆಗ ಯೆರೆಮೀಯನಿಗೆ ಯೆಹೋವನಿಂದ ಈ ಸಂದೇಶ ಬಂದಿತು:
27. “ಯೆರೆಮೀಯನೇ, ನಾನೇ ಯೆಹೋವನು, ನಾನು ಈ ಭೂಮಂಡಲದ ಪ್ರತಿಯೊಬ್ಬನ ದೇವರು. ಯೆರೆಮೀಯನೆ, ನನಗೆ ಯಾವುದೂ ಅಸಾಧ್ಯವಲ್ಲವೆಂಬುದನ್ನು ನೀನು ಬಲ್ಲೆ.”
28. ಯೆಹೋವನು ಹೀಗೆಂದನು: “ಜೆರುಸಲೇಮ್ ನಗರವನ್ನು ನಾನು ಕೂಡಲೇ ಬಾಬಿಲೋನಿನ ಸೈನ್ಯಕ್ಕೂ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೂ ಒಪ್ಪಿಸುವೆನು. ಸೈನ್ಯವು ಈ ನಗರವನ್ನು ವಶಪಡಿಸಿಕೊಳ್ಳುವುದು.
29. ಬಾಬಿಲೋನಿನ ಸೈನ್ಯವು ಈಗಾಗಲೇ ಜೆರುಸಲೇಮ್ ನಗರದ ಮೇಲೆ ಧಾಳಿ ಮಾಡುತ್ತಿದೆ. ಸೈನಿಕರು ಬೇಗನೆ ನಗರವನ್ನು ಪ್ರವೇಶಿಸಿ ಅದಕ್ಕೆ ಬೆಂಕಿಹಚ್ಚಿ ಸುಟ್ಟುಹಾಕುವರು. ಜೆರುಸಲೇಮಿನ ಜನರು ತಮ್ಮ ಮನೆಯ ಮಾಳಿಗೆಯ ಮೇಲೆ ಸುಳ್ಳುದೇವರಾದ ಬಾಳನಿಗೆ ನೈವೇದ್ಯವನ್ನು ಅರ್ಪಿಸಿ ನಾನು ಕೋಪಿಸಿಕೊಳ್ಳುವಂತೆ ಮಾಡಿದ ಕೆಲವು ಮನೆಗಳು ಈ ನಗರದಲ್ಲಿವೆ. ಅದಲ್ಲದೆ ಕೆಲವು ಜನರು ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸಿರುವರು. ಬಾಬಿಲೋನಿನ ಸೈನ್ಯವು ಆ ಮನೆಗಳನ್ನು ಸುಟ್ಟುಹಾಕುವುದು.
30. ನಾನು ಇಸ್ರೇಲಿನ ಜನರನ್ನು ಮತ್ತು ಯೆಹೂದದ ಜನರನ್ನು ಗಮನಿಸಿದ್ದೇನೆ. ಅವರು ಮಾಡುವದೆಲ್ಲ ಕೆಟ್ಟದ್ದೆ. ಅವರು ಚಿಕ್ಕಂದಿನಿಂದ ಕೆಟ್ಟದ್ದನ್ನೇ ಮಾಡಿದ್ದಾರೆ. ಇಸ್ರೇಲಿನ ಜನರು ತಮ್ಮ ಕೈಗಳಿಂದ ಮಾಡಿದ ವಿಗ್ರಹಗಳನ್ನು ಪೂಜಿಸಿ ನನಗೆ ಬಹುಕೋಪ ಬರುವಂತೆ ಮಾಡಿದರು.” ಇದು ಯೆಹೋವನ ನುಡಿ.
31. “ಜೆರುಸಲೇಮ್ ನಗರವು ನಿರ್ಮಾಣಗೊಂಡಂದಿನಿಂದ ಇಂದಿನವರೆಗೂ ಈ ನಗರದ ಜನರು ನನಗೆ ಕೋಪ ಬರುವಂತೆ ಮಾಡಿದ್ದಾರೆ. ಈ ನಗರವು ನನಗೆ ಅತಿಕೋಪ ಬರುವಂತೆ ಮಾಡಿದೆ. ಆದ್ದರಿಂದ ಕಣ್ಣಿಗೆ ಕಾಣದಂತೆ ಅದನ್ನು ಅಳಿಸಿಬಿಡುವೆನು.
32. ಇಸ್ರೇಲಿನ ಮತ್ತು ಯೆಹೂದದ ಜನರು ಮಾಡಿದ ಎಲ್ಲಾ ದುಷ್ಕೃತ್ಯಗಳಿಗಾಗಿ ನಾನು ಜೆರುಸಲೇಮ್ ನಗರವನ್ನು ನಾಶಮಾಡುತ್ತೇನೆ. ಜನರು, ರಾಜರು, ಮುಂದಾಳುಗಳು, ಯಾಜಕರು, ಪ್ರವಾದಿಗಳು, ಯೆಹೂದದ ಪ್ರಜೆಗಳು, ಜೆರುಸಲೇಮಿನ ನಿವಾಸಿಗಳು ಇವರೆಲ್ಲರೂ ನನಗೆ ಕೋಪ ಬರುವಂತೆ ಮಾಡಿದ್ದಾರೆ. [PE][PS]
33. “ಆ ಜನರು ಸಹಾಯಕೋರಿ ನನ್ನಲ್ಲಿಗೆ ಬರಬೇಕಾಗಿತ್ತು. ಆದರೆ ಅವರು ನನಗೆ ವಿಮುಖರಾದರು. ನಾನು ಮತ್ತೆಮತ್ತೆ ಅವರಿಗೆ ಬುದ್ಧಿಕಲಿಸುವ ಪ್ರಯತ್ನ ಮಾಡಿದೆ. ಆದರೆ ಅವರು ನನ್ನ ಮಾತನ್ನು ಕೇಳಲಿಲ್ಲ. ನಾನು ಅವರನ್ನು ತಿದ್ದುವ ಪ್ರಯತ್ನ ಮಾಡಿದೆ, ಆದರೆ ಅವರು ನನ್ನ ಮಾತನ್ನು ಕೇಳಲಿಲ್ಲ.
34. ಆ ಜನರು ತಮಗಾಗಿ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ಆ ವಿಗ್ರಹಗಳನ್ನಿಟ್ಟು ನನ್ನ ಆಲಯವನ್ನು ‘ಹೊಲಸು’ ಮಾಡಿದ್ದಾರೆ. [PE][PS]
35. “ಬೆನ್‌ಹಿನ್ನೊಮ್ ಕಣಿವೆಯಲ್ಲಿ ಅವರು ಸುಳ್ಳುದೇವರಾದ ಬಾಳನಿಗಾಗಿ ಎತ್ತರವಾದ ಸ್ಥಳಗಳನ್ನು ಕಟ್ಟಿದ್ದಾರೆ. ತಮ್ಮ ಮಕ್ಕಳನ್ನು ಆಹುತಿಕೊಡುವದಕ್ಕಾಗಿ ಈ ಪೂಜಾಸ್ಥಳಗಳನ್ನು ಕಟ್ಟಿಸಿದ್ದಾರೆ. ಇಂಥಾ ಭಯಂಕರವಾದ ಕೆಲಸವನ್ನು ಮಾಡಲು ನಾನು ಅವರಿಗೆ ಆಜ್ಞಾಪಿಸಿಲ್ಲ. ಯೆಹೂದದ ಜನರು ಇಂಥಾ ಭಯಂಕರವಾದ ಕಾರ್ಯವನ್ನು ಮಾಡುವರೆಂದು ನಾನೆಂದೂ ಧಿಹಿಸಿರಲಿಲ್ಲ. [PE][PS]
36. “ ‘ಬಾಬಿಲೋನಿನ ರಾಜನು ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವನು. ಈ ಪಟ್ಟಣವನ್ನು ವಶಪಡಿಸಿಕೊಳ್ಳಲು ಅವನು ಖಡ್ಗ, ಕ್ಷಾಮ, ಭಯಂಕರವಾದ ವ್ಯಾಧಿಗಳನ್ನು ಬಳಸಿಕೊಳ್ಳುವನು’ ಎಂದು ನೀವು ಹೇಳುತ್ತಿದ್ದೀರಿ. ಆದರೆ ಇಸ್ರೇಲರ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ:
37. ‘ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ತಮ್ಮ ಪ್ರದೇಶವನ್ನು ಬಿಟ್ಟುಹೋಗಲು ನಾನು ಒತ್ತಾಯಿಸಿದ್ದೇನೆ. ನಾನು ಅವರ ಮೇಲೆ ತುಂಬ ಕೋಪಗೊಂಡಿದ್ದೆ. ಆದರೆ ನಾನು ಅವರನ್ನು ಈ ಸ್ಥಳಕ್ಕೆ ಹಿಂದಿರುಗಿಸುವೆನು. ನಾನು ಒತ್ತಾಯಿಸಿ ಅವರನ್ನು ಅಟ್ಟಿದ ಸ್ಥಳಗಳಿಂದ ಅವರನ್ನು ಒಟ್ಟುಗೂಡಿಸುವೆನು. ಅವರನ್ನು ಪುನಃ ಈ ಸ್ಥಳಕ್ಕೆ ಕರೆತರುವೆನು. ಅವರು ನೆಮ್ಮದಿಯಿಂದ ಮತ್ತು ಸುರಕ್ಷಿತವಾಗಿ ಇರುವಂತೆ ಮಾಡುವೆನು.
38. ಇಸ್ರೇಲರು ಮತ್ತು ಯೆಹೂದ್ಯರು ನನ್ನ ಭಕ್ತರಾಗಿರುವರು, ನಾನು ಅವರ ದೇವರಾಗಿರುವೆನು.
39. ಒಂದೇ ಜನಾಂಗವಾಗುವ ಬಯಕೆಯನ್ನು ನಾನು ಅವರಲ್ಲಿ ಉಂಟುಮಾಡುವೆನು. ಅವರು ತಮ್ಮ ಜೀವಮಾನವೆಲ್ಲಾ ನನ್ನನ್ನು ಆರಾಧಿಸಬೇಕೆಂಬ ಬಯಕೆಯನ್ನು ಹೊಂದಿರುವರು. ಹೌದು, ಅವರ ಬಯಕೆಯೂ ಅವರ ಮಕ್ಕಳ ಬಯಕೆಯೂ ಇದೇ ಆಗಿರುವುದು. [PE][PS]
40. “ ‘ನಾನು ಇಸ್ರೇಲರ ಮತ್ತು ಯೆಹೂದ್ಯರ ಸಂಗಡ ಶಾಶ್ವತವಾದ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಈ ಒಡಂಬಡಿಕೆಗನುಸಾರವಾಗಿ ನಾನು ಅವರಿಗೆ ವಿಮುಖನಾಗುವುದೇ ಇಲ್ಲ. ನಾನು ಯಾವಾಗಲೂ ಅವರಿಗೆ ಒಳ್ಳೆಯವನಾಗಿರುತ್ತೇನೆ. ನನ್ನನ್ನು ಗೌರವಿಸಬೇಕೆಂಬ ಇಚ್ಛೆಯನ್ನು ಅವರಲ್ಲಿ ಬರಮಾಡುತ್ತೇನೆ. ಆಗ ಅವರೆಂದಿಗೂ ನನಗೆ ವಿಮುಖರಾಗುವದಿಲ್ಲ.
41. ಅವರು ನನ್ನನ್ನು ಸಂತೋಷಪಡಿಸುವರು. ಅವರಿಗೆ ಒಳ್ಳೆಯದನ್ನು ಮಾಡುವದರಲ್ಲಿ ನಾನು ಸಂತೋಷಪಡುವೆನು. ನಾನು ಖಂಡಿತವಾಗಿ ಅವರನ್ನು ಈ ದೇಶದಲ್ಲಿ ನೆಟ್ಟು ಬೆಳೆಯುವಂತೆ ಮಾಡುತ್ತೇನೆ. ಇದನ್ನು ನಾನು ಮನಃಪೂರ್ವಕವಾಗಿ ಮಾಡುತ್ತೇನೆ.’ ” [PE][PS]
42. ಯೆಹೋವನು ಹೀಗೆನ್ನುತ್ತಾನೆ: “ಇಸ್ರೇಲಿನ ಮತ್ತು ಯೆಹೂದದ ಜನರ ಮೇಲೆ ನಾನು ಈ ಮಹಾವಿಪತ್ತನ್ನು ತಂದಿದ್ದೇನೆ. ಅದರಂತೆಯೇ ನಾನು ಅವರಿಗೆ ಒಳಿತನ್ನು ತರುವೆನು. ನಾನು ಅವರಿಗೆ ಒಳ್ಳೆಯದನ್ನು ಮಾಡುವದಾಗಿ ಮಾತುಕೊಡುತ್ತೇನೆ.
43. ನೀವು ‘ಈ ಪ್ರದೇಶವು ಒಂದು ಬರಿದಾದ ಮರುಭೂಮಿ. ಇಲ್ಲಿ ಜನರಾಗಲಿ ಪ್ರಾಣಿಗಳಾಗಲಿ ಇಲ್ಲ. ಬಾಬಿಲೋನಿನ ಸೈನ್ಯವು ಈ ದೇಶವನ್ನು ಸೋಲಿಸಿದೆ’ ಎಂದು ಹೇಳುತ್ತಿರುವಿರಿ. ಆದರೆ ಮುಂದಿನಕಾಲದಲ್ಲಿ ಜನರು ಪುನಃ ಈ ಪ್ರದೇಶದಲ್ಲಿ ಹೊಲಗಳನ್ನು ಕೊಂಡುಕೊಳ್ಳುವರು.
44. ಜನರು ಹಣ ಕೊಟ್ಟು ಭೂಮಿಯನ್ನು ಕೊಂಡುಕೊಳ್ಳುವರು. ಅವರು ಕರಾರುಪತ್ರಗಳಿಗೆ ಸಹಿಹಾಕುವರು. ಜನರು ಕ್ರಯಪತ್ರಗಳಿಗೆ ಸಹಿ ಹಾಕುವದನ್ನು ಬೇರೆಯವರು ನೋಡುವರು. ಬೆನ್ಯಾಮೀನ್ ಕುಲದವರು ವಾಸಿಸುವ ಪ್ರದೇಶದಲ್ಲಿ ಜನರು ಪುನಃ ಹೊಲಗಳನ್ನು ಕೊಂಡುಕೊಳ್ಳುವರು. ಜೆರುಸಲೇಮಿನ ಸುತ್ತಲಿನ ಪ್ರದೇಶದಲ್ಲಿ ಅವರು ಹೊಲಗಳನ್ನು ಕೊಂಡುಕೊಳ್ಳುವರು. ಅವರು ಯೆಹೂದ ಪ್ರದೇಶದ ಊರುಗಳಲ್ಲಿಯೂ ಬೆಟ್ಟಪ್ರದೇಶದಲ್ಲಿಯೂ ಪಶ್ಚಿಮದ ಇಳಿಜಾರು ಪ್ರದೇಶದಲ್ಲಿಯೂ ದಕ್ಷಿಣದ ಮರಳುಗಾಡಿನಲ್ಲಿಯೂ ಹೊಲಗಳನ್ನು ಕೊಂಡುಕೊಳ್ಳುವರು. ನಾನು ನಿಮ್ಮ ಜನರನ್ನು ನಿಮ್ಮ ಪ್ರದೇಶಕ್ಕೆ ಪುನಃ ಕರೆದುಕೊಂಡು ಬರುವದರಿಂದ ಹೀಗಾಗುವುದು.” ಇದು ಯೆಹೋವನ ನುಡಿ. [PE]

ಟಿಪ್ಪಣಿಗಳು

No Verse Added

ಒಟ್ಟು 52 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 32 / 52
ಯೆರೆಮಿಯ 32:37
ಯೆರೆಮೀಯನು ಹೊಲವನ್ನು ಕೊಂಡದ್ದು 1 ಯೆಹೂದದ ರಾಜನಾದ ಚಿದ್ಕೀಯನ ಆಳ್ವಿಕೆಯ ಹತ್ತನೆಯ ವರ್ಷದಲ್ಲಿ *ಚಿದ್ಕೀಯನ ಆಳ್ವಿಕೆಯ ಹತ್ತನೆಯ ವರ್ಷ ಅಂದರೆ ಕ್ರಿ. ಪೂ. 588-587. ನೆಬೂಕದ್ನೆಚ್ಚರನು ಜೆರುಸಲೇಮನ್ನು ನಾಶಮಾಡಿದ್ದು ಈ ವರ್ಷದಲ್ಲಿಯೇ. ಯೆರೆಮೀಯನಿಗೆ ಯೆಹೋವನಿಂದ ಬಂದ ಸಂದೇಶವಿದು. ಚಿದ್ಕೀಯನ ಆಳ್ವಿಕೆಯ ಹತ್ತನೆಯ ವರ್ಷ ನೆಬೂಕದ್ನೆಚ್ಚರನ ಆಳ್ವಿಕೆಯ ಹದಿನೆಂಟನೇ ವರ್ಷವಾಗಿತ್ತು. 2 ಆ ಸಮಯದಲ್ಲಿ ಬಾಬಿಲೋನಿನ ರಾಜನ ಸೈನ್ಯವು ಜೆರುಸಲೇಮನ್ನು ಮುತ್ತಿತ್ತು. ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು. ಈ ಕಾರಾಗೃಹವು ಯೆಹೂದದ ರಾಜನ ಅರಮನೆಗೆ ಸೇರಿತ್ತು. 3 ಯೆಹೂದದ ರಾಜನಾದ ಚಿದ್ಕೀಯನು ಯೆರೆಮೀಯನನ್ನು ಆ ಕಾರಾಗೃಹದಲ್ಲಿಟ್ಟಿದ್ದನು. ಯೆರೆಮೀಯನು ಪ್ರವಾದಿಸಿದ ವಿಷಯಗಳನ್ನು ಚಿದ್ಕೀಯನು ಮೆಚ್ಚಿಕೊಂಡಿರಲಿಲ್ಲ. ಯೆರೆಮೀಯನು ಹೇಳಿದ್ದೇನೆಂದರೆ: “ಯೆಹೋವನು ಹೀಗೆನ್ನುತ್ತಾನೆ: ‘ನಾನು ತಕ್ಷಣವೇ ಜೆರುಸಲೇಮ್ ನಗರವನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸುತ್ತೇನೆ. ನೆಬೂಕದ್ನೆಚ್ಚರನು ಈ ನಗರವನ್ನು ಸ್ವಾಧೀನಪಡಿಸಿಕೊಳ್ಳುವನು. 4 ಯೆಹೂದದ ರಾಜನಾದ ಚಿದ್ಕೀಯನು ಬಾಬಿಲೋನಿನ ಸೈನಿಕರಿಂದ ತಪ್ಪಿಸಿಕೊಳ್ಳಲಾರ. ಖಂಡಿತವಾಗಿಯೂ ಅವನನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸಲಾಗುವುದು. ಚಿದ್ಕೀಯನು ಮುಖಾಮುಖಿಯಾಗಿ ಬಾಬಿಲೋನಿನ ರಾಜನೊಂದಿಗೆ ಮಾತನಾಡುವನು. ಚಿದ್ಕೀಯನು ತನ್ನ ಕಣ್ಣುಗಳಿಂದ ಅವನನ್ನು ನೋಡುವನು. 5 ಬಾಬಿಲೋನಿನ ರಾಜನು ಚಿದ್ಕೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು. ನಾನು ಅವನನ್ನು ದಂಡಿಸುವವರೆಗೆ ಚಿದ್ಕೀಯನು ಅಲ್ಲಿರುವನು. ನೀವು ಕಸ್ದೀಯರೊಡನೆ ಯುದ್ಧ ಮಾಡಿದರೂ ನಿಮಗೆ ಜಯವಾಗದು.’ ” ಇದು ಯೆಹೋವನ ನುಡಿ. 6 ಸೆರೆಯಲ್ಲಿದ್ದಾಗ ಯೆರೆಮೀಯನು ಹೇಳಿದನು, “ನನಗೆ ಯೆಹೋವನಿಂದ ಒಂದು ಸಂದೇಶ ಬಂದಿದೆ. ಅದು ಹೀಗಿದೆ: 7 ಯೆರೆಮೀಯನೇ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾಗಿರುವ ಹನಮೇಲನು ಶೀಘ್ರದಲ್ಲಿ ನಿನ್ನ ಬಳಿಗೆ ಬಂದು, ‘ಯೆರೆಮೀಯನೇ, ಅನಾತೋತ್ ಪಟ್ಟಣದ ಬಳಿಯಲ್ಲಿರುವ ನನ್ನ ಹೊಲವನ್ನು ಕೊಂಡುಕೊ. ನೀನು ನನ್ನ ಅತಿ ಸಮೀಪದ ಬಂಧುವಾದುದರಿಂದ ಅದನ್ನು ಕೊಂಡುಕೊ. ಆ ಹೊಲವನ್ನು ಕೊಂಡುಕೊಳ್ಳಲು ನಿನಗೆ ಅಧಿಕಾರವಿದೆ ಮತ್ತು ಅದು ನಿನ್ನ ಹೊಣೆಗಾರಿಕೆಯೂ ಹೌದು’ ಎಂದು ಹೇಳುವನು. 8 “ಆಮೇಲೆ ಯೆಹೋವನು ಹೇಳಿದಂತೆಯೇ ಆಯಿತು. ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕಾರಾಗೃಹದ ಅಂಗಳದಲ್ಲಿದ್ದ ನನ್ನ ಬಳಿಗೆ ಬಂದು ಹೀಗೆ ಹೇಳಿದನು: ‘ಯೆರೆಮೀಯನೇ, ಬೆನ್ಯಾಮೀನ್ ಸೀಮೆಯ ಅನಾತೋತಿನಲ್ಲಿರುವ ನನ್ನ ಹೊಲವನ್ನು ಕೊಂಡುಕೊ. ಆ ಹೊಲವನ್ನು ನಿನಗಾಗಿ ಕೊಂಡುಕೊ. ಅದರ ಒಡೆಯನಾಗುವದಕ್ಕೆ ನಿನಗೆ ಹಕ್ಕಿದೆ.’ ” ಇದು ಯೆಹೋವನ ಸಂದೇಶವೆಂದು ನನಗೆ ತಿಳಿಯಿತು. 9 ನಾನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿರುವ ಹೊಲವನ್ನು ಕೊಂಡು ಅದರ ಕ್ರಯವಾಗಿ ಹದಿನೇಳು ಶೆಕೆಲ್‌ ಶೆಕೆಲ್ 2:5 ಔನ್ಸ್ (ತೂಕ) ಬೆಳ್ಳಿಯನ್ನು ತೂಕಹಾಕಿದೆನು. 10 ನಾನು ಕ್ರಯಪತ್ರಕ್ಕೆ ಸಹಿ ಹಾಕಿದೆನು. ಕ್ರಯಪತ್ರದ ಒಂದು ಪ್ರತಿಗೆ ರುಜು ಮಾಡಿಸಿದೆನು. ಇದಕ್ಕೆ ಸಾಕ್ಷಿಯಾಗಿ ಕೆಲಜನರನ್ನು ಕರೆಸಿದೆನು. ನಾನು ಬೆಳ್ಳಿಯನ್ನು ತಕ್ಕಡಿಯಲ್ಲಿ ತೂಕಹಾಕಿ ಕೊಟ್ಟೆನು. 11 ಆಮೇಲೆ ಕ್ರಯಪತ್ರದ ರುಜು ಮಾಡಿದ ಒಂದು ಪ್ರತಿಯನ್ನು ಮತ್ತು ರುಜು ಮಾಡದ ಒಂದು ಪ್ರತಿಯನ್ನು ತೆಗೆದುಕೊಂಡೆನು. 12 ನಾನು ಅವುಗಳನ್ನು ಬಾರೂಕನ ಕೈಗೆ ಕೊಟ್ಟೆನು. ಬಾರೂಕನು ನೇರೀಯನ ಮಗನಾಗಿದ್ದನು. ನೇರೀಯನು ಮಹ್ಸೇಮನ ಮಗನಾಗಿದ್ದನು. ಮೊಹರು ಮಾಡಿದ ಕ್ರಯಪತ್ರದಲ್ಲಿ ನಾನು ಹೊಲವನ್ನು ಕ್ರಯಕ್ಕೆ ಕೊಂಡ ಎಲ್ಲಾ ಷರತ್ತುಗಳಿದ್ದವು. ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಮತ್ತು ಉಳಿದ ಸಾಕ್ಷಿಗಳು ಅಲ್ಲಿದ್ದಾಗಲೇ ನಾನು ಈ ಕ್ರಯಪತ್ರವನ್ನು ಬಾರೂಕನ ಕೈಗೆ ಕೊಟ್ಟೆನು. ಆ ಸಾಕ್ಷಿಗಳು ಸಹ ಈ ಕ್ರಯಪತ್ರಕ್ಕೆ ಸಹಿಹಾಕಿದ್ದರು. ಆ ಅಂಗಳದಲ್ಲಿ ಕುಳಿತ ಹಲವಾರು ಜನ ಯೆಹೂದ್ಯರು ನಾನು ಬಾರೂಕನ ಕೈಗೆ ಆ ಕ್ರಯಪತ್ರ ಕೊಡುವದನ್ನು ನೋಡಿದರು. 13 ಎಲ್ಲಾ ಜನರು ನೋಡುತ್ತಿದ್ದಂತೆಯೆ ನಾನು ಬಾರೂಕನಿಗೆ, 14 “ಸರ್ವಶಕ್ತನೂ ಇಸ್ರೇಲಿನ ದೇವರೂ ಆಗಿರುವ ಯೆಹೋವನು ಹೀಗೆನ್ನುತ್ತಾನೆ: ‘ಕ್ರಯಪತ್ರದ ಎರಡೂ ಪ್ರತಿಗಳನ್ನು ಅಂದರೆ ರುಜುಮಾಡಿದ ಮತ್ತು ರುಜುಮಾಡದ ಪ್ರತಿಗಳನ್ನು ತೆಗೆದುಕೊಂಡು ಅವುಗಳು ಬಹುಕಾಲ ಉಳಿಯುವಂತೆ ಒಂದು ಮಣ್ಣಿನ ಪಾತ್ರೆಯಲ್ಲಿ ಹಾಕಿ ಮುಚ್ಚಿಡು.’ 15 ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು, ‘ಮುಂದಿನಕಾಲದಲ್ಲಿ ಇಸ್ರೇಲ್ ದೇಶದಲ್ಲಿ ನನ್ನ ಜನರು ಪುನಃ ಮನೆಗಳನ್ನು, ಹೊಲಗಳನ್ನು, ದ್ರಾಕ್ಷಿತೋಟಗಳನ್ನು ಕೊಂಡುಕೊಳ್ಳುವರು’ ಎಂದು ಅನ್ನುತ್ತಾನೆ.” 16 ನೇರೀಯನ ಮಗನಾದ ಬಾರೂಕನಿಗೆ ಕ್ರಯಪತ್ರವನ್ನು ಕೊಟ್ಟ ಮೇಲೆ ನಾನು ಯೆಹೋವನಿಗೆ ಪ್ರಾರ್ಥಿಸಿ ಹೀಗೆಂದೆನು: 17 “ದೇವರಾದ ಯೆಹೋವನೇ, ನೀನು ಭೂಮ್ಯಾಕಾಶಗಳನ್ನು ಸೃಷ್ಟಿಸಿದೆ. ಅವುಗಳನ್ನು ನೀನು ನಿನ್ನ ಅಪಾರವಾದ ಶಕ್ತಿಯಿಂದ ಸೃಷ್ಟಿಸಿದೆ. ನಿನಗೆ ಅಸಾಧ್ಯವಾದುದು ಯಾವುದೂ ಇಲ್ಲ. 18 ಯೆಹೋವನೇ, ನೀನು ಸಾವಿರಾರು ಜನರಿಗೆ ನಂಬಿಗಸ್ತನಾಗಿಯೂ ಕರುಣಾಮಯಿಯಾಗಿಯೂ ಇರುವೆ. ಆದರೆ ತಂದೆಗಳು ಮಾಡಿದ ಪಾಪಕ್ಕಾಗಿ ಮಕ್ಕಳಿಗೆ ಶಿಕ್ಷೆಯನ್ನು ವಿಧಿಸುವಾತನೂ ನೀನೇ. ಮಹತ್ವವುಳ್ಳವನೇ, ಪರಾಕ್ರಮಿಯಾದ ದೇವರೇ, ಸರ್ವಶಕ್ತನಾದ ಯೆಹೋವನು ಎಂಬುದೇ ನಿನ್ನ ನಾಮಧೇಯ. 19 ನೀನು ಮಹತ್ತರವಾದ ಯೋಜನೆಗಳನ್ನು ಹಾಕಿ ಮಹತ್ಕಾರ್ಯಗಳನ್ನು ಮಾಡುವೆ. ಜನರು ಮಾಡುವ ಎಲ್ಲವನ್ನೂ ನೀನು ನೋಡುವೆ. ಒಳ್ಳೆಯದನ್ನು ಮಾಡುವವರಿಗೆ ನೀನು ಪ್ರತಿಫಲಗಳನ್ನು ಕೊಡುವೆ. ಕೆಟ್ಟದ್ದನ್ನು ಮಾಡುವವರನ್ನು ನೀನು ದಂಡಿಸುವೆ. ಅವರು ಯಾವುದಕ್ಕೆ ಅರ್ಹರೊ ಅದನ್ನು ಕೊಡುವೆ. 20 ಯೆಹೋವನೇ, ನೀನು ಈಜಿಪ್ಟ್ ದೇಶದಲ್ಲಿ ಅದ್ಭುತಕಾರ್ಯಗಳನ್ನು ಮಾಡಿದೆ. ಇಂದಿನವರೆಗೂ ನೀನು ಅದ್ಭುತಕಾರ್ಯಗಳನ್ನು ಮಾಡಿದೆ. ಇಸ್ರೇಲಿನಲ್ಲಿಯೂ ನೀನು ಅವುಗಳನ್ನು ಮಾಡಿದೆ. ಜನರು ಇರುವಲ್ಲೆಲ್ಲ ನೀನು ಅವುಗಳನ್ನು ಮಾಡಿದೆ. ಇವುಗಳಿಂದ ನೀನು ಸುಪ್ರಸಿದ್ಧನಾಗಿರುವೆ. 21 ಯೆಹೋವನೇ, ನೀನು ಅದ್ಭುತಕಾರ್ಯಗಳನ್ನು ಮಾಡಿ ನಿನ್ನ ಜನರನ್ನು ಈಜಿಪ್ಟಿನಿಂದ ಇಸ್ರೇಲಿಗೆ ಕರೆದುತಂದೆ. ಇದನ್ನು ಬಲವಾದ ಕೈಗಳಿಂದಲೇ ಮಾಡಿದೆ. ನಿನ್ನ ಸಾಮರ್ಥ್ಯ ಆಶ್ಚರ್ಯಕರವಾದದು. 22 “ಯೆಹೋವನೇ, ನೀನು ಈ ಭೂಮಿಯನ್ನು ಇಸ್ರೇಲರಿಗೆ ಕೊಟ್ಟೆ. ನೀನು ಬಹಳ ಕಾಲದ ಹಿಂದೆಯೇ ಈ ಭೂಮಿಯನ್ನು ಅವರ ಪೂರ್ವಿಕರಿಗೆ ಕೊಡುವದಾಗಿ ಮಾತು ಕೊಟ್ಟಿದ್ದೆ. ಇದು ಬಹಳ ಒಳ್ಳೆಯ ಭೂಮಿ. ಇದು ಅನೇಕ ಒಳ್ಳೆ ವಸ್ತುಗಳನ್ನು ಹೊಂದಿರುವ ಒಳ್ಳೆಯ ಭೂಮಿ. ಇದು … ಭೂಮಿ ಅಕ್ಷರಶಃ, ಹಾಲು ಮತ್ತು ಜೇನು ಹರಿಯುವ ದೇಶ. 23 ಇಸ್ರೇಲಿನ ಜನರು ಈ ಪ್ರದೇಶಕ್ಕೆ ಬಂದು ಅದನ್ನು ತಮ್ಮದನ್ನಾಗಿ ಮಾಡಿಕೊಂಡರು. ಆದರೆ ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ; ನಿನ್ನ ಉಪದೇಶಗಳನ್ನು ಅನುಸರಿಸಲಿಲ್ಲ; ನಿನ್ನ ಆಜ್ಞೆಯಂತೆ ಮಾಡಲಿಲ್ಲ. ಆದ್ದರಿಂದ ನೀನು ಇಸ್ರೇಲರಿಗೆ ಇಂಥಾ ದುರ್ಗತಿ ಬರುವಂತೆ ಮಾಡಿದೆ. 24 “ಈಗ ವೈರಿಗಳು ನಗರವನ್ನು ಮುತ್ತಿದ್ದಾರೆ. ಜೆರುಸಲೇಮಿನ ಗೋಡೆಯನ್ನು ಹತ್ತಿ ಅದನ್ನು ಸ್ವಾಧೀನಪಡಿಸಿಕೊಳ್ಳುವದಕ್ಕಾಗಿ ಅವರು ಇಳಿಜಾರುಗೋಡೆಗಳನ್ನು ಕಟ್ಟುತ್ತಿದ್ದಾರೆ. ಬಾಬಿಲೋನಿನ ಸೈನಿಕರು ತಮ್ಮ ಖಡ್ಗ, ಕ್ಷಾಮ ಮತ್ತು ಭಯಂಕರವ್ಯಾಧಿ ಇವುಗಳ ಸಹಾಯದಿಂದ ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವರು. ಬಾಬಿಲೋನಿನ ಸೈನಿಕರು ಈಗ ನಗರದ ಮೇಲೆ ಧಾಳಿ ಮಾಡುತ್ತಿದ್ದಾರೆ. ಯೆಹೋವನೇ, ಹೀಗಾಗುವದೆಂದು ನೀನು ಹೇಳಿದ್ದೆ, ಈಗ ನೀನು ಹೇಳಿದಂತೆಯೇ ಆಗುತ್ತಿದೆ. 25 “ನನ್ನ ಒಡೆಯನಾದ ಯೆಹೋವನೇ, ಆ ದುರ್ಬಟನೆಗಳೆಲ್ಲಾ ಸಂಭವಿಸುತ್ತಿವೆ. ಆದರೆ ಈಗ ನೀನು ‘ಯೆರೆಮೀಯನೇ, ಬೆಳ್ಳಿಯನ್ನು ಕೊಟ್ಟು ಹೊಲವನ್ನು ಕೊಂಡುಕೋ ಮತ್ತು ಈ ಖರೀದಿಗೆ ಸಾಕ್ಷಿಯಾಗಿ ಕೆಲವು ಜನರನ್ನು ಆರಿಸಿಕೋ’ ಎಂದು ಹೇಳುತ್ತಿರುವಿಯಲ್ಲ. ಬಾಬಿಲೋನಿನ ಸೈನ್ಯವು ನಗರವನ್ನು ಸ್ವಾಧೀನಪಡಿಸಿಕೊಳ್ಳಲು ಸಿದ್ಧವಾಗಿ ನಿಂತಿರುವಾಗ ನೀನು ಇದನ್ನು ಹೇಳುತ್ತಿರುವಿಯಲ್ಲ, ಏಕೆ? ಏಕೆ ನಾನು ಹಣವನ್ನು ಹೀಗೆ ವ್ಯರ್ಥವಾಗಿ ಕಳೆದುಕೊಳ್ಳಬೇಕು?” 26 ಆಗ ಯೆರೆಮೀಯನಿಗೆ ಯೆಹೋವನಿಂದ ಈ ಸಂದೇಶ ಬಂದಿತು: 27 “ಯೆರೆಮೀಯನೇ, ನಾನೇ ಯೆಹೋವನು, ನಾನು ಈ ಭೂಮಂಡಲದ ಪ್ರತಿಯೊಬ್ಬನ ದೇವರು. ಯೆರೆಮೀಯನೆ, ನನಗೆ ಯಾವುದೂ ಅಸಾಧ್ಯವಲ್ಲವೆಂಬುದನ್ನು ನೀನು ಬಲ್ಲೆ.” 28 ಯೆಹೋವನು ಹೀಗೆಂದನು: “ಜೆರುಸಲೇಮ್ ನಗರವನ್ನು ನಾನು ಕೂಡಲೇ ಬಾಬಿಲೋನಿನ ಸೈನ್ಯಕ್ಕೂ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೂ ಒಪ್ಪಿಸುವೆನು. ಸೈನ್ಯವು ಈ ನಗರವನ್ನು ವಶಪಡಿಸಿಕೊಳ್ಳುವುದು. 29 ಬಾಬಿಲೋನಿನ ಸೈನ್ಯವು ಈಗಾಗಲೇ ಜೆರುಸಲೇಮ್ ನಗರದ ಮೇಲೆ ಧಾಳಿ ಮಾಡುತ್ತಿದೆ. ಸೈನಿಕರು ಬೇಗನೆ ನಗರವನ್ನು ಪ್ರವೇಶಿಸಿ ಅದಕ್ಕೆ ಬೆಂಕಿಹಚ್ಚಿ ಸುಟ್ಟುಹಾಕುವರು. ಜೆರುಸಲೇಮಿನ ಜನರು ತಮ್ಮ ಮನೆಯ ಮಾಳಿಗೆಯ ಮೇಲೆ ಸುಳ್ಳುದೇವರಾದ ಬಾಳನಿಗೆ ನೈವೇದ್ಯವನ್ನು ಅರ್ಪಿಸಿ ನಾನು ಕೋಪಿಸಿಕೊಳ್ಳುವಂತೆ ಮಾಡಿದ ಕೆಲವು ಮನೆಗಳು ಈ ನಗರದಲ್ಲಿವೆ. ಅದಲ್ಲದೆ ಕೆಲವು ಜನರು ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸಿರುವರು. ಬಾಬಿಲೋನಿನ ಸೈನ್ಯವು ಆ ಮನೆಗಳನ್ನು ಸುಟ್ಟುಹಾಕುವುದು. 30 ನಾನು ಇಸ್ರೇಲಿನ ಜನರನ್ನು ಮತ್ತು ಯೆಹೂದದ ಜನರನ್ನು ಗಮನಿಸಿದ್ದೇನೆ. ಅವರು ಮಾಡುವದೆಲ್ಲ ಕೆಟ್ಟದ್ದೆ. ಅವರು ಚಿಕ್ಕಂದಿನಿಂದ ಕೆಟ್ಟದ್ದನ್ನೇ ಮಾಡಿದ್ದಾರೆ. ಇಸ್ರೇಲಿನ ಜನರು ತಮ್ಮ ಕೈಗಳಿಂದ ಮಾಡಿದ ವಿಗ್ರಹಗಳನ್ನು ಪೂಜಿಸಿ ನನಗೆ ಬಹುಕೋಪ ಬರುವಂತೆ ಮಾಡಿದರು.” ಇದು ಯೆಹೋವನ ನುಡಿ. 31 “ಜೆರುಸಲೇಮ್ ನಗರವು ನಿರ್ಮಾಣಗೊಂಡಂದಿನಿಂದ ಇಂದಿನವರೆಗೂ ಈ ನಗರದ ಜನರು ನನಗೆ ಕೋಪ ಬರುವಂತೆ ಮಾಡಿದ್ದಾರೆ. ಈ ನಗರವು ನನಗೆ ಅತಿಕೋಪ ಬರುವಂತೆ ಮಾಡಿದೆ. ಆದ್ದರಿಂದ ಕಣ್ಣಿಗೆ ಕಾಣದಂತೆ ಅದನ್ನು ಅಳಿಸಿಬಿಡುವೆನು. 32 ಇಸ್ರೇಲಿನ ಮತ್ತು ಯೆಹೂದದ ಜನರು ಮಾಡಿದ ಎಲ್ಲಾ ದುಷ್ಕೃತ್ಯಗಳಿಗಾಗಿ ನಾನು ಜೆರುಸಲೇಮ್ ನಗರವನ್ನು ನಾಶಮಾಡುತ್ತೇನೆ. ಜನರು, ರಾಜರು, ಮುಂದಾಳುಗಳು, ಯಾಜಕರು, ಪ್ರವಾದಿಗಳು, ಯೆಹೂದದ ಪ್ರಜೆಗಳು, ಜೆರುಸಲೇಮಿನ ನಿವಾಸಿಗಳು ಇವರೆಲ್ಲರೂ ನನಗೆ ಕೋಪ ಬರುವಂತೆ ಮಾಡಿದ್ದಾರೆ. 33 “ಆ ಜನರು ಸಹಾಯಕೋರಿ ನನ್ನಲ್ಲಿಗೆ ಬರಬೇಕಾಗಿತ್ತು. ಆದರೆ ಅವರು ನನಗೆ ವಿಮುಖರಾದರು. ನಾನು ಮತ್ತೆಮತ್ತೆ ಅವರಿಗೆ ಬುದ್ಧಿಕಲಿಸುವ ಪ್ರಯತ್ನ ಮಾಡಿದೆ. ಆದರೆ ಅವರು ನನ್ನ ಮಾತನ್ನು ಕೇಳಲಿಲ್ಲ. ನಾನು ಅವರನ್ನು ತಿದ್ದುವ ಪ್ರಯತ್ನ ಮಾಡಿದೆ, ಆದರೆ ಅವರು ನನ್ನ ಮಾತನ್ನು ಕೇಳಲಿಲ್ಲ. 34 ಆ ಜನರು ತಮಗಾಗಿ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ಆ ವಿಗ್ರಹಗಳನ್ನಿಟ್ಟು ನನ್ನ ಆಲಯವನ್ನು ‘ಹೊಲಸು’ ಮಾಡಿದ್ದಾರೆ. 35 “ಬೆನ್‌ಹಿನ್ನೊಮ್ ಕಣಿವೆಯಲ್ಲಿ ಅವರು ಸುಳ್ಳುದೇವರಾದ ಬಾಳನಿಗಾಗಿ ಎತ್ತರವಾದ ಸ್ಥಳಗಳನ್ನು ಕಟ್ಟಿದ್ದಾರೆ. ತಮ್ಮ ಮಕ್ಕಳನ್ನು ಆಹುತಿಕೊಡುವದಕ್ಕಾಗಿ ಈ ಪೂಜಾಸ್ಥಳಗಳನ್ನು ಕಟ್ಟಿಸಿದ್ದಾರೆ. ಇಂಥಾ ಭಯಂಕರವಾದ ಕೆಲಸವನ್ನು ಮಾಡಲು ನಾನು ಅವರಿಗೆ ಆಜ್ಞಾಪಿಸಿಲ್ಲ. ಯೆಹೂದದ ಜನರು ಇಂಥಾ ಭಯಂಕರವಾದ ಕಾರ್ಯವನ್ನು ಮಾಡುವರೆಂದು ನಾನೆಂದೂ ಧಿಹಿಸಿರಲಿಲ್ಲ. 36 “ ‘ಬಾಬಿಲೋನಿನ ರಾಜನು ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವನು. ಈ ಪಟ್ಟಣವನ್ನು ವಶಪಡಿಸಿಕೊಳ್ಳಲು ಅವನು ಖಡ್ಗ, ಕ್ಷಾಮ, ಭಯಂಕರವಾದ ವ್ಯಾಧಿಗಳನ್ನು ಬಳಸಿಕೊಳ್ಳುವನು’ ಎಂದು ನೀವು ಹೇಳುತ್ತಿದ್ದೀರಿ. ಆದರೆ ಇಸ್ರೇಲರ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ: 37 ‘ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ತಮ್ಮ ಪ್ರದೇಶವನ್ನು ಬಿಟ್ಟುಹೋಗಲು ನಾನು ಒತ್ತಾಯಿಸಿದ್ದೇನೆ. ನಾನು ಅವರ ಮೇಲೆ ತುಂಬ ಕೋಪಗೊಂಡಿದ್ದೆ. ಆದರೆ ನಾನು ಅವರನ್ನು ಈ ಸ್ಥಳಕ್ಕೆ ಹಿಂದಿರುಗಿಸುವೆನು. ನಾನು ಒತ್ತಾಯಿಸಿ ಅವರನ್ನು ಅಟ್ಟಿದ ಸ್ಥಳಗಳಿಂದ ಅವರನ್ನು ಒಟ್ಟುಗೂಡಿಸುವೆನು. ಅವರನ್ನು ಪುನಃ ಈ ಸ್ಥಳಕ್ಕೆ ಕರೆತರುವೆನು. ಅವರು ನೆಮ್ಮದಿಯಿಂದ ಮತ್ತು ಸುರಕ್ಷಿತವಾಗಿ ಇರುವಂತೆ ಮಾಡುವೆನು. 38 ಇಸ್ರೇಲರು ಮತ್ತು ಯೆಹೂದ್ಯರು ನನ್ನ ಭಕ್ತರಾಗಿರುವರು, ನಾನು ಅವರ ದೇವರಾಗಿರುವೆನು. 39 ಒಂದೇ ಜನಾಂಗವಾಗುವ ಬಯಕೆಯನ್ನು ನಾನು ಅವರಲ್ಲಿ ಉಂಟುಮಾಡುವೆನು. ಅವರು ತಮ್ಮ ಜೀವಮಾನವೆಲ್ಲಾ ನನ್ನನ್ನು ಆರಾಧಿಸಬೇಕೆಂಬ ಬಯಕೆಯನ್ನು ಹೊಂದಿರುವರು. ಹೌದು, ಅವರ ಬಯಕೆಯೂ ಅವರ ಮಕ್ಕಳ ಬಯಕೆಯೂ ಇದೇ ಆಗಿರುವುದು. 40 “ ‘ನಾನು ಇಸ್ರೇಲರ ಮತ್ತು ಯೆಹೂದ್ಯರ ಸಂಗಡ ಶಾಶ್ವತವಾದ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಈ ಒಡಂಬಡಿಕೆಗನುಸಾರವಾಗಿ ನಾನು ಅವರಿಗೆ ವಿಮುಖನಾಗುವುದೇ ಇಲ್ಲ. ನಾನು ಯಾವಾಗಲೂ ಅವರಿಗೆ ಒಳ್ಳೆಯವನಾಗಿರುತ್ತೇನೆ. ನನ್ನನ್ನು ಗೌರವಿಸಬೇಕೆಂಬ ಇಚ್ಛೆಯನ್ನು ಅವರಲ್ಲಿ ಬರಮಾಡುತ್ತೇನೆ. ಆಗ ಅವರೆಂದಿಗೂ ನನಗೆ ವಿಮುಖರಾಗುವದಿಲ್ಲ. 41 ಅವರು ನನ್ನನ್ನು ಸಂತೋಷಪಡಿಸುವರು. ಅವರಿಗೆ ಒಳ್ಳೆಯದನ್ನು ಮಾಡುವದರಲ್ಲಿ ನಾನು ಸಂತೋಷಪಡುವೆನು. ನಾನು ಖಂಡಿತವಾಗಿ ಅವರನ್ನು ಈ ದೇಶದಲ್ಲಿ ನೆಟ್ಟು ಬೆಳೆಯುವಂತೆ ಮಾಡುತ್ತೇನೆ. ಇದನ್ನು ನಾನು ಮನಃಪೂರ್ವಕವಾಗಿ ಮಾಡುತ್ತೇನೆ.’ ” 42 ಯೆಹೋವನು ಹೀಗೆನ್ನುತ್ತಾನೆ: “ಇಸ್ರೇಲಿನ ಮತ್ತು ಯೆಹೂದದ ಜನರ ಮೇಲೆ ನಾನು ಈ ಮಹಾವಿಪತ್ತನ್ನು ತಂದಿದ್ದೇನೆ. ಅದರಂತೆಯೇ ನಾನು ಅವರಿಗೆ ಒಳಿತನ್ನು ತರುವೆನು. ನಾನು ಅವರಿಗೆ ಒಳ್ಳೆಯದನ್ನು ಮಾಡುವದಾಗಿ ಮಾತುಕೊಡುತ್ತೇನೆ. 43 ನೀವು ‘ಈ ಪ್ರದೇಶವು ಒಂದು ಬರಿದಾದ ಮರುಭೂಮಿ. ಇಲ್ಲಿ ಜನರಾಗಲಿ ಪ್ರಾಣಿಗಳಾಗಲಿ ಇಲ್ಲ. ಬಾಬಿಲೋನಿನ ಸೈನ್ಯವು ಈ ದೇಶವನ್ನು ಸೋಲಿಸಿದೆ’ ಎಂದು ಹೇಳುತ್ತಿರುವಿರಿ. ಆದರೆ ಮುಂದಿನಕಾಲದಲ್ಲಿ ಜನರು ಪುನಃ ಈ ಪ್ರದೇಶದಲ್ಲಿ ಹೊಲಗಳನ್ನು ಕೊಂಡುಕೊಳ್ಳುವರು. 44 ಜನರು ಹಣ ಕೊಟ್ಟು ಭೂಮಿಯನ್ನು ಕೊಂಡುಕೊಳ್ಳುವರು. ಅವರು ಕರಾರುಪತ್ರಗಳಿಗೆ ಸಹಿಹಾಕುವರು. ಜನರು ಕ್ರಯಪತ್ರಗಳಿಗೆ ಸಹಿ ಹಾಕುವದನ್ನು ಬೇರೆಯವರು ನೋಡುವರು. ಬೆನ್ಯಾಮೀನ್ ಕುಲದವರು ವಾಸಿಸುವ ಪ್ರದೇಶದಲ್ಲಿ ಜನರು ಪುನಃ ಹೊಲಗಳನ್ನು ಕೊಂಡುಕೊಳ್ಳುವರು. ಜೆರುಸಲೇಮಿನ ಸುತ್ತಲಿನ ಪ್ರದೇಶದಲ್ಲಿ ಅವರು ಹೊಲಗಳನ್ನು ಕೊಂಡುಕೊಳ್ಳುವರು. ಅವರು ಯೆಹೂದ ಪ್ರದೇಶದ ಊರುಗಳಲ್ಲಿಯೂ ಬೆಟ್ಟಪ್ರದೇಶದಲ್ಲಿಯೂ ಪಶ್ಚಿಮದ ಇಳಿಜಾರು ಪ್ರದೇಶದಲ್ಲಿಯೂ ದಕ್ಷಿಣದ ಮರಳುಗಾಡಿನಲ್ಲಿಯೂ ಹೊಲಗಳನ್ನು ಕೊಂಡುಕೊಳ್ಳುವರು. ನಾನು ನಿಮ್ಮ ಜನರನ್ನು ನಿಮ್ಮ ಪ್ರದೇಶಕ್ಕೆ ಪುನಃ ಕರೆದುಕೊಂಡು ಬರುವದರಿಂದ ಹೀಗಾಗುವುದು.” ಇದು ಯೆಹೋವನ ನುಡಿ.
ಒಟ್ಟು 52 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 32 / 52
Common Bible Languages
West Indian Languages
×

Alert

×

kannada Letters Keypad References