1. {ಬಾಬಿಲೋನಿನ ಬಗ್ಗೆ ದೈವೋಕ್ತಿ} [PS] ಬಾಬಿಲೋನ್ ಮತ್ತು ಬಾಬಿಲೋನಿನ ಜನರ ಬಗ್ಗೆ ಯೆಹೋವನ ಸಂದೇಶವಿದು. ಈ ಸಂದೇಶವನ್ನು ಯೆಹೋವನು ಯೆರೆಮೀಯನ ಮುಖಾಂತರ ಕೊಟ್ಟನು.
2. “ಎಲ್ಲಾ ಜನಾಂಗಗಳಲ್ಲಿ ಪ್ರಚಾರಪಡಿಸಿರಿ, [QBR2] ಒಂದು ಧ್ವಜವನ್ನು ಹಾರಿಸಿ ಈ ಸಂದೇಶವನ್ನೆಲ್ಲಾ ಸಾರಿರಿ. [QBR] ‘ಬಾಬಿಲೋನ್ ಜನಾಂಗವನ್ನು ವಶಪಡಿಸಿಕೊಳ್ಳಲಾಗುವುದು. [QBR2] ಬೇಲ್ ದೇವತೆ ನಾಚಿಕೆಪಡುವುದು. [QBR2] ಮೆರೋದಾಕ್ ದೇವತೆಯು ಭಯಪಡುವುದು. [QBR] ಬಾಬಿಲೋನಿನ ವಿಗ್ರಹಗಳು ನಾಚಿಕೆಪಡುವವು. [QBR2] ಅಲ್ಲಿಯ ದೇವತೆಗಳು ಹೆದರಿಕೊಳ್ಳುವವು.’ [QBR]
3. ಉತ್ತರದ ಒಂದು ಜನಾಂಗವು ಬಾಬಿಲೋನಿನ ಮೇಲೆ ಧಾಳಿ ಮಾಡುವುದು. [QBR2] ಆ ಜನಾಂಗವು ಬಾಬಿಲೋನನ್ನು ಒಂದು ಬರಿದಾದ ಮರುಭೂಮಿಯನ್ನಾಗಿ ಮಾಡುವದು. [QBR] ಅಲ್ಲಿ ಯಾರೂ ವಾಸಮಾಡಲಾರರು. [QBR2] ಪ್ರಾಣಿಗಳು ಮತ್ತು ಮನುಷ್ಯರು ಅಲ್ಲಿಂದ ಪಲಾಯನ ಮಾಡುವರು.” [QBR]
4. ಯೆಹೋವನು ಹೀಗೆನ್ನುತ್ತಾನೆ: “ಆ ಸಮಯದಲ್ಲಿ [QBR2] ಇಸ್ರೇಲಿನ ಮತ್ತು ಯೆಹೂದದ ಜನರು ಒಟ್ಟಿಗೆ ಸೇರುವರು. [QBR] ಅವರು ಒಟ್ಟುಗೂಡಿ ಬಹಳವಾಗಿ ಗೋಳಾಡುವರು; [QBR2] ತಮ್ಮ ದೇವರಾದ ಯೆಹೋವನನ್ನು ಹುಡುಕಲು ಹೋಗುವರು. [QBR]
5. ಅವರು ಚೀಯೋನಿಗೆ ಹೋಗುವ ಮಾರ್ಗವನ್ನು ವಿಚಾರಿಸುವರು. [QBR2] ಆ ದಿಕ್ಕಿನಲ್ಲಿ ಹೋಗಲು ಪ್ರಾರಂಭಿಸುವರು. [QBR] ‘ಬನ್ನಿ, ನಾವೆಲ್ಲರೂ ಯೆಹೋವನ ಆಶ್ರಯಪಡೆಯೋಣ. [QBR2] ಆತನೊಂದಿಗೆ ಶಾಶ್ವತವಾದ ಮತ್ತು ನಾವೆಂದೂ ಮರೆಯಲಾಗದ [QBR2] ಒಡಂಬಡಿಕೆಯನ್ನು ಮಾಡಿಕೊಳ್ಳೋಣ’ ಎಂದು ಅವರು ಹೇಳುವರು.
6. “ನನ್ನ ಜನರು ತಪ್ಪಿಸಿಕೊಂಡ ಕುರಿಗಳಂತಿದ್ದಾರೆ. [QBR2] ಅವರ ಕುರುಬರು ಅವರನ್ನು ತಪ್ಪು ದಾರಿಗೆ ಎಳೆದಿದ್ದಾರೆ. [QBR] ಅವರ ನಾಯಕರುಗಳು ಅವರನ್ನು ಬೆಟ್ಟಗಳಲ್ಲಿ ಅಲೆಯುವಂತೆ ಮಾಡಿದ್ದಾರೆ. [QBR2] ಅವರ ವಿಶ್ರಾಂತಿಸ್ಥಾನವನ್ನು ಅವರು ಮರೆತುಬಿಟ್ಟಿದ್ದಾರೆ. [QBR]
7. ನನ್ನ ಜನರನ್ನು ಕಂಡವರೆಲ್ಲ ಅವರನ್ನು ನೋಯಿಸಿದ್ದಾರೆ. [QBR2] ಆ ಶತ್ರುಗಳು, [QBR] ‘ನಾವು ಮಾಡಿದ್ದು ತಪ್ಪಲ್ಲ. [QBR2] ಅವರು ಯೆಹೋವನ ವಿರುದ್ಧ ಪಾಪ ಮಾಡಿದ್ದಾರೆ. [QBR] ಯೆಹೋವನು ಅವರ ನಿಜವಾದ ನಿವಾಸವಾಗಿದ್ದನು. [QBR2] ಯೆಹೋವನು ಅವರ ಪೂರ್ವಿಕರು ನಂಬಿದ್ದ ದೇವರಾಗಿದ್ದನು’ ಎಂದರು.
8. “ಬಾಬಿಲೋನಿನಿಂದ ಓಡಿಹೋಗಿರಿ. [QBR2] ಬಾಬಿಲೋನಿನ ಪ್ರದೇಶವನ್ನು ಬಿಟ್ಟುಬಿಡಿ. [QBR2] ಕುರಿಮಂದೆಯ ಮುಂದೆ ಹೋಗುವ ಹೋತದಂತೆ ಹೋಗಿರಿ. [QBR]
9. ಉತ್ತರ ದಿಕ್ಕಿನ ಹಲವು ಜನಾಂಗಗಳನ್ನು ನಾನು ಒಟ್ಟುಗೂಡಿಸಿ ತರುವೆನು. [QBR] ಆ ಜನಾಂಗಗಳ ಸಮುದಾಯವು ಬಾಬಿಲೋನಿನ ವಿರುದ್ಧ ಯುದ್ಧಕ್ಕೆ ಸಿದ್ಧವಾಗುತ್ತದೆ. [QBR] ಬಾಬಿಲೋನ್ ಅವರಿಗೆ ವಶವಾಗುವುದು. [QBR] ಆ ಜನಾಂಗಗಳ ಜನರು ಬಾಬಿಲೋನಿನ ಮೇಲೆ ಹಲವು ಬಾಣಗಳನ್ನು ಪ್ರಯೋಗ ಮಾಡುವರು. [QBR2] ಆ ಬಾಣಗಳೆಲ್ಲ ಬರಿಗೈಯಲ್ಲಿ ಯುದ್ಧದಿಂದ ಹಿಂದಿರುಗದ ಶೂರ ಸೈನಿಕರಂತಿರುವವು. [QBR]
10. ಕಸ್ದೀಯ ಸಂಪತ್ತನ್ನೆಲ್ಲ ಶತ್ರು ಕೊಳ್ಳೆಹೊಡೆಯುವನು. [QBR2] ಶತ್ರು ಸೈನಿಕರು ತಮಗೆ ಬೇಕಾದದ್ದೆಲ್ಲವನ್ನು ತೆಗೆದುಕೊಳ್ಳುವರು” [QBR] ಇದು ಯೆಹೋವನ ನುಡಿ.
11. “ಬಾಬಿಲೋನೇ, ನೀನು ಉಲ್ಲಾಸದಲ್ಲಿರುವೆ ಮತ್ತು ಸಂತೋಷದಲ್ಲಿರುವೆ. [QBR2] ನೀನು ನನ್ನ ಪ್ರದೇಶವನ್ನು ತೆಗೆದುಕೊಂಡೆ. [QBR] ನೀನು ಕಣತುಳಿಯುವ ಕಡಸಿನ ಹಾಗೆ ಕುಣಿದಾಡುತ್ತಿರುವೆ. [QBR2] ನಿನ್ನ ನಗು ಕುದುರೆಗಳ ಸಂತೋಷಭರಿತ ಕೆನೆತದಂತೆ ಇದೆ. [QBR]
12. ಈಗ ನಿನ್ನ ತಾಯಿಯು ಬಹಳ ನಾಚಿಕೆಪಡುವಳು. [QBR2] ನಿನಗೆ ಜನ್ಮಕೊಟ್ಟ ಆ ಸ್ತ್ರೀಯು ಅಪಮಾನ ಹೊಂದುವಳು. [QBR] ಎಲ್ಲಾ ಜನಾಂಗಗಳಲ್ಲಿ ಬಾಬಿಲೋನ್ ಕನಿಷ್ಟವೆನಿಸುವುದು. [QBR2] ಅದು ಬರಿದಾದ ಮರುಭೂಮಿಯಂತಾಗುವುದು. [QBR]
13. ದೇವರು ಅವಳ ಮೇಲೆ ತನ್ನ ಕೋಪವನ್ನು ಪ್ರಕಟಿಸುವನು [QBR2] ಆದ್ದರಿಂದ ಅಲ್ಲಿ ಯಾರೂ ವಾಸಮಾಡಲಾರರು. [QBR2] ಬಾಬಿಲೋನ್ ನಗರವು ಸಂಪೂರ್ಣವಾಗಿ ನಿರ್ಜನವಾಗುವುದು. [QBR] ಬಾಬಿಲೋನಿನಿಂದ ಹಾದುಹೋಗುವವರೆಲ್ಲ ಭಯಪಡುವರು. [QBR2] ಅದಕ್ಕೆ ಉಂಟಾದ ದುರ್ಗತಿಯನ್ನು ನೋಡಿ ಅವರು ತಮ್ಮ ತಲೆಯಾಡಿಸುವರು.
14. “ಬಾಬಿಲೋನಿನ ವಿರುದ್ಧ ಯುದ್ಧಕ್ಕೆ ಸಿದ್ಧತೆಗಳನ್ನು ಮಾಡಿರಿ. [QBR2] ಬಿಲ್ಲುಗಾರರೇ, ಬಾಬಿಲೋನಿನ ಮೇಲೆ ಬಾಣ ಪ್ರಯೋಗ ಮಾಡಿರಿ. [QBR2] ನಿಮ್ಮ ಬಾಣಗಳಲ್ಲಿ ಒಂದನ್ನೂ ಉಳಿಸಿಕೊಳ್ಳಬೇಡಿರಿ. [QBR] ಅದು ಯೆಹೋವನ ವಿರುದ್ಧವಾಗಿ ಪಾಪ ಮಾಡಿದೆ. [QBR]
15. ಬಾಬಿಲೋನಿನ ಸುತ್ತಲೂ ಇರುವ ಸೈನಿಕರೇ, [QBR2] ಜಯಘೋಷಮಾಡಿರಿ. [QBR] ಈಗ ಬಾಬಿಲೋನ್ ಶರಣಾಗತವಾಗಿದೆ. [QBR2] ಅದರ ಪೌಳಿಗೋಡೆಗಳನ್ನು ಮತ್ತು ಕೊತ್ತಲಗಳನ್ನು ಬೀಳಿಸಲಾಗಿದೆ. [QBR] ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಿದ್ದಾನೆ. [QBR2] ಎಲ್ಲಾ ಜನಾಂಗಗಳವರು ಬಾಬಿಲೋನಿಗೆ ತಕ್ಕ ಶಿಕ್ಷೆಯನ್ನು ಕೊಡಬೇಕು. [QBR]
16. ಬಾಬಿಲೋನಿನ ಜನರಿಗೆ ಬೀಜಗಳನ್ನು ಬಿತ್ತಲು ಬಿಡಬೇಡಿ. [QBR2] ಸುಗ್ಗಿ ಮಾಡಲು ಅವರಿಗೆ ಬಿಡಬೇಡಿ. [QBR] ಬಾಬಿಲೋನಿನ ಸೈನಿಕರು ಹಲವಾರು ಸೆರೆಯಾಳುಗಳನ್ನು ಹಿಡಿದುತಂದಿದ್ದಾರೆ. [QBR] ಈಗ ಶತ್ರು ಸೈನಿಕರು ಬಂದುದರಿಂದ [QBR2] ಆ ಸೆರೆಯಾಳುಗಳು ತಮ್ಮ ಪ್ರದೇಶಗಳಿಗೆ ಹಿಂತಿರುಗುತ್ತಿದ್ದಾರೆ, [QBR] ಆ ಸೆರೆಯಾಳುಗಳು ತಮ್ಮ ದೇಶಗಳಿಗೆ ಓಡುತ್ತಿದ್ದಾರೆ.
17. “ಇಸ್ರೇಲು ದೇಶಗಳಲ್ಲೆಲ್ಲಾ [QBR2] ಚದರಿಹೋದ ಕುರಿಹಿಂಡಿನಂತಾಗಿದೆ. [QBR] ಸಿಂಹಗಳಿಗೆ ಹೆದರಿ ಓಡಿಹೋದ [QBR2] ಕುರಿಗಳಂತಾಗಿದೆ ಇಸ್ರೇಲು. [QBR] ಅದನ್ನು ತಿಂದು ಮುಗಿಸಿದ ಮೊದಲನೆ ಸಿಂಹವೆಂದರೆ [QBR2] ಅಶ್ಶೂರದ ರಾಜನು. [QBR] ಅದರ ಎಲುಬುಗಳನ್ನು ಜಗಿದ ಕೊನೆಯ ಸಿಂಹವೆಂದರೆ [QBR2] ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು. [QBR]
18. ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆಂದನು: [QBR] ‘ನಾನು ಬಾಬಿಲೋನಿನ ರಾಜನನ್ನು ಮತ್ತು ಅವನ ದೇಶವನ್ನು ಬಹುಬೇಗ ದಂಡಿಸುವೆನು. [QBR2] ಅಶ್ಶೂರದ ರಾಜನನ್ನು ದಂಡಿಸಿದಂತೆ ನಾನು ಅವನನ್ನು ದಂಡಿಸುವೆನು.
19. “ ‘ಆದರೆ ಇಸ್ರೇಲನ್ನು ಪುನಃ ಅದರ ಹುಲ್ಲುಗಾವಲಿಗೆ ತರುವೆನು. [QBR2] ಅದು ಕರ್ಮೆಲ್ ಬೆಟ್ಟದ ಮೇಲೆ ಮತ್ತು ಬಾಷಾನಿನ ಪ್ರದೇಶದಲ್ಲಿ ಮೇಯುವದು. [QBR2] ಅದು ತಿಂದು ತೇಗುವದು. [QBR2] ಅದು ಎಫ್ರಾಯೀಮಿನ ಮತ್ತು ಗಿಲ್ಯಾದಿನ ಬೆಟ್ಟಗಳಲ್ಲಿ ತಿಂದು ತೃಪ್ತಿಪಡುವದು.’ ” [QBR]
20. ಇದು ಯೆಹೋವನ ನುಡಿ. “ಆ ಸಮಯದಲ್ಲಿ ಜನರು ಇಸ್ರೇಲಿನ ದೋಷವನ್ನು ಕಂಡುಹಿಡಿಯಲು ಪ್ರಯತ್ನಿಸುವರು. [QBR2] ಆದರೆ ಯಾವ ದೋಷಗಳೂ ಇರುವದಿಲ್ಲ. [QBR] ಜನರು ಯೆಹೂದದ ಪಾಪಗಳನ್ನು ಹುಡುಕುವ ಪ್ರಯತ್ನ ಮಾಡುವರು. [QBR2] ಆದರೆ ಯಾವ ಪಾಪಗಳೂ ಸಿಕ್ಕುವದಿಲ್ಲ. [QBR] ಏಕೆಂದರೆ ಇಸ್ರೇಲಿನ ಮತ್ತು ಯೆಹೂದದ ಜನರಲ್ಲಿ ಅಳಿದುಳಿದ ಕೆಲವು ಜನರನ್ನು ನಾನು ರಕ್ಷಿಸುತ್ತೇನೆ. [QBR] ಅವರ ಪಾಪಗಳನ್ನೆಲ್ಲ ಕ್ಷಮಿಸಿದ್ದೇನೆ.”
21. ಯೆಹೋವನು ಹೀಗೆನ್ನುತ್ತಾನೆ: “ಮೆರಾಥಯಿಮ್ ದೇಶದ ಮೇಲೆ ಧಾಳಿ ಮಾಡಿರಿ. [QBR2] ಪೆಕೋದ ಪ್ರದೇಶದಲ್ಲಿ ವಾಸಮಾಡುವ ಜನಗಳ ಮೇಲೆ ಧಾಳಿ ಮಾಡಿರಿ. [QBR2] ಅವರ ಮೇಲೆ ಧಾಳಿ ಮಾಡಿ ಅವರನ್ನು ಕೊಂದು ಸಂಪೂರ್ಣವಾಗಿ ನಾಶಮಾಡಿರಿ. [QBR2] ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡಿರಿ.
22. “ಯುದ್ಧದ ಆರ್ಭಟವು ದೇಶದಲ್ಲೆಲ್ಲ ಕೇಳಿಬರುತ್ತಿದೆ. [QBR2] ಅದು ಮಹಾವಿನಾಶದ ಧ್ವನಿಯಾಗಿದೆ. [QBR]
23. ಬಾಬಿಲೋನು ಇಡೀ ಭೂಮಂಡಲಕ್ಕೆ [QBR2] ‘ಸುತ್ತಿಗೆ’ಯಂತಿದೆ. [QBR] ಆದರೆ ಈಗ ಆ ‘ಸುತ್ತಿಗೆ’ಯು ಮುರಿದು ಚೂರುಚೂರಾಗಿದೆ. [QBR2] ಬಾಬಿಲೋನ್ ನಿಜವಾಗಿಯೂ ಎಲ್ಲಕ್ಕಿಂತಲೂ ಹೆಚ್ಚು ಹಾಳಾದ ಜನಾಂಗವಾಗಿದೆ. [QBR]
24. ಬಾಬಿಲೋನೇ, ನಾನು ನಿನಗಾಗಿ ಒಂದು ಬಲೆಯನ್ನು ಒಡ್ಡಿದೆ. [QBR2] ನೀನು ತಿಳಿಯದೆ ಸಿಕ್ಕಿಹಾಕಿಕೊಂಡೆ. [QBR] ನೀನು ಯೆಹೋವನ ವಿರುದ್ಧ ಹೋರಾಡಿದೆ. [QBR2] ಆದ್ದರಿಂದ ನಿನ್ನನ್ನು ಹುಡುಕಿ ವಶಪಡಿಸಿಕೊಳ್ಳಲಾಯಿತು. [QBR]
25. ಯೆಹೋವನು ತನ್ನ ಆಯುಧಶಾಲೆಯನ್ನು ತೆರೆದಿದ್ದಾನೆ. [QBR2] ಆತನು ತನ್ನ ಆಯುಧಶಾಲೆಯಿಂದ ತನ್ನ ರೋಷದ ಶಸ್ತ್ರಾಸ್ತ್ರಗಳನ್ನು ಹೊರತೆಗೆದಿದ್ದಾನೆ. [QBR] ತಾನು ಮಾಡಬೇಕಾದ ಕಾರ್ಯಕ್ಕಾಗಿ ಸರ್ವಶಕ್ತನಾದ ಆತನು ಆ ಶಸ್ತ್ರಾಸ್ತ್ರಗಳನ್ನು ಹೊರಗೆ ತೆಗೆದಿದ್ದಾನೆ. [QBR2] ಕಸ್ದೀಯರ ದೇಶದಲ್ಲಿ ಆತನು ಮಾಡಬೇಕಾದ ಕಾರ್ಯವೊಂದಿದೆ.
26. “ಅತಿ ದೂರದಿಂದ ಬಾಬಿಲೋನಿನ ಮೇಲೆ ಬೀಳಲು ಬನ್ನಿ. [QBR2] ಅದರ ಧಾನ್ಯದ ಕಣಜಗಳನ್ನು ತೆರೆಯಿರಿ. [QBR] ಬಾಬಿಲೋನನ್ನು ಸಂಪೂರ್ಣವಾಗಿ ನಾಶಮಾಡಿರಿ; [QBR2] ಯಾರನ್ನೂ ಜೀವಂತ ಉಳಿಸಬೇಡಿ. [QBR] ಧಾನ್ಯಗಳ ಗುಡ್ಡೆಗಳ ಹಾಗೆ ಶವಗಳ ದೊಡ್ಡದೊಡ್ಡ ಗುಡ್ಡೆಗಳನ್ನು ಹಾಕಿರಿ. [QBR]
27. ಬಾಬಿಲೋನಿನ ಎಲ್ಲಾ ತರುಣರನ್ನು ಕೊಂದುಹಾಕಿರಿ. [QBR2] ಅವರನ್ನು ಕತ್ತರಿಸಿಬಿಡಿ. [QBR] ಅವರನ್ನು ಸೋಲಿಸುವ ಸಮಯ ಬಂದಿದೆ. ಇದು ಅವರಿಗೆ ಕೇಡಿನ ಕಾಲ. [QBR2] ಇದು ಅವರನ್ನು ದಂಡಿಸುವ ಸಮಯ. [QBR]
28. ಬಾಬಿಲೋನಿನ ಜನರು ಓಡಿಹೋಗುತ್ತಿದ್ದಾರೆ. [QBR2] ಅವರು ಆ ದೇಶದಿಂದ ತಪ್ಪಿಸಿಕೊಂಡು ಓಡಿಹೋಗುತ್ತಿದ್ದಾರೆ. [QBR] ಆ ಜನರು ಚೀಯೋನಿಗೆ ಬಂದು ಬಾಬಿಲೋನಿನಲ್ಲಿ ಯೆಹೋವನು ಮಾಡುತ್ತಿದ್ದ ವಿನಾಶದ ಬಗ್ಗೆ ಎಲ್ಲರಿಗೂ ಹೇಳುತ್ತಿದ್ದಾರೆ. [QBR2] ಯೆಹೋವನು ಬಾಬಿಲೋನಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಿರುವದರ ಬಗ್ಗೆ ಹೇಳುತ್ತಿದ್ದಾರೆ. [QBR2] ಬಾಬಿಲೋನ್ ಯೆಹೋವನ ಆಲಯವನ್ನು ನಾಶಮಾಡಿತು. ಆದ್ದರಿಂದ ಈಗ ಯೆಹೋವನು ಬಾಬಿಲೋನನ್ನು ನಾಶಮಾಡುತ್ತಿದ್ದಾನೆ ಎಂದು ಹೇಳುತ್ತಿದ್ದಾರೆ.
29. “ಬಾಬಿಲೋನಿನ ಮೇಲೆ ಬಾಣ ಪ್ರಯೋಗ ಮಾಡಲು [QBR2] ಬಿಲ್ಲುಗಾರರಿಗೆ ಹೇಳಿರಿ. [QBR] ಆ ಜನರಿಗೆ ನಗರವನ್ನು ಮುತ್ತಲು ಹೇಳಿರಿ. [QBR2] ಯಾರೂ ತಪ್ಪಿಸಿಕೊಂಡು ಹೋಗದಂತೆ ನೋಡಿಕೊಳ್ಳಿ. [QBR] ಅದು ಮಾಡಿದ ದುಷ್ಕೃತ್ಯಗಳಿಗಾಗಿ ಮುಯ್ಯಿತೀರಿಸಿರಿ. [QBR2] ಬೇರೆ ಜನಾಂಗಗಳಿಗೆ ಅದು ಮಾಡಿದಂತೆ ಅದಕ್ಕೆ ಮಾಡಿರಿ. [QBR] ಬಾಬಿಲೋನ್ ಯೆಹೋವನನ್ನು ಗೌರವಿಸಲಿಲ್ಲ. [QBR2] ಪರಿಶುದ್ಧನಿಗೆ ಅವಮಾನ ಮಾಡಿದೆ. [QBR2] ಆದ್ದರಿಂದ ಬಾಬಿಲೋನನ್ನು ಶಿಕ್ಷಿಸಬೇಕು. [QBR]
30. ಬಾಬಿಲೋನಿನ ತರುಣರನ್ನು ಬೀದಿಗಳಲ್ಲಿ ಕೊಲ್ಲಲಾಗುವುದು. [QBR2] ಅದರ ಎಲ್ಲಾ ಸೈನಿಕರು ಅಂದು ಸಾಯುವರು.” [QBR] ಯೆಹೋವನು ಹೀಗೆನ್ನುತ್ತಾನೆ:
31. “ಬಾಬಿಲೋನೇ, ನೀನು ತುಂಬಾ ದುರಹಂಕಾರಿ. [QBR2] ನಾನು ನಿನಗೆ ವಿರುದ್ಧವಾಗಿದ್ದೇನೆ.” [QBR2] ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನ್ನುತ್ತಾನೆ. [QBR] “ನಾನು ನಿನಗೆ ವಿರುದ್ಧವಾಗಿದ್ದೇನೆ. [QBR2] ನಿನ್ನನ್ನು ದಂಡಿಸುವ ಸಮಯ ಬಂದಿದೆ. [QBR]
32. ದುರಹಂಕಾರಿಯಾದ ಬಾಬಿಲೋನ್ ಎಡವಿಬೀಳುವುದು. [QBR2] ಅದನ್ನು ಎಬ್ಬಿಸಲು ಯಾರೂ ಸಹಾಯ ಮಾಡುವದಿಲ್ಲ. [QBR] ಅದರ ಪಟ್ಟಣಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು. [QBR2] ಆ ಬೆಂಕಿಯು ಅದರ ಸುತ್ತಮುತ್ತಲಿನ ಎಲ್ಲರನ್ನೂ ಸುಟ್ಟುಬಿಡುವದು.”
33. ಸರ್ವಶಕ್ತನಾದ ಯೆಹೋವನು ಹೀಗೆನ್ನುವನು: [QBR2] “ಇಸ್ರೇಲಿನ ಮತ್ತು ಯೆಹೂದದ ಜನರು ಗುಲಾಮರಾಗಿದ್ದಾರೆ. [QBR] ವೈರಿಯು ಅವರನ್ನು ಹಿಡಿದುಕೊಂಡಿದ್ದಾನೆ. [QBR2] ಆ ವೈರಿಯು ಇಸ್ರೇಲರನ್ನು ಹೋಗಬಿಡುವದಿಲ್ಲ. [QBR]
34. ಆದರೆ ದೇವರು ಅವರನ್ನು ಹಿಂದಕ್ಕೆ ಕರೆತರುವನು. [QBR2] ಆತನ ಹೆಸರು ಸರ್ವಶಕ್ತನಾದ ಯೆಹೋವನು. [QBR] ಆತನು ಆ ಜನರನ್ನು ನಿಶ್ಚಯವಾಗಿ ಕಾಪಾಡುವನು. [QBR2] ಭೂಮಿಗೆ ವಿಶ್ರಾಂತಿಯನ್ನು ಕೊಡುವ ಉದ್ದೇಶದಿಂದ ಆತನು ಅವರನ್ನು ಕಾಪಾಡುವನು. [QBR2] ಆದರೆ ಬಾಬಿಲೋನಿನಲ್ಲಿ ವಾಸಿಸುವ ಜನರಿಗೆ ಆತನು ವಿಶ್ರಾಂತಿಯನ್ನು ಕೊಡುವದಿಲ್ಲ.”
35. ಯೆಹೋವನು ಹೀಗೆನ್ನುತ್ತಾನೆ: [QBR] “ಖಡ್ಗವೇ, ಬಾಬಿಲೋನಿನಲ್ಲಿ ವಾಸಮಾಡುತ್ತಿರುವ ಜನರನ್ನು ನಾಶಮಾಡು! [QBR2] ಖಡ್ಗವೇ, ಬಾಬಿಲೋನಿನ ಸಾಮಾನ್ಯ ಜನರನ್ನು, [QBR2] ಅಧಿಕಾರಿಗಳನ್ನು ಮತ್ತು ಪಂಡಿತರನ್ನು ಕೊಂದುಹಾಕು! [QBR]
36. ಖಡ್ಗವೇ, ಬಾಬಿಲೋನಿನ ಯಾಜಕರನ್ನೂ ಸುಳ್ಳುಪ್ರವಾದಿಗಳನ್ನೂ ಕೊಲ್ಲು! [QBR2] ಅವರು ಮೂರ್ಖರಂತಾಗುವರು. [QBR] ಖಡ್ಗವೇ, ಬಾಬಿಲೋನಿನ ಸೈನಿಕರನ್ನು ಕೊಲ್ಲು, [QBR2] ಆ ಸೈನಿಕರು ಭಯಭೀತರಾಗಿರುವರು. [QBR]
37. ಖಡ್ಗವೇ, ಬಾಬಿಲೋನಿನ ಕುದುರೆಗಳನ್ನು ಮತ್ತು ರಥಗಳನ್ನು ಧ್ವಂಸಮಾಡು! [QBR2] ಖಡ್ಗವೇ, ಪರದೇಶಗಳಿಂದ ಕರೆಸಿದ ಸೈನಿಕರನ್ನು ಕೊಂದುಹಾಕು! [QBR2] ಆ ಸೈನಿಕರು ಹೆದರಿದ ಹೆಂಗಸರಂತಾಗಿರುವರು. [QBR] ಖಡ್ಗವೇ, ಬಾಬಿಲೋನಿನ ಭಂಡಾರಗಳನ್ನು ನಾಶಮಾಡು! [QBR2] ಆ ಐಶಬರ್ಯವು ಸೂರೆಗೊಳ್ಳುವುದು. [QBR]
38. ಬಾಬಿಲೋನಿನ ನೀರಿನ ಮೇಲೆ ಒಂದು ಖಡ್ಗ ಬೀಳಲಿ. [QBR2] ಆ ನೀರು ಬತ್ತಿಹೋಗುವದು. [QBR] ಬಾಬಿಲೋನ್ ದೇಶದಲ್ಲಿ ಅನೇಕಾನೇಕ ವಿಗ್ರಹಗಳಿವೆ. [QBR2] ಬಾಬಿಲೋನಿನ ಜನರು ಮೂರ್ಖರೆಂಬುದನ್ನು ಆ ವಿಗ್ರಹಗಳು ತೋರಿಸುತ್ತವೆ. [QBR2] ಆ ಜನರಿಗೆ ದುರ್ಗತಿ ಬರುತ್ತದೆ. [QBR]
39. ಬಾಬಿಲೋನಿನಲ್ಲಿ ಪುನಃ ಜನರು ವಾಸಿಸುವದಿಲ್ಲ. [QBR2] ಕಾಡುನಾಯಿ, ಉಷ್ಟ್ರಪಕ್ಷಿ ಮತ್ತು ಇನ್ನುಳಿದ ಮರುಭೂಮಿಯ ಪ್ರಾಣಿಗಳು ಅಲ್ಲಿ ವಾಸಿಸುವವು. [QBR2] ಆದರೆ ಎಂದೆಂದಿಗೂ ಅಲ್ಲಿ ಮಾನವರು ವಾಸಿಸುವದಿಲ್ಲ. [QBR]
40. ದೇವರು ಸೊದೋಮ್ ಗೊಮೋರ ನಗರಗಳನ್ನೂ [QBR2] ಅವುಗಳ ಸುತ್ತಮುತ್ತಲಿನ ಪಟ್ಟಣಗಳನ್ನೂ ಸಂಪೂರ್ಣವಾಗಿ ನಾಶಮಾಡಿದನು. [QBR2] ಈಗ ಅಲ್ಲಿ ಯಾರೂ ವಾಸಿಸುವದಿಲ್ಲ. [QBR] ಅದೇ ರೀತಿ ಬಾಬಿಲೋನಿನಲ್ಲಿ ಯಾರೂ ವಾಸಮಾಡುವದಿಲ್ಲ. [QBR2] ವಾಸಮಾಡಲು ಅಲ್ಲಿಗೆ ಯಾರೂ ಹೋಗುವದಿಲ್ಲ.”
41. “ಇಗೋ, ಉತ್ತರದಿಂದ ಜನರು ಬರುತ್ತಿದ್ದಾರೆ. [QBR2] ಅವರು ಒಂದು ಪ್ರಬಲ ರಾಷ್ಟ್ರದಿಂದ ಬರುತ್ತಿದ್ದಾರೆ. [QBR2] ಇಡೀ ಜಗತ್ತಿನ ಹಲವಾರು ರಾಜರುಗಳು ಒಟ್ಟುಗೂಡಿ ಬರುತ್ತಿದ್ದಾರೆ. [QBR]
42. ಅವರ ಸೈನಿಕರ ಹತ್ತಿರ ಬಿಲ್ಲುಗಳು ಮತ್ತು ಭರ್ಜಿಗಳು ಇವೆ. [QBR2] ಆ ಸೈನಿಕರು ಕ್ರೂರಿಗಳಾಗಿದ್ದಾರೆ. ಅವರಿಗೆ ದಯೆದಾಕ್ಷಿಣ್ಯ ಇಲ್ಲ. [QBR] ಆ ಸೈನಿಕರು ತಮ್ಮ ಕುದುರೆಗಳ ಮೇಲೆ ಬರುತ್ತಿದ್ದಾರೆ. [QBR2] ಅವರ ಧ್ವನಿ ಆರ್ಭಟಿಸುವ ಸಮುದ್ರದಂತಿದೆ. [QBR] ಅವರು ಯುದ್ಧಕ್ಕೆ ಸಿದ್ಧರಾಗಿ ತಮ್ಮತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದಾರೆ. [QBR2] ಬಾಬಿಲೋನ್ ನಗರವೇ, ಅವರು ನಿನ್ನ ಮೇಲೆ ಧಾಳಿಮಾಡಲು ಸಿದ್ಧರಾಗಿದ್ದಾರೆ. [QBR]
43. ಬಾಬಿಲೋನಿನ ರಾಜನು ಆ ಸೈನ್ಯಗಳ ಬಗ್ಗೆ [QBR2] ಕೇಳಿ ಬಹಳ ಗಾಬರಿಗೊಂಡನು; [QBR] ಹೆದರಿಕೆಯಿಂದ ಅವನ ಕೈಗಳು ಚಲಿಸದಂತಾಗಿವೆ. [QBR2] ಪ್ರಸವವೇದನೆಯಂತೆ ಅವನಿಗೆ ವೇದನೆಯಾಗಿದೆ.”
44. ಯೆಹೋವನು ಹೀಗೆನ್ನುತ್ತಾನೆ: [QBR] “ಜೋರ್ಡನ್ ನದಿಯ ಸಮೀಪದ ದಟ್ಟವಾದ ಅರಣ್ಯದಿಂದ [QBR2] ಒಮ್ಮೆ ಒಂದು ಸಿಂಹವು ಬರುವುದು. [QBR] ಆ ಸಿಂಹವು ಜನರ ಸಾಕುಪ್ರಾಣಿಗಳಿದ್ದ ಹೊಲಗಳಿಗೆ ನುಗ್ಗುವುದು. [QBR2] ಆ ಪ್ರಾಣಿಗಳೆಲ್ಲ ಓಡಿಹೋಗುವವು. [QBR] ನಾನು ಆ ಸಿಂಹದಂತಾಗುವೆನು. [QBR2] ನಾನು ಬಾಬಿಲೋನನ್ನು ಅದರ ಪ್ರದೇಶದಿಂದ ಓಡಿಸಿಬಿಡುವೆನು. [QBR] ಈ ಕಾರ್ಯ ಮಾಡಲು ನಾನು ಯಾರನ್ನು ಆರಿಸಲಿ? [QBR2] ನನ್ನತೆ ಯಾರೂ ಇಲ್ಲ. ನನ್ನನ್ನು ಪ್ರತಿಭಟಿಸುವವರು ಯಾರೂ ಇಲ್ಲ. [QBR2] ಆದ್ದರಿಂದ ನಾನೇ ಅದನ್ನು ಮಾಡುತ್ತೇನೆ. [QBR] ನನ್ನನ್ನು ಓಡಿಸಲು ಯಾವ ಕುರುಬನೂ ಬರಲಾರನು. [QBR2] ನಾನು ಬಾಬಿಲೋನಿನ ಜನರನ್ನು ಓಡಿಸಿಬಿಡುವೆನು.”
45. ಯೆಹೋವನು ಬಾಬಿಲೋನಿನ ವಿರುದ್ಧ [QBR2] ಮಾಡಬೇಕೆಂದಿರುವುದನ್ನು ಕೇಳಿರಿ. [QBR] “ಬಾಬಿಲೋನಿನ ಜನರ ವಿರುದ್ಧ [QBR2] ಯೆಹೋವನು ನಿಶ್ಚಯಿಸಿರುವುದನ್ನು ಕೇಳಿರಿ. [QBR] ಶತ್ರುವು ಬಾಬಿಲೋನಿನ ಕುರಿಮರಿಗಳನ್ನು (ಜನರನ್ನು) ಕೊಂಡೊಯ್ಯುವನು. [QBR2] ಬಾಬಿಲೋನಿನ ಹುಲ್ಲುಗಾವಲುಗಳು ಸಂಭವಿಸಿದ ನಾಶನಕ್ಕೆ ಬೆದರುವವು. [QBR]
46. ಬಾಬಿಲೋನ್ ಪತನವಾಗುವುದು. [QBR2] ಆ ಪತನವು ಭೂಮಂಡಲವನ್ನು ಅಲುಗಾಡಿಸುವುದು. [QBR] ಎಲ್ಲಾ ಜನಾಂಗಗಳ ಜನರು [QBR2] ಬಾಬಿಲೋನಿನ ವಿನಾಶದ ವಿಷಯವನ್ನು ಕೇಳುವರು.” [PE]