1. {ಮೋವಾಬಿನ ವಿಷಯವಾಗಿ ಸಂದೇಶ} PS ಈ ಸಂದೇಶವು ಮೋವಾಬ್ ದೇಶವನ್ನು ಕುರಿತದ್ದು. ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: “ನೆಬೋ ಪರ್ವತಕ್ಕೆ ದುರ್ಗತಿ ಬರುವುದು.
ನೆಬೋ ಪರ್ವತ ಪ್ರದೇಶವು ಹಾಳಾಗುವುದು. ಕಿರ್ಯಾತಯಿಮ್ ಪಟ್ಟಣವು ಸೋಲುವುದು. ಅದನ್ನು ವಶಪಡಿಸಿಕೊಳ್ಳಲಾಗುವುದು. ಭದ್ರವಾದ ಸ್ಥಳವನ್ನು ಸೋಲಿಸಿ ಧ್ವಂಸ ಮಾಡಲಾಗುವುದು. |
2. ಇನ್ನು ಮುಂದೆ ಮೋವಾಬ್ ಪಟ್ಟಣವು ಹೊಗಳಿಕೆಗೆ ಪಾತ್ರವಾಗುವುದಿಲ್ಲ.
ಹೆಷ್ಬೋನ್ ಪಟ್ಟಣದ ಜನರು ಮೋವಾಬನ್ನು ಸೋಲಿಸುವ ಯುಕ್ತಿ ಮಾಡುವರು. ಅವರು ಆ ಜನಾಂಗವನ್ನು ನಾಶಮಾಡುವ ಆಲೋಚನೆ ಮಾಡುವರು. ಮದ್ಮೆನೆ ಪಟ್ಟಣವೇ, ನೀನೂ ಸಹ ಸುಮ್ಮನಾಗುವೆ. ಖಡ್ಗವು ನಿನ್ನನ್ನು ಬೆನ್ನಟ್ಟುವದು. |
5. ಮೋವಾಬಿನ ಜನರು ಲೂಹೀತಿನ ದಾರಿಹಿಡಿದು ಹೋಗುತ್ತಾರೆ.
ಹೋಗುವಾಗ ಅವರು ಬಹಳವಾಗಿ ಗೋಳಾಡುತ್ತಾರೆ. ಅವರ ಕಷ್ಟ ಮತ್ತು ನೋವಿನ ಗೋಳಾಟವು ಆ ದಾರಿಯಿಂದ ಹೊರೊನಯಿಮ್ ಪಟ್ಟಣದವರೆಗೂ ಕೇಳಿಬರುತ್ತದೆ. |
7. “ನೀವು ನಿರ್ಮಿಸಿದ ವಸ್ತುಗಳಲ್ಲಿ ಮತ್ತು ನಿಮ್ಮ ಸಂಪತ್ತಿನಲ್ಲಿ ನಂಬಿಕೆಯಿಟ್ಟಿದ್ದರಿಂದ
ನಿಮ್ಮನ್ನು ವಶಪಡಿಸಿಕೊಳ್ಳಲಾಗುವುದು. ಕೆಮೋಷ್ ದೇವತೆಯನ್ನು ಅದರ ಯಾಜಕರೊಂದಿಗೆ ಮತ್ತು ಪ್ರಧಾನರೊಂದಿಗೆ ಸೆರೆಹಿಡಿಯಲಾಗುವುದು. |
8. ಪ್ರತಿಯೊಂದು ಪಟ್ಟಣದ ಮೇಲೆ ವಿನಾಶಕನು ಧಾಳಿ ಮಾಡುವನು.
ಒಂದು ಪಟ್ಟಣವೂ ತಪ್ಪಿಸಿಕೊಳ್ಳಲಾರದು. ಇಳಿಜಾರು ಪ್ರದೇಶವನ್ನು ನಾಶಪಡಿಸಲಾಗುವುದು. ಎತ್ತರದಲ್ಲಿದ್ದ ಪ್ರದೇಶವನ್ನು ಹಾಳುಮಾಡಲಾಗುವುದು. ಇದನ್ನು ಯೆಹೋವನೇ ಹೇಳಿರುವುದರಿಂದ ನೆರವೇರುವುದು. |
9. ಮೋವಾಬಿನ ಭೂಮಿಯ ಮೇಲೆ ಉಪ್ಪನ್ನು ಹರಡಿರಿ.
ದೇಶವು ಬರಿದಾದ ಮರುಭೂಮಿಯಾಗುವುದು. ಮೋವಾಬಿನ ಪಟ್ಟಣಗಳು ಬರಿದಾಗುವವು. ಅಲ್ಲಿ ಯಾರೂ ವಾಸಮಾಡಲಾರರು. |
10. ಯೆಹೋವನು ಹೇಳಿದಂತೆ ನಡೆಯದಿದ್ದವನಿಗೆ
ಮತ್ತು ಆ ಜನರನ್ನು ಕೊಲ್ಲಲು ತನ್ನ ಖಡ್ಗವನ್ನು ಬಳಸದಿದ್ದವನಿಗೆ ಕೇಡಾಗುವುದು. |
11. “ಮೋವಾಬಿಗೆ ಕಷ್ಟವೆಂಬುದೇ ಗೊತ್ತಿಲ್ಲ.
ಮೋವಾಬ್ ಮಡ್ಡಿ ತಂಗಿಸಲು ಬಿಟ್ಟ ದ್ರಾಕ್ಷಾರಸದಂತಿದೆ. ಅದನ್ನು ಒಂದು ಪಾತ್ರೆಯಿಂದ ಮತ್ತೊಂದು ಪಾತ್ರೆಗೆ ಒಮ್ಮೆಯೂ ಸುರಿದಿಲ್ಲ. ಅದನ್ನು ಒಮ್ಮೆಯೂ ಸೆರೆಹಿಡಿದಿಲ್ಲ. ಆದ್ದರಿಂದ ಅದರ ರುಚಿ ಮೊದಲಿದ್ದ ಹಾಗೆ ಇದೆ. ಅದರ ವಾಸನೆಯಲ್ಲಿ ಬದಲಾವಣೆಯಾಗಿಲ್ಲ.” |
12. ಯೆಹೋವನು ಹೀಗೆಂದನು:
“ನಿನ್ನನ್ನು ನಿನ್ನ ಪಾತ್ರೆಯಿಂದ ಸುರಿಯುವದಕ್ಕೆ ನಾನು ಜನರನ್ನು ಕಳುಹಿಸುತ್ತೇನೆ. ಆ ಜನರು ಮೋವಾಬಿನ ಪಾತ್ರೆಗಳನ್ನು ಬರಿದಾಗಿಸುವರು. ಅನಂತರ ಆ ಪಾತ್ರೆಗಳನ್ನು ಒಡೆದು ಚೂರುಚೂರು ಮಾಡುವರು.” PS |
13. ಆಗ ಮೋವಾಬಿನ ಜನರು ತಮ್ಮ ಸುಳ್ಳುದೇವರಾದ ಕೆಮೋಷಿಗಾಗಿ ನಾಚಿಕೆಪಡುವರು. ಇಸ್ರೇಲಿನ ಜನರು ಬೇತೇಲಿನಲ್ಲಿ ಆ ಸುಳ್ಳುದೇವರನ್ನು ನಂಬಿಕೊಂಡಿದ್ದರು. ಆದರೆ ಆ ಸುಳ್ಳುದೇವರು ಅವರ ಸಹಾಯಕ್ಕೆ ಬಾರದೆ ಇದ್ದಾಗ ಆ ಇಸ್ರೇಲರು ನಾಚಿಕೆಗೆ ಈಡಾದರು. ಮೋವಾಬ್ ಸಹ ಅದೇ ಸ್ಥಿತಿಯಲ್ಲಿರುವುದು.
|
15. ವೈರಿಯು ಮೋವಾಬಿನ ಮೇಲೆ ಧಾಳಿ ಮಾಡುವನು.
ವೈರಿಯು ಆ ಪಟ್ಟಣಗಳಲ್ಲಿ ಪ್ರವೇಶಮಾಡಿ ಅವುಗಳ ಧ್ವಂಸ ಮಾಡುವನು. ಅವಳ ಅತ್ಯುತ್ತಮ ತರುಣರು ಕೊಲೆಗೀಡಾಗುವರು.” ಈ ಸಂದೇಶವು ರಾಜನಿಂದ ಬಂದಿದೆ. ಆ ರಾಜನ ಹೆಸರು ಸರ್ವಶಕ್ತನಾದ ಯೆಹೋವನು ಎಂದು. |
17. ಮೋವಾಬಿನ ಸುತ್ತಮುತ್ತಲೂ ವಾಸಿಸುವ ನೀವೆಲ್ಲರು ಆ ದೇಶಕ್ಕಾಗಿ ಗೋಳಾಡಬೇಕು.
ಮೋವಾಬ್ ಎಷ್ಟು ಸುಪ್ರಸಿದ್ಧವಾಗಿದೆ ಎಂಬುದು ನಿಮಗೆಲ್ಲ ಗೊತ್ತು. ಆದ್ದರಿಂದ ಅದಕ್ಕಾಗಿ ಗೋಳಾಡಿರಿ. ‘ರಾಜನ ಶಕ್ತಿಯು ಇಲ್ಲವಾಯಿತು. ಮೋವಾಬಿನ ಸಾಮರ್ಥ್ಯ ಮತ್ತು ಘನತೆ ಕಣ್ಮರೆಯಾದವು’ ಎಂದು ಹೇಳಿರಿ. |
18. “ದೀಬೋನ್ನಲ್ಲಿ ವಾಸಿಸುವ ಜನರೇ,
ನಿಮ್ಮ ಗೌರವಾನಿಬತ ಸ್ಥಳದಿಂದ ಕೆಳಗಿಳಿದು ಬನ್ನಿ. ನೆಲದ ಮೇಲೆ ಧೂಳಿನಲ್ಲಿ ಕುಳಿತುಕೊಳ್ಳಿ. ಏಕೆಂದರೆ, ಧ್ವಂಸಕನು ಬರುತ್ತಿದ್ದಾನೆ. ನಿಮ್ಮ ಭದ್ರವಾದ ನಗರಗಳನ್ನು ಅವನು ಹಾಳುಮಾಡುತ್ತಾನೆ. |
19. “ಅರೋಯೇರಿನವರೇ,
ದಾರಿಯ ಮಗ್ಗುಲಲ್ಲಿ ನಿಂತುಕೊಂಡು ನೋಡಿರಿ, ಆ ಗಂಡಸು ಓಡಿಹೋಗುವದನ್ನು ನೋಡಿರಿ. ಆ ಹೆಂಗಸು ಓಡಿಹೋಗುವದನ್ನು ನೋಡಿರಿ. ಏನಾಯಿತೆಂದು ಅವರನ್ನು ಕೇಳಿರಿ. |
20. “ಮೋವಾಬು ಹಾಳಾಗುವುದು. ಅದು ನಾಚಿಕೆಪಡುವುದು.
ಮೋವಾಬು ಸತತವಾಗಿ ಗೋಳಾಡುವುದು. ಮೋವಾಬು ಹಾಳಾಯಿತೆಂದು ಅರ್ನೋನ್ ನದಿಯ ತೀರದಲ್ಲಿ ಸಾರಿರಿ. |
26. ತಾನು ಯೆಹೋವನಿಗಿಂತ ಬಹಳ ಮುಖ್ಯವಾದವನೆಂದು ಮೋವಾಬು ಭಾವಿಸಿತ್ತು.
ಕುಡಿದು ಮದವೇರಿದವನಂತೆ ಆಗುವವರೆಗೆ ಮೋವಾಬನ್ನು ದಂಡಿಸಿರಿ. ಮೋವಾಬು ತನ್ನ ವಾಂತಿಯಲ್ಲಿ ಬಿದ್ದು ಹೊರಳಾಡುವದು. ಜನರು ಮೋವಾಬನ್ನು ತಮಾಷೆ ಮಾಡುವರು. |
27. “ಮೋವಾಬೇ, ನೀನು ಇಸ್ರೇಲಿನ ಬಗ್ಗೆ ತಮಾಷೆ ಮಾಡಿದೆ.
ಇಸ್ರೇಲ್ ಒಂದು ಕಳ್ಳರ ಗುಂಪಿನಿಂದ ಹಿಡಿಯಲ್ಪಟ್ಟಿತ್ತೇನು? ಇಸ್ರೇಲಿನ ಬಗ್ಗೆ ಮಾತನಾಡಿದಾಗಲೆಲ್ಲ ನೀನು ತಲೆಯಾಡಿಸಿದೆ. ಇಸ್ರೇಲಿಗಿಂತ ಉತ್ತಮನೋ ಎಂಬಂತೆ ನಟಿಸಿದೆ. |
28. ಮೋವಾಬ್ಯರೇ, ನಿಮ್ಮ ಪಟ್ಟಣಗಳನ್ನು ಬಿಟ್ಟುಬಿಡಿ.
ಹೋಗಿ, ಬೆಟ್ಟಗಳಲ್ಲಿ ವಾಸಿಸಿರಿ. ಗುಹೆಯ ಬಾಗಿಲಿನಲ್ಲಿ ತನ್ನ ಗೂಡನ್ನು ಕಟ್ಟಿಕೊಳ್ಳುವ ಪಾರಿವಾಳದಂತೆ ಆಗಿರಿ.” |
29. “ಮೋವಾಬಿನ ಸೊಕ್ಕಿನ ಬಗ್ಗೆ ನಾವು ಕೇಳಿದ್ದೇವೆ.
ಅವನಿಗೆ ತುಂಬ ಸೊಕ್ಕು ಬಂದಿತ್ತು. ತಾನೇ ಮುಖ್ಯವಾದವನೆಂದು ಅವನು ಭಾವಿಸಿದ್ದನು. ಅವನು ಯಾವಾಗಲೂ ಬಡಾಯಿಕೊಚ್ಚಿಕೊಳ್ಳುತ್ತಿದ್ದನು. ಅವನು ತುಂಬಾ ಸೊಕ್ಕಿನವನಾಗಿದ್ದನು.” |
30. ಯೆಹೋವನು ಹೀಗೆಂದನು: “ಬಹುಬೇಗ ಮೋವಾಬಿಗೆ ಕೋಪ ಬರುತ್ತದೆ. ಅವನು ಬಡಾಯಿ ಕೊಚ್ಚಿಕೊಳ್ಳುತ್ತಾನೆಂಬುದು ನನಗೆ ಗೊತ್ತು.
ಆದರೆ ಅವನ ಬಡಾಯಿಗಳೆಲ್ಲ ಸುಳ್ಳು. ತಾನು ಹೇಳಿದಂತೆ ಮಾಡಲು ಅವನಿಂದಾಗದು. |
31. ಆದ್ದರಿಂದ ನಾನು ಮೋವಾಬಿಗಾಗಿ ಗೋಳಾಡುವೆನು;
ಮೋವಾಬಿನ ಪ್ರತಿಯೊಬ್ಬರಿಗಾಗಿ ಗೋಳಾಡುವೆನು. ನಾನು ಕೀರ್ ಹೆರೆಸಿನವರಿಗಾಗಿ ಪ್ರಲಾಪಿಸುವೆನು. |
32. ನಾನು ಯೆಜ್ಜೇರಿನ ಜನರೊಂದಿಗೆ ಯೆಜ್ಜೇರಿಗಾಗಿ ಪ್ರಲಾಪಿಸುವೆನು.
ಸಿಬ್ಮವೇ, ನಿನ್ನ ದ್ರಾಕ್ಷಿಬಳ್ಳಿಗಳು ಸಮುದ್ರದವರೆಗೂ ಹಬ್ಬಿದ್ದವು; ಅವು ಯೆಜ್ಜೇರ್ ಪಟ್ಟಣದವರೆಗೂ ಚಾಚಿದ್ದವು. ಆದರೆ ವಿನಾಶಕನು ನಿನ್ನ ಹಣ್ಣುಗಳನ್ನು ಮತ್ತು ದ್ರಾಕ್ಷಿಗಳನ್ನು ಕಿತ್ತುಕೊಂಡಿದ್ದಾನೆ. |
33. ಮೋವಾಬಿನ ದೊಡ್ಡದೊಡ್ಡ ದ್ರಾಕ್ಷಿತೋಟಗಳಿಂದ
ಹರ್ಷವೂ ಆನಂದವೂ ಕಣ್ಮರೆಯಾಗಿವೆ. ದ್ರಾಕ್ಷಿಗಾಣದಿಂದ ದ್ರಾಕ್ಷಾರಸ ಹರಿಯುವದನ್ನು ನಾನು ನಿಲ್ಲಿಸಿದ್ದೇನೆ. ದ್ರಾಕ್ಷಾರಸವನ್ನು ಮಾಡಲು ದ್ರಾಕ್ಷಿಯನ್ನು ತುಳಿಯುವ ಜನರ ಹಾಡು ಮತ್ತು ನೃತ್ಯ ಕಂಡುಬರುವದಿಲ್ಲ. ಸಂತೋಷದ ಧ್ವನಿ ಕೇಳಿಬರುತ್ತಿಲ್ಲ. PS |
34. “ಹೆಷ್ಬೋನ್ ಮತ್ತು ಎಲೆಯಾಲೆ ಎಂಬ ಪಟ್ಟಣಗಳ ಜನರು ಅರಚಿಕೊಳ್ಳುತ್ತಿದ್ದಾರೆ. ಅವರ ಕಿರುಚಾಟವು ದೂರದ ಯಹಚಿನವರೆಗೂ ಕೇಳಿಬರುತ್ತಿದೆ. ಅವರ ಕಿರುಚಾಟವು ಚೋಯರಿನಿಂದ ದೂರದ ಹೊರೊನಯಿಮ್ ಮತ್ತು ಎಗ್ಲತ್ ಶೆಲಿಶೀಯದವರೆಗೆ ಕೇಳಿಬರುತ್ತದೆ. ನಿಮ್ರೀಮ್ ಹಳ್ಳದ ನೀರು ಸಹ ಬತ್ತಿಹೋಗಿದೆ.
|
35. ಮೋವಾಬಿನ ಜನರು ಪೂಜಾಸ್ಥಾನದಲ್ಲಿ ಧೂಪಹಾಕುವದನ್ನು ನಾನು ನಿಲ್ಲಿಸುತ್ತೇನೆ. ಅವರು ತಮ್ಮ ದೇವರುಗಳಿಗೆ ಬಲಿ ಅರ್ಪಿಸುವದನ್ನು ನಿಲ್ಲಿಸುತ್ತೇನೆ” ಎಂದು ಯೆಹೋವನು ನುಡಿದನು. PEPS
|
36. “ಮೋವಾಬಿಗಾಗಿ ನಾನು ಬಹಳ ದುಃಖಿತನಾಗಿದ್ದೇನೆ. ಸ್ಮಶಾನಯಾತ್ರೆಯ ಕಾಲದಲ್ಲಿ ಊದುವ ಕೊಳಲಿನಿಂದ ಹೊರಬರುವ ದುಃಖದ ಧ್ವನಿಯಂತೆ ನನ್ನ ಹೃದಯ ಅಳುತ್ತಿದೆ. ಕೀರ್ ಹೆರೆಸಿನ ಜನರಿಗಾಗಿ ನಾನು ದುಃಖಿಸುತ್ತೇನೆ. ಅವರ ಹಣವನ್ನು ಮತ್ತು ಸಂಪತ್ತನ್ನು ಕಿತ್ತುಕೊಳ್ಳಲಾಗಿದೆ.
|
37. ಪ್ರತಿಯೊಬ್ಬರ ತಲೆಯನ್ನು ಬೋಳಿಸಲಾಗಿದೆ. ಪ್ರತಿಯೊಬ್ಬರ ಗಡ್ಡವನ್ನು ಕತ್ತರಿಸಲಾಗಿದೆ. ಪ್ರತಿಯೊಬ್ಬರ ಕೈಗಳು ಕತ್ತರಿಸಲ್ಪಟ್ಟು ಅವುಗಳಿಂದ ರಕ್ತ ಸುರಿಯುತ್ತಿದೆ. ಪ್ರತಿಯೊಬ್ಬರು ತಮ್ಮ ಸೊಂಟಕ್ಕೆ ದುಃಖಸೂಚಕ ವಸ್ತ್ರಗಳನ್ನು ಸುತ್ತಿಕೊಂಡಿದ್ದಾರೆ.
|
38. ಮೋವಾಬಿನ ಪ್ರತಿಯೊಂದು ಮಾಳಿಗೆಯ ಮೇಲೂ ಸಾರ್ವಜನಿಕ ಚೌಕಗಳಲ್ಲಿಯೂ ಜನ ಸತ್ತವರಿಗಾಗಿ ಶೋಕಿಸುತ್ತಿದ್ದಾರೆ. ಮೋವಾಬನ್ನು ನಾನು ಬರಿದಾದ ಪಾತ್ರೆಯಂತೆ ಮಾಡಿರುವುದರಿಂದ ದುಃಖ ವ್ಯಾಪಿಸಿದೆ.” ಇದು ಯೆಹೋವನ ನುಡಿ. PEPS
|
39. “ಮೋವಾಬ್ ನುಚ್ಚುನೂರಾಯಿತು. ಜನರು ಕಿರುಚುತ್ತಿದ್ದಾರೆ. ಮೋವಾಬ್ ಶರಣಾಗತವಾಯಿತು. ಮೋವಾಬ್ ಈಗ ನಾಚಿಕೆಪಡುತ್ತಿದೆ. ಜನರು ಮೋವಾಬನ್ನು ತಮಾಷೆ ಮಾಡುತ್ತಾರೆ. ಆದರೆ ಇಲ್ಲಿ ನಡೆದ ಘಟನೆಗಳು ಅವರನ್ನು ಭೀತರನ್ನಾಗಿ ಮಾಡಿವೆ.”
|
40. ಯೆಹೋವನು ಹೀಗೆನ್ನುತ್ತಾನೆ: “ನೋಡಿ, ಒಂದು ರಣಹದ್ದು ಆಕಾಶದಿಂದ ಎರಗುತ್ತಿದೆ.
ಅದು ಮೋವಾಬಿನ ಮೇಲೆ ತನ್ನ ರೆಕ್ಕೆಗಳನ್ನು ಹರಡುತ್ತಿದೆ. |
41. ಮೋವಾಬಿನ ಪಟ್ಟಣಗಳನ್ನು ಗೆದ್ದುಕೊಳ್ಳಲಾಗುವುದು.
ಅಡಗಿಕೊಳ್ಳುವ ಭದ್ರವಾದ ನೆಲೆಗಳನ್ನು ವಶಪಡಿಸಿಕೊಳ್ಳಲಾಗುವುದು. ಆಗ ಮೋವಾಬಿನ ಸೈನಿಕರು ಪ್ರಸವವೇದನೆಪಡುವ ಹೆಂಗಸಿನಂತೆ ಗಾಬರಿಯಾಗುವರು. |
42. ಮೋವಾಬ್ ಜನಾಂಗವನ್ನು ನಾಶಮಾಡಲಾಗುವದು.
ಏಕೆಂದರೆ ತಾವು ಯೆಹೋವನಿಗಿಂತ ಬಹಳ ಮುಖ್ಯವಾದವರೆಂದು ಅವರು ಭಾವಿಸಿಕೊಂಡರು.” |
44. ಜನರು ಅಂಜಿ ಓಡಿಹೋಗುವರು;
ಆಳವಾದ ಗುಂಡಿಗಳಲ್ಲಿ ಬೀಳುವರು. ಯಾರಾದರೂ ಆ ಆಳವಾದ ಗುಂಡಿಗಳಿಂದ ಮೇಲಕ್ಕೆ ಹತ್ತಿ ಬಂದರೆ ಅವರನ್ನು ಬಲೆಯಲ್ಲಿ ಹಿಡಿಯಲಾಗುವುದು. ನಾನು ಮೋವಾಬಿಗೆ ದಂಡನೆಯ ವರ್ಷವನ್ನು ತರುವೆನು” ಎಂದು ಯೆಹೋವನು ನುಡಿದನು. |
45. “ಜನರು ಪ್ರಬಲನಾದ ವೈರಿಯಿಂದ ತಪ್ಪಿಸಿಕೊಂಡು
ತಮ್ಮ ರಕ್ಷಣೆಗಾಗಿ ಹೆಷ್ಬೋನ್ ಪಟ್ಟಣಕ್ಕೆ ಓಡಿಹೋದರು. ಆದರೆ ಅಲ್ಲಿ ರಕ್ಷಣೆಯಿರಲಿಲ್ಲ. ಹೆಷ್ಬೋನಿನಲ್ಲಿ ಅಗ್ನಿಜ್ವಾಲೆ ಪ್ರಾರಂಭವಾಯಿತು. ಸೀಹೋನಿನಲ್ಲಿ ಅಗ್ನಿಜ್ವಾಲೆ ಪ್ರಾರಂಭವಾಯಿತು. ಅದು ಮೋವಾಬಿನ ನಾಯಕರುಗಳನ್ನು ಸುಡುತ್ತಿದೆ. ಅದು ಆ ಗರ್ವಿಷ್ಠರನ್ನು ಸುಡುತ್ತಿದೆ. |
46. ಮೋವಾಬ್ಯರೇ, ನಿಮಗೆ ಕೇಡು ಕಾದಿದೆ.
ಕೆಮೋಷಿನ ಭಕ್ತರು ನಾಶವಾಗುತ್ತಿದ್ದಾರೆ. ನಿಮ್ಮ ಮಕ್ಕಳನ್ನು ಬಂಧಿಗಳನ್ನಾಗಿಯೂ ಸೆರೆಯಾಳುಗಳನ್ನಾಗಿಯೂ ತೆಗೆದುಕೊಂಡು ಹೋಗಲಾಗುತ್ತಿದೆ. PS |
47. “ಮೋವಾಬಿನ ಜನರನ್ನು ಸೆರೆಹಿಡಿದುಕೊಂಡು ಹೋಗಲಾಗುವುದು. ಆದರೆ ಭವಿಷ್ಯದಲ್ಲಿ ನಾನು ಮೋವಾಬ್ಯರನ್ನು ಪುನಃ ಕರೆದು ತರುವೆನು” ಇದು ಯೆಹೋವನಿಂದ ಬಂದ ಸಂದೇಶ. PEPS ಮೋವಾಬಿನ ಕುರಿತಾದ ನ್ಯಾಯತೀರ್ಪು ಇದೇ. PE
|