ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಯೆರೆಮಿಯ
1. ಇದು ಯೆಹೋವನ ಸಂದೇಶ: [QBR] “ಇಸ್ರೇಲೇ, ನೀನು ಹಿಂತಿರುಗಿ ಬರಲು ಇಚ್ಛಿಸಿದರೆ [QBR2] ನನ್ನಲ್ಲಿಗೆ ಹಿಂತಿರುಗಿ ಬಾ. [QBR] ನಿನ್ನ ವಿಗ್ರಹಗಳನ್ನು ಎಸೆದುಬಿಡು. [QBR2] ನನ್ನಿಂದ ದೂರಸರಿದು ಅಲೆದಾಡಬೇಡ. [QBR]
2. ನೀನು ಹೀಗೆ ಮಾಡಿದರೆ [QBR2] ನನ್ನ ಹೆಸರಿನ ಮೇಲೆ ಪ್ರಮಾಣ ಮಾಡಲು ಶಕ್ತಳಾಗುವೆ. [QBR] ‘ಹಾದು, ಯೆಹೋವನಾಣೆ’ ಎಂದು ಹೇಳಶಕ್ತಳಾಗುವೆ. [QBR2] ನೀನು ಆ ಪದಗಳನ್ನು ಸತ್ಯವಾಗಿಯೂ ಪ್ರಾಮಾಣಿಕವಾಗಿಯೂ ಸರಿಯಾಗಿ ಉಪಯೋಗಿಸಲು ಸಾಧ್ಯವಾಗುತ್ತದೆ. [QBR] ನೀನು ಹೀಗೆ ಮಾಡಿದರೆ, [QBR2] ಎಲ್ಲಾ ಜನಾಂಗಗಳು ಯೆಹೋವನ ಆಶೀರ್ವಾದವನ್ನು ಪಡೆಯುತ್ತವೆ. [QBR] ಆತನ ಕಾರ್ಯಗಳಿಗಾಗಿ [QBR2] ಆತನಿಗೆ ಸ್ತೋತ್ರ ಮಾಡುತ್ತವೆ.” [PS]
3. ಯೆಹೂದ ಜನಾಂಗದ ಜನರಿಗೂ ಜೆರುಸಲೇಮ್ ನಗರದ ಜನರಿಗೂ ಯೆಹೋವನು ಹೀಗೆ ಹೇಳುತ್ತಾನೆ: “ನಿಮ್ಮ ಹೊಲಗಳಲ್ಲಿ ನೇಗಿಲು ಹೊಡೆದಿಲ್ಲ, [QBR2] ಆ ಹೊಲಗಳನ್ನು ನೇಗಿಲು ಹೊಡೆದು ಸ್ವಚ್ಛಮಾಡಿರಿ. [QBR2] ಮುಳ್ಳುಗಳಲ್ಲಿ ಬೀಜಗಳನ್ನು ಬಿತ್ತಬೇಡಿರಿ. [QBR]
4. ಯೆಹೋವನ ಮನುಷ್ಯರಾಗಿರಿ, [QBR2] ನಿಮ್ಮ ಹೃದಯ ಪರಿವರ್ತನೆ [*ಹೃದಯ ಪರಿವರ್ತನೆ ಅಕ್ಷರಶಃ, ನಿಮ್ಮ ಹೃದಯದ ಮುಂದೊಗಲನ್ನು ಕತ್ತರಿಸಿ ಹಾಕಿರಿ.] ಮಾಡಿಕೊಳ್ಳಿರಿ. [QBR] ಯೆಹೂದದ ಜನಗಳೇ, ಜೆರುಸಲೇಮಿನ ಜನರೇ, ನೀವು ಬದಲಾಗದಿದ್ದರೆ [QBR2] ನನಗೆ ವಿಪರೀತ ಕೋಪ ಬರುವುದು. [QBR] ನನ್ನ ಕೋಪವು ಬೆಂಕಿಯ ಜ್ವಾಲೆಯಂತೆ ಭರದಿಂದ ಹಬ್ಬುವದು. [QBR2] ನನ್ನ ಕೋಪವು ನಿಮ್ಮನ್ನು ಸುಟ್ಟು ಬೂದಿ ಮಾಡುವುದು. [QBR] ಯಾರಿಂದಲೂ ಆ ಬೆಕಿಯನ್ನು ಆರಿಸುವುದು ಸಾಧ್ಯವಾಗುವದಿಲ್ಲ. [QBR2] ಇದೆಲ್ಲ ಏಕೆ ನಡೆಯುವುದು? ನೀವು ಮಾಡಿದ ದುಷ್ಕೃತ್ಯಗಳಿಂದಲೇ.” [PS]
5. {ಉತ್ತರ ದಿಕ್ಕಿನಿಂದ ವಿಪತ್ತು} [PS] “ಈ ಸಂದೇಶವನ್ನು ಯೆಹೂದ ಜನರಲ್ಲಿ ಸಾರಿರಿ: ಜೆರುಸಲೇಮ್ ನಗರದ ಪ್ರತಿಯೊಬ್ಬನಿಗೂ [QBR2] ‘ದೇಶದಲ್ಲೆಲ್ಲಾ ತುತ್ತೂರಿಗಳನ್ನು ಊದಿರಿ’ ಎಂದು ಹೇಳಿರಿ. [QBR] ದೊಡ್ಡ ಧ್ವನಿಯಲ್ಲಿ [QBR2] ‘ಒಂದು ಕಡೆ ಸೇರೋಣ ಬನ್ನಿ, [QBR2] ರಕ್ಷಣೆಗಾಗಿ ಭದ್ರವಾದ ನಗರಗಳಿಗೆ ಓಡಿಹೋಗೋಣ ಬನ್ನಿ’ ಎಂದು ಕೂಗಿ ಹೇಳಿರಿ. [QBR]
6. ಚೀಯೋನಿನ ಕಡೆಗೆ ಧ್ವಜವನ್ನು ಎತ್ತಿ ಸಂಕೇತ ಕೊಡಿ. [QBR2] ನಿಲ್ಲಬೇಡಿ. ನಿಮ್ಮ ಜೀವ ರಕ್ಷಣೆಗಾಗಿ ಓಡಿರಿ. [QBR] ನಾನು ಉತ್ತರದಿಂದ ವಿಪತ್ತನ್ನು ತರುತ್ತಿರುವುದರಿಂದ ನೀವು ಹೀಗೆ ಮಾಡಬೇಕು. [QBR2] ನಾನು ಭಯಂಕರವಾದ ವಿನಾಶವನ್ನುಟು ಮಾಡಲಿದ್ದೇನೆ.” [QBR]
7. ತನ್ನ ಗುಹೆಯಿಂದ ಒಂದು “ಸಿಂಹವು” ಹೊರಬಂದಿದೆ. [QBR2] ಜನಾಂಗಗಳ ವಿನಾಶಕವಾದ ಸಿಂಹವು ಹೆಜ್ಜೆ ಹಾಕುತ್ತಿದೆ. [QBR] ಅದು ನಿಮ್ಮ ಪ್ರದೇಶವನ್ನು ನಾಶಮಾಡಲು ತನ್ನ ಗುಹೆಯನ್ನು ಬಿಟ್ಟು ಹೊರಟಿದೆ. [QBR] ನಿಮ್ಮ ಪಟ್ಟಣಗಳೆಲ್ಲ ನಾಶಹೊಂದುವವು. [QBR2] ಅಲ್ಲಿ ವಾಸಿಸಲು ಜನರೇ ಇಲ್ಲದಂತಾಗುವುದು. [QBR]
8. ಆದ್ದರಿಂದ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ. ದೊಡ್ಡ ಧ್ವನಿಯಿಂದ ಗೋಳಾಡಿರಿ. [QBR2] ಏಕೆಂದರೆ ಯೆಹೋವನು ನಮ್ಮ ಮೇಲೆ ತುಂಬ ಕೋಪಗೊಂಡಿದ್ದಾನೆ. [QBR]
9. ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ [QBR2] ರಾಜನು ಮತ್ತು ನಾಯಕರು ತಮ್ಮ ಧೈರ್ಯವನ್ನು ಕಳೆದುಕೊಳ್ಳುವರು. [QBR] ಯಾಜಕರು ಭಯಪಡುವರು; [QBR2] ಪ್ರವಾದಿಗಳು ಬೆರಗಾಗುವರು.” [PS]
10. ಆಗ ಯೆರೆಮೀಯನೆಂಬ ನಾನು, “ನನ್ನ ಒಡೆಯನಾದ ಯೆಹೋವನೇ, ನೀನು ಯೆಹೂದ ಮತ್ತು ಜೆರುಸಲೇಮಿನ ಜನರಿಗೆ ಮೋಸ ಮಾಡಿದೆ, ‘ನೀವು ಶಾಂತಿಯಿಂದ ಇರುವಿರಿ’ ಎಂದು ನೀನು ಅವರಿಗೆ ಹೇಳಿದೆ. ಆದರೆ ಈಗ ಅವರ ಕತ್ತಿನ ಮೇಲೆ ಖಡ್ಗ ಇದೆ” ಎಂದೆನು.
11. ಆ ಸಮಯದಲ್ಲಿ ಯೆಹೂದ ಮತ್ತು ಜೆರುಸಲೇಮಿನ ಜನರಿಗೆ [QBR2] ಒಂದು ಸಂದೇಶವನ್ನು ಕೊಡಲಾಗುವುದು. [QBR] “ಬೋಳುಬೆಟ್ಟಗಳಿಂದ ಒಂದು ಬಿಸಿಗಾಳಿಯು ಬೀಸುವುದು. [QBR2] ಅದು ಮರಳುಗಾಡಿನಿಂದ ಬೀಸುವುದು. [QBR] ಇದು ರೈತನು ತೂರಿ ಹೊಟ್ಟಿನಿಂದ ಕಾಳನ್ನು ಬೇರ್ಪಡಿಸಲು [QBR2] ಬೇಕಾಗುವ ಸೌಮ್ಯವಾದ ಗಾಳಿಯಂತಲ್ಲ. [QBR]
12. ಇದು ಅದಕ್ಕಿಂತಲೂ ಬಹು ಬಿರುಸಾಗಿ ಬೀಸುತ್ತದೆ. [QBR2] ಅದು ನನ್ನಿಂದ ಬರುತ್ತದೆ. [QBR] ಈಗ ಯೆಹೂದದ ಜನರಿಗೆ ನ್ಯಾಯವಾದ ದಂಡನೆಗಳನ್ನು ವಿಧಿಸುವೆನು.” [QBR]
13. ಇಗೋ, ಆ ಶತ್ರುವು ಮೇಘಮಾಲೆಯಂತೆ ಬರುತ್ತಿದ್ದಾನೆ. [QBR2] ಅವನ ರಥಗಳು ಬಿರುಗಾಳಿಯಂತೆ ಕಾಣುತ್ತಿವೆ. [QBR2] ಅವನ ಕುದುರೆಗಳು ಹದ್ದುಗಳಿಗಿಂತ ವೇಗವಾಗಿ ಓಡುತ್ತಿವೆ. [QBR] ಇದು ನಮಗೆ ತುಂಬ ಅಪಾಯಕಾರಿಯಾಗಿದೆ; [QBR2] ನಾವು ಹಾಳಾಗಿಹೋದೆವು.
14. ಜೆರುಸಲೇಮಿನ ಜನರೇ, ನಿಮ್ಮ ಹೃದಯದ ಕೆಟ್ಟತನವನ್ನು ತೊಳೆದುಕೊಳ್ಳಿರಿ. [QBR] ರಕ್ಷಣೆಹೊಂದಲು ನಿಮ್ಮ ಹೃದಯಗಳನ್ನು ಪವಿತ್ರಗೊಳಿಸಿರಿ. [QBR2] ದುರಾಲೋಚನೆಗಳನ್ನು ಮುಂದುವರಿಸಬೇಡಿರಿ. [QBR]
15. ಕೇಳಿರಿ, ದಾನ್ ಪ್ರದೇಶದಿಂದ [QBR2] ದೂತನ ಸ್ವರವು ಕೇಳಿಬರುತ್ತಿದೆ. [QBR] ಎಫ್ರಾಯೀಮ್ ಬೆಟ್ಟಪ್ರದೇಶದಿಂದ [QBR2] ಒಬ್ಬನು ಕೆಟ್ಟ ಸಮಾಚಾರವನ್ನು ತರುತ್ತಿದ್ದಾನೆ. [QBR]
16. “ಇದನ್ನು ಈ ಜನಾಂಗಕ್ಕೆ ತಿಳಿಸಿರಿ. [QBR2] ಜೆರುಸಲೇಮಿನ ಜನರಲ್ಲಿ ಈ ಸಮಾಚಾರವನ್ನು ಹರಡಿರಿ. [QBR] ಬಹುದೂರದೇಶದಿಂದ ಶತ್ರುಗಳು ಬರುತ್ತಿದ್ದಾರೆ. [QBR] ಆ ಶತ್ರುಗಳು ಯೆಹೂದದ ನಗರಗಳ ವಿರುದ್ಧ [QBR2] ಯುದ್ಧದ ಘೋಷಣೆಗಳನ್ನು ಕೂಗುತ್ತಿದ್ದಾರೆ. [QBR]
17. ಹೊಲವನ್ನು ಕಾಯುವ ಜನರಂತೆ [QBR2] ವೈರಿಗಳು ಜೆರುಸಲೇಮನ್ನು ಮುತ್ತಿಕೊಂಡಿದ್ದಾರೆ. [QBR] ಯೆಹೂದವೇ, ನೀನು ನನಗೆ ತಿರುಗಿಬಿದ್ದೆ, [QBR2] ಅದಕ್ಕಾಗಿ ನಿನ್ನ ಮೇಲೆ ಶತ್ರುಗಳು ಬೀಳುತ್ತಿದ್ದಾರೆ” [QBR] ಎಂದು ಯೆಹೋವನು ಹೇಳುವನು.
18. “ನಿನ್ನ ನಡತೆಯೂ ನಿನ್ನ ಕೃತ್ಯಗಳೂ [QBR2] ನಿನಗೆ ಈ ಕಷ್ಟವನ್ನು ತಂದವು. [QBR] ನಿನ್ನ ದುಷ್ಟತನವೇ ನಿನ್ನ ಜೀವನವನ್ನು ಇಷ್ಟು ಕಷ್ಟಕರವನ್ನಾಗಿ ಮಾಡಿದೆ. [QBR] ನಿನ್ನ ದುಷ್ಟತನವೇ ನಿನ್ನ ಮನಸ್ಸಿಗೆ [QBR2] ಆಳವಾದ ನೋವನ್ನು ಉಂಟುಮಾಡಿದೆ.”
19. {ಯೆರೆಮೀಯನ ಗೋಳಾಟ} [PS] ಅಯ್ಯೋ, ನನ್ನ ದುಃಖ ಮತ್ತು ಚಿಂತೆ ನನ್ನ ಹೊಟ್ಟೆಯಲ್ಲಿ ಸಂಕಟವನ್ನು ಉಂಟುಮಾಡುತ್ತಿವೆ. [QBR2] ನೋವಿನಿಂದ ನಾನು ಬಾಗಿಹೋಗಿದ್ದೇನೆ. [QBR] ನಾನು ತುಂಬ ಹೆದರಿಕೊಂಡಿದ್ದೇನೆ. [QBR2] ನನ್ನ ಹೃದಯವು ಒಳಗೆ ತಳಮಳಗೊಳ್ಳುತ್ತಿದೆ. [QBR] ನಾನು ಬಾಯಿ ಮುಚ್ಚಿಕೊಂಡಿರಲಾರೆ. ಏಕೆಂದರೆ, ನಾನು ತುತ್ತೂರಿಯ ಶಬ್ದವನ್ನು ಕೇಳಿದ್ದೇನೆ. [QBR2] ಆ ತುತ್ತೂರಿಯು ಸೈನ್ಯವನ್ನು ಯುದ್ಧಕ್ಕೆ ಕರೆಯುತ್ತಿದೆ. [QBR]
20. ವಿನಾಶನದ ಮೇಲೆ ವಿನಾಶವು ಬಂದು [QBR2] ಇಡೀ ದೇಶವೇ ಹಾಳಾಗಿದೆ. [QBR] ಫಕ್ಕನೆ ನನ್ನ ಗುಡಾರಗಳು ಹಾಳಾದವು. [QBR2] ನನ್ನ ಪರದೆಗಳು ಹರಿದುಹೋದವು. [QBR]
21. ಯೆಹೋವನೇ, ಎಷ್ಟು ಹೊತ್ತಿನವರೆಗೆ ನಾನು ಯುದ್ಧ ಧ್ವಜಗಳನ್ನು ನೋಡಬೇಕು? [QBR2] ಎಷ್ಟು ಹೊತ್ತಿನವರೆಗೆ ನಾನು ಯುದ್ಧದ ತುತ್ತೂರಿಗಳ ಶಬ್ಧವನ್ನು ಕೇಳಬೇಕು?
22. ದೇವರು, “ನನ್ನ ಜನರು ಮೂರ್ಖರಾಗಿದ್ದಾರೆ. [QBR2] ಅವರು ನನ್ನನ್ನು ಅರಿಯದವರಾಗಿದ್ದಾರೆ. [QBR] ಅವರು ಮೂಢ ಮಕ್ಕಳಾಗಿದ್ದಾರೆ. [QBR2] ಅವರು ಅವಿವೇಕಿಗಳಾಗಿದ್ದಾರೆ. [QBR] ಅವರು ದುಷ್ಕೃತ್ಯದಲ್ಲಿ ನಿಪುಣರಾಗಿದ್ದಾರೆ. [QBR2] ಅವರು ಒಳ್ಳೆಯದನ್ನು ಮಾಡಲರಿಯದವರಾಗಿದ್ದಾರೆ” ಎಂದನು.
23. {ವಿಪತ್ತಿನ ಆಗಮನ} [PS] ನಾನು ಭೂಮಿಯ ಕಡೆಗೆ ನೋಡಿದೆ, [QBR2] ಭೂಮಿಯು ಬರಿದಾಗಿತ್ತು. [QBR2] ಭೂಮಿಯ ಮೇಲೇನೂ ಇರಲಿಲ್ಲ. [QBR] ನಾನು ಆಕಾಶದ ಕಡೆಗೆ ನೋಡಿದೆ, [QBR2] ಅದರ ಬೆಳಕು ಹೋಗಿಬಿಟ್ಟಿತ್ತು. [QBR]
24. ನಾನು ಪರ್ವತಗಳ ಕಡೆಗೆ ನೋಡಿದೆ, [QBR2] ಅವುಗಳು ನಡುಗುತ್ತಿದ್ದವು. [QBR2] ಎಲ್ಲಾ ಬೆಟ್ಟಗಳು ಅದರುತ್ತಿದ್ದವು. [QBR]
25. ನಾನು ನೋಡಿದರೂ ಅಲ್ಲಿ ಜನರಿರಲಿಲ್ಲ. [QBR2] ಆಕಾಶದ ಎಲ್ಲಾ ಪಕ್ಷಿಗಳು ಹಾರಿಹೋಗಿದ್ದವು. [QBR]
26. ನಾನು ನೋಡಿದಾಗ ಫಲವತ್ತಾದ ಭೂಮಿಯು ಮರಳುಗಾಡಾಗಿತ್ತು. [QBR2] ಆ ಪ್ರದೇಶದ ಎಲ್ಲಾ ನಗರಗಳು ಹಾಳಾಗಿ ಹೋಗಿದ್ದವು. ಯೆಹೋವನು ಇದನ್ನು ಮಾಡಿದನು. ಯೆಹೋವನು ತನ್ನ ಭಯಂಕರವಾದ ಕೋಪದಿಂದ ಇದನ್ನು ಮಾಡಿದನು.
27. ಯೆಹೋವನು ಹೀಗೆ ಹೇಳುತ್ತಾನೆ: [QBR] “ಇಡೀ ದೇಶವು ಹಾಳಾಗುವುದು. [QBR2] ಆದರೆ ನಾನು ಭೂಮಿಯನ್ನು ಸಂಪೂರ್ಣವಾಗಿ ನಾಶಮಾಡುವದಿಲ್ಲ. [QBR]
28. ಈ ಪ್ರದೇಶದ ಜನರು ಸತ್ತವರಿಗಾಗಿ ಅಳುವರು. [QBR2] ಆಕಾಶವು ಕಪ್ಪಾಗುವುದು. [QBR] ನಾನು ಹೇಳಿದ್ದೇನೆ, ಅದು ಬದಲಾಗುವುದಿಲ್ಲ. [QBR2] ನಾನು ಒಂದು ನಿರ್ಣಯ ತೆಗೆದುಕೊಂಡಿದ್ದೇನೆ, ನಾನು ನನ್ನ ಮನಸ್ಸನ್ನು ಬದಲಾಯಿಸುವದಿಲ್ಲ.”
29. ಯೆಹೂದದ ಜನರು ಕುದುರೆಗಳ, ಸವಾರರ, [QBR2] ಬಿಲ್ಲುಗಾರರ ಶಬ್ಧಗಳನ್ನು ಕೇಳಿ ಓಡಿಹೋಗುವರು. [QBR] ಕೆಲವು ಜನರು ಗುಹೆಯಲ್ಲಿ ಅಡಗಿಕೊಳ್ಳುವರು. [QBR2] ಕೆಲವರು ಪೊದೆಗಳಲ್ಲಿ ಅವಿತುಕೊಳ್ಳುವರು. [QBR2] ಕೆಲವರು ಬೆಟ್ಟಗಳನ್ನು ಹತ್ತಿಹೋಗುವರು. [QBR] ಯೆಹೂದದ ಎಲ್ಲಾ ನಗರಗಳು ಬರಿದಾಗುವವು. [QBR2] ಅಲ್ಲಿ ಒಬ್ಬರೂ ಇರುವದಿಲ್ಲ.
30. ಹಾಳಾಗಿಹೋದ ಯೆಹೂದವೇ, [QBR2] ನೀನು ಮಾಡುತ್ತಿರುವುದೇನು? [QBR] ಅತ್ಯುತ್ತಮವಾದ ಕೆಂಪುಬಣ್ಣದ ಪೋಷಾಕನ್ನು ನೀನು ಧರಿಸಿಕೊಳ್ಳುತ್ತಿರುವುದೇಕೆ? [QBR] ಸುವರ್ಣಾಭರಣಗಳಿಂದ ನಿನ್ನನ್ನು ಏಕೆ ಅಲಂಕರಿಸಿಕೊಳ್ಳುತ್ತಿರುವೆ? [QBR] ಕಣ್ಣಿಗೆ ಕಾಡಿಗೆಯನ್ನು ಏಕೆ ಹಚ್ಚುತ್ತಿರುವೆ? [QBR] ನೀನು ಅಲಂಕಾರ ಮಾಡಿಕೊಳ್ಳುವದೆಲ್ಲ ವ್ಯರ್ಥ. [QBR] ನಿನ್ನ ಪ್ರಿಯತಮರು ನಿನ್ನನ್ನು ತಿರಸ್ಕರಿಸುತ್ತಾರೆ. [QBR2] ಅವರು ನಿನ್ನನ್ನು ಕೊಲೆಮಾಡುವ ಪ್ರಯತ್ನದಲ್ಲಿದ್ದಾರೆ. [QBR]
31. ಮೊದಲನೆ ಹೆರಿಗೆಯ ಸಮಯದಲ್ಲಿ [QBR2] ವೇದನೆಪಡುವ ಹೆಂಗಸಿನ ಸ್ವರದಂತಿರುವ ಒಂದು ಧ್ವನಿಯನ್ನು ನಾನು ಕೇಳಿದೆ, [QBR2] ಇದು ಚೀಯೋನ್ ನಗರಿಯ ಮಗಳ ಕೂಗಾಟ. [QBR] ಅವಳು ತನ್ನ ಎರಡೂ ಕೈಗಳನ್ನು ಮೇಲಕ್ಕೆ ಎತ್ತಿ ಪ್ರಾರ್ಥಿಸುತ್ತಾ, [QBR2] “ಅಯ್ಯೋ, ನಾನು ಮೂರ್ಛೆ, ಹೋಗುವುದರಲ್ಲಿದ್ದೇನೆ, [QBR2] ನನ್ನ ಸುತ್ತಲೆಲ್ಲ ಕೊಲೆಗಡುಕರಿದ್ದಾರೆ” ಎಂದು ಹೇಳುತ್ತಿದ್ದಾಳೆ. [PE]
ಒಟ್ಟು 52 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 4 / 52
1 ಇದು ಯೆಹೋವನ ಸಂದೇಶ:
“ಇಸ್ರೇಲೇ, ನೀನು ಹಿಂತಿರುಗಿ ಬರಲು ಇಚ್ಛಿಸಿದರೆ ನನ್ನಲ್ಲಿಗೆ ಹಿಂತಿರುಗಿ ಬಾ.
ನಿನ್ನ ವಿಗ್ರಹಗಳನ್ನು ಎಸೆದುಬಿಡು. ನನ್ನಿಂದ ದೂರಸರಿದು ಅಲೆದಾಡಬೇಡ.
2 ನೀನು ಹೀಗೆ ಮಾಡಿದರೆ ನನ್ನ ಹೆಸರಿನ ಮೇಲೆ ಪ್ರಮಾಣ ಮಾಡಲು ಶಕ್ತಳಾಗುವೆ.
‘ಹಾದು, ಯೆಹೋವನಾಣೆ’ ಎಂದು ಹೇಳಶಕ್ತಳಾಗುವೆ. ನೀನು ಆ ಪದಗಳನ್ನು ಸತ್ಯವಾಗಿಯೂ ಪ್ರಾಮಾಣಿಕವಾಗಿಯೂ ಸರಿಯಾಗಿ ಉಪಯೋಗಿಸಲು ಸಾಧ್ಯವಾಗುತ್ತದೆ.
ನೀನು ಹೀಗೆ ಮಾಡಿದರೆ, ಎಲ್ಲಾ ಜನಾಂಗಗಳು ಯೆಹೋವನ ಆಶೀರ್ವಾದವನ್ನು ಪಡೆಯುತ್ತವೆ.
ಆತನ ಕಾರ್ಯಗಳಿಗಾಗಿ ಆತನಿಗೆ ಸ್ತೋತ್ರ ಮಾಡುತ್ತವೆ.”
3 ಯೆಹೂದ ಜನಾಂಗದ ಜನರಿಗೂ ಜೆರುಸಲೇಮ್ ನಗರದ ಜನರಿಗೂ ಯೆಹೋವನು ಹೀಗೆ ಹೇಳುತ್ತಾನೆ: “ನಿಮ್ಮ ಹೊಲಗಳಲ್ಲಿ ನೇಗಿಲು ಹೊಡೆದಿಲ್ಲ, ಆ ಹೊಲಗಳನ್ನು ನೇಗಿಲು ಹೊಡೆದು ಸ್ವಚ್ಛಮಾಡಿರಿ. ಮುಳ್ಳುಗಳಲ್ಲಿ ಬೀಜಗಳನ್ನು ಬಿತ್ತಬೇಡಿರಿ.
4 ಯೆಹೋವನ ಮನುಷ್ಯರಾಗಿರಿ, ನಿಮ್ಮ ಹೃದಯ ಪರಿವರ್ತನೆ *ಹೃದಯ ಪರಿವರ್ತನೆ ಅಕ್ಷರಶಃ, ನಿಮ್ಮ ಹೃದಯದ ಮುಂದೊಗಲನ್ನು ಕತ್ತರಿಸಿ ಹಾಕಿರಿ. ಮಾಡಿಕೊಳ್ಳಿರಿ.
ಯೆಹೂದದ ಜನಗಳೇ, ಜೆರುಸಲೇಮಿನ ಜನರೇ, ನೀವು ಬದಲಾಗದಿದ್ದರೆ ನನಗೆ ವಿಪರೀತ ಕೋಪ ಬರುವುದು.
ನನ್ನ ಕೋಪವು ಬೆಂಕಿಯ ಜ್ವಾಲೆಯಂತೆ ಭರದಿಂದ ಹಬ್ಬುವದು. ನನ್ನ ಕೋಪವು ನಿಮ್ಮನ್ನು ಸುಟ್ಟು ಬೂದಿ ಮಾಡುವುದು.
ಯಾರಿಂದಲೂ ಆ ಬೆಕಿಯನ್ನು ಆರಿಸುವುದು ಸಾಧ್ಯವಾಗುವದಿಲ್ಲ. ಇದೆಲ್ಲ ಏಕೆ ನಡೆಯುವುದು? ನೀವು ಮಾಡಿದ ದುಷ್ಕೃತ್ಯಗಳಿಂದಲೇ.”
ಉತ್ತರ ದಿಕ್ಕಿನಿಂದ ವಿಪತ್ತು 5 “ಈ ಸಂದೇಶವನ್ನು ಯೆಹೂದ ಜನರಲ್ಲಿ ಸಾರಿರಿ: ಜೆರುಸಲೇಮ್ ನಗರದ ಪ್ರತಿಯೊಬ್ಬನಿಗೂ ‘ದೇಶದಲ್ಲೆಲ್ಲಾ ತುತ್ತೂರಿಗಳನ್ನು ಊದಿರಿ’ ಎಂದು ಹೇಳಿರಿ.
ದೊಡ್ಡ ಧ್ವನಿಯಲ್ಲಿ ‘ಒಂದು ಕಡೆ ಸೇರೋಣ ಬನ್ನಿ, ರಕ್ಷಣೆಗಾಗಿ ಭದ್ರವಾದ ನಗರಗಳಿಗೆ ಓಡಿಹೋಗೋಣ ಬನ್ನಿ’ ಎಂದು ಕೂಗಿ ಹೇಳಿರಿ.
6 ಚೀಯೋನಿನ ಕಡೆಗೆ ಧ್ವಜವನ್ನು ಎತ್ತಿ ಸಂಕೇತ ಕೊಡಿ. ನಿಲ್ಲಬೇಡಿ. ನಿಮ್ಮ ಜೀವ ರಕ್ಷಣೆಗಾಗಿ ಓಡಿರಿ.
ನಾನು ಉತ್ತರದಿಂದ ವಿಪತ್ತನ್ನು ತರುತ್ತಿರುವುದರಿಂದ ನೀವು ಹೀಗೆ ಮಾಡಬೇಕು. ನಾನು ಭಯಂಕರವಾದ ವಿನಾಶವನ್ನುಟು ಮಾಡಲಿದ್ದೇನೆ.”
7 ತನ್ನ ಗುಹೆಯಿಂದ ಒಂದು “ಸಿಂಹವು” ಹೊರಬಂದಿದೆ. ಜನಾಂಗಗಳ ವಿನಾಶಕವಾದ ಸಿಂಹವು ಹೆಜ್ಜೆ ಹಾಕುತ್ತಿದೆ.
ಅದು ನಿಮ್ಮ ಪ್ರದೇಶವನ್ನು ನಾಶಮಾಡಲು ತನ್ನ ಗುಹೆಯನ್ನು ಬಿಟ್ಟು ಹೊರಟಿದೆ.
ನಿಮ್ಮ ಪಟ್ಟಣಗಳೆಲ್ಲ ನಾಶಹೊಂದುವವು. ಅಲ್ಲಿ ವಾಸಿಸಲು ಜನರೇ ಇಲ್ಲದಂತಾಗುವುದು.
8 ಆದ್ದರಿಂದ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ. ದೊಡ್ಡ ಧ್ವನಿಯಿಂದ ಗೋಳಾಡಿರಿ. ಏಕೆಂದರೆ ಯೆಹೋವನು ನಮ್ಮ ಮೇಲೆ ತುಂಬ ಕೋಪಗೊಂಡಿದ್ದಾನೆ.
9 ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ ರಾಜನು ಮತ್ತು ನಾಯಕರು ತಮ್ಮ ಧೈರ್ಯವನ್ನು ಕಳೆದುಕೊಳ್ಳುವರು.
ಯಾಜಕರು ಭಯಪಡುವರು; ಪ್ರವಾದಿಗಳು ಬೆರಗಾಗುವರು.”
10 ಆಗ ಯೆರೆಮೀಯನೆಂಬ ನಾನು, “ನನ್ನ ಒಡೆಯನಾದ ಯೆಹೋವನೇ, ನೀನು ಯೆಹೂದ ಮತ್ತು ಜೆರುಸಲೇಮಿನ ಜನರಿಗೆ ಮೋಸ ಮಾಡಿದೆ, ‘ನೀವು ಶಾಂತಿಯಿಂದ ಇರುವಿರಿ’ ಎಂದು ನೀನು ಅವರಿಗೆ ಹೇಳಿದೆ. ಆದರೆ ಈಗ ಅವರ ಕತ್ತಿನ ಮೇಲೆ ಖಡ್ಗ ಇದೆ” ಎಂದೆನು. 11 ಆ ಸಮಯದಲ್ಲಿ ಯೆಹೂದ ಮತ್ತು ಜೆರುಸಲೇಮಿನ ಜನರಿಗೆ ಒಂದು ಸಂದೇಶವನ್ನು ಕೊಡಲಾಗುವುದು.
“ಬೋಳುಬೆಟ್ಟಗಳಿಂದ ಒಂದು ಬಿಸಿಗಾಳಿಯು ಬೀಸುವುದು. ಅದು ಮರಳುಗಾಡಿನಿಂದ ಬೀಸುವುದು.
ಇದು ರೈತನು ತೂರಿ ಹೊಟ್ಟಿನಿಂದ ಕಾಳನ್ನು ಬೇರ್ಪಡಿಸಲು ಬೇಕಾಗುವ ಸೌಮ್ಯವಾದ ಗಾಳಿಯಂತಲ್ಲ.
12 ಇದು ಅದಕ್ಕಿಂತಲೂ ಬಹು ಬಿರುಸಾಗಿ ಬೀಸುತ್ತದೆ. ಅದು ನನ್ನಿಂದ ಬರುತ್ತದೆ.
ಈಗ ಯೆಹೂದದ ಜನರಿಗೆ ನ್ಯಾಯವಾದ ದಂಡನೆಗಳನ್ನು ವಿಧಿಸುವೆನು.”
13 ಇಗೋ, ಆ ಶತ್ರುವು ಮೇಘಮಾಲೆಯಂತೆ ಬರುತ್ತಿದ್ದಾನೆ. ಅವನ ರಥಗಳು ಬಿರುಗಾಳಿಯಂತೆ ಕಾಣುತ್ತಿವೆ. ಅವನ ಕುದುರೆಗಳು ಹದ್ದುಗಳಿಗಿಂತ ವೇಗವಾಗಿ ಓಡುತ್ತಿವೆ.
ಇದು ನಮಗೆ ತುಂಬ ಅಪಾಯಕಾರಿಯಾಗಿದೆ; ನಾವು ಹಾಳಾಗಿಹೋದೆವು.
14 ಜೆರುಸಲೇಮಿನ ಜನರೇ, ನಿಮ್ಮ ಹೃದಯದ ಕೆಟ್ಟತನವನ್ನು ತೊಳೆದುಕೊಳ್ಳಿರಿ.
ರಕ್ಷಣೆಹೊಂದಲು ನಿಮ್ಮ ಹೃದಯಗಳನ್ನು ಪವಿತ್ರಗೊಳಿಸಿರಿ. ದುರಾಲೋಚನೆಗಳನ್ನು ಮುಂದುವರಿಸಬೇಡಿರಿ.
15 ಕೇಳಿರಿ, ದಾನ್ ಪ್ರದೇಶದಿಂದ ದೂತನ ಸ್ವರವು ಕೇಳಿಬರುತ್ತಿದೆ.
ಎಫ್ರಾಯೀಮ್ ಬೆಟ್ಟಪ್ರದೇಶದಿಂದ ಒಬ್ಬನು ಕೆಟ್ಟ ಸಮಾಚಾರವನ್ನು ತರುತ್ತಿದ್ದಾನೆ.
16 “ಇದನ್ನು ಈ ಜನಾಂಗಕ್ಕೆ ತಿಳಿಸಿರಿ. ಜೆರುಸಲೇಮಿನ ಜನರಲ್ಲಿ ಈ ಸಮಾಚಾರವನ್ನು ಹರಡಿರಿ.
ಬಹುದೂರದೇಶದಿಂದ ಶತ್ರುಗಳು ಬರುತ್ತಿದ್ದಾರೆ.
ಆ ಶತ್ರುಗಳು ಯೆಹೂದದ ನಗರಗಳ ವಿರುದ್ಧ ಯುದ್ಧದ ಘೋಷಣೆಗಳನ್ನು ಕೂಗುತ್ತಿದ್ದಾರೆ.
17 ಹೊಲವನ್ನು ಕಾಯುವ ಜನರಂತೆ ವೈರಿಗಳು ಜೆರುಸಲೇಮನ್ನು ಮುತ್ತಿಕೊಂಡಿದ್ದಾರೆ.
ಯೆಹೂದವೇ, ನೀನು ನನಗೆ ತಿರುಗಿಬಿದ್ದೆ, ಅದಕ್ಕಾಗಿ ನಿನ್ನ ಮೇಲೆ ಶತ್ರುಗಳು ಬೀಳುತ್ತಿದ್ದಾರೆ”
ಎಂದು ಯೆಹೋವನು ಹೇಳುವನು.
18 “ನಿನ್ನ ನಡತೆಯೂ ನಿನ್ನ ಕೃತ್ಯಗಳೂ ನಿನಗೆ ಈ ಕಷ್ಟವನ್ನು ತಂದವು.
ನಿನ್ನ ದುಷ್ಟತನವೇ ನಿನ್ನ ಜೀವನವನ್ನು ಇಷ್ಟು ಕಷ್ಟಕರವನ್ನಾಗಿ ಮಾಡಿದೆ.
ನಿನ್ನ ದುಷ್ಟತನವೇ ನಿನ್ನ ಮನಸ್ಸಿಗೆ ಆಳವಾದ ನೋವನ್ನು ಉಂಟುಮಾಡಿದೆ.”
ಯೆರೆಮೀಯನ ಗೋಳಾಟ 19 ಅಯ್ಯೋ, ನನ್ನ ದುಃಖ ಮತ್ತು ಚಿಂತೆ ನನ್ನ ಹೊಟ್ಟೆಯಲ್ಲಿ ಸಂಕಟವನ್ನು ಉಂಟುಮಾಡುತ್ತಿವೆ. ನೋವಿನಿಂದ ನಾನು ಬಾಗಿಹೋಗಿದ್ದೇನೆ.
ನಾನು ತುಂಬ ಹೆದರಿಕೊಂಡಿದ್ದೇನೆ. ನನ್ನ ಹೃದಯವು ಒಳಗೆ ತಳಮಳಗೊಳ್ಳುತ್ತಿದೆ.
ನಾನು ಬಾಯಿ ಮುಚ್ಚಿಕೊಂಡಿರಲಾರೆ. ಏಕೆಂದರೆ, ನಾನು ತುತ್ತೂರಿಯ ಶಬ್ದವನ್ನು ಕೇಳಿದ್ದೇನೆ. ಆ ತುತ್ತೂರಿಯು ಸೈನ್ಯವನ್ನು ಯುದ್ಧಕ್ಕೆ ಕರೆಯುತ್ತಿದೆ.
20 ವಿನಾಶನದ ಮೇಲೆ ವಿನಾಶವು ಬಂದು ಇಡೀ ದೇಶವೇ ಹಾಳಾಗಿದೆ.
ಫಕ್ಕನೆ ನನ್ನ ಗುಡಾರಗಳು ಹಾಳಾದವು. ನನ್ನ ಪರದೆಗಳು ಹರಿದುಹೋದವು.
21 ಯೆಹೋವನೇ, ಎಷ್ಟು ಹೊತ್ತಿನವರೆಗೆ ನಾನು ಯುದ್ಧ ಧ್ವಜಗಳನ್ನು ನೋಡಬೇಕು? ಎಷ್ಟು ಹೊತ್ತಿನವರೆಗೆ ನಾನು ಯುದ್ಧದ ತುತ್ತೂರಿಗಳ ಶಬ್ಧವನ್ನು ಕೇಳಬೇಕು? 22 ದೇವರು, “ನನ್ನ ಜನರು ಮೂರ್ಖರಾಗಿದ್ದಾರೆ. ಅವರು ನನ್ನನ್ನು ಅರಿಯದವರಾಗಿದ್ದಾರೆ.
ಅವರು ಮೂಢ ಮಕ್ಕಳಾಗಿದ್ದಾರೆ. ಅವರು ಅವಿವೇಕಿಗಳಾಗಿದ್ದಾರೆ.
ಅವರು ದುಷ್ಕೃತ್ಯದಲ್ಲಿ ನಿಪುಣರಾಗಿದ್ದಾರೆ. ಅವರು ಒಳ್ಳೆಯದನ್ನು ಮಾಡಲರಿಯದವರಾಗಿದ್ದಾರೆ” ಎಂದನು.
ವಿಪತ್ತಿನ ಆಗಮನ 23 ನಾನು ಭೂಮಿಯ ಕಡೆಗೆ ನೋಡಿದೆ, ಭೂಮಿಯು ಬರಿದಾಗಿತ್ತು. ಭೂಮಿಯ ಮೇಲೇನೂ ಇರಲಿಲ್ಲ.
ನಾನು ಆಕಾಶದ ಕಡೆಗೆ ನೋಡಿದೆ, ಅದರ ಬೆಳಕು ಹೋಗಿಬಿಟ್ಟಿತ್ತು.
24 ನಾನು ಪರ್ವತಗಳ ಕಡೆಗೆ ನೋಡಿದೆ, ಅವುಗಳು ನಡುಗುತ್ತಿದ್ದವು. ಎಲ್ಲಾ ಬೆಟ್ಟಗಳು ಅದರುತ್ತಿದ್ದವು.
25 ನಾನು ನೋಡಿದರೂ ಅಲ್ಲಿ ಜನರಿರಲಿಲ್ಲ. ಆಕಾಶದ ಎಲ್ಲಾ ಪಕ್ಷಿಗಳು ಹಾರಿಹೋಗಿದ್ದವು.
26 ನಾನು ನೋಡಿದಾಗ ಫಲವತ್ತಾದ ಭೂಮಿಯು ಮರಳುಗಾಡಾಗಿತ್ತು. ಆ ಪ್ರದೇಶದ ಎಲ್ಲಾ ನಗರಗಳು ಹಾಳಾಗಿ ಹೋಗಿದ್ದವು. ಯೆಹೋವನು ಇದನ್ನು ಮಾಡಿದನು. ಯೆಹೋವನು ತನ್ನ ಭಯಂಕರವಾದ ಕೋಪದಿಂದ ಇದನ್ನು ಮಾಡಿದನು. 27 ಯೆಹೋವನು ಹೀಗೆ ಹೇಳುತ್ತಾನೆ:
“ಇಡೀ ದೇಶವು ಹಾಳಾಗುವುದು. ಆದರೆ ನಾನು ಭೂಮಿಯನ್ನು ಸಂಪೂರ್ಣವಾಗಿ ನಾಶಮಾಡುವದಿಲ್ಲ.
28 ಈ ಪ್ರದೇಶದ ಜನರು ಸತ್ತವರಿಗಾಗಿ ಅಳುವರು. ಆಕಾಶವು ಕಪ್ಪಾಗುವುದು.
ನಾನು ಹೇಳಿದ್ದೇನೆ, ಅದು ಬದಲಾಗುವುದಿಲ್ಲ. ನಾನು ಒಂದು ನಿರ್ಣಯ ತೆಗೆದುಕೊಂಡಿದ್ದೇನೆ, ನಾನು ನನ್ನ ಮನಸ್ಸನ್ನು ಬದಲಾಯಿಸುವದಿಲ್ಲ.”
29 ಯೆಹೂದದ ಜನರು ಕುದುರೆಗಳ, ಸವಾರರ, ಬಿಲ್ಲುಗಾರರ ಶಬ್ಧಗಳನ್ನು ಕೇಳಿ ಓಡಿಹೋಗುವರು.
ಕೆಲವು ಜನರು ಗುಹೆಯಲ್ಲಿ ಅಡಗಿಕೊಳ್ಳುವರು. ಕೆಲವರು ಪೊದೆಗಳಲ್ಲಿ ಅವಿತುಕೊಳ್ಳುವರು. ಕೆಲವರು ಬೆಟ್ಟಗಳನ್ನು ಹತ್ತಿಹೋಗುವರು.
ಯೆಹೂದದ ಎಲ್ಲಾ ನಗರಗಳು ಬರಿದಾಗುವವು. ಅಲ್ಲಿ ಒಬ್ಬರೂ ಇರುವದಿಲ್ಲ.
30 ಹಾಳಾಗಿಹೋದ ಯೆಹೂದವೇ, ನೀನು ಮಾಡುತ್ತಿರುವುದೇನು?
ಅತ್ಯುತ್ತಮವಾದ ಕೆಂಪುಬಣ್ಣದ ಪೋಷಾಕನ್ನು ನೀನು ಧರಿಸಿಕೊಳ್ಳುತ್ತಿರುವುದೇಕೆ?
ಸುವರ್ಣಾಭರಣಗಳಿಂದ ನಿನ್ನನ್ನು ಏಕೆ ಅಲಂಕರಿಸಿಕೊಳ್ಳುತ್ತಿರುವೆ?
ಕಣ್ಣಿಗೆ ಕಾಡಿಗೆಯನ್ನು ಏಕೆ ಹಚ್ಚುತ್ತಿರುವೆ?
ನೀನು ಅಲಂಕಾರ ಮಾಡಿಕೊಳ್ಳುವದೆಲ್ಲ ವ್ಯರ್ಥ.
ನಿನ್ನ ಪ್ರಿಯತಮರು ನಿನ್ನನ್ನು ತಿರಸ್ಕರಿಸುತ್ತಾರೆ. ಅವರು ನಿನ್ನನ್ನು ಕೊಲೆಮಾಡುವ ಪ್ರಯತ್ನದಲ್ಲಿದ್ದಾರೆ.
31 ಮೊದಲನೆ ಹೆರಿಗೆಯ ಸಮಯದಲ್ಲಿ ವೇದನೆಪಡುವ ಹೆಂಗಸಿನ ಸ್ವರದಂತಿರುವ ಒಂದು ಧ್ವನಿಯನ್ನು ನಾನು ಕೇಳಿದೆ, ಇದು ಚೀಯೋನ್ ನಗರಿಯ ಮಗಳ ಕೂಗಾಟ.
ಅವಳು ತನ್ನ ಎರಡೂ ಕೈಗಳನ್ನು ಮೇಲಕ್ಕೆ ಎತ್ತಿ ಪ್ರಾರ್ಥಿಸುತ್ತಾ, “ಅಯ್ಯೋ, ನಾನು ಮೂರ್ಛೆ, ಹೋಗುವುದರಲ್ಲಿದ್ದೇನೆ, ನನ್ನ ಸುತ್ತಲೆಲ್ಲ ಕೊಲೆಗಡುಕರಿದ್ದಾರೆ” ಎಂದು ಹೇಳುತ್ತಿದ್ದಾಳೆ.
ಒಟ್ಟು 52 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 4 / 52
×

Alert

×

Kannada Letters Keypad References