1. ಏಳನೇ ತಿಂಗಳಿನಲ್ಲಿ ನೆತನ್ಯನ ಮಗನೂ ಎಲೀಷಾಮನ ಮೊಮ್ಮಗನೂ ಆದ ಇಷ್ಮಾಯೇಲನು ಅಹೀಕಾಮನ ಮಗನಾದ ಗೆದಲ್ಯನಲ್ಲಿಗೆ ಬಂದನು. ಇಷ್ಮಾಯೇಲನು ತನ್ನ ಹತ್ತು ಮಂದಿಯೊಂದಿಗೆ ಬಂದನು. ಆ ಜನರು ಮಿಚ್ಫ ಪಟ್ಟಣಕ್ಕೆ ಬಂದರು. ಇಷ್ಮಾಯೇಲನು ರಾಜವಂಶೀಯನಾಗಿದ್ದನು. ಅವನು ಯೆಹೂದದ ರಾಜನ ಒಬ್ಬ ಅಧಿಕಾರಿಯಾಗಿದ್ದನು. ಇಷ್ಮಾಯೇಲ್ ಮತ್ತು ಅವನ ಜನರು ಗೆದಲ್ಯನೊಂದಿಗೆ ಊಟಮಾಡಿದರು.
2. ಅವರು ಒಟ್ಟಿಗೆ ಊಟ ಮಾಡುತ್ತಿದ್ದಾಗ, ಇಷ್ಮಾಯೇಲ್ ಮತ್ತು ಅವನ ಹತ್ತು ಜನರು ಎದ್ದು ಅಹೀಕಾಮನ ಮಗನಾದ ಗೆದಲ್ಯನನ್ನು ಖಡ್ಗದಿಂದ ಕೊಂದರು. ಗೆದಲ್ಯನನ್ನು ಬಾಬಿಲೋನಿನ ರಾಜನು ಯೆಹೂದದ ಅಧಿಪತಿಯಾಗಿ ನೇಮಿಸಿದ್ದನು.
3. ಇಷ್ಮಾಯೇಲನು ಗೆದಲ್ಯನ ಸಂಗಡ ಮಿಚ್ಫದಲ್ಲಿದ್ದ ಎಲ್ಲಾ ಯೆಹೂದ್ಯರನ್ನು ಸಹ ಕೊಂದನು. ಇಷ್ಮಾಯೇಲನು ಗೆದಲ್ಯನ ಸಂಗಡ ಇದ್ದ ಎಲ್ಲಾ ಬಾಬಿಲೋನಿನ ಸೈನಿಕರನ್ನು ಸಹ ಕೊಂದುಹಾಕಿದನು. [PE][PS]
4. (4-5) ಗೆದಲ್ಯನ ಕೊಲೆಯ ಎರಡನೆಯ ದಿನ ಯೆಹೋವನ ಆಲಯಕ್ಕೆ ನೈವೇದ್ಯವನ್ನು ಮತ್ತು ಧೂಪವನ್ನು ತೆಗೆದುಕೊಂಡು ಎಂಭತ್ತು ಜನ ಯೆಹೂದ್ಯರು ಮಿಚ್ಫಕ್ಕೆ ಬಂದರು. ಆ ಎಂಭತ್ತು ಜನ ತಮ್ಮ ಗಡ್ಡ ಬೋಳಿಸಿಕೊಂಡಿದ್ದರು ಮತ್ತು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಗಾಯಮಾಡಿಕೊಂಡಿದ್ದರು. ಅವರು ಶೆಕೆಮ್, ಶಿಲೋ, ಸಮಾರ್ಯ ಎಂಬ ಊರುಗಳಿಂದ ಬಂದಿದ್ದರು. ಗೆದಲ್ಯನ ಕೊಲೆ ಮಾಡಲಾಗಿದೆ ಎಂಬುದು ಇವರ್ಯಾರಿಗೂ ತಿಳಿದಿರಲಿಲ್ಲ.
5.
6. ಇಷ್ಮಾಯೇಲನು ಈ ಎಂಭತ್ತು ಜನರನ್ನು ಕಾಣುವದಕ್ಕಾಗಿ ಮಿಚ್ಫ ಪಟ್ಟಣದ ಹೊರಗಡೆ ಹೋದನು. ಅವರನ್ನು ಕಾಣುವದಕ್ಕೆ ಹೋಗುವಾಗ ಅವನು ಅಳುತ್ತಿದ್ದನು. ಇಷ್ಮಾಯೇಲನು ಆ ಎಂಭತ್ತು ಜನರನ್ನು ಎದುರುಗೊಂಡು, “ಅಹೀಕಾಮನ ಮಗನಾದ ಗೆದಲ್ಯನನ್ನು ಭೇಟಿ ಮಾಡುವದಕ್ಕೆ ನನ್ನೊಂದಿಗೆ ಬನ್ನಿ” ಎಂದು ಕರೆದನು.
7. ಆ ಎಂಭತ್ತು ಜನರು ಮಿಚ್ಫಪಟ್ಟಣಕ್ಕೆ ಹೋದರು. ಆಗ ಇಷ್ಮಾಯೇಲ ಮತ್ತು ಅವನ ಸಂಗಡಿಗರು ಅವರಲ್ಲಿ ಎಪ್ಪತ್ತು ಮಂದಿಯನ್ನು ಕೊಂದರು. ಇಷ್ಮಾಯೇಲ ಮತ್ತು ಅವನ ಸಂಗಡಿಗರು ಆ ಎಪ್ಪತ್ತು ಮಂದಿ ದೇಹಗಳನ್ನು ಒಂದು ಆಳವಾದ ಬಾವಿಯಲ್ಲಿ ಎಸೆದರು.
8. ಆದರೆ ಉಳಿದ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಲ್ಲಬೇಡ, ನಮ್ಮಲ್ಲಿ ಗೋಧಿ, ಜವೆಗೋಧಿ, ಎಣ್ಣೆ ಮತ್ತು ಜೇನುತುಪ್ಪ ಇವೆ. ನಾವು ಆ ವಸ್ತುಗಳನ್ನು ಒಂದು ಹೊಲದಲ್ಲಿ ಬಚ್ಚಿಟ್ಟಿದ್ದೇವೆ” ಎಂದು ಹೇಳಿದರು. ಆದ್ದರಿಂದ ಇಷ್ಮಾಯೇಲನು ಆ ಹತ್ತು ಮಂದಿಯನ್ನು ಬಿಟ್ಟುಬಿಟ್ಟನು. ಅವನು ಬೇರೆಯವರೊಂದಿಗೆ ಅವರನ್ನು ಕೊಲ್ಲಲಿಲ್ಲ.
9. ಇಷ್ಮಾಯೇಲನು ಶವಗಳನ್ನು ಆ ಬಾವಿಯೊಳಗೆ ಹಾಕಿದನು. ಆ ಬಾವಿಯು ಬಹಳ ದೊಡ್ಡದಾಗಿತ್ತು. ಅದನ್ನು ಯೆಹೂದದ ರಾಜನಾದ ಆಸನು ತೋಡಿಸಿದ್ದನು. ಯುದ್ಧದ ಸಮಯದಲ್ಲಿ ನಗರದಲ್ಲಿ ನೀರು ಸಾಕಷ್ಟು ಇರಬೇಕೆಂಬ ಉದ್ದೇಶದಿಂದ ರಾಜನಾದ ಆಸನು ಈ ಬಾವಿಯನ್ನು ತೋಡಿಸಿದ್ದನು. ರಾಜನಾದ ಆಸನು ತನ್ನ ನಗರವನ್ನು ಇಸ್ರೇಲಿನ ರಾಜನಾದ ಬಾಷನಿಂದ ರಕ್ಷಿಸುವುದಕ್ಕಾಗಿ ಇದನ್ನು ಕಟ್ಟಿಸಿದ್ದನು. [PE][PS]
10. ಮಿಚ್ಫ ನಗರದಲ್ಲಿ ಉಳಿದೆಲ್ಲ ಜನರನ್ನು ಇಷ್ಮಾಯೇಲನು ವಶಪಡಿಸಿಕೊಂಡನು. ಅವರಲ್ಲಿ ರಾಜನ ಹೆಣ್ಣಮಕ್ಕಳು ಮತ್ತು ಅಲ್ಲಿದ್ದ ಬೇರೆ ಜನರೂ ಸೇರಿದ್ದರು. ಆ ಜನರನ್ನು ನೋಡಿಕೊಳ್ಳಲೆಂದು ನೆಬೂಜರದಾನನು ಗೆದಲ್ಯನನ್ನು ನೇಮಿಸಿದ್ದನು. ನೆಬೂಜರದಾನನು ಬಾಬೆಲಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾಗಿದ್ದನು. ಇಷ್ಮಾಯೇಲನು ಆ ಜನರನ್ನು ಸೆರೆಹಿಡಿದು ಅವರನ್ನು ತೆಗೆದುಕೊಂಡು ಅಮ್ಮೋನ್ಯರ ಸೀಮೆಗೆ ಹೊರಟನು. [PE][PS]
11. ಕಾರೇಹನ ಮಗನಾದ ಯೋಹಾನಾನನೂ ಅವನೊಂದಿಗಿದ್ದ ಸಕಲ ಸೇನಾಪತಿಗಳೂ ಇಷ್ಮಾಯೇಲನು ಮಾಡಿದ ಎಲ್ಲಾ ದುಷ್ಕೃತ್ಯಗಳ ಬಗ್ಗೆ ಕೇಳಿದರು.
12. ಆದ್ದರಿಂದ ಯೋಹಾನಾನನು ಮತ್ತು ಅವನೊಂದಿಗಿದ್ದ ಸಕಲ ಸೇನಾಪತಿಗಳು ತಮ್ಮ ಜನರನ್ನು ಕರೆದುಕೊಂಡು ನೆತನ್ಯನ ಮಗನಾದ ಇಷ್ಮಾಯೇಲನ ವಿರುದ್ಧ ಹೋರಾಡಲು ಹೊರಟರು. ಅವರು ಗಿಬ್ಯೋನಿನ ದೊಡ್ಡ ಕೆರೆಯ ಹತ್ತಿರ ಇಷ್ಮಾಯೇಲನನ್ನು ಹಿಡಿದರು.
13. ಇಷ್ಮಾಯೇಲನು ಸೆರೆಹಿಡಿದ ಸೆರೆಯಾಳುಗಳು ಯೋಹಾನಾನನನ್ನು ಮತ್ತು ಸೇನಾಪತಿಗಳನ್ನು ನೋಡಿದರು. ಈ ಸೆರೆಯಾಳುಗಳಿಗೆ ಬಹಳ ಸಂತೋಷವಾಯಿತು.
14. ಆಗ, ಇಷ್ಮಾಯೇಲನು ಮಿಚ್ಫದಲ್ಲಿ ಸೆರೆಹಿಡಿದುಕೊಂಡು ಹೋಗಿದ್ದ ಎಲ್ಲಾ ಜನರು ಕಾರೇಹನ ಮಗನಾದ ಯೋಹಾನಾನನ ಕಡೆಗೆ ಓಡಿದರು.
15. ನೆತನ್ಯನ ಮಗನಾದ ಇಷ್ಮಾಯೇಲನು ಮತ್ತು ಅವನ ಎಂಟು ಜನ ಸಂಗಡಿಗರು ಯೋಹಾನಾನನಿಂದ ತಪ್ಪಿಸಿಕೊಂಡು ಅಮ್ಮೋನ್ಯರ ಮೊರೆಹೊಕ್ಕರು. [PE][PS]
16. ಇಷ್ಮಾಯೇಲನು ಗೆದಲ್ಯನನ್ನು ಕೊಂದು ಮಿಚ್ಫದಲ್ಲಿ ಸೆರೆಹಿಡಿದ ಬಂದಿಗಳನ್ನು ಕಾರೇಹನ ಮಗನಾದ ಯೋಹಾನಾನನು ಮತ್ತು ಅವನ ಸೇನಾಪತಿಗಳು ರಕ್ಷಿಸಿದರು. ಆಗ ಉಳಿದುಕೊಂಡವರಲ್ಲಿ ಸೈನಿಕರು, ಹೆಂಗಸರು, ಮಕ್ಕಳು ಮತ್ತು ಅಧಿಕಾರಿಗಳು ಸೇರಿದ್ದರು. ಯೋಹಾನಾನನು ಗಿಬ್ಯೋನಿನಿಂದ ಅವರನ್ನು ಹಿಂದಕ್ಕೆ ಕರೆತಂದನು. [PS]
17. {ಈಜಿಪ್ಟಿಗೆ ವಲಸೆ} [PS] (17-18) ಯೋಹಾನಾನನೂ ಉಳಿದ ಸೇನಾಧಿಪತಿಗಳೂ ಕಸ್ದೀಯರಿಗೆ ಹೆದರಿದರು. ಬಾಬಿಲೋನಿನ ರಾಜನು ಗೆದಲ್ಯನನ್ನು ಯೆಹೂದದ ಅಧಿಪತಿಯಾಗಿ ನೇಮಿಸಿದ್ದನು. ಆದರೆ ಇಷ್ಮಾಯೇಲನು ಗೆದಲ್ಯನನ್ನು ಕೊಲೆ ಮಾಡಿದನು. ಇದರಿಂದ ಕಸ್ದೀಯರಿಗೆ ಕೋಪ ಬರಬಹುದೆಂದು ಯೋಹಾನಾನನು ಭಯಪಟ್ಟನು. ಆದ್ದರಿಂದ ಈಜಿಪ್ಟಿಗೆ ಓಡಿಹೋಗಬೇಕೆಂದು ಅವರು ನಿರ್ಧರಿಸಿದರು. ಈಜಿಪ್ಟಿಗೆ ಹೋಗುವ ದಾರಿಯಲ್ಲಿ ಅವರು ಗೇರುಥ್ ಕಿಮ್ಹಾಮಿನಲ್ಲಿ ಇಳಿದುಕೊಂಡರು. ಗೇರುಥ್ ಕಿಮ್ಹಾಮು ಬೆತ್ಲೆಹೇಮ್ ಪಟ್ಟಣದ ಸಮೀಪದಲ್ಲಿದೆ. [PE]
18.