1. {ಅಮ್ಮೋನಿನ ಬಗ್ಗೆ ಸಂದೇಶ} [PS] ಈ ಸಂದೇಶ ಅಮ್ಮೋನ್ಯರನ್ನು ಕುರಿತದ್ದು. ಯೆಹೋವನು ಹೀಗೆ ಹೇಳಿದನು: “ಅಮ್ಮೋನ್ಯರೇ, ಇಸ್ರೇಲಿನ ಜನರಿಗೆ ಮಕ್ಕಳಿಲ್ಲವೆಂದು [QBR2] ನೀವು ತಿಳಿದುಕೊಂಡಿರುವಿರೇನು? [QBR] ತಂದೆತಾಯಿಗಳು ಸತ್ತಮೇಲೆ ಭೂಮಿಯನ್ನು ತೆಗೆದುಕೊಳ್ಳುವದಕ್ಕೆ [QBR2] ಅವರ ವಾರಸುದಾರರು ಇಲ್ಲವೆಂದು ನೀವು ತಿಳಿದುಕೊಂಡಿರುವಿರೇನು? [QBR] ಅದಕ್ಕಾಗಿಯೇ ಮಲ್ಕಾಮ್ ದೇವತೆಯು ಗಾದನ ಸೀಮೆಯನ್ನು ಸ್ವಾಧೀನ ಮಾಡಿಕೊಂಡಳೇ?”
2. ಯೆಹೋವನು ಹೀಗೆನ್ನುತ್ತಾನೆ: “ಅಮ್ಮೋನಿನ ರಬ್ಬಾ ನಿವಾಸಿಗಳು [QBR2] ಯುದ್ಧದ ಧ್ವನಿಗಳನ್ನು ಕೇಳುವ ಕಾಲ ಬರಲಿದೆ. [QBR] ಅಮ್ಮೋನಿನ ರಬ್ಬಾ ನಾಶವಾಗಿ ಹಾಳಾದ ಕಟ್ಟಡಗಳ ಗುಡ್ಡವಾಗುವುದು. [QBR2] ಅದರ ಸುತ್ತಮುತ್ತಲಿನ ಪಟ್ಟಣಗಳನ್ನು ಸುಟ್ಟುಹಾಕಲಾಗುವುದು. [QBR] ಆ ಜನರು ಇಸ್ರೇಲರಿಗೆ ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಒತ್ತಾಯಿಸಿದರು. [QBR2] ಆದರೆ ಇಸ್ರೇಲರು ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಅವರನ್ನು ಒತ್ತಾಯಿಸುವರು.” [QBR] ಯೆಹೋವನು ಹೀಗೆನ್ನುತ್ತಾನೆ:
3. “ಹೆಷ್ಬೋನಿನ ಜನರೇ, ಗೋಳಾಡಿರಿ; [QBR2] ಏಕೆಂದರೆ ಆಯಿ ಎಂಬ ಪಟ್ಟಣ ನಾಶವಾಯಿತು. [QBR] ರಬ್ಬಾದ ಸ್ತ್ರೀಯರೇ, ಅಮ್ಮೋನಿನ ಸ್ತ್ರೀಯರೇ, ಗೋಳಾಡಿರಿ. [QBR2] ದುಃಖಸೂಚಕ ವಸ್ತ್ರಗಳನ್ನು ಧರಿಸಿಕೊಂಡು ಗೋಳಾಡಿರಿ. [QBR] ರಕ್ಷಣೆಗಾಗಿ ನಗರಕ್ಕೆ ಓಡಿಹೋಗಿರಿ. [QBR2] ಏಕೆಂದರೆ ನಿಮ್ಮ ಶತ್ರುಗಳು ಬರುತ್ತಿದ್ದಾರೆ. [QBR] ಅವರು ಮಲ್ಕಾಮ್ ದೇವತೆಯನ್ನು ತೆಗೆದುಕೊಂಡು ಹೋಗುತ್ತಾರೆ. [QBR2] ಶತ್ರುಗಳು ಮಲ್ಕಾಮ್ ದೇವತೆಯ ಯಾಜಕರನ್ನೂ ಪ್ರಧಾನರನ್ನೂ ತೆಗೆದುಕೊಂಡು ಹೋಗುವರು. [QBR]
4. ನೀನು ನಿನ್ನ ಬಲದ ಬಗ್ಗೆ ಜಂಬ ಕೊಚ್ಚಿಕೊಳ್ಳುತ್ತಿರುವೆ, [QBR2] ಆದರೆ ನೀನು ನಿನ್ನ ಬಲವನ್ನು ಕಳೆದುಕೊಳ್ಳುತ್ತಿರುವೆ. [QBR] ನಿನ್ನ ಹಣ ನಿನ್ನನ್ನು ರಕ್ಷಿಸುವದೆಂದು ನೀನು ನಂಬಿರುವೆ. [QBR2] ಯಾರೂ ನಿನ್ನ ಮೇಲೆ ಧಾಳಿಮಾಡುವ ವಿಚಾರ ಸಹ ಇಟ್ಟುಕೊಂಡಿಲ್ಲವೆಂದು ನೀನು ತಿಳಿದುಕೊಂಡಿರುವೆ.” [QBR]
5. ಆದರೆ ಸರ್ವಶಕ್ತನಾದ ಯೆಹೋವನು ಹೀಗೆನ್ನುವನು, [QBR] “ನಾನು ಎಲ್ಲೆಡೆಗಳಿಂದಲೂ ನಿಮಗೆ ಆಪತ್ತುಗಳನ್ನು ತರುವೆನು. [QBR] ನೀವೆಲ್ಲರೂ ಭಯದಿಂದ ಓಡಿಹೋಗುವಿರಿ. [QBR2] ಯಾರೂ ನಿಮ್ಮನ್ನು ಪುನಃ ಒಂದಡೆ ಸೇರಿಸಲಾರರು.” [PS]
6. “ಅಮ್ಮೋನ್ಯರನ್ನು ಸೆರೆಯಾಳುಗಳನ್ನಾಗಿ ಕೊಂಡೊಯ್ಯಲಾಗುವುದು. ಆದರೆ ಅಮ್ಮೋನ್ಯರನ್ನು ನಾನು ಪುನಃ ಹಿಂದಕ್ಕೆ ಕರೆತರುವ ಕಾಲ ಬರುವದು.” ಇದು ಯೆಹೋವನ ನುಡಿ. [PS]
7. {ಎದೋಮಿನ ಬಗ್ಗೆ ಸಂದೇಶ} [PS] ಈ ಸಂದೇಶ ಎದೋಮನ್ನು ಕುರಿತದ್ದು. ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ತೇಮಾನ್ ಪಟ್ಟಣನಿವಾಸಿಗಳಲ್ಲಿ ಈಗ ಬುದ್ಧಿ ಉಳಿದಿಲ್ಲವೇ? [QBR2] ಎದೋಮಿನ ವಿವೇಕಿಗಳು ಒಳ್ಳೆಯ ಸಲಹೆಗಳನ್ನು ಕೊಡಲು ಸಮರ್ಥರಾಗಿಲ್ಲವೇ? [QBR2] ಅವರು ತಮ್ಮ ಜ್ಞಾನವನ್ನು ಕಳೆದುಕೊಂಡರೇ? [QBR]
8. ದೆದಾನಿನ ನಿವಾಸಿಗಳೇ, ಓಡಿಹೋಗಿರಿ, ಅಡಗಿಕೊಳ್ಳಿರಿ; [QBR2] ಏಕೆಂದರೆ ಏಸಾವನು [*ಏಸಾವ ಯಾಕೋಬನ ಅವಳಿ ಸಹೋದರ. ಆದರೆ ಇಲ್ಲಿ ಎದೋಮ್ ಎಂದರ್ಥ. ಏಕೆಂದರೆ ಎದೋಮಿನ ಜನರು ಏಸಾವನ ವಂಶಜರು.] ಮಾಡಿದ ತಪ್ಪಿಗಾಗಿ ನಾನು ಅವನನ್ನು ದಂಡಿಸುವೆನು.
9. “ಕೆಲಸಗಾರರು ನಿಮ್ಮ ದ್ರಾಕ್ಷಿತೋಟಕ್ಕೆ ಬಂದು ದ್ರಾಕ್ಷಿಯನ್ನು ಕೀಳುವರು; [QBR2] ಆದರೆ ಬಳ್ಳಿಯಲ್ಲಿ ಕೆಲವು ದ್ರಾಕ್ಷಿಗಳನ್ನು ಬಿಡುವರು; [QBR] ರಾತ್ರಿಯಲ್ಲಿ ಕಳ್ಳರು ಬಂದರೆ [QBR2] ಅವರು ತಮಗೆ ಬೇಕಾದಷ್ಟನ್ನು ಮಾತ್ರ ತೆಗೆದುಕೊಳ್ಳುತ್ತಾರೆ. [QBR]
10. ಆದರೆ ಏಸಾವನಿಂದ ನಾನು ಎಲ್ಲವನ್ನು ಕಿತ್ತುಕೊಳ್ಳುವೆನು. [QBR2] ಅವನು ಅಡಗಿಕೊಳ್ಳುವ ಎಲ್ಲಾ ಸ್ಥಳಗಳನ್ನು ನಾನು ಪತ್ತೆ ಹಚ್ಚುವೆನು. [QBR] ಅವನು ನನ್ನ ಕಣ್ಣು ತಪ್ಪಿಸಲು ಸಾಧ್ಯವಿಲ್ಲ. [QBR2] ಅವನ ಮಕ್ಕಳು, ಬಂಧುಗಳು ಮತ್ತು ನೆರೆಹೊರೆಯವರು ಸತ್ತುಹೋಗುವರು. [QBR]
11. ನಿನ್ನ ಅನಾಥಮಕ್ಕಳನ್ನು ನಾನು ಸಂರಕ್ಷಿಸುವೆನು. [QBR2] ನಿನ್ನ ವಿಧವೆಯರು ನನ್ನಲ್ಲಿ ಭರವಸೆ ಇಡಲಿ.” [PS]
12. ಯೆಹೋವನು ಹೀಗೆನ್ನುತ್ತಾನೆ: “ಕೆಲವು ಜನರು ದಂಡನೆಗೆ ಅರ್ಹರಾಗಿರುವದಿಲ್ಲ. ಆದರೂ ಅವರು ಕಷ್ಟ ಅನುಭವಿಸುವರು. ಎದೋಮೇ, ನೀನು ದಂಡನೆಗೆ ಯೋಗ್ಯಳಾಗಿರುವೆ. ಆದ್ದರಿಂದ ನಿಜವಾಗಿಯೂ ನಿನ್ನನ್ನು ದಂಡಿಸಲಾಗುವುದು. ನಿನಗೆ ಸಿಗಬೇಕಾದ ದಂಡನೆಯಿಂದ ನೀನು ತಪ್ಪಿಸಿಕೊಳ್ಳಲಾರೆ. ನಿನ್ನನ್ನು ದಂಡಿಸಲಾಗುವುದು.”
13. ಯೆಹೋವನು ಹೀಗೆನ್ನುತ್ತಾನೆ, “ನನ್ನ ಸಬಸಾಮರ್ಥ್ಯದಿಂದ ನಾನು ಈ ಪ್ರಮಾಣ ಮಾಡುವೆನು. ನಾನು ಆಣೆಯಿಟ್ಟು ಹೇಳುವೆನು. ಬೊಚ್ರ ನಗರವನ್ನು ನಾಶಮಾಡಲಾಗುವುದು. ಆ ನಗರ ಒಂದು ಹಾಳು ದಿಬ್ಬವಾಗುವುದು. ಬೇರೆ ನಗರಗಳಿಗೆ ದುರ್ಗತಿ ಬರಲಿ ಎಂದು ಶಪಿಸುವಾಗ ಜನರು ‘ಬೊಚ್ರದಂತೆ ಹಾಳಾಗಲಿ’ ಎಂದು ಈ ನಗರದ ಉದಾಹರಣೆಯನ್ನು ಕೊಡುವರು. ಜನರು ಈ ನಗರವನ್ನು ಅವಮಾನ ಮಾಡುವರು. ಬೊಚ್ರ ನಗರದ ಸುತ್ತಮುತ್ತಲಿನ ಪಟ್ಟಣಗಳು ಶಾಶ್ವತವಾಗಿ ಹಾಳುಬೀಳುವವು.”
14. ಯೆಹೋವನ ಒಂದು ಸಂದೇಶವನ್ನು ಕೇಳಿದೆ. [QBR2] ಯೆಹೋವನು ಎಲ್ಲಾ ಜನಾಂಗಗಳಿಗೆ ಸಂದೇಶವಾಹಕರನ್ನು ಕಳುಹಿಸಿದ್ದನು. [QBR] ಆ ಸಂದೇಶ ಹೀಗಿದೆ: [QBR] “ನಿಮ್ಮ ಸೈನ್ಯಗಳನ್ನು ಒಂದಡೆ ಸೇರಿಸಿರಿ. [QBR2] ಯುದ್ಧಕ್ಕೆ ಸಿದ್ಧರಾಗಿರಿ. [QBR2] ಎದೋಮ್ ಜನಾಂಗದ ವಿರುದ್ಧ ದಂಡಯಾತ್ರೆ ಮಾಡಿರಿ. [QBR]
15. ಎದೋಮೇ, ನಾನು ನಿನಗೆ ಪ್ರಮುಖನಾಗಲು ಬಿಡುವುದಿಲ್ಲ. [QBR2] ಪ್ರತಿಯೊಬ್ಬರು ನಿನ್ನನ್ನು ದ್ವೇಷಿಸುವರು. [QBR]
16. ಎದೋಮೇ, ನೀನು ಬೇರೆ ಜನಾಂಗಗಳನ್ನು ಹೆದರಿಸಿದೆ. [QBR2] ಆದ್ದರಿಂದ ನೀನು ನಿನ್ನನ್ನೇ ಪ್ರಮುಖನೆಂದು ಭಾವಿಸಿಕೊಂಡೆ. [QBR] ಆದರೆ ಅದು ನಿನ್ನ ಮೂರ್ಖತನ. [QBR2] ನಿನ್ನ ಅಹಂಭಾವ ನಿನಗೆ ಮೋಸಮಾಡಿದೆ. [QBR] ಎದೋಮೇ, ನೀನು ಎತ್ತರದ ಬೆಟ್ಟಗಳಲ್ಲಿರುವೆ. [QBR2] ಬೆಟ್ಟಗುಡ್ಡಗಳಿಂದ ರಕ್ಷಿತವಾದ ಸ್ಥಳಗಳಲ್ಲಿ ನೀನು ವಾಸಿಸುವೆ. [QBR] ಆದರೆ ರಣಹದ್ದು ಗೂಡುಕಟ್ಟುವಷ್ಟು ಎತ್ತರದ ಸ್ಥಳದಲ್ಲಿ ನೀನು ಮನೆಕಟ್ಟಿದರೂ ನಾನು ನಿನ್ನನ್ನು ಹಿಡಿಯುತ್ತೇನೆ. [QBR2] ಅಲ್ಲಿಂದ ನಿನ್ನನ್ನು ಕೆಳಗೆ ತರುತ್ತೇನೆ.” [QBR] ಇದು ಯೆಹೋವನ ನುಡಿ.
17. “ಎದೋಮನ್ನು ನಾಶಮಾಡಲಾಗುವುದು. [QBR2] ಹಾಳಾದ ನಗರಗಳನ್ನು ಕಂಡು ಜನರು ಬೆರಗಾಗುವರು. [QBR2] ನಾಶವಾದ ನಗರಗಳನ್ನು ಕಂಡು ಜನರು ಆಶ್ಚರ್ಯಚಕಿತರಾಗಿ ಸಿಳ್ಳುಹಾಕುವರು. [QBR]
18. ಸೊದೋಮ್ ಗೊಮೋರನಗರಗಳಂತೆಯೂ ಅವುಗಳ ಸುತ್ತಲಿನ ಪಟ್ಟಣಗಳಂತೆಯೂ ಎದೋಮ್ ನಾಶವಾಗುವುದು. [QBR2] ಅಲ್ಲಿ ಯಾರೂ ವಾಸಮಾಡಲಾರರು” [QBR] ಯೆಹೋವನು ಹೀಗೆನ್ನುತ್ತಾನೆ: [PS]
19. “ಜೋರ್ಡನ್ ನದಿಯ ಸಮೀಪದ ದಟ್ಟವಾದ ಕಾಡಿನಿಂದ ಫಕ್ಕನೆ ಒಂದು ಸಿಂಹ ಬರುವದು. ಅದು ಹೊಲಗಳಲ್ಲಿದ್ದ ಜನರ ದನಕುರಿಗಳ ಹಟ್ಟಿಗಳಿಗೆ ನುಗ್ಗುವುದು. ನಾನು ಆ ಸಿಂಹದಂತೆ ಇದ್ದೇನೆ. ನಾನು ಎದೋಮ್ ನಗರಕ್ಕೆ ಹೋಗಿ ಆ ಜನರನ್ನು ಹೆದರಿಸುವೆನು; ಅವರು ಓಡಿಹೋಗುವಂತೆ ಮಾಡುವೆನು. ಅವರ ತರುಣರಲ್ಲಿ ಯಾರೂ ನನ್ನನ್ನು ತಡೆಯಲಾರರು. ನನ್ನತೆ ಯಾರೂ ಇಲ್ಲ. ಯಾರೂ ನನ್ನನ್ನು ಪ್ರತಿಭಟಿಸುವದಿಲ್ಲ. ಅವರ ನಾಯಕರಲ್ಲಿ ಯಾರೂ ನನ್ನ ವಿರುದ್ಧ ನಿಲ್ಲುವದಿಲ್ಲ.”
20. ಎದೋಮ್ಯರಿಗೆ ಯೆಹೋವನು [QBR2] ಮಾಡಬೇಕೆಂದಿರುವುದನ್ನು ಕೇಳಿರಿ. [QBR] ತೇಮಾನ್ಯರ ಬಗ್ಗೆ ಯೆಹೋವನು [QBR2] ಏನು ನಿರ್ಧರಿಸಿದ್ದಾನೆಂಬುದನ್ನು ಕೇಳಿರಿ. [QBR] ಎದೋಮಿನ ಕುರಿಮರಿಗಳನ್ನು (ಜನರನ್ನು) [QBR2] ಶತ್ರು ಎಳೆದುಕೊಂಡು ಹೋಗುವನು. [QBR] ಸಂಭವಿಸಿದ ಸಂಗತಿಯನ್ನು ನೋಡಿ [QBR2] ಎದೋಮಿನ ಹುಲ್ಲುಗಾವಲುಗಳು ಬೆದರುವವು. [QBR]
21. ಎದೋಮ್ಯರ ಪತನದ ಶಬ್ಧಕ್ಕೆ ಭೂಮಿಯು ನಡುಗುವುದು. [QBR2] ಅವರ ಗೋಳಾಟದ ಧ್ವನಿಯು ಕೆಂಪು ಸಮುದ್ರದವರೆಗೂ ಕೇಳಿಸುವುದು.
22. ಯೆಹೋವನು ತಾನು ಎರಗಬೇಕಾದ ಪ್ರಾಣಿಯ ಮೇಲೆ ಹಾರಾಡುವ ರಣಹದ್ದಿನಂತೆ ಇರುವನು. [QBR2] ಆತನು ಬೊಚ್ರ ನಗರದ ಮೇಲೆ ತನ್ನ ರೆಕ್ಕೆಗಳನ್ನು ಹರಡುವ ರಣಹದ್ದಿನಂತಿದ್ದಾನೆ. [QBR] ಆ ಸಮಯದಲ್ಲಿ ಎದೋಮಿನ ಸೈನಿಕರು ಭಯಪಡುವರು. [QBR2] ಪ್ರಸವವೇದನೆಪಡುವ ಹೆಂಗಸಿನಂತೆ ಅವರು ಭಯದಿಂದ ಗೋಳಾಡುವರು. [PS]
23. {ದಮಸ್ಕದ ವಿಷಯವಾಗಿ ದೈವೋಕ್ತಿ} [PS] ಈ ಸಂದೇಶವು ದಮಸ್ಕ ನಗರದ ಕುರಿತಾಗಿದೆ: “ಹಮಾತ್ ಮತ್ತು ಅರ್ಪಾದ್ ನಗರಗಳು ಹೆದರಿಕೊಂಡಿವೆ. [QBR2] ಅವು ಕೆಟ್ಟ ಸಮಾಚಾರವನ್ನು ಕೇಳಿದ್ದರಿಂದ ಹೆದರಿಕೊಂಡಿವೆ. [QBR] ಅವುಗಳು ನಿರಾಶೆಗೊಂಡಿವೆ. [QBR2] ಅವು ಆತಂಕಪಡುತ್ತಿವೆ ಮತ್ತು ಭಯಪಡುತ್ತಿವೆ. [QBR]
24. ದಮಸ್ಕ ನಗರವು ನಿಬರ್ಲವಾಗಿದೆ. [QBR2] ಜನರು ಓಡಿಹೋಗಬಯಸುತ್ತಾರೆ, [QBR2] ಜನರು ಗಾಬರಿಗೊಂಡಿದ್ದಾರೆ. [QBR] ಪ್ರಸವವೇದನೆಪಡುವ ಸ್ತ್ರೀಯಂತೆ [QBR2] ಸಂಕಟಪಡುತ್ತಿದ್ದಾರೆ.
25. “ದಮಸ್ಕವು ಸಂತೋಷಭರಿತವಾದ ನಗರವಾಗಿದೆ. [QBR2] ಜನರು ಇನ್ನೂ ಆ ‘ಮೋಜಿನ ನಗರವನ್ನು’ ಬಿಟ್ಟಿಲ್ಲ. [QBR]
26. ಆದ್ದರಿಂದ ತರುಣರು ನಗರದ ಚೌಕಗಳಲ್ಲಿ ಮರಣಹೊಂದುವರು. [QBR2] ಆ ಕಾಲದಲ್ಲಿ ದಮಸ್ಕದ ಎಲ್ಲಾ ಸೈನಿಕರು ಕೊಲ್ಲಲ್ಪಡುವರು.” [QBR] ಇದು ಸರ್ವಶಕ್ತನಾದ ಯೆಹೋವನ ನುಡಿ. [QBR]
27. “ದಮಸ್ಕದ ಗೋಡೆಗಳಿಗೆ ನಾನು ಬೆಂಕಿ ಹಚ್ಚುವೆನು. [QBR2] ಆ ಬೆಂಕಿಯು ಬೆನ್‌ಹದದನ ಭದ್ರವಾದ ಕೋಟೆಯನ್ನು ಸುಟ್ಟುಹಾಕುವುದು.” [PS]
28. {ಕೇದಾರ ಮತ್ತು ಹಾಚೋರಿನ ಬಗ್ಗೆ ಸಂದೇಶ} [PS] ಈ ಸಂದೇಶವು ಕೇದಾರ್ ಕುಲವನ್ನೂ ಹಾಚೋರಿನ ಅಧಿಪತಿಗಳನ್ನೂ ಕುರಿತದ್ದು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಅವರನ್ನು ಸೋಲಿಸಿದನು. ಯೆಹೋವನು ಹೀಗೆನ್ನುತ್ತಾನೆ: “ಹೋಗಿ ಕೇದಾರ ಕುಲದವರ ಮೇಲೆ ಧಾಳಿ ಮಾಡಿರಿ. [QBR2] ಪೂರ್ವದಿಕ್ಕಿನ ಜನರನ್ನು ನಾಶಮಾಡಿರಿ. [QBR]
29. ಅವರ ಗುಡಾರಗಳನ್ನು ಮತ್ತು ಹಿಂಡುಗಳನ್ನು ತೆಗೆದುಕೊಂಡು ಹೋಗಲಾಗುವುದು. [QBR2] ಅವರ ಗುಡಾರಗಳನ್ನು, ಅವರ ಎಲ್ಲಾ ವಸ್ತುಗಳನ್ನು ಎತ್ತಿಕೊಂಡು ಹೋಗಲಾಗುವುದು. [QBR2] ಅವರ ಶತ್ರುಗಳು ಒಂಟೆಗಳನ್ನು ತೆಗೆದುಕೊಂಡು ಹೋಗುವರು. [QBR] ‘ನಮ್ಮ ಸುತ್ತಲೂ ಭಯಂಕರ ಘಟನೆಗಳು ನಡೆಯುತ್ತಿವೆ’ [QBR2] ಎಂದು ತಮ್ಮತಮ್ಮಲ್ಲಿಯೇ ಕೂಗಿಕೊಳ್ಳುವರು. [QBR]
30. ಹಾಚೋರಿನ ನಿವಾಸಿಗಳೇ, ಬೇಗನೆ ಓಡಿಹೋಗಿರಿ, [QBR2] ಅಡಗಿಕೊಳ್ಳುವದಕ್ಕೆ ಒಂದು ಒಳ್ಳೆಯ ಸ್ಥಳವನ್ನು ಹುಡುಕಿಕೊಳ್ಳಿರಿ.” [QBR] ಇದು ಯೆಹೋವನ ಸಂದೇಶ. [QBR] “ನೆಬೂಕದ್ನೆಚ್ಚರನು ನಿಮ್ಮ ವಿರುದ್ಧ ಯೋಜನೆ ಮಾಡಿದ್ದಾನೆ. [QBR2] ನಿಮ್ಮನ್ನು ಸೋಲಿಸಲು ಒಳ್ಳೆಯ ಸಂಚನ್ನು ಮಾಡಿದ್ದಾನೆ.
31. “ಒಂದು ಜನಾಂಗವು ಯಾರೂ ತಮ್ಮನ್ನು ಸೋಲಿಸಲಾರರು ಎಂದು ನೆಮ್ಮದಿಯಿಂದಲೂ ಸಮಾಧಾನದಿಂದಲೂ ಇದೆ. [QBR2] ಅದು ತನ್ನ ರಕ್ಷಣೆಗಾಗಿ ಒಂದು ಕೋಟೆಯನ್ನಾಗಲಿ ಒಂದು ಬಾಗಿಲನ್ನಾಗಲಿ ಹೊಂದಿಲ್ಲ. [QBR] ಆ ಜನರು ಪ್ರತ್ಯೇಕವಾಗಿ ವಾಸವಾಗಿದ್ದಾರೆ. [QBR2] ಆ ಜನಾಂಗದ ಮೇಲೆ ಧಾಳಿ ಮಾಡಿರಿ.” ಎಂದು ಯೆಹೋವನು ಹೇಳಿದನು. [QBR]
32. “ವೈರಿಯು ಅವರ ಒಂಟೆಗಳನ್ನು ಮತ್ತು [QBR2] ಅವರ ದನಗಳ ಮಂದೆಗಳನ್ನು ಅಪಹರಿಸುವನು. [QBR2] ವೈರಿಯು ಅವರ ದೊಡ್ಡದೊಡ್ಡ ಮಂದೆಗಳನ್ನು ಅಪಹರಿಸುವನು. [QBR] ತಮ್ಮ ಗಡ್ಡದ ಕೂದಲಿನ ಮೂಲೆಗಳನ್ನು [†ಗಡ್ಡ … ಮೂಲೆಗಳನ್ನು ಯೆಹೂದ್ಯರು ತಮ್ಮ ಗಡ್ಡದ ಕೂದಲನ್ನು ವಿದೇಶಿಯರ ರೀತಿಯಲ್ಲಿ ಕತ್ತರಿಸಿಕೊಳ್ಳುತ್ತಿರಲಿಲ್ಲ. ನೋಡಿ ವಿಮೋಚನಕಾಂಡ 19:27.] ಕತ್ತರಿಸಿಕೊಂಡ ಜನರನ್ನು ನಾನು ಭೂಮಂಡಲದ ಎಲ್ಲೆಡೆಗಳಲ್ಲಿ ಚದರಿಸುವೆನು. [QBR2] ಎಲ್ಲಾ ಕಡೆಯಿಂದಲೂ ಅವರ ಮೇಲೆ ವಿಪತ್ತುಗಳನ್ನು ಬರಮಾಡುವೆನು.” [QBR] ಇದು ಯೆಹೋವನ ನುಡಿ. [QBR]
33. “ಹಾಚೋರ್ ಪ್ರದೇಶವು ಕಾಡುನಾಯಿಗಳ ನಿವಾಸಸ್ಥಾನವಾಗುವುದು. ಅದು ಶಾಶ್ವತವಾಗಿ ಒಂದು ಬರಿದಾದ ಮರುಭೂಮಿಯಾಗುವುದು. [QBR] ಅಲ್ಲಿ ಯಾರೂ ವಾಸಮಾಡಲಾರರು. [QBR2] ಆ ಸ್ಥಳದಲ್ಲಿ ಯಾವ ಮನುಷ್ಯನೂ ವಾಸಮಾಡುವದಿಲ್ಲ.” [PS]
34. {ಏಲಾಮಿನ ಬಗ್ಗೆ ದೈವೋಕ್ತಿ} [PS] ಚಿದ್ಕೀಯನು ಯೆಹೂದದ ರಾಜನಾದ ಹೊಸದರಲ್ಲಿಯೇ ಪ್ರವಾದಿಯಾದ ಯೆರೆಮೀಯನು ಯೆಹೋವನಿಂದ ಒಂದು ಸಂದೇಶವನ್ನು ಪಡೆದನು. ಈ ಸಂದೇಶವು ಏಲಾಮ್ ಜನಾಂಗವನ್ನು ಕುರಿತದ್ದು.
35. ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: [QBR] “ನಾನು ಅತಿ ಶೀಘ್ರದಲ್ಲಿ ಏಲಾಮಿನ ಬಿಲ್ಲನ್ನು ಮುರಿದುಹಾಕುವೆನು. [QBR2] ಏಲಾಮಿಗೆ ಬಿಲ್ಲು ಬಹು ಮುಖ್ಯವಾದ ಆಯುಧವಾಗಿದೆ. [QBR]
36. ನಾನು ಏಲಾಮಿನ ಮೇಲೆ ನಾಲ್ಕು ಗಾಳಿಗಳನ್ನು [QBR2] ಆಕಾಶದ ನಾಲ್ಕು ಮೂಲೆಗಳಿಂದ ಬರಮಾಡುವೆನು. [QBR] ಆ ನಾಲ್ಕು ಗಾಳಿಗಳು ಬೀಸುವ ಎಲ್ಲಾ ಕಡೆಗಳಲ್ಲಿಯೂ [QBR2] ಏಲಾಮ್ಯರನ್ನು ಚದುರಿಸುವೆನು. [QBR] ಏಲಾಮಿನ ಸೆರೆಯಾಳುಗಳು ಪ್ರತಿಯೊಂದು ರಾಷ್ಟ್ರಗಳಲ್ಲಿಯೂ ಸಿಕ್ಕುವರು. [QBR]
37. ಅವರ ಶತ್ರುಗಳ ಕಣ್ಣೆದುರಿನಲ್ಲಿಯೇ [QBR2] ನಾನು ಏಲಾಮನ್ನು ಚೂರುಚೂರು ಮಾಡುವೆನು. [QBR] ಏಲಾಮ್ಯರನ್ನು ಕೊಲ್ಲಬೇಕೆಂದಿರುವ ಜನರೆದುರಿಗೆ [QBR2] ನಾನು ಎಲಾಮ್ಯರನ್ನು ಮುರಿದುಬಿಡುವೆನು. [QBR] ನಾನು ಅವರ ಮೇಲೆ ಭಯಂಕರವಾದ ವಿಪತ್ತುಗಳನ್ನು ತರುವೆನು. [QBR2] ನನಗೆ ಎಷ್ಟು ಕೋಪ ಬಂದಿದೆ ಎಂಬುದನ್ನು ನಾನು ಅವರಿಗೆ ತೋರಿಸುವೆನು.” [QBR] ಇದು ಯೆಹೋವನ ನುಡಿ. [QBR] “ಏಲಾಮನ್ನು ಬೆನ್ನಟ್ಟಲು ನಾನೊಂದು ಖಡ್ಗವನ್ನು ಕಳುಹಿಸುವೆನು. [QBR2] ನಾನು ಏಲಾಮ್ಯರನ್ನೆಲ್ಲ ಕೊಂದುಹಾಕುವವರೆಗೆ ಆ ಖಡ್ಗವು ಅವರನ್ನು ಬೆನ್ನಟ್ಟುವುದು. [QBR]
38. ಏಲಾಮಿನ ಅಧಿಪತ್ಯ ನನಗೆ ಸೇರಿದ್ದು ಎಂಬುದನ್ನು ನಾನು ಏಲಾಮ್ಯರಿಗೆ ತೋರಿಸಿಕೊಡುವೆನು. [QBR2] ನಾನು ಅಲ್ಲಿಯ ರಾಜನನ್ನು ಮತ್ತು ರಾಜನ ಅಧಿಕಾರಿಗಳನ್ನು ನಾಶಮಾಡುವೆನು.” [QBR] ಇದು ಯೆಹೋವನ ನುಡಿ. [QBR]
39. “ಆದರೆ ಭವಿಷ್ಯದಲ್ಲಿ ನಾನು ಏಲಾಮಿಗೆ ಒಳ್ಳೆಯದನ್ನು ಮಾಡುವೆನು.” [QBR] ಇದು ಯೆಹೋವನ ನುಡಿ. [PE]